The Old Testament of the Holy Bible
1 ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು. 2 ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು. 3 ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು. 4 ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು. 5 ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು. 6 ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು. 7 ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು. 8 ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು. 9 ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು. 10 ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. 11 ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು. 12 ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು. 13 ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೂರನೆಯ ದಿನವಾಯಿತು. 14 ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ; 15 ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು. 16 ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು. 17 ಭೂಮಿಯ ಮೇಲೆ ಬೆಳಕುಕೊಡುವದಕ್ಕಾಗಿ ದೇವರು ಆಕಾಶದ ವಿಶಾಲದಲ್ಲಿ ಅವುಗಳನ್ನು ಇರಿಸಿದನು. 18 ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. 19 ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ನಾಲ್ಕನೆಯ ದಿನವಾಯಿತು. 20 ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು. 21 ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. 22 ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು. 23 ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು. 24 ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು. 25 ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. 26 ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು. 27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು. 28 ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು. 29 ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು. 30 ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು. 31 ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
1 ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು. 2 ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು. 3 ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು. 4 ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ. 5 ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ. 6 ಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು. 7 ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು. 8 ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು. 9 ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು. 10 ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು. 11 ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ. 12 ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ. 13 ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು. 14 ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್. 15 ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು. 16 ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು; 17 ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು. 18 ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು. 19 ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು. 20 ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ. 21 ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು. 22 ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು. 23 ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು. 24 ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು. 25 ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
1 ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು. 2 ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು. 3 ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು. 4 ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ; 5 ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು. 6 ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು. 7 ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು. 8 ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು. 9 ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು. 10 ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು. 11 ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು 12 ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು. 13 ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು. 14 ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ. 15 ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು. 16 ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು. 17 ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ. 18 ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ. 19 ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು. 20 ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ. 21 ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು. 22 ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು. 23 ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು. 24 ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
1 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು. 2 ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು. 3 ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು. 4 ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು. 5 ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. 6 ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು? 7 ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು. 8 ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು. 9 ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು. 10 ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ. 11 ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ. 12 ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು. 13 ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ. 14 ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು. 15 ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು. 16 ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು. 17 ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು. 18 ಹನೋಕನಿಂದ ಈರಾದನು ಹುಟ್ಟಿದನು; ಈರಾದನಿಂದ ಮೆಹೂಯಾಯೇಲನು ಹುಟ್ಟಿದನು; ಮೆಹೂಯಾಯೇಲನಿಂದ ಮೆತೂಷಾ ಯೇಲನು ಹುಟ್ಟಿದನು; ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು. 19 ಲೆಮೆಕನು ಇಬ್ಬರು ಹೆಂಡತಿಯರನ್ನು ಮಾಡಿಕೊಂಡನು. ಒಬ್ಬಳ ಹೆಸರು ಆದಾ, ಮತ್ತೊಬ್ಬಳ ಹೆಸರು ಚಿಲ್ಲಾ. 20 ಆದಾ ಯಾಬಾಲನನ್ನು ಹೆತ್ತಳು; ಇವನು ಗುಡಾರಗಳಲ್ಲಿ ವಾಸಿಸುವವನಾಗಿ ದನಕರು ಗಳಿದ್ದವರಿಗೆ ತಂದೆಯಾದನು. 21 ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು. 22 ಚಿಲ್ಲಾ ಸಹ ತೂಬಲ್ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್ಕಾಯಿನನ ಸಹೋದರಿ ನಯಮಾ ಎಂಬವಳು. 23 ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ. 24 ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು. 25 ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು. 26 ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
1 ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು. 2 ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು). 3 ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು. 4 ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 5 ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು. 6 ಸೇತನು ನೂರ ಐದು ವರುಷದವನಾಗಿದ್ದಾಗ ಅವನಿಂದ ಎನೋಷನು ಹುಟ್ಟಿದನು. 7 ಸೇತನಿಂದ ಎನೋಷನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರಏಳುವರುಷ ಗಳಾಗಿದ್ದವು. ಇದಲ್ಲದೆ ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 8 ಸೇತನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಹನ್ನೆರಡು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು. 9 ಎನೋ ಷನು ತೊಂಭತ್ತು ವರುಷದವನಾಗಿದ್ದಾಗ ಅವನಿಂದ ಕೇನಾನನು ಹುಟ್ಟಿದನು. 10 ಎನೋಷನಿಂದ ಕೇನಾ ನನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಹದಿನೈದು ವರುಷಗಳಾಗಿದ್ದವು. ಇದಲ್ಲದೆ ಅವ ನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 11 ಎನೋಷನ ದಿನಗಳೆಲ್ಲಾ ಒಟ್ಟು ಒಂಭೈನೂರ ಐದು ವರುಷಗಳಾಗಿದ್ದವು. ತರುವಾಯ ಅವನು ಸತ್ತನು. 12 ಕೇನಾನನು ಎಪ್ಪತ್ತು ವರುಷದವನಾಗಿ ದ್ದಾಗ ಅವನಿಂದ ಮಹಲಲೇಲನು ಹುಟ್ಟಿದನು. 13 ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 14 ಕೇನಾನನ ದಿನಗಳೆಲ್ಲಾ ಒಟ್ಟು ಒಂಭೈನೂರ ಹತ್ತು ವರುಷಗಳಾಗಿದ್ದವು. ತರುವಾಯ ಅವನು ಸತ್ತನು. 15 ಮಹಲಲೇಲನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಯೆರೆದನು ಹುಟ್ಟಿ ದನು. 16 ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು. 17 ಮಹಲಲೇಲನ ದಿನಗ ಳೆಲ್ಲಾ ಎಂಟುನೂರ ತೊಂಭತ್ತೈದು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು. 18 ಯೆರೆ ದನು ನೂರ ಅರುವತ್ತೆರೆಡು ವರುಷದವನಾಗಿದ್ದಾಗ ಅವನಿಂದ ಹನೋಕನು ಹುಟ್ಟಿದನು. 19 ಯೆರೆದನಿಂದ ಹನೋಕನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾಗಿದ್ದವು; ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. 20 ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು. 21 ಹನೋಕನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಮೆತೂಷೆಲಹನು ಹುಟ್ಟಿದನು. 22 ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 23 ಹನೋಕನ ದಿನಗಳೆಲ್ಲಾ ಒಟ್ಟು ಮುನ್ನೂರ ಅರುವತ್ತೈದು ವರುಷಗಳಾಗಿದ್ದವು. 24 ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು. 25 ಮೆತೂಷೆಲಹನು ನೂರ ಎಂಭತ್ತೇಳು ವರುಷದ ವನಾಗಿದ್ದಾಗ ಅವನಿಂದ ಲೆಮೆಕನು ಹುಟ್ಟಿದನು. 26 ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು. 27 ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು. 28 ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು. 29 ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು. 30 ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 31 ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು. 32 ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬವರು ಹುಟ್ಟಿದರು.
1 ತರುವಾಯ ಭೂಮಿಯ ಮೇಲೆ ಜನರು ಹೆಚ್ಚುವದಕ್ಕೆ ಆರಂಭಿಸಿದಾಗ ಅವರಿಗೆ ಕುಮಾರ್ತೆಯರು ಹುಟ್ಟಿದರು. 2 ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು. 3 ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು. 4 ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು. 5 ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು. 6 ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು. 7 ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು. 8 ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು. 9 ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು. 10 ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬ ಮೂವರು ಕುಮಾರರು ಹುಟ್ಟಿದರು. 11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು. 12 ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು. 13 ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು. 14 ನೀನು ಗೋಫೆರ್ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು. 15 ನೀನು ಅದನ್ನು ಮಾಡತಕ್ಕ ಮಾದರಿಯು ಇದೇ; ನಾವೆಯ ಉದ್ದವು ಮುನ್ನೂರು ಮೊಳ ಅಗಲ ಐವತ್ತು ಮೊಳ ಎತ್ತರ ಮೂವತ್ತು ಮೊಳ ಇರಬೇಕು. 16 ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು. 17 ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು. 18 ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು. 19 ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು. 20 ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು. 21 ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು. 22 ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
1 ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ. 2 ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ. 3 ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು. 4 ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು. 5 ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು. 6 ಜಲಪ್ರಳಯವು ಭೂಮಿಯ ಮೇಲೆ ಉಂಟಾದಾಗ ನೋಹನು ಆರುನೂರು ವರುಷದವನಾಗಿದ್ದನು. 7 ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು. 8 ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ 9 ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು. 10 ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು. 11 ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು. 12 ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು. 13 ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು. 14 ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು. 15 ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು. 16 ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು. 17 ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು. 18 ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು. 19 ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು. 20 ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು. 21 ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು. 22 ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು. 23 ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು. 24 ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
1 ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು. 2 ಅಗಾಧದ ಬುಗ್ಗೆಗಳೂ ಆಕಾಶದ ಕಿಟಕಿಗಳೂ ಮುಚ್ಚಲ್ಪಟ್ಟವು. ಇದಲ್ಲದೆ ಆಕಾಶದಿಂದ ಬೀಳುವ ಮಳೆಯೂ ನಿಂತಿತು. 3 ಹೀಗೆ ಭೂಮಿಯ ಮೇಲಿದ್ದ ಜಲವು ಕ್ರಮವಾಗಿ ತಗ್ಗಿಹೋಯಿತು. ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆ ಯಾಯಿತು. 4 ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟಗಳ ಮೇಲೆ ನೆಲೆಸಿತ್ತು. 5 ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು. 6 ನಾಲ್ವತ್ತು ದಿವಸಗಳಾದ ತರುವಾಯ ಆದದ್ದೇ ನಂದರೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು 7 ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು. 8 ಭೂಮುಖದ ಮೇಲೆ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ನೋಡುವಂತೆ ಒಂದು ಪಾರಿವಾಳವನ್ನು ಬಿಟ್ಟನು. 9 ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು. 10 ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು. 11 ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು. 12 ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ. 13 ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು. 14 ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು. 15 ಆಗ ದೇವರು ನೋಹನೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 16 ನೀನೂ ನಿನ್ನ ಸಂಗಡ ನಿನ್ನ ಹೆಂಡತಿಯೂ ನಿನ್ನ ಕುಮಾರರೂ ಅವರ ಹೆಂಡತಿ ಯರೂ ನಾವೆಯೊಳಗಿಂದ ಹೊರಗೆ ಹೋಗಿರಿ. 17 ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು. 18 ಆಗ ನೋಹನ ಸಂಗಡ ಅವನ ಹೆಂಡತಿ ಕುಮಾರರು ಸೊಸೆಯರು ಹೊರಗೆ ಬಂದರು. 19 ಎಲ್ಲಾ ಮೃಗಗಳೂ ಕ್ರಿಮಿಗಳೂ ಪಕ್ಷಿಗಳೂ ಭೂಮಿ ಯಲ್ಲಿ ಹರಿದಾಡುವ ಎಲ್ಲವುಗಳು ತಮ್ಮತಮ್ಮ ಜಾತ್ಯಾ ನುಸಾರವಾಗಿ ನಾವೆಯೊಳಗಿಂದ ಹೊರಬಂದವು. 20 ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು. 21 ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ. 22 ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
1 ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ. 2 ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ. 3 ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ. 4 ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು. 5 ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು. 6 ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು. 7 ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು. 8 ಇದಲ್ಲದೆ ದೇವರು ನೋಹನಿಗೂ ಅವನ ಸಂಗಡವಿರುವ ಅವನ ಕುಮಾರರಿಗೂ ಹೇಳಿದ್ದೇ ನಂದರೆ-- 9 ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ 10 ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ 11 ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ. 12 ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು. 13 ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು. 14 ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು. 15 ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ. 16 ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು. 17 ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು. 18 ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್ ಹಾಮ್ ಯೆಫೆತ್; ಹಾಮನು ಕಾನಾನನ ತಂದೆಯು. 19 ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು. 20 ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು. 21 ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು. 22 ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು. 23 ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ. 24 ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು-- 25 ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು-- 26 ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ. 27 ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು. 28 ಪ್ರಳಯವಾದ ಮೇಲೆ ನೋಹನು ಮೂನ್ನೂರ ಐವತ್ತು ವರುಷ ಬದುಕಿದನು. 29 ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
1 ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. 2 ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು. 3 ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್ ರೀಫತ್ ತೋಗರ್ಮ ಎಂಬವರು. 4 ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ. 5 ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು. 6 ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು. 7 ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು. 8 ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು. 9 ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು. 10 ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು. 11 ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ, 12 ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್ನನ್ನು ಕಟ್ಟಿದನು. 13 ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ 14 ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು. 15 ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ 16 ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ 17 ಹಿವ್ವಿಯನೂ ಅರ್ಕಿಯನೂ ಸೀನಿಯನೂ 18 ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು. 19 ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ. 20 ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು. 21 ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು. 22 ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್. 23 ಅರಾಮನ ಮಕ್ಕಳು ಯಾರಂದರೆ, ಊಸ್ ಹೂಲ್ ಗೆತೆರ್ ಮಷ್ ಇವರೇ. 24 ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು. 25 ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್. 26 ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂ 27 ಹದೋರಾಮನೂ ಊಜಾಲನೂ ದಿಕ್ಲಾನನೂ 28 ಓಬಾಲನೂ ಅಬೀಮಯೇಲನೂ ಶೆಬನೂ 29 ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು. 30 ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು. 31 ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು. 32 ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
1 ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು. 2 ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು. 3 ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು. 4 ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು; 5 ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು. 6 ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು. 7 ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು. 8 ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು. 9 ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. 10 ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು. 11 ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 12 ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು. 13 ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 14 ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು. 15 ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 16 ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು. 17 ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 18 ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು. 19 ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. 20 ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು. 21 ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 22 ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು. 23 ಸೆರೂಗ ನಿಂದ ನಾಹೋರನು ಹುಟ್ಟಿದ ಮೇಲೆ ಸೆರೂಗನು ಇನ್ನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 24 ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು. 25 ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 26 ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. 27 ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು. 28 ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು. 29 ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ. 30 ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು. 31 ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು. 32 ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
1 ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. 2 ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. 3 ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು. 4 ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು. 5 ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು. 6 ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು. 7 ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು. 8 ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು. 9 ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು. 10 ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು. 11 ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ. 12 ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು. 13 ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು. 14 ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು. 15 ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು. 16 ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು. 17 ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು. 18 ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ? 19 ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು. 20 ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
1 ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು. 2 ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು. 3 ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ 4 ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು. 5 ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು. 6 ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು. 7 ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು. 8 ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು. 9 ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು. 10 ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು. 11 ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು. 12 ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು. 13 ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು. 14 ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು. 15 ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. 16 ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು. 17 ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು. 18 ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
1 ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ, 2 ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು. 3 ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು. 4 ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು. 5 ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ 6 ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು. 7 ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು. 8 ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು 9 ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು. 10 ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು. 11 ಆಗ ಅವರು ಸೊದೋಮ್ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು. 12 ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು. 13 ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು. 14 ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ 15 ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ 16 ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು. 17 ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು. 18 ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು. 19 ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ. 20 ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು. 21 ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು. 22 ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ; 23 ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು. 24 ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
1 ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ. 2 ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು. 3 ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ 4 ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು. 5 ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು. 6 ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು. 7 ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು. 8 ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು. 9 ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು. 10 ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ. 11 ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು. 12 ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು. 13 ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು. 14 ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು. 15 ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ. 16 ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು. 17 ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು. 18 ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ 19 ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ 20 ಹಿತ್ತಿಯರೂ ಪೆರಿಜೀಯರೂ ರೆಫಾಯರೂ 21 ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
1 ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು. 2 ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು. 3 ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು. 4 ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು. 5 ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು. 6 ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು. 7 ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು 8 ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು. 9 ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು. 10 ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು. 11 ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ. 12 ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು. 13 ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು. 14 ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ. 15 ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು. 16 ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
1 ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು. 2 ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು. 3 ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ-- 4 ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ. 5 ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ. 6 ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು. 7 ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. 8 ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು. 9 ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು. 10 ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು. 11 ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು. 12 ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ 13 ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು. 14 ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು. 15 ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ. 16 ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು. 17 ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು. 18 ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು. 19 ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು. 20 ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು. 21 ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು. 22 ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು. 23 ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು. 24 ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು. 25 ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು. 26 ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು. 27 ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
1 ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು. 2 ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ-- 3 ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ. 4 ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ. 5 ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು. 6 ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು. 7 ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು. 8 ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು. 9 ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು. 10 ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು. 11 ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು. 12 ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು. 13 ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? 14 ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು. 15 ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು. 16 ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು. 17 ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ? 18 ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು. 19 ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು. 20 ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ 21 ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು. 22 ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು. 23 ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ? 24 ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ? 25 ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು. 26 ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು. 27 ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ. 28 ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು. 29 ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು. 30 ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು. 31 ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು. 32 ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು. 33 ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
1 ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ 2 ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು. 3 ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು. 4 ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು. 5 ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು. 6 ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು-- 7 ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ. 8 ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು. 9 ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು. 10 ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು. 11 ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು. 12 ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ. 13 ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು. 14 ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು. 15 ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು. 16 ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು; 17 ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು. 18 ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ, 19 ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು; 20 ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು. 21 ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ. 22 ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು. 23 ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು. 24 ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು. 25 ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು. 26 ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು. 27 ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು 28 ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು. 29 ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು. 30 ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು. 31 ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ. 32 ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು. 33 ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ. 34 ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು. 35 ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ. 36 ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು. 37 ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ. 38 ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
1 ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು. 2 ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು. 3 ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು. 4 ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ? 5 ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು. 6 ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ. 7 ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು. 8 ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು. 9 ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು. 10 ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ 11 ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು. 12 ಇದಲ್ಲದೆ ನಿಶ್ಚಯವಾಗಿ ಅವಳು ನನ್ನ ತಂಗಿ; ಆಕೆಯು ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ; ನನಗೆ ಹೆಂಡತಿಯಾದಳು. 13 ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು. 14 ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು. 15 ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು. 16 ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು. 17 ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು. 18 ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
1 ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು. 2 ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು. 3 ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು. 4 ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು. 5 ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು. 6 ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ-- 7 ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು. 8 ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು. 9 ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ 10 ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು. 11 ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು. 12 ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು. 13 ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು. 14 ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು. 15 ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ 16 ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು. 17 ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ. 18 ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು. 19 ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು. 20 ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು. 21 ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು. 22 ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ. 23 ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು. 24 ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು. 25 ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ 26 ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು. 27 ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು. 28 ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು. 29 ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು. 30 ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು. 31 ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು. 32 ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು. 33 ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು. 34 ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
1 ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು. 2 ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು. 3 ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು. 4 ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು. 5 ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು. 6 ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು. 7 ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು. 8 ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು. 9 ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು. 10 ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು. 11 ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು. 12 ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು. 13 ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು. 14 ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ. 15 ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು. 16 ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ 17 ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು. 18 ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ. 19 ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು. 20 ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು. 21 ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು, 22 ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು; 23 ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು. 24 ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
1 ಸಾರಳು ನೂರಿಪ್ಪತ್ತೇಳು ವರುಷದವಳಾ ಗಿದ್ದಳು; ಸಾರಳ ಜೀವನದ ವರುಷ ಗಳು ಇವೇ. 2 ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು. 3 ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ-- 4 ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು. 5 ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ-- 6 ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು. 7 ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ 8 ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ. 9 ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು. 10 ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ-- 11 ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು. 12 ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು. 13 ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು. 14 ಆಗ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ-- 15 ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು. 16 ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು. 17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ 18 ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು. 19 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು. 20 ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
1 ಅಬ್ರಹಾಮನು ಮುದುಕನೂ ದಿನಗತಿಸಿದವನೂ ಆಗಿದ್ದನು. ಕರ್ತನು ಅಬ್ರಹಾಮ ನನ್ನು ಎಲ್ಲಾದರಲ್ಲಿ ಆಶೀರ್ವದಿಸಿದನು. 2 ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು; 3 ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ 4 ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು. 5 ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು. 6 ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು. 7 ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು. 8 ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು. 9 ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು. 10 ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು. 11 ಸಂಜೆಯಾದಾಗ ನೀರಿಗಾಗಿ ಸ್ತ್ರೀಯರು ಪಟ್ಟಣದ ಹೊರಗೆ ಬರುವ ಸಮಯದಲ್ಲಿ ಬಾವಿಯ ಬಳಿಯಲ್ಲಿ ಒಂಟೆಗಳು ಮೊಣಕಾಲೂರಿ ಮಲಗುವಂತೆ ಅವನು ಮಾಡಿದನು. 12 ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು. 13 ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ. 14 ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು. 15 ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು. 16 ಆ ಹುಡುಗಿಯು ನೋಡುವದಕ್ಕೆ ಬಹು ಸುಂದರಿಯಾಗಿದ್ದು ಯಾವ ಮನುಷ್ಯನು ಅರಿಯದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಗೆ ಇಳಿದುಹೋಗಿ ತನ್ನ ಕೊಡವನ್ನು ತುಂಬಿಕೊಂಡು ಮೇಲೆ ಬಂದಳು. 17 ಆಗ ಆ ಸೇವಕನು ಅವಳೆದುರಿಗೆ ಓಡಿಹೋಗಿ--ನಿನ್ನ ಕೊಡದೊಳಗಿನಿಂದ ಸ್ವಲ್ಪ ನೀರು ನನಗೆ ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಂಡನು. 18 ಅದಕ್ಕವಳು--ನನ್ನ ಒಡೆಯನೇ, ಕುಡಿ ಎಂದು ಹೇಳಿ ತ್ವರೆಯಾಗಿ ತನ್ನ ಕೊಡವನ್ನು ಕೈಮೇಲೆ ಇಳಿಸಿ ಅವನಿಗೆ ಕುಡಿಯಲು ಕೊಟ್ಟಳು. 19 ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು. 20 ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು. 21 ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು. 22 ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು. 23 ಅವನು--ನೀನು ಯಾರ ಮಗಳು? ನನಗೆ ಹೇಳು; ನಿನ್ನ ತಂದೆಯ ಮನೆಯಲ್ಲಿ ಇಳುಕೊಳ್ಳುವದಕ್ಕೆ ನಮಗೆ ಸ್ಥಳವಿದೆಯೋ ಅಂದನು. 24 ಅದಕ್ಕೆ ಆಕೆಯು ನಾನು ನಾಹೋರನಿಗೆ ಮಿಲ್ಕಳು ಹೆತ್ತ ಬೆತೂವೇಲನ ಮಗಳು ಅಂದಳು. 25 ಇದಲ್ಲದೆ ಆಕೆಯು ಅವನಿಗೆ--ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇವೆ; ನೀವು ಇಳುಕೊಳ್ಳುವದಕ್ಕೂ ಸ್ಥಳವಿದೆ ಎಂದು ಅವನಿಗೆ ಹೇಳಿದಳು. 26 ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ-- 27 ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು. 28 ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು. 29 ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು. 30 ಅವನು ವಾಲೆಯನ್ನೂ ತನ್ನ ಸಹೋದರಿಯ ಕೈಗಳಲ್ಲಿದ್ದ ಕಡಗಗಳನ್ನೂ ನೋಡಿ ಆ ಮನುಷ್ಯನು ತನ್ನ ಕೂಡ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿಯಾದ ರೆಬೆಕ್ಕಳ ಮಾತುಗಳನ್ನು ಕೇಳಿ ಆ ಮನುಷ್ಯನ ಬಳಿಗೆ ಬಂದನು. ಇಗೋ, ಅವನು ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು. 31 ಲಾಬಾನನು ಅವನಿಗೆ--ಕರ್ತನಿಂದ ಆಶೀರ್ವದಿಸಲ್ಪಟ್ಟವನೇ, ಒಳಗೆ ಬಾ, ಯಾಕೆ ಹೊರಗೆ ನಿಂತಿರುತ್ತೀ? ನಾನು ಮನೆ ಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಅಂದನು. 32 ಆಗ ಆ ಮನುಷ್ಯನು ಮನೆಯೊಳಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಟ್ಟನು. ಅವನಿಗೆ ಅವನ ಸಂಗಡವಿದ್ದವರಿಗೆ ಕಾಲುಗಳನ್ನು ತೊಳೆಯುವದಕ್ಕೆ ನೀರು ಕೊಟ್ಟನು. 33 ಅವನಿಗೆ ಊಟ ಬಡಿಸಿದಾಗ ಅವನು--ನಾನು ಬಂದ ಕೆಲಸದ ವಿಷಯ ಹೇಳದೆ ಊಟಮಾಡುವದಿಲ್ಲ ಅಂದನು. ಅದಕ್ಕೆ ಲಾಬಾ ನನು--ಹೇಳು ಅಂದನು. 34 ಅವನು--ನಾನು ಅಬ್ರಹಾಮನ ಸೇವಕನು. 35 ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ. 36 ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ. 37 ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ; 38 ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ. 39 ನಾನು ನನ್ನ ಯಜಮಾನನಿಗೆ--ಒಂದು ವೇಳೆ ಆ ಸ್ತ್ರೀ ನನ್ನ ಹಿಂದೆಬಾರದೆ ಹೋದಾಳು ಅಂದಾಗ 40 ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು; 41 ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು. 42 ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ 43 ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ 44 ಆಕೆಯು ನನಗೆ--ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು. 45 ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು. 46 ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು. 47 ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು 48 ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು. 49 ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು. 50 ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು. 51 ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು. 52 ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು. 53 ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು. 54 ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು. 55 ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು. 56 ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು. 57 ಆಗ ಅವರು--ನಾವು ಹುಡುಗಿಯನ್ನು ಕರೆದು ವಿಚಾರಿಸೋಣ ಅಂದರು. 58 ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು. 59 ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು. 60 ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು. 61 ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು. 62 ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು. 63 ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು. 64 ರೆಬೆಕ್ಕಳು ತನ್ನ ಕಣ್ಣುಗಳನ್ನೆತ್ತಿ ಇಸಾಕನನ್ನು ನೋಡಿ ದಾಗ ಒಂಟೆಯಿಂದ ಇಳಿದಳು. 65 ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು. 66 ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು. 67 ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
1 ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು. 2 ಆಕೆಯು ಅವನಿಗೆ ಜಿಮ್ರಾನ್ ಯೊಕ್ಷಾನ್ ಮೆದಾನ್ ಮಿದ್ಯಾನ್ ಇಷ್ಬಾಕ್ ಶೂಹ ಎಂಬವರನ್ನು ಹೆತ್ತಳು. 3 ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ. 4 ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು. 5 ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು. 6 ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು. 7 ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು. 8 ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು. 9 ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು. 10 ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು. 11 ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು. 12 ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು. 13 ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್ 14 ಮಿಷ್ಮಾ ದೂಮಾ ಮಸ್ಸಾ 15 ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ. 16 ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು. 17 ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. 18 ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು. 19 ಅಬ್ರಹಾಮನ ಮಗನಾದ ಇಸಾಕನ ವಂಶಾವಳಿ ಗಳು ಇವೇ; ಅಬ್ರಹಾಮನಿಂದ ಇಸಾಕನು ಹುಟ್ಟಿದನು. 20 ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು. 21 ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು. 22 ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು. 23 ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು. 24 ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು. 25 ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು. 26 ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು. 27 ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು. 28 ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು. 29 ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರು ವಾಗ ಏಸಾವನು ದಣಿದು ಅಡವಿಯಿಂದ ಬಂದನು. 30 ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು. 31 ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು. 32 ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು. 33 ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು. 34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
1 ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು. 2 ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು. 3 ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು. 4 ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು. 5 ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು. 6 ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು. 7 ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು. 8 ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು. 9 ಆಗ ಅಬೀಮೆಲೆಕನು ಇಸಾಕ ನನ್ನು ಕರೆದು--ಅಗೋ, ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು--ಆಕೆಯು ನನ್ನ ತಂಗಿ ಎಂದು ಯಾಕೆ ಹೇಳಿದಿ ಅಂದನು. ಇಸಾಕನು ಅವನಿಗೆ--ನಾನು ಆಕೆಯ ನಿಮಿತ್ತ ಸಾಯಬಾರ ದೆಂದು ಹಾಗೆ ಹೇಳಿದೆನು ಅಂದನು. 10 ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು. 11 ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು. 12 ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು. 13 ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು. 14 ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು. 15 ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು. 16 ಆಗ ಅಬೀಮೆಲೆಕನು ಇಸಾಕನಿಗೆ--ನೀನು ನಮಗಿಂತ ಬಲಿಷ್ಟನಾದಿ ಆದುದ ರಿಂದ ನಮ್ಮ ಬಳಿಯಿಂದ ಹೋಗು, ಅಂದನು. 17 ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು. 18 ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು. 19 ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು. 20 ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು. 21 ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು. 22 ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು. 23 ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು. 24 ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು. 25 ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು. 26 ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು. 27 ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು. 28 ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು; 29 ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು. 30 ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು; 31 ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು. 32 ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು. 33 ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು. 34 ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು. 35 ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
1 ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು. 2 ಆಗ ಅವನು--ಇಗೋ, ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು. 3 ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ 4 ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು. 5 ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು. 6 ಆಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ--ಇಗೋ, ನಿನ್ನ ತಂದೆ ನಿನ್ನ ಸಹೋದರನಾದ ಏಸಾವನಿಗೆ-- 7 ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ; 8 ಆದದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು. 9 ಈಗ ನೀನು ಮಂದೆಯ ಬಳಿಗೆ ಹೋಗಿ ಅಲ್ಲಿಂದ ಎರಡು ಒಳ್ಳೇ ಮೇಕೆಯ ಮರಿಗಳನ್ನು ತಕ್ಕೊಂಡು ಬಾ; ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ ಅವನು ಪ್ರೀತಿ ಸುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುವೆನು. 10 ನೀನು ಅದನ್ನು ನಿನ್ನ ತಂದೆಯ ಬಳಿಗೆ ತಕ್ಕೊಂಡು ಹೋಗಬೇಕು. ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ ಅಂದಳು. 11 ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕ ಳಿಗೆ--ಇಗೋ, ನನ್ನ ಸಹೋದರನಾದ ಏಸಾವನು ರೋಮವುಳ್ಳ ಮನುಷ್ಯನಾಗಿದ್ದಾನೆ. ನಾನು ನುಣು ಪಾದ ಮನುಷ್ಯನಾಗಿದ್ದೇನೆ. 12 ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ ಅವನಿಗೆ ನಾನು ಮೋಸಗಾರನಾಗಿ ಕಾಣುವೆನು. ಆಗ ಆಶೀರ್ವಾದ ವಲ್ಲ, ಶಾಪವನ್ನೇ ನನ್ನ ಮೇಲೆ ಬರಮಾಡಿಕೊಳ್ಳು ವೆನು ಅಂದನು. 13 ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. 14 ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು. 15 ತರು ವಾಯ ರೆಬೆಕ್ಕಳು ಮನೆಯಲ್ಲಿ ತನ್ನ ಬಳಿಯಲ್ಲಿದ್ದ ಹಿರೀಮಗನಾದ ಏಸಾವನ ಒಳ್ಳೇ ವಸ್ತ್ರವನ್ನು ತಕ್ಕೊಂಡು ಕಿರೀಮಗನಾದ ಯಾಕೋಬನಿಗೆ ಉಡಿಸಿದಳು. 16 ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ ನುಣುಪಾದ ಕೊರಳಿನ ಮೇಲೆಯೂ ಕಟ್ಟಿದಳು; 17 ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು. 18 ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು. 19 ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು. 20 ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು. 21 ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು. 22 ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು. 23 ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು. 24 ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು. 25 ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು. 26 ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು. 27 ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ. 28 ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ. 29 ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು. 30 ಇಸಾ ಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ ಯಾಕೋಬನು ತನ್ನ ತಂದೆಯಾದ ಇಸಾಕನ ಸಮ್ಮುಖದಿಂದ ಹೊರಟಾಗ ಅವನ ಸಹೋದರನಾದ ಏಸಾವನು ಬೇಟೆಯಿಂದ ಬಂದನು. 31 ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು. 32 ಅವನ ತಂದೆಯಾದ ಇಸಾಕನು ಅವನಿಗೆ--ನೀನು ಯಾರು ಅಂದಾಗ ಅವನು--ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು. 33 ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು. 34 ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು. 35 ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು. 36 ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು. 37 ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು. 38 ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು. 39 ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು. 40 ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ. 41 ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು. 42 ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ. 43 ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು. 44 ನಿನ್ನ ಸಹೋದರನ ಕೋಪವು ತೀರುವ ವರೆಗೆ ಕೆಲವು ದಿವಸಗಳು ಅಲ್ಲೇ ಇರು. 45 ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು. 46 ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
1 ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು. 2 ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ. 3 ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ, 4 ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು. 5 ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು. 6 ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ 7 ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ 8 ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು 9 ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. 10 ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು. 11 ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. 12 ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು. 13 ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು. 14 ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು. 15 ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು. 16 ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು. 17 ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು. 18 ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು. 19 ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು. 20 ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು 21 ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು. 22 ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
1 ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು. 2 ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು. 3 ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು. 4 ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು. 5 ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು. 6 ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು. 7 ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು. 8 ಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು. 9 ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು. 10 ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು. 11 ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು. 12 ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು. 13 ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು. 14 ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು. 15 ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು. 16 ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು. 17 ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು. 18 ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು. 19 ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು. 20 ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು. 21 ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು. 22 ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು. 23 ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು. 24 ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು. 25 ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು. 26 ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ. 27 ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು. 28 ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು. 29 ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು. 30 ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು. 31 ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು. 32 ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು. 33 ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು. 34 ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು. 35 ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
1 ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು. 2 ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು. 3 ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು. 4 ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು. 5 ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು. 6 ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು. 7 ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. 8 ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು. 9 ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು. 10 ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು. 11 ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು. 12 ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. 13 ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು. 14 ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು. 15 ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು. 16 ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು. 17 ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು. 18 ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು. 19 ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು; 20 ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು. 21 ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು. 22 ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು. 23 ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು. 24 ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು. 25 ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು. 26 ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು. 27 ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ. 28 ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು. 29 ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ. 30 ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು. 31 ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು; 32 ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ. 33 ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು. 34 ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು. 35 ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು. 36 ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು. 37 ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ 38 ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ 39 ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು. 40 ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು. 41 ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು. 42 ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು. 43 ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
1 ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು. 2 ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ. 3 ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು. 4 ಯಾಕೋಬನು ರಾಹೇಲಳನ್ನೂ ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೇಕಳುಹಿಸಿ 5 ಅವರಿಗೆ--ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು. 6 ನಾನು ಪೂರ್ಣ ಬಲದಿಂದ ನಿಮ್ಮ ತಂದೆಯ ಸೇವೆಮಾಡಿದ್ದು ನಿಮಗೆ ತಿಳಿದಿದೆ. 7 ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ. 8 ನಿಮ್ಮ ತಂದೆ ನನಗೆ --ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ಚುಕ್ಕೆಯುಳ್ಳದ್ದೇ ಈಯಿತು; ಅವನು --ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು. 9 ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ. 10 ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು. 11 ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು. 12 ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ. 13 ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು. 14 ಆಗ ರಾಹೇಲಳು ಮತ್ತು ಲೇಯಳು ಅವನಿಗೆ--ನಮ್ಮ ತಂದೆಯ ಮನೆಯಲ್ಲಿ ನಮಗೆ ಭಾಗವೂ ಬಾಧ್ಯತೆಯೂ ಇನ್ನೇನದೆ? 15 ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ. 16 ಆದದರಿಂದ ದೇವರು ನಮ್ಮ ತಂದೆಯಿಂದ ತಕ್ಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು ಅಂದರು. 17 ಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ 18 ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು. 19 ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು. 20 ಆದರೆ ಯಾಕೋಬನು ತಾನು ಓಡಿ ಹೋಗುವದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಕಳ್ಳತನದಿಂದ ಹೋದನು. 21 ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು. 22 ಯಾಕೋಬನು ಓಡಿಹೋದನೆಂದು ಮೂರ ನೆಯ ದಿವಸದಲ್ಲಿ ಲಾಬಾನನಿಗೆ ತಿಳಿಸಲ್ಪಟ್ಟಿತು. 23 ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು. 24 ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು. 25 ತರುವಾಯ ಲಾಬಾ ನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹೋದರರ ಸಂಗಡ ಗಿಲ್ಯಾದ್ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. 26 ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ. 27 ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು. 28 ಆದರೆ ನೀನು ನನ್ನ ಕುಮಾರರಿಗೂ ಕುಮಾರ್ತೆಯರಿಗೂ ಮುದ್ದು ಕೊಡ ಗೊಡಿಸಲಿಲ್ಲ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ. 29 ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು. 30 ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು. 31 ಅದಕ್ಕೆ ಯಾಕೋಬನು ಪ್ರತ್ಯುತ್ತರವಾಗಿ ಲಾಬಾನ ನಿಗೆ--ನೀನು ಒಂದು ವೇಳೆ ನಿನ್ನ ಕುಮಾರ್ತೆಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತಕ್ಕೊಳ್ಳುವಿ ಎಂದು ನಾನು ಅಂದುಕೊಂಡು ಭಯಪಟ್ಟೆನು. 32 ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ. 33 ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಅವುಗಳನ್ನು ಕಂಡು ಕೊಳ್ಳಲಿಲ್ಲ; ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು. 34 ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ. 35 ರಾಹೇಲಳು ತನ್ನ ತಂದೆಗೆ--ನಾನು ನಿನ್ನ ಮುಂದೆ ಏಳಲಾರದೆ ಇರುವದರಿಂದ ನನ್ನ ಪ್ರಭುವೇ, ನಿನಗೆ ಕೋಪಬಾರದೆ ಇರಲಿ. ಯಾಕಂದರೆ ಸ್ತ್ರೀಯರ ಕ್ರಮ ನನಗೆ ಆಗಿದೆ ಅಂದಳು. ಅವನು ಆ ವಿಗ್ರಹಗಳನ್ನು ಹುಡುಕಿ ಕಂಡುಕೊಳ್ಳದೆ ಹೋದನು. 36 ಆಗ ಯಾಕೋಬನು ಕೋಪಗೊಂಡು ಲಾಬಾ ನನ ಕೂಡ ವಾದಿಸಿದನು. ಯಾಕೋಬನು ಪ್ರತ್ಯುತ್ತರ ವಾಗಿ ಲಾಬಾನನಿಗೆ--ನೀನು ನನ್ನನ್ನು ಬೆನ್ನಟ್ಟಿ ಬರು ವದಕ್ಕೆ ನನ್ನ ಅಪರಾಧವೇನು? ನನ್ನ ಪಾಪವೇನು? 37 ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ. 38 ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ. 39 ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ. 40 ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು. 41 ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ. 42 ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು. 43 ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಈ ಮಕ್ಕಳೂ ನನ್ನ ಮಕ್ಕಳೇ; ಈ ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ? 44 ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು. 45 ಆಗ ಯಾಕೋಬನು ಒಂದು ಕಲ್ಲನ್ನು ತೆಗೆದು ಕೊಂಡು ಸ್ತಂಭವಾಗಿ ನಿಲ್ಲಿಸಿದನು; 46 ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು. 47 ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್ ಎಂದೂ ಹೆಸರಿಟ್ಟನು; 48 ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ 49 ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ. 50 ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು. 51 ಲಾಬಾನನು ಯಾಕೋಬ ನಿಗೆ--ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು. 52 ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ. 53 ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು. 54 ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು. 55 ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
1 ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು. 2 ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು. 3 ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು. 4 ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು; 5 ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು. 6 ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು. 7 ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು. 8 ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು. 9 ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ, 10 ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು. 11 ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ. 12 ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು. 13 ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು. 14 ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು; 15 ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು; 16 ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು. 17 ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ 18 ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು. 19 ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು. 20 ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು. 21 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು. 22 ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು. 23 ಅವನು ಅವರನ್ನು ಕರಕೊಂಡು ಹೊಳೆ ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು. 24 ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. 25 ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು. 26 ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. 27 ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. 28 ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು. 29 ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು. 30 ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು. 31 ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು. 32 ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
1 ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು. 2 ದಾಸಿಯರನ್ನೂ ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಇರಿಸಿದನು. 3 ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು. 4 ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು. 5 ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು. 6 ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು. 7 ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು. 8 ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು. 9 ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು. 10 ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ 11 ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು. 12 ತರುವಾಯ ಏಸಾವನು--ನಾವು ಮುಂದಕ್ಕೆ ಪ್ರಯಾಣ ಮಾಡುವಂತೆ ಹೊರಡೋಣ, ನಾನು ನಿನ್ನ ಮುಂದೆ ಹೋಗುವೆನು ಅಂದನು. 13 ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು. 14 ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು. 15 ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು. 16 ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು. 17 ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು. 18 ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು. 19 ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು. 20 ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
1 ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು. 2 ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು. 3 ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು. 4 ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು. 5 ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು. 6 ಆಗ ಶೆಕೆಮನ ತಂದೆಯಾದ ಹಮೋರನು ಹೊರಗೆ ಯಾಕೋಬನ ಸಂಗಡ ಮಾತನಾಡುವದಕ್ಕೆ ಬಂದನು. 7 ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು. 8 ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ; 9 ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ. 10 ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು. 11 ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು. 12 ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು. 13 ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು. 14 ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ. 15 ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು. 16 ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು; 17 ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು. 18 ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು. 19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. 20 ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ-- 21 ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ. 22 ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು. 23 ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು. 24 ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು. 25 ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು. 26 ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು. 27 ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು. 28 ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು. 29 ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು. 30 ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು. 31 ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
1 ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು. 2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ; 3 ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು. 4 ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು. 5 ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ. 6 ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್. 7 ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು. 8 ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು. 9 ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು. 10 ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು. 11 ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು. 12 ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು. 13 ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು. 14 ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು. 15 ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು. 16 ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು. 17 ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು. 18 (ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು. 19 ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್. 20 ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ. 21 ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು. 22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು. 23 ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು. 24 ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು. 25 ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು. 26 ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು. 27 ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು. 28 ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು. 29 ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
1 ಎದೋಮ್ ಎಂಬ ಏಸಾವನ ವಂಶಾವಳಿಗಳು ಇವೇ: 2 ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ, 3 ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು. 4 ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು. 5 ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು. 6 ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು. 7 ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು. 8 ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು. 9 ಸೇಯಾರ್ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ: 10 ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು. 11 ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್; 12 ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ. 13 ರೆಗೂವೇಲನ ಮಕ್ಕಳು ಯಾರಂದರೆ: ನಹತ್ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು. 14 ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. 15 ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್ 16 ಕೋರಹ ಗತಾಮ್ ಅಮಾಲೇಕ್ ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾಳ ಕುಮಾರರು. 17 ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು. 18 ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು. 19 ಇವರು ಎದೋಮ್ ಎಂಬ ಏಸಾವನ ಕುಮಾರರು; ಇವರೇ ಅವರ ಮುಖಂಡರು. 20 ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ 21 ದೀಶೋನ್ ಏಚೆರ್ ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯಾರನ ಮಕ್ಕಳಾದ ಹೋರಿಯರ ಮುಖಂಡರು. 22 ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್ ಲೋಟಾನನ ಸಹೋದರಿ ಯಾದ ತಿಮ್ನಾ. 23 ಶೋಬಾಲನ ಮಕ್ಕಳು ಯಾರಂದರೆ: ಅಲ್ವಾನ್ ಮಾನಹತ್ ಗೇಬಾಲ್ ಶೆಫೋ ಮತ್ತು ಓನಾಮ್. 24 ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ. 25 ಅನಾಹನ ಮಕ್ಕಳು ಯಾರಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು. 26 ದೀಶೋನನ ಮಕ್ಕಳು ಯಾರಂದರೆ: ಹೆಮ್ದಾನ್ ಎಷ್ಬಾನ್ ಇತ್ರಾನ್ ಕೆರಾನ್. 27 ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್ ಜಾವಾನ್ ಆಕಾನ್. 28 ದೀಶಾನನ ಮಕ್ಕಳು ಯಾರಂದರೆ: ಊಚ್ ಅರಾನ್. 29 ಹೋರಿಯರಿಂದ ಬಂದ ಮುಖಂಡರು ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ. 30 ದೀಶೋನ್ ಏಚೆರ್ ದೀಶಾನ್ ಇವರೇ. ಇವರು ಸೇಯಾರ್ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು. 31 ಇಸ್ರಾಯೇಲ್ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ. 32 ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು; ಅವನ ಪಟ್ಟಣದ ಹೆಸರು ದಿನ್ಹಾಬಾ. 33 ಬೆಲಗನು ಸತ್ತ ಮೇಲೆ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗನಾದ ಯೋಬಾಬನು ಆಳಿದನು. 34 ಯೋಬಾ ಬನು ಸತ್ತ ಮೇಲೆ ಅವನ ಬದಲಾಗಿ ತೇಮಾನೀಯ ದೇಶದ ಹುಷಾಮನು ಆಳಿದನು. 35 ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್. 36 ಹದದನು ಸತ್ತಾಗ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು. 37 ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು. 38 ಸೌಲನು ಸತ್ತ ಮೇಲೆ ಅವನ ಬದಲಾಗಿ ಅಕ್ಬೋರನ ಮಗನಾದ ಬಾಳ್ಹಾನಾ ನನು ಆಳಿದನು. 39 ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. 40 ಕುಟುಂಬ ಸ್ಥಳ ಮತ್ತು ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವವಂದರೆ: ತಿಮ್ನಾ ಅಲ್ವಾ ಯೆತೇತ. 41 ಒಹೋಲೀಬಾಮ ಏಲಾ ಪೀನೋನ್. 42 ಕೆನಜ್ ತೇಮಾನ್ ಮಿಪ್ಚಾರ 43 ಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.
1 ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸ ವಾಗಿದ್ದನು. 2 ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು. 3 ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು. 4 ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು. 5 ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು. 6 ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ. 7 ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು. 8 ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು. 9 ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು. 10 ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು. 11 ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು. 12 ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು. 13 ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು. 14 ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು. 15 ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು. 16 ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು. 17 ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು. 18 ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು. 19 ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ; 20 ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. 21 ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು. 22 ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು. 23 ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು. 24 ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು. 25 ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು. 26 ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು? 27 ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು. 28 ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು. 29 ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು. 30 ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು. 31 ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ 32 ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು. 33 ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು. 34 ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು. 35 ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು. 36 ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
1 ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು. 2 ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು. 3 ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು. 4 ಆಕೆಯು ತಿರಿಗಿ ಗರ್ಭಿಣಿ ಯಾಗಿ ಮಗನನ್ನು ಹೆತ್ತು ಅವನಿಗೆ ಓನಾನ ಎಂದು ಹೆಸರಿಟ್ಟಳು. 5 ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು. 6 ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್. 7 ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು. 8 ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು. 9 ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು. 10 ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು. 11 ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು. 12 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು. 13 ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ 14 ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು. 15 ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು. 16 ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು. 17 ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು. 18 ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು. 19 ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು. 20 ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ. 21 ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು. 22 ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು. 23 ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು. 24 ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು. 25 ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು. 26 ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ. 27 ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು. 28 ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು. 29 ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು. 30 ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
1 ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು. 2 ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು. 3 ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು. 4 ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು. 5 ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು. 6 ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು. 7 ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು. 8 ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ. 9 ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು. 10 ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು. 11 ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ. 12 ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು. 13 ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು 14 ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು. 15 ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು. 16 ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು. 17 ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುವವ ಳಾಗಿ--ನೀನು ನಮ್ಮ ಬಳಿಗೆ ತಂದ ಇಬ್ರಿಯ ಸೇವಕನು ನನ್ನನ್ನು ಹಾಸ್ಯಮಾಡುವದಕ್ಕೆ ನನ್ನ ಬಳಿಗೆ ಬಂದನು; 18 ಆದರೆ ನಾನು ನನ್ನ ಸ್ವರವನ್ನೆತ್ತಿ ಕೂಗಿಕೊಂಡಾಗ ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು ಅಂದಳು. 19 ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು. 20 ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು. 21 ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು. 22 ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು. 23 ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
1 ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು. 2 ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು 3 ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು. 4 ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು. 5 ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು. 6 ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು. 7 ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು. 8 ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು. 9 ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು. 10 ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು. 11 ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು. 12 ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ. 13 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ. 14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು. 15 ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು. 16 ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು; 17 ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು. 18 ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು. 19 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು. 20 ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು. 21 ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು. 22 ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು. 23 ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
1 ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು. 2 ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು. 3 ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು. 4 ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು. 5 ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು. 6 ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು. 7 ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು. 8 ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ. 9 ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ; 10 ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ 11 ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು. 12 ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು. 13 ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು. 14 ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು. 15 ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು. 16 ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು. 17 ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು. 18 ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು. 19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ. 20 ಅವಲಕ್ಷಣ ವಾದ ಮತ್ತು ಬಡಕಲಾದ ಹಸುಗಳು ಮೊದಲನೆಯ ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು; 21 ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು. 22 ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು. 23 ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು. 24 ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ. 25 ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ. 26 ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು. 27 ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು. 28 ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ. 29 ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ. 30 ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು. 31 ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು. 32 ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು. 33 ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ. 34 ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ. 35 ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ. 36 ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು. 37 ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು. 38 ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು. 39 ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ. 40 ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು. 41 ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು. 42 ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು. 43 ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು. 44 ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು. 45 ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು. 46 ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು. 47 ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು. 48 ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು. 49 ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು. 50 ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು. 51 ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು. 52 ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು. 53 ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ 54 ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು. 55 ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು. 56 ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು. 57 ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
1 ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು. 2 ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು. 3 ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು. 4 ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ. 5 ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು. 6 ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು. 7 ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು. 8 ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ. 9 ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು. 10 ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ. 11 ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು. 12 ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು. 13 ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು. 14 ಆಗ ಯೋಸೇಫನು ಅವರಿಗೆ--ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ. 15 ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು. 16 ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು. 17 ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು. 18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ. 19 ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ. 20 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು. 21 ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು. 22 ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು. 23 ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು. 24 ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು.. 25 ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸ ಬೇಕೆಂದೂ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಡಬೇಕೆಂದೂ ಹಾದಿಗೋಸ್ಕರ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಹೀಗೆಯೇ ಅವನು ಅವರಿಗೆ ಮಾಡಿ ದನು. 26 ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಅಲ್ಲಿಂದ ಹೋಗಿಬಿಟ್ಟರು. 27 ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು. 28 ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು. 29 ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ತಮಗೆ ಸಂಭವಿಸಿದ್ದೆಲ್ಲ ವನ್ನು ಅವನಿಗೆ ತಿಳಿಸಿದರು. ಅದೇನಂದರೆ-- 30 ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು. 31 ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ. 32 ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು. 33 ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ. 34 ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು. 35 ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು. 36 ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು. 37 ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು. 38 ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
1 ದೇಶದಲ್ಲಿ ಬರವು ಘೋರವಾಗಿತ್ತು. 2 ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು. 3 ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ. 4 ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ. 5 ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು. 6 ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ 7 ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು. 8 ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು. 9 ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು. 10 ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು. 11 ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ. 12 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು. 13 ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ. 14 ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು. 15 ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು. 16 ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು. 17 ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು. 18 ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು. 19 ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ-- 20 ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ. 21 ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ. 22 ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು. 23 ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು. 24 ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು. 25 ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು. 26 ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು. 27 ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು. 28 ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು. 29 ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು. 30 ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. 31 ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು. 32 ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು. 33 ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು. 34 ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
1 ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು. 2 ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು. 3 ಬೆಳಿಗ್ಗೆ ಹೊತ್ತು ಮೂಡಿದಾಗ ಆ ಮನುಷ್ಯರು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲ್ಪಟ್ಟರು. 4 ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ? 5 ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು. 6 ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು. 7 ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ. 8 ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು? 9 ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು. 10 ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು. 11 ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು. 12 ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು. 13 ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು. 14 ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು. 15 ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು. 16 ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು. 17 ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು. 18 ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು. 19 ನನ್ನ ಒಡೆಯನು-- ನಿಮಗೆ ತಂದೆಯೂ ಸಹೋದರರೂ ಇದ್ದಾರೋ ಎಂದು ತನ್ನ ದಾಸರನ್ನು ಕೇಳಲು 20 ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು. 21 ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ, 22 ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು. 23 ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ. 24 ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು. 25 ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು. 26 ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು. 27 ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ. 28 ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ. 29 (ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು. 30 ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ 31 ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು. 32 ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ. 33 ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ. 34 ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
1 ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ. 2 ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು. 3 ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು. 4 ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ. 5 ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ. 6 ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ. 7 ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ. 8 ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ. 9 ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ; 10 ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು; 11 ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ. 12 ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ. 13 ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು. 14 ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು. 15 ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು. 16 ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು. 17 ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ 18 ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ. 19 ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ. 20 ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು. 21 ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು. 22 ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು. 23 ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು. 24 ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು. 25 ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು-- 26 ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು. 27 ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು. 28 ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
1 ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು. 2 ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು. 3 ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು. 4 ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು. 5 ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು. 6 ಅವರು ತಮ್ಮ ದನಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು. 7 ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು. 8 ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು. 9 ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು. 10 ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು. 11 ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು. 12 ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು. 13 ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು. 14 ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು. 15 ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ. 16 ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು. 17 ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು. 18 ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. 19 ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್ ಬೆನ್ಯಾವಿಾನ್ ಎಂಬವರು. 20 ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು. 21 ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು. 22 ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ. 23 ದಾನನ ಮಗನು ಹುಶೀಮನು. 24 ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು. 25 ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ. 26 ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು. 27 ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ. 28 ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ದೇಶಕ್ಕೆ ಬಂದರು. 29 ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು. 30 ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು. 31 ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ. 32 ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು. 33 ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು. 34 ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
1 ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್ ಸೀಮೆಯಲ್ಲಿ ಇದ್ದಾರೆ ಅಂದನು. 2 ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. 3 ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು. 4 ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು. 5 ಅದಕ್ಕೆ ಫರೋಹನು ಯೋಸೇಫನಿಗೆ--ನಿನ್ನ ತಂದೆಯೂ ನಿನ್ನ ಸಹೋದ ರರೂ ನಿನ್ನ ಬಳಿಗೆ ಬಂದಿದ್ದಾರೆ. 6 ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು. 7 ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು. 8 ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ 9 ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು. 10 ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು. 11 ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು. 12 ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು. 13 ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು. 14 ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು. 15 ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು. 16 ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು. 17 ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು. 18 ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ. 19 ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು. 20 ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರು 21 ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು. 22 ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ. 23 ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ. 24 ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು. 25 ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು. 26 ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ. 27 ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು. 28 ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು. 29 ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ. 30 ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು. 31 ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
1 ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು. 2 ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು. 3 ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು. 4 ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು. 5 ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು. 6 ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ. 7 ನಾನು ಪದ್ದನ್ ಅರಾಮಿನಿಂದ ಬಂದಾಗ ಕಾನಾನ್ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು. 8 ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ--ಇವರು ಯಾರು ಅಂದನು. 9 ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು. 10 ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. 11 ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು. 12 ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು. 13 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು. 14 ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು. 15 ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, 16 ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು. 17 ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು. 18 ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು. 19 ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. 20 ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು. 21 ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು. 22 ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
1 ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ. 2 ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ. 3 ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ. 4 ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ; 5 ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ. 6 ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು. 7 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು. 8 ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. 9 ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? 10 ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು. 11 ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ. 12 ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು. 13 ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು. 14 ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ. 15 ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು. 16 ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು. 17 ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು. 18 ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ. 19 ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು. 20 ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು. 21 ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ. 22 ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ. 23 ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು. 24 ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ, 25 ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.) 26 ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ. 27 ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು. 28 ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು. 29 ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ 30 ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ. 31 ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು. 32 ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು. 33 ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
1 ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು. 2 ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು. 3 ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು. 4 ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು. 5 ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು. 6 ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು. 7 ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ 8 ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟರು. 9 ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು. 10 ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು. 11 ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ. 12 ಆಗ ಯಾಕೋಬನು ತನ್ನ ಕುಮಾರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು. 13 ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು. 14 ಯೋಸೇಫನು ತನ್ನ ತಂದೆಯನ್ನು ಹೂಣಿಟ್ಟ ಮೇಲೆ ತನ್ನ ಸಹೋದರರ ಸಂಗಡಲೂ ತನ್ನ ತಂದೆಯನ್ನು ಹೂಣಿಡುವದಕ್ಕಾಗಿ ಅವನ ಸಂಗಡ ಹೋದವರೆಲ್ಲರ ಸಂಗಡಲೂ ಐಗುಪ್ತಕ್ಕೆ ತಿರಿಗಿ ಬಂದನು. 15 ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು 16 ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ ಹೇಳಿದ್ದೇನಂದರೆ--ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ 17 ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು. 18 ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು. 19 ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ? 20 ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು. 21 ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು. 22 ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು. 23 ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು. 24 ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು. 25 ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು. 26 ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
1 ಯಾಕೋಬನ ಜೊತೆಗೆ ಐಗುಪ್ತಕ್ಕೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲ್ ಮಕ್ಕಳ ಹೆಸರುಗಳು ಇವೇ: 2 ರೂಬೇನ್ ಸಿಮೆಯೋನ್ ಲೇವಿ ಯೆಹೂದ 3 ಇಸ್ಸಾಕಾರ್ ಜೆಬುಲೂನ್ ಬೆನ್ಯಾವಿಾನ್ 4 ದಾನ್ ನಫ್ತಾಲಿ ಗಾದ್ ಆಶೇರ್. 5 ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು. 6 ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು. 7 ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು. 8 ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು. 9 ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ; 10 ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು. 11 ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು. 12 ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು. 13 ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು. 14 ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು. 15 ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು. 16 ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು. 17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು. 18 ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು. 19 ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು. 20 ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು. 21 ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು. 22 ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
1 ಆಗ ಲೇವಿಯ ಮನೆಯವನಾದ ಒಬ್ಬ ಮನುಷ್ಯನು ಲೇವಿಯ ಮಗಳನ್ನು ಹೆಂಡತಿ ಯಾಗಿ ತಕ್ಕೊಂಡನು. 2 ಆ ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು. 3 ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು. 4 ಕೂಸಿಗೆ ಏನಾಗುವದೋ ಎಂದು ತಿಳಿದುಕೊಳ್ಳುವದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು. 5 ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು. 6 ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು. 7 ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು. 8 ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು. 9 ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು. 10 ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು. 11 ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು. 12 ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು. 13 ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು. 14 ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು. 15 ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು. 16 ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು. 17 ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು. 18 ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು. 19 ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು. 20 ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು. 21 ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು. 22 ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು. 23 ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. 24 ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು. 25 ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
1 ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು. 2 ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ. 3 ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು. 4 ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು. 5 ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು. 6 ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು. 7 ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು. 8 ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ. 9 ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ. 10 ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು. 11 ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು. 12 ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು. 13 ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು. 14 ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು. 15 ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು. 16 ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ. 17 ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು. 18 ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು. 19 ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ. 20 ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು. 21 ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ. 22 ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
1 ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು. 2 ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು. 3 ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು. 4 ಕರ್ತನು ಮೋಶೆಗೆ--ನಿನ್ನ ಕೈಚಾಚಿ ಅದರ ಬಾಲ ವನ್ನು ಹಿಡಿ ಅಂದಾಗ ಅವನು ಕೈಚಾಚಿ ಅದನ್ನು ಹಿಡಿದ ಕೂಡಲೆ ಅದು ಅವನ ಕೈಯಲ್ಲಿ ಕೋಲಾಯಿತು. 5 ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬ್ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು. 6 ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು. 7 ಆತನು ಅವನಿಗೆ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ, ಅದು ಅವನ ಬೇರೆ ದೇಹದಂತಾಗಿತ್ತು. 8 ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು. 9 ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು. 10 ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು. 11 ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ? 12 ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು. 13 ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು. 14 ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು. 15 ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು. 16 ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ. 17 ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು. 18 ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು. 19 ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು. 20 ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು. 21 ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ. 22 ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು. 23 (ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು. 24 ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು. 25 ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು. 26 ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು. 27 ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು. 28 ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಕರ್ತನ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು. 29 ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು. 30 ಕರ್ತನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಹೇಳಿ ಜನರ ಕಣ್ಣುಗಳ ಮುಂದೆ ಸೂಚಕ ಕಾರ್ಯಗಳನ್ನು ಮಾಡಲು. ಜನರು ನಂಬಿದರು. 31 ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
1 ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು. 2 ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು. 3 ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು. 4 ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು. 5 ಫರೋ ಹನು--ಇಗೋ, ಈಗ ದೇಶದ ಜನರು ಹೆಚ್ಚಿದ್ದಾರೆ; ನೀವು ಅವರನ್ನು ಅವರ ಬಿಟ್ಟೀಕೆಲಸಗಳಿಂದ ನಿಲ್ಲಿಸಿ ಬಿಡುತ್ತೀರಿ ಅಂದನು. 6 ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ-- 7 ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ. 8 ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ. 9 ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು. 10 ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ. 11 ನಿಮಗೆ ಹುಲ್ಲು ಎಲ್ಲಿ ದೊರಕುವದೋ ಅಲ್ಲಿಗೆ ನೀವೇ ಹೋಗಿ ತಕ್ಕೊಳ್ಳಿರಿ; ಆದಾಗ್ಯೂ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು ಎಂದು ಹೇಳಿ ದ್ದಾನೆ ಅಂದನು. 12 ಆಗ ಜನರು ಹುಲ್ಲಿಗೆ ಬದಲಾಗಿ ಕೂಳೆ ಕೂಡಿಸಿಕೊಳ್ಳುವದಕ್ಕೆ ಐಗುಪ್ತದೇಶದಲ್ಲೆಲ್ಲಾ ಚದರಿಹೋದರು. 13 ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು. 14 ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು. 15 ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ? 16 ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು. 17 ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ. 18 ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು. 19 ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು. 20 ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ 21 ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು. 22 ಆಗ ಮೋಶೆಯು ಕರ್ತನ ಬಳಿಗೆ ಬಂದು--ಕರ್ತನೇ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ಯಾಕೆ ನನ್ನನ್ನು ಕಳುಹಿಸಿದಿ? 23 ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
1 ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು. 2 ದೇವರು ಮೋಶೆಯ ಸಂಗಡ ಮಾತನಾಡಿ--ನಾನೇ ಕರ್ತನು; 3 ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ. 4 ಕಾನಾನ್ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು. 5 ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು. 6 ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ 7 ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು. 8 ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು. 9 ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ. 10 ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ-- 11 ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು. 12 ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು. 13 ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು. 14 ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್ ಫಲ್ಲು ಹೆಚ್ರೋನ್ ಕರ್ವಿಾ; ಇವರೇ ರೂಬೇನನ ಗೋತ್ರಗಳು. 15 ಸಿಮೆಯೋನನ ಕುಮಾರರು: ಯೆಮೂಯೇಲ್, ಯಾವಿಾನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು. 16 ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು. 17 ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು. 18 ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು. 19 ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು. 20 ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು. 21 ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ. 22 ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ. 23 ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು. 24 ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು. 25 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು. 26 ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ. 27 ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ. 28 ಕರ್ತನು ಐಗುಪ್ತದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ 29 ಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು. 30 ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.
1 ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ. 2 ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು. 3 ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು. 4 ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು. 5 ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು. 6 ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು. 7 ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು. 8 ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ-- 9 ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು. 10 ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು. 11 ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು. 12 ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. 13 ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ. 14 ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು. 15 ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು 16 ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ. 17 ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು. 18 ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು. 19 ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು. 20 ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು. 21 ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು. 22 ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ. 23 ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ. 24 ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು. 25 ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು.
1 ಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು. 2 ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು. 3 ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು. 4 ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಸೇವಕರ ಮೇಲೆಯೂ ಕಪ್ಪೆಗಳು ಏರಿ ಬರುವವು ಎಂದು ಹೇಳು ಅಂದನು. 5 ಕರ್ತನು ಮೋಶೆಯ ಸಂಗಡ ಮಾತನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಹಿಡು ಕೊಂಡು ಕಾಲುವೆಗಳ ಮೇಲೆಯೂ ನದಿಗಳ ಮೇಲೆಯೂ ಕೆರೆಗಳ ಮೇಲೆಯೂ ನಿನ್ನ ಕೈಚಾಚು; ಆಗ ಐಗುಪ್ತದೇಶದ ಮೇಲೆಲ್ಲಾ ಕಪ್ಪೆಗಳು ಬರುವವು ಎಂದು ಹೇಳಬೇಕು ಅಂದನು. 6 ಆರೋನನು ಐಗು ಪ್ತದ ನೀರುಗಳ ಮೇಲೆ ಕೈಚಾಚಿದಾಗ ಕಪ್ಪೆಗಳು ಏರಿಬಂದು ಐಗುಪ್ತದೇಶವನ್ನು ಮುಚ್ಚಿಕೊಂಡವು. 7 ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು. 8 ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು. 9 ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು. 10 ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ. 11 ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ ನದಿಯಲ್ಲಿ ಮಾತ್ರ ಅವು ಉಳಿಯುವವು ಅಂದನು. 12 ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು. 13 ಮೋಶೆ ಹೇಳಿದ ಪ್ರಕಾರ ಕರ್ತನು ಮಾಡಿದನು. ಮನೆಗಳಲ್ಲಿಯೂ ಹಳ್ಳಿಗಳ ಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು. 14 ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು. 15 ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ. 16 ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು. 17 ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು. 18 ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು. 19 ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ. 20 ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು. 21 ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು. 22 ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು. 23 ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು. 24 ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು. 25 ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು. 26 ಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು. 27 ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು. 28 ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು. 29 ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು. 30 ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು. 31 ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ. 32 ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
1 ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು. 2 ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ 3 ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು. 4 ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ. 5 ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು. 6 ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ. 7 ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ. 8 ಆಗ ಕರ್ತನು ಮೋಶೆ ಆರೋನರಿಗೆ--ಕೈ ತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ; ಅದನ್ನು ಮೋಶೆಯು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ. 9 ಆಗ ಅದು ಐಗುಪ್ತದೇಶದಲ್ಲೆಲ್ಲಾ ಸಣ್ಣ ಧೂಳಾಗಿ ಅದು ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವದು ಎಂದು ಹೇಳಿ ದನು. 10 ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು. 11 ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು. 12 ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ. 13 ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು. 14 ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು. 15 ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು. 16 ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ. 17 ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ? 18 ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ. 19 ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು. 20 ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು. 21 ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು. 22 ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು. 23 ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. 24 ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. 25 ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು. 26 ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ. 27 ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ. 28 ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು. 29 ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು. 30 ಆದಾಗ್ಯೂ ನೀನೂ ನಿನ್ನ ಸೇವಕರೂ ದೇವರಾದ ಕರ್ತನಿಗೆ ಭಯಪಡು ವದಿಲ್ಲವೆಂದು ನಾನು ಬಲ್ಲೆನು. 31 ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು. 32 ಆದರೆ ಗೋದಿಯೂ ಸಾಮೆಯೂ ಬೆಳೆದಿರಲಿಲ್ಲವಾದದ್ದರಿಂದ ಹಾಳಾಗಲಿಲ್ಲ. 33 ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ. 34 ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. 35 ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸಲೇ ಇಲ್ಲ.
1 ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ. 2 ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು. 3 ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು. 4 ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು. 5 ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು. 6 ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು. 7 ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು. 8 ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು. 9 ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು. 10 ಫರೋ ಹನು ಅವರಿಗೆ--ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಹೇಗೆ ಕಳುಹಿಸುವೆನೋ ಹಾಗೆಯೇ ಕರ್ತನು ನಿಮ್ಮ ಸಂಗಡ ಇರಲಿ. ನೋಡಿರಿ, ನಿಮ್ಮ ಮುಂದೆ ಕೇಡು ಇದೆ. 11 ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು. 12 ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು. 13 ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು. 14 ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು. 15 ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ. 16 ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ. 17 ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು. 18 ಆಗ ಅವನು ಫರೋಹನನ್ನು ಬಿಟ್ಟುಹೋಗಿ ಕರ್ತನನ್ನು ಬೇಡಿಕೊಂಡನು. 19 ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ. 20 ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸದೆ ಹೋದನು. 21 ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು. 22 ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು. 23 ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು. 24 ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು. 25 ಅದಕ್ಕೆ ಮೋಶೆಯು ಅವನಿಗೆ--ನಮ್ಮ ದೇವರಾದ ಕರ್ತನಿಗೆ ಅರ್ಪಿಸುವದಕ್ಕೆ ನೀನು ನಮ್ಮ ಕೈಯಲ್ಲಿ ಬಲಿಗಳನ್ನೂ ದಹನಬಲಿಗಳನ್ನೂ ಕೊಡಬೇಕು. 26 ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು. 27 ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು. 28 ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು. 29 ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
1 ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು. 2 ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು. 3 ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು. 4 ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು. 5 ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು. 6 ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ. 7 ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ. 8 ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು. 9 ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು. 10 ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
1 ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ-- 2 ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು. 3 ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು. 4 ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ. 5 ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು. 6 ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. 7 ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. 8 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. 9 ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. 10 ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. 11 ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ. 12 ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. 13 ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ. 14 ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು. 15 ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. 16 ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು. 17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು. 18 ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. 19 ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. 20 ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು. 21 ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ. 22 ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು. 23 ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು. 24 ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು. 25 ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು. 26 ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ 27 ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು. 28 ಇಸ್ರಾಯೇಲ್ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು. 29 ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು. 30 ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ. 31 ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ. 32 ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು. 33 ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು. 34 ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು. 35 ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು. 36 ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು. 37 ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು. 38 ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು. 39 ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ. 40 ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು. 41 ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು. 42 ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ. 43 ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು. 44 ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು. 45 ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು. 46 ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು. 47 ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು. 48 ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು. 49 ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು. 50 ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳೆಲ್ಲಾ ಮಾಡಿದರು. 51 ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
1 ಕರ್ತನು ಮೋಶೆಯ ಸಂಗಡ ಮಾತನಾಡಿಹೇಳಿದ್ದೇನಂದರೆ-- 2 ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು. 3 ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು. 4 ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ. 5 ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು. 6 ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು. 7 ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು. 8 ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ. 9 ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ. 10 ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು. 11 ಕರ್ತನು ನಿನಗೂ ನಿನ್ನ ಪಿತೃಗಳಿಗೂ ಪ್ರಮಾಣಮಾಡಿದ ಪ್ರಕಾರ ನಿನ್ನನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಅದನ್ನು ನಿನಗೆ ಕೊಡುವನು. 12 ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ. 13 ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು. 14 ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ. 15 ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು. 16 ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ. 17 ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು. 18 ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು. 19 ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು. 20 ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು. 21 ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು. 22 ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
1 ಕರ್ತನು ಮಾತನಾಡಿ ಮೋಶೆಗೆ-- 2 ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು. 3 ಫರೋಹನು ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು. 4 ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು. 5 ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು. 6 ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು. 7 ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು. 8 ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು. 9 ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು. 10 ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು. 11 ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ? 12 ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು. 13 ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ. 14 ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು. 15 ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು. 16 ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು. 17 ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು. 18 ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು. 19 ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. 20 ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ. 21 ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. 22 ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು. 23 ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು. 24 ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ 25 ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು. 26 ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು. 27 ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. 28 ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು. 29 ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು. 30 ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು. 31 ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
1 ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ. 2 ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು. 3 ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು. 4 ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು. 5 ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು. 6 ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು. 7 ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು. 8 ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು. 9 ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. 10 ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು. 11 ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ? 12 ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು. 13 ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ. 14 ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. 15 ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. 16 ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. 17 ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ. 18 ಕರ್ತನು ಯುಗಯುಗಾಂತರಗಳ ವರೆಗೆ ಆಳುವನು. 19 ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು. 20 ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು. 21 ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು. 22 ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ. 23 ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು. 24 ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು. 25 ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು. 26 ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು. 27 ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
1 ತರುವಾಯ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್ ಅರಣ್ಯಕ್ಕೆ ಬಂದರು. 2 ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು. 3 ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು. 4 ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ. 5 ಆರನೆಯ ದಿವಸದಲ್ಲಿ ಅವರು ತಂದದ್ದನ್ನು ಸಿದ್ಧಮಾಡುವಾಗ ಪ್ರತಿದಿನದಲ್ಲಿ ಕೂಡಿಸು ವದಕ್ಕಿಂತ ಎರಡರಷ್ಟಾಗಿರುವದು ಎಂದು ಹೇಳಿದನು. 6 ಆಗ ಮೋಶೆ ಆರೋನರು ಇಸ್ರಾಯೇಲ್ ಮಕ್ಕಳಿ ಗೆಲ್ಲಾ--ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದಾತನು ಕರ್ತನೇ ಎಂದು ಸಾಯಂಕಾಲವಾ ದಾಗ ನಿಮಗೆ ತಿಳಿಯುವದು. 7 ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು. 8 ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು. 9 ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು. 10 ಆರೋನನು ಇಸ್ರಾಯೇಲ್ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು. 11 ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ-- 12 ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು. 13 ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು. 14 ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು. 15 ಇಸ್ರಾಯೇಲ್ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು. 16 ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು. 17 ಇಸ್ರಾಯೇಲ್ ಮಕ್ಕಳು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು. 18 ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು. 19 ಮೋಶೆ ಅವರಿಗೆ--ಇದರಲ್ಲಿ ಯಾರೂ ಮರುದಿನದ ವರೆಗೆ ಇಟ್ಟುಕೊಳ್ಳಬಾರದು ಎಂದು ಹೇಳಿದನು. 20 ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನ ವರೆಗೆ ಇಟ್ಟುಕೊಂಡಾಗ ಅದು ಹುಳಬಿದ್ದು ನಾತ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿ ಕೊಂಡನು. 21 ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನು ವಷ್ಟು ಪ್ರತಿ ದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ಬಿಸಿಲು ಬಹಳವಾದಾಗ ಅದು ಕರಗಿ ಹೋಗುತ್ತಿತ್ತು. 22 ಆರನೆಯ ದಿನದಲ್ಲಿ ಅವರು ಎರಡರಷ್ಟು ರೊಟ್ಟಿ ಯನ್ನು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು. 23 ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು. 24 ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರು ದಿನದ ವರೆಗೆ ಇಟ್ಟುಕೊಂಡಾಗ ಅದು ನಾತಹಿಡಿಯಲಿಲ್ಲ. ಅದರಲ್ಲಿ ಹುಳಗಳೂ ಇರ ಲಿಲ್ಲ. 25 ಆಗ ಮೋಶೆಯು--ಈ ಹೊತ್ತು ಅದನ್ನು ಊಟಮಾಡಿರಿ, ಯಾಕಂದರೆ ಈ ದಿನವು ಕರ್ತನ ಸಬ್ಬತ್ ದಿನವಾಗಿದೆ. ಈ ಹೊತ್ತು ನಿಮಗೆ ಹೊಲದಲ್ಲಿ (ಆಹಾರ) ಸಿಕ್ಕುವದಿಲ್ಲ. 26 ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವ ದರಿಂದ ಅಂದು (ರೊಟ್ಟಿಯು) ಇರುವದಿಲ್ಲ ಅಂದನು. 27 ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ. 28 ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು. 29 ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು. 30 ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. 31 ಆಗ ಇಸ್ರಾಯೇಲ್ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು. 32 ಮೋಶೆಯು ಅವರಿಗೆ--ಕರ್ತನು ಆಜ್ಞಾಪಿಸಿದ್ದು ಇದೇ--ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಡಿಸಿದಾಗ ಅರಣ್ಯದಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ (ಮನ್ನವನ್ನು) ತುಂಬಿಸಿ ಇಟ್ಟಿರಬೇಕು ಎಂಬದು ಅಂದನು. 33 ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು. 34 ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಅದನ್ನು (ಮನ್ನ ವನ್ನು) ಕಾಪಾಡುವದಕ್ಕೆ ಸಾಕ್ಷಿಯಾಗಿ ಇಟ್ಟನು. 35 ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು. 36 ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
1 ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ. 2 ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು. 3 ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು. 4 ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು. 5 ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. 6 ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು. 7 ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು. 8 ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. 9 ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು. 10 ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು. 11 ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು. 12 ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು. 13 ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು. 14 ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು. 15 ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು. 16 ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
1 ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ 2 ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು. 3 ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು. 4 ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು. 5 ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು. 6 ಆಗ ಅವನು ಮೋಶೆಗೆ--ನಿನ್ನ ಮಾವ ನಾದ ಇತ್ರೋವನೆಂಬ ನಾನು ನಿನ್ನ ಹೆಂಡತಿಯನ್ನೂ ಅವಳ ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆಂದು ಹೇಳಿ ಕಳುಹಿಸಿದಾಗ 7 ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು. 8 ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು. 9 ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು. 10 ಇತ್ರೋವನು--ಐಗುಪ್ತ್ಯರ ಕೈಗೂ ಫರೋಹನ ಕೈಗೂ ಐಗುಪ್ತ್ಯರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಕರ್ತನಿಗೆ ಸ್ತೋತ್ರವಾಗಲಿ. 11 ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು. 12 ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು. 13 ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು. 14 ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು. 15 ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ. 16 ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು. 17 ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ; 18 ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ. 19 ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು. 20 ನೇಮಕಗಳನ್ನೂ ನ್ಯಾಯ ಪ್ರಮಾಣಗಳನ್ನೂ ಅವರಿಗೆ ಕಲಿಸಿ, ಅವರು ಹೋಗ ತಕ್ಕ ಮಾರ್ಗವನ್ನೂ ಅವರು ಮಾಡತಕ್ಕ ಕೆಲಸವನ್ನೂ ಅವರಿಗೆ ತೋರಿಸಬೇಕು. 21 ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. 22 ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು. 23 ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು. 24 ಮೋಶೆಯು ತನ್ನ ಮಾವನ ಮಾತನ್ನು ಕೇಳಿ ಅವನು ಹೇಳಿದ್ದನ್ನೆಲ್ಲಾ ಮಾಡಿದನು. 25 ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು. 26 ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು. 27 ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
1 ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು. 2 ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು. 3 ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು-- 4 ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ; 5 ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. 6 ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು. 7 ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು. 8 ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು. 9 ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು. 10 ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ. 11 ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು. 12 ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು. 13 ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು. 14 ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು. 15 ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು. 16 ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು. 17 ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು. 18 ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು. 19 ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು. 20 ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು. 21 ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು. 22 ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು. 23 ಮೋಶೆಯು ಕರ್ತನಿಗೆ--ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀನೇ ನಮ್ಮನ್ನು ಎಚ್ಚರಿಸಿದ್ದೀ ಅಂದನು. 24 ಆಗ ಕರ್ತನು ಅವನಿಗೆ--ನೀನು ಇಳಿದು ಹೋಗಿ ಆರೋನ ನನ್ನು ಕರಕೊಂಡು ಇಲ್ಲಿಗೆ ಬಾ. ಆದರೆ ಕರ್ತನು ಅವರನ್ನು ಸಾಯಿಸದಂತೆ ಯಾಜಕರೂ ಜನರೂ ಮುಂದೆ ಕರ್ತನ ಬಳಿಗೆ ಬಾರದೆ ಇರಲಿ ಅಂದನು. 25 ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.
1 ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ-- 2 ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ. 3 ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. 4 ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. 5 ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು. 6 ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು. 7 ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ. 8 ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ. 9 ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ. 10 ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು. 11 ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು. 12 ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು. 13 ಕೊಲೆ ಮಾಡಬಾರದು. 14 ವ್ಯಭಿಚಾರ ಮಾಡಬಾರದು. 15 ಕದಿಯಬಾರದು. 16 ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು. 17 ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು. 18 ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು. 19 ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು. 20 ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು. 21 ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು. 22 ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ. 23 ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು. 24 ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. 25 ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ. 26 ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
1 ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ. 2 ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ. 3 ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು. 4 ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು. 5 ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ 6 ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು. 7 ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು. 8 ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ. 9 ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯಮಾಡಿದರೆ ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು. 10 ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು. 11 ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು. 12 ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು. 13 ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು. 14 ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು. 15 ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು. 16 ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು. 17 ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು. 18 ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ 19 ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು. 20 ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು. 21 ಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು. 22 ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು. 23 ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ 24 ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ 25 ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು. 26 ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ. 27 ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ. 28 ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು. 29 ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು. 30 ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ. 31 ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು. 32 ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. 33 ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ 34 ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು. 35 ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು. 36 ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
1 ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು. 2 ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು. 3 ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು. 4 ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು. 5 ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ ದ್ರಾಕ್ಷೇತೋಟವನ್ನೂ ಮೇಯಿಸಿ ದರೆ ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ ದ್ರಾಕ್ಷೇತೋಟದಲ್ಲಿ ಉತ್ತಮವಾದದ್ದನ್ನೂ ಬದಲು ಕೊಡಬೇಕು. 6 ಬೆಂಕಿ ಹತ್ತಿ ಅದು ಮುಳ್ಳಿನ ಬೇಲಿಗೆ ತಗುಲಿ ಸಿವುಡುಗಳ ಬಣವಿಗಳನ್ನಾಗಲಿ ನಿಂತ ಬೆಳೆಯನ್ನಾಗಲಿ ಹೊಲವನ್ನಾಗಲಿ ಸುಟ್ಟುಬಿಟ್ಟರೆ ಆ ಬೆಂಕಿಯನ್ನು ಹಚ್ಚಿದ ವನು ಖಂಡಿತವಾಗಿ ಬದಲು ಕೊಡಬೇಕು. 7 ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಆ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು. 8 ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ಸಾಮಾನುಗಳನ್ನು ಅವನು ಮುಟ್ಟಲಿಲ್ಲ ವೆಂದು ವಿಚಾರಿಸುವದಕ್ಕೆ ನ್ಯಾಯಾಧಿಪತಿಗಳ ಬಳಿಗೆ ಅವನನ್ನು ಬರಮಾಡಬೇಕು. 9 ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು. 10 ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ 11 ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು. 12 ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು. 13 ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು. 14 ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು. 15 ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು. 16 ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು. 17 ಅವಳ ತಂದೆಗೆ ಆಕೆಯನ್ನು ಕೊಡುವದಕ್ಕೆ ಮನಸ್ಸಿಲ್ಲದಿದ್ದರೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು. 18 ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು. 19 ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು. 20 ಕರ್ತನಿಗೆ ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಮಾಡುವವನು ಸಂಪೂರ್ಣವಾಗಿ ನಾಶವಾಗಬೇಕು. 21 ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ. 22 ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು. 23 ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು. 24 ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು. 25 ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ. 26 ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು. 27 ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು. 28 ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ. 29 ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು. 30 ಅದರಂತೆಯೇ ನಿನ್ನ ಎತ್ತುಗಳ ಲ್ಲಿಯೂ ಕುರಿಗಳಲ್ಲಿಯೂ ಮಾಡಬೇಕು. ಅದು ಏಳು ದಿನ ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನ ಅದನ್ನು ನನಗೆ ಕೊಡಬೇಕು. 31 ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
1 ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ. 2 ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ. 3 ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ. 4 ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು. 5 ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು. 6 ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ. 7 ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ. 8 ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ. 9 ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ. 10 ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು. 11 ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು. 12 ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ. 13 ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು. 14 ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು. 15 ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.) 16 ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು. 17 ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು. 18 ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು. 19 ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು. 20 ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ. 21 ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ. 22 ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು. 23 ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು. 24 ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು. 25 ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು. 26 ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು. 27 ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು. 28 ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು. 29 ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ 30 ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು. 31 ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ. 32 ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು. 33 ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
1 ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ. 2 ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು. 3 ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು. 4 ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು. 5 ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು. 6 ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು. 7 ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು. 8 ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು. 9 ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು. 10 ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು. 11 ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು. 12 ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು. 13 ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು. 14 ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು. 15 ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು. 16 ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು. 17 ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು. 18 ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
1 ಆಗ ಕರ್ತನು ಮಾತನಾಡಿ ಮೋಶೆಗೆ-- 2 ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು. 3 ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ 4 ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು 5 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು. 6 ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ 7 ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ. 8 ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು. 9 ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು. 10 ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು. 11 ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು. 12 ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು. 13 ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು, 14 ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು. 15 ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು. 16 ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು. 17 ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು. 18 ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. 19 ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. 20 ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. 21 ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. 22 ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು. 23 ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು. 24 ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು. 25 ಅದರ ಸುತ್ತಲೂ ಗೇಣುದ್ದ ಅಂಚನ್ನು ಮಾಡಿ ಅಂಚಿನ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. 26 ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು. 27 ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು. 28 ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು. 29 ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು. 30 ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು. 31 ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. 32 ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. 33 ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. 34 ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. 35 ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. 36 ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು. 37 ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು. 38 ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು. 39 ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು. 40 ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
1 ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು. 2 ಒಂದು ತೆರೆಯ ಉದ್ದವು ಇಪ್ಪತ್ತೆಂಟು ಮೊಳ, ಅದರ ಅಗಲವು ನಾಲ್ಕು ಮೊಳ ವಾಗಿರಬೇಕು ಪ್ರತಿಯೊಂದು ತೆರೆಯು ಒಂದೇ ಅಳತೆ ಯುಳ್ಳದ್ದಾಗಿರಬೇಕು. 3 ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು. 4 ಒಂದು ತೆರೆಯ ಅಂಚಿನ ಕೊನೆಗೆ ಜೋಡಿಸುವ ಸ್ಥಳದಲ್ಲಿ ನೀಲಿ ನೂಲಿನ ಕುಣಿಕೆಗಳನ್ನು ಮಾಡಿ ಎರಡನೇ ಜೋಡನೆಯ ಕಡೇ ತೆರೆಯ ಕೊನೆಯಲ್ಲಿಯೂ ಹಾಗೆಯೇ ಮಾಡಬೇಕು. 5 ಒಂದು ತೆರೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ತೆರೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಸರಿ ಯಾಗಿ ಹಿಡುಕೊಳ್ಳುವವುಗಳಾಗಿರಬೇಕು. 6 ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ ಅವುಗಳಿಂದ ತೆರೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗುವದು. 7 ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು. 8 ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು. 9 ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿ ಆರನೆಯ ತೆರೆಯನ್ನು ಗುಡಾರದ ಮುಂಭಾಗ ದಲ್ಲಿ ಇಮ್ಮಡಿ ಮಾಡಬೇಕು. 10 ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು. 11 ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು. 12 ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ. 13 ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ. 14 ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು. 15 ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು. 16 ಹಲಿಗೆಯ ಉದ್ದವು ಹತ್ತು ಮೊಳ, ಅದರ ಅಗಲ ಒಂದುವರೆ ಮೊಳ ಇರಬೇಕು. 17 ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು. 18 ಗುಡಾರದ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಹಲಗೆಗಳನ್ನು ನೀನು ಮಾಡಬೇಕು. 19 ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು. 20 ಉತ್ತರ ದಿಕ್ಕಿನಲ್ಲಿರುವ ಅದರ ಮತ್ತೊಂದು ಪಾರ್ಶ್ವಕ್ಕೋಸ್ಕರ ಇಪ್ಪತ್ತು ಹಲಗೆ ಗಳನ್ನೂ 21 ಒಂದೊಂದು ಹಲಗೆಯ ಕೆಳಗೆ ಎರಡೆರಡು ಕೂರುಗಳಂತೆ ನಾಲ್ವತ್ತು ಬೆಳ್ಳಿಯ ಕೂರುಗಳನ್ನೂ 22 ಗುಡಾರದ ಪಶ್ಚಿಮದ ಕಡೆಗೆ ಆರು ಹಲಗೆಗಳನ್ನೂ ಮಾಡಬೇಕು. 23 ಗುಡಾರದ ಉಭಯ ಪಾರ್ಶ್ವಗಳ ಲ್ಲಿರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡ ಬೇಕು. 24 ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು. 25 ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು. 26 ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು. ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು 27 ಗುಡಾರದ ಇನ್ನೊಂದು ಪಾರ್ಶ್ವದ ಹಲಗೆಗಳಿಗೆ ಐದು ಅಗುಳಿ ಗಳನ್ನೂ ಗುಡಾರ ಹಿಂಭಾಗದ ಪಶ್ಚಿಮದ ಎರಡು ಕಡೆಗಳಲ್ಲಿ ಇರುವ ಹಲಗೆಗಳಿಗೆ ಐದು ಅಗುಳಿಗಳನ್ನೂ ಮಾಡಬೇಕು. 28 ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯ ವರೆಗೆ ಮುಟ್ಟಿರಬೇಕು. 29 ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು. 30 ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು. 31 ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು. 32 ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು. 33 ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು. 34 ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು. 35 ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು. 36 ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು. 37 ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
1 ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು. 2 ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು. 3 ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು. 4 ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು. 5 ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು. 6 ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು. 7 ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು. 8 ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು. 9 ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು. 10 ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು. 11 ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು. ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು. 12 ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು. 13 ಪೂರ್ವದ ಕಡೆಯಲ್ಲಿ ಅಂಗಳದ ಅಗಲವು ಮೂಡಣದಲ್ಲಿ ಐವತ್ತು ಮೊಳ ಇರಬೇಕು. 14 ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು. 15 ಮತ್ತೊಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳೂ ಮೂರು ಸ್ತಂಭ ಗಳೂ ಮೂರು ಕುಳಿಗಳೂ ಇರಬೇಕು. 16 ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು. 17 ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು. 18 ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು. 19 ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು. 20 ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು. 21 ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
1 ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು. 2 ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು. 3 ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು. 4 ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು. 5 ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು. 6 ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು. 7 ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು. 8 ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು. 9 ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು. 10 ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು. 11 ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು. 12 ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು. 13 ನೀನು ಬಂಗಾರದ ಜವೆಗಳನ್ನು ಮಾಡಬೇಕು. 14 ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು. 15 ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು. 16 ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು. 17 ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು. 18 ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು. 19 ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು. 20 ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು. 21 ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು. 22 ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು. 23 ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು. 24 ಚಿನ್ನದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳ ಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಬೇಕು. 25 ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು. 26 ಬಂಗಾರದಿಂದ ಎರಡು ಬಳೆ ಗಳನ್ನು ಮಾಡಿ ಎದೆಪದಕದ ಎರಡು ಅಂಚುಗಳಲ್ಲಿ ಸೇರಿಸಿ ಎಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು. 27 ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು. 28 ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು. 29 ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು. 30 ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು. 31 ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು. 32 ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು. 33 ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು. 34 ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು. 35 ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು. 36 ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು. 37 ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು. 38 ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು. 39 ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು. 40 ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು. 41 ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು. 42 ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು. 43 ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
1 ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ 2 ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ 3 ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು. 4 ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು. 5 ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ 6 ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು 7 ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು. 8 ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ 9 ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು. 10 ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. 11 ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು. 12 ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು. 13 ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. 14 ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ. 15 ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. 16 ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು. 17 ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು. 18 ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ. 19 ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. 20 ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. 21 ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು. 22 ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು. 23 ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ 24 ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು. 25 ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ. 26 ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು. 27 ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು. 28 ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು. 29 ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು. 30 ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು. 31 ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು. 32 ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು. 33 ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು. 34 ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು. 35 ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು. 36 ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು. 37 ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು. 38 ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು. 39 ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು. 40 ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. 41 ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು. 42 ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು. 43 ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು. 44 ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು. 45 ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು. 46 ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
1 ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. 2 ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. 3 ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. 4 ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು. 5 ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. 6 ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು. 7 ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. 8 ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು. 9 ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು. 10 ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು. 11 ಆಗ ಕರ್ತನು ಮಾತನಾಡಿ ಮೋಶೆಗೆ-- 12 ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು. 13 ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು. 14 ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು. 15 ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. 16 ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು. 17 ಕರ್ತನು ಮೋಶೆಗೆ-- 18 ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು. 19 ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು. 20 ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು. 21 ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು. 22 ಇದಲ್ಲದೆ ಕರ್ತನು ಮೋಶೆಗೆ-- 23 ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು, 24 ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು, 25 ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. 26 ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. 27 ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ 28 ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. 29 ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. 30 ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು. 31 ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು. 32 ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು. 33 ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು. 34 ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ. 35 ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು. 36 ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ. 37 ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು. 38 ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
1 ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ-- 2 ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ. 3 ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ. 4 ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ 5 ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು. 6 ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ. 7 ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ 8 ಮೇಜನ್ನೂ ಅದರ ಉಪಕರಣಗಳನ್ನೂ ಶುದ್ಧವಾದ ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಧೂಪವೇದಿಯನ್ನೂ 9 ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ 10 ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ 11 ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು. 12 ಕರ್ತನು ಮೋಶೆಯೊಂದಿಗೆ ಮಾತನಾಡಿ-- 13 ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ. 14 ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು. 15 ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು. 16 ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು. 17 ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು. 18 ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
1 ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು. 2 ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು. 3 ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು. 4 ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು. 5 ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು. 6 ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು. 7 ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ. 8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ. 9 ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ. 10 ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು. 11 ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು? 12 ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು. 13 ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು. 14 ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು. 15 ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು. 16 ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ. 17 ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು. 18 ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು. 19 ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು. 20 ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು. 21 ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು. 22 ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ. 23 ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು. 24 ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು. 25 ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.) 26 ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು. 27 ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು. 28 ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು. 29 ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು. 30 ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು. 31 ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ. 32 ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು. 33 ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು. 34 ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು. 35 ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
1 ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು. 2 ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು. 3 ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು. 4 ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ. 5 ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು. 6 ಅದರಂತೆಯೇ ಇಸ್ರಾಯೇಲ್ ಮಕ್ಕಳು ಹೋರೆಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು. 7 ಇದಲ್ಲದೆ ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ ಅದಕ್ಕೆ ದೇವದರ್ಶನ ಗುಡಾರ ಎಂದು ಹೆಸರಿಟ್ಟನು. ತರುವಾಯ ಕರ್ತನನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನ ಗುಡಾರಕ್ಕೆ ಹೋದರು. 8 ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು. 9 ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು. 10 ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು. 11 ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ. 12 ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ. 13 ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು. 14 ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು. 15 ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ. 16 ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು. 17 ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು. 18 ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು. 19 ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು. 20 ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು. 21 ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ. 22 ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು. 23 ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
1 ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು. 2 ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು. 3 ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು. 4 ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು. 5 ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು. 6 ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ 7 ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು. 8 ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು. 9 ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು. 10 ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು. 11 ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ. 12 ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು. 13 ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು. 14 ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು. 15 ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು. 16 ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು. 17 ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು. 18 ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ. 19 ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ. 20 ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು. 21 ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು. 22 ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು. 23 ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು. 24 ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು. 25 ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು. 26 ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು. 27 ಕರ್ತನು ಮೋಶೆಗೆ--ನೀನು ಈ ವಾಕ್ಯಗಳನ್ನು ಬರೆ; ಈ ವಾಕ್ಯಗಳ ಪ್ರಕಾರವೇ ನಿನ್ನ ಸಂಗಡಲೂ ಇಸ್ರಾಯೇಲಿನ ಸಂಗಡಲೂ ನಾನು ಒಡಂಬಡಿಕೆಯನ್ನು ಮಾಡಿದ್ದೇನೆ ಅಂದನು. 28 ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು. 29 ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ. 30 ಆದರೆ ಆರೋನನೂ ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು. 31 ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು. 32 ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು. 33 ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು. 34 ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್ ಮಕ್ಕಳಿಗೆ ತಿಳಿಸುವನು. 35 ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
1 ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ. 2 ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು. 3 ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು. 4 ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಗೆಲ್ಲಾ-- ಕರ್ತನು ಆಜ್ಞಾಪಿಸಿದ್ದು ಇದೇ. ಅದೇನಂದರೆ-- 5 ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ 6 ನೀಲಿ, ಧೂಮ್ರ, ಕೆಂಪುವರ್ಣದ ನಯವಾದ ನಾರುಮಡಿ, ಮೇಕೆಯ ಕೂದಲು, 7 ಕೆಂಪು ಬಣ್ಣದಲ್ಲಿ ಅದ್ದಿದ ಟಗರಿನ ಚರ್ಮಗಳು, ಕಡಲು ಹಂದಿಯ ಚರ್ಮಗಳು ಜಾಲೀಮರವು. 8 ದೀಪಕ್ಕೋಸ್ಕರ ಎಣ್ಣೆ, ಅಭಿಷೇಕಿಸುವ ತೈಲಕ್ಕೋಸ್ಕರ ಮತ್ತು ಪರಿಮಳ ಧೂಪಕ್ಕೋಸ್ಕರ ಸುಗಂಧತೈಲ, 9 ಗೋಮೇಧಕ, ಎಫೋದ್ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ. 10 ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ. 11 ಅವು ಯಾವವಂದರೆ: ಗುಡಾರವನ್ನೂ ಅದರ ಡೇರೆಯನ್ನೂ ಅದರ ಹೊದಿಕೆಯನ್ನೂ ಅದರ ಕೊಂಡಿಗಳನ್ನೂ ಅದರ ಹಲಗೆಗಳನ್ನೂ ಅದರ ಅಗುಳಿಗಳನ್ನೂ ಅದರ ಸ್ತಂಭ ಗಳನ್ನೂ ಅದರ ಕುಳಿಗಳನ್ನೂ 12 ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ 13 ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ 14 ಬೆಳಕಿಗಾಗಿ ದೀಪಸ್ತಂಭವನ್ನೂ ಅದರ ಉಪಕರಣಗಳನ್ನೂ ಅದರ ದೀಪಗಳನ್ನೂ ಬೆಳಕಿಗಾಗಿ ಎಣ್ಣೆಯನ್ನೂ 15 ಧೂಪ ವೇದಿಯನ್ನೂ ಅದರ ಕೋಲುಗಳನ್ನೂ ಅಭಿಷೇಕಿಸುವ ಎಣ್ಣೆಯನ್ನೂ ಪರಿಮಳ ಧೂಪವನ್ನೂ ಗುಡಾರದಲ್ಲಿ ಪ್ರವೇಶಿಸುವ ಬಾಗಲಿನ ತೆರೆಯನ್ನೂ 16 ಯಜ್ಞವೇದಿ ಯನ್ನೂ ಅದರೊಂದಿಗೆ ಹಿತ್ತಾಳೆಯ ಜಲ್ಲಡಿಯನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಗಂಗಾಳವನ್ನೂ ಅದರ ಪೀಠ 17 ಅಂಗಳದ ಪರದೆಗಳನ್ನೂ ಅದರ ಸ್ತಂಭಗಳನ್ನೂ ಅದರ ಕುಳಿಗ ಳನ್ನೂ ಅಂಗಳದ ಬಾಗಲಿನ ತೆರೆಗಳನ್ನೂ 18 ಗುಡಾರದ ಗೂಟಗಳನ್ನೂ ಅಂಗಳದ ಗೂಟಗಳನ್ನೂ ಅವುಗಳ ಹಗ್ಗಗಳನ್ನೂ 19 ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು. 20 ಆಗ ಇಸ್ರಾಯೇಲ್ ಮಕ್ಕಳ ಸಭೆಯವರೆಲ್ಲರೂ ಮೋಶೆಯ ಎದುರಿನಿಂದ ಹೊರಟುಹೋದರು. 21 ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು. 22 ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು. 23 ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು. 24 ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು. 25 ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು. 26 ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು. 27 ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ 28 ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು. 29 ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು. 30 ಆಗ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು 31 ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ 32 ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ 33 ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ. 34 ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ. 35 ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
1 ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು. 2 ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು. 3 ಆಗ ಇಸ್ರಾ ಯೇಲ್ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು. 4 ಆಗ ಪರಿಶುದ್ಧ ಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಾವು ಮಾಡುತ್ತಿದ್ದ ಕೆಲಸದಿಂದ ಬಂದು 5 ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು. 6 ಆಗ ಮೋಶೆಯು ಇನ್ನು ಮೇಲೆ ಪರಿಶುದ್ಧ ಸ್ಥಳದ ಕಾಣಿಕೆ ಗೋಸ್ಕರ ಯಾವ ಗಂಡಸಾಗಲಿ ಹೆಂಗಸಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸ ಬೇಕೆಂಬದಾಗಿ ಆಜ್ಞಾಪಿಸಬೇಕು ಎಂದು ಹೇಳಿದನು. ಹೀಗೆ ಜನರು ತರುವದನ್ನು ನಿಲ್ಲಿಸಿಬಿಟ್ಟರು. 7 ಅವರಿಗೆ ಎಲ್ಲಾ ಕೆಲಸವನ್ನು ಮಾಡುವದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಾನು ಇತ್ತು. 8 ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು. 9 ಒಂದು ತೆರೆಯು ಇಪ್ಪತ್ತೆಂಟು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ತೆರೆಗಳೆಲ್ಲಾ ಒಂದೇ ಅಳತೆಯವುಗಳಾಗಿದ್ದವು. 10 ಅವನು ಐದು ತೆರೆಗಳನ್ನು ಒಂದಕ್ಕೊಂದು ಜೋಡಿ ಸಿದನು, ಬೇರೆ ಐದು ತೆರೆಗಳನ್ನೂ ಒಂದಕ್ಕೊಂದು ಜೋಡಿಸಿದನು. 11 ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; 12 ಒಂದು ತೆರೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ ಇನ್ನೊಂದು ತೆರೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದನು. ಆ ಕುಣಿಕೆಗಳು ಒಂದು ತೆರೆಯನ್ನು ಮತ್ತೊಂದು ತೆರೆಯು ಹಿಡಿದುಕೊಳ್ಳುವಂತೆ ಮಾಡಿದನು. 13 ಅವನು ಚಿನ್ನದ ಐವತ್ತು ಕೊಂಡಿಗಳನ್ನು ಮಾಡಿ ಆ ಕೊಂಡಿಗಳಿಂದ ತೆರೆಗಳನ್ನು ಒಂದ ಕ್ಕೊಂದಾಗಿ ಜೋಡಿಸಿದನು. ಹೀಗೆ ಅದು ಒಂದೇ ಗುಡಾರವಾಯಿತು. 14 ಈ ಗುಡಾರದ ಮೇಲಿನ ಡೇರೆಗೋಸ್ಕರ ಅವನು ಮೇಕೆಯ ಕೂದಲಿನ ಹನ್ನೊಂದು ತೆರೆಗಳನ್ನು ಮಾಡಿ ಸಿದನು. 15 ಒಂದು ತೆರೆಯು ಮೂವತ್ತು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಹನ್ನೊಂದು ತೆರೆಗಳೂ ಒಂದೇ ಅಳತೆಯಾಗಿದ್ದವು. 16 ಅವನು ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿದನು. 17 ಅವನು ತೆರೆಯ ಕೊನೇ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಎರಡನೆಯ ತೆರೆಯನ್ನು ಜೋಡಿಸುವ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಿದನು. 18 ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು. 19 ಅವನು ಆ ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು. 20 ಗುಡಾರವು ನಿಂತುಕೊಂಡಿರುವದಕ್ಕೆ ಅವನು ಜಾಲೀ ಮರದಿಂದ ಹಲಗೆಗಳನ್ನು ಮಾಡಿದನು. 21 ಒಂದು ಹಲಗೆಯ ಉದ್ದಳತೆ ಹತ್ತು ಮೊಳದ್ದಾಗಿಯೂಆ ಹಲಗೆಯ ಅಗಲಳತೆ ಒಂದುವರೆ ಮೊಳದ್ದಾಗಿಯೂ ಇತ್ತು. 22 ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು. 23 ಅವನು ಗುಡಾರಕ್ಕೋಸ್ಕರ ಹಲಗೆ ಗಳನ್ನು ಮಾಡಿದನು. ದಕ್ಷಿಣ ದಿಕ್ಕಿಗೆ ದಕ್ಷಿಣಭಾಗಕ್ಕೆ ಇಪ್ಪತ್ತು ಹಲಗೆಗಳನ್ನು ಮಾಡಿದನು. 24 ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ 25 ಗುಡಾರದ ಉತ್ತರ ದಿಕ್ಕಿನ ಮೂಲೆಯ ಇನ್ನೊಂದು ಭಾಗಕ್ಕೆ ಅವನು ಇಪ್ಪತ್ತು ಹಲಗೆಗಳನ್ನೂ ಮಾಡಿದನು. 26 ಒಂದೊಂದು ಹಲಗೆಯ ಕೆಳಗೆ ಎರಡೆರಡಾಗಿ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು. 27 ಗುಡಾರದ ಪಶ್ಚಿಮ ಭಾಗದ ಮಗ್ಗಲುಗಳಿಗೆ ಆರು ಹಲಗೆಗಳನ್ನು ಮಾಡಿ ದನು. 28 ಅವನು ಗುಡಾರದ ಎರಡು ಪಾರ್ಶ್ವಗಳಲ್ಲಿ ರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡಿದನು. 29 ಅವುಗಳು ಅಡಿಯಲ್ಲಿಯೂ ಮೇಲ್ಗಡೆಯಲ್ಲಿಯೂ ಒಂದೇ ಉಂಗುರದಿಂದ ಜೋಡಿಸಲ್ಪಟ್ಟವು. ಇದೇ ರೀತಿಯಲ್ಲಿ ಅವನು ಎರಡೂ ಮೂಲೆಗಳಲ್ಲಿರುವ ಎರಡಕ್ಕೂ ಮಾಡಿದನು. 30 ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು. 31 ಅವನು ಜಾಲೀ ಮರದ ಅಗುಳಿಗಳನ್ನು ಮಾಡಿದನು; ಗುಡಾರದ ಒಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, 32 ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು. 33 ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು. 34 ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು. 35 ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು. 36 ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು. 37 ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು; 38 ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
1 ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು. 2 ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. 3 ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು. 4 ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು. 5 ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು. 6 ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು. 7 ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು. 8 ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು. 9 ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು. 10 ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. 11 ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು. 12 ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. 13 ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು. 14 ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು. 15 ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು. 16 ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು. 17 ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು. 18 ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು. 19 ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು. 20 ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು. 21 ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು. 22 ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು. 23 ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು. 24 ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು. 25 ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು. 26 ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು. 27 ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು. 28 ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು. 29 ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
1 ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು. 2 ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು. 3 ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು. 4 ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು. 5 ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು. 6 ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು. 7 ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು. 8 ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು. 9 ಅವನು ಅಂಗಳವನ್ನು ಮಾಡಿದನು: ಅಂಗಳದ ದಕ್ಷಿಣ ದಿಕ್ಕಿನ ಭಾಗದಲ್ಲಿದ್ದ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅವು ನೂರು ಮೊಳ ಉದ್ದವಾಗಿದ್ದವು. 10 ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದವು, ಅವುಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು; ಆ ಸ್ತಂಭಗಳಿಗೆ ಇದ್ದ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯಿಂದ ಮಾಡಲ್ಪ ಟ್ಟಿದ್ದವು. 11 ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಆ ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು. 12 ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು. 13 ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ. 14 ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು. 15 ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು. 16 ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. 17 ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು. 18 ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು. 19 ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು. 20 ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು. 21 ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ. 22 ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು. 23 ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು. 24 ಪರಿಶುದ್ಧಾಲಯ ನಿಯಮದ ಮೇರೆಗೆ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ಕಾಣಿಕೆಯ ಬಂಗಾರವನ್ನೊಳಗೊಂಡು ಒಟ್ಟು ಇಪ್ಪ ತ್ತೊಂಭತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲುಗಳಾಗಿತ್ತು. 25 ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು. 26 ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು. 27 ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು. 28 ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು. 29 ಕಾಣಿಕೆಯಾಗಿ ಬಂದ ಹಿತ್ತಾಳೆಯು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾಲ್ಕುನೂರು ಶೆಕೆಲುಗಳಾಗಿತ್ತು. 30 ಆ ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು. 31 ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.
1 ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು. 2 ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು. 3 ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು. 4 (ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು. 5 ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು. 6 ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು. 7 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು. 8 ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು. 9 ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು. 10 ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು. 11 ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು. 12 ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು. 13 ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು. 14 ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು. 15 ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು. 16 ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು. 17 ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು. 18 ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು. 19 ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು. 20 ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು. 21 ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು. 22 ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು. 23 ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು. 24 ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು. 25 ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು. 26 ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು. 27 ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ 28 ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ 29 ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು. 30 ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು 31 ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು. 32 ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು. 33 ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು; 34 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು; 35 ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು; 36 ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು; 37 ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು; 38 ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು; 39 ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು, 40 ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು; 41 ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು. 42 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು. 43 ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
1 ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- 2 ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು. 3 ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು. 4 ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು. 5 ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು. 6 ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು. 7 ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು. 8 ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು. 9 ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು. 10 ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು. 11 ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು. 12 ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು. 13 ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು. 14 ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ 15 ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು. 16 ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು. 17 ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು. 18 ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು. 19 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು. 20 ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು. 21 ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು. 22 ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು. 23 ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು. 24 ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು. 25 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು. 26 ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು. 27 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು. 28 ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು. 29 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು. 30 ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು. 31 ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು. 32 ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು. 33 ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು. 34 ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. 35 ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು. 36 ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು. 37 ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ, 38 ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
1 ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 2 ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು. 3 ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು. 4 ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು. 5 ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. 6 ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು. 7 ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು. 8 ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು; 9 ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು. 10 ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು. 11 ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. 12 ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು. 13 ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು. 14 ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು. 15 ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು. 16 ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು. 17 ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
1 ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. 2 ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು. 3 ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು. 4 ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. 5 ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು. 6 ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ. 7 ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು. 8 ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು. 9 ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು. 10 ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು. 11 ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು. 12 ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು. 13 ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು. 14 ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು. 15 ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ. 16 ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
1 ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ. 2 ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು. 3 ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ 4 ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. 5 ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು. 6 ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು. 7 ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು. 8 ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು. 9 ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ 10 ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು. 11 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ. 12 ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು. 13 ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು. 14 ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ 15 ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. 16 ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ. 17 ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
1 ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 2 ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ, 3 ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು. 4 ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು. 5 ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು. 6 ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು. 7 ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. 8 ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ 9 ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು. 10 ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು. 11 ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ 12 ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು. 13 ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ 14 ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. 15 ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು. 16 ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು. 17 ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು. 18 ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. 19 ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. 20 ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು. 21 ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು. 22 ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ, 23 ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು. 24 ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು. 25 ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. 26 ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು. 27 ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ 28 ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು. 29 ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು. 30 ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು. 31 ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು. 32 ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು; 33 ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. 34 ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. 35 ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
1 ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. 2 ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು. 3 ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು. 4 ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು. 5 ಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆ 6 ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು. 7 ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು. 8 ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು. 9 ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ. 10 ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು. 11 ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ. 12 ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು. 13 ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು. 14 ಕರ್ತನು ಮೋಶೆಯೊಂದಿಗೆ ಮಾತನಾಡಿ-- 15 ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು. 16 ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು. 17 ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು. 18 ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು. 19 ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
1 ಕರ್ತನು ಮೋಶೆಯೊಡನೆ ಮಾತನಾಡಿ 2 ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ 3 ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು. 4 ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು. 5 ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು. 6 ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು. 7 ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು. 8 ಕರ್ತನು ಮೋಶೆಯೊಂದಿಗೆ ಮಾತನಾಡಿ-- 9 ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು. 10 ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು. 11 ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. 12 ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು. 13 ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು. 14 ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು. 15 ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು. 16 ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು. 17 ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು. 18 ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು. 19 ಕರ್ತನು ಮೋಶೆಯೊಡನೆ ಮಾತನಾಡಿ-- 20 ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು. 21 ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು. 22 ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು. 23 ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು. 24 ಕರ್ತನು ಮೋಶೆಯೊಂದಿಗೆ ಮಾತನಾಡಿ-- 25 ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು. 26 ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು. 27 ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು. 28 ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು. 29 ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು. 30 ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
1 ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು. 2 ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು. 3 ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ 4 ಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು. 5 ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ. 6 ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು. 7 ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು. 8 ಒಬ್ಬನ ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು. 9 ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು. 10 ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು. 11 ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ: 12 ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು. 13 ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು. 14 ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು. 15 ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು. 16 ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು. 17 ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು. 18 ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು. 19 ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು. 20 ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು. 21 ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು. 22 ಕರ್ತನು ಮೋಶೆಯೊಂದಿಗೆ ಮಾತನಾಡಿ-- 23 ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು. 24 ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು. 25 ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು. 26 ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು. 27 ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ. 28 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- 29 ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು. 30 ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು. 31 ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು. 32 ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು. 33 ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ. 34 ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ. 35 ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ. 36 ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ. 37 ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ. 38 ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
1 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- 2 ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು. 3 ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು. 4 ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು. 5 ಮೋಶೆಯು ಸಭೆಗೆ--ಕರ್ತನು ಮಾಡುವದಕ್ಕೆ ಆಜ್ಞಾಪಿಸಿರುವದು ಇದೇ. 6 ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು. 7 ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು. 8 ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು. 9 ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು. 10 ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು. 11 ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು. 12 ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು. 13 ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು. 14 ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. 15 ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು. 16 ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು. 17 ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು. 18 ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. 19 ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ 20 ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು. 21 ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು. 22 ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. 23 ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು. 24 ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು. 25 ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು. 26 ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು. 27 ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು. 28 ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು. 29 ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು. 30 ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು. 31 ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು. 32 ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದಸುಡಬೇಕು. 33 ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು. 34 ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ. 35 ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ. 36 ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
1 ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು; 2 ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು. 3 ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು. 4 ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು. 5 ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು. 6 ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು. 7 ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು. 8 ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು. 9 ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. 10 ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು. 11 ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು. 12 ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು. 13 ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು. 14 ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು. 15 ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು. 16 ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು. 17 ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು. 18 ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು. 19 ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ 20 ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು. 21 ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು. 22 ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು. 23 ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು. 24 ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
1 ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. 2 ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು. 3 ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು. 4 ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು. 5 ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು. 6 ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ. 7 ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು. 8 ಕರ್ತನು ಮಾತನಾಡಿ ಆರೋನನಿಗೆ ಹೇಳಿದ್ದೇ ನಂದರೆ-- 9 ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ. 10 ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ 11 ನೀವು ಇಸ್ರಾಯೇಲ್ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು. 12 ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು. 13 ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ. 14 ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ. 15 ಅವರು ಪ್ರತ್ಯೇ ಕಿಸಿದ ಭುಜವನ್ನೂ ಆಡಿಸುವ ಎದೆಯ ಭಾಗವನ್ನೂ ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನೂ ಆಡಿಸುವದಕ್ಕೆ ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಯಾಗಿ ತರಬೇಕು; ಕರ್ತನು ಆಜ್ಞಾಪಿಸಿದ ಹಾಗೆ ಅದು ನಿನಗೂ ನಿನ್ನೊಂದಿಗೆ ನಿನ್ನ ಕುಮಾರರಿಗೂ ಸಲ್ಲತಕ್ಕದ್ದು; ಇದು ನಿತ್ಯ ಕಟ್ಟಳೆಯಾಗಿದೆ. 16 ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ-- 17 ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ? 18 ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು. 19 ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು. 20 ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
1 ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ 2 ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ: 3 ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು. 4 ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ. 5 ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು. 6 ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು. 7 ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು. 8 ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ. 9 ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು. 10 ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು. 11 ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು. 12 ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು. 13 ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ, 14 ರಣಹದ್ದು, ಅದರ ಜಾತಿಯ ಹದ್ದು; 15 ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ, 16 ಗೂಬೆ, ಗಿಡುಗ, ಕೋಗಿಲೆ, ಅದರ ಪ್ರತಿಯೊಂದು ಜಾತಿಯ ಗಿಡುಗ, 17 ಸಣ್ಣ ಗೂಬೆ, ಹೊಟ್ಟೆ ಬಾಕ ಪಕ್ಷಿ ಮತ್ತು ಹೆಗ್ಗೂಬೆ; 18 ಇದಲ್ಲದೆ ಹಂಸ, ನೀರು ಕೋಳಿ, ರಣಹದ್ದು, 19 ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ. 20 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು. 21 ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು. 22 ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು. 23 ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು. 24 ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. 25 ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. 26 ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು. 27 ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. 28 ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು. 29 ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ, 30 ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು. 31 ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. 32 ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು. 33 ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು. 34 ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು. 35 ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು. 36 ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು. 37 ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು. 38 ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು. 39 ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು. 40 ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು. 41 ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು. 42 ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ. 43 ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು. 44 ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು. 45 ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು. 46 ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ. 47 ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
1 ಕರ್ತನು ಮೋಶೆಯೊಂದಿಗೆ ಮಾತನಾಡಿ -- 2 ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು. 3 ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು. 4 ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು. 5 ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು. 6 ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು. 7 ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ. 8 ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
1 ತರುವಾಯ ಕರ್ತನು ಮೋಶೆ ಆರೋನರೊಡನೆ ಮಾತನಾಡಿ ಹೇಳಿದ್ದೇನಂದರೆ 2 ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು. 3 ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು. 4 ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು. 5 ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು. 6 ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು. 7 ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು. 8 ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು. 9 ಕುಷ್ಠರೋಗವು ಮನುಷ್ಯನಲ್ಲಿ ಇರುವದಾದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರ ಬೇಕು. 10 ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ 11 ಅದು ಅವನ ಶರೀರದ ಚರ್ಮದಲ್ಲಿ ಒಂದು ಹಳೇ ಕುಷ್ಠವಾಗಿರುವದು. ಆಗ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು ಮತ್ತು ಅವನನ್ನು ಮುಚ್ಚಿಡಬಾರದು, ಅವನು ಅಶುದ್ಧನಾಗಿರುವನು. 12 ಕುಷ್ಠವು ಒಡೆದು ಚರ್ಮದ ಹೊರಗೆ ಹರಡಿ ಕೊಂಡಿದ್ದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಅವನ ಪಾದದ ವರೆಗೂ ಹರಡಿರುವದನ್ನು ಯಾಜಕನು ಎಲ್ಲಿಯಾದರೂ ನೋಡಿದರೆ 13 ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದು 14 ಆದರೆ ಹಸಿಮಾಂಸವು ಅವನಲ್ಲಿ ಕಾಣಿಸಿ ಕೊಂಡರೆ ಅವನು ಅಶುದ್ಧನಾಗುವನು. 15 ಯಾಜ ಕನು ಹಸಿಮಾಂಸವನ್ನು ನೋಡಿ ಅವನು ಅಶುದ್ಧನೆಂದು ನುಡಿಯಬೇಕು; ಹಸಿಮಾಂಸವು ಅಶುದ್ಧವಾದದ್ದು, ಅದು ಕುಷ್ಠವೇ. 16 ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು. 17 ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ. 18 ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ 19 ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು. 20 ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು. 21 ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು. 22 ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ. 23 ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು. 24 ಇಲ್ಲವೆ ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಹಸಿಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಮಚ್ಚೆಯಾಗಿದ್ದರೆ 25 ಯಾಜಕನು ಆಗ ಅದನ್ನು ನೋಡ ಬೇಕು. ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡು ವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆ ಯಿಂದ ಒಡೆದ ಕುಷ್ಠವಾಗಿರುವದು; ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಕುಷ್ಠವ್ಯಾಧಿಯೇ. 26 ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು. 27 ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ. 28 ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು. 29 ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ 30 ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ. 31 ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು. 32 ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ 33 ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು. 34 ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು. 35 ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ 36 ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ. 37 ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು. 38 ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ 39 ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು. 40 ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು, ಆದಾಗ್ಯೂ ಅವನು ಶುದ್ಧನಾಗಿರುವನು. 41 ತನ್ನ ಮುಂದಲೆಯ ಕೂದಲು ಉದುರಿಹೋಗಿದ್ದರೂ ಅವನು ಪಟ್ಟೆತಲೆಯವನಾ ದರೂ ಶುದ್ಧನೇ. 42 ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪಾದ ಮಚ್ಚೆಯಿದ್ದರೆ ಅದು ಹುಟ್ಟುತ್ತಿರುವ ಕುಷ್ಠವೇ. 43 ಆಗ ಯಾಜಕನು ಅವನನ್ನು ನೋಡಬೇಕು ಇಗೋ, ಅವನ ಬೋಳು ತಲೆಯಲ್ಲಾಗಲಿ ಪಟ್ಟೆತಲೆಯಲ್ಲಾಗಲಿ ಏಳುತ್ತಿರುವ ಆ ಮಚ್ಚೆಯು ಬಿಳುಪಾಗಿ ಕೆಂಪಾಗಿದ್ದರೆ ಶರೀರದ ಚರ್ಮ ದಲ್ಲಿ ಇರುವ ಕುಷ್ಠದ ಹಾಗಿದ್ದರೆ ಕುಷ್ಠರೋಗಿ ಎಂದೂ ಅಶುದ್ಧನೆಂದೂ 44 ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು. 45 ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು. 46 ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು. 47 ಕುಷ್ಠವ್ಯಾಧಿಯು ಅವನ ಉಡುಪಿನಲ್ಲಿದ್ದರೆ ಅದು ಉಣ್ಣೆಯ ಉಡುಪಾಗಲಿ ನಾರಿನ ಉಡುಪಾಗಲಿ 48 ಉಣ್ಣೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮ ದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನ ಲ್ಲಾಗಲಿ 49 ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು. 50 ಯಾಜಕನು ವ್ಯಾಧಿಯನ್ನು ನೋಡಿ ಅದನ್ನು ಏಳು ದಿನಗಳು ಮುಚ್ಚಿಡಬೇಕು: 51 ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು. 52 ಆದದರಿಂದ ಅವನು ವ್ಯಾಧಿಯಿ ರುವ ಆ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು, 53 ಯಾಜಕನು ನೋಡಿದಾಗ ಇಗೋ, ಆ ವ್ಯಾಧಿಯು ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮದ ವಸ್ತುಗಳಲ್ಲಾಗಲಿ ಹರಡ ದಿದ್ದರೆ 54 ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು. 55 ಅದನ್ನು ತೊಳೆದಾದ ಮೇಲೆ ಯಾಜಕನು ಆ ವ್ಯಾಧಿಯನ್ನು ನೋಡಬೇಕು: ಇಗೋ, ವ್ಯಾಧಿಯು ತನ್ನ ಬಣ್ಣವನ್ನು ಬದಲಾಯಿಸದೆ ಹರಡದಿದ್ದರೆ ಅದು ಅಶುದ್ಧವಾಗಿರುವದು: ಅದು ಒಳಗಿನಿಂದಾಗಲಿ ಹೊರಗಿನಿಂದಾಗಲಿ ಒಳಗೆ ಕೊರೆ ಯುವದು. ನೀನು ಅದನ್ನು ಬೆಂಕಿಯಿಂದ ಸುಡಬೇಕು. 56 ಯಾಜಕನು ಅದನ್ನು ನೋಡಿದರೆ ಇಗೋ, ವ್ಯಾಧಿಯು ತೊಳೆಯಲ್ಪಟ್ಟ ನಂತರ ಸ್ವಲ್ಪ ಮೊಬ್ಬಾ ಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ ಚರ್ಮ ದಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಹರಿ ದುಹಾಕಬೇಕು. 57 ಅದು ಬಟ್ಟೆಯಲ್ಲಾಗಲಿ ಹಾಸಿ ನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಚರ್ಮದ ಯಾವದರಲ್ಲಿಯಾಗಲಿ ಇನ್ನೂ ಕಂಡುಬಂದರೆ ಅದು ಹರಡುವ ವ್ಯಾಧಿ ಮತ್ತು ವ್ಯಾಧಿಯುಳ್ಳದ್ದನ್ನು ನೀನು ಬೆಂಕಿಯಿಂದ ಸುಡಬೇಕು. 58 ನೀನು ತೊಳೆದ ಮೇಲೆ ಆ ವ್ಯಾಧಿಯು ಯಾವದರಿಂದ ಹೊರಟು ಹೋಯಿತೋ ಆ ಬಟ್ಟೆಯನ್ನೂ ಹಾಸನ್ನೂ ಹೊಕ್ಕನ್ನೂ ಇಲ್ಲವೆ ಚರ್ಮದ ಯಾವದೇ ವಸ್ತುವನ್ನೂ ಎರಡನೆಯ ಸಾರಿ ತೊಳೆಯಬೇಕು, ಆಗ ಅದು ಶುದ್ಧವಾಗಿರುವದು. 59 ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 2 ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು. 3 ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ 4 ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು. 5 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು. 6 ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ 7 ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು. 8 ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು. 9 ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು. 10 ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. 11 ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು. 12 ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು. 13 ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು. 14 ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು. 15 ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು. 16 ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು. 17 ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು. 18 ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು. 19 ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು. 20 ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು. 21 ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ 22 ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು. 23 ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು. 24 ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು. 25 ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು. 26 ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು 27 ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು. 28 ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು. 29 ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು. 30 ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು. 31 ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು. 32 ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ. 33 ಕರ್ತನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 34 ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ 35 ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು. 36 ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು. 37 ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ 38 ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು. 39 ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ 40 ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ 41 ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ 42 ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು. 43 ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ 44 ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು. 45 ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. 46 ಇದಲ್ಲದೆ ಆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು. 47 ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. 48 ಆದರೆ ಯಾಜಕನು ಒಳಗೆ ಬಂದು ಅದನ್ನು ನೋಡಿದಾಗ ಇಗೋ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ವ್ಯಾಧಿಯು ಹರಡಿಕೊಂಡಿರದಿದ್ದರೆ ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸ ಬೇಕು. ಆ ವ್ಯಾಧಿಯು ಸ್ವಸ್ಥವಾಯಿತು. 49 ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು. 50 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು. 51 ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು. 52 ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು. 53 ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು. 54 ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ 55 ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ 56 ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ. 57 ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
1 ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 2 ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು. 3 ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು. 4 ಸ್ರಾವವಿರು ವವನು ಮಲಗುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾದದ್ದು; ಅವನು ಕೂತುಕೊಳ್ಳುವ ಪ್ರತಿ ಯೊಂದು ವಸ್ತುವು ಅಶುದ್ಧವಾಗಿರುವದು. 5 ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. 6 ಇದಲ್ಲದೆ ಸ್ರಾವವಿರುವವನು ಕೂತುಕೊಂಡ ಯಾವುದೇ ವಸ್ತು ವಿನ ಮೇಲೆ ಕೂತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು. 7 ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು. 8 ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. 9 ಸ್ರಾವವುಳ್ಳವನು ಏರಿಕೂತುಕೊಂಡಿದ್ದ ತಡಿಯು ಅಶುದ್ಧವಾಗಿರುವದು. 10 ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು. 11 ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. 12 ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು. 13 ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು. 14 ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು. 15 ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು. 16 ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು. 17 ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು. 18 ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು. 19 ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; 20 ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. 21 ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. 22 ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು. 23 ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು. 24 ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು. 25 ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು. 26 ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು. 27 ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 28 ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು. 29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು. 30 ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು. 31 ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ. 32 ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ. 33 ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
1 ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು. 2 ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು. 3 ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು. 4 ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು. 5 ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು. 6 ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು. 7 ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು. 8 ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ. 9 ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು. 10 ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು. 11 ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು. 12 ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು. 13 ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು. 14 ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು. 15 ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು. 16 ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು. 17 ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು. 18 ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು. 19 ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು. 20 ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು. 21 ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು. 22 ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು. 23 ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು. 24 ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು. 25 ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು. 26 ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು. 27 ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು. 28 ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು. 29 ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು. 30 ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು. 31 ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು. 32 ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. 33 ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು. 34 ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ-- 2 ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೂ ಮಾತನಾಡಿ ಅವರಿಗೆ ಹೀಗೆ ಹೇಳು--ಕರ್ತನು ನಿಮಗೆ ಆಜ್ಞಾಪಿಸಿ ಹೇಳುವದೇನಂದರೆ, 3 ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ 4 ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು. 5 ಇಸ್ರಾಯೇಲ್ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು. 6 ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು. 7 ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು. 8 ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ 9 ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು. 10 ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. 11 ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ. 12 ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್ ಮಕ್ಕಳಿಗೆ ಹೇಳಿದೆನು. 13 ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು. 14 ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು. 15 ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು. 16 ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 2 ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ನಿಮ್ಮ ದೇವರಾಗಿರುವ ಕರ್ತನು ನಾನೇ. 3 ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು. 4 ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. 5 ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು. 6 ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು. 7 ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. 8 ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ. 9 ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು. 10 ನಿನ್ನ ಮಗನ ಮಗಳ ಇಲ್ಲವೆ ನಿನ್ನ ಮಗಳ ಮಗಳ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು. 11 ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. 12 ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ. 13 ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ. 14 ನೀನು ನಿನ್ನ ತಂದೆಯ ಸಹೋದರನ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ಅವನ ಹೆಂಡತಿಯ ಬಳಿಗೆ ಹೋಗಬಾರದು; ಅವಳು ನಿನಗೆ ದೊಡ್ಡ ತಾಯಿ (ಚಿಕ್ಕತಾಯಿ). 15 ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. 16 ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ. 17 ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ. 18 ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ. 19 ಇದು ಮಾತ್ರವಲ್ಲದೆ ಒಬ್ಬಳು ತನ್ನ ಅಶುದ್ಧತ್ವದ ನಿಮಿತ್ತವಾಗಿ ಪ್ರತ್ಯೇಕಿಸಲ್ಪಟ್ಟಾಗ ನೀನು ಆ ಸ್ತ್ರೀಯ ಬೆತ್ತಲೆತನವನ್ನು ನೋಡುವಂತೆ ಅವಳ ಹತ್ತಿರ ಹೋಗ ಬೇಡ. 20 ಇದಲ್ಲದೆ ಅವಳಿಂದ ನಿನ್ನನ್ನು ಹೊಲೆಮಾಡಿ ಕೊಳ್ಳದಂತೆ ನಿನ್ನ ನೆರೆಯವನ ಹೆಂಡತಿಯೊಂದಿಗೆ ನೀನು ಸಂಗಮಿಸಬೇಡ. 21 ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು. 22 ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು. 23 ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು. 24 ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ. 25 ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು. 26 ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು. 27 (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;) 28 ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು. 29 ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. 30 ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
1 ಕರ್ತನು ಮೋಶೆಯೊಂದಿಗೆ ಮಾತನಾಡಿ-- 2 ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ. 3 ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. 4 ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ. 5 ನೀವು ನಿಮ್ಮ ದೇವರಿಗೆ ಸಮಾಧಾನದ ಬಲಿಗಳ ಯಜ್ಞವನ್ನು ಸಮರ್ಪಿಸುವದಾದರೆ ನೀವು ಅದನ್ನು ಸ್ವಇಚ್ಛೆಯಿಂದ ಅರ್ಪಿಸಬೇಕು. 6 ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು. 7 ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ. 8 ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು. 9 ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು. 10 ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ. 11 ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು. 12 ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು. 13 ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು. 14 ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು. 15 ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು. 16 ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು. 17 ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು. 18 ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು. 19 ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು. 20 ಒಬ್ಬ ಗಂಡಸಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸು ವದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ ಇಲ್ಲವೆ ಅವಳಿಗೆ ಸ್ವಾತಂತ್ರ್ಯತೆ ಕೊಡ ದಿದ್ದರೆ ಅವಳು ಕೊರಡೆಯಿಂದ ಹೊಡೆಯಲ್ಪಡ ಬೇಕು; ಅವರಿಗೆ ಮರಣ ವಿಧಿಸಬಾರದು. ಯಾಕಂದರೆ ಅವಳು ಬಿಡುಗಡೆಯಾಗಿರಲಿಲ್ಲ. 21 ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು. 22 ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು. 23 ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು. 24 ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು. 25 ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. 26 ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು. 27 ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು. 28 ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು. 29 ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು. 30 ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು. 31 ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ. 32 ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು. 33 ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ. 34 ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ. 35 ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ. 36 ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ. 37 ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 2 ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು. 3 ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ. 4 ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ 5 ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. 6 ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. 7 ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ. 8 ನೀವು ನನ್ನ ನಿಯಮಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಿಮ್ಮನ್ನು ಶುದ್ಧಪಡಿಸುವ ಕರ್ತನು ನಾನೇ. 9 ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು. 10 ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. 11 ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು; 12 ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರು ಗಲಿಬಿಲಿಯನ್ನುಂಟುಮಾಡಿದ್ದಾರೆ; ಅವರ ರಕ್ತವು ಅವರ ಮೇಲೆ ಇರುವದು. 13 ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು. 14 ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು. 15 ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು. 16 ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು. 17 ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು. 18 ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು. 19 ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. 20 ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು. 21 ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು. 22 ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ. 23 ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ. 24 ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ. 25 ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು. 26 ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ್ದ ಕರ್ತನಾದ ನಾನು ಪರಿಶುದ್ಧನಾಗಿರುವದರಿಂದ ನೀವು ನನಗೆ ಪರಿಶುದ್ಧ ರಾಗಿರಬೇಕು. 27 ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
1 ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು. 2 ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ 3 ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಅವನು ಹೊಲೆಯಾಗಬಹುದು. 4 ಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು. 5 ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು. 6 ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು. 7 ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ. 8 ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು. 9 ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು. 10 ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು; 11 ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು. 12 ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು. 13 ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು. 14 ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. 15 ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ. 16 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 17 ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು. 18 ಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು 19 ಮುರಿದ ಪಾದವುಳ್ಳವನು ಮುರಿದ ಕೈಯುಳ್ಳವನು 20 ಗೂನು ಬೆನ್ನುಳ್ಳವನು ಗಿಡ್ಡನು ಕಣ್ಣುಗಳಲ್ಲಿ ಕಳಂಕವುಳ್ಳವನು ಹುರುಕುಳ್ಳವನು ತುರಿಯುಳ್ಳವನು ತನ್ನ ಬೀಜಹೊಡೆದವನು 21 ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು. 22 ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು. 23 ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ. 24 ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- 2 ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು. 3 ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು. 4 ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು 5 ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು-- 6 ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು. 7 ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ. 8 ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು. 9 ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ. 10 ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. 11 ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ. 12 ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. 13 ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು. 14 ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು. 15 ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು. 16 ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ. 17 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 18 ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ 19 ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು; 20 ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ. 21 ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು. 22 ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. 23 ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ. 24 ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು. 25 ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ. 26 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- 27 ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು. 28 ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು. 29 ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ. 30 ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು. 31 ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು. 32 ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು; 33 ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- 2 ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ, 3 ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು. 4 ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ. 5 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು. 6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು. 7 ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. 8 ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. 9 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- 10 ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು. 11 ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು. 12 ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು. 13 ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು. 14 ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. 15 ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು. 16 ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು. 17 ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು. 18 ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು. 19 ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು. 20 ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು. 21 ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. 22 ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ. 23 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- 24 ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು. 25 ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು. 26 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- 27 ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು. 28 ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು. 29 ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು. 30 ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು. 31 ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು. 32 ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ. 33 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 34 ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು. 35 ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು. 36 ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. 37 ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು. 38 ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ 39 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು. 40 ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು. 41 ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. 42 ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. 43 ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು. 44 ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 2 ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕು. 3 ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು. 4 ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು. 5 ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. 6 ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. 7 ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. 8 ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು. 9 ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು. 10 ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು. 11 ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್). 12 ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು. 13 ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 14 ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ. 15 ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. 16 ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು. 17 ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು. 18 ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು. 19 ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು; 20 ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು. 21 ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು. 22 ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ. 23 ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.
1 ತರುವಾಯ ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇ ನಂದರೆ-- 2 ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು. 3 ಆರು ವರುಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು, ಆರು ವರುಷ ನೀವು ನಿಮ್ಮ ದ್ರಾಕ್ಷೇತೋಟವನ್ನು ಕತ್ತರಿಸಬೇಕು, ಅವು ಗಳಿಂದ ಫಲವನ್ನು ಕೂಡಿಸಬೇಕು. 4 ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು. 5 ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು. 6 ದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ 7 ನಿನ್ನ ದನಗಳಿಗೂ ದೇಶದಲ್ಲಿರುವ ಮೃಗಗಳಿಗೂ ಅದರ ಹುಟ್ಟುವಳಿಯೆಲ್ಲಾ ಆಹಾರಕ್ಕಾಗಿ ಇರಬೇಕು. 8 ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು. 9 ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು. 10 ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು. 11 ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು. 12 ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು. 13 ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು. 14 ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು. 15 ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು. 16 ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು. 17 ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ. 18 ಹೀಗೆ ನೀವು ನನ್ನ ನಿಯಮ ನಿರ್ಣಯಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ಆಗ ನೀವು ದೇಶದಲ್ಲಿ ಸುರಕ್ಷಿತರಾಗಿ ವಾಸಿಸುವಿರಿ. 19 ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ. 20 ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ. 21 ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು. 22 ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ. 23 ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ. 24 ನಿಮ್ಮ ಸ್ವಾಧೀನದಲ್ಲಿರುವ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು. 25 ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು. 26 ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ 27 ಅವನು ಅದನ್ನು ಮಾರಿದ ವರುಷಗಳನ್ನು ಲೆಕ್ಕಿಸಿ ಅದನ್ನು ಮಾರಿದವನಿಗೆ ಮಿಗಿಲಾದದ್ದನ್ನು ಪೂರ್ತಿಮಾಡಿ ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬಹುದು. 28 ತಿರಿಗಿ ಸಲ್ಲಿಸುವದಕ್ಕೆ ಅವನಿಗೆ ಆಗದಿದ್ದರೆ ಅವನು ಮಾರಿದ್ದು ಸಂಭ್ರಮದ ವರುಷದ ವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆ ಯಾಗಬೇಕು, ಅವನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು. 29 ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದ ಲ್ಲಿರುವ ನಿವಾಸದ ಮನೆಯನ್ನು ಮಾರಿದರೆ ಅದನ್ನು ಮಾರಿದ ಒಂದು ಪೂರ್ಣ ವರುಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು; ಒಂದು ಪೂರ್ಣ ವರುಷ 30 ಆದರೆ ವರುಷವು ಪೂರ್ಣವಾಗುವದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೆ ಅವನ ತಲತಲಾಂತರಕ್ಕೂ ಸ್ಥಿರವಾಗಿಡಲ್ಪಡಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆಯಾಗ ಬಾರದು. 31 ಆದರೆ ಸುತ್ತಲೂ ಗೋಡೆಗಳಿಲ್ಲದ ಹಳ್ಳಿಗಳಲ್ಲಿಯ ಮನೆಗಳು ದೇಶದ ಭೂಮಿಯೊಂದಿಗೆ ಲೆಕ್ಕಿಸಲ್ಪಡಬೇಕು. ಅವುಗಳಿಗೆ ಬಿಡುಗಡೆ ಇರಬೇಕು; ಸಂಭ್ರಮ ವರುಷದಲ್ಲಿ ಅವು ಬಿಡುಗಡೆಯಾಗಬೇಕು. 32 ಇದಲ್ಲದೆ ಲೇವಿಯರ ಪಟ್ಟಣಗಳ ವಿಷಯವಾ ಗಿಯೂ ಅವರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು. 33 ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ. 34 ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ. 35 ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು. 36 ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು. 37 ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ. 38 ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ. 39 ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು. 40 ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ. 41 ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು. 42 ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು. 43 ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು. 44 ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು. 45 ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು. 46 ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ. 47 ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾ ಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯನಾಗಲಿ ಪ್ರವಾಸಿಯಾಗಲಿ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡರೆ 48 ಹೀಗೆ ಅವನು ತನ್ನನ್ನು ಮಾರಿಕೊಂಡ ಮೇಲೆ ಅವನು ತಿರಿಗಿ ವಿಮೋಚಿಸಲ್ಪಡಬಹುದು. ಅವನ ಸಹೋದರರಲ್ಲಿ ಒಬ್ಬನು ಅವನನ್ನು ವಿಮೋಚಿಸ ಬಹುದು. 49 ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು. 50 ಅವನು ತನ್ನನ್ನು ಕೊಂಡುಕೊಂಡವನಿಗೆ ಮಾರಲ್ಪಟ್ಟ ವರುಷ ಮೊದಲುಗೊಂಡು ಜೂಬಿಲಿ ಸಂವತ್ಸರದ ವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವದು. 51 ಇನ್ನು ಬಹಳ ವರುಷವಿದ್ದರೆ ಅವುಗಳ ಪ್ರಕಾರ ತನ್ನ ಕ್ರಯದ ಹಣದಲ್ಲಿ ವಿಮೋಚಿಸಲ್ಪಡಬೇಕು. 52 ಜೂಬಿಲಿ ಸಂವತ್ಸರದ ವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರುಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನು ಅವನಿಗೆ ಸಲ್ಲಿಸಬೇಕು. 53 ವರುಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಮತ್ತೊಬ್ಬನು ನಿನ್ನ ದೃಷ್ಟಿಯಲ್ಲಿ ಅವನ ಮೇಲೆ ಕಠಿಣವಾದ ದೊರೆತನ ಮಾಡಬಾರದು. 54 ಈ ವರುಷಗಳಲ್ಲಿ ಅವನು ವಿಮೋಚಿಸಲ್ಪಡದಿದ್ದರೆ ಜೂಬಿಲಿ ಸಂವತ್ಸರದಲ್ಲಿ ಅವನೊಂದಿಗೆ ಅವನ ಮಕ್ಕಳು ಬಿಡುಗಡೆಯಾಗಬೇಕು. 55 ಯಾಕಂದರೆ ಇಸ್ರಾಯೇಲ್ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
1 ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ. 2 ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು. 3 ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ 4 ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು. 5 ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ. 6 ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ. 7 ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು. 8 ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು. 9 ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. 10 ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ. 11 ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು. 12 ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ. 13 ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ. 14 ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ 15 ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ 16 ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. 17 ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ. 18 ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. 19 ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು. 20 ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು. 21 ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು. 22 ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು. 23 ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ 24 ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. 25 ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ. 26 ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ. 27 ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ 28 ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು. 29 ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ. 30 ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು. 31 ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು. 32 ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು. 33 ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು. 34 ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. 35 ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು. 36 ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. 37 ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು. 38 ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು. 39 ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. 40 ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ 41 ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ 42 ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. 43 ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ. 44 ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. 45 ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು. 46 ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
1 ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ -- 2 ಇಸ್ರಾಯೇಲ್ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು. 3 ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು. 4 ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು. 5 ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು. 6 ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು. 7 ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು. 8 ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. 9 ಮನುಷ್ಯನು ಕರ್ತನಿಗೆ ಅರ್ಪಣೆಗಾಗಿ ತರುವವುಗ ಳಲ್ಲಿ ಅದು ಪಶುವಾಗಿದ್ದರೆ ಅವನು ಕೊಡುವಂತವು ಗಳೆಲ್ಲಾ ಕರ್ತನಿಗೆ ಶುದ್ಧವಾಗಿರುವದು. 10 ಅದನ್ನು ಒಳ್ಳೇದಕ್ಕೆ ಕೆಟ್ಟದ್ದನ್ನಾಗಲಿ ಕೆಟ್ಟದ್ದಕ್ಕೆ ಒಳ್ಳೇದನ್ನಾಗಲಿ ಬದಲು ಮಾಡಬಾರದು ಮತ್ತು ಮಾರ್ಪಡಿ ಸಲೂಬಾರದು; ಹೇಗಾದರೂ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ ಅದು ಅದರ ಬದಲೂ ಪರಿಶುದ್ಧವಾಗಿರಬೇಕು. 11 ಅದು ಕರ್ತನಿಗೆ ಅರ್ಪಣೆಯಾಗಿ ತಾರದ ಯಾವದಾದರೂ ಅಶುದ್ಧ ಪಶುವಾಗಿದ್ದರೆ ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು. 12 ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು. 13 ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು. 14 ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು. 15 ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು. 16 ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು. 17 ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು. 18 ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು. 19 ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು. 20 ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು. 21 ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು. 22 ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ 23 ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು. 24 ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು. 25 ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು. 26 ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ. 27 ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು. 28 ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ. 29 ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು. 30 ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು. 31 ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು. 32 ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು. 33 ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು. 34 ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
1 ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ-- 2 ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ. 3 ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ. 4 ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ. 5 ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್, 6 ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್, 7 ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್, 8 ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್, 9 ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್, 10 ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್, 11 ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್, 12 ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್, 13 ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್, 14 ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್. 15 ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು, 16 ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ. 17 ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು. 18 ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು. 19 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು. 20 ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು 21 ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು. 22 ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು 23 ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು. 24 ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು 25 ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು. 26 ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು 27 ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು. 28 ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು 29 ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು. 30 ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು 31 ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು. 32 ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು 33 ಎಫ್ರಾಯಾಮ್ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು. 34 ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ 35 ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು. 36 ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು 37 ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು. 38 ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು 39 ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು. 40 ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು 41 ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು. 42 ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು 43 ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು. 44 ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು. 45 ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ 46 ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು. 47 ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ. 48 ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ-- 49 ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ. 50 ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು. 51 ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು. 52 ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು. 53 ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು. 54 ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
1 ಕರ್ತನು ಮಾತನಾಡಿ ಮೋಶೆಗೂ ಆರೋನನಿಗೂ ಹೇಳಿದ್ದೇನಂದರೆ-- 2 ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು. 3 ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ. 4 ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು. 5 ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ. 6 ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು. 7 ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ. 8 ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು. 9 ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು. 10 ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ; 11 ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು. 12 ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ; 13 ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು. 14 ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ; 15 ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು. 16 ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು. 17 ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು. 18 ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ. 19 ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು. 20 ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ. 21 ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು. 22 ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ. 23 ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು. 24 ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು. 25 ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ. 26 ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು. 27 ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ; 28 ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು. 29 ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ. 30 ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು. 31 ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು. 32 ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ. 33 ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ. 34 ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
1 ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ: 2 ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು. 3 ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು. 4 ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು. 5 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- 6 ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ. 7 ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ. 8 ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು. 9 ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ. 10 ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು. 11 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- 12 ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು. 13 ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು. 14 ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- 15 ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು. 16 ಆಗ ಮೋಶೆಯು ತನಗೆ ಕರ್ತನು ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು. 17 ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ. 18 ಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ. 19 ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ. 20 ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ. 21 ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ. 22 ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ. 23 ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು. 24 ಲಾಯೇಲನ ಮಗನಾದ ಎಲ್ಯಾಸಾಫನು ಗೇರ್ಷೋನ್ಯರ ತಂದೆ ಮನೆಗೆ ಮುಖ್ಯಸ್ಥನು. 25 ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ 26 ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ. 27 ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು. 28 ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು. 29 ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು. 30 ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು. 31 ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ. 32 ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ. 33 ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು. 34 ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು. 35 ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು. 36 ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ 37 ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ. 38 ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು. 39 ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ. 40 ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ. 41 ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು. 42 ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು. 43 ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು. 44 ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇ ನಂದರೆ-- 45 ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು. 46 ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ 47 ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು. 48 ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು. 49 ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸ ಲ್ಪಟ್ಟವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು. 50 ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದವರಿಂದ ಪರಿಶುದ್ಧ ಸ್ಥಳದ ಶೇಕೆಲಿನ ಮೇರೆಗೆ ಸಾವಿರದ ಮುನ್ನೂರ ಅರವ ತ್ತೈದು ಶೇಕೆಲುಗಳ ಬೆಳ್ಳಿಯನ್ನು ತೆಗೆದುಕೊಂಡನು. 51 ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.
1 ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ -- 2 ಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ 3 ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ. 4 ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ. 5 ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ 6 ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7 7 ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು. 8 ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು. 9 ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು. 10 ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು. 11 ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು. 12 ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು. 13 ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ 14 ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು. 15 ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ. 16 ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು. 17 ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ-- 18 ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ. 19 ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು. 20 ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು. 21 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- 22 ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು. 23 ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು. 24 ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ-- 25 ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ 26 ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು. 27 ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು. 28 ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ. 29 ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು. 30 ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು. 31 ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ. 32 ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು. 33 ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು. 34 ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ 35 ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು. 36 ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು. 37 ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ. 38 ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು 39 ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ 40 ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು. 41 ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ. 42 ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು; 43 ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು 44 ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು. 45 ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ. 46 ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ 47 ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು 48 ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ. 49 ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
1 ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 2 ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು. 3 ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ. 4 ಆಗ ಇಸ್ರಾಯೇಲ್ ಮಕ್ಕಳು ಹಾಗೆ ಮಾಡಿ ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಕರ್ತನು ಮೋಶೆಗೆ ಹೇಳಿದ ಹಾಗೆ ಇಸ್ರಾಯೇಲ್ ಮಕ್ಕಳು ಮಾಡಿದರು. 5 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- 6 ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ; 7 ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು. 8 ಆದರೆ ಅಪರಾಧಕ್ಕೆ ಬದಲು ಕೊಡುವದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಸಲ್ಲಿಸಿದ ಆ ಅಪರಾಧವು ಅವನ ನಿಮಿತ್ತ ಪಾಪ ಮುಚ್ಚುವ ಟಗರಿನ ಹೊರತಾಗಿ ಅದು ಕರ್ತನದೂ ಯಾಜಕನದೂ ಆಗಿರಬೇಕು. 9 ಇದಲ್ಲದೆ ಇಸ್ರಾಯೇಲ್ ಮಕ್ಕಳು ತರುವ ಸಕಲ ಪರಿಶುದ್ಧವಾದ ಬಲಿಗಳೆಲ್ಲಾ ಯಾಜಕನಿಗೇ ಸಲ್ಲಬೇಕು. 10 ಪ್ರತಿ ಮನುಷ್ಯನ ಪರಿಶುದ್ಧವಾದವುಗಳು ಅವನಿಗೇ ಸಲ್ಲಬೇಕು. ಯಾವನಾದರೂ ಏನಾದರೂ ಯಾಜಕನಿಗೆ ಕೊಟ್ಟದ್ದು ಅವನಿಗೇ ಆಗಬೇಕು ಎಂದು ಹೇಳಿದನು. 11 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- 12 ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ 13 ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬದು ಗುಪ್ತವಾಗಿ ದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ ಅವಳು ಹಿಡಿಯಲ್ಪಡದಿದ್ದರೆ, 14 ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ, 15 ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ. 16 ಯಾಜಕನು ಅವಳನ್ನು ಸವಿಾಪಕ್ಕೆ ಕರೆದು ಕರ್ತನ ಸಮ್ಮುಖದಲ್ಲಿ ನಿಲ್ಲಿಸಬೇಕು. 17 ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ಆ ನೀರಿನೊಳಗೆ ಹಾಕಬೇಕು. 18 ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು. 19 ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು. 20 ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ 21 ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ. 22 ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು. 23 ಯಾಜ ಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ಅಳಿಸಿ, 24 ಆ ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು. 25 ಯಾಜಕನು ಆ ಸ್ತ್ರೀಯ ಕೈಯಿಂದ ರೋಷದ ಕಾಣಿಕೆಯನ್ನು ತಕ್ಕೊಂಡು ಆ ಕಾಣಿಕೆಯನ್ನು ಕರ್ತನ ಸಮ್ಮುಖದಲ್ಲಿ ಅಲ್ಲಾಡಿಸಿ ಬಲಿ ಪೀಠದ ಸವಿಾಪಕ್ಕೆ ತರಬೇಕು. 26 ಆಗ ಯಾಜಕನು ಕಾಣಿಕೆಯಿಂದ ಜ್ಞಾಪಕಭಾಗವಾಗಿ ಒಂದು ಹಿಡಿ ತಕ್ಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಸ್ತ್ರೀಗೆ ಆ ನೀರನ್ನು ಕುಡಿಸಬೇಕು. 27 ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು. 28 ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ ಅವಳು ನಿರಪರಾಧಿ ಯಾಗಿದ್ದು ಸಂತಾನವನ್ನು ಪಡೆಯುವಳು. 29 ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ 30 ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು. 31 ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
1 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ -- 2 ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ 3 ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು. 4 ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು. 5 ಅವನ ನಾಜೀರತನ ಪ್ರಮಾಣದ ದಿವಸಗಳೆಲ್ಲಾ ಕ್ಷೌರ ಕತ್ತಿ ಅವನ ತಲೆಯ ಮೇಲೆ ಬರಬಾರದು; ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿಕೊಂಡ ದಿವಸ ಗಳು ಪೂರ್ತಿಯಾಗುವ ವರೆಗೆ ಅವನು ಪರಿಶುದ್ಧನಾಗಿ ರುವನು; ಅವನು ತನ್ನ ತಲೆಯ ಕೂದಲನ್ನು ಬೆಳೆಸ ಬೇಕು. 6 ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು. 7 ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ. 8 ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ. 9 ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು. 10 ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು. 11 ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು. 12 ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು. 13 ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು. 14 ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು. 15 ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು. 16 ಇವುಗಳನ್ನು ಯಾಜಕನು ಕರ್ತನ ಎದುರಿನಲ್ಲಿ ತಂದು ಅವನ ಪಾಪದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸ ಬೇಕು. 17 ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು. 18 ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು. 19 ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು. 20 ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು. 21 ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು. 22 ಇದಲ್ಲದೆ ಕರ್ತನು ಮೋಶೆಯ ಸಂಗಡ ಮಾತ ನಾಡಿ ಹೇಳಿದ್ದೇನಂದರೆ-- 23 ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು. 24 ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. 25 ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. 26 ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ. 27 ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
1 ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ-- 2 ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು. 3 ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು. 4 ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ 5 ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು. 6 ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು. 7 ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು. 8 ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು. 9 ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು. 10 ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು. 11 ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು. 12 ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು. 13 ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. 14 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, 15 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 16 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ 17 ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು. 18 ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು. 19 ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. 20 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, 21 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 22 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ 23 ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು. 24 ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ-- 25 ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. 26 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, 27 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 28 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ 29 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು. 30 ನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು. 31 ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. 32 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ. 33 ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 34 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ 35 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು. 36 ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು. 37 ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. 38 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, 39 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 40 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ 41 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು. 42 ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು. 43 ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. 44 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, 45 ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 46 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ 47 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು. 48 ಏಳನೇ ದಿನದಲ್ಲಿ ಎಫ್ರಾಯಾಮ್ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು. 49 ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. 50 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ. 51 ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 52 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ 53 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು. 54 ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು. 55 ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. 56 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, 57 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 58 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ 59 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು. 60 ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು. 61 ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. 62 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, 63 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 64 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ 65 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು. 66 ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು. 67 ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. 68 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, 69 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 70 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ 71 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು. 72 ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು. 73 ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. 74 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, 75 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 76 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ 77 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು. 78 ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು. 79 ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. 80 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, 81 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. 82 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ 83 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು. 84 ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ. 85 ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು. 86 ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್; 87 ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು, 88 ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ. 89 ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
1 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- 2 ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು. 3 ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು. 4 ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು. 5 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- 6 ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು. 7 ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು. 8 ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ. 9 ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು. 10 ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು. 11 ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು. 12 ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು. 13 ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು. 14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು. 15 ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು. 16 ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ. 17 ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು. 18 ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು. 19 ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ. 20 ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು. 21 ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು. 22 ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು. 23 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- 24 ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು. 25 ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು. 26 ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
1 ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ 2 ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು. 3 ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು. 4 ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿದನು. 5 ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು. 6 ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು. 7 ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು. 8 ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು. 9 ಕರ್ತನು ಮೋಶೆ ಸಂಗಡ ಮಾತನಾಡಿ ಅವನಿಗೆ 10 ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು. 11 ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು. 12 ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು. 13 ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. 14 ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು. 15 ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು. 16 ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು. 17 ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು. 18 ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು. 19 ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು. 20 ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು. 21 ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು. 22 ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು. 23 ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
1 ಕರ್ತನು ಮೋಶೆಗೆ ಹೇಳಿದ್ದೇನೆಂದರೆ 2 ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು. 3 ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು. 4 ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು. 5 ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು. 6 ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು. 7 ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ. 8 ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. 9 ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ. 10 ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ. 11 ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು. 12 ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು. 13 ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು. 14 ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು. 15 ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು. 16 ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು. 17 ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು. 18 ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು. 19 ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು. 20 ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು. 21 ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು. 22 ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು. 23 ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು. 24 ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು. 25 ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು. 26 ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು. 27 ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು. 28 ಈ ಪ್ರಕಾರ ಇಸ್ರಾಯೇಲ್ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು. 29 ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು. 30 ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು. 31 ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ. 32 ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು. 33 ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು. 34 ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು. 35 ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು. 36 ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
1 ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು. 2 ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು. 3 ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು. 4 ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು? 5 ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ. 6 ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು. 7 ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು. 8 ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು. 9 ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿ ದ್ದಾಗ ಮನ್ನವು ಅದರ ಮೇಲೆ ಬೀಳುತ್ತಿತ್ತು. 10 ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ. 11 ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ? 12 ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ? 13 ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ. 14 ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ. 15 ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು. 16 ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ. 17 ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು. 18 ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ. 19 ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ. 20 ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು. 21 ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ. 22 ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು. 23 ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು. 24 ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು. 25 ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ. 26 ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು. 27 ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು. 28 ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು. 29 ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು! 30 ಆಗ ಮೋಶೆಯೂ ಇಸ್ರಾಯೇಲ್ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು. 31 ಕರ್ತನ ಕಡೆಯಿಂದ ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು ಪಾಳೆಯದ ಸುತ್ತಲೂ ಈ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಆ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು. 32 ಜನರು ಎದ್ದು ಆ ದಿನವೆಲ್ಲಾ ರಾತ್ರಿಯೆಲ್ಲಾ ಮರುದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಹತ್ತು ಹೋಮೆ ರಗಳನ್ನು ಕೂಡಿಸಿದನು; ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು. 33 ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು. 34 ಆಶೆಪಟ್ಟ ವರನ್ನು ಅಲ್ಲಿ ಹೂಣಿಟ್ಟದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು. 35 ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
1 ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. 2 ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು. 3 (ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.) 4 ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ. 5 ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು. 6 ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು. 7 ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ. 8 ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು. 9 ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು. 10 ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು. 11 ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ. 12 ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು. 13 ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು. 14 ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು. 15 ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ. 16 ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
1 ಕರ್ತನು ಮೋಶೆಯ ಸಂಗಡ ಮಾತನಾಡಿ 2 ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು. 3 ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್ ಮಕ್ಕಳ ಮುಖ್ಯಸ್ಥರಾಗಿದ್ದರು. 4 ಅವರ ಹೆಸರುಗಳು ಯಾವವಂದರೆ: ರೂಬೇನ್ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು, 5 ಸಿಮೆಯೋನ್ ಗೋತ್ರದ ಹೋರಿಯ ಮಗನಾದ ಶಾಫಾಟನು, 6 ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು, 7 ಇಸ್ಸಾಕಾರ್ ಗೋತ್ರದ ಯೋಸೇಫನ ಮಗನಾದ ಇಗಾಲನು, 8 ಎಫ್ರಾಯಾಮ್ ಗೋತ್ರದ ನೂನನ ಮಗನಾದ ಹೋಶೇಯನು, 9 ಬೆನ್ಯಾವಿಾನ್ ಗೋತ್ರದ ರಾಫೂವನ ಮಗನಾದ ಪಲ್ಟೀಯು, 10 ಜೆಬುಲೂನ್ ಗೋತ್ರದ ಸೋದೀಯ ಮಗನಾದ ಗದ್ದೀಯೇಲ್, 11 ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗನಾದ ಗದ್ದೀ, 12 ದಾನ್ ಗೋತ್ರದ ಗೆಮಲ್ಲೀಯನ ಮಗನಾದ ಅವ್ಮೆಾಯೇಲನು, 13 ಆಶೇರ್ ಗೋತ್ರದ ವಿಾಕಾ ಯೇಲನ ಮಗನಾದ ಸೆತೂರ್, 14 ನಫ್ತಾಲಿ ಗೋತ್ರದ ವಾಪೆಸೀಯನ ಮಗನಾದ ನಹಬೀ, 15 ಗಾದನ ಗೋತ್ರದ ಮಾಕೀಯನ ಮಗನಾದ ಗೆಯೂವೇಲ್. 16 ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು. 17 ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ 18 ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ 19 ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ 20 ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು. 21 ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು. 22 ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು. 23 ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು. 24 ಇಸ್ರಾಯೇಲ್ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು. 25 ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು. 26 ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು. 27 ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ. 28 ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು. 29 ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು. 30 ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು. 31 ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು. 32 ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು. 33 ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
1 ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು. 2 ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು. 3 ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ? 4 ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು. 5 ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು. 6 ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು 7 ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ. 8 ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು. 9 ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು. 10 ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು. 11 ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ? 12 ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು. 13 ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ! 14 ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ. 15 ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು-- 16 ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು. 17 ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ. 18 ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ? 19 ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು. 20 ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ. 21 ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು. 22 ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ 23 ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ. 24 ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು. 25 (ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು. 26 ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ-- 27 ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ. 28 ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. 29 ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. 30 ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ. 31 ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು. 32 ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು. 33 ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು. 34 ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ. 35 ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು. 36 ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ 37 ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು. 38 ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು. 39 ಮೋಶೆಯು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು. 40 ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು. 41 ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ. 42 ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ. 43 ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು. 44 ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ. 45 ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
1 ಕರ್ತನು ಮೋಶೆಗೆ-- 2 ಇಸ್ರಾಯೇಲ್ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ 3 ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು. 4 ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು 5 ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು. 6 ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು. 7 ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು. 8 ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ 9 ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು. 10 ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು. 11 ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು. 12 ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು. 13 ಕರ್ತನಿಗೆ ಸುವಾಸನೆ ಬೆಂಕಿಯ ಅರ್ಪ ಣೆಯ ವಿಷಯ ದೇಶದಲ್ಲಿ ಹುಟ್ಟಿದವರೆಲ್ಲರೂ ಇವುಗ ಳನ್ನು ಹಾಗೆಯೇ ಅರ್ಪಿಸಬೇಕು. 14 ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ. 15 ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು. 16 ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು. 17 ಕರ್ತನು ಮೋಶೆಗೆ ಹೇಳಿದ್ದೇನಂದರೆ-- 18 ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು 19 ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು. 20 ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು. 21 ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. 22 ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ 23 ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ 24 ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು. 25 ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು. 26 ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು. 27 ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು. 28 ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. 29 ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು. 30 ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು. 31 ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು. 32 ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು. 33 ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು 34 ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು. 35 ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು. 36 ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು. 37 ಕರ್ತನು ಮೋಶೆಗೆ--ಹೇಳಿದ್ದೇನಂದರೆ 38 ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು. 39 ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ 40 ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ. 41 ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
1 ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು 2 ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು. 3 ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು. 4 ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು 5 ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ: 6 ಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು 7 ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು. 8 ಮೋಶೆಯು ಕೋರಹನಿಗೆ--ಲೇವಿಯ ಕುಮಾ ರರೇ, ಈಗ ಕೇಳಿರಿ. 9 ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ? 10 ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ? 11 ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು. 12 ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ, 13 ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ? 14 ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು. 15 ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು. 16 ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು 17 ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು. 18 ಆಗ ಅವರು ತಮ್ಮ ತಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ ಅದರ ಮೇಲೆ ಧೂಪವನ್ನು ಹಾಕಿ ಸಭೆಯ ಗುಡಾರದ ಬಾಗಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು. 19 ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು. 20 ಕರ್ತನು ಮೋಶೆ ಆರೋನನ ಸಂಗಡ ಮಾತ ನಾಡಿ-- 21 ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು. 22 ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು. 23 ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- 24 ಕೋರಹ ದಾತಾನ್ ಅಬೀರಾಮರ ನಿವಾಸದ ಸುತ್ತಲಿಂದ ದೂರಹೋಗಿರಿ ಎಂದು ನೀನು ಸಭೆಗೆ ಹೇಳು ಅಂದನು-- 25 ಆಗ ಮೋಶೆಯು ಎದ್ದು ದಾತಾನ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರೂ ಅವನ ಹಿಂದೆ ಹೋದರು. 26 ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು. 27 ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು. 28 ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ. 29 ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ. 30 ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು. 31 ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ 32 ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. 33 ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. 34 ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು. 35 ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. 36 ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ 37 ಯಾಜಕನಾದ ಆರೋನನ ಮಗನಾದ ಎಲಿಯಾ ಜರನಿಗೆ--ಧೂಪದ ಪಾತ್ರೆಗಳು ಪರಿಶುದ್ಧವಾಗಿರು ವದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಅವುಗಳನ್ನು ಎತ್ತಬೇಕೆಂದು ಮತ್ತು ನೀನು ಆ ಬೆಂಕಿಯನ್ನು ದೂರಕ್ಕೆ ಚೆಲ್ಲು. 38 ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು. 39 ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು. 40 ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು. 41 ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು. 42 ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು. 43 ಮೋಶೆ ಆರೋನರೂ ಸಭೆಯ ಗುಡಾರದ ಮುಂದೆ ಬಂದರು. 44 ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- 45 ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು. 46 ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು. 47 ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು. 48 ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು. 49 ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು. 50 ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
1 ಕರ್ತನು ಮೋಶೆಯ ಸಂಗಡ ಮಾತ ನಾಡಿ-- 2 ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ. 3 ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು. 4 ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು. 5 ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು. 6 ಹಾಗೆಯೇ ಮೋಶೆಯು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು. 7 ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು. 8 ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. 9 ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು. 10 ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು. 11 ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು. 12 ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ. 13 ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
1 ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು. 2 ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು; 3 ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು. 4 ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು. 5 ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು. 6 ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ. 7 ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು. 8 ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ. 9 ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು. 10 ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು. 11 ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು. 12 ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ. 13 ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು. 14 ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು. 15 ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು. 16 ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು. 17 ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು. 18 ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು. 19 ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು. 20 ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ. 21 ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ. 22 ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು. 23 ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು. 24 ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು. 25 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- 26 ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. 27 ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು. 28 ಈ ಪ್ರಕಾರ ನೀವು ಸಹ ಇಸ್ರಾಯೇಲ್ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು. 29 ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. 30 ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು. 31 ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ. 32 ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
1 ಕರ್ತನು ಮೋಶೆಯ ಸಂಗಡಲೂ ಆರೋನನ ಸಂಗಡಲೂ ಮಾತನಾಡುತ್ತಾ 2 ಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು. 3 ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು. 4 ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು. 5 ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು. 6 ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು. 7 ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 8 ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 9 ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು. 10 ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು. 11 ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು. 12 ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು. 13 ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ. 14 ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು. 15 ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು. 16 ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು. 17 ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು 18 ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು. 19 ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು. 20 ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ. 21 ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು. 22 ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
1 ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು. 2 ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು. 3 ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು. 4 ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ? 5 ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು. 6 ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು. 7 ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- 8 ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು. 9 ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು. 10 ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು. 11 ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು. 12 ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು. 13 ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ. 14 ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ. 15 ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು. 16 ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ. 17 ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ. 18 ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು. 19 ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ. 20 ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು. 21 ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು. 22 ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್ ಎಂಬ ಬೆಟ್ಟದ ಬಳಿಗೆ ಬಂದರು. 23 ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ-- 24 ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ. 25 ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್ ಬೆಟ್ಟಕ್ಕೆ ಕರಕೊಂಡು ಬಂದು. 26 ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು. 27 ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು. 28 ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು. 29 ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
1 ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು. 2 ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. 3 ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು. 4 ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು, 5 ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು. 6 ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು. 7 ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು. 8 ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು. 9 ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು. 10 ಇಸ್ರಾಯೇಲ್ ಮಕ್ಕಳು ಹೊರಟು ಓಬೋತಿನಲ್ಲಿ ಇಳುಕೊಂಡರು. 11 ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆ ದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಅರಣ್ಯದಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳುಕೊಂಡರು. 12 ಅಲ್ಲಿಂದ ಅವರು ಹೊರಟು ಜೆರೆದೆಂಬ ತಗ್ಗಿನಲ್ಲಿ ಇಳುಕೊಂಡರು. 13 ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ. 14 ಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ 15 ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ. 16 ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ. 17 ಆಗ ಇಸ್ರಾಯೇಲ್ಯರು ಈ ಹಾಡನ್ನು ಹಾಡಿದರು; ಏನಂದರೆ--ಓ ಬಾವಿಯೇ, ಉಕ್ಕು; ಅದಕ್ಕೆ ನೀವು ಹಾಡಿರಿ. 18 ಪ್ರಭುಗಳು ಈ ಬಾವಿಯನ್ನು ಅಗೆದರು; ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು. ಅವರು ಅರಣ್ಯದಿಂದ ಮತ್ತಾನಕ್ಕೂ 19 ಇದಲ್ಲದೆ ಅವರು ಮತ್ತಾನದಿಂದ ನಹಲೀಯೇ ಲಕ್ಕೂ ನಹಲೀಯೇಲದಿಂದ ಬಾಮೋತಿಗೂ ಬಂದರು. 20 ಬಾಮೋತಿನಿಂದ ಮೋವಾಬ್ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ. 21 ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ-- 22 ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ. 23 ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. 24 ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. 25 ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. 26 ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. 27 ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. 28 ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. 29 ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. 30 ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. 31 ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು. 32 ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು. 33 ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. 34 ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು. 35 ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
1 ಇಸ್ರಾಯೇಲ್ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು. 2 ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. 3 ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು. 4 ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು. 5 ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ. 6 ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು. 7 ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು. 8 ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು. 9 ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು. 10 ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ-- 11 ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು. 12 ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ. 13 ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ, 14 ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು. 15 ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು. 16 ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು. 17 ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು. 18 ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು. 19 ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು. 20 ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು. 21 ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು. 22 ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು. 23 ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು. 24 ಆದರೆ ಕರ್ತನ ದೂತನು ದ್ರಾಕ್ಷೇತೋಟಗಳ ಹಾದಿಯಲ್ಲಿ ಈಚೆ ಆಚೆ ಗೋಡೆ ಇದ್ದಲ್ಲಿ ನಿಂತನು. 25 ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು. 26 ಆಗ ಕರ್ತನ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು. 27 ಕತ್ತೆಯು ಕರ್ತನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು; ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು. 28 ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು. 29 ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು. 30 ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು. 31 ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು. 32 ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು. 33 ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು. 34 ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು. 35 ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು. 36 ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು. 37 ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ? 38 ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು. 39 ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್ಹುಚೋತಿಗೆ ಬಂದರು. 40 ಬಾಲಾ ಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಬಿಳಾಮನನ್ನೂ ಅವನ ಸಂಗಡ ಇದ್ದ ಪ್ರಭುಗಳನ್ನೂ ಕಳುಹಿಸಿದನು. 41 ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
1 ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು. 2 ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು. 3 ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು. 4 ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು. 5 ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು. 6 ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು. 7 ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ. 8 ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ? 9 ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ. 10 ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು. 11 ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು. 12 ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು. 13 ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ; 14 ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು. 15 ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು. 16 ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು. 17 ಇವನು ಅವನ ಬಳಿಗೆ ಬಂದಾಗ ಇಗೋ, ಅವನೂ ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು; 18 ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು. 19 ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ? 20 ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು. 21 ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು. 22 ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು. 23 ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು. 24 ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು. 25 ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು. 26 ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು. 27 ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು. 28 ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು. 29 ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು. 30 ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
1 ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು. 2 ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು. 3 ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು. 4 ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು-- 5 ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ! 6 ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ. 7 ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು. 8 ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು. 9 ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು. 10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ. 11 ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು. 12 ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ-- 13 ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ; 14 ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು. 15 ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು. 16 ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು-- 17 ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು. 18 ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು, 19 ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು. 20 ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು. 21 ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ. 22 ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು. 23 ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು? 24 ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು. 25 ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
1 ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು. 2 ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು. 3 ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು. 4 ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು. 5 ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು. 6 ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು. 7 ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು 8 ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. 9 ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು. 10 ಆಗ ಕರ್ತನು ಮೋಶೆಗೆ-- 11 ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ. 12 ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು. 13 ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು. 14 ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು. 15 ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು. 16 ಕರ್ತನು ಮೋಶೆಗೆ-- 17 ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು. 18 ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
1 ಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ-- 2 ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು. 3 ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ 4 ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು. 5 ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ; 6 ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ. 7 ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ. 8 ಪಲ್ಲೂವಿನ ಕುಮಾರರು; ಎಲೀಯಾಬ್. 9 ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು. 10 ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು. 11 ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ. 12 ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ; 13 ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ. 14 ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ. 15 ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ. 16 ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ; 17 ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ. 18 ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ. 19 ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. 20 ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ; 21 ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ. 22 ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ. 23 ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ; 24 ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ. 25 ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ. 26 ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ. 27 ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ. 28 ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ. 29 ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ; 30 ಗಿಲ್ಯಾದನ ಕುಮಾರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ; 31 ಅಸ್ರೀಯೇಲ ನಿಂದ ಅಸ್ರೀಯೇಲ್ಯರ ಕುಟುಂಬ; ಶೆಕೆಮನಿಂದ ಶೆಕೆಮ್ಯರ ಕುಟುಂಬ; 32 ಶೆವಿಾದಾಯನಿಂದ ಶೆವಿಾದಾ ಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ. 33 ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ. 34 ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ. 35 ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ; 36 ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ. 37 ಎಫ್ರಾಯಾಮನ ಕುಮಾರರ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಐನೂರು ಮಂದಿ. ಕುಟುಂಬ ಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ. 38 ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ; 39 ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ; 40 ಬೆಲಗನ ಕುಮಾರರು; ಅರ್ದನೂ ನಾಮಾನನೂ. 41 ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ. 42 ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ. 43 ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ. 44 ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ. 45 ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ. 46 ಆಶೇರನ ಮಗಳ ಹೆಸರು ಸಾರಳು. 47 ಲೆಕ್ಕಾನುಸಾರವಾದ ಆಶೇರನ ಕುಮಾರರ ಕುಟುಂಬಗಳು ಇವೇ; ಅವರು ಐವತ್ತು ಮೂರುಸಾವಿರದ ನಾನೂರು ಮಂದಿ. 48 ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ; 49 ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ. 50 ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ. 51 ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ. 52 ಕರ್ತನು ಮೋಶೆಯ ಸಂಗಡ ಮಾತನಾಡಿ 53 ಇವರಿಗೆ ದೇಶವನ್ನು ಹೆಸರುಗಳ ಲೆಕ್ಕದ ಪ್ರಕಾರ ಸ್ವಾಸ್ತ್ಯವಾಗಿ ಹಂಚಿಕೊಡಬೇಕು. 54 ಬಹು ಜನರಿಗೆ ಬಹು ಸ್ವಾಸ್ತ್ಯವನ್ನು ಕೊಡಬೇಕು, ಸ್ವಲ್ಪ ಜನರಿಗೆ ಸ್ವಲ್ಪ ಸ್ವಾಸ್ತ್ಯವನ್ನು ಕೊಡಬೇಕು. ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸ್ವಾಸ್ತ್ಯವನ್ನು ಕೊಡಬೇಕು. 55 ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು. 56 ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು. 57 ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ. 58 ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ; 59 ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು. 60 ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು. 61 ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು. 62 ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ. 63 ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು. 64 ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ. 65 ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
1 ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ 2 ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು-- 3 ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ. 4 ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು. 5 ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು. 6 ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ-- 7 ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು. 8 ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿ ನೀನು ಹೇಳಬೇಕಾದದ್ದೇನಂದರೆ--ಒಬ್ಬನು ಮಗನಿಲ್ಲದೆ ಸತ್ತರೆ ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ಸೇರಿಸಬೇಕು. 9 ಆದರೆ ಅವನಿಗೆ ಮಗಳು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ಸಹೋದರರಿಗೆ ಕೊಡಬೇಕು. ಅವನಿಗೆ ಸಹೋದರರು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು. 10 ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ ಅವನ ಕುಟುಂಬ ಗಳಲ್ಲಿ ಅವನಿಗೆ ಸವಿಾಪವಾದ ಬಂಧುವಿಗೆ ಅವನ ಸ್ವಾಸ್ತ್ಯವನ್ನು ಕೊಡಬೇಕು; ಅವನೇ ಅದನ್ನು ಸ್ವತಂತ್ರಿಸಿಕೊಳ್ಳಲಿ. 11 ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು. 12 ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು. 13 ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ. 14 ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು. 15 ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ. 16 ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ; 17 ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು. 18 ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು 19 ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು. 20 ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು. 21 ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು. 22 ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ 23 ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
1 ಕರ್ತನು ಮೋಶೆಯ ಸಂಗಡ ಮಾತ ನಾಡಿ-- 2 ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. 3 ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. 4 ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. 5 ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. 6 ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. 7 ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; 8 ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. 9 ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ 10 ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. 11 ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ 12 ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. 13 ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. 14 ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. 15 ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. 16 ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. 17 ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. 18 ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. 19 ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. 20 ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. 21 ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. 22 ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. 23 ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. 24 ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. 25 ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. 26 ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. 27 ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ 28 ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ 29 ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ 30 ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು. 31 ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
1 ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು. 2 ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು. 3 ಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು, 4 ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ; 5 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ. 6 ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು. 7 ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು. 8 ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ 9 ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ 10 ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ 11 ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. 12 ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು. 13 ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು; 14 ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು; 15 ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ; 16 ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು. 17 ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ 18 ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ 19 ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. 20 ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ 21 ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ 22 ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. 23 ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ 24 ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ 25 ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. 26 ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ 27 ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ 28 ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. 29 ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ 30 ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ 31 ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. 32 ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ 33 ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ 34 ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. 35 ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು. 36 ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ 37 ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ 38 ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. 39 ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದು 40 ಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.
1 ಮೋಶೆಯು ಇಸ್ರಾಯೇಲ್ ಮಕ್ಕಳ ಗೋತ್ರಗಳ ಯಜಮಾನರ ಸಂಗಡ ಮಾತನಾಡಿ -- ಕರ್ತನು ಆಜ್ಞಾಪಿಸಿದ್ದೇನಂದರೆ, 2 ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು. 3 ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ 4 ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು. 5 ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು. 6 ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ 7 ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು. 8 ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು. 9 ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು. 10 ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ 11 ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು ಅವಳನ್ನು ತಡೆಯದ ಪಕ್ಷದಲ್ಲಿ ಅವಳ ಸಮಸ್ತ ಪ್ರಮಾಣಗಳೂ ಅವಳು ತನ್ನ ಪ್ರಾಣವನ್ನು ಬಂಧಿಸಿದ ಸಮಸ್ತ ಬಂಧನಗಳೂ ನಿಲ್ಲುವವು. 12 ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು. 13 ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು. 14 ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ. 15 ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು. 16 ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
1 ಕರ್ತನು ಮೋಶೆಯ ಸಂಗಡ ಮಾತ ನಾಡಿ-- 2 ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು. 3 ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು. 4 ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು 5 ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು. 6 ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು. 7 ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು. 8 ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು. 9 ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು. 10 ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು. 11 ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು. 12 ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು. 13 ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು. 14 ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡು 15 ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ? 16 ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು. 17 ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ. 18 ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ. 19 ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ. 20 ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು. 21 ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ 22 ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು 23 ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು. 24 ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು. 25 ತರುವಾಯ ಕರ್ತನು ಮೋಶೆಯ ಸಂಗಡ ಮಾತ ನಾಡಿ-- 26 ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ. 27 ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು. 28 ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು 29 ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು. 30 ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು. 31 ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆಯೂ ಯಾಜಕನಾದ ಎಲ್ಲಾಜರನೂ ಮಾಡಿ ದರು. 32 ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆ--ಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು, 33 ಎಪ್ಪತ್ತೆರಡು ಸಾವಿರ ಪಶುಗಳು, 34 ಅರವತ್ತೊಂದು ಸಾವಿರ ಕತ್ತೆಗಳು, 35 ಪುರುಷ ಸಂಗಮ ಮಾಡದ ಸ್ತ್ರೀಯರು ಮೂವತ್ತೆ ರಡು ಸಾವಿರ ಮಂದಿ. 36 ಯುದ್ಧಕ್ಕೆ ಹೊರಟವರ ಅರ್ಧ ಲೆಕ್ಕವು ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು; 37 ಕುರಿಗಳಿಂದ ಕರ್ತನಿಗೆ ಕೊಡ ಲ್ಪಟ್ಟ ಕಪ್ಪವು ಆರು ನೂರ ಎಪ್ಪತ್ತೈದು; 38 ದನಗಳು ಮೂವತ್ತಾರು ಸಾವಿರ, ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಎಪ್ಪತ್ತೆರಡು. 39 ಕತ್ತೆಗಳು ಮೂವತ್ತು ಸಾವಿರದ ಐನೂರು; ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಅರವತ್ತೊಂದು. 40 ಜನರು ಹದಿನಾರು ಸಾವಿರ; ಅವರಿಂದ ಕರ್ತನಿಗೆ ಉಂಟಾದ ಕಪ್ಪವು ಮೂವತ್ತೆರಡು ಜನ. 41 ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು. 42 ಮೋಶೆಯು ಯುದ್ಧಕ್ಕೆ ಹೋದ ಮನುಷ್ಯರಿಂದ ತಕ್ಕೊಂಡು ಇಸ್ರಾಯೇಲ್ ಮಕ್ಕಳಿಗೆ ಹಂಚಿದ ಅರ್ಧ ಎಷ್ಟಂದರೆ-- 43 ಕುರಿಗಳಿಂದ ಸಭೆಯ ಅರ್ಧ, ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು; 44 ಮೂವತ್ತಾರು ಸಾವಿರ ಪಶುಗಳು; 45 ಮೂವತ್ತು ಸಾವಿರದ ಐನೂರು ಕತ್ತೆಗಳು; 46 ಹದಿನಾರು ಸಾವಿರ ಜನರು. ಮೋಶೆಯು ಇಸ್ರಾಯೇಲ್ ಮಕ್ಕಳ ಅರ್ಧದಿಂದ ಮನುಷ್ಯರಲ್ಲಿಯೂ 47 ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು. 48 ದಂಡಿನ ಸಹಸ್ರಗಳ ಮೇಲಿರುವ ಅಧಿಕಾರಿಗಳೂ ಸಹಸ್ರಾಧಿಪತಿಗಳೂ 49 ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ. 50 ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು. 51 ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು. 52 ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು. 53 ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು. 54 ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
1 ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು. 2 ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ-- 3 ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ 4 ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು. 5 ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು. 6 ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ? 7 ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ? 8 ನಾನು ದೇಶವನ್ನು ನೋಡುವದಕ್ಕೆ ಕಾದೇಶ್ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು. 9 ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು. 10 ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ-- 11 ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ 12 ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ. 13 ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು. 14 ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ. 15 ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು. 16 ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು. 17 ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು. 18 ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ. 19 ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು. 20 ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ 21 ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ 22 ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು. 23 ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ. 24 ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು. 25 ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು. 26 ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ. 27 ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು. 28 ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು. 29 ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು. 30 ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು. 31 ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು. 32 ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು. 33 ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. 34 ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, 35 ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, 36 ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. 37 ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, 38 ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. 39 ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. 40 ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. 41 ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು. 42 ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
1 ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್ ಮಕ್ಕಳ ಪ್ರಯಾಣಗಳು ಇವೇ. 2 ಮೋಶೆಯು ಕರ್ತನ ಆಜ್ಞೆಯ ಪ್ರಕಾರ ಅವರ ಪ್ರಯಾಣಗಳ ಹೊರಡೋಣಗಳನ್ನು ಬರೆದನು. 3 ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು. 4 ಹೇಗಂದರೆ ಕರ್ತನು ಅವರಲ್ಲಿ ಸಮಸ್ತ ಚೊಚ್ಚಲಿನವರನ್ನು ಹೊಡೆದದ್ದರಿಂದ ಐಗುಪ್ತ್ಯರು ಹೂಣಿಡುತ್ತಿದ್ದರು; ಕರ್ತನು ಅವರ ದೇವರುಗಳಿಗೂ ತೀರ್ಪು ಮಾಡಿದನು. 5 ಇಸ್ರಾಯೇಲ್ ಮಕ್ಕಳು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು. 6 ಸುಕ್ಕೋತಿನಿಂದ ಹೊರಟು ಅರಣ್ಯದ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದು ಕೊಂಡರು. 7 ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು. 8 ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು. 9 ಮಾರಾದಿಂದ ಹೊರಟು ಏಲೀಮಿಗೆ ಬಂದರು; ಏಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರ ಮರಗಳೂ ಇದ್ದದ ರಿಂದ ಅಲ್ಲಿ ಇಳಿದುಕೊಂಡರು. 10 ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದು ಕೊಂಡರು. 11 ಕೆಂಪುಸಮುದ್ರದಿಂದ ಹೊರಟು ಸೀನೆಂಬ ಅರಣ್ಯದಲ್ಲಿ ಇಳಿದುಕೊಂಡು, 12 ಸೀನೆಂಬ ಅರಣ್ಯದಿಂದ ಹೊರಟು ದೊಪ್ಕದಲ್ಲಿ ಇಳಿದು ಕೊಂಡರು. 13 ದೊಪ್ಕದಿಂದ ಹೊರಟು ಆಲೂಷದಲ್ಲಿ ಇಳಿದುಕೊಂಡರು. 14 ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವದಕ್ಕೆ ನೀರು ಇದ್ದಿಲ್ಲ; 15 ರೆಫೀ ದೀಮಿನಿಂದ ಹೊರಟು ಸೀನಾಯಿ ಅರಣ್ಯದಲ್ಲಿ ಇಳಿದುಕೊಂಡರು. 16 ಸೀನಾಯಿ ಅರಣ್ಯದಿಂದ ಹೊರಟು ಕಿಬ್ರೋತ್ಹತಾವದಲ್ಲಿ ಇಳಿದುಕೊಂಡರು. 17 ಕಿಬ್ರೋತ್ಹತಾವದಿಂದ ಹೊರಟು ಹಚೇರೋತಿ ನಲ್ಲಿ ಇಳಿದುಕೊಂಡರು. 18 ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು. 19 ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚನಲ್ಲಿ ಇಳಿದುಕೊಂಡರು. 20 ರಿಮ್ಮೋನ್ ಪೆರೆಚನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು. 21 ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು. 22 ರಿಸ್ಸದಿಂದ ಹೊರಟು ಕೆಹೇಲಾತಿ ನಲ್ಲಿ ಇಳಿದುಕೊಂಡರು. 23 ಕೆಹೇಲಾತಿನಿಂದ ಹೊರಟು ಶೆಫೆರ್ ಪರ್ವತದಲ್ಲಿ ಇಳಿದುಕೊಂಡರು. 24 ಶೆಫೆರ್ ಪರ್ವತದಿಂದ ಹೊರಟು ಹರಾದದಲ್ಲಿ ಇಳಿದು ಕೊಂಡರು. 25 ಹರಾದದಿಂದ ಹೊರಟು ಮಖೇ ಲೋತಿನಲ್ಲಿ ಇಳಿದುಕೊಂಡರು. 26 ಮಖೇಲೋತಿ ನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು. 27 ತಹತಿನಿಂದ ಹೊರಟು ತೆರಹದಲ್ಲಿ ಇಳಿದು ಕೊಂಡರು. 28 ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು. 29 ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು. 30 ಹಷ್ಮೋನ ದಿಂದ ಹೊರಟು ಮೋಸೇರೋತಿನಲ್ಲಿ ಇಳಿದು ಕೊಂಡರು. 31 ಮೋಸೇರೋತಿನಿಂದ ಹೊರಟು ಬೆನೇ ಯಾಕಾನಿನಲ್ಲಿ ಇಳಿದುಕೊಂಡರು. 32 ಬೆನೇಯಾ ಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದು ಕೊಂಡರು. 33 ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು. 34 ಯೊಟ್ಬಾತ ದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು. 35 ಅಬ್ರೋನದಿಂದ ಹೊರಟು ಎಚ್ಯೋನ್ಗೆಬೆರಿನಲ್ಲಿ ಇಳಿದುಕೊಂಡರು. 36 ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್ ಅರಣ್ಯದಲ್ಲಿ ಇಳಿದುಕೊಂಡರು. 37 ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂಚಿನಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು. 38 ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು. 39 ಆರೋನನು ಹೋರ್ ಗುಡ್ಡ ದಲ್ಲಿ ಸಾಯುವಾಗ ಅವನು ನೂರ ಇಪ್ಪತ್ತು ಮೂರು ವರುಷದವನಾಗಿದ್ದನು. 40 ಆಗ ಇಸ್ರಾಯೇಲ್ ಮಕ್ಕಳು ಬರುವದನ್ನು ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು. 41 ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು. 42 ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು. 43 ಪೂನೋನಿ ನಿಂದ ಹೊರಟು ಒಬೋತಿನಲ್ಲಿ ಇಳಿದುಕೊಂಡರು. 44 ಒಬೋತಿನಿಂದ ಹೊರಟು ಮೋವಾಬಿನ ಮೇರೆ ಯಲ್ಲಿರುವ ಇಯ್ಯಾಮಿನಲ್ಲಿ ಇಳಿದುಕೊಂಡರು. 45 ಇಯ್ಯಾಮಿನಿಂದ ಹೊರಟು ದೀಬೋನ್ಗಾದಿನಲ್ಲಿ ಇಳಿದುಕೊಂಡರು. 46 ದೀಬೋನ್ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದು ಕೊಂಡರು. 47 ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೇಬೋವಿಗೆದುರಾಗಿರುವ ಅಬಾರೀಮ್ ಗುಡ್ಡಗಳಲ್ಲಿ ಇಳಿದುಕೊಂಡರು. 48 ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು. 49 ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು. 50 ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ-- 51 ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಯೊರ್ದನನ್ನು ದಾಟಿ ಕಾನಾನ್ ದೇಶಕ್ಕೆ ಬರುವಾಗ 52 ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು. 53 ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. 54 ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು. 55 ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು. 56 ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
1 ಕರ್ತನು ಮೋಶೆಯ ಸಂಗಡ ಮಾತನಾಡಿ-- 2 ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು. 3 ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. 4 ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು. 5 ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು. 6 ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. 7 ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ 8 ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು 9 ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ. 10 ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ. 11 ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. 12 ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು. 13 ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ. 14 ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ. 15 ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು. 16 ಕರ್ತನು ಮೋಶೆಯ ಸಂಗಡ ಮಾತನಾಡಿ 17 ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ 18 ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ. 19 ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ 20 ಸಿಮೆಯೋನನ ಮಕ್ಕಳ ಗೋತ್ರದಿಂದ ಅವ್ಮೆಾಹೂ ದನ ಮಗನಾದ ಶೆಮೂವೇಲನೂ 21 ಬೆನ್ಯಾವಿಾನನ ಗೋತ್ರದಿಂದ ಕಿಸ್ಲೋನನ ಮಗನಾದ ಎಲೀದಾದನೂ 22 ದಾನನ ಮಕ್ಕಳ ಗೋತ್ರದ ಪ್ರಧಾನನು ಯೊಗ್ಲೀಯ ಮಗನಾದ ಬುಕ್ಕೀಯೂ 23 ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಎಫೋದನ ಮಗನಾದ ಹನ್ನೀಯೇಲನೂ 24 ಎಫ್ರಾಯಾಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗನಾದ ಕೆಮೂವೇಲನೂ 25 ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗನಾದ ಎಲೀಚಾಫಾನನೂ 26 ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗನಾದ ಪಲ್ಟೀಯೇಲನೂ 27 ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗನಾದ ಅಹೀಹೂದನೂ 28 ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ. 29 ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
1 ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ-- 2 ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು. 3 ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು. 4 ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು. 5 ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು. 6 ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು. 7 ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು. 8 ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು. 9 ಕರ್ತನು ಮೋಶೆಯ ಸಂಗಡ ಮಾತನಾಡಿ-- 10 ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ 11 ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು. 12 ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು. 13 ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು. 14 ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು. 15 ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು. 16 ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. 17 ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. 18 ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು. 19 ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು. 20 ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ 21 ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು. 22 ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ 23 ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ 24 ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು. 25 ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ. 26 ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ 27 ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ. 28 ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು. 29 ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು. 30 ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು. 31 ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು. 32 ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ. 33 ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ. 34 ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
1 ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ 2 ಇಸ್ರಾಯೇಲ್ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು. 3 ಆದರೆ ಅವರು ಇಸ್ರಾಯೇಲ್ ಮಕ್ಕಳ ಗೋತ್ರಗಳ ಮಕ್ಕಳಲ್ಲಿ ಒಬ್ಬರಿಗೆ ಮದುವೆ ಯಾದರೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಸ್ವಾಸ್ತ್ಯ ದಿಂದ ಕಡಿಮೆಯಾಗಿ ಅವರನ್ನು ಮದುವೆಮಾಡಿಕೊಂಡ ಗೋತ್ರದವರ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು; ಮತ್ತು ನಮ್ಮ ಸ್ವಾಸ್ತ್ಯದ ಭಾಗದಿಂದ ಅದು ಕಡಿಮೆಯಾಗಿ ಹೋಗುವದು. 4 ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು. 5 ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ. 6 ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು. 7 ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು. 8 ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು. 9 ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು. 10 ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು. 11 ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು; 12 ಯೋಸೇಫನ ಮಗನಾದ ಮನಸ್ಸೆಯ ಕುಮಾರರ ಕುಟುಂಬಗಳವರಿಗೆ ಮದುವೆಯಾದರು. ಈ ಪ್ರಕಾರ ಅವರ ಸ್ವಾಸ್ತ್ಯವು ತಮ್ಮ ಪಿತೃವಿನ ಗೋತ್ರದಲ್ಲಿಯೆ ಉಳಿಯುವ ಹಾಗಾಯಿತು. 13 ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
1 ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ. 2 (ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ). 3 ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು. 4 ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು. 5 ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ 6 ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು; 7 ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ. 8 ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು. 9 ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು. 10 ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ. 11 ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ. 12 ನಿಮ್ಮ ಚಿಂತೆಯನ್ನೂ ಭಾರವನ್ನೂ ವ್ಯಾಜ್ಯವನ್ನೂ ನಾನೊಬ್ಬನೇ ಹೇಗೆ ಹೊರಲಿ? 13 ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು. 14 ಅದಕ್ಕೆ ನೀವು ನನಗೆ ಉತ್ತರ ಕೊಟ್ಟು ಹೇಳಿದ್ದೇನಂದರೆ--ನಿನ್ನ ಆಲೋ ಚನೆಯಂತೆ ಮಾಡುವದು ನಮಗೆ ಒಳ್ಳೇದು ಅಂದಾಗ 15 ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ 16 ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ. 17 ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು. 18 ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು. 19 ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು. 20 ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ; 21 ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು. 22 ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ. 23 ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು. 24 ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ 25 ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ. 26 ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು 27 ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ. 28 ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ. 29 ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ. 30 ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು. 31 ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು. 32 ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ. 33 ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು. 34 ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ-- 35 ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ. 36 ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು. 37 ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ. 38 ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು. 39 ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು. 40 ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು. 41 ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ. 42 ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು. 43 ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ ಕರ್ತನ ಅಪ್ಪಣೆಗೆ ತಿರುಗಿಬಿದ್ದು ವ್ಯರ್ಥ ಧೈರ್ಯಮಾಡಿ ಬೆಟ್ಟವನ್ನೇರಿದಿರಿ. 44 ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು. 45 ಆಗ ನೀವು ತಿರುಗಿಕೊಂಡು ಕರ್ತನ ಮುಂದೆ ಗೋಳಾಡಿದಿರಿ; ಆದರೆ ಕರ್ತನು ನಿಮ್ಮ ಧ್ವನಿಯನ್ನು ಕೇಳಲಿಲ್ಲ, ನಿಮಗೆ ಕಿವಿಗೊಡಲಿಲ್ಲ. 46 ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
1 ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್ ಬೆಟ್ಟವನ್ನು ಸುತ್ತಿಕೊಂಡೆವು. 2 ಆ ಮೇಲೆ ಕರ್ತನು ನನಗೆ ಹೇಳಿದ್ದೇನಂದರೆ-- 3 ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ. 4 ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು. 5 ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ. 6 ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು. 7 ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು. 8 ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು. 9 ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು. 10 ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು. 11 ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು. 12 ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು. 13 ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು. 14 ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು. 15 ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು. 16 ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ 17 ಕರ್ತನು ನನಗೆ--ಇಂದು ನೀನು ಮೋವಾಬಿನ ಮೇರೆಯಾದ ಆರ್ ಅನ್ನು ದಾಟಬೇಕು; 18 ಅಮ್ಮೋನನ ಮಕ್ಕಳೆದುರಿಗೆ ನೀನು ಬಂದರೆ ಅವರಿಗೆ ಉಪದ್ರ ಕೊಡಬೇಡ; ಅವರ ಸಂಗಡ ಜಗಳವಾಡ ಬೇಡ; 19 ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು. 20 (ಇದು ಸಹ ರಾಕ್ಷಸರ ದೇಶವೆನಿಸಿಕೊಂಡಿತು; ಪೂರ್ವದಲ್ಲಿ ರಾಕ್ಷಸರು ಅದರಲ್ಲಿ ವಾಸಮಾಡಿದರು; ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು. 21 ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು. 22 ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ. 23 ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.) 24 ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು. 25 ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು. 26 ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ-- 27 ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ. 28 ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ; 29 ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು. 30 ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ. 31 ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು. 32 ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು. 33 ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು; 34 ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ. 35 ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು. 36 ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು. 37 ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
1 ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು. 2 ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು. 3 ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು. 4 ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು. 5 ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು. 6 ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು. 7 ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು. 8 ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು. 9 (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.) 10 ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು, 11 ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು. 12 ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. 13 ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. 14 ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. 15 ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. 16 ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು. 17 ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು. 18 ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು. 19 ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ) 20 ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು. 21 ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು. 22 ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು. 23 ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ-- 24 ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ 25 ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ. 26 ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ. 27 ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ. 28 ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು. 29 ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
1 ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ. 2 ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು. 3 ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ? 4 ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ. 5 ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ. 6 ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು. 7 ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು? 8 ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು? 9 ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು. 10 ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು 11 ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು. 12 ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ. 13 ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು. 14 ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು. 15 ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ. 16 ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ 17 ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ 18 ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ 19 ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ. 20 ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ. 21 ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು. 22 ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ. 23 ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ. 24 ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ. 25 ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ 26 ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ. 27 ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. 28 ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ. 29 ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. 30 ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು 31 ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ. 32 ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ? 33 ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ ? 34 ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ? 35 ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ. 36 ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ. 37 ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು. 38 ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು. 39 ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ. 40 ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು. 41 ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು. 42 ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು. 43 ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್. 44 ಮೋಶೆಯು ಇಸ್ರಾಯೇಲ್ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ-- 45 ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ 46 ಯೊರ್ದನಿನ ಈಚೆಯಲ್ಲಿ ಬೇತ್ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು. 47 ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ 48 ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆ 49 ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
1 ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು. 2 ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು. 3 ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ. 4 ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು. 5 (ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ-- 6 ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ. 7 ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. 8 ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು, 9 ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ. 10 ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ. 11 ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ. 12 ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು. 13 ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು. 14 ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. 15 ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ. 16 ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು. 17 ಕೊಲ್ಲಬೇಡ 18 ವ್ಯಭಿಚಾರ ಮಾಡಬೇಡ. 19 ಕದಿಯಬೇಡ. 20 ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ. 21 ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು. 22 ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು. 23 (ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ) 24 ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ. 25 ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ. 26 ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು? 27 ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ. 28 ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು. 29 ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು. 30 ನೀನು ಹೋಗಿ ಅವರಿಗೆ--ನಿಮ್ಮ ಡೇರೆಗಳಿಗೆ ತಿರುಗಿಕೊಳ್ಳಬೇಕು ಎಂದು ಹೇಳು. 31 ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು. 32 ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ. 33 ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
1 ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು; 2 ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ. 3 ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು. 4 ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು. 5 ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು. 6 ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು. 7 ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು. 8 ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು. 9 ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು. 10 ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ 11 ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ 12 ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ. 13 ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು. 14 ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ. 15 (ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.) 16 ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ. 17 ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು. 18 ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು 19 ಕರ್ತನು ಹೇಳಿದ ಪ್ರಕಾರ ನಿನ್ನ ಎಲ್ಲಾ ಶತ್ರುಗಳನ್ನು ನಿನ್ನ ಮುಂದೆ ತಳ್ಳಿಹಾಕುವ ಹಾಗೆಯೂ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನೂ ಒಳ್ಳೇದನ್ನೂ ಮಾಡಬೇಕು. 20 ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ-- 21 ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು. 22 ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು. 23 ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು. 24 ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ. 25 ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
1 ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ 2 ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು. 3 ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು. 4 ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು. 5 ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. 6 ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ. 7 ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ. 8 ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು. 9 ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ 10 ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ. 11 ಹೀಗಿರುವದರಿಂದ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆ ನಿಯಮ ನ್ಯಾಯಗಳನ್ನು ಕೈಕೊಳ್ಳಬೇಕು. 12 ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು. 13 ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು. 14 ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ. 15 ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು. 16 ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು. 17 ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು 18 ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು 19 ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು. 20 ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು. 21 ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ. 22 ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು. 23 ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು. 24 ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು. 25 ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ. 26 ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
1 ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು. 2 ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು. 3 ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು. 4 ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ. 5 ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು. 6 ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು. 7 ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ. 8 ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ. 9 ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ. 10 ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು. 11 ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ. 12 ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ 13 ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ 14 ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ, 15 ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ, 16 ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು-- 17 ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ. 18 ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ. 19 ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ. 20 ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
1 ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ 2 ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ. 3 ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ. 4 ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ. 5 ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ. 6 ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ. 7 ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ. 8 ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು. 9 ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು. 10 ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು. 11 ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು. 12 ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು. 13 ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ. 14 ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು. 15 ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು. 16 ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ. 17 ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು. 18 ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು. 19 ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು. 20 ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು. 21 ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು. 22 ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ. 23 ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ. 24 ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ. 25 ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು. 26 ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ. 27 ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ. 28 ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು. 29 ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
1 ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು. 2 ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು. 3 ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು. 4 ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. 5 ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ. 6 ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು. 7 ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು. 8 ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು. 9 ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು. 10 ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ. 11 ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು. 12 ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ 13 ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ? 14 ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ. 15 ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು. 16 ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ. 17 ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ. 18 ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ. 19 ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ. 20 ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು. 21 ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು. 22 ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
1 ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು. 2 ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂ 3 ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ 4 ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ 5 ನೀವು ಈ ಸ್ಥಳಕ್ಕೆ ಬರುವ ವರೆಗೆ ಕರ್ತನು ಅರಣ್ಯದಲ್ಲಿ ನಿಮಗೆ ಮಾಡಿದ್ದನ್ನೂ 6 ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ. 7 ಆದರೆ ನಿಮ್ಮ ಕಣ್ಣು ಗಳು ಕರ್ತನು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನೋಡಿದವು. 8 ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ 9 ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು. 10 ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ. 11 ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ; 12 ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ. 13 ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ 14 ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು. 15 ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ. 16 ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ 17 ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ. 18 ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ. 19 ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು. 20 ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು. 21 ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು. 22 ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ 23 ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ. 24 ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು. 25 ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು. 26 ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ. 27 ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು. 28 ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು. 29 ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು. 30 ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ? 31 ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ. 32 ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
1 ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ. 2 ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು. 3 ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು. 4 ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ. 5 ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. 6 ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. 7 ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು. 8 ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ. 9 ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ; 10 ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ 11 ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು. 12 ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ. 13 ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ; 14 ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು. 15 ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು. 16 ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು. 17 ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ. 18 ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು. 19 ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ. 20 ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು; 21 ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು. 22 ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ. 23 ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ. 24 ಅದನ್ನು ತಿನ್ನದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು. 25 ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ. 26 ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು. 27 ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು. 28 ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು. 29 ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ 30 ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ. 31 ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ. 32 ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
1 ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ 2 ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ 3 ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ. 4 ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು. 5 ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು. 6 ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು 7 ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ 8 ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು. 9 ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು. 10 ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು. 11 ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ. 12 ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ 13 ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ 14 ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ, 15 ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು. 16 ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು. 17 ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿ 18 ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
1 ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ. 2 ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ. 3 ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ: 4 ಎತ್ತು, ಕುರಿ, ಮೇಕೆ, 5 ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ. 6 ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು. 7 ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ. 8 ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. 9 ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು. 10 ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ. 11 ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. 12 ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ, 13 ಗಿಡಗವೂ ಬೈರಿಯೂ ಜಾತ್ಯಾನುಸಾರ ವಾದ ರಣಹದ್ದು 14 ಜಾತ್ಯಾನುಸಾರವಾದ ಸಕಲ ಕಾಗೆಯೂ 15 ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ 16 ಚಿಕ್ಕ ಗೂಬೆಯೂ ದೊಡ್ಡಗೂಬೆಯೂ ಕೊಕ್ಕರೆಯೂ 17 ನೀರು ಕೋಳಿಯೂ ಹೆಣಹದ್ದೂ ಬೆಳ್ವಕ್ಕಿಯೂ 18 ನೀರು ಕೊಕ್ಕರೆಯೂ ಜಾತ್ಯಾನುಸಾರವಾದ ಬಕವೂ ಬುಡ್ಡಗೋಳಿಯೂ ರಾತ್ರಿಗೀಜಕವೂ. 19 ಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು. 20 ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. 21 ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು. 22 ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು. 23 ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು. 24 ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ 25 ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು. 26 ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು. 27 ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ. 28 ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು. 29 ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
1 ಪ್ರತಿ ಏಳು ವರುಷಗಳ ಅಂತ್ಯದಲ್ಲಿ ಬಿಡುಗಡೆಯನ್ನು ಮಾಡಬೇಕು. 2 ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು. 3 ಅನ್ಯನಿಂದ ತಿರಿಗಿ ತೆಗೆದುಕೊಳ್ಳಬಹುದು; ಆದರೆ ನಿನ್ನ ಸಹೋದರನ ಬಳಿಯಲ್ಲಿ ನಿನಗಿರುವದನ್ನು ನೀನು ಬಿಟ್ಟುಬಿಡಬೇಕು. 4 ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು. 5 ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ 6 ನಿಶ್ಚಯವಾಗಿ ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನಮಾಡಿದಂತೆ ನಿನ್ನನ್ನು ಆಶೀರ್ವದಿಸುವನು; ನೀನು ಸಾಲ ತೆಗೆದು ಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲಕೊಡುವಿ. ಅನೇಕ ಜನಾಂಗಗಳನ್ನು ಆಳುವಿ, ಅವರು ನಿನ್ನನ್ನು ಆಳುವದಿಲ್ಲ. 7 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ. 8 ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು. 9 ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ. 10 ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು. 11 ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ. 12 ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು. 13 ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ. 14 ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು. 15 ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ. 16 ಇದಲ್ಲದೆ ಅವನು ನಿನ್ನನ್ನೂ ನಿನ್ನ ಮನೆಯನ್ನೂ ಪ್ರೀತಿಮಾಡುವದರಿಂದಲೂ ನಿನ್ನ ಬಳಿಯಲ್ಲಿ ಸುಖ ವಾಗಿರುವದರಿಂದಲೂ--ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲವೆಂದು ಹೇಳಿದರೆ 17 ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು. 18 ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು. 19 ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು. 20 ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು. 21 ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ 22 ಅದನ್ನು ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು. ಕಡವೆ ಜಿಂಕೆಗಳನ್ನು ತಿನ್ನುವ ಹಾಗೆ ಶುದ್ಧರೂ ಅಶುದ್ಧರೂ ಅದನ್ನು ನಿನ್ನ ಬಾಗಲು ಗಳಲ್ಲಿ ತಿನ್ನಬೇಕು. 23 ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
1 ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು; 2 ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು. 3 ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು. 4 ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು. 5 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು. 6 ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು. 7 ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು; 8 ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು. 9 ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು. 10 ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು. 11 ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು. 12 ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು. 13 ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು. 14 ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು. 15 ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು. 16 ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು. 17 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು. 18 ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. 19 ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ. 20 ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು. 21 ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು. 22 ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
1 ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ. 2 ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು 3 ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ 4 ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ 5 ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. 6 ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು. 7 ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. 8 ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ 9 ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು. 10 ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು. 11 ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು. 12 ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು; 13 ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ. 14 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ 15 ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು. 16 ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ. 17 ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು. 18 ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು. 19 ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂ 20 ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
1 ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು. 2 ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ. 3 ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು. 4 ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು. 5 ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ. 6 ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ 7 ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು. 8 ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು. 9 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು. 10 ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ 11 ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು. 12 ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ. 13 ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು. 14 ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ. 15 ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.-- 16 ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ. 17 ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ. 18 ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು. 19 ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು. 20 ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು. 21 ಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ 22 ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
1 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ 2 ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು. 3 ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು. 4 ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ. 5 ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ, 6 ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು. 7 ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು. 8 ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ 9 ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ 10 ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು. 11 ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ 12 ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು. 13 ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು. 14 ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು. 15 ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು. 16 ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ 17 ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. 18 ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ 19 ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. 20 ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ. 21 ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
1 ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ. 2 ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ-- 3 ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ; 4 ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು. 5 ಆಗ ಅಧಿಕಾರಿಗಳು ಜನಕ್ಕೆ--ಹೊಸ ಮನೆಯನ್ನು ಕಟ್ಟಿ ಗೃಹಪ್ರತಿಷ್ಠೆಮಾಡದ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಗೃಹಪ್ರತಿಷ್ಠೆಮಾಡದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ. 6 ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ. 7 ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು. 8 ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು. 9 ಅಧಿಕಾರಿ ಗಳು ಜನರ ಸಂಗಡ ಮಾತನಾಡಿ ಮುಗಿಸಿದಾಗ ಜನರ ಮುಂದೆ ನಡೆಯತಕ್ಕ ಸೈನ್ಯಾಧಿಪತಿಗಳನ್ನು ನೇಮಿಸಬೇಕು. 10 ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು. 11 ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು. 12 ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು. 13 ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು. 14 ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು. 15 ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು. 16 ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು. 17 ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ 18 ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು. 19 ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ. 20 ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.
1 ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ 2 ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು. 3 ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು. 4 ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು. 5 ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು. 6 ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು 7 ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ. 8 ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು. 9 ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ. 10 ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ 11 ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ 12 ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು, 13 ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು. 14 ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು. 15 ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ 16 ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು. 17 ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು. 18 ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ 19 ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು 20 ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು. 21 ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು. 22 ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆ 23 ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
1 ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು. 2 ಆದರೆ ನಿನ್ನ ಸಹೋದರನು ನಿನಗೆ ಸವಿಾಪವಾಗಿರದೆ ಹೋದರೆ ಇಲ್ಲವೆ ಅವನ ಗುರುತು ನಿನಗೆ ತಿಳಿಯದೆ ಇದ್ದರೆ ತಪ್ಪಿ ಹೋದದ್ದನ್ನು ನಿನ್ನ ಮನೆಗೆ ಒಯ್ಯಬೇಕು; ನಿನ್ನ ಸಹೋದರನು ಅದನ್ನು ಹುಡುಕುವ ವರೆಗೆ ಅದು ನಿನ್ನ ಸಂಗಡ ಇರಬೇಕು; ತರುವಾಯ ಅದನ್ನು ಹಿಂದಕ್ಕೆ ಅವನಿಗೆ ಕೊಡಬೇಕು. 3 ಅವನ ಕತ್ತೆಗೆ ಹಾಗೆಯೇ ಮಾಡಬೇಕು; ಅವನ ವಸ್ತ್ರಕ್ಕೂ ಹಾಗೆಯೇ ಮಾಡ ಬೇಕು; ನಿನ್ನ ಸಹೋದರನು ಕಳೆದುಕೊಂಡ ಎಲ್ಲಾ ವಸ್ತುಗಳನ್ನು ನೀನು ಕಂಡುಕೊಂಡರೆ ಹಾಗೆಯೇ ಮಾಡಬೇಕು; 4 ನೀನು ಕಾಣದವನಂತೆ ಇರಬಾರದು. ನಿನ್ನ ಸಹೋದರನ ಕತ್ತೆಯಾಗಲಿ ಎತ್ತಾಗಲಿ ಮಾರ್ಗ ದಲ್ಲಿ ಬಿದ್ದಿರುವದನ್ನು ನೋಡಿದರೆ ಅಲಕ್ಷ್ಯಮಾಡ ಬೇಡ; ಹೇಗಾದರೂ ಅವುಗಳನ್ನು ಎಬ್ಬಿಸುವದಕ್ಕೆ ಅವನಿಗೆ ಖಂಡಿತಾ ಸಹಾಯಮಾಡಬೇಕು. 5 ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ. 6 ನಿನಗೆ ಮಾರ್ಗದಲ್ಲಿ ಯಾವದಾದರೊಂದು ಗಿಡದ ಲ್ಲಾಗಲಿ ನೆಲದಲ್ಲಾಗಲಿ ಮರಿಗಳುಳ್ಳ ಇಲ್ಲವೆ ಮೊಟ್ಟೆಗ ಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ ಮರಿಗಳ ಮೇಲೆಯಾ ಗಲಿ ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತು ಕೊಂಡಿದ್ದರೆ ಮರಿಗಳ ಸಂಗಡ ತಾಯಿಯನ್ನು ತಕ್ಕೊಳ್ಳ ಬಾರದು; 7 ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದಿನಗಳು ಹೆಚ್ಚುವ ಹಾಗೆಯೂ ಹೇಗಾದರೂ ತಾಯಿ ಯನ್ನು ಕಳುಹಿಸಿಬಿಟ್ಟು ಮರಿಗಳನ್ನು ತಕ್ಕೊಳ್ಳಬೇಕು. 8 ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು. 9 ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು. 10 ಎತ್ತನ್ನು ಕತ್ತೆಯೊಂದಿಗೆ ಹೂಡಬೇಡ. 11 ಉಣ್ಣೆಯೂ ಸಣಬೂ ಕೂಡಿಸಿ ಮಾಡಿದ ವಸ್ತ್ರವನ್ನು ಹೊದಿಯಬಾರದು. 12 ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು. 13 ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳ ಬಳಿಗೆ ಬಂದ ಮೇಲೆ ಅವಳನ್ನು ಹಗೆಮಾಡಿ 14 ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ 15 ಆ ಹುಡುಗಿಯ ತಂದೆಯೂ ತಾಯಿಯೂ ಆ ಹುಡುಗಿಯ ಕನ್ಯಾ ಭಾವದ ಲಕ್ಷಣಗಳನ್ನು ತಕ್ಕೊಂಡು, ಪಟ್ಟಣದ ಹಿರಿಯರ ಮುಂದೆ ಬಾಗಲಿನ ಬಳಿಗೆ ತರಬೇಕು. 16 ಆ ಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇ ನೆಂದರೆ--ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿ ಯಾಗಿ ಕೊಟ್ಟಿದ್ದೇನೆ; ಅವನು ಅವಳನ್ನು ಹಗೆಮಾಡಿ ದ್ದಾನೆ; 17 ಇಗೋ, ಅವನು--ನಿನ್ನ ಮಗಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಅವಳಿಗೆ ವಿರೋಧವಾದ ಕೆಟ್ಟಮಾತಿಗೆ ಆಸ್ಪದಕೊಟ್ಟಿದ್ದಾನೆ; ಆದರೂ ಇದೆ ನನ್ನ ಮಗಳ ಕನ್ಯಾಭಾವದ ಲಕ್ಷಣಗಳು. ಹೀಗೆ ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು. 18 ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಅವನನ್ನು ಶಿಕ್ಷಿಸಬೇಕು. 19 ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು. 20 ಈ ಮಾತು ಸತ್ಯವಾಗಿದ್ದು, ಆ ಹುಡುಗಿಯಲ್ಲಿ ಕನ್ಯಾಭಾವದ ಲಕ್ಷಣ ಕಾಣದೆ ಇದ್ದರೆ 21 ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು; 22 ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು. 23 ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ 24 ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು. 25 ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ 26 ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ. 27 ಅವನು ಹೊಲದಲ್ಲಿ ಅವಳನ್ನು ಕಂಡನು; ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು, ಆದರೆ ರಕ್ಷಿಸುವವನು ಅವಳಿಗೆ ಯಾರೂ ಇಲ್ಲ. 28 ಒಬ್ಬ ಮನುಷ್ಯನು ನಿಶ್ಚಯಮಾಡದಿರುವ ಕನ್ಯಾ ಸ್ತ್ರೀಯಾದ ಹುಡುಗಿಯನ್ನು ಕಂಡು ಅವಳನ್ನು ಹಿಡಿದು ಅವಳ ಸಂಗಡ ಮಲಗುವಲ್ಲಿ ಅವನು ಸಿಕ್ಕಿದರೆ 29 ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು. 30 ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
1 ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು. 2 ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು. 3 ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು. 4 ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು. 5 ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು. 6 ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು. 7 ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ. 8 ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು. 9 ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಸೈನ್ಯ ದೊಡನೆ ಹೊರಟರೆ ದುಷ್ಟ ಕಾರ್ಯಗಳಿಗೆಲ್ಲಾ ದೂರ ವಾಗಿರುವಂತೆ ನಿನ್ನನ್ನು ಕಾಪಾಡಿಕೋ. 10 ರಾತ್ರಿಯಲ್ಲಿ ಸಂಭವಿಸಿದ ಕಾರ್ಯದ ದೆಸೆಯಿಂದ ಶುದ್ಧವಲ್ಲದ ಮನುಷ್ಯನು ನಿಮ್ಮಲ್ಲಿದ್ದರೆ ಅವನು ಪಾಳೆಯದ ಹೊರಗೆ ಹೋಗಬೇಕು; ಪಾಳೆಯದ ಒಳಗೆ ಬರಬಾರದು. 11 ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ. 12 ಇದಲ್ಲದೆ ನೀನು ಹೊರಗಡೆ ಹೋಗುವದಕ್ಕೆ ನಿನಗೆ ಪಾಳೆಯದ ಹೊರಗೆ ಸ್ಥಳವಿರಬೇಕು. 13 ನಿನ್ನ ಆಯುಧದೊಂದಿಗೆ ಮೊಳೆ ಇರಬೇಕು; ನೀನು ಹೊರಗೆ ಕೂತುಕೊಂಡಾಗ ಅದರಿಂದ ಅಗಿದು ನಿನ್ನಿಂದ ಹೊರಡು ವದನ್ನು ಮುಚ್ಚಬೇಕು. 14 ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು. 15 ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು. 16 ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು. 17 ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು. 18 ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ. 19 ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು. 20 ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು. 21 ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು. 22 ಆದರೆ ನೀನು ಪ್ರಮಾಣ ಮಾಡಿರದಿದ್ದರೆ ನಿನ್ನ ಮೇಲೆ ಪಾಪವಿರು ವದಿಲ್ಲ. 23 ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು. 24 ನಿನ್ನ ನೆರೆಯವನ ದ್ರಾಕ್ಷೇತೋಟಕ್ಕೆ ಬಂದರೆ ನಿನಗೆ ಮನಸ್ಸು ಬಂದ ಹಾಗೆ ತೃಪ್ತಿಯಾಗುವ ವರೆಗೆ ಹಣ್ಣುಗಳನ್ನು ತಿನ್ನಬಹುದು; 25 ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.
1 ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು. 2 ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು. 3 ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ 4 ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು. 5 ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು. 6 ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು. 7 ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು. 8 ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು; 9 ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ. 10 ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು. 11 ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು. 12 ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ. 13 ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು. 14 ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. 15 ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು. 16 ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು. 17 ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ. 18 ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ. 19 ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. 20 ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ. 21 ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. 22 ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
1 ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು. 2 ಇದಲ್ಲದೆ ಆ ದುಷ್ಟನು ಹೊಡೆಯಲ್ಪಡಲು ಯೋಗ್ಯನಾದರೆ ನ್ಯಾಯಾಧಿಪತಿಯು ಅವನನ್ನು ನೆಲಕ್ಕೆ ಬೀಳಿಸಿ ಅವನ ದುಷ್ಟತ್ವದ ಪ್ರಕಾರ ಅವನಿಗೆ ಲೆಕ್ಕದಿಂದ ಹೊಡಿಸಬೇಕು. 3 ನಾಲ್ವತ್ತು ಏಟು ಅವನಿಗೆ ಹೊಡಿಸಬಹುದು, ಹೆಚ್ಚಲ್ಲ ಇದಕ್ಕಿಂತ ಹೆಚ್ಚು. ಅವನಿಗೆ ಬಹಳ ಏಟುಗಳನ್ನು ಹೊಡೆದರೆ ನಿನ್ನ ಸಹೋದರನು ನಿನ್ನ ಕಣ್ಣುಗಳಿಗೆ ನೀಚನೆಂದು ಕಾಣಿಸಾನು. 4 ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು. 5 ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು. 6 ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು. 7 ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು. 8 ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ 9 ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು. 10 ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು. 11 ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ 12 ಅವಳ ಕೈಯನ್ನು ಕಡಿದುಹಾಕಬೇಕು; ನಿನ್ನ ಕಣ್ಣು ಕರುಣಿಸಬಾರದು. 13 ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು. 14 ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು. 15 ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು. 16 ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ. 17 ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ. 18 ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು. 19 ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
1 ಇದಲ್ಲದೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ 2 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು. 3 ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು. 4 ಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು. 5 ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು. 6 ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು. 7 ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು. 8 ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ 9 ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ. 10 ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು. 11 ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು. 12 ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ. 13 ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ. 14 ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ. 15 ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು. 16 ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು. 17 ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ. 18 ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂ 19 ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
1 ಇದಲ್ಲದೆ ಮೋಶೆ ಇಸ್ರಾಯೇಲಿನ ಹಿರಿಯರ ಸಂಗಡ ಜನರಿಗೆ--ನಾನು ನಿಮಗೆ ಈ ಹೊತ್ತು ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಕಾಪಾ ಡಬೇಕು. 2 ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ 3 ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು. 4 ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು. 5 ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು. 6 ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು. 7 ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು. 8 ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು. 9 ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ. 10 ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು. 11 ಇದಲ್ಲದೆ ಮೋಶೆ ಅದೇ ದಿವಸದಲ್ಲಿ ಜನ ರಿಗೆ-- 12 ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್. 13 ಶಪಿಸುವದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು. 14 ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್ ಜನರೆಲ್ಲರಿಗೆ ದೊಡ್ಡ ಶಬ್ದದಿಂದ-- 15 ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ. 16 ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. 17 ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. 18 ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. 19 ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. 20 ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. 21 ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. 22 ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. 23 ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. 24 ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. 25 ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. 26 ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
1 ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು. 2 ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. 3 ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ, 4 ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ. 5 ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ. 6 ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ. 7 ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು. 8 ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು. 9 ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು. 10 ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು; 11 ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು. 12 ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ. 13 ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ. 14 ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು. 15 ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. 16 ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; 17 ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. 18 ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. 19 ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. 20 ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು. 21 ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. 22 ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು. 23 ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. 24 ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು. 25 ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ. 26 ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ. 27 ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು. 28 ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು. 29 ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ. 30 ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. 31 ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ. 32 ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. 33 ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. 34 ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ. 35 ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು. 36 ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ. 37 ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ. 38 ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. 39 ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. 40 ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. 41 ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. 42 ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು. 43 ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ. 44 ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ. 45 ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು. 46 ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು. 47 ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ 48 ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. 49 ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ 50 ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. 51 ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. 52 ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. 53 ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. 54 ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. 55 ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. 56 ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ 57 ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. 58 ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ 59 ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. 60 ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. 61 ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು. 62 ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. 63 ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. 64 ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. 65 ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. 66 ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. 67 ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ. 68 ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
1 ಹೋರೇಬಿನಲ್ಲಿ ಅವರ ಸಂಗಡ ಮಾಡಿದ ಒಡಂಬಡಿಕೆಯ ಹೊರತಾಗಿ ಇಸ್ರಾ ಯೇಲ್ ಮಕ್ಕಳ ಸಂಗಡ ಮಾಡಬೇಕೆಂದು ಕರ್ತನು ಮೋಶೆಗೆ ಮೋವಾಬಿನ ದೇಶದಲ್ಲಿ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ; 2 ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ. 3 ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಗುರುತುಗಳನ್ನೂ ಅದ್ಭುತಗಳನ್ನೂ ನಿನ್ನ ಕಣ್ಣುಗಳು ನೋಡಿದವಲ್ಲಾ? 4 ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ. 5 ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ. 6 ನಾನೇ ನಿಮ್ಮ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವ ಹಾಗೆ ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸ ಇಲ್ಲವೆ ಮದ್ಯಗಳನ್ನು ಕುಡಿಯಲಿಲ್ಲ. 7 ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು 8 ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು. 9 ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು. 10 ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ; 11 ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ 12 ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ. 13 ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ. 14 ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ; 15 ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ. 16 ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ? 17 ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ? 18 ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು. 19 ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ 20 ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. 21 ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. 22 ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ 23 ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- 24 ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. 25 ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, 26 ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ 27 ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. 28 ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ. 29 ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
1 ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ 2 ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ 3 ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು. 4 ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು. 5 ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು. 6 ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು. 7 ಇದಲ್ಲದೆ ನಿನ್ನ ದೇವರಾದ ಕರ್ತನು ಆ ಶಾಪಗಳನ್ನೆಲ್ಲಾ ನಿನ್ನ ಶತ್ರುಗಳ ಮೇಲೆಯೂ ನಿನ್ನನ್ನು ಹಿಂಸಿಸಿದ ನಿನ್ನ ಹಗೆಯವರ ಮೇಲೆಯೂ ಹಾಕುವನು. 8 ಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ. 9 ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು. 10 ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು. 11 ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ. 12 ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ. 13 ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ. 14 ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ. 15 ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ. 16 ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು. 17 ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ 18 ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ. 19 ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. 20 ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
1 ಆಗ ಮೋಶೆ ಹೋಗಿ ಇಸ್ರಾಯೇಲ್ಯರಿಗೆಲ್ಲಾ ಈ ಮಾತುಗಳನ್ನು ಹೇಳಿದನು. 2 ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ. 3 ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು. 4 ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು. 5 ನಾನು ನಿಮಗೆ ಆಜ್ಞಾಪಿಸಿದ ಸಮಸ್ತ ಆಜ್ಞೆಯ ಪ್ರಕಾರ ನೀವು ಅವರಿಗೆ ಮಾಡುವಹಾಗೆ ಕರ್ತನು ಅವರನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವನು. 6 ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು. 7 ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು. 8 ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು. 9 ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು. 10 ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ 11 ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು. 12 ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು. 13 ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು. 14 ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು. 15 ಆಗ ಕರ್ತನು ಗುಡಾರದೊಳಗೆ ಮೇಘಸ್ತಂಭದಲ್ಲಿ ಕಾಣಿಸಿ ಕೊಂಡನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಮೇಲೆ ನಿಂತಿತು. 16 ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು. 17 ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. 18 ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು. 19 ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು. 20 ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು. 21 ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು. 22 ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು. 23 ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು. 24 ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ 25 ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ-- 26 ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ. 27 ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು? 28 ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು. 29 ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು. 30 ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
1 ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು. 2 ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು. 3 ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ. 4 ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ. 5 ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ. 6 ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ. 7 ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು. 8 ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು. 9 ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು. 10 ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು. 11 ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ 12 ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ. 13 ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು. 14 ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ. 15 ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. 16 ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. 17 ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. 18 ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. 19 ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. 20 ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ. 21 ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. 22 ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. 23 ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. 24 ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. 25 ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು. 26 ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು. 27 ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು. 28 ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ. 29 ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು! 30 ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು? 31 ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ. 32 ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ. 33 ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ. 34 ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ? 35 ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ. 36 ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು. 37 ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ, 38 ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ. 39 ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ. 40 ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ. 41 ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. 42 ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು. 43 ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ. 44 ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು. 45 ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದಾಗ ಅವರಿಗೆ-- 46 ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು. 47 ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು. 48 ಅದೇ ದಿವಸದಲ್ಲಿ ಕರ್ತನು ಮೋಶೆಗೆ-- 49 ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು, 50 ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು. 51 ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ. 52 ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
1 ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ-- 2 ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು. 3 ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ. 4 ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು. 5 ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು. 6 ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ. 7 ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು. 8 ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು; 9 ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ. 10 ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು. 11 ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು. 12 ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು. 13 ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ 14 ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ 15 ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ 16 ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ. 17 ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು. 18 ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು. 19 ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು. 20 ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ. 21 ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು. 22 ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು. 23 ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು. 24 ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ. 25 ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು. 26 ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ. 27 ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು. 28 ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು. 29 ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
1 ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ 2 ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ 3 ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು. 4 ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು. 5 ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು. 6 ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ. 7 ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ. 8 ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು. 9 ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು. 10 ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ 11 ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂ 12 ಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ .
1 ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ-- 2 ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು. 3 ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು. 4 ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು. 5 ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ. 6 ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ. 7 ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ. 8 ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ. 9 ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು. 10 ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ ಆಜ್ಞಾಪಿಸಿ-- 11 ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು. 12 ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧಗೋತ್ರದವರಿಗೂ ಹೇಳಿದ್ದೇನಂದರೆ -- 13 ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು. 14 ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ 15 ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು. 16 ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು. 17 ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ. 18 ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
1 ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು. 2 ಆದರೆ ಯೆರಿಕೋವಿನ ಅರಸ ನಿಗೆ--ಇಗೋ, ಇಸ್ರಾಯೇಲ್ ಮನುಷ್ಯರು ದೇಶವನ್ನು ಪರಿಶೋಧನೆ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾ ರೆಂದು ತಿಳಿಸಲ್ಪಟ್ಟಿತು. 3 ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು. 4 ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು. 5 ಬಾಗಲನ್ನು ಮುಚ್ಚುವ ವೇಳೆಯಲ್ಲಿ ಆ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು. 6 ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು. 7 ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು. 8 ಆದರೆ ಈ ಮನುಷ್ಯರು ಮಲಗುವದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ ಅವರ ಬಳಿಗೆ ಬಂದು ಅವರಿಗೆ-- 9 ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. 10 ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. 11 ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ. 12 ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು. 13 ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು. 14 ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು. 15 ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು. 16 ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು. 17 ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು. 18 ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು. 19 ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು. 20 ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು. 21 ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು. 22 ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು. 23 ಆ ಇಬ್ಬರು ಮನುಷ್ಯರು ಹಿಂತಿರುಗಿಕೊಂಡು ಬೆಟ್ಟದಿಂದ ಇಳಿದು ನದಿಯನ್ನು ದಾಟಿ ನೂನನ ಮಗನಾದ ಯೆಹೋಶು ವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವನಿಗೆ ವಿವರಿಸಿದರು. 24 ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
1 ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು. 2 ಮೂರು ದಿವಸಗಳಾದ ಮೇಲೆ ಅಧಿಕಾರಿ ಗಳು ದಂಡಿನೊಳಗೆ ಹಾದು ಹೋಗಿ 3 ಜನರಿಗೆ ಆಜ್ಞಾಪಿಸಿ--ಯಾಜಕರಾದ ಲೇವಿಯರು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವದನ್ನು ನೋಡುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು. 4 ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು. 5 ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು. 6 ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು. 7 ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು. 8 ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು. 9 ಆಗ ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಕರ್ತನ ವಾಕ್ಯಗಳನ್ನು ಕೇಳಿರಿ ಅಂದನು. 10 ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ 11 ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು. 12 ಆದದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ. 13 ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು. 14 ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು. 15 ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. 16 ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು. 17 ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
1 ಜನರೆಲ್ಲರು ಯೊರ್ದನನ್ನು ದಾಟಿ ಮುಗಿಸಿದಾಗ ಕರ್ತನು ಯೆಹೋಶುವ ನೊಂದಿಗೆ ಮಾತನಾಡಿ-- 2 ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಾಗಿ ಹನ್ನೆರಡು ಮಂದಿಯನ್ನು ತೆಗೆದು ಕೊಂಡು 3 ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು. 4 ಆಗ ಯೆಹೋಶುವನು ಇಸ್ರಾ ಯೇಲ್ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು. 5 ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ. 6 ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ 7 ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು. 8 ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು. 9 ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ. 10 ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು. 11 ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು. 12 ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು. 13 ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು. 14 ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು. 15 ಕರ್ತನು ಯೆಹೋಶುವನ ಸಂಗಡ ಮಾತ ನಾಡಿ -- 16 ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು. 17 ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು. 18 ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು. 19 ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು. 20 ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು. 21 ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ 22 ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು. 23 ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂ 24 ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
1 ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು. 2 ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್ ಮಕ್ಕಳಿಗೆ ಸುನ್ನತಿಮಾಡು ಅಂದನು. 3 ಆಗ ಯೆಹೋಶುವನು ತಾನು ಹರಿತವಾದ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್ ಮಕ್ಕಳಿಗೆ ಸುನ್ನತಿ ಗುಡ್ಡದಲ್ಲಿ ಸುನ್ನತಿ ಮಾಡಿದನು. 4 ಯೆಹೋಶುವನು ಸುನ್ನತಿಮಾಡಿದ ಕಾರಣವೇನಂದರೆ--ಐಗುಪ್ತದಿಂದ ಹೊರಟ ಸಕಲ ಜನರು ಗಂಡಸರಾದ ಯುದ್ಧದ ಮನುಷ್ಯರೆಲ್ಲರು ಐಗುಪ್ತದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗ ದಲ್ಲಿ ಸತ್ತು ಹೋದರು. 5 ಐಗುಪ್ತದಿಂದ ಹೊರಟ ಜನರೆಲ್ಲರೂ ಸುನ್ನತಿಮಾಡಲ್ಪಟ್ಟಿದ್ದರು; ಆದರೆ ಐಗುಪ್ತ ದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗದಲ್ಲಿ ಹುಟ್ಟಿದ ಸಕಲ ಜನರು ಸುನ್ನತಿಮಾಡಲ್ಪಡಲಿಲ್ಲ. 6 ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು. 7 ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು. 8 ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು. 9 ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್ ಎಂದು ಹೇಳಲ್ಪಡುವದು. 10 ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು. 11 ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು. 12 ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು. 13 ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು. 14 ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು. 15 ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
1 ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು. 2 ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ. 3 ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು. 4 ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು. 5 ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು. 6 ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು. 7 ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು. 8 ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು. 9 ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು. 10 ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು. 11 ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು. 12 ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು. 13 ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು. 14 ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು. 15 ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು. 16 ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು. 17 ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು. 18 ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ. 19 ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು. 20 ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು. 21 ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು. 22 ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. 23 ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು. 24 ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು. 25 ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು. 26 ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು. 27 ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
1 ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು. 2 ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ 3 ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು. 4 ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು. 5 ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು. 6 ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು. 7 ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು. 8 ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ. 9 ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು. 10 ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು? 11 ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. 12 ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ. 13 ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ. 14 ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ. 15 ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು. 16 ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು. 17 ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು. 18 ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು. 19 ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು. 20 ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ. 21 ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು. 22 ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು. 23 ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು. 24 ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು. 25 ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟು 26 ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
1 ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ. 2 ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು. 3 ಆಗ ಆಯಿಗೆ ಏರಿ ಹೋಗಲು ಯೆಹೋಶುವನೂ ಸಮಸ್ತ ಯುದ್ಧಸ್ಥರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು. 4 ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ. 5 ಆದರೆ ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸವಿಾಪಕ್ಕೆ ಸೇರುವೆವು; ಆಗ ಆಗುವದೇನಂದರೆ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು. 6 ಆಗ ಅವರು--ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿ ಹೋಗುತ್ತಾರೆಂದು ಹೇಳಿ (ನಮ್ಮ ಹಿಂದೆ ಹೊರಡುವರು;) ಆದರೆ ನಾವು ಅವರನ್ನು ಪಟ್ಟಣದ ಬಳಿಯಿಂದ ಎಳಕೊಳ್ಳುವ ವರೆಗೂ ಅವರ ಮುಂದೆ ಓಡಿ ಹೋಗುವೆವು. 7 ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು. 8 ನೀವು ಪಟ್ಟಣವನ್ನು ಹಿಡಿದ ತರುವಾಯ ಬೆಂಕಿ ಹಚ್ಚಿ ಅದನ್ನು ಸುಟ್ಟುಬಿಟ್ಟು ಕರ್ತನ ಆಜ್ಞೆಯ ಪ್ರಕಾರವೇ ನೀವು ಮಾಡಬೇಕು. ನೋಡು, ನಾನು ಇದನ್ನು ನಿಮಗೆ ಆಜ್ಞಾಪಿಸಿದೆನು ಅಂದನು. 9 ಯೆಹೋ ಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿಗೂ ನಡುವೆ ಆಯಿಗೆ ಪಶ್ಚಿಮದ ಕಡೆ ಇಳುಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಇಳುಕೊಂಡನು. 10 ಉದಯ ಕಾಲದಲ್ಲಿ ಯೆಹೋಶುವನು ಎದ್ದು ಜನರನ್ನು ಲೆಕ್ಕ ಮಾಡಿ ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿಗೆ ಏರಿ ಹೋದರು. 11 ಅವನ ಸಂಗಡ ಇದ್ದ ಯುದ್ಧಸ್ಥರೆಲ್ಲಾ ನಡೆದು ಪಟ್ಟಣದ ಸವಿಾಪವಾಗಿ ಬಂದು ಸೇರಿ ಆಯಿಗೆ ಉತ್ತರ ದಿಕ್ಕಿನಲ್ಲಿ ಇಳಿದುಕೊಂಡರು. ಆದರೆ ಆಯಿಗೂ ಅವರಿಗೂ ಮಧ್ಯದಲ್ಲಿ ಒಂದು ತಗ್ಗು ಇತ್ತು. 12 ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು. 13 ಪಟ್ಟಣಕ್ಕೆ ಉತ್ತರ ದಲ್ಲಿರುವ ಸಕಲ ಸೈನ್ಯದ ಜನರನ್ನೂ ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಹಾಕುವವರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿನ ಮಧ್ಯಕ್ಕೆ ಹೋದನು. 14 ಆಯಿಯ ಅರಸನು ಇದನ್ನು ಕಂಡಾಗ ಆ ಪಟ್ಟಣದ ಜನರು ತ್ವರೆಪಟ್ಟು ಉದಯ ಕಾಲದಲ್ಲಿ ಎದ್ದು ನಿಶ್ಚಯಿಸಿದ ವೇಳೆಯಲ್ಲಿ ಅವನೂ ಅವನ ಜನರೆಲ್ಲರೂ ಇಸ್ರಾಯೇಲ್ಯರಿಗೆ ಎದುರಾಗಿ ಯುದ್ಧ ಮಾಡಲು ಬೈಲಿಗೆ ಹೊರಟರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವ ವರನ್ನು ಅರಿಯದೆ ಇದ್ದನು. 15 ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು. 16 ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು. 17 ಆಯಿಯಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇ ಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲ್ಯರನ್ನು ಹಿಂದಟ್ಟಿದರು. 18 ಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು. 19 ಆಗ ಹೊಂಚಿಕೊಂಡಿ ದ್ದವರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಅವನು ತನ್ನ ಕೈಯನ್ನು ಚಾಚುತ್ತಲೇ ಪಟ್ಟಣಕ್ಕೆ ಬಂದು ಅದನ್ನು ಹಿಡಿದು ತ್ವರೆಯಾಗಿ ಬೆಂಕಿಯನ್ನು ಹಚ್ಚಿದರು. 20 ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು. 21 ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು. 22 ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು. 23 ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು. 24 ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು. 25 ಆ ದಿನದಲ್ಲಿ ಬಿದ್ದ ಸ್ತ್ರೀ ಪುರುಷರಾದ ಆಯಿಯ ಮನುಷ್ಯರೆಲ್ಲರು ಹನ್ನೆರಡು ಸಾವಿರ ಜನರು. 26 ಯೆಹೋಶುವನು ಆಯಿಯ ನಿವಾಸಿಗಳೆಲ್ಲರನ್ನು ಸಂಪೂರ್ಣ ನಾಶಮಾಡುವ ವರೆಗೂ ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ. 27 ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು. 28 ಯೆಹೋಶುವನು ಆಯಿಯನ್ನು ಸುಟ್ಟುಬಿಟ್ಟು ಅದನ್ನು ಈ ವರೆಗೆ ಇರುವ ಹಾಗೆ ಎಂದಿಗೂ ಹಾಳಾಗಿ ಬಿದ್ದಿರುವ ಮಣ್ಣುದಿನ್ನೆ ಯನ್ನಾಗಿ ಮಾಡಿದನು. 29 ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು. 30 ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು. 31 ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. 32 ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು. 33 ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು. 34 ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು. 35 ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
1 ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ, 2 ಅವರು ಯೆಹೋಶುವನ ಸಂಗಡವೂ ಇಸ್ರಾಯೇಲ್ಯರ ಸಂಗಡವೂ ಯುದ್ಧ ಮಾಡುವದಕ್ಕೆ ಒಟ್ಟಾಗಿ ಕೂಡಿಕೊಂಡರು. 3 ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ 4 ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು 5 ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು 6 ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು. 7 ಆಗ ಇಸ್ರಾಯೇಲ್ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು. 8 ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು. 9 ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ 10 ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು. 11 ನಮ್ಮ ಹಿರಿಯರೂ ನಮ್ಮ ದೇಶ ನಿವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇ ನಂದರೆ--ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದು ಕೊಂಡು ಅವರೆದುರಿಗೆ ಹೋಗಿ ಅವರಿಗೆ--ನಾವು ನಿಮ್ಮ ಸೇವಕರು; ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಎಂದು ಹೇಳಿರಿ ಅಂದರು. 12 ನಾವು ನಿಮ್ಮ ಬಳಿಗೆ ಹೊರಟ ದಿನದಲ್ಲಿ ನಮ್ಮ ಪ್ರಯಾಣಕ್ಕೆ ಮನೆಯಿಂದ ಬಿಸಿ ರೊಟ್ಟಿಗಳನ್ನು ತೆಗೆದು ಕೊಂಡಿದ್ದೆವು; ಆದರೆ ಈಗ ಅವು ಒಣಗಿಹೋಗಿವೆ. 13 ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು. 14 ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು. 15 ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು. 16 ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ ತಮ್ಮಲ್ಲಿ ಇರುವವರೆಂದೂ ಕೇಳಿ ದರು. 17 ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಅವರ ಪಟ್ಟಣ ಗಳಿಗೆ ಬಂದರು. 18 ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು. 19 ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು. 20 ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು. 21 ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು. 22 ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು? 23 ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು. 24 ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು. 25 ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು. 26 ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟು 27 ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
1 ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ 2 ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು. 3 ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ-- 4 ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು. 5 ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು. 6 ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು. 7 ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು. 8 ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು. 9 ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು. 10 ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು. 11 ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು. 12 ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು. 13 ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು. 14 ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು. 15 ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು. 16 ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು. 17 ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು. 18 ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ. 19 ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು. 20 ಯೆಹೋಶುವನೂ ಇಸ್ರಾಯೇಲ್ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು. 21 ಜನರೆಲ್ಲಾ ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸಮಾಧಾನದಿಂದ ಹಿಂತಿರುಗಿ ಬಂದರು; ಇಸ್ರಾಯೇಲ್ ಮಕ್ಕಳಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಅಲ್ಲಾಡಿಸಲಿಲ್ಲ. 22 ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು. 23 ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು. 24 ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು. 25 ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು. 26 ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು. 27 ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು. 28 ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು. 29 ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು. 30 ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು. 31 ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು. 32 ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು. 33 ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು. 34 ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ 35 ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು. 36 ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ 37 ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು. 38 ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ 39 ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು. 40 ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು. 41 ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು. 42 ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು. 43 ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
1 ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ 2 ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ 3 ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು. 4 ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು. 5 ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು. 6 ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು. 7 ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು. 8 ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು. 9 ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು. 10 ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು. 11 ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು. 12 ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು. 13 ಆದರೆ ತಮ್ಮ ದಿನ್ನೆಯ ಮೇಲೆ ನಿಂತಿರುವ ಪಟ್ಟಣ ಗಳನ್ನೆಲ್ಲಾ ಇಸ್ರಾಯೇಲ್ ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟು ಬಿಟ್ಟನು. 14 ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ. 15 ಕರ್ತನು ತನ್ನ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿ ದನು. ಯೆಹೋಶುವನು ಹಾಗೆಯೇ ಮಾಡಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಅವನು ಮಾಡದೆ ಉಳಿಸಲಿಲ್ಲ. 16 ಈ ಪ್ರಕಾರ ಯೆಹೋಶುವನು ಸೇಯಾರಿಗೆ ಏರಿ ಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ತಗ್ಗಿನಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ಎಲ್ಲಾ 17 ಗೋಷೆನ್ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು. 18 ಯೆಹೋಶುವನು ಬಹಳಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧಮಾಡುತ್ತಿದ್ದನು. 19 ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು. 20 ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು. 21 ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು. 22 ಅನಾಕ್ಯರು ಇಸ್ರಾಯೇಲ್ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು. 23 ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
1 ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ: 2 ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ 3 ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ 4 ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ 5 ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ. 6 ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು. 7 ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ 8 ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ-- 9 ಯೆರಿಕೋವಿನ ಅರಸನು ಒಬ್ಬನು; ಬೇತೇಲ್ ಬಳಿಯಲ್ಲಿರುವ ಆಯಿಯ ಅರಸನು ಒಬ್ಬನು; 10 ಯೆರೂಸಲೇಮಿನ ಅರಸನು ಒಬ್ಬನು; ಹೆಬ್ರೋನಿನ ಅರಸನು ಒಬ್ಬನು; 11 ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು; 12 ಎಗ್ಲೋನಿನ ಅರಸನು ಒಬ್ಬನು; ಗೆಜೆರಿನ ಅರಸನು ಒಬ್ಬನು; 13 ದೆಬೀರಿನ ಅರಸನು ಒಬ್ಬನು; ಗೆದೆರಿನ ಅರಸನು ಒಬ್ಬನು; 14 ಹೊರ್ಮದ ಅರಸನು ಒಬ್ಬನು; ಅರಾದಿನ ಅರಸನು ಒಬ್ಬನು; 15 ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು; 16 ಮಕ್ಕೇದದ ಅರಸನು ಒಬ್ಬನು; ಬೇತೇಲಿನ ಅರಸನು ಒಬ್ಬನು; 17 ತಪ್ಪೂಹದ ಅರಸನು ಒಬ್ಬನು; ಹೇಫೆರಿನ ಅರಸನು ಒಬ್ಬನು; 18 ಅಫೇಕದ ಅರಸನು ಒಬ್ಬನು; ಲಷ್ಷಾರೋನಿನ ಅರಸನು ಒಬ್ಬನು; 19 ಮಾದೋನಿನ ಅರಸನು ಒಬ್ಬನು; ಹಾಚೋರಿನ ಅರಸನು ಒಬ್ಬನು; 20 ಶಿಮ್ರೋನ್ಮೆರೋನಿನ ಅರಸನು ಒಬ್ಬನು; ಅಕ್ಷಾಫಿನ ಅರಸನು ಒಬ್ಬನು; 21 ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು; 22 ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು; 23 ದೋರ್ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು; 24 ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
1 ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ. 2 ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ, 3 ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ; 4 ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು; 5 ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ. 6 ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು. 7 ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು. 8 ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ: 9 ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ 10 ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ 11 ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ 12 ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು. 13 ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ. 14 ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ. 15 ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು. 16 ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು 17 ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್, 18 ಯಹಚಾ ಕೆದೇಮೋತ್, ಮೇಫಾಯತ್, 19 ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್, 20 ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್, 21 ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು. 22 ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು. 23 ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ. 24 ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು. 25 ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು; 26 ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು; 27 ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು. 28 ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ. 29 ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು. 30 ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು. 31 ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು. 32 ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ. 33 ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
1 ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ. 2 ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು. 3 ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; 4 ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು. 5 ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು. 6 ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ; 7 ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು. 8 ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು. 9 ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು. 10 ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ. 11 ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ. 12 ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು. 13 ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು. 14 ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು. 15 ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
1 ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್ ಅರಣ್ಯದ ದಕ್ಷಿಣ ಭಾಗವಾಗಿದೆ. 2 ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ 3 ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ 4 ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ. 5 ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು; 6 ಅಲ್ಲಿಂದ ಬೇತ್ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ 7 ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್ಷೆಮೆಷಿನ ನೀರಿಗೂ ಅಲ್ಲಿಂದ ಏನ್ರೋಗೆಲಿಗೂ 8 ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ 9 ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ 10 ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್ಷೆ ಮೆಷಿಗೆ ಇಳಿದು ತಿಮ್ನಾಗೆ 11 ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು. 12 ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ. 13 ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು. 14 ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು. 15 ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್ ಸೇಫರ್ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ 16 ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು. 17 ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು. 18 ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು. 19 ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು. 20 ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ-- 21 ದಕ್ಷಿಣ ಕಡೆಗಿರುವ ಕಟ್ಟ ಕಡೆಯ ಎದೋಮಿನ ಮೇರೆಗೆ ಸರಿಯಾಗಿ ಯೂದನ ಮಕ್ಕಳ ಗೋತ್ರಕ್ಕೆ ಇರುವ ಪಟ್ಟಣಗಳು ಯಾವವಂದರೆ--ಕಬ್ಜೇಲ್, ಏದೆರ್, ಯಾಗೂರ್, 22 ಕೀನಾ, ದೀಮೋನಾ, ಅದಾದಾ, 23 ಕೇದೆಷ್, ಹಾಚೋರ್, ಇತ್ನಾನ್, 24 ಜೀಫ್, ಟೆಲೆಮ್, ಬೆಯಾಲೋತ್, 25 ಹಾಚೋರ್, ಹದತ್ತಾ, ಕಿರ್ಯೋತ್, ಹೆಜ್ರೋನ್ ಎಂಬ ಹಾಚೋರ್ 26 ಅಮಾಮ್, ಶೆಮ, ಮೋಲಾದ 27 ಹಚರ್ಗದ್ದಾ, ಹೆಷ್ಮೋನ್, ಬೇತ್ಪೆಲೆಟ್, 28 ಹಚರ್ಷೊವಾಲ್, ಬೇರ್ಷೆಬ, ಬಿಜ್ಯೋತ್ಯಾ 29 ಬಾಲಾ, ಇಯ್ಯಾಮ್, ಎಚೆಮ್, 30 ಎಲ್ಟೋಲದ್, ಕೆಸೀಲ್, ಹೊರ್ಮಾ, 31 ಚಿಕ್ಲಗ್ ಮದ್ಮನ್ನಾ, ಸನ್ಸನ್ನಾ, 32 ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು. 33 ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ನಾ, 34 ಜನೋಹ, ಏಂಗನ್ನೀಮ್, 35 ತಪ್ವೂಹ, ಏನಾಮ್ ಯರ್ಮೂತ್, 36 ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು; 37 ಚೆನಾನ್, ಹದಾಷಾ, ಮಿಗ್ದಲ್ಗಾದ್, 38 ದಿಲಾನ್, ಮಿಚ್ವೆ, ಯೊಕ್ತೇಲ್, 39 ಲಾಕೀಷ್, ಬೊಚ್ಕತ್, ಎಗ್ಲೋನ್ 40 ಕಬ್ಬೋನ್, ಲಹ್ಮಾಸ್, ಕಿತ್ಲೀಷ್, ಗೆದೇರೋತ್, ಬೇತ್ದಾಗೋನ್, ನಾಮಾ, 41 ಮಕ್ಕೇದಾ ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ; 42 ಇದಲ್ಲದೆ ಲಿಬ್ನಾ, ಎತೆರ್, ಆಷಾನ್, 43 ಇಪ್ತಾಹ, 44 ಅಶ್ನಾ, ನೆಚೀಬ್, ಕೆಯಾಲಾ, ಅಕ್ಜೀಬ್, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು; 45 ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ. 46 ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂ 47 ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ 48 ಬೆಟ್ಟಗಳಲ್ಲಿರುವ ಶಾವಿಾರ್, ಯತ್ತೀರ್, ಸೋಕೋ, 49 ದನ್ನಾ, ದೆಬೀರ್ ಎಂಬ ಕಿರ್ಯತ್ಸನ್ನಾ, 50 ಅನಾಬ್, ಎಷ್ಟೆಮೋ, ಆನೀಮ್, 51 ಗೋಷೆನ್, ಹೋಲೋನ್ಗಿಲೋ ಎಂಬ ಹನ್ನೊಂದು ಪಟ್ಟಣ ಗಳು ಅವುಗಳ ಗ್ರಾಮಗಳು. 52 ಅರಬ್, ದೂಮಾ, ಎಷಾನ್, 53 ಯಾನೂಮ್, ಬೇತ್ತಪ್ಪೂಹ, ಅಫೇಕಾ. 54 ಹುಮ್ಟಾ, ಹೆಬ್ರೋನೆಂಬ ಕಿರ್ಯತ್ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳೂ. 55 ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ, 56 ಇಜ್ರೇಲ್, ಯೊಗ್ದೆಯಾಮ್, ಜನೋಹ, 57 ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. 58 ಹಲ್ಹೂಲ್, ಬೇತ್ಚೂರ್, ಗೆದೋರ್, 59 ಮಾರಾತ್, ಬೇತನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. 60 ಕಿರ್ಯತ್ಯಾರೀಮ್ ಎಂಬ ಕಿರ್ಯತ್ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. 61 ಅರಣ್ಯದಲ್ಲಿರುವ ಬೇತ್ಅರಾಬಾ, ಮಿದ್ದೀನ್, ಸೆಕಾಕಾ, 62 ನಿಬ್ಷಾನ್, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು. 63 ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
1 ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ 2 ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ 3 ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು. 4 ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯಾಮರು ತಮಗೆ ಬಾಧ್ಯ ವಾಗಿ ತೆಗೆದುಕೊಂಡರು. 5 ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್ಹೋರೋನಿನ ವರೆಗೂ ಇತ್ತು. 6 ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ 7 ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು. 8 ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ. 9 ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು. 10 ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
1 ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು; 2 ಮನಸ್ಸೆಯ ಉಳಿದ ಮಕ್ಕಳಾದ ಅಬೀಯೇಜೆರಿನ ಮಕ್ಕಳಿಗೂ ಹೇಲೆಕನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮನ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆವಿಾದನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಬಾಧ್ಯತೆ ಉಂಟಾಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗ ನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು. 3 ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು. 4 ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು. 5 ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು. 6 ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್ ದೇಶ ದೊರೆಯಿತು. 7 ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು. 8 ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು. 9 ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು. 10 ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು. 11 ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು. 12 ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು. 13 ಆದರೆ ಇಸ್ರಾಯೇಲ್ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು. 14 ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು. 15 ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು. 16 ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು. 17 ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯಾಮನಿಗೂ ಮನಸ್ಸೆಗೂ--ನೀವು ಮಹಾ ಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವದು; 18 ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.
1 ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು. 2 ಆದರೆ ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ಬಾಧ್ಯತೆ ಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು. 3 ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ? 4 ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು. 5 ಅದನ್ನು ಅವರು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೂದಗೋತ್ರದವರೂ ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲಸಬೇಕು. 6 ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು. 7 ಆದರೆ ಲೇವಿಯರಿಗೆ ನಿಮ್ಮ ಸಂಗಡ ಪಾಲಿಲ್ಲ; ಅವರಿಗೆ ಕರ್ತನ ಯಾಜಕತ್ವವೇ ಅವರ ಬಾಧ್ಯತೆಯಾಗಿದೆ. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನಿನ ಆಚೆ ಮೂಡಣ ದಿಕ್ಕಿನಲ್ಲಿ ಕರ್ತನ ಸೇವಕನಾದ ಮೋಶೆಯು ಕೊಟ್ಟ ತಮ್ಮ ಬಾಧ್ಯತೆಯನ್ನು ತಕ್ಕೊಂಡಿದ್ದಾರೆ ಅಂದನು. 8 ಆ ಮನುಷ್ಯರು ಹೊರಟುಹೋದರು. ಯೆಹೋಶುವನು ದೇಶವನ್ನು ವಿವರಿಸುವದಕ್ಕಾಗಿ ಹೋದವರಿಗೆ ಅಪ್ಪಣೆ ಕೊಟ್ಟು--ನೀವು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಅದರ ವಿವರಣೆಯನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿ; ನಾನು ಶೀಲೋವಿನಲ್ಲಿ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ತಿರಿಗಿ ಬರಲಿ ಎಂದು ಹೇಳಿದನು. 9 ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು. 10 ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು. 11 ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ. 12 ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು. 13 ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು. 14 ಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು. 15 ಆ ಮೇರೆಯಾದ ದಕ್ಷಿಣ ಮೂಲೆಯು ಕಿರ್ಯತ್ಯಾರೀಮ್ ತುದಿಯಿಂದ ಹೊರಟು ಪಶ್ಚಿಮಕ್ಕೆ ಹೋಗಿ ನೆಫ್ತೋಹದ ಜಲಬುಗ್ಗೆಯ ಪರಿಯಂತರ ಹೊರಟು 16 ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್ರೋಗೆಲಿಗೂ ಏರಿ 17 ಅಲ್ಲಿಂದ ಉತ್ತರಕ್ಕೆ ಹೋಗಿ ಏನ್ಷೆಮೆಸ್ಗೂ ಅಲ್ಲಿಂದ ಅದುವಿಾಮ್ ಎಂಬ ಕೊಳ್ಳಿಗೆ ಎದುರಾದ ಗೆಲೀಲೋತಿಗೂ ಅಲ್ಲಿಂದ ರೂಬೇನನ ಕುಮಾರನಾದ ಬೋಹನನ ಬಂಡೆಗಲ್ಲು ಏರಿ ಹೋಗಿ 18 ಅಲ್ಲಿಂದ ಅರಾಬಾಕ್ಕೆ ಎದುರಾಗಿ ಉತ್ತರ ಭಾಗಕ್ಕೆಹೊರಟು ಅರಾಬಾಕ್ಕೆ ಇಳಿದು ಬಂದು 19 ಅಲ್ಲಿಂದ ಆ ಮೇರೆ ಬೇತ್ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ. 20 ಮೂಡಣ ಭಾಗದಲ್ಲಿ ಯೊರ್ದನ್ ಅದರ ಮೇರೆ ಯಾಗಿತ್ತು. ಇದು ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಒಳಗಿರುವ ಬಾಧ್ಯತೆಯಾಗಿತ್ತು. 21 ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್ಹೋಗ್ಲಾ, ಕೆಚ್ಚೀಚ್ ತಗ್ಗು 22 ಬೇತ್ಅರಾಬಾ, ಚೆಮಾರಯಿಮ್, ಬೇತೇಲ್, 23 ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ, 24 ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ 25 ಗಿಬ್ಯೋನ್, ರಾಮಾ; ಬೇರೋತ್, 26 ಮಿಚ್ಪೆ, ಕೆಫೀರಾ, ಮೋಚಾ, 27 ರೆಕೆಮ್, ಇರ್ಪೇಲ್, ತರಲಾ, 28 ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
1 ಎರಡನೇ ಚೀಟು ಸಿಮೆಯೋನನಿಗೆ ಬಿತ್ತು. ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರವಾಯಿತು. ಅವರ ಬಾಧ್ಯತೆ ಯೂದನ ಮಕ್ಕಳ ಬಾಧ್ಯೆತೆಯ ಮಧ್ಯದಲ್ಲಿತ್ತು. 2 ಅವರ ಬಾಧ್ಯತೆಯಲ್ಲಿ ಸೇರಿದ ಪಟ್ಟಣಗಳು ಯಾವವಂದರೆ: ಬೇರ್ಷೆಬ, ಶೆಬ, ಮೋಲಾದಾ, 3 ಹಚರ್ಷೂವಾಲ್, ಬಾಲಾ, ಎಚೆಮ್, 4 ಎಲ್ತೋಲದ್, ಬೆತೂಲ್, ಹೋರ್ಮಾ, 5 ಚಿಕ್ಲಗ್, ಬೇರ್ತ್ಮ್ಕಾಬೋತ್, ಹಚರ್ಸೂಸಾ, 6 ಭೇತ್ಲೆ ಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಅವುಗಳ ಗ್ರಾಮಗಳು 7 ಆಯಿನ್, ರಿಮ್ಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು; 8 ಈ ಪಟ್ಟಣಗಳ ಸುತ್ತಲೂ ಬಾಲತ್ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು. 9 ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು. 10 ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು. 11 ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು. 12 ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ 13 ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್ಹೇಫೆರನ್ನು ಎತ್ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು 14 ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು. 15 ಈ ಮೇರೆಯಲ್ಲಿರುವ ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ 16 ಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು. 17 ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ 18 ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್, ಶೂನೇಮ್, 19 ಹಫಾರಯಿಮ್, ಶೀಯೋನ್, ಅನಾಹರತ್, 20 ರಬ್ಬೀತ್, ಕಿಷ್ಯೋನ್, ಎಬೆಜ್, 21 ರೆಮೆತ್, ಏಂಗನ್ನೀಮ್, ಏನ್ಹದ್ದಾ, ಬೇತ್ಪಚ್ಚೇಚ್ ಎಂಬ ತೀರಗಳನ್ನು ಸುತ್ತಿ ಅಲ್ಲಿಂದ 22 ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು; 23 ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರಿಗೆ ಉಂಟಾದ ಬಾಧ್ಯತೆಯು. 24 ಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು. 25 ಅವರ ಮೇರೆ ಯಾವವಂದರೆ ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್ 26 ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್ಲಿಬ್ನತ್ಗೂ ಹೋಗಿ 27 ಅಲ್ಲಿಂದ ಸೂರ್ಯೋದಯದ ಕಡೆ ಬೇತ್ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್ ಏಮೆಕ್ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ 28 ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು 29 ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು. 30 ಅದಕ್ಕೆ ಉಮ್ಮಾ, ಅಫೇಕ್ ರೆಹೋಬ್ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ. 31 ಇದೇ ಆಶೇರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ಬಾಧ್ಯತೆಯಾಗಿದ್ದವು. 32 ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು. 33 ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್, ಅದಾಮಿ, ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು. 34 ಆ ಮೇರೆಯು ಪಶ್ಚಿಮಕ್ಕೆ ಅಜ್ನೊತ್ ತಾಬಾರಿಗೆ ತಿರುಗಿ ಅಲ್ಲಿಂದ ಹುಕ್ಕೋಕಿಗೆ ಹೊರಟು ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನನ್ನೂ ಸೂರ್ಯೋದಯದ ದಿಕ್ಕಿನಲ್ಲಿ ಯೊರ್ದನಿನ ಬಳಿಯ ಲ್ಲಿರುವ ಯೂದವನ್ನೂ ಮುಟ್ಟಿ ಬರುವದು. 35 ಇದರಲ್ಲಿ ರುವ ಕೋಟೆಗಳುಳ್ಳ ಪಟ್ಟಣಗಳು ಯಾವವಂದರೆ, ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್ 36 ಆದಾಮಾ, ರಾಮಾ, ಹಾಚೋರ್, 37 ಕೆದೆಷ್, ಎದ್ರೈ, ಎನ್ಹಾಚೊರ್, 38 ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ಷೆಮೆಷೆ ಬೆತನಾತ್ ಮೊದಲಾದ ಹತ್ತೊಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ 39 ಇದೇ ನಫ್ತಾಲಿಯ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರೆತ ಬಾಧ್ಯತೆಯಾಗಿದೆ. 40 ಇದಲ್ಲದೆ ಏಳನೇ ಚೀಟು ದಾನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು. 41 ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್, ಈರ್ಷೆಮೆಷ್ 42 ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ, 43 ಏಲೋನ್, ತಿಮ್ನಾ, ಎಕ್ರೋನ್, 44 ಎಲ್ತೆಕೇ, ಗಿಬ್ಬೆತೋನ್, ಬಾಲತ್, 45 ಯೆಹುದ್, ಬೆನೇಬೆರಕ್, ಗತ್ಮ್ಮೋನ್, 46 ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪಕ್ಕೆ ಎದುರಾದ ಮೇರೆಯು ಸಹ. 47 ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು. 48 ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ. 49 ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡು ತೀರಿಸಿದಾಗ ಇಸ್ರಾ ಯೇಲ್ ಮಕ್ಕಳು ನೂನನ ಮಗನಾದ ಯೆಹೋಶುವ ನಿಗೆ ತಮ್ಮ ಮಧ್ಯದಲ್ಲಿ ಬಾಧ್ಯತೆಯನ್ನು ಕೊಟ್ಟರು. 50 ಅವನು ಕೇಳಿದ ಎಫ್ರಾಯಾಮ್ ಬೆಟ್ಟದಲ್ಲಿರುವ ತಿಮ್ನತ್ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು. 51 ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.
1 ಕರ್ತನು ಯೆಹೋಶುವನಿಗೆ-- 2 ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ. 3 ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು. 4 ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಆ ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು. 5 ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು. 6 ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು. 7 ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು. 8 ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು. 9 ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
1 ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ-- 2 ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು. 3 ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ-- 4 ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು. 5 ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು. 6 ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು. 7 ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು. 8 ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು. 9 ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು 10 ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ 11 ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು. 12 ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು. 13 ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ 14 ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ 15 ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ 16 ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು. 17 ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ 18 ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. 19 ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. 20 ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು, 21 ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ 22 ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. 23 ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ; 24 ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. 25 ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. 26 ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ. 27 ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. 28 ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ 29 ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. 30 ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ 31 ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. 32 ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು. 33 ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. 34 ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ 35 ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. 36 ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ 37 ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. 38 ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ 39 ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು. 40 ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ. 41 ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು. 42 ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು. 43 ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು. 44 ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು. 45 ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
1 ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ-- 2 ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ. 3 ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ. 4 ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ. 5 ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು. 6 ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು. 7 ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು. 8 ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು. 9 ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್ ದೇಶಕ್ಕೆ ಹೋಗುವದಕ್ಕೆ ಕಾನಾನ್ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು. 10 ಕಾನಾನ್ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು. 11 ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲ್ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್ ಮಕ್ಕಳಿಗೂ ಕೇಳಿ ಬಂತು. 12 ಇಸ್ರಾಯೇಲ್ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು. 13 ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ 14 ಅವನ ಸಂಗಡ ಇಸ್ರಾಯೇಲಿನ ಎಲ್ಲಾ ಗೋತ್ರಗಳ ಪ್ರತಿ ತಂದೆ ಮನೆಯ ಮುಖ್ಯಸ್ಥನ ಪ್ರಕಾರ ಹತ್ತುಮಂದಿ ಪ್ರಧಾನ ರನ್ನೂ ಕಳುಹಿಸಿದರು. ಇವರಲ್ಲಿ ಪ್ರತಿ ಮನುಷ್ಯನು ಇಸ್ರಾಯೇಲ್ ಸಹಸ್ರಗಳಲ್ಲಿ ತನ್ನ ತನ್ನ ತಂದೆಯ ಮನೆಗೆ ಮುಖ್ಯಸ್ಥನಾಗಿದ್ದನು. 15 ಇವರು ಗಿಲ್ಯಾದ್ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ 16 ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು? 17 ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ. 18 ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು. 19 ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ; 20 ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು. 21 ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್ ಸಹಸ್ರ ಮುಖ್ಯಸ್ಥರಿಗೆ ಪ್ರತ್ಯುತ್ತರವಾಗಿ-- 22 ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು. 23 ನಾವು ಕರ್ತನ ಕಡೆಗೆ ತಿರುಗಿಕೊಂಡು ದಹನಬಲಿಗಳ ನ್ನಾದರೂ ಆಹಾರ ಸಮರ್ಪಣೆಯನ್ನಾದರೂ ಸಮಾ ಧಾನದ ಬಲಿಗಳನ್ನಾದರೂ ಅದರ ಮೇಲೆ ಅರ್ಪಿಸುವ ದಕ್ಕೋಸ್ಕರ ಯಜ್ಞವೇದಿಯನ್ನು ನಮಗಾಗಿ ಕಟ್ಟಿದ್ದರೆ ಕರ್ತನು ಅದನ್ನು ವಿಚಾರಿಸಲಿ. 24 ಆದರೆ ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ--ಇಸ್ರಾಯೇಲಿನ ದೇವರಾದ ಕರ್ತನಿಗೂ ನಿಮಗೂ ಏನು? 25 ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು; 26 ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ 27 ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು. 28 ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು. 29 ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು. 30 ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು. 31 ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು. 32 ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು. 33 ಆ ಮಾತು ಇಸ್ರಾ ಯೇಲ್ ಮಕ್ಕಳಿಗೆ ಮೆಚ್ಚಿಗೆಯಾಯಿತು. ಆದದರಿಂದ ಇಸ್ರಾಯೇಲ್ ಮಕ್ಕಳೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ನಿವಾಸವಾಗಿದ್ದ ದೇಶವನ್ನು ನಾಶಮಾಡ ಬೇಕೆಂದು ಅವರ ಮೇಲೆ ಯುದ್ಧಕ್ಕೆ ಹೋಗಬೇಕೆಂಬ ಮಾತನ್ನು ಬಿಟ್ಟು ದೇವರನ್ನು ಕೊಂಡಾಡಿದರು. 34 ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
1 ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು. 2 ಅವನು ಸಮಸ್ತ ಇಸ್ರಾಯೇಲ್ಯರನ್ನೂ ಅವರ ಹಿರಿಯರನ್ನೂ ಮುಖ್ಯ ಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರಿಸಿ ಅವರಿಗೆ--ನಾನು ವೃದ್ಧನಾಗಿ ದಿನಗಳು ತುಂಬಿ ದವನಾಗಿದ್ದೇನೆ. 3 ನಿಮ್ಮ ದೇವರಾದ ಕರ್ತನು ನಿಮ ಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿ ದ್ದೆಲ್ಲವನ್ನೂ ನೋಡಿದ್ದೀರಿ; ನಿಮಗೋಸ್ಕರವಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಕರ್ತನು. 4 ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು. 5 ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. 6 ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ 7 ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು 8 ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ. 9 ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು. 10 ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ. 11 ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ. 12 ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ 13 ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ. 14 ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು. 15 ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು. 16 ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
1 ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು. 2 ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು. 3 ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು; 4 ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು. 5 ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು. 6 ನಾನು ನಿಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಐಗುಪ್ತ್ಯರು ರಥಗಳ ಸಂಗಡಲೂ ರಾಹುತರ ಸಂಗಡಲೂ ನಿಮ್ಮ ಪಿತೃಗಳನ್ನು ಕೆಂಪು ಸಮುದ್ರದ ವರೆಗೂ ಹಿಂದಟ್ಟಿದರು. 7 ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು. 8 ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು. 9 ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು. 10 ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿ ಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು. 11 ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು. 12 ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ. 13 ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ. 14 ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ. 15 ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು. 16 ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ. 17 ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು. 18 ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು. 19 ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು. 20 ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು. 21 ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು. 22 ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು. 23 ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು. 24 ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು. 25 ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು. 26 ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು. 27 ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು. 28 ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು. 29 ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು. 30 ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು. 31 ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು. 32 ಇದ ಲ್ಲದೆ ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು. 33 ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
1 ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು. 2 ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು. 3 ಯೂದನು ತನ್ನ ಸಹೋದರನಾದ ಸಿಮೆಯೋನನಿಗೆ--ನೀನು ನನ್ನ ಸಂಗಡ ನನ್ನ ಭಾಗಕ್ಕೆ ಬಾ, ಕಾನಾನ್ಯರ ಮೇಲೆ ಯುದ್ಧಮಾಡೋಣ; ನಾನು ಹಾಗೆಯೇ ನಿನ್ನ ಸಂಗಡ ನಿನ್ನ ಭಾಗಕ್ಕೆ ಬರುವೆನು ಅಂದನು. ಹೀಗೆ ಸಿಮೆಯೋನನು ಅವನ ಸಂಗಡ ಹೋದನು. 4 ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು. 5 ಅವರು ಬೆಜೆಕಿನಲ್ಲಿ ಅದೋನೀಬೆಜೆಕನನ್ನು ಕಂಡು ಅವನಿಗೆ ವಿರೋಧವಾಗಿ ಯುದ್ಧಮಾಡಿ ಅಲ್ಲಿ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಕೊಂದುಹಾಕಿದರು. 6 ಆದರೆ ಅದೋನೀಬೆಜೆಕನು ಓಡಿಹೋದದರಿಂದ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಹಾಕಿ ದರು. 7 ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು. 8 ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು. 9 ತರುವಾಯ ಯೂದನ ಮಕ್ಕಳು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನ ಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋದರು. 10 ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು. 11 ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್ಸೇಫೆರ್ ಎಂಬ ಹೆಸ ರಿತ್ತು. 12 ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು. 13 ಆಗ ಕಾಲೇಬನ ತಮ್ಮನು ಕೆನಜನ ಮಗನಾದ ಒತ್ನೀಯೇಲನು ಅದನ್ನು ಹಿಡಿದನು. ಆಗ ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. 14 ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು. 15 ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು. 16 ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು. 17 ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು. 18 ಇದಲ್ಲದೆ ಯೂದನು ಗಾಜಾವನ್ನೂ ಅದರ ಮೇರೆಯನ್ನೂ ಅಷ್ಕೆಲೋನನ್ನ್ನೂ ಅದರ ಮೇರೆಯನ್ನೂ ಎಕ್ರೋನನ್ನ್ನೂ ಅದರ ಮೇರೆ ಯನ್ನೂ ತೆಗೆದುಕೊಂಡನು. 19 ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು. 20 ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು. 21 ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ. 22 ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು. 23 ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು. 24 ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು. 25 ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು. 26 ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು. 27 ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು. 28 ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು. 29 ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು. 30 ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು. 31 ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. 32 ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು. 33 ನಫ್ತಾಲ್ಯರು ಬೇತ್ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ಷೆಮೆಷ್ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು. 34 ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು 35 ತಾವು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು. 36 ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
1 ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು. 2 ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ? 3 ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು. 4 ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು. 5 ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು. 6 ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು. 7 ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು. 8 ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು. 9 ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ಹೆರೆಸ್ನಲ್ಲಿ ಹೂಣಿಟ್ಟರು. 10 ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು. 11 ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ 12 ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು. 13 ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು. 14 ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು. 15 ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು. 16 ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ; 17 ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ. 18 ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು. 19 ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು. 20 ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ 21 ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ 22 ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು. 23 ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
1 ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ 2 ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ: 3 ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ. 4 ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು. 5 ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು 6 ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು. 7 ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು. 8 ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು. 9 ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು. 10 ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು. 11 ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು. 12 ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು. 13 ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು. 14 ಇಸ್ರಾಯೇಲ್ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು. 15 ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು. 16 ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು 17 ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು. 18 ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು 19 ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು. 20 ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು. 21 ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು. 22 ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು. 23 ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು. 24 ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು 25 ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು. 26 ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು. 27 ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು 28 ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ 29 ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ. 30 ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು. 31 ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
1 ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು. 2 ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು. 3 ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು. 4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು. 5 ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು. 6 ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು. 7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು. 8 ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು. 9 ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು. 10 ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು. 11 ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು. 12 ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು. 13 ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್ ನದಿಗೆ ಬರಮಾಡಿ ದನು. 14 ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು. 15 ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು. 16 ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ. 17 ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು. 18 ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು. 19 ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು. 20 ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು. 21 ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು. 22 ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು. 23 ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಿದನು. 24 ಇಸ್ರಾ ಯೇಲ್ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
1 ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ-- 2 ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ. 3 ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು. 4 ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು. 5 ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು. 6 ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು. 7 ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು. 8 ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ? 9 ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ. 10 ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ. 11 ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು. 12 ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು. 13 ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು. 14 ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು. 15 ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು. 16 ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು. 17 ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು. 18 ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು. 19 ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ. 20 ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು. 21 ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ. 22 ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು. 23 ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು. 24 ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು. 25 ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು. 26 ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು. 27 ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು. 28 ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು? 29 ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು. 30 ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ? 31 ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
1 ಆದರೆ ಇಸ್ರಾಯೇಲ್ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು. 2 ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು. 3 ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು 4 ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ. 5 ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು. 6 ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು. 7 ಇಸ್ರಾಯೇಲ್ಯರು ಮಿದ್ಯಾನ್ಯರ ನಿಮಿತ್ತ ಕರ್ತನಿಗೆ ಕೂಗಿದಾಗ 8 ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು. 9 ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು. 10 ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ. 11 ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. 12 ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು. 13 ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು. 14 ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು. 15 ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು. 16 ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು. 17 ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು. 18 ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು. 19 ಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು. 20 ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು. 21 ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು. 22 ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು. 23 ಆದರೆ ಕರ್ತನು ಅವನಿಗೆ--ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವದಿಲ್ಲ ಅಂದನು. 24 ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ. 25 ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ 26 ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು. 27 ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು ಕರ್ತನು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಹಗಲಲ್ಲಿ ಮಾಡದ ಹಾಗೆ ಅವನು ತನ್ನ ತಂದೆಯ ಮನೆಯವರಿಗೂ ಆ ಊರಿನ ಮನುಷ್ಯರಿಗೂ ಭಯಪಟ್ಟಿದ್ದರಿಂದ ರಾತ್ರಿಯಲ್ಲಿ ಮಾಡಿ ದನು. 28 ಆ ಊರಿನ ಮನುಷ್ಯರು ಉದಯದಲ್ಲಿ ಎದ್ದಾಗ ಇಗೋ, ಬಾಳನ ಬಲಿಪೀಠವು ಕೆಡವಲ್ಪಟ್ಟಿತ್ತು. ಅದರ ಸವಿಾಪದಲ್ಲಿದ್ದ ತೋಪು ಕಡಿಯಲ್ಪಟ್ಟಿತ್ತು. ಕಟ್ಟಲ್ಪಟ್ಟ ಬಲಿಪೀಠದ ಮೇಲೆ ಆ ಎರಡನೇ ಹೋರಿ ಬಲಿ ಅರ್ಪಿಸಲ್ಪಟ್ಟಿತ್ತು. 29 ಆಗ ಅವರು ಒಬ್ಬರಿಗೊ ಬ್ಬರು--ಈ ಕಾರ್ಯವನ್ನು ಮಾಡಿದವನಾರು ಅಂದರು. ಅವರು ವಿಚಾರಿಸಿ ಕೇಳಿದಾಗ ಅವರು--ಯೋವಾಷನ ಮಗನಾದ ಗಿದ್ಯೋನನು ಈ ಕಾರ್ಯ ಮಾಡಿದನು ಅಂದರು. 30 ಆ ಊರಿನವರು ಯೋವಾಷನಿಗೆ--ನಿನ್ನ ಮಗನನ್ನು ಹೊರಗೆ ತಕ್ಕೊಂಡು ಬಾ; ಅವನು ಸಾಯಬೇಕು. ಯಾಕಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ತೋಪನ್ನು ಕಡಿದು ಹಾಕಿದನು ಅಂದರು. 31 ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಈ ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು. 32 ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು. 33 ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು. 34 ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು. 35 ಮನಸ್ಸೆಯವರೆಲ್ಲರಿಗೂ ದೂತರನ್ನು ಕಳುಹಿಸಿದಾಗ ಅವರು ಅವರ ಹಿಂದೆ ಕೂಡಿಬಂದರು. ಆಶೇರಲ್ಲಿಯೂ ಜೆಬುಲೂನಿನಲ್ಲಿಯೂ ನಫ್ತಾಲಿಯಲ್ಲಿಯೂ ದೂತರನ್ನು ಕಳುಹಿಸಿದಾಗ ಅವರು ಇವರಿಗೆ ಎದುರಾಗಿ ಬಂದರು. 36 ಗಿದ್ಯೋನನು ದೇವರಿಗೆ--ನೀನು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸು ವಿಯಾದರೆ 37 ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು. 38 ಅದು ಹಾಗೆಯೇ ಆಯಿತು. ಅವನು ಮರುದಿನ ಉದಯ ದಲ್ಲಿ ಎದ್ದು ಉಣ್ಣೆಯನ್ನು ತೆಗೆದುಕೊಂಡು ಅದರೊಳ ಗಿದ್ದ ಮಂಜಿನ ನೀರನ್ನು ಒಂದು ಬೋಗುಣಿ ತುಂಬಾ ಹಿಂಡಿದನು. 39 ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು. 40 ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
1 ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು. 2 ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು. 3 ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು. 4 ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು. 5 ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು. 6 ಆಗ ತಮ್ಮ ಕೈಯಿಂದ ತೆಗೆದುಕೊಂಡು ತಮ್ಮ ಬಾಯಿಗೆ ಎತ್ತಿ ನೆಕ್ಕಿದವರ ಲೆಕ್ಕವು ಮುನ್ನೂರು ಜನವಾಗಿತ್ತು. ಉಳಿದ ಜನರೆಲ್ಲಾ ನೀರು ಕುಡಿಯುವದಕ್ಕೆ ಮೊಣಕಾಲೂರಿ ಬೊಗ್ಗಿದರು. 7 ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು. 8 ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು. 9 ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ. 10 ಇಳಿದು ಹೋಗುವದಕ್ಕೆ ನೀನು ಭಯಪಟ್ಟರೆ (ಮೊದಲು) ನೀನು ನಿನ್ನ ಸೇವಕನಾದ ಪುರನ ಸಂಗಡ ದಂಡಿಗೆ ಇಳಿದು ಹೋಗಿ 11 ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು. 12 ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು. 13 ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು. 14 ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು. 15 ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು. 16 ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ-- 17 ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ. 18 ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು. 19 ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು. 20 ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು. 21 ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು. 22 ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು. 23 ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು. 24 ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು. 25 ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
1 ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು. 2 ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ? 3 ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು. 4 ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು. 5 ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು. 6 ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು. 7 ಆಗ ಗಿದ್ಯೋನನು--ಹಾಗಾದರೆ ಕರ್ತನು ಜೆಬಹನನ್ನೂ ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟ ತರುವಾಯ ನಿಮ್ಮ ಮಾಂಸವನ್ನು ಅರಣ್ಯದ ಮುಳ್ಳುಗಳಿಂದಲೂ ನೆಗ್ಗಿಲು ಮುಳ್ಳುಗಳಿಂದಲೂ ಹರಿದುಬಿಡುವೆನು ಅಂದನು. 8 ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು. 9 ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಈ ಗೋಪು ರವನ್ನು ಕೆಡವಿಬಿಡುವೆನು ಅಂದನು. 10 ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು. 11 ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಆ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ಆ ದಂಡು ಭದ್ರವಾಗಿತ್ತು. 12 ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು. 13 ಯೋವಾಷನ ಮಗನಾದ ಗಿದ್ಯೋನನು ಸೂರ್ಯೋದಯಕ್ಕೆ ಮುಂಚೆ ಯುದ್ಧ ತೀರಿಸಿಕೊಂಡು ತಿರಿಗಿಬಂದು 14 ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು. 15 ಗಿದ್ಯೋನನು ಸುಖೋತಿನ ಮನುಷ್ಯರ ಬಳಿಗೆ ಬಂದು--ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ ಜೆಬಹ ಚಲ್ಮು ನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ ಚಲ್ಮುನ್ನನನ್ನೂ ನೋಡಿರಿ ಎಂದು ಹೇಳಿ 16 ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು. 17 ಪೆನೂವೇಲಿನ ಗೋಪುರ ವನ್ನು ಕೆಡವಿ ಆ ಪಟ್ಟಣದ ಮನುಷ್ಯರನ್ನು ಕೊಂದು ಹಾಕಿದನು. 18 ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು. 19 ಅದಕ್ಕವನು--ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು; ಕರ್ತನ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುವದಿಲ್ಲ ಅಂದನು. 20 ತನ್ನ ಚೊಚ್ಚಲ ಮಗನಾದ ಎತೆರನಿಗೆ--ನೀನೆದ್ದು ಅವರನ್ನು ಕೊಂದುಹಾಕು ಅಂದನು. ಆದರೆ ಆ ಯುವಕನು ತನ್ನ ಕತ್ತಿಯನ್ನು ಬಿಚ್ಚದೆ ಹೋದನು; ಯಾಕಂದರೆ ಅವನು ಇನ್ನೂ ಹುಡುಗನಾದದರಿಂದ ಭಯಪಟ್ಟನು. 21 ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು. 22 ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು. 23 ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ ನೀನೂ ನಿನ್ನ ಕುಮಾರನೂ ಕುಮಾರನ ಕುಮಾರನೂ ನಮ್ಮನ್ನು ಆಳಬೇಕು ಅಂದರು. ಗಿದ್ಯೋ ನನು ಅವರಿಗೆ ನಾನು ನಿಮ್ಮನ್ನು ಆಳುವದಿಲ್ಲ, ನನ್ನ ಮಗನೂ ನಿಮ್ಮನ್ನು ಆಳುವದಿಲ್ಲ, ಕರ್ತನೇ ನಿಮ್ಮನ್ನು ಆಳುವನು ಅಂದನು. 24 ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು). 25 ಅವರು--ನಾವು ಇಷ್ಟಪೂರ್ವಕವಾಗಿ ಕೊಡುವೆವು ಎಂದು ಹೇಳಿ ಒಂದು ವಸ್ತ್ರವನ್ನು ಹಾಸಿ ಅಲ್ಲಿ ಅವರವರು ಕೊಳ್ಳೆ ಹೊಡೆದ ವಾಲೆಗಳನ್ನು ಹಾಕಿದರು. 26 ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್ ತೂಕವಾಗಿತ್ತು. 27 ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು. 28 ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು. 29 ಯೋವಾಷನ ಮಗನಾದ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು. 30 ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು. 31 ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು. 32 ಯೋವಾಷನ ಮಗನಾದ ಗಿದ್ಯೋನನು ಒಳ್ಳೇ ವೃಧ್ಧಾಪ್ಯದಲ್ಲಿ ಸತ್ತು ಅಬೀಯೆಜೆರೀ ಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಣಿಡಲ್ಪಟ್ಟನು. 33 ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು. 34 ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳ ಲಿಲ್ಲ. 35 ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.
1 ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ-- 2 ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು. 3 ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು. 4 ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು. 5 ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು. 6 ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು. 7 ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ. 8 ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು. 9 ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. 10 ಮರಗಳು ಅಂಜೂರದ ಗಿಡಕ್ಕೆ--ನೀನು ಬಂದು ನಮ್ಮ ಮೇಲೆ ಆಳಬೇಕು ಅಂದವು. 11 ಆದರೆ ಅಂಜೂರದ ಗಿಡವು ಅವುಗ ಳಿಗೆ--ನಾನು ನನ್ನ ಮಧುರವನ್ನೂ ನನ್ನ ಒಳ್ಳೇ ಫಲ ವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. 12 ಮರಗಳು ದ್ರಾಕ್ಷೇ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು. 13 ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. 14 ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು. 15 ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು. 16 ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ 17 ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು 18 ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು, 19 ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ. 20 ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು. 21 ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು. 22 ಆದರೆ ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರುಷ ಆಳಿದ ತರುವಾಯ 23 ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು. 24 ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು. 25 ಶೆಕೆಮಿನ ಮನುಷ್ಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚಿಕೊಳ್ಳು ವವರನ್ನು ಇಟ್ಟು ತಮ್ಮ ಸವಿಾಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲುಕೊಂಡರು. ಅದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಿತು. 26 ಆಗ ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು; ಆದರೆ ಶೆಕೆಮಿನ ಜನರು ಅವನಲ್ಲಿ ಭರವಸವಿಟ್ಟು 27 ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು. 28 ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು? 29 ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು. 30 ಆ ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು 31 ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ--ಇಗೋ, ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ ಮತ್ತು ಇಗೋ, ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಾರೆ. 32 ಆದದ ರಿಂದ ಈಗ ನೀನೂ ನಿನ್ನ ಸಂಗಡ ಇರುವ ಜನರೂ ಕೂಡಿ ರಾತ್ರಿಯಲ್ಲಿ ಎದ್ದು ಹೊಲದಲ್ಲಿ ಹೊಂಚಿಕೊಳ್ಳ ಬೇಕು. 33 ಹೊತ್ತಾರೆ ಸೂರ್ಯನು ಉದಯಿಸುವಾಗ ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು; ಇಗೋ, ಅವನೂ ಅವನ ಸಂಗಡ ಇರುವ ಜನರೂ ನಿಮಗೆದು ರಾಗಿ ಹೊರಟು ಬರುವಾಗ ನಿನಗೆ ಅನುಕೂಲ ತೋರಿದ ಹಾಗೆ ಅವನಿಗೆ ಮಾಡಬಹುದು ಎಂದು ಹೇಳಿದನು. 34 ಹಾಗೆಯೇ ಅಬೀಮೆಲೆಕನೂ ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿ ಕೊಂಡಿದ್ದರು. 35 ಎಬೆದನ ಮಗನಾದ ಗಾಳನು ಹೊರಟು ಬಂದು ಪಟ್ಟಣದ ಬಾಗಲಿನ ದ್ವಾರದಲ್ಲಿ ನಿಂತನು. ಆಗ ಹೊಂಚಿಕೊಂಡಿದ್ದ ಅಬೀಮೆಲೆಕನೂ ಅವನ ಸಂಗಡ ಇದ್ದ ಜನರೂ ಎದ್ದುಬಂದರು. 36 ಗಾಳನು ಆ ಜನರನ್ನು ಕಂಡಾಗ--ಇಗೋ, ಬೆಟ್ಟದ ಶಿಖರಗಳಿಂದ ಜನರು ಇಳಿದು ಬರುತ್ತಾರೆ ಎಂದು ಜೆಬುಲನಿಗೆ ಹೇಳಿದನು. ಜೆಬುಲನು ಅವನಿಗೆ--ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ನೋಡುತ್ತೀ ಅಂದನು. 37 ಗಾಳನು ತಿರಿಗಿ ಅವನ ಸಂಗಡ ಮಾತ ನಾಡಿ--ಇಗೋ, ಜನರು ಭೂಮಧ್ಯಸ್ಥಳದಿಂದ ಬರು ತ್ತಾರೆ; ಮಿಯೋನೀಮಿನ ಬೈಲುಮಾರ್ಗವಾಗಿ ಒಂದು ಗುಂಪು ಬರುತ್ತದೆ ಅಂದನು. 38 ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು. 39 ಗಾಳನು ಶೆಕೆಮಿನ ಮನು ಷ್ಯರ ಮುಂದೆ ಹೊರಟು ಅಬೀಮೆಲೆಕನ ಸಂಗಡ ಯುದ್ಧಮಾಡಿದನು. 40 ಆದರೆ ಅಬೀಮೆಲೆಕನು ಅವ ನನ್ನು ಹಿಂದಟ್ಟಿದಾಗ ಅವನು ಅವನ ಮುಂದೆ ಓಡಿ ಹೋದನು. ಪ್ರವೇಶ ದ್ವಾರದ ವರೆಗೆ ಅನೇಕರು ಸಂಹಾರವಾಗಿ ಅನೇಕರು ಗಾಯಗೊಂಡರು. 41 ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು; ಆದರೆ ಜೆಬುಲನು ಗಾಳನನ್ನೂ ಅವನ ಸಹೋದರ ರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು. 42 ಮರು ದಿವಸದಲ್ಲಿ ಆದದ್ದೇನಂದರೆ, ಜನರು ಹೊಲಕ್ಕೆ ಹೊರಟರು: ಅವರು ಅಬೀಮೆಲೆಕನಿಗೆ ತಿಳಿಸಿದರು. 43 ಅವನು ಜನರನ್ನು ತಕ್ಕೊಂಡು ಅವರನ್ನು ಮೂರು ಗುಂಪುಗಳಾಗಿ ಮಾಡಿ ಹೊಲದಲ್ಲಿ ಹೊಂಚಿ ಕೊಂಡನು. ಇಗೋ, ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು ಅವರನ್ನು ಹೊಡೆದನು. 44 ಅಬೀಮೆಲೆಕನೂ ಅವನ ಸಂಗಡ ಇದ್ದ ಜನರ ಗುಂಪೂ ಮುಂದಕ್ಕೆ ಓಡಿ ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತರು. ಮಿಕ್ಕಾದ ಎರಡು ಗುಂಪು ಜನರು ಹೊಲದಲ್ಲಿರುವವರೆ ಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿಬಿಟ್ಟರು. 45 ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು. 46 ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು. 47 ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಾಗ 48 ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು. 49 ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು. 50 ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು. 51 ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು. 52 ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು. 53 ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು. 54 ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು. 55 ಅಬೀಮೆಲೆಕನು ಸತ್ತುಹೋದದ್ದನ್ನು ಇಸ್ರಾಯೇಲ್ ಮನುಷ್ಯರು ನೋಡಿದಾಗ ಅವರವರು ತಮ್ಮ ಸ್ಥಳಗಳಿಗೆ ಹೋದರು. 56 ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು. 57 ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
1 ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು. 2 ಇಸ್ರಾಯೇಲಿಗೆ ಇಪ್ಪತ್ತುಮೂರು ವರುಷ ನ್ಯಾಯ ತೀರಿಸಿದ ತರುವಾಯ ಅವನು ಸತ್ತು ಶಾವಿಾರಲ್ಲಿ ಹೂಣಲ್ಪಟ್ಟನು. 3 ಅವನ ತರುವಾಯ ಗಿಲ್ಯಾದ್ಯನಾದ ಯಾಯಾರನು ಎದ್ದು ಇಸ್ರಾಯೇಲ್ಯರಿಗೆ ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು. 4 ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ. 5 ಯಾಯಾ ರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು. 6 ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು. 7 ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು. 8 ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು. 9 ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು. 10 ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು. 11 ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ? 12 ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು. 13 ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ. 14 ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು. 15 ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. 16 ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು. 17 ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು. 18 ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
1 ಆದರೆ ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿ ದ್ದನು; ಅವನು ಸೂಳೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು. 2 ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಕುಮಾರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ--ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ; ಯಾಕಂದರೆ ನೀನು ಪರಸ್ತ್ರೀಯ ಮಗನು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. 3 ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು. 4 ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು. 5 ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ 6 ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು. 7 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು. 8 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು. 9 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು 10 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು. 11 ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು. 12 ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು. 13 ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು. 14 ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ 15 ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ. 16 ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು 17 ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು. 18 ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು. 19 ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು. 20 ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು. 21 ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು. 22 ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು. 23 ಈಗ ಇಸ್ರಾ ಯೇಲಿನ ದೇವರಾದ ಕರ್ತನು ಅಮೋರಿಯರನ್ನು ತನ್ನ ಜನವಾದ ಇಸ್ರಾಯೇಲಿನ ಮುಂದೆ ಹೊರಡಿಸಿ ರುವಾಗ ನೀನು ಆ ದೇಶವನ್ನು ಸ್ವಾಧೀನಮಾಡಿಕೊಳ್ಳು ವಿಯೋ? 24 ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು. 25 ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ? 26 ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು? 27 ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ. 28 ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು. 29 ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು. 30 ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ 31 ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು. 32 ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು. 33 ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. 34 ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ. 35 ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು. 36 ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು. 37 ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು. 38 ಆಗ ಅವನು--ಎರಡು ತಿಂಗಳು ಹೋಗಿ ಬಾ ಎಂದು ಹೇಳಿ ಅವಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿ ಯರ ಸಂಗಡ ಹೋಗಿ ತನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಅತ್ತು, 39 9ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ಮಾಡಿದನು. ಅವಳು ಪುರುಷನನ್ನು ಅರಿಯದೆ ಇದ್ದಳು. 40 ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
1 ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು. 2 ಯೆಪ್ತಾ ಹನು ಅವರಿಗೆ--ನನಗೂ ನಮ್ಮ ಜನಕ್ಕೂ ಅಮ್ಮೋನನ ಮಕ್ಕಳ ಸಂಗಡ ದೊಡ್ಡ ವ್ಯಾಜ್ಯವಿರುವಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ. 3 ನೀವು ನನ್ನನ್ನು ರಕ್ಷಿಸುವದಿ ಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡುಕೊಂಡು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಹೋದೆನು; ಕರ್ತನು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ನೀವು ನನ್ನ ಸಂಗಡ ಯುದ್ಧಮಾಡುವದಕ್ಕೆ ಈಹೊತ್ತು ನನಗೆ ವಿರೋಧವಾಗಿ ಯಾಕೆ ಬಂದಿರಿ ಅಂದನು. 4 ಆಗ ಯೆಪ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು. 5 ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್ ಅನ್ನಬೇಕು ಅಂದರು. 6 ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು. 7 ಯೆಪ್ತಾಹನು ಇಸ್ರಾಯೇಲ್ಯರಿಗೆ ಆರು ವರುಷ ನ್ಯಾಯತೀರಿಸಿದನು. ಗಿಲ್ಯಾದ್ಯನಾದ ಯೆಪ್ತಾಹನು ಸತ್ತು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಹೂಣಲ್ಪಟ್ಟನು. 8 ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾ ನನು ಇಸ್ರಾಯೇಲಿಗೆ ನ್ಯಾಯತೀರಿಸಿದನು. 9 ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು. 10 ಇಬ್ಚಾನನು ಸತ್ತು ಬೇತ್ಲೆಹೇಮಿನಲ್ಲಿ ಹೂಣಲ್ಪಟ್ಟನು. 11 ಅವನ ತರುವಾಯ ಜೆಬುಲೂನ್ಯನಾದ ಏಲೋ ನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು; ಅವನು ಹತ್ತು ವರುಷಗಳು ಇಸ್ರಾಯೇಲ್ಯರಿಗೆ ನ್ಯಾಯ ತೀರಿಸಿದನು. 12 ಜೆಬುಲೂನ್ಯನಾದ ಏಲೋನನು ಸತ್ತು ಜೆಬುಲೂನ್ ದೇಶವಾದ ಅಯ್ಯಾಲೋನಿನಲ್ಲಿ ಹೂಣಲ್ಪಟ್ಟನು. 13 ಅವನ ತರುವಾಯ ಪಿರಾತೋನಿನವನೂ ಹಿಲ್ಲೇ ಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. 14 ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು. 15 ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
1 ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು. 2 ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. 3 ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ. 4 ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು. 5 ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು. 6 ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ. 7 ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು. 8 ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು. 9 ದೇವರು ಮಾನೋಹನ ಮೊರೆಯನ್ನು ಕೇಳಿದನು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವರ ದೂತನು ತಿರಿಗಿ ಅವಳ ಬಳಿಗೆ ಬಂದನು. ಆದರೆ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ. 10 ಆದದರಿಂದ ಅವಳು ಬೇಗ ಓಡಿಹೋಗಿ ತನ್ನ ಗಂಡನಿಗೆ--ಇಗೋ, ಆ ಹೊತ್ತು ನನ್ನ ಬಳಿಗೆ ಬಂದವನು ನನಗೆ ಪ್ರತ್ಯಕ್ಷನಾ ದನು ಎಂದು ತಿಳಿಸಿದಳು. 11 ಆಗ ಮಾನೋಹನು ಎದ್ದು ತನ್ನ ಹೆಂಡತಿಯ ಹಿಂದೆ ಹೋಗಿ ಅವನ ಬಳಿಗೆ ಬಂದು ಅವನಿಗೆ--ಈ ಸ್ತ್ರೀಯ ಸಂಗಡ ಮಾತ ನಾಡಿದವನು ನೀನೋ ಅಂದನು. ಅವನು--ನಾನೇ ಅಂದನು. 12 ಮಾನೋಹನು--ನೀನು ಹೇಳಿದ ಮಾತು ಗಳು ನೇರವೇರುವಾಗ ಆ ಮಗುವಿಗೋಸ್ಕರ ಮಾಡುವ ರೀತಿ ಏನು ಮತ್ತು ನಡಿಸತಕ್ಕದ್ದೇನು ಅಂದನು. 13 ಕರ್ತನ ದೂತನು ಮಾನೋಹನಿಗೆ--ನಾನು ಈ ಸ್ತ್ರೀಗೆ ಹೇಳಿದ್ದೆಲ್ಲಾದರಲ್ಲಿ ಅವಳು ಎಚ್ಚರಿಕೆಯಾಗಿದ್ದು, 14 ದ್ರಾಕ್ಷೇ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶು ಚಿಯಾದ ಒಂದನ್ನೂ ತಿನ್ನದೆ ಇದ್ದು ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಕೊಳ್ಳಲಿ ಅಂದನು. 15 ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು. 16 ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು. 17 ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು. 18 ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು. 19 ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು. 20 ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು. 21 ಆದರೆ ಕರ್ತನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸ ಲಿಲ್ಲ. ಆಗ ಇವನು ಕರ್ತನ ದೂತನೆಂದು ಮಾನೋಹನು ತಿಳುಕೊಂಡನು. ಮಾನೋಹನು ತನ್ನ ಹೆಂಡತಿಗೆ--ನಾವು ದೇವರನ್ನು ಕಂಡದ್ದರಿಂದ ನಿಶ್ಚಯ ವಾಗಿ ಸಾಯುವೆವು ಅಂದನು. 22 ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು. 23 ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನು ಎಂದು ಹೆಸರಿಟ್ಟಳು. 24 ಆ ಹುಡುಗನು ಬೆಳೆದನು; ಕರ್ತನು ಅವನನ್ನು ಆಶೀರ್ವದಿಸಿದನು. 25 ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
1 ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ 2 ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು. 3 ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು. 4 ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು. 5 ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು. 6 ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ. 7 ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾ ಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾ ಗಿದ್ದಳು. 8 ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು. 9 ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ. 10 ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು. 11 ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು. 12 ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು. 13 ಅದರ ಅರ್ಥವನ್ನು ನೀವು ನನಗೆ ಹೇಳದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತುವಸ್ತ್ರ ಗಳನ್ನೂ ಕೊಡಬೇಕು ಅಂದನು. ಅವರು ಅವನಿಗೆನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ ಅಂದರು. 14 ಆಗ ಅವನು ಅವರಿಗೆ--ತಿನ್ನುವಂಥದ್ದರಿಂದ ತಿನ್ನ ತಕ್ಕದ್ದು ಹೊರಟಿತು, ಬಲವಾದದ್ದರಿಂದ ಸಿಹಿಯು ಹೊರಟಿತು ಅಂದನು. 15 ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು. 16 ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು. 17 ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು. 18 ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು. 19 ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು. 20 ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
1 ಕೆಲವು ದಿನಗಳ ತರುವಾಯ ಆದದ್ದೇನಂದರೆ, ಗೋಧಿಯ ಸುಗ್ಗೀ ಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡುವದಕ್ಕೆ ಒಂದು ಮೇಕೆಯ ಮರಿಯನ್ನು ತೆಗೆದುಕೊಂಡು ಹೋಗಿ ಅವನು--ನನ್ನ ಹೆಂಡತಿಯ ಬಳಿಗೆ ಕೊಠಡಿಯಲ್ಲಿ ಪ್ರವೇಶಿಸುತ್ತೇನೆ ಅಂದನು. 2 ಆದರೆ ಅವಳ ತಂದೆಯು ಅವನನ್ನು ಪ್ರವೇಶಿಸಗೊಡದೆ ಅವನಿಗೆ--ನೀನು ಅವ ಳನ್ನು ಪೂರ್ಣವಾಗಿ ಹಗೆಮಾಡಿದಿ ಎಂದು ನಾನು ನಿಜವಾಗಿ ತಿಳಿದು ಅವಳನ್ನು ನಿನ್ನ ಜೊತೆಯವನಿಗೆ ಕೊಟ್ಟೆನು. ಅವಳ ತಂಗಿ ಅವಳಿಗಿಂತ ಸುಂದರವಾಗಿ ದ್ದಾಳಲ್ಲವೋ? ಅವಳಿಗೆ ಬದಲಾಗಿ ಇವಳನ್ನು ತಕ್ಕೋ ಅಂದನು. 3 ಆಗ ಸಂಸೋನನು ಅವರನ್ನು ಕುರಿತುನಾನು ಈ ಸಾರಿ ಫಿಲಿಷ್ಟಿಯರಿಗೆ ಕೇಡನ್ನುಮಾಡಿದರೆ ಅವರಿಗಿಂತ ಹೆಚ್ಚು ನಿರಪರಾಧಿಯಾಗಿರುವೆನು ಎಂದು ಅಂದುಕೊಂಡು ಹೊರಟು ಹೋಗಿ ಮುನ್ನೂರು ನರಿ ಗಳನ್ನು ಹಿಡಿದು 4 ಪಂಜುಗಳನ್ನು ತಕ್ಕೊಂಡು ಬಂದು ಬಾಲಕ್ಕೆ ಬಾಲ ಸೇರಿಸಿ ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿ 5 ಅದಕ್ಕೆ ಬೆಂಕಿಹಚ್ಚಿ ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು ತೆನೆ ಗೂಡುಗಳನ್ನೂ ಪೈರುಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು. 6 ಫಿಲಿಷ್ಟಿಯರು--ಇದನ್ನು ಮಾಡಿದವರು ಯಾರು ಅಂದರು. ಅದಕ್ಕೆ ಅವರು--ತಿಮ್ನಾ ಊರಿನ ಅಳಿಯ ನಾದ ಸಂಸೋನನು ಮಾಡಿದನು; ಯಾಕಂದರೆ ಇವನು ಅವನ ಹೆಂಡತಿಯನ್ನು ತಕ್ಕೊಂಡು ಅವನ ಜೊತೆ ಗಾರನಿಗೆ ಕೊಟ್ಟನು ಅಂದರು. ಆಗ ಫಿಲಿಷ್ಟಿಯರು ಬಂದು ಅವಳನ್ನೂ ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. 7 ಸಂಸೋನನು ಅವರಿಗೆ--ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ಮಾಡಿಯೇ ಬಿಡುವೆನು ಅಂದನು. 8 ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು. 9 ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು. 10 ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು. 11 ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು. 12 ಅದಕ್ಕವನು--ಅವರು ನನಗೆ ಮಾಡಿದ ಪ್ರಕಾ ರವೇ ನಾನು ಅವರಿಗೆ ಮಾಡಿದೆನು ಎಂದು ಅವರಿಗೆ ಹೇಳಿದನು. ಆಗ ಅವರು ಅವನಿಗೆ--ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು ಅಂದರು. ಸಂಸೋನನು ಅವರಿಗೆ--ನೀವು ನನ್ನ ಮೇಲೆ ಬೀಳುವದಿಲ್ಲವೆಂದು ನನಗೆ ಆಣೆಇಡಿರಿ ಅಂದನು. 13 ಅದಕ್ಕವರು--ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ ಅವರ ಕೈಯಲ್ಲಿ ಒಪ್ಪಿಸಿಕೊಡುವೆವು; ನಾವು ನಿನ್ನನ್ನು ನಿಜವಾಗಿ ಕೊಲ್ಲುವದೇ ಇಲ್ಲ ಅಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ ಬಂಡೆಯ ಮೇಲಿ ನಿಂದ ತಂದರು. 14 ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು. 15 ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು. 16 ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು. 17 ಅವನು ಮಾತನಾಡಿ ತೀರಿಸಿದಾಗ ತನ್ನ ಕೈಯಲ್ಲಿದ್ದ ದವಡೇ ಎಲುಬನ್ನು ಬಿಸಾಟುಬಿಟ್ಟು ಆ ಸ್ಥಳಕ್ಕೆ ರಾಮತ್ ಲೆಹೀ ಎಂಬ ಹೆಸರಿಟ್ಟನು. 18 ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು. 19 ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ. 20 ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
1 ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು. 2 ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು. 3 ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು. 4 ಇದರ ತರುವಾಯ ಆದದ್ದೇನಂದರೆ, ಸೋರೇಕ್ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು. 5 ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು. 6 ಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು. 7 ಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು. 8 ಆಗ ಪಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು. 9 ಹೊಂಚುಗಾರರು ಅವಳೊಂದಿಗೆ ಕೊಠಡಿಯಲ್ಲಿ ದ್ದರು. ಅವಳು ಅವನಿಗೆ--ಸಂಸೋನನೇ, ಪಿಲಿಷ್ಟಿ ಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಆಗ ಅವನು ಬೆಂಕಿಗೆ ತೋರಿಸಲ್ಪಟ್ಟ ಸಣಬಿನ ಹುರಿಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿ ತಿಳಿಯಲ್ಪಡದೆ ಹೋಯಿತು. 10 ದೆಲೀಲಳು ಸಂಸೋನನಿಗೆ--ಇಗೋ, ನೀನು ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ಈಗ ನೀನು ಯಾವದರಿಂದ ಕಟ್ಟಲ್ಪಡಬಹುದೋ ನನಗೆ ದಯಮಾಡಿ ತಿಳಿಸು ಅಂದಳು. 11 ಅವನು ಅವಳಿಗೆ ಯಾವ ಕೆಲಸಮಾಡದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು. 12 ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು. 13 ದೆಲೀಲಳು ಸಂಸೋನನಿಗೆ--ಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು. ಅವನು ಅವಳಿಗೆ--ನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು. 14 ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು. 15 ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು. 16 ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು. 17 ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು. 18 ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು. 19 ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು. 20 ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು. 21 ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು. 22 ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು. 23 ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು. 24 ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು. 25 ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು. 26 ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ--ಮನೆ ಯನ್ನು ಹೊತ್ತಿರುವ ಸ್ತಂಭಗಳನ್ನು ನಾನು ಸ್ಪರ್ಶಿಸಿ ಅವುಗಳ ಮೇಲೆ ಆತುಕೊಳ್ಳುವಹಾಗೆ ನನ್ನನ್ನು ಬಿಡು ಅಂದನು. 27 ಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು. 28 ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು, 29 ಎಂದು ಹೇಳಿ ಸಂಸೋನನು ಆ ಮನೆಯ ಆಧಾರವಾದ ಎರಡು ನಡುವಿನ ಸ್ತಂಭ ಗಳನ್ನು ಒಂದು ತನ್ನ ಬಲಗೈಯಿಂದಲೂ ಮತ್ತೊಂದು ತನ್ನ ಎಡಗೈಯಿಂದಲೂ ಹಿಡುಕೊಂಡು-- 30 ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು. 31 ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
1 ಆದರೆ ಎಫ್ರಾಯಾಮ್ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. 2 ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು. 3 ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು. 4 ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು. 5 ಈ ವಿಾಕ ಎಂಬ ಮನುಷ್ಯನಿಗೆ ದೇವರುಗಳ ಮನೆ ಇದ್ದದರಿಂದ ಅವನು ಒಂದು ಏಫೋದನ್ನೂ ಪ್ರತಿಮೆಗಳನ್ನೂ ಮಾಡಿ ತನ್ನ ಕುಮಾರರಲ್ಲಿ ಒಬ್ಬನನ್ನು ಪ್ರತಿಷ್ಠೆಮಾಡಿದನು. ಅವನು ಇವನಿಗೆ ಯಾಜಕ ನಾದನು. 6 ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು. 7 ಯೆಹೂದದ ಗೋತ್ರಕ್ಕೆ ಸೇರಿದ ಬೇತ್ಲೆಹೇಮಿನ ಲೇವಿಯನಾದಂಥ ಒಬ್ಬ ಯೌವನಸ್ಥನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು. 8 ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು. 9 ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು. 10 ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು. 11 ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು. 12 ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು. 13 ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
1 ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವದಕ್ಕೆ ತಮಗೆ ಬಾಧ್ಯತೆ ಯನ್ನು ಹುಡುಕುತ್ತಿದ್ದರು. ಯಾಕಂದರೆ ಅಂದಿನ ವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರಕಲಿಲ್ಲ. 2 ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು. 3 ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು. 4 ಅವನು ಅವರಿಗೆವಿಾಕನು ನನಗೆ ಹೀಗೆ ಹೀಗೆ ನಡಿಸುತ್ತಾನೆ; ನನ್ನನ್ನು ಸಂಬಳಕ್ಕೆ ಇಟ್ಟು ಕೊಂಡಿದ್ದಾನೆ; ನಾನು ಅವನಿಗೆ ಯಾಜಕನಾಗಿದ್ದೇನೆ ಅಂದನು. 5 ಆಗ ಅವರು ಅವನಿಗೆ--ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು ಅಂದರು. 6 ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು. 7 ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ. 8 ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು. 9 ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ. 10 ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು. 11 ಆಗ ಚೊರ್ಗಾದಲ್ಲಿಯೂ ಎಷ್ಟಾವೋಲಿನ ಲ್ಲಿಯೂ ಇರುವ ದಾನನ ಕುಟುಂಬದವರಲ್ಲಿ ಆರು ನೂರು ಮನುಷ್ಯರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು ಅಲ್ಲಿಂದ ಹೊರಟುಹೋಗಿ 12 ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂದು ಕರೆಯಲ್ಪಡುವದು. 13 ಇಗೋ, ಅದು ಕಿರ್ಯತ್ಯಾರೀಮಿನ ಹಿಂದೆ ಇರುವದು. ಅಲ್ಲಿಂದ ಅವರು ಎಫ್ರಾಯಾಮ್ ಬೆಟ್ಟಕ್ಕೆ ಹೋಗಿ ವಿಾಕನ ಮನೆಯ ವರೆಗೆ ಬಂದರು. 14 ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು. 15 ಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು. 16 ಯುದ್ಧದ ಆಯುಧಗಳನ್ನು ಕಟ್ಟಿಕೊಂಡು ದಾನನ ಗೋತ್ರದವರಾದ ಆರುನೂರು ಮಂದಿಯು ಪ್ರವೇಶ ದ್ವಾರದಲ್ಲಿ ನಿಂತರು. 17 ಆದರೆ ದೇಶವನ್ನು ಪಾಳತಿ ನೋಡಿ ಬಂದ ಆ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು. 18 ಅವರು ವಿಾಕನ ಮನಗೆ ಬಂದು ಏಫೋದನ್ನೂ ಪ್ರತಿಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ತಕ್ಕೊಂಡಾಗ ಯಾಜಕನು ಅವರಿಗೆ--ನೀವು ಏನು ಮಾಡುತ್ತೀರಿ ಅಂದನು. 19 ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು. 20 ಆಗ ಯಾಜಕನ ಹೃದಯವು ಸಂತೋಷಪಟ್ಟದ್ದರಿಂದ ಅವನು ಏಫೋದನ್ನೂ ಪ್ರತಿ ಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ತಕ್ಕೊಂಡು ಜನರ ಮಧ್ಯದಲ್ಲಿ ಹೋದನು. 21 ಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು. 22 ಅವರು ವಿಾಕನ ಮನೆಯಿಂದ ದೂರವಾಗಿ ಹೋದಾಗ ವಿಾಕನ ಮನೆಯ ಸುತ್ತಲೂ ನೆರೆಮನೆ ಗಳಲ್ಲಿರುವ ಮನುಷ್ಯರು ಕೂಡಿಕೊಂಡು ದಾನ್ಯರನ್ನು ಸಂಧಿಸಿ ಅವರನ್ನು ಕೂಗಿದರು; 23 ಅವರು ತಮ್ಮ ಮುಖ ತಿರುಗಿಸಿ ವಿಾಕನಿಗೆ--ನೀನು ಗುಂಪನ್ನು ಕೂಡಿಸಿ ಬರುವುದಕ್ಕೆ ನಿನಗೆ ಏನಾಯಿತು ಅಂದರು. 24 ಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು. 25 ಆದರೆ ದಾನ್ಯರು ಅವ ನಿಗೆ--ಕೋಪಿಷ್ಠರು ನಿನ್ನ ಮೇಲೆ ಬೀಳದ ಹಾಗೆ, ನೀನು ನಿನ್ನ ಪ್ರಾಣವನ್ನೂ ನಿನ್ನ ಮನೆಯವರ ಪ್ರಾಣ ವನ್ನೂ ಕಳಕೊಳ್ಳದ ಹಾಗೆ, ನಿನ್ನ ಸ್ವರ ನಮ್ಮಲ್ಲಿ ಕೇಳಿ ಸದೆ ಇರಲಿ ಅಂದರು. 26 ದಾನ್ಯರು ತಮ್ಮ ಮಾರ್ಗ ವಾಗಿ ಹೋದರು. ಆಗ ಅವರು ತನಗಿಂತ ಬಲಿಷ್ಠ ರೆಂದು ವಿಾಕನು ನೋಡಿ ತಿರುಗಿಕೊಂಡು ತನ್ನ ಮನೆಗೆ ಹೋದನು. 27 ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು. 28 ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು. 29 ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು. 30 ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು. 31 ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
1 ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು. 2 ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು. 3 ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು. 4 ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು. 5 ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು. 6 ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು. 7 ಹೋಗುವದಕ್ಕೆ ಆ ಮನುಷ್ಯನು ಎದ್ದಾಗ ಅವನ ಮಾವನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಆ ರಾತ್ರಿ ಅಲ್ಲಿದ್ದನು. 8 ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು. 9 ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು. 10 ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು. 11 ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು. 12 ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು. 13 ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು. 14 ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾವಿಾನನಿಗೆ ಸೇರಿದ ಗಿಬೆಯ ಬಳಿಗೆ ಬರುವಾಗ ಸೂರ್ಯ ಮುಳು ಗಿತು. 15 ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು. 16 ಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಆ ಮನುಷ್ಯನು ಎಫ್ರಾಯಾಮ್ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು. 17 ಆ ಮುದುಕನು ತನ್ನ ಕಣ್ಣುಗಳನ್ನೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿ ತಿದ್ದ ಮಾರ್ಗದವನನ್ನು ನೋಡಿ--ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ ಅಂದನು. 18 ಅವನು ಇವನಿಗೆ--ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯಾಮ್ ಬೆಟ್ಟದ ಪಾರ್ಶ್ವಕ್ಕೆ ಹಾದು ಹೋಗು ತ್ತೇವೆ. ನಾನು ಅಲ್ಲಿಯವನು; ಈಗ ಕರ್ತನ ಮನೆಗೆ ಹೋಗುತ್ತೇನೆ; ಆದರೆ ನನ್ನನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ. 19 ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು. 20 ಆಗ ಆ ಮುದುಕನು ನಿನಗೆ ಸಮಾಧಾನವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ; ಹೇಗಾ ದರೂ ಬೀದಿಯೊಳಗೆ ಇಳುಕೊಳ್ಳಬೇಡವೆಂದು ಹೇಳಿ 21 ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು. 22 ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು. 23 ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ. 24 ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು. 25 ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು. 26 ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು. 27 ಅವಳ ಯಜ ಮಾನನು ಉದಯದಲ್ಲಿ ಎದ್ದು ಮನೆಯ ಬಾಗಲನ್ನು ತೆರೆದು ತನ್ನ ಮಾರ್ಗವಾಗಿ ಹೊರಡುವಾಗ ಇಗೋ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು. 28 ಆಗ ಅವನು ಅವಳಿಗೆ--ಏಳು, ಹೋಗೋಣ ಅಂದನು. ಆದರೆ ಪ್ರತ್ಯುತ್ತರವೇನೂ ಇಲ್ಲದೆ ಹೋಯಿತು. ಆಗ ಆ ಮನುಷ್ಯನು ಅವಳನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಸ್ಥಳಕ್ಕೆ ಹೋದನು. 29 ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು. 30 ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
1 ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು. 2 ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು. 3 ಇಸ್ರಾ ಯೇಲ್ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು. 4 ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು. 5 ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು. 6 ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು. 7 ಇಗೋ, ನೀವೆಲ್ಲರು ಇಸ್ರಾಯೇಲ್ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು. 8 ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು. 9 ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ. 10 ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ. 11 ಹೀಗೆಯೇ ಇಸ್ರಾಯೇಲ್ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು. 12 ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು? 13 ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು. 14 ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು. 15 ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು. 16 ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು. 17 ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು. 18 ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು. 19 ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು. 20 ಇಸ್ರಾಯೇಲಿನ ಮನುಷ್ಯರು ಬೆನ್ಯಾ ವಿಾನನ ಸಂಗಡ ಯುದ್ಧಮಾಡುವದಕ್ಕೆ ಹೊರಟರು; ಇಸ್ರಾಯೇಲಿನ ಮನುಷ್ಯರು ಗಿಬೆಯ ಬಳಿಯಲ್ಲಿ ಯುದ್ಧಕ್ಕೆ ವ್ಯೂಹಕಟ್ಟಿದರು. 21 ಆಗ ಬೆನ್ಯಾವಿಾನನ ಮಕ್ಕಳು ಗಿಬೆಯದಿಂದ ಹೊರಟು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿನದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು. 22 ಇಸ್ರಾಯೇಲ್ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು. 23 ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು. 24 ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು 25 ಇನ್ನೂ ಇಸ್ರಾಯೇಲ್ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು. 26 ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ 27 ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು 28 ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು. 29 ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು. 30 ಮೂರನೇ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನನ ಮಕ್ಕಳಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ ಗಿಬೆಯದ ಸವಿಾಪದಲ್ಲಿ ವ್ಯೂಹವನ್ನು ಕಟ್ಟಿದರು. 31 ಆಗ ಬೆನ್ಯಾವಿಾನನ ಮಕ್ಕಳು ಇಸ್ರಾ ಯೇಲ್ ಜನಕ್ಕೆ ಎದುರಾಗಿ ಹೊರಟು ಪಟ್ಟಣದ ಬಳಿಯಿಂದ ಹೊರಬಂದು ಅಡವಿಯಲ್ಲಿ ಹೆದ್ದಾರಿ ಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ 32 ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು. 33 ಇಸ್ರಾಯೇಲ್ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು. 34 ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು. 35 ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು. 36 ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು. 37 ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು. 38 ಇಸ್ರಾಯೇಲ್ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ. 39 ಇಸ್ರಾಯೇಲ್ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು. 40 ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು. 41 ಇಸ್ರಾಯೇಲ್ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು. 42 ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು. 43 ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು. 44 ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು. 45 ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು. 46 ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು. 47 ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು. 48 ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
1 ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು. 2 ಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು-- 3 ಇಸ್ರಾಯೇಲಿನ ದೇವರಾದ ಕರ್ತನೇ ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದ ದ್ದೇನು ಅಂದರು. 4 ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. 5 ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು. 6 ಆಗ ಇಸ್ರಾಯೇಲ್ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು. 7 ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು. 8 ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ. 9 ಜನರು ಲೆಕ್ಕ ಮಾಡಲ್ಪಟ್ಟಾಗ 10 ಇಗೋ, ಯಾಬೇಷ್ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ. 11 ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು. 12 ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು. 13 ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು. 14 ಆ ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ. 15 ಕರ್ತನು ಇಸ್ರಾಯೇಲ್ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು. 16 ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು. 17 ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು. 18 ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು. 19 ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು. 20 ಅವರು ಬೆನ್ಯಾವಿಾನನ ಮಕ್ಕಳಿಗೆನೀವು ಹೋಗಿ ದ್ರಾಕ್ಷೇ ತೋಟಗಳಲ್ಲಿ ಹೊಂಚಿ ಕೊಂಡಿರ್ರಿ. 21 ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು. 22 ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು. 23 ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು. 24 ಇಸ್ರಾಯೇಲ್ ಮಕ್ಕಳು ಆ ಕಾಲದಲ್ಲಿ ಆ ಸ್ಥಳ ವನ್ನು ಬಿಟ್ಟು ತಮ್ಮ ತಮ್ಮ ಗೋತ್ರಕ್ಕೂ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟು ಹೋದನು. 25 ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
1 ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು. 2 ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು. 3 ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು. 4 ಇವರು ಒರ್ಫಾ ರೂತ್ ಎಂಬ ಹೆಸರುಗಳುಳ್ಳ ಮೋವಾಬ್ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು. 5 ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು. 6 ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು. 7 ಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗ 8 ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ. 9 ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು. 10 ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ ನಿಶ್ಚಯವಾಗಿಯೂ ನಿನ್ನ ಜನರ ಬಳಿಗೆ ನಿನ್ನ ಸಂಗಡ ತಿರಿಗಿ ಬರುತ್ತೇವೆ ಅಂದರು. 11 ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ! 12 ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ 13 ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು. 14 ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು. 15 ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು. 16 ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. 17 ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು. 18 ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು. 19 ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು. 20 ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು. 21 ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು. 22 ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
1 ನೊವೊಮಿಯ ಗಂಡನಾದ ಎಲೀಮೆಲೆ ಕನ ಗೋತ್ರದಲ್ಲಿ ಬೋವಜನು ಎಂಬ ಹೆಸರುಳ್ಳ ಬಹಳ ಐಶ್ವರ್ಯವಂತನಾಗಿರುವ ಸಂಬಂಧಿ ಕನಿದ್ದನು. 2 ಮೋವಾಬ್ಯಳಾದ ರೂತಳು ನೊವೊಮಿಗೆ ನಾನು ಹೊಲಕ್ಕೆ ಹೋಗಿ ಯಾವನ ಕೃಪೆಯು ನನಗೆ ಆಗುವದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿಕೊಳ್ಳುವೆನು ಅಂದಳು. ಅದಕ್ಕೆ ಇವಳು ನನ್ನ ಮಗಳೇ, ಹೋಗು ಅಂದಳು. 3 ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು. 4 ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು. 5 ಬೋವಜನು ಕೊಯ್ಯುವವರ ಮೇಲೆ ಮೇಲ್ಗಾವಲಿಯಾಗಿ ಇಟ್ಟ ತನ್ನ ಸೇವಕನಿಗೆ ಇವಳು ಯಾರ ಹುಡುಗಿ ಅಂದನು. 6 ಅದಕ್ಕೆ ಕೊಯ್ಯು ವವರ ಮೇಲೆ ಮೇಲ್ಗಾವಲಿಯಾಗಿ ಇಡಲ್ಪಟ್ಟ ಆ ಸೇವಕನು ಪ್ರತ್ಯುತ್ತರವಾಗಿ ಇವಳು ಮೋವಾಬ್ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಹುಡುಗಿ. 7 ಆದರೆ ಇವಳು, ಕೊಯ್ಯುವವರ ಹಿಂದೆ ಕೊಯ್ದ ಸಿವುಡುಗಳಲ್ಲಿ ನಾನು ಹಕ್ಕಲಾರಿಸಿಕೊಳ್ಳಲೂ ಕೂಡಿಸಿಕೊಳ್ಳಲೂ ಅಪ್ಪಣೆ ಯಾಗಲಿ ಅಂದಳು. ಮನೆಯಲ್ಲಿ ಕ್ಷಣಮಾತ್ರವಿದ್ದು ಬೆಳಗಿನಿಂದ ಈ ವರೆಗೂ ಇಲ್ಲಿಯೇ ಇದ್ದಾಳೆ ಅಂದನು. 8 ಆಗ ಬೋವಜನು ರೂತಳಿಗೆ ನನ್ನ ಮಗಳೇ, ನನ್ನ ಮಾತು ಕೇಳುತ್ತೀಯಾ? ನೀನು ಹಕ್ಕಲಾದುಕೊಳ್ಳಲು ಅನ್ಯರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಸಂಗಡ ಕೂಡಿಕೊಂಡಿರು. 9 ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ; ಅವರ ಹಿಂದೆಯೇ ಹೋಗು, ಯಾವನಾದರೂ ನಿನ್ನನ್ನು ಮುಟ್ಟದ ಹಾಗೆ ಅವರಿಗೆ ಆಜ್ಞಾಪಿಸಿದೆನಲ್ಲಾ? ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ಪ್ರಾಯಸ್ಥರು ಸೇದಿಟ್ಟ ನೀರನ್ನು ಕುಡಿ ಅಂದನು. 10 ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು. 11 ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ. 12 ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು. 13 ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು. 14 ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು. 15 ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ; 16 ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು. 17 ಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು. 18 ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು. 19 ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು. 20 ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು. 21 ಅದಕ್ಕೆ ಮೋವಾಬ್ಯಳಾದ ರೂತಳು ಅವನು, ನನ್ನ ಪೈರೆಲ್ಲಾ ಕೊಯಿದು ತೀರುವ ವರೆಗೂ ನೀನು ನನ್ನ ಕೆಲಸದವರ ಸಂಗಡ ಕೂಡಿ ಕೊಂಡಿರು ಎಂದು ನನಗೆ ಹೇಳಿದನು ಅಂದಳು. 22 ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು. 23 ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
1 ಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ? 2 ಈಗ ನೀನು ಯಾರ ದಾಸಿಗಳ ಸಂಗಡ ಇದ್ದಿಯೋ ಆ ಬೋವಜನು ನಮ್ಮ ಸಂಬಂಧಿಕನಾಗಿದ್ದಾನಲ್ಲಾ? ಇಗೋ, ಅವನು ರಾತ್ರಿ ಯಲ್ಲಿ ಕಣದೊಳಗೆ ಜವೆಗೋಧಿಯನ್ನು ತೂರುವನು. 3 ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು. 4 ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳುಕೊಂಡಿದ್ದು ಹೋಗಿ ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು ಅಂದಳು. 5 ಅದಕ್ಕೆ ಇವಳು ನೀನು ನನಗೆ ಹೇಳಿದ್ದೆಲ್ಲಾ ಮಾಡುವೆನು ಅಂದಳು. 6 ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೆಲ್ಲಾ ಮಾಡಿದಳು. 7 ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು. 8 ಆದರೆ ಅರ್ಧ ರಾತ್ರಿಯಲ್ಲಿ ಆ ಮನುಷ್ಯನು ಹೆದರಿ ತಿರುಗಿಕೊಂಡಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿದ್ದಳು. 9 ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು. 10 ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ. 11 ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು. 12 ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ. 13 ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು. 14 ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು. 15 ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು. 16 ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು ನನ್ನ ಮಗಳೇ, ನಿನ್ನ ಕಾರ್ಯ ಏನಾಯಿತು? ಅಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು; 17 ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಈ ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು. 18 ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.
1 ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು. 2 ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿ ಯನ್ನು ಕರೆದು ಅವರಿಗೆ ಇಲ್ಲಿ ಕುಳಿತುಕೊಳ್ಳಿರಿ ಅಂದನು. ಅವರು ಕುಳಿತರು. 3 ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ. 4 ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು. 5 ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು. 6 ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ; 7 ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು. 8 ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು. 9 ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. 10 ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು. 11 ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು. 12 ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು. 13 ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು. 14 ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ. 15 ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು. 16 ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು. 17 ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು. 18 ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು; 19 ರಾಮನು ಅವ್ಮೆಾನಾದಾಬನನ್ನು ಪಡೆದನು; 20 ಅವ್ಮೆಾನಾದಾಬನು ನಹಶೋನನನ್ನು ಪಡೆದನು; 21 ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು; 22 ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
1 ಎಫ್ರಾಯಾಮ್ ಬೆಟ್ಟದಲ್ಲಿರುವ ರಾಮಾತಯಿಮ್ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3 2 ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ. 3 ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು. 4 ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು. 5 ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು. 6 ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು. 7 ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು. 8 ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು. 9 ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ 10 ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು. 11 ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು. 12 ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು. 13 ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು. 14 ಏಲಿಯು ಅವಳಿಗೆ--ಎಷ್ಟರ ವರೆಗೆ ಅಮಲೇರಿದವಳಾಗಿರುವಿ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟು ಹೋಗಲಿ ಅಂದನು. 15 ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು. 16 ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು. 17 ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು. 18 ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ. 19 ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು. 20 ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು. 21 ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ; 22 ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು. 23 ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು. 24 ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು. 25 ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಒಂದು ಹೋರಿಯನ್ನು ಕೊಯ್ದ ತರುವಾಯ ಮಗುವನ್ನು ಏಲಿಯನ ಬಳಿಗೆ ತಂದರು. 26 ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು. 27 ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು. 28 ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
1 ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು. 2 ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ. 3 ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ. 4 ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ. 5 ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು. 6 ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ. 7 ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. 8 ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ. 9 ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು. 10 ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು. 11 ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು. 12 ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು. 13 ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು 14 ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು. 15 ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು. 16 ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು. 17 ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು. 18 ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು. 19 ಇದಲ್ಲದೆ ಅವನ ತಾಯಿ ಪ್ರತಿ ವರುಷದಲ್ಲೂ ವರುಷದ ಬಲಿಯನ್ನು ಅರ್ಪಿಸಲು ತನ್ನ ಗಂಡನ ಸಂಗಡ ಬರುವಾಗ ಅವನಿಗೆ ಒಂದು ಚಿಕ್ಕ ನಿಲುವಂಗಿಯನ್ನು ಮಾಡಿಕೊಂಡು ಬರುತಿದ್ದಳು. 20 ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು. 21 ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು. 22 ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ-- 23 ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ. 24 ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ. 25 ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು. 26 ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು. 27 ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ? 28 ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ? 29 ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು? 30 ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು. 31 ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು. 32 ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ. 33 ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು. 34 ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು. 35 ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು. 36 ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
1 ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ. 2 ಆ ಕಾಲ ದಲ್ಲಿ ಆದದ್ದೇನಂದರೆ, ಏಲಿಯು ತನ್ನ ಸ್ಥಳದಲ್ಲಿ ಮಲ ಗಿದ್ದನು; ನೋಡುವದಕ್ಕಾಗದಂತೆ ಅವನ ಕಣ್ಣುಗಳು ಮೊಬ್ಬಾಗುತ್ತಿದ್ದವು. 3 ದೇವರ ಮಂಜೂಷವಿರುವ ಕರ್ತನ ಮಂದಿರದಲ್ಲಿ ದೇವರ ದೀಪವು ಆರಿಹೋಗು ವದಕ್ಕಿಂತ ಮುಂಚೆ ಸಮುವೇಲನು ಮಲಗಿದ್ದನು; ಆಗ ಕರ್ತನು ಸಮುವೇಲನನ್ನು ಕರೆದನು. 4 ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. 5 ಅದಕ್ಕವನು--ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಅಂದನು. 6 ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು. 7 ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ. 8 ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು. 9 ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು. 10 ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು. 11 ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು; 12 ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು. 13 ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ. 14 ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು. 15 ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು. 16 ಆಗ ಏಲಿಯು ಸಮುವೇಲನನ್ನು ಕರೆದು ಅವನಿಗೆ ನನ್ನ ಮಗನಾದ ಸಮುವೇಲನೇ ಅಂದನು. 17 ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು. 18 ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು. 19 ಸಮುವೇಲನು ಬೆಳೆಯುತ್ತಾ ಬಂದನು; ಕರ್ತನು ಅವನ ಸಂಗಡ ಇದ್ದು ಆತನ ವಾಕ್ಯಗಳಲ್ಲಿ ಒಂದಾ ದರೂ ಭೂಮಿಗೆ ಬಿದ್ದು ಹೋಗಗೊಡಿಸಲಿಲ್ಲ. 20 ಆಗ ಸಮುವೇಲನು ಕರ್ತನ ಪ್ರವಾದಿಯಾಗಿ ಸ್ಥಿರಮಾಡಲ್ಪ ಟ್ಟನೆಂದು ದಾನ್ ಊರು ಮೊದಲುಗೊಂಡು ಬೇರ್ಷ ಬದ ವರೆಗೂ ಇದ್ದ ಇಸ್ರಾಯೇಲ್ಯರೆಲ್ಲರು ತಿಳಿದಿದ್ದರು. 21 ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
1 ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು. 2 ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು. 3 ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು. 4 ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು; 5 ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು. 6 ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಈ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು. 7 ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ. 8 ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ. 9 ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು. 10 ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು. 11 ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು. 12 ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು. 13 ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು. 14 ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು. 15 ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು. 16 ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು. 17 ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು. 18 ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು. 19 ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು. 20 ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು. 21 ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು. 22 ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
1 ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು. 2 ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು. 3 ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. 4 ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು. 5 ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ. 6 ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು. 7 ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು. 8 ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್ ದೇವರ ಮಂಜೂಷವು ಗತ್ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಗತ್ಗೆ ಒಯ್ದರು. 9 ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು. 10 ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು. 11 ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು. 12 ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
1 ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು. 2 ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು. 3 ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು. 4 ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ. 5 ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು. 6 ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ? 7 ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ ನೊಗವನ್ನು ಹೊರದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು 8 ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ. 9 ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು. 10 ಆ ಮನುಷ್ಯರು ಆ ಪ್ರಕಾರವೇ ಎರಡು ಕರೆ ಯುವ ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು 11 ಕರ್ತನ ಮಂಜೂಷವನ್ನೂ ಬಂಗಾರದ ಇಲಿಗಳನ್ನೂ ತಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಹಿಡಿಯುವ ಚಿಕ್ಕ ಪೆಟ್ಟಿಗೆ ಯನ್ನೂ ಆ ಬಂಡಿಯ ಮೇಲಿಟ್ಟರು. 12 ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು. 13 ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು. 14 ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. 15 ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು. 16 ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು. 17 ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು. 18 ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು. 19 ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು. 20 ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು. 21 ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
1 ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು. 2 ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು. 3 ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು. 4 ಆಗ ಇಸ್ರಾಯೇಲ್ ಮಕ್ಕಳು ಬಾಳನ್ನೂ ಅಷ್ಟೋರೆತ್ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು. 5 ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ-- 6 ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು. 7 ಆದರೆ ಇಸ್ರಾಯೇಲ್ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು. 8 ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು. 9 ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು. 10 ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು. 11 ಆಗ ಇಸ್ರಾಯೇಲ್ಯರು ಮಿಚ್ಛೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ವರೆಗೂ ಅವರನ್ನು ಹೊಡೆದರು. 12 ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು. 13 ಫಿಲಿಷ್ಟಿಯರು ತಗ್ಗಿಸಲ್ಪಟ್ಟು ಇಸ್ರಾ ಯೇಲಿನ ಮೇರೆಯಲ್ಲಿ ಬಾರದೆ ಇದ್ದರು. ಇದಲ್ಲದೆ ಸಮುವೇಲನು ಇದ್ದ ದಿವಸಗಳೆಲ್ಲಾ ಕರ್ತನ ಕೈ ಫಿಲಿಷ್ಟಿ ಯರಿಗೆ ವಿರೋಧವಾಗಿತ್ತು. 14 ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲು ಗೊಂಡು ಗತ್ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು. 15 ಇದಲ್ಲದೆ ಸಮುವೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. 16 ಅವನು ಪ್ರತಿವರುಷ ಹೊರಟು ಬೇತೇಲ್ ಗಿಲ್ಗಾಲ್ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. 17 ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
1 ಸಮುವೇಲನು ವೃದ್ಧನಾದಾಗ ಆಗಿದ್ದೇನಂದರೆ ತನ್ನ ಕುಮಾರರನ್ನು ಇಸ್ರಾ ಯೇಲಿಗೆ ನ್ಯಾಯಾಧಿಪತಿಗಳಾಗಿರುವದಕ್ಕೆ ಇಟ್ಟನು. 2 ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು. 3 ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು. 4 ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು 5 ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು. 6 ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು. 7 ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ. 8 ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ. 9 ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು. 10 ಆಗ ಸಮುವೇಲನು ಅರಸನನ್ನು ಕೇಳಿದ ಜನ ರಿಗೆ ಕರ್ತನ ವಾಕ್ಯಗಳನ್ನೆಲ್ಲಾ ಹೇಳಿದನು. 11 ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು. 12 ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು. 13 ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು. 14 ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು. 15 ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು. 16 ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು. 17 ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ. 18 ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ. 19 ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು; 20 ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು. 21 ಸಮುವೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಕರ್ತನಿಗೆ ಹೇಳಿದನು. 22 ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.
1 ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು. 2 ಇವನಿಗೆ ಒಳ್ಳೇ ಯೌವನಸ್ಥ ನಾದ ಸೌಲನೆಂಬ ಹೆಸರುಳ್ಳ ಒಬ್ಬ ಸುಂದರನಾದ ಮಗನಿದ್ದನು. ಇಸ್ರಾ ಯೇಲ್ ಮಕ್ಕಳಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದವನಾಗಿದ್ದನು. 3 ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದರಿಂದ ಅವನು ತನ್ನ ಮಗನಾದ ಸೌಲ ನಿಗೆ--ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರಕೊಂಡು ಕತ್ತೆಗಳನ್ನು ಹುಡುಕಲು ಹೋಗಬೇಕು ಅಂದನು. 4 ಹಾಗೆಯೇ ಅವನು ಎಫ್ರಾಯಾಮ್ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು. 5 ಅವರು ಚೂಫ್ ಎಂಬ ದೇಶಕ್ಕೆ ಬಂದಾಗ ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ--ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು ನಮಗೋಸ್ಕರ ಚಿಂತೆಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ ಅಂದನು. 6 ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು. 7 ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು. 8 ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು. 9 (ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು. 10 ಆಗ ಸೌಲನು ಸೇವಕನಿಗೆನಿನ್ನ ಮಾತು ಒಳ್ಳೇದು; ನಾವು ಹೋಗೋಣ ಬಾ ಅಂದನು. ಅವರು ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು. 11 ಅವರು ದಿನ್ನೆಯನ್ನು ಹತ್ತಿ ಪಟ್ಟಣ ದೊಳಗೆ ಹೋಗುವಾಗ ನೀರು ಸೇದಲು ಬರುವ ಹುಡುಗಿಯರನ್ನು ನೋಡಿ -- ದರ್ಶಿಯು ಇಲ್ಲಿ ಇದ್ದಾನೋ? ಎಂದು ಅವರನ್ನು ಕೇಳಿದರು. 12 ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ. 13 ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು. 14 ಅವರು ಪಟ್ಟಣಕ್ಕೆ ಏರಿ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ ಇಗೋ, ಸಮುವೇಲನು ಗುಡ್ಡದ ಮೇಲೆ ಏರಿ ಹೋಗು ವದಕ್ಕೆ ಅವರಿಗೆದುರಾಗಿ ಹೊರಟು ಬಂದನು. 15 ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ-- 16 ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು. 17 ಸಮುವೇಲನು ಸೌಲನನ್ನು ನೋಡಿದಾಗ ಕರ್ತನು ಅವನಿಗೆ--ಇಗೋ, ನಾನು ನಿನಗೆ ಹೇಳಿದ ಮನು ಷ್ಯನು ಇವನೇ; ಇವನೇ ನನ್ನ ಜನರನ್ನು ಆಳುವನು ಅಂದನು. 18 ಸೌಲನು ಬಾಗಲಲ್ಲಿ ಇರುವ ಸಮು ವೇಲನ ಸವಿಾಪಕ್ಕೆ ಬಂದು ಅವನಿಗೆ--ದರ್ಶಿಯ ಮನೆಯು ಎಲ್ಲಿ ಇದೆ ದಯಮಾಡಿ ನೀನು ನನಗೆ ತಿಳಿಸು ಅಂದನು. 19 ಸಮುವೇಲನು ಸೌಲನಿಗೆ ಪ್ರತ್ಯುತ್ತ ರವಾಗಿ--ದರ್ಶಿಯು ನಾನೇ; ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು, ಈ ಹೊತ್ತು ನೀವು ನನ್ನ ಸಂಗಡ ತಿನ್ನಬೇಕು; ನಾಳೆ ಹೊತ್ತಾರೆ ನಿಮ್ಮನ್ನು ಕಳುಹಿಸುವೆನು; ನಿಮ್ಮ ಹೃದಯದಲ್ಲಿರುವದನ್ನೆಲ್ಲಾ ನಿಮಗೆ ತಿಳಿಯಪಡಿಸುವೆನು ಅಂದನು. 20 ಇಂದಿಗೆ ಮೂರನೇ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳ ಮೇಲೆ ನಿನ್ನ ಹೃದಯ ಇಡಬೇಡ; ಯಾಕಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆ ಯೆಲ್ಲಾ ಯಾರ ಮೇಲೆ ಇರುವದು? ನಿನ್ನ ಮೇಲೆಯೂ ನಿನ್ನ ತಂದೆಯ ಮನೆಯವರೆಲ್ಲರ ಮೇಲೆಯೂ ಅಲ್ಲವೋ ಅಂದನು. 21 ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು. 22 ಆಗ ಸಮುವೇಲನು ಸೌಲನನ್ನು ಅವನ ಸೇವಕನನ್ನು ಕರ ತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳ ಕೊಟ್ಟನು. 23 ಅವರು ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುವೇಲನು ಅಡಿಗೆಯವನಿಗೆ--ನಾನು ನಿನ್ನ ಕೈಯಲ್ಲಿ ಕೊಟ್ಟು, ಇಡಬೇಕೆಂದು ಹೇಳಿದ ಪಾಲನ್ನು ತಂದಿಡು ಅಂದನು. 24 ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುವೇಲನು ಸೌಲನಿಗೆ--ಇಗೋ, ಇದು ನಿನ ಗೋಸ್ಕರ ಪ್ರತ್ಯೇಕಿಸಿದ್ದು ತೆಗೆದುಕೊಂಡು ತಿನ್ನು. ಯಾಕಂದರೆ ನಾನು ಜನರನ್ನು ಕರೆದಿದ್ದೇನೆಂದು ಹೇಳಿದ ಕಾಲದಿಂದ ಈ ವರೆಗೂ ನಿನಗೋಸ್ಕರ ಇಡಲ್ಪಟ್ಟಿತ್ತು ಅಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುವೇಲನ ಸಂಗಡ ಊಟಮಾಡಿದನು. 25 ಅವರು ಗುಡ್ಡದಿಂದ ಇಳಿದು ಪಟ್ಟಣಕ್ಕೆ ಬಂದಾಗ ಸಮು ವೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು. 26 ಅವರು ಸೂರ್ಯೋದಯದಲ್ಲಿ ಎದ್ದು ಸಮುವೇಲನು ಸೌಲನನ್ನು ಮಾಳಿಗೆಯ ಮೇಲೆ ಕರೆದು--ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಸೌಲನು ಎದ್ದನು; ಆಗ ಸೌಲನೂ ಸಮುವೇಲನೂ ಇಬ್ಬರೂ ಹೊರಗೆ ಹೊರಟರು. 27 ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
1 ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ? 2 ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು. 3 ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ. 4 ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ. 5 ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು. 6 ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ. 7 ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು. 8 ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು. 9 ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು. 10 ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು. 11 ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು ಅವನು ಪ್ರವಾದಿಗಳ ಸಂಗಡ ಇದ್ದು ಪ್ರವಾದಿಸುವದನ್ನು ಕಂಡಾಗ ಅವರು ಒಬ್ಬರ ಸಂಗಡ ಒಬ್ಬರು--ಕೀಷನ ಮಗನಿಗೆ ಬಂದದ್ದು ಇದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ ಅಂದರು. 12 ಅದಕ್ಕೆ ಅಲ್ಲಿಯವನೊಬ್ಬನು ಪ್ರತ್ಯುತ್ತರವಾಗಿ--ಇವರ ತಂದೆ ಯಾರು ಅಂದನು. ಆದದರಿಂದ ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ ಎಂಬ ಸಾಮತಿ ಉಂಟಾ ಯಿತು. 13 ಅವನು ಪ್ರವಾದಿಸಿ ತೀರಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು. 14 ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು. 15 ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು. 16 ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ. 17 ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- 18 ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು. 19 ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು. 20 ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು. 21 ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ. 22 ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು. 23 ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು. 24 ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು. 25 ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು. 26 ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು. 27 ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
1 ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು. 2 ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು. 3 ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು. 4 ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು. 5 ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು. 6 ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ 7 ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು. 8 ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು. 9 ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು. 10 ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು. 11 ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ. 12 ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು. 13 ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು. 14 ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು. 15 ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
1 ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ--ಇಗೋ, ನೀವು ನನಗೆ ಹೇಳಿದ್ದೆಲ್ಲಾದರಲ್ಲಿ ನಿಮ್ಮ ಮಾತು ಕೇಳಿ ನಿಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸಿದೆನು. 2 ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ. 3 ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು. 4 ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು. 5 ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು. 6 ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ. 7 ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ. 8 ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು. 9 ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು. 10 ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು. 11 ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು. 12 ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ. 13 ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ. 14 ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ. 15 ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು. 16 ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ. 17 ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು. 18 ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು. 19 ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು. 20 ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ. 21 ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ. 22 ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. 23 ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು. 24 ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ. 25 ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
1 ಸೌಲನು ಒಂದು ವರುಷ ಆಳಿದನು;ಇಸ್ರಾಯೇಲ್ಯರನ್ನು ಎರಡು ವರುಷ ಆಳಿ ದಾಗ ಸೌಲನು ಇಸ್ರಾಯೇಲ್ಯರಲ್ಲಿ ಮೂರು ಸಾವಿರ ಜನರನ್ನು ಆದುಕೊಂಡನು. 2 ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು. 3 ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು. 4 ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು. 5 ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು. 6 ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು. 7 ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು. 8 ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು. 9 ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು. 10 ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು. 11 ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ 12 ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು. 13 ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು. 14 ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು. 15 ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು. 16 ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು. 17 ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು; 18 ಮತ್ತೊಂದು ಗುಂಪು ಬೇತ್ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು. 19 ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ. 20 ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು. 21 ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು. 22 ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು. 23 ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
1 ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ. 2 ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು. 3 ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು. 4 ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು. 5 ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು. 6 ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು. 7 ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು. 8 ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು. 9 ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು. 10 ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು. 11 ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು. 12 ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು. 13 ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು. 14 ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು. 15 ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು. 16 ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು. 17 ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ--ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ ಅಂದನು. ಅವರು ಲೆಕ್ಕ ನೋಡುವಾಗ ಇಗೋ, ಯೋನಾತಾನನೂ ಅವನ ಆಯುಧಗಳನ್ನು ಹೊರುವವನೂ ಅಲ್ಲಿ ಇರಲಿಲ್ಲ. 18 ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು. 19 ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು. 20 ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು. 21 ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರ ಕೂಡ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಇಬ್ರಿಯರು ಸೌಲ ಯೋನಾತಾನನ ಮತ್ತು ಇಸ್ರಾಯೇಲ್ಯರ ಸಂಗಡ ಕೂಡಿಕೊಂಡರು. 22 ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು. 23 ಹೀಗೆ ಕರ್ತನು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದನು. ಇದಲ್ಲದೆ ಆ ಯುದ್ಧವು ಬೇತಾವೆನಿನ ವರೆಗೂ ನಡೆಯಿತು. 24 ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು. 25 ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು. 26 ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ. 27 ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು. 28 ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು. 29 ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು. 30 ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು. 31 ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋ ನಿನ ವರೆಗೂ ಫಿಲಿಷ್ಟಿಯರನ್ನು ಸದೆಬಡಿದದರಿಂದ ಅವರು ಬಹಳವಾಗಿ ದಣಿದುಹೋದರು. 32 ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು. 33 ಆಗ ಅವರು ಸೌಲನಿಗೆ--ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವದರಿಂದ ಕರ್ತನಿಗೆ ವಿರೋಧವಾಗಿ ಪಾಪ ಮಾಡುತ್ತಾರೆಂದು ತಿಳಿಸಿದರು. ಅದಕ್ಕವನು--ನೀವು ದ್ರೋಹ ಮಾಡಿ ದಿರಿ; ಈಗ ಒಂದು ದೊಡ್ಡಕಲ್ಲನ್ನು ನನ್ನ ಬಳಿಗೆ ಹೊರ ಳಿಸಿ ಬಿಡಿರಿ ಅಂದನು. 34 ಸೌಲನು ಅವರಿಗೆ--ನೀವು ಜನರಲ್ಲಿ ಚದರಿಹೋಗಿ ರಕ್ತ ಸಹಿತವಾಗಿ ತಿಂದು ಕರ್ತನಿಗೆ ವಿರೋಧವಾಗಿ ಪಾಪಮಾಡದೆ ಪ್ರತಿಯೊ ಬ್ಬನು ತನ್ನ ಎತ್ತನ್ನೂ ಕುರಿಯನ್ನೂ ನನ್ನ ಬಳಿಗೆ ತಂದು ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ ಅಂದನು. ಆದದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ಆ ರಾತ್ರಿಯಲ್ಲಿ ತನ್ನ ಸಂಗಡ ತಕ್ಕೊಂಡು ಬಂದು ಅಲ್ಲಿ ಕೊಯ್ದರು. 35 ಸೌಲನು ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಅವನು ಕಟ್ಟಿಸಿದ ಮೊದಲನೇ ಬಲಿಪೀಠವು. 36 ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು. 37 ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು. 38 ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ. 39 ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ. 40 ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು. 41 ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು. 42 ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು. 43 ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು. 44 ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು. 45 ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು. 46 ಆಗ ಸೌಲನು ಫಿಲಿಷ್ಟಿಯರನ್ನು ಹಿಂಬಾಲಿಸುವದನ್ನು ಬಿಟ್ಟುಬಿಟ್ಟನು. ಫಿಲಿಷ್ಟಿಯರು ತಮ್ಮ ಸ್ಥಳಕ್ಕೆ ಹೋದರು. 47 ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು. 48 ಅವನು ಸೈನ್ಯವನ್ನು ಕೂಡಿಸಿ ಕೊಂಡು ಅಮಾಲೇಕ್ಯರನ್ನು ಸಂಹರಿಸಿದನು; ಇಸ್ರಾ ಯೇಲನ್ನು ಸುಲುಕೊಳ್ಳುವವರೆಲ್ಲರ ಕೈಗೂ ತಪ್ಪಿಸಿ ಬಿಟ್ಟನು. 49 ಸೌಲನ ಕುಮಾರರ ಹೆಸರುಗಳು ಯೋನಾ ತಾನ್ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್, ಚಿಕ್ಕವಳಾದ ವಿಾಕಲ್ ಎಂಬ ಇಬ್ಬರು ಕುಮಾರ್ತೆಯರು ಇದ್ದರು. 50 ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು. 51 ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು. 52 ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
1 ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು. 2 ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ. 3 ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು. 4 ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು. 5 ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು. 6 ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು. 7 ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು. 8 ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು. 9 ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು. 10 ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ. 11 ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು. 12 ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು. 13 ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು. 14 ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು. 15 ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು. 16 ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು. 17 ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ? 18 ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು. 19 ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು. 20 ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು. 21 ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು. 22 ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು. 23 ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು. 24 ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು. 25 ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು. 26 ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು. 27 ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು. 28 ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು. 29 ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು. 30 ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು. 31 ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು. 32 ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು. 33 ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು. 34 ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು. 35 ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
1 ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು. 2 ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು. 3 ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು. 4 ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು. 5 ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು. 6 ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು. 7 ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು. 8 ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು. 9 ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು. 10 ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು. 11 ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು. 12 ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು. 13 ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು. 14 ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು; 15 ಕರ್ತನಿಂದ ಬಂದ ದುರಾತ್ಮವು ಅವ ನನ್ನು ಪೀಡಿಸಿತು. ಆಗ ಸೌಲನ ಸೇವಕರು ಅವ ನಿಗೆ--ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಬಾಧಿಸುತ್ತದೆ; 16 ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು. 17 ಸೌಲನು ತನ್ನ ಸೇವಕರಿಗೆ--ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬ ನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರಕೊಂಡು ಬನ್ನಿರಿ ಅಂದನು. 18 ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು. 19 ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು. 20 ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು. 21 ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು. 22 ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ--ದಾವೀದನು ನನ್ನ ಸಮ್ಮುಖ ದಲ್ಲಿ ನಿಲ್ಲುವ ಹಾಗೆ ಕೇಳಿಕೊಳ್ಳುತ್ತೇನೆ; ಯಾಕಂದರೆ ನನ್ನ ಸಮ್ಮುಖದಲ್ಲಿ ಅವನಿಗೆ ದಯೆದೊರಕಿತು ಅಂದನು. 23 ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.
1 ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು. 2 ಹಾಗೆಯೇ ಸೌಲನೂ ಇಸ್ರಾಯೇಲ್ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು. 3 ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿ ಯಲ್ಲಿಯೂ ಇಸ್ರಾಯೇಲ್ಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು, ಅವರ ಮಧ್ಯದಲ್ಲಿ ತಗ್ಗು ಇತ್ತು. 4 ಆದರೆ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು. 5 ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು. 6 ಅವನ ಕಾಲು ಗಳಲ್ಲಿ ಹಿತ್ತಾಳೆಯ ಚಮ್ಮಳಿಗೆ, ಅವನ ತೋಳುಗಳ ಮಧ್ಯದಲ್ಲಿ ಬರ್ಜಿ ಇತ್ತು. 7 ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು. 8 ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ. 9 ಅವನು ನನ್ನ ಸಂಗಡ ಯುದ್ಧ ಮಾಡಬಲ್ಲವನಾಗಿದ್ದು ನನ್ನನ್ನು ಕೊಂದರೆ ನಾವು ನಿಮಗೆ ಸೇವಕರಾಗಿರುವೆವು; ನಾನು ಅವನ ಸಂಗಡ ಯುದ್ಧಮಾಡಬಲ್ಲವನಾಗಿದ್ದು ಅವನನ್ನು ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು ಅಂದನು. 10 ಆ ಫಿಲಿಷ್ಟಿಯನು--ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು. 11 ಸೌಲನೂ ಸಮಸ್ತ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಎದೆಗುಂದಿ ಬಹು ಭಯಪಟ್ಟರು. 12 ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು. 13 ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು. 14 ಆದರೆ ದಾವೀದನು ಚಿಕ್ಕವನಾ ಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. 15 ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು. 16 ಫಿಲಿಷ್ಟಿಯನು ಉದ ಯದಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು. 17 ಇಷಯನು ತನ್ನ ಮಗನಾದ ದಾವೀದನಿಗೆನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ ಈ ಹತ್ತು ರೊಟ್ಟಿಗಳನ್ನೂ ತಕ್ಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಓಡಿ ಹೋಗು. 18 ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು. 19 ಆಗ ಸೌಲನೂ ಇವರೂ ಇಸ್ರಾಯೇಲ್ಯರೆಲ್ಲರೂ ಫಿಲಿಷ್ಟಿ ಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧಮಾಡುತ್ತಿದ್ದರು. 20 ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು. 21 ಇಸ್ರಾಯೇಲ್ಯರೂ ಫಿಲಿಷ್ಟಿ ಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು. 22 ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು. 23 ಅವನು ಇವರ ಸಂಗಡ ಮಾತನಾಡುತ್ತಾ ಇರುವಾಗ ಇಗೋ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು ಮೊದಲಿನ ಹಾಗೆಯೇ ಮಾತನಾಡಿದನು; ಆ ಮಾತುಗಳನ್ನು ದಾವೀದನು ಕೇಳಿದನು. 24 ಇಸ್ರಾಯೇಲ್ ಮನುಷ್ಯ ರೆಲ್ಲರೂ ಅವನನ್ನು ನೋಡಿ ಬಹು ಭಯಪಟ್ಟು ಅವನ ಬಳಿಯಿಂದ ಓಡಿಹೋದರು. 25 ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು. 26 ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು. 27 ಜನರು ಆ ಮಾತಿಗೆ ಸರಿಯಾಗಿ--ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು; 28 ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು. 29 ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು. 30 ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರಿಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಪ್ರತ್ಯುತ್ತರಕೊಟ್ಟರು. 31 ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು. 32 ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು. 33 ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು. 34 ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು. 35 ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು. 36 ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು. 37 ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು. 38 ಆಗ ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ತೊಡಿಸಿ ಅವನ ತಲೆಯ ಮೇಲೆ ಒಂದು ಹಿತ್ತಾಳೆಯ ಶಿರಸ್ತ್ರಾಣವನ್ನು ಇಟ್ಟು ಅವನಿಗೆ ಕವಚವನ್ನು ತೊಡಿಸಿದನು. 39 ದಾವೀದನು ಅವನ ಕತ್ತಿಯನ್ನು ತನ್ನ ಆಯುಧಗಳ ಮೇಲೆ ಕಟ್ಟಿಕೊಂಡು ಹೋಗಬೇಕೆಂದಿದ್ದನು. ಆದರೆ ಅದು ಅವನಿಗೆ ಅಭ್ಯಾಸ ವಿದ್ದಿಲ್ಲ, ಆಗ ದಾವೀದನು ಸೌಲನಿಗೆ--ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗ ಲಾರೆನು ಎಂದು ಹೇಳಿ ಅವುಗಳನ್ನು ಬಿಚ್ಚಿಹಾಕಿ 40 ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು. 41 ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು. 42 ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ 43 ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು. 44 ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು. 45 ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ. 46 ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. 47 ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. 48 ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ 49 ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು. 50 ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು. 51 ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು. 52 ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು. 53 ಇಸ್ರಾಯೇಲ್ ಮಕ್ಕಳು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರಿಗಿ ಬಂದು ಅವರ ಡೇರೆಗಳನ್ನು ಸೂರೆಮಾಡಿದರು. 54 ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು. 55 ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು. 56 ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು. 57 ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು. 58 ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
1 ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು. 2 ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ. 3 ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು. 4 ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು. 5 ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು. 6 ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು. 7 ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು. 8 ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು. 9 ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು. 10 ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು. 11 ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು. 12 ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು; 13 ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು. 14 ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು. 15 ಕರ್ತನು ಅವನ ಸಂಗಡ ಇದ್ದನು. ಅವನು ಮಹಾಬುದ್ಧಿವಂತನಾಗಿ ನಡೆಯುವದನ್ನು ಸೌಲನು ನೋಡಿ ಅವನಿಗೆ ಭಯ ಪಟ್ಟಿದ್ದನು. 16 ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೋಗುತ್ತಾ ಬರುತ್ತಾ ಇರುವದರಿಂದ ಅವನನ್ನು ಪ್ರೀತಿ ಮಾಡಿದರು. 17 ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು. 18 ದಾವೀದನು ಸೌಲನಿಗೆ--ಅರಸನಿಗೆ ಅಳಿಯನಾಗಿ ರುವದಕ್ಕೆ ನಾನೆಷ್ಟರವನು? ನನ್ನ ಜೀವನ ಏನು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರ ಅಂದನು. 19 ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು. 20 ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು. 21 ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು. 22 ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು. 23 ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು. 24 ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು. 25 ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು. 26 ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು. 27 ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. 28 ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು; 29 ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು. 30 ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
1 ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು. 2 ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ. 3 ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು. 4 ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ; 5 ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು. 6 ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು. 7 ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು. 8 ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು. 9 ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು. 10 ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು. 11 ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ 12 ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು. 13 ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು. 14 ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು. 15 ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. 16 ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು; 17 ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು. 18 ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು. 19 ಇಗೋ, ದಾವೀದನು ರಾಮದ ನಯೋತಿನಲ್ಲಿ ಇದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಿತು. 20 ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು. 21 ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು. 22 ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು. 23 ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು. 24 ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
1 ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು ಅವನ ಮುಂದೆ--ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣ ವನ್ನು ತೆಗೆಯುವ ಹಾಗೆ ನಾನು ಅವನಿಗೆ ಮಾಡಿದ ಪಾಪವೇನು ಅಂದನು. 2 ಅವನು ಇವನಿಗೆ--ಅದು ಆಗಬಾರದು; ನೀನು ಸಾಯುವದಿಲ್ಲ; ಇಗೋ, ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ ದೊಡ್ಡ ಕಾರ್ಯವನ್ನಾದರೂ ಮಾಡುವದಿಲ್ಲ. ಈ ಕಾರ್ಯವನ್ನು ಯಾಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು ಅಂದನು. 3 ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು. 4 ಆಗ ಯೋನಾತಾನನು ದಾವೀದನಿಗೆ--ನಿನ್ನ ಪ್ರಾಣವು ಆಶಿಸುವದನ್ನು ನಿನ ಗೋಸ್ಕರ ನಾನು ಮಾಡುವೆನು ಅಂದನು. 5 ದಾವೀ ದನು ಯೋನಾತಾನನಿಗೆ--ಇಗೋ, ನಾಳೆ ಅಮಾ ವಾಸ್ಯೆ; ಆದದರಿಂದ ನಾನು ಅರಸನ ಸಂಗಡ ಪಂಕ್ತಿ ಯಲ್ಲಿ ಊಟ ಮಾಡಲೇಬೇಕಾಗಿರುವದು. ನಾನು ಮೂರನೇ ದಿವಸದ ಸಾಯಂಕಾಲದ ವರೆಗೆ ಹೊಲ ದಲ್ಲಿ ಬಚ್ಚಿಟ್ಟುಕೊಂಡಿರಲು ನನ್ನನ್ನು ಹೋಗಗೊಡಿಸು. 6 ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು. 7 ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ. 8 ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು. 9 ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು. 10 ದಾವೀದನು ಯೋನಾತಾನನಿಗೆ--ನಿನ್ನ ತಂದೆಯು ನಿನಗೆ ಕಠಿಣವಾದ ಪ್ರತ್ಯುತ್ತರ ಹೇಳಿದರೆ ಅದನ್ನು ನನಗೆ ತಿಳಿಸುವವನು ಯಾರು ಅಂದನು. 11 ಯೋನಾತಾನನು ದಾವೀದನಿಗೆ--ನಾವು ಹೊಲಕ್ಕೆ ಹೋಗೋಣ ಬಾ ಅಂದನು. ಹಾಗೆಯೇ ಅವರಿಬ್ಬರು ಹೊಲಕ್ಕೆ ಹೊರಟುಹೋದರು. 12 ಯೋನಾತಾನನು ದಾವೀದನಿಗೆ--ಇಸ್ರಾಯೇ ಲ್ಯರ ದೇವರಾದ ಕರ್ತನೇ, ನಾನು ನಾಳೆನಾಡಿದ್ದರೊ ಳಗೆ ನನ್ನ ತಂದೆಯನ್ನು ವಿಚಾರಿಸಲು ಇಗೋ, ದಾವೀದನ ಮೇಲೆ ದಯವಾದರೆ ನಿನಗೆ ತಿಳಿಸುವ ಹಾಗೆ ಹೇಳಿ ಕಳುಹಿಸದೆ ಇದ್ದರೆ ಕರ್ತನು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ. 13 ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು. 14 ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ 15 ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು. 16 ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು. 17 ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು. 18 ಯೋನಾತಾನನು ದಾವೀದನಿಗೆ--ನಾಳೆ ಅಮಾ ವಾಸ್ಯೆ; ನೀನು ಅಲ್ಲಿ ಇಲ್ಲದಿರುವದರಿಂದ ನಿನ್ನ ಸ್ಥಳವು ಬರಿದಾಗಿರುವದು. 19 ನೀನು ಮೂರು ದಿವಸ ತಡೆದ ತರುವಾಯ ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರಿಗಿ ಬಂದು ಏಜಲ್ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು. 20 ಆಗ ನಾನು ಗುರಿ ಇಟ್ಟವನ ಹಾಗೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆಯುವೆನು. 21 ಇಗೋ, ಹುಡುಗ ನನ್ನು ಕಳುಹಿಸಿ--ಆ ಬಾಣಗಳನ್ನು ಹುಡುಕಿಕೊಂಡು ಬಾ ಎಂದು ಹೇಳುವೆನು. ಇಗೋ, ಆ ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ನಾನು ಹುಡುಗನಿಗೆ ಹೇಳಿದರೆ ನೀನು ಬರ ಬಹುದು. ಯಾಕಂದರೆ ಕರ್ತನಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವದು. 22 ಆದರೆ--ಇಗೋ, ಬಾಣ ಗಳು ಆಚೆ ಬಿದ್ದಿರುತ್ತವೆ ಎಂದು ಹುಡುಗನಿಗೆ ಹೇಳಿದರೆ ಹೊರಟುಹೋಗು; ಯಾಕಂದರೆ ಕರ್ತನು ನಿನ್ನನ್ನು ಕಳುಹಿಸಿದನು. 23 ನಾನೂ ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಇಗೋ, ಕರ್ತನು ನನಗೂ ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿ ಇರುವನು ಅಂದನು. 24 ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟು ಕೊಂಡಿದ್ದನು. ಅಮಾವಾಸ್ಯೆ ಆದಾಗ ಅರಸನು ಭೋಜನವನ್ನು ಮಾಡಲು ಕುಳಿತನು. 25 ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು. 26 ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು. 27 ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು. 28 ಯೋನಾತಾನನು ಸೌಲನಿಗೆ ಪ್ರತ್ಯುತ್ತರವಾಗಿ--ಬೇತ್ಲೆಹೇಮಿನ ವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿ ಕೊಂಡನು. 29 ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು. 30 ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ? 31 ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು. 32 ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು. 33 ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು. 34 ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು. 35 ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ 36 ಹುಡುಗನಿಗೆ--ನೀನು ಓಡಿಹೋಗಿ ನಾನು ಹಾಕುವ ಬಾಣ ಗಳನ್ನು ಹುಡುಕಿಕೊಂಡು ಬಾ ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ ಆಚೆ ಹೋಗುವ ಹಾಗೆ ಬಾಣವನ್ನು ಎಸೆದನು. 37 ಯೋನಾತಾನನು ಹಾಕಿದ ಬಾಣಬಿದ್ದ ಸ್ಥಳದ ವರೆಗೆ ಹುಡುಗನು ಹೋದಾಗ--ಬಾಣವು ನಿನಗೆ ಆಚೆ ಇಲ್ಲವೋ ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು. 38 ನೀನು ಆಲಸ್ಯವಿಲ್ಲದೆ ತ್ವರೆಯಾಗಿ ಹೋಗು ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು ತನ್ನ ಯಜಮಾನನ ಬಳಿಗೆ ಬಂದನು. 39 ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ ದಾವೀದನೂ ಮಾತ್ರ ಆ ಸಂಗತಿ ಯನ್ನು ತಿಳುಕೊಂಡಿದ್ದರು. 40 ಆಗ ಯೋನಾತಾನನು ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ--ಅವುಗಳನ್ನು ಪಟ್ಟಣ ದೊಳಕ್ಕೆ ತೆಗೆದುಕೊಂಡು ಹೋಗು ಅಂದನು. 41 ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು; 42 ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
1 ತರುವಾಯ ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು. 2 ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ. 3 ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು. 4 ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು. 5 ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು. 6 ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು. 7 ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು. 8 ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು. 9 ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು. 10 ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು. 11 ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು. 12 ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ 13 ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು. 14 ಆಗ ಆಕೀಷನು ತನ್ನ ಸೇವಕ ರಿಗೆ--ಇಗೋ, ಈ ಮನುಷ್ಯನು ಹುಚ್ಚು ಹಿಡಿದವ ನೆಂದು ನೋಡುತ್ತೀರಲ್ಲಾ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ? 15 ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.
1 ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು. 2 ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು. 3 ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು. 4 ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು. 5 ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು. 6 ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.) 7 ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ? 8 ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು. 9 ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು. 10 ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು. 11 ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು. 12 ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು. 13 ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು. 14 ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ. 15 ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು. 16 ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು. 17 ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. 18 ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. 19 ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು. 20 ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು. 21 ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು. 22 ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ. 23 ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
1 ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು. 2 ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು. 3 ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು. 4 ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು. 5 ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು. 6 ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು. 7 ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು. 8 ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು. 9 ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು. 10 ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು. 11 ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು. 12 ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು. 13 ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು. 14 ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ. 15 ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು. 16 ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ; 17 ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು. 18 ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು. 19 ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ? 20 ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು. 21 ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ. 22 ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ; 23 ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು. 24 ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು. 25 ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು. 26 ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು. 27 ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು. 28 ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್ ಎಂದು ಹೆಸರಿಟ್ಟರು. 29 ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
1 ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು. 2 ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು. 3 ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು. 4 ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು. 5 ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು. 6 ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು. 7 ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು. 8 ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು. 9 ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ? 10 ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು. 11 ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ. 12 ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. 13 ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. 14 ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ? 15 ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು. 16 ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು. 17 ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು. 18 ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ. 19 ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ. 20 ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು. 21 ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು. 22 ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
1 ಸಮುವೇಲನು ಸತ್ತುಹೋದನು; ಇಸ್ರಾಯೇಲ್ಯರೆಲ್ಲರೂ ಕೂಡಿಬಂದು ಅವನಿ ಗೋಸ್ಕರ ಗೋಳಾಡಿ ರಾಮದಲ್ಲಿರುವ ಅವನ ಮನೆ ಯಲ್ಲಿ ಅವನನ್ನು ಹೂಣಿಟ್ಟರು. ದಾವೀದನು ಎದ್ದು ಪಾರಾನ್ ಅರಣ್ಯಕ್ಕೆ ಹೋದನು. 2 ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು. 3 ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು. 4 ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು. 5 ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ; 6 ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ. 7 ನಿನಗೆ ಕುರಿಗಳ ಉಣ್ಣೆಯನ್ನು ಕತ್ತರಿಸುವವರು ಇದ್ದಾರೆಂದು ನಾನು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿ ಕಾಯುವವರು ಕರ್ಮೆಲಿ ನಲ್ಲಿ ಇದ್ದ ದಿವಸಗಳೆಲ್ಲಾ ನಾವು ಅವರನ್ನು ತೊಂದರೆ ಪಡಿಸಲಿಲ್ಲ; ಅವರು ಒಂದನ್ನಾದರೂ ಕಳಕೊಳ್ಳಲಿಲ್ಲ; 8 ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು. 9 ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು. 10 ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ. 11 ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು. 12 ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು ಈ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದರು. 13 ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು. 14 ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು. 15 ಆ ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ. 16 ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡ ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯ ಗೋಡೆ ಯಾಗಿದ್ದರು. 17 ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು. 18 ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು 19 ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ. 20 ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು. 21 ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ. 22 ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು. 23 ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ. 24 ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು. 25 ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ. 26 ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ. 27 ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ. 28 ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು. 29 ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು. 30 ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ; 31 ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು. 32 ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ. 33 ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ. 34 ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು. 35 ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು. 36 ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ. 37 ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು. 38 ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು. 39 ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು. 40 ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು. 41 ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು. 42 ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು. 43 ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು. 44 ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
1 ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು. 2 ಆಗ ಸೌಲನು ಎದ್ದು ಜೀಫ್ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು. 3 ಆದರೆ ಸೌಲನು ತನ್ನನ್ನು ಹಿಂದಟ್ಟಿ ಅರಣ್ಯಕ್ಕೆ ಬಂದ ದ್ದನ್ನು ನೋಡಿ ದಾವೀದನು ಅರಣ್ಯದಲ್ಲಿ ನಿಂತನು. 4 ದಾವೀದನು ಗೂಢಾಚಾರರನ್ನು ಕಳುಹಿಸಿ ಸೌಲನು ಬಂದದ್ದು ನಿಶ್ಚಯವೆಂದು ತಿಳುಕೊಂಡನು. 5 ದಾವೀ ದನು ಎದ್ದು ಸೌಲನು ಇಳುಕೊಂಡಿದ್ದ ಸ್ಥಳಕ್ಕೆ ಬಂದನು; ಸೌಲನೂ ಅವನ ದಂಡಿನ ನಾಯಕನಾಗಿ ರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಆದರೆ ಸೌಲನು ಮಧ್ಯದಲ್ಲಿ ಮಲಗಿದ್ದನು; ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು. 6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು. 7 ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು. 8 ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು. 9 ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು. 10 ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು. 11 ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ; 12 ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು. 13 ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಇರುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು ಜನರಿಗೂ ನೇರನ ಮಗನಾದ ಅಬ್ನೇರನಿಗೂ ಎದು ರಾಗಿ ಕೂಗಿ ಹೇಳಿದ್ದೇನಂದರೆ-- 14 ಅಬ್ನೇರನೇ, ನೀನು ಪ್ರತ್ಯುತ್ತರ ಕೊಡುವದಿಲ್ಲವೋ ಅಂದನು. ಅದಕ್ಕೆ ಅಬ್ನೇರನು ಪ್ರತ್ಯುತ್ತರವಾಗಿ--ಅರಸನಿಗೆ ಎದುರಾಗಿ ಕೂಗುವ ನೀನು ಯಾರು ಅಂದನು. 15 ಆಗ ದಾವೀ ದನು ಅಬ್ನೇರನಿಗೆ ಹೇಳಿದ್ದೇನಂದರೆ -- ನೀನು ಪರಾಕ್ರಮಶಾಲಿ ಅಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಯಾಕಂದರೆ ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವದಕ್ಕೆ ಬಂದಿದ್ದನು. 16 ನೀನು ಮಾಡಿದ ಈ ಕಾರ್ಯ ಒಳ್ಳೇದಲ್ಲ. ಕರ್ತನ ಜೀವ ದಾಣೆ--ಕರ್ತನ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದರಿಂದ ಮರಣಕ್ಕೆ ನೀವು ಪಾತ್ರರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು ಅಂದನು. 17 ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು. 18 ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ? 19 ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು. 20 ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ. 21 ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು. 22 ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಈ ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ. 23 ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು. 24 ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು. 25 ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
1 ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು. 2 ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು. 3 ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು. 4 ದಾವೀ ದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲ್ಪಟ್ಟದ್ದರಿಂದ ಅವನು ಆ ತರುವಾಯ ಅವನನ್ನು ಹುಡುಕಲಿಲ್ಲ. 5 ದಾವೀದನು ಆಕೀಷನಿಗೆ--ನಿನ್ನ ದೃಷ್ಟಿ ಯಲ್ಲಿ ನನಗೆ ದಯೆದೊರಕಿದ್ದರೆ ದೇಶದ ಗ್ರಾಮ ಗಳಲ್ಲಿ ನಾನು ಇರುವದಕ್ಕೆ ಅವರು ಒಂದು ಸ್ಥಳ ನನಗೆ ಕೊಡಲಿ; ನಿನ್ನ ದಾಸನು ಯಾಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು ಅಂದನು. 6 ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ. 7 ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರುಷ ನಾಲ್ಕು ತಿಂಗಳು ವಾಸವಾಗಿದ್ದನು. 8 ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು. 9 ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು. 10 ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು. 11 ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ. 12 ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
1 ಆ ದಿವಸಗಳಲ್ಲಿ ಏನಾಯಿತಂದರೆ,ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯವನ್ನು ಕೂಡಿಸಿ ಕೊಂಡರು. ಆಗ ಆಕೀಷನು ದಾವೀದನಿಗೆ--ನೀನೂ ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ ಅಂದನು. 2 ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು. 3 ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು. 4 ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು. 5 ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು. 6 ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ. 7 ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು. 8 ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು. 9 ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು. 10 ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು. 11 ಆಗ ಅವಳು--ನಿನಗೆ ನಾನು ಯಾರನ್ನು ಏರಿ ಬರಮಾಡ ಬೇಕು ಅಂದಳು. ಅದಕ್ಕವನು--ಸಮುವೇಲನನ್ನು ನನಗೆ ಏರಿ ಬರಮಾಡು ಅಂದನು. 12 ಆ ಸ್ತ್ರೀಯು ಸಮುವೇಲನನ್ನು ಕಂಡಾಗ ಮಹಾ ಶಬ್ದದಿಂದ ಕೂಗಿ ದಳು. ಆ ಸ್ತ್ರೀಯು--ಯಾಕೆ ನನ್ನನ್ನು ಮೋಸ ಮಾಡಿದಿ? ನೀನು ಸೌಲನು ಅಂದಳು. 13 ಅರಸನು ಅವಳಿಗೆಭಯಪಡಬೇಡ. ನೀನು ನೋಡಿದ್ದೇನು ಅಂದನು. ಆಗ ಆ ಸ್ತ್ರೀಯು ಸೌಲನಿಗೆ--ದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು. 14 ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು. 15 ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು. 16 ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ; 17 ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು. 18 ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದನು. 19 ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. 20 ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು. 21 ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು. 22 ಆದದ ರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನ್ನ ಮುಂದೆ ಒಂದು ರೊಟ್ಟಿಯ ತುಂಡನ್ನು ಇರಿಸಲು ನನಗೆ ಅಪ್ಪಣೆ ಕೊಡು; ನೀನು ತಿನ್ನು ಅಂದಳು. 23 ಅದಕ್ಕವನು ಒಪ್ಪದೆ--ನಾನು ತಿನ್ನುವದಿಲ್ಲ ಅಂದನು. ಆದರೆ ಅವನ ದಾಸರೂ ಆ ಸ್ತ್ರೀಯೂ ಅವನನ್ನು ಬಲವಂತಮಾಡಿದ್ದರಿಂದ ಅವನು ಅವರ ಮಾತನ್ನು ಕೇಳಿ ನೆಲವನ್ನು ಬಿಟ್ಟು ಎದ್ದು ಮಂಚದ ಮೇಲೆ ಕುಳಿತುಕೊಂಡನು. 24 ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು; ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ಹಿಸುಕಿ ಹುಳಿ ಇಲ್ಲದ ರೊಟ್ಟಿಗಳಾಗಿ ಸುಟ್ಟು 25 ಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ಆ ರಾತ್ರಿಯಲ್ಲೇ ಹೊರಟುಹೋದರು.
1 ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು. 2 ಫಿಲಿಷ್ಟಿ ಯರ ಅಧಿಪತಿಗಳು ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ನಡೆದು ಬಂದರು; ಆದರೆ ದಾವೀ ದನೂ ಅವನ ಮನುಷ್ಯರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು. 3 ಆಗ ಫಿಲಿಷ್ಟಿಯರ ಅಧಿಪತಿ ಗಳು--ಈ ಇಬ್ರಿಯರು ಯಾಕೆ ಅಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ--ಇಸ್ರಾಯೇಲಿನ ಅರಸ ನಾದ ಸೌಲನ ಸೇವಕ ಈ ದಾವೀದನು ಇಷ್ಟು ದಿವಸ ಗಳೂ ಇಷ್ಟು ವರುಷಗಳೂ ನನ್ನ ಸಂಗಡ ಇದ್ದದ್ದಿ ಲ್ಲವೋ? ಇವನು ನಮ್ಮ ಬಳಿಗೆ ಬಂದು ಇದ್ದ ದಿವಸದ ಮೊದಲುಗೊಂಡು ಇಂದಿನ ವರೆಗೂ ನಾನು ಅವ ನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ ಅಂದನು. 4 ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ? 5 ಸೌಲನು ಸಾವಿರ ಜನರನ್ನೂ ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನೆಂದು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಈ ದಾವೀದನನ್ನು ಕುರಿತಲ್ಲವೋ ಅಂದರು. 6 ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ. 7 ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು. 8 ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು. 9 ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ. 10 ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು. 11 ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
1 ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು 2 ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು. 3 ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು. 4 ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು. 5 ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು. 6 ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು. 7 ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು. 8 ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು. 9 ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು. 10 ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು. 11 ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು. 12 ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ. 13 ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು. 14 ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು. 15 ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು. 16 ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು. 17 ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ. 18 ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು. 19 ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು. 20 ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು. 21 ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು. 22 ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು. 23 ಅದಕ್ಕೆ ದಾವೀದನು--ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು? 24 ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು. 25 ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು. 26 ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು. 27 ಯಾರಂದರೆ--ಬೇತೇಲಿ ನಲ್ಲಿರುವವರಿಗೂ ದಕ್ಷಿಣ ರಾಮೋತಿನಲ್ಲಿರುವವರಿಗೂ ಯತ್ತೀರಿನಲ್ಲಿರುವವರಿಗೂ 28 ಅರೋಯೇರಿನಲ್ಲಿರುವ ವರಿಗೂ ಸಿಪ್ಮೋತಿನಲ್ಲಿರುವವರಿಗೂ ಎಷ್ಟೆಮೋವದ ಲ್ಲಿರುವವರಿಗೂ 29 ರಾಕಾಲಿನಲ್ಲಿರುವವರಿಗೂ ಎರಹ್ಮೇ ಲಿಯರ ಪಟ್ಟಣಗಳಲ್ಲಿರುವವರಿಗೂ ಕೇನ್ಯರ ಪಟ್ಟಣ ಗಳಲ್ಲಿರುವವರಿಗೂ 30 ಹೊರ್ಮದಲ್ಲಿರುವವರಿಗೂ ಬೋರಾಷಾನಿನಲ್ಲಿರುವವರಿಗೂ ಅತಾಕಿನಲ್ಲಿರುವವರಿಗೂ 31 ಹೆಬ್ರೋನಿನಲ್ಲಿರುವವರಿಗೂ ದಾವೀ ದನೂ ಅವನ ಜನರೂ ಸಂಚರಿಸುತ್ತಿದ್ದ ಎಲ್ಲಾ ಸ್ಥಳ ಗಳಲ್ಲಿರುವವರಿಗೂ ಕಳುಹಿಸಿದನು.
1 ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು. 2 ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು. 3 ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು. 4 ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು. 5 ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು. 6 ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು. 7 ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು. 8 ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು 9 ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು. 10 ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು, 11 ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ 12 ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು. 13 ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
1 ಸೌಲನು ಸತ್ತ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗಿಗೆ ತಿರಿಗಿ ಬಂದು ಎರಡು ದಿವಸ ಅಲ್ಲಿ ಇದ್ದ ತರುವಾಯ ಏನಾಯಿತಂದರೆ 2 ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು. 3 ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು. 4 ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು. 5 ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು. 6 ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು. 7 ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು. 8 ಆಗ ಅವನು ನೀನ್ಯಾರು ಅಂದನು. 9 ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು. 10 ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು. 11 ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು 12 ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು. 13 ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು. 14 ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು. 15 ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು. 16 ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು. 17 ಆಗ ದಾವೀದನು ಸೌಲನ ಮೇಲೆಯೂ ಅವನ ಮಗನಾದ ಯೋನಾತಾನನ ಮೇಲೆಯೂ ಗೋಳಾಟ ದಿಂದ ಈ ಗೀತೆ ಹಾಡಿ ಗೋಳಾಡಿದನು. 18 ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ, 19 ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು! 20 ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ. 21 ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು. 22 ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ. 23 ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು. 24 ಇಸ್ರಾಯೇಲಿನ ಕುಮಾರ್ತೆ ಯರೇ, ಸೌಲನಿಗೋಸ್ಕರ ಅಳಿರಿ, ನಿಮಗೆ ರಕ್ತಾಂಬರ ವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ; ನಿಮ್ಮ ಉಡುಗೆ ಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ. 25 ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ. 26 ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು. 27 ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
1 ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು. 2 ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು. 3 ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು. 4 ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು. 5 ಯಾಬೇಷ್ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ. 6 ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು. 7 ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು. 8 ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ 9 ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು. 10 ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು. 11 ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು. 12 ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು. 13 ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು. 14 ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು. 15 ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು. 16 ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್ ಎಂಬ ಹೆಸರಾ ಯಿತು. 17 ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು. 18 ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು. 19 ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು. 20 ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು. 21 ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು. 22 ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು. 23 ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು. 24 ಆದರೆ ಯೋವಾ ಬನೂ ಅಬಿಷೈಯೂ ಅಬ್ನೇರನನ್ನು ಹಿಂದಟ್ಟಿ ಸೂರ್ಯಅಸ್ತಮಿಸುವ ವರೆಗೆ ಗಿಬ್ಯೋನಿನ ಅರಣ್ಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದ ಮಟ್ಟಿಗೂ ಬಂದರು. 25 ಆಗ ಅಬ್ನೇರನ ಹಿಂದೆ ಬೆನ್ಯಾವಿಾನನ ಮಕ್ಕಳು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು. 26 ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು. 27 ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು. 28 ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ. 29 ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು. 30 ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ ದಾವೀದನ ಸೇವಕ ರಲ್ಲಿ ಹತ್ತೊಂಭತ್ತು ಜನರೂ ಅಸಾಹೇಲನೂ ಕಡಿಮೆ ಯಾಗಿದ್ದರು. 31 ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು. 32 ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.
1 ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು. 2 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ 3 ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ 4 ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ 5 ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು. 6 ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು. 7 ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು. 8 ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ? 9 ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ 10 ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು. 11 ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು. 12 ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು. 13 ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು. 14 ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು. 15 ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು. 16 ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು. 17 ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ. 18 ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು. 19 ಇದಲ್ಲದೆ ಅಬ್ನೇರನು ಬೆನ್ಯಾವಿಾನ್ಯನವರ ಸಂಗಡ ಮಾತನಾಡಿದನು. ಅಬ್ನೇ ರನು ಇಸ್ರಾಯೇಲ್ಯರ ದೃಷ್ಟಿಗೂ ಬೆನ್ಯಾವಿಾನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೇದಾಗಿ ತೋರಿದ್ದ ನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ಹೆಬ್ರೋನಿಗೆ ಹೋದನು. 20 ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು. 21 ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು. 22 ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು. 23 ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು. 24 ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ? 25 ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು. 26 ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು. 27 ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು. 28 ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ. 29 ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು. 30 ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು. 31 ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು. 32 ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು. 33 ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ-- 34 ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು. 35 ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು. 36 ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು. 37 ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು. 38 ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ? 39 ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
1 ಅಬ್ನೇರನು ಹೆಬ್ರೋನಿನಲ್ಲಿ ಸತ್ತುಹೋದ ನೆಂದು ಸೌಲನ ಮಗನು ಕೇಳಿದಾಗ ಅವನ ಕೈಗಳು ದುರ್ಬಲವಾದವು; ಇಸ್ರಾಯೇಲ್ಯ ರೆಲ್ಲರೂ ಕಳವಳಗೊಂಡರು. 2 ಆದರೆ ಸೌಲನ ಮಗ ನಿಗೆ ಪಟಾಲಮಿನ ಅಧಿಪತಿಗಳಾದ ಇಬ್ಬರು ಮನುಷ್ಯ ರಿದ್ದರು; ಒಬ್ಬನ ಹೆಸರು ಬಾಣ ಮತ್ತೊಬ್ಬನ ಹೆಸರು ರೇಕಾಬ್; ಅವರು ಬೆನ್ಯಾವಿಾನನ ಮಕ್ಕಳಲ್ಲಿ ಬೇರೋತಿ ನವನಾದ ರಿಮ್ಮೋನನ ಮಕ್ಕಳು. 3 ಬೇರೋತ್ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ. 4 ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು. 5 ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು. 6 ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು. 7 ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು 8 ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು. 9 ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ 10 ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು. 11 ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು. 12 ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
1 ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ. 2 ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು. 3 ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು. 4 ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು. 5 ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು. 6 ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು. 7 ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು. 8 ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು. 9 ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು. 10 ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು. 11 ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು. 12 ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು. 13 ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. 14 ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್ 15 ಸೊಲೊಮೋನ್ ಇಬ್ಹಾರ್ 16 ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ. 17 ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು. 18 ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು. 19 ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು. 20 ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು. 21 ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು. 22 ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು. 23 ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು. 24 ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು. 25 ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
1 ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು 2 ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು. 3 ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು. 4 ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು. 5 ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು. 6 ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು. 7 ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು. 8 ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು. 9 ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು. 10 ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು. 11 ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು. 12 ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು. 13 ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು. 14 ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು. 15 ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು. 16 ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು. 17 ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. 18 ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ 19 ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. 20 ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು. 21 ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು. 22 ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು. 23 ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.
1 ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ, 2 ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು. 3 ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು. 4 ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ-- 5 ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ? 6 ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು. 7 ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ? 8 ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು; 9 ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು. 10 ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು. 11 ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು. 12 ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. 13 ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು. 14 ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. 15 ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. 16 ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು. 17 ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು. 18 ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು? 19 ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ? 20 ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ? 21 ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ. 22 ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ. 23 ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು. 24 ಇಸ್ರಾ ಯೇಲ್ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ. 25 ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು. 26 ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ. 27 ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು. 28 ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ. 29 ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
1 ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು. 2 ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು. 3 ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ 4 ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು. 5 ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು. 6 ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು. 7 ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು. 8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು. 9 ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ 10 ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು. 11 ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು 12 ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು. 13 ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು. 14 ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು. 15 ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು. 16 ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು. 17 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು. 18 ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
1 ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು. 2 ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು. 3 ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು. 4 ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು. 5 ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು. 6 ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು. 7 ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು. 8 ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು. 9 ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ. 10 ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು. 11 ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು. 12 ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು. 13 ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
1 ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು. 2 ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. 3 ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು. 4 ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು. 5 ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು. 6 ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು. 7 ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು. 8 ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು. 9 ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು. 10 ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು-- 11 ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು. 12 ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು. 13 ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು. 14 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು. 15 ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು. 16 ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು. 17 ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. 18 ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು. 19 ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
1 ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು. 2 ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು. 3 ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು. 4 ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು. 5 ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು. 6 ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು. 7 ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು. 8 ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು. 9 ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು. 10 ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು. 11 ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು. 12 ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು. 13 ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು. 14 ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು. 15 ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು. 16 ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು. 17 ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು. 18 ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ-- 19 ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು-- 20 ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು? 21 ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು. 22 ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ಕಳುಹಿಸಿದ ವರ್ತಮಾನ ಗಳನ್ನೆಲ್ಲಾ ತಿಳಿಸಿದನು. 23 ಆ ದೂತನು ಅವನಿಗೆ--ಆ ಜನರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬೈಲಿನಲ್ಲಿ ನಮ್ಮ ಮೇಲೆ ಹೊರಟು ಬಂದಾಗ ನಾವು ಪಟ್ಟಣದ ಬಾಗಿಲ ವರೆಗೆ ಅವರ ಮೇಲೆ ಬಂದೆವು. 24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು. 25 ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು. 26 ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು. 27 ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
1 ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು. 2 ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು. 3 ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು. 4 ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು. 5 ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು. 6 ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು. 7 ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು 8 ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. 9 ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. 10 ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. 11 ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು. 12 ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು. 13 ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು. 14 ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು. 15 ಆಗ ನಾತಾನನು ತನ್ನ ಮನೆಗೆ ಹೋದನು. 16 ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು. 17 ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು. 18 ಮಗುವು ಏಳನೇ ದಿವಸ ಸತ್ತುಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿ ಸುವದಕ್ಕೆ ಭಯಪಟ್ಟರು. ಯಾಕಂದರೆ ಇಗೋ, ಮಗುವು ಇನ್ನೂ ಬದುಕಿರುವಾಗ ನಾವು ಅವನ ಸಂಗಡ ಮಾತನಾಡುವಾಗ ಅವನು ನಮ್ಮ ಮಾತನ್ನು ಕೇಳದೆಹೋದನು. ಈಗ ಮಗುವು ಸತ್ತುಹೋಯಿ ತೆಂದು ನಾವು ಅವನಿಗೆ ಹೇಳಿದರೆ ಇನ್ನೂ ಎಷ್ಟು ಸಂಕಟಪಡುವನೋ ಅಂದುಕೊಂಡರು. 19 ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು. 20 ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು. 21 ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು. 22 ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು. 23 ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು. 24 ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು. 25 ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು. 26 ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು. 27 ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ. 28 ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು. 29 ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು. 30 ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು. 31 ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
1 ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು. 2 ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು. 3 ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು. 4 ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು. 5 ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು. 6 ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು. 7 ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು. 8 ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು. 9 ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು. 10 ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು. 11 ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು. 12 ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ. 13 ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು. 14 ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು. 15 ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು. 16 ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು. 17 ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು. 18 ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು. 19 ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು. 20 ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು. 21 ಅರಸನಾದ ದಾವೀದನು ಇವುಗಳನೆಲ್ಲಾ ಕೇಳಿದಾಗ ಬಹುಕೋಪಗೊಂಡನು. 22 ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು. 23 ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು. 24 ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು. 25 ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು. 26 ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು. 27 ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು. 28 ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು. 29 ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು. 30 ಆದರೆ ಅವರು ದಾರಿಯಲ್ಲಿರುವಾಗ--ಅಬ್ಷಾ ಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದು ಹಾಕಿ ದ್ದಾನೆ, ಒಬ್ಬನಾದರೂ ಉಳಿಯಲಿಲ್ಲ ಎಂದು ದಾವೀ ದನಿಗೆ ವರ್ತಮಾನ ಬಂತು. 31 ಆಗ ಅರಸನು ಎದ್ದು ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು; ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲೂ ನಿಂತರು. 32 ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು; 33 ಆದದರಿಂದ ಅರಸನಾದ ನನ್ನ ಒಡೆಯನೇ ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನ ಲ್ಲಿಡಬೇಡ; ಯಾಕಂದರೆ ಅಮ್ನೋನನು ಒಬ್ಬನೇ ಸತ್ತನು ಅಂದನು. 34 ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು. 35 ಆಗ ಯೋನಾದಾಬನು ಅರಸನಿಗೆಇಗೋ, ಅರಸನ ಮಕ್ಕಳು ಬರುತ್ತಿದ್ದಾರೆ; ನಿನ್ನ ಸೇವ ಕನು ಹೇಳಿದ ಹಾಗೆಯೇ ಆಯಿತು ಅಂದನು. 36 ಅವನು ಮಾತನಾಡಿ ತೀರಿಸಿದಾಗ ಇಗೋ, ಅರಸನ ಮಕ್ಕಳು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಎಲ್ಲಾ ಸೇವಕರೂ ಬಹಳವಾಗಿ ಅತ್ತರು. 37 ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು. 38 ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು. 39 ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
1 ಅರಸನ ಹೃದಯವು ಅಬ್ಷಾಲೋಮನ ಕಡೆಗೆ ಇರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು. 2 ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು 3 ತಲೆಗೆ ಎಣ್ಣೆಹಚ್ಚಿಕೊಳ್ಳದೆ ಸತ್ತವರಿ ಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು ಎಂದು ಹೇಳಿ ಯೋವಾ ಬನು ಅವಳಿಗೆ ಕಲಿಸಿಕೊಟ್ಟನು. 4 ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು. 5 ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ. 6 ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು. 7 ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು. 8 ಆಗ ಅರಸನು ಆ ಸ್ತ್ರೀಗೆ--ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ ಅಂದನು. 9 ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು. 10 ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು. 11 ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು. 12 ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು. 13 ಆಗ ಅವನು--ಹೇಳು ಅಂದನು. ಆಗ ಆ ಸ್ತ್ರೀಯು--ದೇವರ ಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನೆನೆಸು ವದೇನು? ಅರಸನು ತಾನು ಹೊರಡಿಸಿದವನನ್ನು ತಿರಿಗಿ ಸೇರಿಸಿಕೊಳ್ಳದೆ ಹೋದದರಿಂದ ಇದನ್ನು ಅಪರಾಧಸ್ಥನ ಹಾಗೆಯೇ ಮಾತಾಡುತ್ತಿದ್ದಾನೆ. 14 ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ. 15 ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು. 16 ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು. 17 ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು. 18 ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು. 19 ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು. 20 ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು. 21 ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು. 22 ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು. 23 ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು. 24 ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು. 25 ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು. 26 ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು. 27 ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು. 28 ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು. 29 ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು. 30 ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು. 31 ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ--ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟದ್ದೇನು ಎಂದು ಕೇಳಿದನು. 32 ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು. 33 ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
1 ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು. 2 ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು. 3 ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ. 4 ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು. 5 ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು. 6 ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು. 7 ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು. 8 ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು. 9 ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು. 10 ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು. 11 ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು. 12 ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು. 13 ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು. 14 ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು. 15 ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು. 16 ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು. 17 ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು. 18 ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು. 19 ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು. 20 ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು. 21 ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು. 22 ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು. 23 ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು. 24 ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು. 25 ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು. 26 ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು. 27 ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ. 28 ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು. 29 ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು. 30 ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು. 31 ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು. 32 ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು. 33 ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು. 34 ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು. 35 ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು. 36 ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು. 37 ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
1 ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು. 2 ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು. 3 ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು. 4 ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು. 5 ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು. 6 ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು. 7 ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. 8 ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು. 9 ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು. 10 ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು. 11 ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ. 12 ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು. 13 ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು. 14 ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು. 15 ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ ಜನರೂ ಅವನ ಸಂಗಡ ಅಹೀತೋಫೆಲನೂ ಯೆರೂ ಸಲೇಮಿಗೆ ಬಂದರು 16 ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು. 17 ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು. 18 ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು. 19 ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು. 20 ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು. 21 ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು. 22 ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು. 23 ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
1 ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು. 2 ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು. 3 ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು. 4 ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು. 5 ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು. 6 ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು. 7 ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ. 8 ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ. 9 ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು. 10 ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು. 11 ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು. 12 ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ. 13 ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು. 14 ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು. 15 ಹೂಷೈಯು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ--ಅಹೀತೋಫೆಲನು ಅಬ್ಷಾಲೋ ಮನಿಗೂ ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು. 16 ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು. 17 ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು. 18 ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು. 19 ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು. 20 ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು. 21 ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು. 22 ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ. 23 ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು. 24 ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್ ಎಲ್ಲಾ ಜನರೂ ಯೊರ್ದನನ್ನು ದಾಟಿದರು. 25 ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು. 26 ಹೀಗೆಯೇ ಇಸ್ರಾಯೇ ಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ದಂಡಿಳಿದರು. 27 ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್ 28 ರೋಗೆಲೀಮ್ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂ 29 ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
1 ದಾವೀದನು ತನ್ನ ಸಂಗಡಲಿರುವ ಜನರನ್ನು ಲೆಕ್ಕಮಾಡಿ ಅವರ ಮೇಲೆ ಸಾವಿರ ಗಳಿಗೂ ನೂರುಗಳಿಗೂ ಅಧಿಪತಿಗಳನ್ನು ನೇಮಿಸಿ ದನು. 2 ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು. 3 ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು. 4 ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು. 5 ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು. 6 ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. 7 ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು. 8 ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು. 9 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು. 10 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು. 11 ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು. 12 ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು. 13 ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು. 14 ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು. 15 ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು. 16 ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು. 17 ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು. 18 ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು. 19 ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು. 20 ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು. 21 ಯೋವಾಬನು ಕೂಷ್ಯನಿಗೆ--ನೀನು ಹೋಗಿ ನೋಡಿದ್ದನ್ನು ಅರಸನಿಗೆ ತಿಳಿಸು ಅಂದನು. 22 ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು. 23 ಆಗ ಅಹೀಮಾಚನು ಬೈಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು. 24 ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು. 25 ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು. 26 ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು. 27 ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು. 28 ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು. 29 ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು. 30 ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು. 31 ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು. 32 ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು. 33 ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
1 ಆಗ ಇಗೋ, ಅರಸನು ಅಬ್ಷಾಲೋಮನಿ ಗೋಸ್ಕರ ಅತ್ತು ದುಃಖಪಡುತ್ತಾ ಇದ್ದಾ ನೆಂದು ಯೋವಾಬನಿಗೆ ತಿಳಿಸಲ್ಪಟ್ಟಿತು. 2 ಆ ದಿನ ಆ ಜಯವು ಎಲ್ಲಾ ಜನರಿಗೂ ದುಃಖವಾಯಿತು. ಯಾಕಂದರೆ ಅರಸನು ತನ್ನ ಮಗನಿಗೋಸ್ಕರ ವ್ಯಥೆ ಪಡುತ್ತಾ ಇದ್ದಾನೆಂದು ಜನರು ಕೇಳಿದರು. 3 ಆದ ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಕಳ್ಳತನವಾಗಿ ಬರುವ ಹಾಗೆ ಆ ದಿನದಲ್ಲಿ ಕಳ್ಳತನವಾಗಿ ಪಟ್ಟಣದೊಳಗೆ ಬಂದರು. 4 ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು. 5 ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ-- 6 ನೀನು ನಿನ್ನ ಶತ್ರು ಗಳನ್ನು ಪ್ರೀತಿಮಾಡಿ ನಿನ್ನ ಮಿತ್ರರನ್ನು ಹಗೆಮಾಡಿ ದ್ದರಿಂದ ಈ ಹೊತ್ತು ನಿನ್ನ ಪ್ರಾಣವನ್ನೂ ಕುಮಾರರ ಪ್ರಾಣಗಳನ್ನೂ ಕುಮಾರ್ತೆಯರ ಪ್ರಾಣಗಳನ್ನೂ ಹೆಂಡತಿಯರ ಪ್ರಾಣಗಳನ್ನೂ ಉಪಪತ್ನಿಗಳ ಪ್ರಾಣ ಗಳನ್ನೂ ರಕ್ಷಿಸಿದ ನಿನ್ನ ಸೇವಕರ ಮುಖಗಳನ್ನು ನಾಚಿಕೆ ಪಡಿಸಿದ್ದೀ. ಪ್ರಧಾನರಾದವರೂ ಸೇವಕರಾದವರೂ ನಿನಗೆ ಏನೂ ಇಲ್ಲವೆಂದು ಈಹೊತ್ತು ತಿಳಿಯ ಮಾಡಿದಿ. ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋ ಮನು ಬದುಕಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ನನಗೆ ತಿಳಿಯುತ್ತದೆ. 7 ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು. 8 ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು. 9 ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ. 10 ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು. 11 ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ. 12 ಹಾಗಾದರೆ ಅರಸನನ್ನು ತಿರಿಗಿ ಬರಮಾಡುವಂತೆ ನೀವು ಹಿಂಜರಿದದ್ದೇನು? 13 ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು. 14 ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು. 15 ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು. 16 ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು. 17 ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು. 18 ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು; ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ-- 19 ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ. 20 ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು. 21 ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು. 22 ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು. 23 ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು. 24 ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ. 25 ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು. 26 ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು. 27 ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. 28 ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು? 29 ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು. 30 ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು. 31 ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು. 32 ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು. 33 ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು. 34 ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು? 35 ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು? 36 ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು? 37 ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು. 38 ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು. 39 ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. 40 ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು. 41 ಇಗೋ, ಇಸ್ರಾಯೇಲ್ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು. 42 ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು. 43 ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
1 ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು. 2 ಇಸ್ರಾಯೇಲ್ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು. 3 ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು. 4 ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು. 5 ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು. 6 ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು. 7 ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು. 8 ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು. 9 ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. 10 ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು. 11 ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು. 12 ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು. 13 ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು. 14 ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು. 15 ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು. 16 ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು. 17 ಅವನು ಸವಿಾಪ ಬಂದಾಗ ಆ ಸ್ತ್ರೀಯು--ನೀನು ಯೋವಾಬನೋ ಅಂದಳು. ಅವನು--ನಾನೇ ಅಂದನು. ಅವಳು ಅವನಿಗೆ--ನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು. ಅವನು--ನಾನು ಕೇಳುತ್ತೇನೆ ಅಂದನು. 18 ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು. 19 ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು. 20 ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ. 21 ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು. 22 ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು. 23 ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು; 24 ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು; 25 ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು; 26 ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
1 ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು. 2 ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು) 3 ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು. 4 ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು. 5 ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ 6 ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು. 7 ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ 8 ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು 9 ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು. 10 ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು. 11 ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು. 12 ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ 13 ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು 14 ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು. 15 ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು. 16 ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು. 17 ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು. 18 ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು. 19 ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು. 20 ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು. 21 ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು. 22 ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
1 ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ-- 2 ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ. 3 ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ. 4 ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ. 5 ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು; 6 ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು; 7 ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು. 8 ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು. 9 ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು. 10 ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು; 11 ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು. 12 ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು. 13 ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು. 14 ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು; 15 ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; 16 ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು. 17 ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು. 18 ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು; 19 ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು. 20 ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು. 21 ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲುಕೊಟ್ಟನು. 22 ಕರ್ತನ ಮಾರ್ಗಗಳನ್ನು ಕೈಕೊಂಡೆನು; ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ. 23 ಆತನ ನ್ಯಾಯಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನಿಯಮ ಗಳನ್ನು ನನ್ನಿಂದ ಹೋಗಲಿಲ್ಲ. 24 ಆತನ ಮುಂದೆ ಸಂಪೂರ್ಣನಾಗಿದ್ದು ಅಕ್ರಮದಿಂದ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು. 25 ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು. 26 ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. 27 ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ. 28 ನೀನು ದೀನರನ್ನು ರಕ್ಷಿಸುವಿ; ಗರ್ವಿಗಳನ್ನು ತಗ್ಗಿಸುವ ಹಾಗೆ ನಿನ್ನ ಕಣ್ಣುಗಳು ಅವರ ಮೇಲೆ ಅವೆ. 29 ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು. 30 ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು. 31 ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ. 32 ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು? 33 ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ. 34 ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ. 35 ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ. 36 ನೀನು ನಿನ್ನ ರಕ್ಷಣೆಯ ಗುರಾಣಿ ಯನ್ನು ನನಗೆ ಕೊಟ್ಟೆ; ನಿನ್ನ ಸೌಮ್ಯತೆಯು ನನ್ನನ್ನು ಹೆಚ್ಚಿಸಿತು. 37 ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ. 38 ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು; ಅವರನ್ನು ಸಂಹರಿಸಿಬಿಡುವ ವರೆಗೂ ನಾನು ಹಿಂತಿರು ಗಲಿಲ್ಲ. 39 ಅವರನ್ನು ಸಂಹರಿಸಿಬಿಟ್ಟೆನು. ಗಾಯಮಾಡಿ ದೆನು. ಆದದರಿಂದ ಅವರು ಏಳದೆ ಹೋಗಿ, ನನ್ನ ಪಾದಗಳ ಕೆಳಗೆ ಬಿದ್ದರು. 40 ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ. 41 ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ. 42 ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ. 43 ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು. 44 ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು. 45 ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು. 46 ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು. 47 ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ. 48 ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ. 49 ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ. 50 ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು. 51 ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
1 ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ-- 2 ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು. 3 ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು. 4 ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು. 5 ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ. 6 ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು. 7 ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು. 8 ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು. 9 ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು. 10 ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು. 11 ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು. 12 ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು. 13 ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು. 14 ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು. 15 ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು. 16 ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು. 17 ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು. 18 ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು. 19 ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ. 20 ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು. 21 ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು. 22 ಇವುಗಳನ್ನು ಯೆಹೋಯಾ ದಾವನ ಮಗನಾದ ಬೆನಾಯನು ಮಾಡಿದ್ದರಿಂದ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರು ಗೊಂಡವನಾಗಿದ್ದನು. 23 ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು. 24 ಯೋವಾಬನ ಸಹೋದರನಾದ ಅಸಾಹೇಲನು ಮೂವತ್ತು ಮಂದಿಯಲ್ಲಿ ಒಬ್ಬನಾಗಿದ್ದನು. ಈ ಮೂವತ್ತು ಮಂದಿ ಯಾರಂದರೆ; ಬೇತ್ಲೆಹೇಮ್ ಊರಿನ ದೋದೋವಿನ ಮಗನಾದ ಎಲ್ಹಾನಾನು; 25 ಹರೋದಿನವನಾದ ಶಮ್ಮನು, ಎಲೀಕನು, ಪೆಲೆಟ ನಾದ ಹೆಲೆಚ್, 26 ತೆಕೋವಿಯನಾದ ಇಕ್ಕೇಷನ ಮಗನಾದ ಈರಾ. 27 ಅಣತೋತಿನವನಾದ ಅಬೀ ಯೆಜರ್, ಹುಷಾ ಊರಿನವನಾದ ಮೆಬುನೈ, ಅಹೋಹಿನವನಾದ ಚಲ್ಮೋನ್, 28 ನೆಟೋಫದ ವನಾದ ಮಹರೈ, 29 ನೆಟೋಫದವನಾದ ಬಾಣನ ಮಗ ಹೆಲೇಬ್, 30 ಬೆನ್ಯಾವಿಾನನ ಮಕ್ಕಳ ಗಿಬೆ ಊರಿನವನಾದ ರೀಬೈ ಮಗನಾದ ಇತೈ, 31 ಪಿತೋನ್ಯ ನಾದ ಬೆನಾಯನು, ನಹಲೇ ಗಾಷ್ ಊರಿನವನಾದ ಹಿದೈ ಅರಾಬಾದ ಅಬೀಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತನು, ಶಾಲ್ಬೋನ್ಯನಾದ ಎಲೆಯಖ್ಬಾ 32 ಯಾಷೇನನ ಕುಮಾರರಲ್ಲಿ ಒಬ್ಬನಾದ ಯೋನಾತಾ ನನು, 33 ಹರಾರ್ಯನಾದ ಶಮ್ಮನು, 34 ಅರಾರ್ಯನಾದ ಶಾರಾರನ ಮಗನಾದ ಅಹೀಯಾಮ್, ಮಾಕಾತ್ಯರಲ್ಲಿ ಒಬ್ಬನ ಮಗನಾಗಿರುವ ಅಹಸ್ಬೈ ಮಗನಾದ ಎಲೀಫೆ ಲೆಟನು, ಗಿಲೋವಿಯನಾಗಿರುವ ಅಹೀತೋಫೆಲನ ಮಗನಾದ ಎಲೀಯಾಮನು, 35 ಕರ್ಮೇಲ್ಯನಾದ ಹೆಚ್ರೊ, ಅರ್ಬಿಯನಾದ ಪಾರೈ, ಚೋಬದವನಾದ ನಾತಾನ್ ಮಗನಾಗಿರುವ ಇಗಾಲ್, 36 ಗಾದ್ಯನಾದ ಬಾನಿ, ಅಮ್ಮೋನ್ಯನಾದ ಚೇಲೆಕ್, 37 ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹಿಡಿಯುವ ಬೇರೋತ್ಯನಾದ ನಹರೈ, 38 ಇತ್ರಿಯರಾದ ಈರಾ ಗಾರೇಬನು, 39 ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.
1 ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು. 2 ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು. 3 ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು. 4 ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು. 5 ಅವರು ಯೊರ್ದನನ್ನು ದಾಟಿ ಗಾದ್ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು 6 ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು. 7 ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು. 8 ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು. 9 ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು. 10 ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು. 11 ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ-- 12 ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು. 13 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು. 14 ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು. 15 ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು. 16 ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು. 17 ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು. 18 ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು. 19 ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು. 20 ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು. 21 ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಈ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು. 22 ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು. 23 ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು. 24 ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್ ಬೆಳ್ಳಿಗೆ ಕೊಂಡು ಕೊಂಡನು. 25 ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
1 ಅರಸನಾದ ದಾವೀದನು ವೃದ್ಧನಾಗಿಯೂ ಬಹಳ ಪ್ರಾಯಹೋದವನಾಗಿಯೂ ಇರುವಾಗ ಅವನನ್ನು ವಸ್ತ್ರಗಳಿಂದ ಹೊದಿಸಿದರು; ಆದರೆ ಅವನಿಗೆ ಬೆಚ್ಚಗಾಗಲಿಲ್ಲ. 2 ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು. 3 ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್ಳಾದ ಅಬೀಷಗ್ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು. 4 ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು. 5 ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು. 6 ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು. 7 ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು. 8 ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ. 9 ಆಗ ಅದೋನೀಯನು ರೋಗೆಲ್ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು. 10 ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ. 11 ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ? 12 ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ. 13 ನೀನು ದಾವೀದನ ಬಳಿಗೆ ಹೋಗಿ ಅವ ನಿಗೆ--ಅರಸನಾದ, ನನ್ನ ಒಡೆಯನೇ, ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವದು ಯಾಕೆ ಎಂದು ಹೇಳು. 14 ಇಗೋ, ನೀನು ಇನ್ನೂ ಅರಸನ ಸಂಗಡ ಮಾತ ನಾಡುತ್ತಿರುವಾಗ ನಾನು ನಿನ್ನ ಹಿಂದೆಯೇ ಒಳಗೆ ಬಂದು ನಿನ್ನ ಮಾತು ಗಳನ್ನು ಸ್ಥಿರಮಾಡುವೆನು ಅಂದನು. 15 ಆಗ ಬತ್ಷೆಬೆಳು ಕೊಠಡಿಯೊಳಗೆ ಅರಸನ ಬಳಿಗೆ ಹೋದಳು. 16 ಅರ ಸನು ಅತಿವೃದ್ಧನಾಗಿರುವದರಿಂದ ಶೂನೇಮ್ಯಳಾದ ಅಬೀಷಗ್ಳು ಅರಸನಿಗೆ ಸೇವೆಮಾಡುತ್ತಾ ಇದ್ದಳು. ಬತ್ಷೆಬೆಳು ಬಾಗಿ ಅರಸನಿಗೆ ವಂದನೆ ಮಾಡಿದಳು. ಅರಸನು--ನಿನಗೇನು ಬೇಕು ಅಂದನು. 17 ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ. 18 ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ. 19 ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ. 20 ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ. 21 ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು. 22 ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು; 23 ಆಗ ಅರಸನಿಗೆ--ಇಗೋ, ಪ್ರವಾದಿ ಯಾದ ನಾತಾನನು ಅಂದರು. ಅವನು ಒಳಗೆ ಅರಸನ ಮುಂದೆ ಬಂದಾಗ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡ ಬಿದ್ದನು. ಆಗ ನಾತಾನನು--ಓ ಅರಸನಾದ ನನ್ನ ಒಡೆಯನೇ, 24 ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ? 25 ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ. 26 ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ. 27 ಅರಸನಾದ ನನ್ನ ಒಡೆಯನಿಂದ ಈ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು. 28 ಆಗ ಅರಸನಾದ ದಾವೀದನು ಪ್ರತ್ಯುತ್ತರವಾಗಿ--ಬತ್ಷೆ ಬೆಳನ್ನು ನನ್ನ ಬಳಿಗೆ ಕರೆ ಅಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಿರುವಾಗ ಅರಸನು--ನಿಶ್ಚಯವಾಗಿ 29 ನಿನ್ನ ಮಗನಾದ ಸೊಲೊಮೋನನು ನನ್ನ ತರುವಾಯ ಆಳುವನೆಂದೂ 30 ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ. 31 ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು. 32 ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು. 33 ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ. 34 ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ. 35 ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು. 36 ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ. 37 ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು. 38 ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು. 39 ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು. 40 ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು. 41 ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು. 42 ಅವನು ಇನ್ನೂ ಮಾತನಾಡು ತ್ತಿರುವಾಗ ಇಗೋ, ಯಾಜಕನಾಗಿರುವ ಎಬ್ಯಾತಾರನ ಮಗನಾದ ಯೋನಾತಾನನು ಬಂದನು. ಅದೋನೀ ಯನು ಅವನಿಗೆ--ಒಳಗೆ ಬಾ; ಯಾಕಂದರೆ ನೀನು ಪರಾಕ್ರಮಶಾಲಿ, ಒಳ್ಳೇ ವರ್ತಮಾನವನ್ನು ತರುತ್ತೀ ಅಂದನು. 43 ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ. 44 ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ. 45 ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು. 46 ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ. 47 ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು. 48 ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು. 49 ಆಗ ಅದೋನೀ ಯನ ಸಂಗಡವಿದ್ದವರೆಲ್ಲರೂ ಹೆದರಿಕೊಂಡು ಎದ್ದು ತಮ್ಮ ತಮ್ಮ ಸ್ಥಳಗಳಿಗೆ ಹೋದರು. 50 ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು. 51 ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು. 52 ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು. 53 ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
1 ದಾವೀದನ ಸಾಯುವ ಕಾಲವು ಸವಿಾಪಿಸಿದ್ದರಿಂದ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ 2 ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು. 3 ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ 4 ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು. 5 ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು. 6 ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು. 7 ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು. 8 ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು. 9 ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು. 10 ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು. 11 ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು. 12 ಆಗ ಸೊಲೊಮೋನನು ತನ್ನ ತಂದೆಯಾದ ದಾವೀ ದನ ಸಿಂಹಾಸನದ ಮೇಲೆ ಕುಳಿತನು; ಅವನ ರಾಜ್ಯವು ಬಹು ಸ್ಥಿರವಾಗಿತ್ತು. 13 ಆದರೆ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಬಂದನು. ಆಕೆಯು ಅವನಿಗೆ--ಸಮಾಧಾನವಾಗಿ ಬರುತ್ತೀಯೋ ಅಂದಳು. 14 ಅದಕ್ಕೆ ಅವನು--ಸಮಾ ಧಾನವೇ ಅಂದನು ಮತ್ತು ಅವನು--ನಿನಗೆ ಹೇಳತಕ್ಕ ಮಾತು ನನಗುಂಟು ಅಂದನು. ಅದಕ್ಕವಳು--ಹೇಳು ಅಂದಳು. 15 ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ. 16 ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು. 17 ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು; 18 ಅವನು ನಿನಗೆ ಆಗುವ ದಿಲ್ಲವೆಂದು ಹೇಳುವದಿಲ್ಲ ಅಂದನು. ಅದಕ್ಕೆ ಬತ್ಷೆಬೆಳುಒಳ್ಳೇದು, ನಿನಗೋಸ್ಕರ ಅರಸನ ಸಂಗಡ ಮಾತ ನಾಡುವೆನು ಅಂದಳು. 19 ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು. 20 ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅವಳು ಅವನಿಗೆ--ನಿನ್ನಿಂದ ಒಂದು ಚಿಕ್ಕ ಮನವಿ ಕೇಳುತ್ತೇನೆ; ಆಗುವದಿಲ್ಲವೆಂದು ಹೇಳಬೇಡ ಅಂದಳು. ಅರಸನು ಅವಳಿಗೆ--ನನ್ನ ತಾಯಿಯೇ, ಕೇಳು; ನಾನು ನಿನ್ನ ಮಾತಿಗೆ ಆಗುವದಿಲ್ಲವೆಂದು ಹೇಳುವದಿಲ್ಲ ಅಂದನು. 21 ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು. 22 ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು. 23 ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು. 24 ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು. 25 ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು. 26 ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು. 27 ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು. 28 ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು. 29 ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು. 30 ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು. 31 ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು. 32 ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ. 33 ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು. 34 ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು. 35 ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು. 36 ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು. 37 ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು. 38 ಶಿಮ್ಮಿ ಅರಸನಿಗೆ--ನಿನ್ನ ಮಾತು ಒಳ್ಳೇದು; ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ ನಿನ್ನ ಸೇವಕನು ಮಾಡುವನು ಅಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು. 39 ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್ನಲ್ಲಿದ್ದಾರೆಂದು ತಿಳಿಸಿ ದರು. 40 ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು. 41 ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ಗೆ ಹೋಗಿ ತಿರಿಗಿ ಬಂದಿದ್ದಾನೆಂದು ಸೊಲೊಮೋನ ನಿಗೆ ತಿಳಿಸಲ್ಪಟ್ಟಿತು. 42 ಆಗ ಅರಸನು ಶಿಮ್ಮಿಯನ್ನು ಕರೇ ಕಳುಹಿಸಿ ಅವನಿಗೆ--ನಿಶ್ಚಯವಾಗಿ ನೀನು ಯಾವ ದಿನದಲ್ಲಿ ಹೊರಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತವಾಗಿ ತಿಳಿದುಕೋ ಎಂಬದಾಗಿ ನಾನು ನಿನಗೆ ದೃಢವಾಗಿ ಹೇಳಿ ಕರ್ತನ ಹೆಸರಿನಲ್ಲಿ ನಿನ್ನಿಂದ ಪ್ರಮಾಣಮಾಡಿ ಸಲಿಲ್ಲವೋ? ನಾನು ಹೇಳಿದ ಮಾತು ಒಳ್ಳೇದೆಂದು ನೀನು ಹೇಳಲಿಲ್ಲವೋ? 43 ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು. 44 ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು. 45 ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು. 46 ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
1 ಸೊಲೊಮೋನನು ಐಗುಪ್ತದ ಅರಸ ನಾದ ಫರೋಹನ ಸಂಗಡ ಬಂಧುತ್ವ ಮಾಡಿ ಫರೋಹನ ಮಗಳನ್ನು ತಕ್ಕೊಂಡನು. ಅವನು ತನ್ನ ಮನೆಯನ್ನೂ ಕರ್ತನ ಆಲಯವನ್ನೂ ಯೆರೂಸ ಲೇಮಿಗೆ ಸುತ್ತಲೂ ಗೋಡೆಯನ್ನೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು. 2 ಆದರೆ ಆ ಕಾಲದ ವರೆಗೂ ಕರ್ತನ ಹೆಸರಿಗೆ ಆಲಯ ಕಟ್ಟಲ್ಪಡದೆ ಇದ್ದದರಿಂದ ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು. 3 ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು. 4 ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು. 5 ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು. 6 ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ. 7 ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ. 8 ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು. 9 ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು. 10 ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು. 11 ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ 12 ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ. 13 ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ. 14 ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು. 15 ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು. 16 ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು. 17 ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ. 18 ನಾನು ಅವಳ ಸಂಗಡ ಮನೆಯಲ್ಲಿರುವಾಗ ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ ಈ ಹೆಂಗಸು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು. 19 ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತಾರೂ ಇಲ್ಲ. ಆದರೆ ಅವಳು ಅದರ ಮೇಲೆ ಹೊರಳಿದ್ದರಿಂದ ರಾತ್ರಿಯಲ್ಲಿ ಈ ಹೆಂಗಸಿನ ಮಗುವು ಸತ್ತು ಹೋಯಿತು. 20 ಇವಳು ಮಧ್ಯರಾತ್ರಿಯಲ್ಲಿ ಎದ್ದು ನಿನ್ನ ದಾಸಿಯು ನಿದ್ರೆ ಗೈಯುತ್ತಿರುವಾಗ ನನ್ನ ಹತ್ತಿರ ಮಲಗಿದ್ದ ನನ್ನ ಮಗ ನನ್ನು ತೆಗೆದುಕೊಂಡು ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು. 21 ಉದಯದಲ್ಲಿ ನನ್ನ ಕೂಸಿಗೆ ಮೊಲೆ ಕೊಡಲು ಎದ್ದಾಗ ಇಗೋ, ಅದು ಸತ್ತಿತ್ತು. ಉದಯದಲ್ಲಿ ಅದನ್ನು ಯೋಚಿಸಿದಾಗ ಇಗೋ, ಅದು ನಾನು ಹೆತ್ತ ಮಗುವಾಗಿದ್ದಿಲ್ಲ ಅಂದಳು. 22 ಆಗ ಆ ಬೇರೆ ಹೆಂಗಸು--ಇಲ್ಲ, ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅಂದಳು. ಆದರೆ ನಾನು--ಹಾಗಲ್ಲ; ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅಂದೆನು. ಹೀಗೆ ಅವರು ಅರಸನ ಮುಂದೆ ಮಾತನಾಡಿದರು. 23 ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ 24 ಅರಸನು--ಕತ್ತಿಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದನು. ಅವರು ಕತ್ತಿಯನ್ನು ಅರಸನ ಬಳಿಗೆ ತಂದರು. 25 ಆಗ ಅರಸನುಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು ಇವಳಿಗೆ ಅರ್ಧಪಾಲನ್ನು ಅವಳಿಗೆ ಅರ್ಧ ಪಾಲನ್ನು ಕೊಡಿರಿ ಅಂದನು. 26 ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು. 27 ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು. 28 ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
1 ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು. 2 ಅವನಿಗೆ ಇದ್ದ ಪ್ರಧಾನರು ಯಾರಂದರೆ, ಚಾದೋಕನ ಮಗನಾದ ಅಜರ್ಯನು ಯಾಜಕನು; 3 ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು; 4 ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನು. ಯೆಹೋಯಾದಾ ವನ ಮಗನಾದ ಬೆನಾಯನು ಸೈನ್ಯದ ಅಧಿಪತಿಯು; ಚಾದೋಕನೂ ಎಬ್ಯಾತಾರನೂ ಯಾಜಕರು. 5 ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು. 6 ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು. 7 ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು. 8 ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು; 9 ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್, 10 ಏಲೋನ್, ಬೆತ್ಹಾನಾನ್, ಇವುಗಳಲ್ಲಿ ದೆಕೆರ ಮಗನು. 11 ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು. 12 ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು. 13 ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು. 14 ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು. 15 ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು. 16 ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು; 17 ಇಸ್ಸಕಾರನಲ್ಲಿ ಫಾರೂಹನ ಮಗನಾದ ಯೆಹೋ ಷಾಫಾಟನು; 18 ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು. 19 ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು. 20 ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು. 21 ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು. 22 ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, 23 ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ 24 ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು. 25 ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು. 26 ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು. 27 ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ. 28 ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು. 29 ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು. 30 ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು. 31 ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು. 32 ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು. 33 ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು. 34 ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
1 ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು. 2 ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ-- 3 ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು. 4 ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ. 5 ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ. 6 ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು. 7 ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು. 8 ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು. 9 ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು. 10 ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು. 11 ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು. 12 ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು. 13 ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು. 14 ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು. 15 ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು. 16 ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು. 17 ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು. 18 ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
1 ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು. 2 ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ. 3 ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು. 4 ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು. 5 ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು. 6 ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು. 7 ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ. 8 ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು; ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು. 9 ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು. 10 ಅವನು ಐದು ಮೊಳ ಎತ್ತರವಾದ ಕೊಠಡಿಗಳನ್ನು ಮನೆಯ ಬಳಿಯಲ್ಲಿ ಸುತ್ತಲೂ ಕಟ್ಟಿಸಿದನು; ಅವು ಮನೆಯ ಮೇಲೆ ಇರಿ ಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು. 11 ಆಗ ಕರ್ತನ ವಾಕ್ಯವು ಸೊಲೊಮೋನನಿಗೆ ಉಂಟಾಗಿ ಹೇಳಿದ್ದೇನಂದರೆ-- 12 ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ, 13 ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು. 14 ಸೊಲೊಮೋನನು ಮನೆಯನ್ನು ಕಟ್ಟಿಸಿ ತೀರಿಸಿ ದನು. 15 ಮನೆಯ ಗೋಡೆಗಳ ಒಳಭಾಗಕ್ಕೆ ಮಂದಿ ರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯ ವರೆಗೂ ದೇವದಾರು ಹಲಿಗೆಗಳಿಂದ ಕಟ್ಟಿಸಿದನು; ಒಳ ಭಾಗದಲ್ಲಿ ಮರದಿಂದ ಮುಚ್ಚಿ ಮನೆಯ ನೆಲಕ್ಕೆ ತುರಾಯಿ ಮರಗಳ ಹಲಿಗೆಗಳಿಂದ ಮುಚ್ಚಿದನು. 16 ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು. 17 ಮಂದಿರದ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಾಗಿತ್ತು. 18 ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು. 19 ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು. 20 ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು. 21 ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು. 22 ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು. 23 ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು. 24 ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು. 25 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು. 26 ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು: ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು. ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು. 27 ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು. 28 ಆ ಕೆರೂಬಿಗಳನ್ನು ಚಿನ್ನದಿಂದ ಹೊದಿಸಿದನು. 29 ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು. 30 ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು. 31 ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು. 32 ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು. 33 ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು. 34 ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು. 35 ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು. 36 ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು. 37 ನಾಲ್ಕನೇ ವರುಷದ ಜೀಪ್ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು. 38 ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
1 ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು. 2 ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು. 3 ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು. 4 ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು. 5 ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು. 6 ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು. 7 ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಈ ಪಾರ್ಶ್ವದಿಂದ ಆ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು. 8 ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು. 9 ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು. 10 ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು. 11 ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು. 12 ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು. 13 ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು. 14 ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು. 15 ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು. 16 ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು. 17 ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು. 18 ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು. 19 ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು. 20 ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು. 21 ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು. 22 ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು. 23 ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು. 24 ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು. 25 ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು. 26 ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು. 27 ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು. 28 ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು. 29 ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು. 30 ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು. 31 ಅಂಚಿಗೆ ಒಳಗಾದ ಅದರ ಬಾಯಿಯ ಮೇಲೆ ಒಂದು ಮೊಳ ಉದ್ದವಾಗಿತ್ತು. ಅದರ ಬಾಯಿ ದುಂಡಾಗಿ ಒಂದೂವರೆ ಮೊಳವಾಗಿತ್ತು; ಅದರ ಬಾಯಿಯ ಮೇಲೆ ಚಿತ್ರ ಗಳಿದ್ದವು; ಅದರ ಚಿತ್ರಗಳು ದುಂಡಾಗಿರದೆ ಚೌಕ ವಾಗಿದ್ದವು. 32 ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು. 33 ಅವುಗಳ ಇರುಸುಗಳೂ ಅಣಸುಗಳೂ ಚಕ್ರಗಳೂ ಕಂಬಿಗಳೂ ಎಲ್ಲಾ ಎರಕ ಹೊಯ್ಯಲ್ಪಟ್ಟಿದ್ದವು. 34 ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು. 35 ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು. 36 ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು. 37 ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು. 38 ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು. 39 ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು. 40 ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು. 41 ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ 42 ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ 43 ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ 44 ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ. 45 ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು. 46 ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು. 47 ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ. 48 ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು, 49 ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು, 50 ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು. 51 ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
1 ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು. 2 ಏಳನೇ ತಿಂಗಳಾದ ಏತಾನೀಮ್ ಎಂಬ ತಿಂಗಳಲ್ಲಿ ಹಬ್ಬವಿದ್ದಾಗ ಇಸ್ರಾ ಯೇಲಿನ ಸಮಸ್ತ ಮನುಷ್ಯರು ಅರಸನಾದ ಸೊಲೊ ಮೋನನ ಬಳಿಗೆ ಕೂಡಿಬಂದರು. 3 ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು. 4 ಯಾಜಕರೂ ಲೇವಿಯರೂ ಇವುಗಳನ್ನು ತಂದರು. 5 ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು. 6 ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು. 7 ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು. 8 ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ. 9 ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ. 10 ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು. 11 ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು. 12 ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ. 13 ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು. 14 ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ) 15 ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ-- 16 ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು. 17 ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು. 18 ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ. 19 ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು. 20 ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ. 21 ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು. 22 ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ-- 23 ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ, 24 ನಿನ್ನ ಸೇವಕನಾದಂಥ ನನ್ನ ತಂದೆ ಯಾದ ದಾವೀದನಿಗೆ ವಾಗ್ದಾನಮಾಡಿ ನೆರವೇರಿಸಿದಾ ತನೇ, 25 ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು. 26 ಈಗ ಓ ಇಸ್ರಾಯೇಲಿನ ದೇವರೇ, ನನ್ನ ತಂದೆಯಾದ ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ದೃಢವಾಗಲಿ. 27 ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ? 28 ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು. 29 ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ. 30 ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು. 31 ಯಾವನಾದರೂ ತನ್ನ ನೆರೆಯವನಿಗೆ ವಿರೋಧ ವಾಗಿ ಪಾಪಮಾಡಲು ಅವನು ಆಣೆ ಇಡಬೇಕೆಂದು ಅವನಿಗೆ ಆಣೆ ನೇಮಿಸಲು ಈ ಮಂದಿರದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆಮಾಡಿದರೆ 32 ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು. 33 ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ 34 ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು. 35 ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ 36 ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು. 37 ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ 38 ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು 39 ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ, 40 ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ. 41 ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ 42 ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು. 43 ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು. 44 ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ 45 ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು. 46 ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ 47 ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ 48 ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ 49 ಆಗ ನೀನು ಪರಲೋಕ ದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ ಅವರ ನ್ಯಾಯವನ್ನು ತೀರಿಸಿ 50 ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು. 51 ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ. 52 ಓ ಕರ್ತನಾದ ದೇವರೇ--ಅವರು ನಿನಗೆ ಕೂಗುವ ಎಲ್ಲಾದರಲ್ಲಿ ನೀನು ಅವರನ್ನು ಕೇಳುವ ಹಾಗೆ ನಿನ್ನ ಸೇವಕನ ವಿಜ್ಞಾಪನೆಗೂ ನಿನ್ನ ಜನವಾದ ಇಸ್ರಾಯೇಲಿನ ವಿಜ್ಞಾಪನೆಗೂ ನಿನ್ನ ಕಣ್ಣುಗಳು ತೆರೆ ದಿರಲಿ, 53 ನೀನು ಐಗುಪ್ತದಿಂದ ನಮ್ಮ ಪಿತೃಗಳನ್ನು ಹೊರಡ ಮಾಡುವಾಗ ನಿನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆ ಅವರನ್ನು ನಿನ್ನ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿದಿ ಅಂದನು. 54 ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು. 55 ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ. 56 ಆತನು ತನ್ನ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ಮಾತು ಗಳಲ್ಲಿ ಒಂದು ಮಾತಾದರೂ ಬಿದ್ದು ಹೋದದ್ದಿಲ್ಲ. 57 ಆತನು ನಮ್ಮ ತಂದೆಗಳಿಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನೂ ತನ್ನ ನ್ಯಾಯಗಳನ್ನೂ ಕೈಕೊಳ್ಳುವಂತೆಯೂ ತನ್ನ ಸಮಸ್ತ ಮಾರ್ಗಗಳಲ್ಲಿ ನಡೆಯುವಂತೆಯೂ ನಮ್ಮ ಹೃದಯಗಳನ್ನು ತನ್ನ ಕಡೆಗೆ ತಿರುಗಿಸುವ ಹಾಗೆ 58 ನಮ್ಮ ದೇವರಾದ ಕರ್ತನು ನಮ್ಮನ್ನು ಕೈ ಬಿಡದೆ, ನಮ್ಮನ್ನು ವಿಸರ್ಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದನೋ ಹಾಗೆಯೇ ನಮ್ಮ ಸಂಗಡ ಇರಲಿ. 59 ಇದ ಲ್ಲದೆ ಕರ್ತನು ತಾನೇ ದೇವರಾಗಿದ್ದಾನೆ; ಆತನ ಹೊರತು ಬೇರೊಬ್ಬನಿಲ್ಲವೆಂದು ಭೂಲೋಕದ ಜನ ರೆಲ್ಲರೂ ತಿಳಿಯುವ ಹಾಗೆ 60 ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ. 61 ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು. 62 ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು. 63 ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು. 64 ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು. 65 ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು. 66 ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
1 ಸೊಲೊಮೋನನು ಕರ್ತನ ಮಂದಿರ ವನ್ನೂ ಅರಮನೆಯನ್ನೂ ಕಟ್ಟಲು ಆಶೆ ಯಿಂದ ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ತೀರಿಸಿದ ಮೇಲೆ ಏನಾಯಿತಂದರೆ, 2 ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು. 3 ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು. 4 ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ 5 ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು. 6 ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ 7 ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು. 8 ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು. 9 ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು. 10 ತೂರಿನ ಅರಸನಾದ ಹೀರಾಮನು ಸೊಲೊ ಮೋನನಿಗೆ ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಚಿನ್ನವನ್ನೂ ತನ್ನ ಎಲ್ಲಾ ಇಷ್ಟದ ಪ್ರಕಾರ ಕೊಟ್ಟಿದ್ದರಿಂದ 11 ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು. 12 ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು. 13 ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು. 14 ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು. 15 ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ. 16 ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು. 17 ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು. 18 ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ 19 ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು. 20 ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ 21 ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು. 22 ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು. 23 ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು. 24 ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು. 25 ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು. 26 ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು. 27 ಹೀರಾಮನು ಹಡಗುಗಳಲ್ಲಿ ಸಮುದ್ರದ ಜ್ಞಾನವುಳ್ಳ ನಾವಿಕರಾಗಿರುವ ತನ್ನ ಸೇವಕರನ್ನು ಸೊಲೊಮೋನನ ಸೇವಕರ ಸಂಗಡ ಕಳುಹಿಸಿದನು. 28 ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
1 ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು. 2 ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು. 3 ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ. 4 ಶೆಬದ ರಾಣಿಯು ಸೊಲೊ ಮೋನನ ಸಮಸ್ತ ಜ್ಞಾನವನ್ನೂ ಅವನು ಕಟ್ಟಿಸಿದ ಮಂದಿರವನ್ನೂ 5 ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ-- 6 ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು. 7 ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು. 8 ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು. 9 ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು. 10 ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ. 11 ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು. 12 ಅರಸನು ಅಲ್ಮುಗ್ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ. 13 ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು. 14 ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ 15 ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು. 16 ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು. 17 ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು. 18 ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು. 19 ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು. 20 ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ. 21 ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು. 22 ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು. 23 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು. 24 ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು. 25 ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು. 26 ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು. 27 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು. 28 ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು. 29 ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
1 ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು. 2 ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು. 3 ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು. 4 ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ. 5 ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು. 6 ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. 7 ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು. 8 ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು. 9 ಆದಕಾರಣ ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷನಾದ ಇಸ್ರಾಯೇಲಿನ ದೇವರಾದ ಕರ್ತನ ಕಡೆಯಿಂದ ಅವನ ಹೃದಯವು ತಿರುಗಿಹೋದದರಿಂದ ಕರ್ತನು ಅವನ ಮೇಲೆ ಕೋಪಿಸಿಕೊಂಡಿದ್ದನು. 10 ಅನ್ಯ ದೇವರುಗಳ ಹಿಂದೆ ಹೋಗಬಾರದೆಂದು ಆತನು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದನು. ಆದರೆ ಕರ್ತನು ಆಜ್ಞಾಪಿಸಿ ದ್ದನ್ನು ಅವನು ಕೈಕೊಳ್ಳದೆ ಹೋದನು. 11 ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು. 12 ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು. 13 ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು. 14 ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು. 15 ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ 16 ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು. 17 ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು. 18 ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು. 19 ಇದಲ್ಲದೆ ಹದದನು ಫರೋಹನ ದೃಷ್ಟಿಯಲ್ಲಿ ಅತಿ ಕೃಪೆಯನ್ನು ಹೊಂದಿ ದನು. ಏನಂದರೆ, ಅವನು ರಾಣಿಯಾಗಿರುವ ತನ್ನ ಹೆಂಡತಿಯಾದ ತಖ್ಪೆನೇಸ್ಯೆಂಬವಳ ಸಹೋ ದರಿಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. 20 ತಖ್ಪೆನೇಸ್ ಸಹೋದರಿಯು ಅವನಿಗೆ ಗೆನುಬ ತನೆಂಬ ಮಗನನ್ನು ಹೆತ್ತಳು. ತಖ್ಪೆನೇಸ್ ಇವನನ್ನು ಫರೋಹನ ಮನೆಯಲ್ಲಿ ಮೊಲೆ ಬಿಡಿಸಿದಳು. ಗೆನುಬತನು ಫರೋಹನ ಮನೆಯಲ್ಲಿ ಅವನ ಮಕ್ಕಳ ಸಂಗಡ ಇದ್ದನು. 21 ಆದರೆ ದಾವೀದನು ತನ್ನ ಪಿತೃಗಳ ಸಂಗಡ ಮಲಗಿದ್ದಾನೆಂದೂ ಸೈನ್ಯಾಧಿಪತಿಯಾದ ಯೋವಾಬನು ಸತ್ತುಹೋದನೆಂದೂ ಹದದನು ಐಗುಪ್ತದಲ್ಲಿ ಕೇಳಿ ಫರೋಹನಿಗೆ--ನಾನು ನನ್ನ ದೇಶಕ್ಕೆ ಹೋಗುವ ಹಾಗೆ ನನ್ನನ್ನು ಕಳುಹಿಸು ಅಂದನು. 22 ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು. 23 ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು. 24 ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು. 25 ಹದದನು ಮಾಡಿದ ಕೇಡು ಹೊರತಾಗಿ ಇವನು ಸೊಲೊ ಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲ್ಯರಿಗೆ ಶತ್ರು ವಾಗಿದ್ದನು. ಅವನು ಇಸ್ರಾಯೇಲ್ಯರನ್ನು ಹಗೆ ಮಾಡಿ ಅರಾಮ್ ದೇಶವನ್ನು ಆಳುತ್ತಾ ಇದ್ದನು. 26 ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು. 27 ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ 28 ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು. 29 ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು. 30 ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. 31 ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು. 32 (ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.) 33 ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ. 34 ಆದರೂ ನನ್ನ ಆಜ್ಞೆಗಳನ್ನೂ ಕಟ್ಟಳೆ ಗಳನ್ನೂ ಕೈಕೊಂಡದ್ದರಿಂದ ನಾನು ಆದು ತೆಗೆದು ಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದು ಕೊಳ್ಳದೆ ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು. 35 ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು. 36 ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು. 37 ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ. 38 ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು. 39 ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು. 40 ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು. 41 ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 42 ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳಾಗಿದ್ದವು. 43 ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
1 ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು. 2 (ಅರಸನಾದ ಸೊಲೊಮೋನನ ಸಮ್ಮುಖ ದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು) ಇನ್ನೂ ಐಗುಪ್ತದಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿದಾಗ ಅವರು ಅವ ನನ್ನು ಕರೇಕಳುಹಿಸಿದರು. 3 ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು; 4 ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು. 5 ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು. 6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು. 7 ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು. 8 ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು. 9 ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು. 10 ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ-- 11 ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು. 12 ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು. 13 ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ-- 14 ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು. 15 ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು. 16 ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು. 17 ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು. 18 ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು. 19 ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು. 20 ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ. 21 ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು. 22 ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ 23 ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದದ ಬೆನ್ಯಾ ವಿಾನ್ ಸಮಸ್ತ ಮನೆಯವರಿಗೂ ಮಿಕ್ಕಾದ ಜನರಿಗೂ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲಿನ ಮಕ್ಕಳಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಹಿಂತಿರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತೆಂದು ಕರ್ತನು ಹೇಳುತ್ತಾನೆ ಅಂದನು. 24 ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು. 25 ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು. 26 ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು. 27 ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು. 28 ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು. 29 ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು. 30 ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು. 31 ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು. 32 ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು. 33 ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
1 ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು. 2 ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು. 3 ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು. 4 ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು. 5 ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು. 6 ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು. 7 ಅರಸನು ದೇವರ ಮನುಷ್ಯನಿಗೆ--ನೀನು ನನ್ನ ಕೂಡ ಮನೆಗೆ ಬಂದು ನಿನ್ನನ್ನು ಚೇತರಿಸಿಕೋ. ನಾನು ನಿನಗೆ ಒಂದು ಬಹುಮಾನ ಕೊಡುವೆನು ಅಂದನು. 8 ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ. 9 ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು. 10 ಆದದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂತಿರಿಗಿ ಹೋಗದೆ ಮತ್ತೊಂದು ಮಾರ್ಗವಾಗಿ ಹೋದನು. 11 ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು; 12 ಅವನು ಅರಸನಿಗೆ ಹೇಳಿದ ಮಾತುಗಳನ್ನು ಸಹ ತಮ್ಮ ತಂದೆಗೆ ತಿಳಿಸಿದರು. ಆಗ ಅವರ ತಂದೆ ಅವ ರಿಗೆ--ಅವನು ಯಾವ ಮಾರ್ಗವಾಗಿ ಹೋದನು ಅಂದನು. ಯಾಕಂದರೆ ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳು ನೋಡಿದ್ದರು. 13 ಅವನು ತನ್ನ ಮಕ್ಕಳಿಗೆಕತ್ತೆಗೆ ತಡಿ ಹಾಕಿರಿ ಅಂದನು. ಅವರು ಕತ್ತೆಗೆ ತಡಿ ಹಾಕಿದರು; ಅವನು ಅದರ ಮೇಲೆ ಏರಿ ದೇವರ ಮನುಷ್ಯನ ಹಿಂದೆ ಹೋಗಿ ಅವನು ಏಲಾ ಮರದ ಕೆಳಗೆ ಕುಳಿತುಕೊಳ್ಳುವಾಗ ಅವನನ್ನು ಕಂಡು ಕೊಂಡನು. 14 ಆಗ ಅವನು--ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ ಅಂದನು. 15 ಅದಕ್ಕ ವನು--ನಾನೇ ಅಂದನು. ಆಗ ಅವನಿಗೆ--ನೀನು ನನ್ನ ಮನೆಗೆ ಬಂದು ರೊಟ್ಟಿ ತಿನ್ನು ಅಂದನು. 16 ಅದಕ್ಕವನು--ನಾನು ನಿನ್ನ ಸಂಗಡ ಹಿಂತಿರುಗಲೂ ಕೂಡದು, ಒಳಗೆ ಹೋಗಲೂ ಕೂಡದು; ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವದಿಲ್ಲ, ನೀರು ಕುಡಿಯು ವದಿಲ್ಲ. 17 ಕರ್ತನ ಮಾತು--ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ; ಬಂದ ಮಾರ್ಗ ದಿಂದ ತಿರುಗಿ ಹೋಗಬೇಡ ಎಂದು ನನಗೆ ಹೇಳ ಲ್ಪಟ್ಟಿತು ಅಂದನು. 18 ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು. 19 ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು. 20 ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ 21 ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ 22 ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು. 23 ಅವನು ರೊಟ್ಟಿ ತಿಂದು ನೀರು ಕುಡಿದ ತರುವಾಯ ಇವನು ಕರತಂದ ಪ್ರವಾದಿ ಗೋಸ್ಕರ ಕತ್ತೆಗೆ ತಡಿ ಹಾಕಿದನು. 24 ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು; ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು. 25 ಆಗ ಇಗೋ, ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು; 26 ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು. 27 ತನ್ನ ಮಕ್ಕಳಿಗೆ--ಕತ್ತೆಗೆ ತಡಿಹಾಕಿರಿ ಅಂದನು. ಅವರು ತಡಿ ಹಾಕಿದರು. 28 ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು. 29 ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು. 30 ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು. 31 ಅವನು ಇವನನ್ನು ಹೂಣಿಟ್ಟ ತರುವಾಯ ಏನಾಯಿತಂದರೆ, ಅವನು ತನ್ನ ಮಕ್ಕಳಿಗೆ--ನಾನು ಸತ್ತಾಗ ದೇವರ ಮನುಷ್ಯನನ್ನು ಹೂಣಿಟ್ಟ ಸಮಾಧಿ ಯಲ್ಲಿ ನನ್ನನ್ನು ಹೂಣಿಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ. 32 ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು. 33 ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು. 34 ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
1 ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು 2 ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ. 3 ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು. 4 ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು. 5 ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು. 6 ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ. 7 ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು. 8 ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ. 9 ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ. 10 ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ. 11 ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ. 12 ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು. 13 ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು. 14 ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು. 15 ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು. 16 ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು. 17 ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು. 18 ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು. 19 ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ. 20 ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು. 21 ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು. 22 ಆದರೆ ಯೆಹೂದದವರು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿ ಗಿಂತ ತಾವು ಹೆಚ್ಚಾಗಿ ಪಾಪಮಾಡಿ ಆತನಿಗೆ ರೋಷ ವನ್ನೆಬ್ಬಿಸಿದರು. 23 ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು. 24 ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು. 25 ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು. 26 ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು. 27 ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು. 28 ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು. 29 ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 30 ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು. 31 ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
1 ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು. 2 ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು. 3 ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು. 4 ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು. 5 ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು. 6 ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ? 7 ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು. 8 ಅಬೀಯಾಮನು ತನ್ನ ಪಿತೃಗಳ ಸಂಗಡ ಮಲಗಿ ದನು; ದಾವೀದನ ಪಟ್ಟಣದಲ್ಲಿ ಅವನನ್ನು ಹೂಣಿ ಟ್ಟರು. ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. 9 ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೇ ವರುಷದಲ್ಲಿ ಆಸನು ಯೆಹೂದದ ಮೇಲೆ ಆಳಿದನು. 10 ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು. 11 ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು. 12 ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು. 13 ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು. 14 ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು. 15 ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು. 16 ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು. 17 ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು. 18 ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ. 19 ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು. 20 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು. 21 ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು. 22 ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು. 23 ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು. 24 ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು. 25 ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು. 26 ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು. 27 ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. 28 ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು. 29 ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು. 30 ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ. 31 ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 32 ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು. 33 ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು. 34 ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
1 ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು. 2 ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ. 3 ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು. 4 ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು. 5 ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? 6 ಬಾಷನು ತನ್ನ ಪಿತೃಗಳ ಸಂಗಡ ಮಲಗಿದನು; ತಿರ್ಚದಲ್ಲಿ ಅವನು ಹೂಣಿಡಲ್ಪಟ್ಟನು; ಅವನ ಮಗನಾದ ಏಲನು ಅವನಿಗೆ ಬದಲಾಗಿ ಆಳಿ ದನು. 7 ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು. 8 ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು. 9 ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು. 10 ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು. 11 ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ. 12 ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ 13 ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು. 14 ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 15 ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಏಳು ದಿವಸ ಆಳಿದನು. ಆಗ ಜನರು ಫಿಲಿಷ್ಟಿಯರಿಗೆ ಸಂಬಂಧ ಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಾಗಿ ಇಳಿದಿರುವ 16 ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು. 17 ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು. 18 ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು. 19 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು. 20 ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 21 ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು. 22 ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು. 23 ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು; 24 ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು. 25 ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು. 26 ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು. 27 ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 28 ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು. 29 ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು; 30 ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು. 31 ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು. 32 ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು, 33 ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು. 34 ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
1 ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು. 2 ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ, 3 ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು. 4 ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು. 5 ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು. 6 ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು. 7 ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು. 8 ಕರ್ತನ ವಾಕ್ಯವು ಅವನಿಗೆ ಉಂಟಾಗಿ-- 9 ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು. 10 ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು. 11 ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು. 12 ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು. 13 ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ. 14 ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು. 15 ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು. 16 ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು. 17 ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು. 18 ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು. 19 ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ, 20 ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು. 21 ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು. 22 ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು. 23 ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು. 24 ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
1 ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು. 2 ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು. 3 ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು. 4 ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.) 5 ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು. 6 ಅವರು ದೇಶವನ್ನು ಹಾದು ಹೋಗಲು ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕ ವಾಗಿ ಹೋದರು. 7 ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ ಇಗೋ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಇವನನ್ನು ಗುರುತಿಸಿ ಮೊರೆ ಕೆಳಗಾಗಿ ಬಿದ್ದು--ನೀನು ನನ್ನ ಒಡೆಯನಾದ ಎಲೀಯನಲ್ಲವೋ ಅಂದನು. 8 ಇವನು ಅವನಿಗೆ--ನಾನೇ, ನೀನು ಹೋಗಿ--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ಹೇಳು ಅಂದನು. 9 ಅದಕ್ಕ ವನು--ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು. 10 ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು. 11 ಈಗ ನೀನು--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು ಎಂದು ಹೇಳುತ್ತೀ 12 ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ. 13 ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ? 14 ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು. 15 ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು. 16 ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರು ಗೊಳ್ಳಲು ಹೋದನು. 17 ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು. 18 ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ. 19 ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು. 20 ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು. 21 ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ. 22 ಆಗ ಎಲೀಯನು ಜನರಿಗೆ--ಕರ್ತನ ಪ್ರವಾದಿ ಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಆದರೆ ಬಾಳನ ಪ್ರವಾದಿಗಳು ನಾನೂರಐವತ್ತು ಮಂದಿ ಇದ್ದಾರೆ. 23 ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ; ಒಂದು ಹೋರಿಯನ್ನು ಅವರು ಆದು ಕೊಂಡು ಅದನ್ನು ತುಂಡು ತುಂಡಾಗಿ ಕಡಿದು ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆಯೇ ಮಾಡಿ ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು. 24 ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು. 25 ಅದಕ್ಕೆ ಜನರೆಲ್ಲರು ಪ್ರತ್ಯುತ್ತರ ವಾಗಿ--ಈ ಮಾತು ಒಳ್ಳೇದು ಅಂದರು. ಆಗ ಎಲೀ ಯನು ಬಾಳನ ಪ್ರವಾದಿಗಳಿಗೆ--ನೀವು ಅನೇಕರಾಗಿ ರುವದರಿಂದ ಒಂದು ಹೋರಿಯನ್ನು ಆದುಕೊಂಡು ಅದನ್ನು ಮೊದಲು ಸಿದ್ಧಮಾಡಿ ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ಆದರೆ ಬೆಂಕಿಯನ್ನು ಹಾಕದೆ ಇರ್ರಿ ಅಂದನು. 26 ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು. 27 ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು. 28 ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು. 29 ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ. 30 ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು. 31 ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ 32 ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು. 33 ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು. 34 ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು. 35 ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು. 36 ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ. 37 ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು. 38 ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು. 39 ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು. 40 ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು. 41 ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು. 42 ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ 43 ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು. 44 ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು. 45 ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು. 46 ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
1 ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ, 2 ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು. 3 ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು. 4 ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು. 5 ಅವನು ಷಿಟ್ಟೀಮ್ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು. 6 ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು. 7 ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು. 8 ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು. 9 ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು. 10 ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು. 11 ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ. 12 ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು. 13 ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು. 14 ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು. 15 ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು. 16 ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು; 17 ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು. 18 ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು. 19 ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು. 20 ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು. 21 ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
1 ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು. 2 ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣ ದೊಳಗೆ ಕಳುಹಿಸಿ--ನಿನ್ನ ಬೆಳ್ಳಿಯೂ ನಿನ್ನ ಬಂಗಾರವೂ ನನ್ನವು; 3 ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು. 4 ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು. 5 ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು. 6 ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು. 7 ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು. 8 ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ-- 9 ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು. 10 ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು. 11 ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು. 12 ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ಈ ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು. 13 ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು. 14 ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು. 15 ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು. 16 ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು. 17 ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು. 18 ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು. 19 ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು. 20 ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು. 21 ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು. 22 ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು. 23 ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು. 24 ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು; 25 ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗುವೆವು ಅಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು. 26 ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು. 27 ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು. 28 ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು. 29 ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು. 30 ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು. 31 ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು. 32 ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು. 33 ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು. 34 ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು. 35 ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು. 36 ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು. 37 ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು. 38 ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು. 39 ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು. 40 ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು. 41 ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು. 42 ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು. 43 ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
1 ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು. 2 ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು. 3 ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು. 4 ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು. 5 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು. 6 ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು. 7 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು. 8 ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು. 9 ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ-- 10 ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು. 11 ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. 12 ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. 13 ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು. 14 ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು. 15 ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು. 16 ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು. 17 ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು-- 18 ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ. 19 ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು. 20 ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು; 21 ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು. 22 ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು. 23 ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು. 24 ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು. 25 ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ. 26 ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು. 27 ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು. 28 ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ-- 29 ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
1 ಆದರೆ ಅರಾಮ್ಯರಿಗೂ ಇಸ್ರಾಯೇಲ್ಯ ರಿಗೂ ಮೂರು ವರುಷ ಯುದ್ಧವಿಲ್ಲದೆ ಇತ್ತು. 2 ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು. 3 ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು. 4 ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು. 5 ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು. 6 ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. 7 ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು. 8 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು. 9 ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು. 10 ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು. 11 ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು 12 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. 13 ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು. 14 ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು. 15 ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. 16 ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು. 17 ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು. 18 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು. 19 ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು. 20 ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. 21 ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. 22 ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. 23 ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು. 24 ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು. 25 ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು. 26 ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ 27 ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು. 28 ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು. 29 ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು. 30 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು. 31 ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು. 32 ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು. 33 ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು. 34 ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು. 35 ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು. 36 ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು. 37 ಹಾಗೆಯೇ ಅರಸನು ಸತ್ತುಹೋಗಿ ಸಮಾರ್ಯಕ್ಕೆ ತರಲ್ಪಟ್ಟಾಗ ಅವರು ಅರಸನನ್ನು ಸಮಾ ರ್ಯದಲ್ಲಿ ಹೂಣಿಟ್ಟರು. 38 ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು. 39 ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 40 ಹೀಗೆಯೇ ಅಹಾಬನು ತನ್ನ ಪಿತೃಗಳ ಸಂಗಡ ಮಲಗಿದನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಆಳಿದನು. 41 ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು. 42 ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು. 43 ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು. 44 ಯೆಹೋಷಾಫಾಟನು ಇಸ್ರಾ ಯೇಲಿನ ಅರಸನ ಸಂಗಡ ಸಮಾಧಾನ ಮಾಡಿ ಕೊಂಡನು. 45 ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 46 ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು. 47 ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು. 48 ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು. 49 ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ. 50 ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು. 51 ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ 52 ತನ್ನ ತಂದೆಯ ಮಾರ್ಗದಲ್ಲಿಯೂ ತನ್ನ ತಾಯಿಯ ಮಾರ್ಗ ದಲ್ಲಿಯೂ ಇಸ್ರಾಯೆಲ್ಯರನ್ನು ಪಾಪಮಾಡಲು ಪ್ರೇರೇ ಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನಮಾರ್ಗದಲ್ಲಿಯೂ ನಡೆದನು. 53 ಅವನು ಬಾಳನನ್ನು ಸೇವಿಸಿ ಅದಕ್ಕೆ ಅಡ್ಡಬಿದ್ದು ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದನು.
1 ಅಹಾಬನು ಸತ್ತ ತರುವಾಯ ಮೋವಾಬ್ಯರು ಇಸ್ರಾಯೇಲ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. 2 ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು. 3 ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ? 4 ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು. 5 ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು. 6 ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು. 7 ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು. 8 ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು. 9 ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು. 10 ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. 11 ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು. 12 ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು. 13 ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ. 14 ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು. 15 ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು. 16 ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. 17 ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು. 18 ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
1 ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು. 2 ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು. 3 ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. 4 ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು. 5 ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು. 6 ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು. 7 ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು. 8 ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು. 9 ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು. 10 ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು. 11 ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು. 12 ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು. 13 ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು. 14 ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು. 15 ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು. 16 ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು. 17 ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು. 18 ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು. 19 ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು. 20 ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು. 21 ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು. 22 ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ. 23 ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು. 24 ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು. 25 ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
1 ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು. 2 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು. 3 ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು. 4 ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು. 5 ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು. 6 ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು. 7 ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು. 8 ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು--ಎದೋಮಿನ ಅರಣ್ಯ ಮಾರ್ಗವಾಗಿ ಅಂದನು. 9 ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು. 10 ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು. 11 ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು. 12 ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು. 13 ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು. 14 ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ. 15 ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು. 16 ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ. 17 ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು. 18 ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು. 19 ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು. 20 ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು. 21 ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು. 22 ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು. 23 ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು. 24 ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು. 25 ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು. 26 ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು. 27 ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
1 ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು. 2 ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು. 3 ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ. 4 ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು. 5 ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು. 6 ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು. 7 ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು. 8 ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು. 9 ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ. 10 ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ ಅದರಲ್ಲಿ ಅವನಿಗೋಸ್ಕರ ಮಂಚವನ್ನೂ ಮೇಜನ್ನೂ ಕುರ್ಚಿ ಯನ್ನೂ ದೀಪಸ್ತಂಭವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಪ್ರವೇಶಿಸುವನು ಅಂದಳು. 11 ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆ 12 ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು. 13 ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು. 14 ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು. 15 ಪ್ರವಾ ದಿಯು--ಅವಳನ್ನು ಕರೆ ಅಂದನು. ಅವನು ಅವಳನ್ನು ಕರೆದಾಗ ಅವಳು ಬಾಗಲಲ್ಲಿ ನಿಂತಳು. 16 ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು. 17 ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು. 18 ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು. 19 ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು. 20 ಹುಡು ಗನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದ ವರೆಗೂ ಅವಳ ತೊಡೆಯ ಮೇಲೆ ಇದ್ದುಕೊಂಡು ಸತ್ತುಹೋದನು. 21 ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು -- 22 ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು. 23 ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು. 24 ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ --ನಡಿಸಿಕೊಂಡು ಹೋಗು; ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು. 25 ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು. 26 ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು. 27 ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು. 28 ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು. 29 ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು. 30 ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು. 31 ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು. 32 ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು. 33 ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು. 34 ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು. 35 ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು. 36 ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು. 37 ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು. 38 ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು. 39 ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು. 40 ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು. 41 ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ. 42 ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು. 43 ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು. 44 ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
1 ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು. 2 ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು. 3 ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು. 4 ಆಗ ಒಬ್ಬನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು. 5 ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು. 6 ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು. 7 ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು. 8 ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು. 9 ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು. 10 ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು. 11 ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು. 12 ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು. 13 ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು. 14 ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು. 15 ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು. 16 ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು. 17 ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು. 18 ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು. 19 ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು. 20 ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು. 21 ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು. 22 ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು. 23 ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು. 24 ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು. 25 ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು. 26 ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ? 27 ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
1 ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. 2 ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು. 3 ಆಗ ಅವರಲ್ಲಿ ಒಬ್ಬನು--ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು--ನಾನು ಬರುತ್ತೇನೆ ಅಂದನು. 4 ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು. 5 ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು. 6 ದೇವರ ಮನುಷ್ಯನು--ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು. 7 ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು. 8 ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು. 9 ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು. 10 ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ. 11 ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ--ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು. 12 ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು. 13 ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು. 14 ಆದದರಿಂದ ಅವನು ಅಲ್ಲಿಗೆ ಕುದುರೆ ಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿ ದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು. 15 ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು. 16 ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು. 17 ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು. 18 ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು. 19 ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು. 20 ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು. 21 ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು. 22 ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು. 23 ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದಲ್ಲಿ ತಿರಿಗಿ ಬಾರದೆ ಹೋದವು. 24 ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು. 25 ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು. 26 ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು. 27 ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು. 28 ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು. 29 ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು. 30 ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು. 31 ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು. 32 ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು. 33 ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
1 ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು. 2 ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು. 3 ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು? 4 ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು. 5 ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ. 6 ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು. 7 ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು. 8 ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು. 9 ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು. 10 ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು. 11 ಅವನು ಬಾಗಲು ಕಾಯುವವರನ್ನು ಕರೆದನು; ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು. 12 ಆಗ ಅರಸನು ರಾತ್ರಿಯಲ್ಲಿ ಎದ್ದು ತನ್ನ ಸೇವಕರಿಗೆ--ಅರಾಮ್ಯರು ನಮಗೆ ಮಾಡಿದ್ದನ್ನು ನಿಮಗೆ ತಿಳಿಸುತ್ತೇನೆ. ನಾವು ಹಸಿದವರಾಗಿದ್ದೇವೆಂದು ಅವರು ತಿಳಿದು ಹೊಲದಲ್ಲಿ ಅಡಗಿಕೊಳ್ಳಲು ಪಾಳೆಯ ದಿಂದ ಹೊರಟು--ಅವರು ಪಟ್ಟಣದಿಂದ ಹೊರಟು ಬಂದಾಗ ನಾವು ಅವರನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದುಕೊಂಡಿ ದ್ದಾರೆ ಅಂದನು. 13 ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು. 14 ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು. 15 ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು. 16 ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು. 17 ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು. 18 ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು. 19 ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು. 20 ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
1 ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು. 2 ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು. 3 ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು. 4 ಅರಸನು ದೇವರ ಮನುಷ್ಯನ ಸೇವ ಕನಾದ ಗೇಹಜಿಯ ಸಂಗಡ ಮಾತನಾಡಿ--ಎಲೀ ಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರವಾಗಿ ತಿಳಿಸೆಂದು ಅವನಿಗೆ ಹೇಳಿದನು. 5 ಅವನು ಸತ್ತವನನ್ನು ಬದುಕಿಸಿದನೆಂದು, ಗೇಹಜಿಯು ಅರಸ ನಿಗೆ ವಿವರವಾಗಿ ಹೇಳುತ್ತಿರುವಾಗ ಏನಾಯಿತಂದರೆ ಇಗೋ, ಬದುಕಿಸಿದ ಮಗನ ತಾಯಿಯಾದ ಆ ಸ್ತ್ರೀಯು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಡುತ್ತಿದ್ದಳು. ಆಗ ಗೇಹಜಿಯುನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಇವಳ ಮಗನು ಇವನೇ ಅಂದನು. 6 ಅರಸನು ಆ ಸ್ತ್ರೀಯನ್ನು ಕೇಳಿದಾಗ ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ಕಳುಹಿಸಿಕೊಟ್ಟು ಅವಳಿಗೆ ಉಂಟಾದದ್ದನ್ನೆಲ್ಲಾ ಅವಳು ದೇಶವನ್ನು ಬಿಟ್ಟ ದಿನ ಮೊದಲುಗೊಂಡು ಆ ಕಾಲದ ವರೆಗೂ ಆ ಹೊಲದ ಹುಟ್ಟುವಳಿಯೆಲ್ಲಾ ಅವಳಿಗೆ ಬರುವ ಹಾಗೆ ಮಾಡು ಅಂದನು. 7 ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು. 8 ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು. 9 ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು. 10 ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು. 11 ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು. 12 ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು. 13 ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು. 14 ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ, 15 ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು. 16 ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು. 17 ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು. 18 ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು. 19 ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು. 20 ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು. 21 ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು. 22 ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು. 23 ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪ ಡಲಿಲ್ಲವೋ? 24 ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು. 25 ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಹನ್ನೆರಡನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಆಳಲಾರಂಭಿಸಿದನು. 26 ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು. 27 ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು. 28 ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು. 29 ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
1 ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು. 2 ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು 3 ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು. 4 ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು. 5 ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು. 6 ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ. 7 ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು. 8 ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು. 9 ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು. 10 ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು. 11 ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು. 12 ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು. 13 ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು. 14 ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು. 15 ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು. 16 ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು. 17 ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು. 18 ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು. 19 ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು. 20 ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು. 21 ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು. 22 ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು. 23 ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು. 24 ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು. 25 ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. 26 ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು. 27 ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು. 28 ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು. 29 ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು. 30 ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು. 31 ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು. 32 ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು. 33 ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು. 34 ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು. 35 ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು. 36 ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು. 37 ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
1 ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ-- 2 ನಿಮ್ಮ ಯಜಮಾನನ ಕುಮಾರರು ನಿಮ್ಮ ಬಳಿಯಲ್ಲಿ ಇದ್ದಾರೆ; ಇದಲ್ಲದೆ ರಥಗಳೂ ಕುದುರೆಗಳೂ ಕೋಟೆಯೂ ಆಯುಧಗಳೂ ನಿಮಗೆ ಉಂಟು. ಆದದರಿಂದ ಈ ಪತ್ರವು ನಿಮ್ಮ ಬಳಿಗೆ ಬಂದಾಗ 3 ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು. 4 ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು. 5 ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು. 6 ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. 7 ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು. 8 ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು. 9 ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು. 10 ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು. 11 ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು. 12 ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ 13 ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು. 14 ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ. 15 ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ-- 16 ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು. 17 ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು. 18 ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ-- ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು. 19 ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು. 20 ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು. 21 ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು. 22 ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು. 23 ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು. 24 ಅವರು ಬಲಿಗ ಳನ್ನೂ ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇ ಶಿಸಿದ ತರುವಾಯ ಯೇಹುವು ಹೊರಗೆ ಎಂಭತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ--ನಾನು ನಿಮ್ಮ ಕೈಗೆ ಒಪ್ಪಿಸಿದ ಜನರಲ್ಲಿ ಯಾವನಾದರೂ ತಪ್ಪಿಸಿಕೊಂಡು ಹೋದರೆ ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿ ರುವದು ಅಂದನು. 25 ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು. 26 ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು. 27 ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು. 28 ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು. 29 ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ. 30 ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು. 31 ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ. 32 ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು. 33 ಮೂಡಣದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಶಾನ್ ಸಂಹರಿಸಿದನು. 34 ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ 35 ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು. 36 ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
1 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು. 2 ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು. 3 ಹಾಗೆಯೇ ಅವನು ಅವಳ ಸಂಗಡ ಆರು ವರುಷ ಕರ್ತನ ಮನೆಯಲ್ಲಿ ಬಚ್ಚಿಡಲ್ಪಟ್ಟಿದ್ದನು. ಅತಲ್ಯಳು ದೇಶದ ಮೇಲೆ ಆಳುತ್ತಾ ಇದ್ದಳು. 4 ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ 5 ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ. 6 ಮೂರನೇ ಭಾಗವು ಸೂರ್ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ. 7 ಇದಲ್ಲದೆ ಸಬ್ಬತ್ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ. 8 ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ. 9 ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು. 10 ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು. 11 ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡುಕೊಂಡು ಬಲಿಪೀಠದ ಬಳಿಯಲ್ಲಿಯೂ ಆಲಯದ ಬಳಿಯಲ್ಲಿಯೂ ಆಲಯದ ಬಲಪಾರ್ಶ್ವ ಮೊದಲು ಗೊಂಡು ಎಡಪಾರ್ಶ್ವದ ವರೆಗೂ ಅರಸನ ಸುತ್ತಲೂ ನಿಂತುಕೊಂಡರು. 12 ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು. 13 ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು. 14 ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು. 15 ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು. 16 ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು. 17 ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. 18 ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು. 19 ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು. 20 ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು. 21 ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
1 ಯೇಹುವಿನ ಆಳ್ವಿಕೆಯ ಏಳನೇ ವರುಷದಲ್ಲಿ ಯೆಹೋವಾಷನು ಆಳಲು ಆರಂಭಿಸಿ ಯೆರೂಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. 2 ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. 3 ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು. 4 ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ 5 ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು. 6 ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು. 7 ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು. 8 ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು. 9 ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು. 10 ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು. 11 ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು. 12 ಇದ ಲ್ಲದೆ ಕರ್ತನ ಮನೆಯ ಒಡಕುಗಳನ್ನು ದುರಸ್ತು ಮಾಡುವದಕ್ಕೆ ಮರವನ್ನೂ ಕೆತ್ತಿದಕಲ್ಲುಗಳನ್ನೂ ತೆಗೆದು ಕೊಳ್ಳುವದಕ್ಕೂ ಮನೆ ದುರಸ್ತು ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿ ಕೊಟ್ಟರು. 13 ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ 14 ಹಣದಿಂದ ಮಾಡಿ ಸದೆ ಅವರು ಅದನ್ನು ಕೆಲಸದವರಿಗೆ ಕೊಟ್ಟು ಕರ್ತನ ಮನೆಯನ್ನು ದುರಸ್ತು ಮಾಡಿಸಿದರು. 15 ಇದಲ್ಲದೆ ಅವರು ಕೆಲಸ ಮಾಡುವವರಿಗೆ ಕೊಡುವದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ ಅವರಿಂದ ಲೆಕ್ಕವನ್ನು ತೆಗೆದು ಕೊಳ್ಳಲಿಲ್ಲ. 16 ಅವರು ನಂಬಿಗಸ್ತರಾಗಿ ಮಾಡಿದರು. ಆದರೆ ಅಪರಾಧದ ಹಣವನ್ನೂ ಪಾಪಪರಿಹಾರದ ಹಣವನ್ನೂ ಕರ್ತನ ಮನೆಗೆ ತಕ್ಕೊಂಡು ಬರಲಿಲ್ಲ; ಅದು ಯಾಜಕರದಾಗಿತ್ತು. 17 ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು. 18 ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು. 19 ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 20 ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು. 21 ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
1 ಯೆಹೂದದ ಅರಸನಾಗಿರುವ ಅಹಜ್ಯನಮಗನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನೇಳು ವರುಷ ಆಳಿದನು. 2 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು. 3 ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು. 4 ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು. 5 ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು. 6 ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು. 7 ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು. 8 ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? 9 ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು. 10 ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು. 11 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು. 12 ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 13 ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು. 14 ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು. 15 ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು. 16 ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು. 17 ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು. 18 ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು. 19 ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು. 20 ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು. 21 ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು. 22 ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು. 23 ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ. 24 ಹೀಗೆ ಅರಾಮ್ಯರ ಅರಸ ನಾದ ಹಜಾಯೇಲನು ಸತ್ತನು; ಅವನ ಮಗನಾದ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು. 25 ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
1 ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು. 2 ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಇಪ್ಪತ್ತೊಂಭತ್ತು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯು ಯೆರೂಸಲೇಮಿನವಳಾದ ಯೆಹೋವ ದ್ದೀನ್. 3 ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು. 4 ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು. 5 ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು. 6 ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ. 7 ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು. 8 ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು. 9 ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು. 10 ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು. 11 ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು. 12 ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. 13 ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು 14 ಕರ್ತನ ಆಲಯದಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ಬೆಳ್ಳಿಯನ್ನೂ ಎಲ್ಲಾ ಸಾಮಾನುಗಳನ್ನೂ ಹೊಣೆಗಾರ ರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ತಿರಿಗಿ ಹೋದನು. 15 ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 16 ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು. 17 ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು. 18 ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 19 ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು. 20 ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. 21 ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು. 22 ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು. 23 ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು. 24 ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ. 25 ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು. 26 ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ. 27 ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು. 28 ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ? 29 ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
1 ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಅಮಚ್ಯನ ಮಗ ನಾದ ಅಜರ್ಯನು ಆಳಲು ಆರಂಭಿಸಿದನು. 2 ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು. 3 ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು. 4 ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು. 5 ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು. 6 ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 7 ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು. 8 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು. 9 ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. 10 ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು. 11 ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. 12 ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು. 13 ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು. 14 ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು. 15 ಇಗೋ, ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. 16 ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು. 17 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು. 18 ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. 19 ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು. 20 ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು. 21 ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಇಸ್ರಾಯೇಲಿನ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 22 ಮೆನಹೇಮನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಪೆಕ ಹನು ಅವನಿಗೆ ಬದಲಾಗಿ ಅರಸನಾದನು; 23 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೇ ವರುಷದಲ್ಲಿ ಮೆನಹೇಮನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಎರಡು ವರುಷ ಆಳಿದನು. 24 ಅವನು ಕರ್ತನ ಸಮ್ಮುಖ ದಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾ ದಂಥ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ. 25 ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು. 26 ಇಗೋ, ಪೆಕಹನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. 27 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು. 28 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. 29 ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು. 30 ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು. 31 ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. 32 ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು. 33 ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು. 34 ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು. 35 ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು. 36 ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. 37 ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು. 38 ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
1 ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು. 2 ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು. 3 ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು. 4 ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು. 5 ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು. 6 ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ. 7 ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು. 8 ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು. 9 ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು. 10 ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು. 11 ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು. 12 ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು. 13 ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು. 14 ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು. 15 ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು. 16 ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು. 17 ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು. 18 ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು. 19 ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 20 ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
1 ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು. 2 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ. 3 ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು. 4 ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು. 5 ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು. 6 ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. 7 ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು. 8 ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು. 9 ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು. 10 ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ 11 ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು-- 12 ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು. 13 ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. 14 ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು 15 ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. 16 ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ 17 ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. 18 ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ. 19 ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು. 20 ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. 21 ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು. 22 ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ. 23 ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು. 24 ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು. 25 ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು. 26 ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು. 27 ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು. 28 ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು. 29 ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು. 30 ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು. 31 ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು. 32 ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು. 33 ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು. 34 ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ. 35 ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ. 36 ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ. 37 ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ. 38 ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ 39 ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು. 40 ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು. 41 ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
1 ಇಸ್ರಾಯೇಲಿನ ಅರಸನಾಗಿರುವ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಆಹಾಜನ ಮಗನಾದ ಹಿಜ್ಕೀಯನು ಆಳಲು ಆರಂಭಿ ಸಿದನು. 2 ಅವನು ಆಳಲು ಆರಂಭಿಸಿದಾಗ ಇಪ್ಪ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪ ತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬಿಯು; ಅವಳು ಜೆಕರ್ಯನ ಮಗಳಾಗಿದ್ದಳು. 3 ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು. 4 ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು. 5 ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ. 6 ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು. 7 ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು. 8 ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು. 9 ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. 10 ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು. 11 ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. 12 ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು. 13 ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು. 14 ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು. 15 ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು. 16 ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು. 17 ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು. 18 ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು. 19 ಆಗ ರಬ್ಷಾಕೆಯು ಅವರಿಗೆ--ನೀವು ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ, ಮಹಾ ಅರಸನಾದ ಅಶ್ಶೂರಿನ ಅರಸನು ಹೇಳುವದೇನಂದರೆ, ಭರವಸವಾಗಿರುವ ಈ ನಂಬಿಕೆಯೇನು? 20 ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು. 21 ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ. 22 ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ? 23 ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ. 24 ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ? 25 ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು. 26 ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು. 27 ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು. 28 ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ. 29 ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು. 30 ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ. 31 ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ. 32 ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ. 33 ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ? 34 ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು 35 ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು. 36 ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು. 37 ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು. 2 ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು. 3 ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ. 4 ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು. 5 ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು. 6 ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ. 7 ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು. 8 ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು. 9 ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ 10 ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ. 11 ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ? 12 ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು, 13 ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ. 14 ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು. 15 ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ. 16 ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು. 17 ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ. 18 ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು. 19 ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ. 20 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ-- 21 ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ. 22 ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ. 23 ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ. 24 ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ. 25 ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ. 26 ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು. 27 ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು. 28 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು. 29 ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ. 30 ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು. 31 ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು. 32 ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ. 33 ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ. 34 ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ. 35 ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು. 36 ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು. 37 ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
1 ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. 2 ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ-- 3 ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು. 4 ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ-- 5 ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ. 6 ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ. 7 ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು. 8 ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು. 9 ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು. 10 ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು. 11 ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು. 12 ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು. 13 ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ. 14 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು. 15 ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು. 16 ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು. 17 ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ; 18 ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು. 19 ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು. 20 ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; 21 ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
1 ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಅವನು ಐವತ್ತೈದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ. 2 ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು. 3 ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು. 4 ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು. 5 ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. 6 ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು. 7 ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು. 8 ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು. 9 ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು. 10 ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ-- 11 ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ-- 12 ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು. 13 ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು. 14 ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು. 15 ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ. 16 ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು. 17 ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 18 ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು. 19 ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್ ಎಂಬ ಹೆಸರುಳ್ಳವಳು. 20 ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು. 21 ಅವನು ತನ್ನ ಪಿತೃಗಳ ದೇವರಾದ ಕರ್ತನ ಮಾರ್ಗವನ್ನು ಬಿಟ್ಟು 22 ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು. 23 ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು. 24 ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು. 25 ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 26 ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
1 ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು. 2 ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು. 3 ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ-- 4 ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ. 5 ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ. 6 ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ. 7 ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ. 8 ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು. 9 ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು. 10 ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು. 11 ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು. 12 ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ-- 13 ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು. 14 ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು. 15 ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು 16 ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು. 17 ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ. 18 ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ -- 19 ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ. 20 ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
1 ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು. 2 ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು. 3 ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು. 4 ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು. 5 ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು. 6 ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು. 7 ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು. 8 ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು. 9 ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು. 10 ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು. 11 ಬೈಲ ಲ್ಲಿರುವ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು. 12 ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು. 13 ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ 14 ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು. 15 ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು. 16 ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು. 17 ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು. 18 ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು. 19 ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ, 20 ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು. 21 ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು. 22 ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ. 23 ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಯೆರೂಸ ಲೇಮಿನಲ್ಲಿ ಕರ್ತನಿಗೆ ಆಚರಿಸಲ್ಪಟ್ಟಿತು. 24 ಇದಲ್ಲದೆ ಯಾಜಕನಾದ ಹಿಲ್ಕೀಯನು ಕರ್ತನ ಮನೆಯಲ್ಲಿ ಕಂಡುಕೊಂಡ ಪುಸ್ತಕದಲ್ಲಿ ಬರೆಯಲ್ಪಟ್ಟ ನ್ಯಾಯ ಪ್ರಮಾಣದ ಮಾತುಗಳನ್ನು ಯೋಷೀಯನು ಈಡೇ ರಿಸುವ ಹಾಗೆ ಯೆಹೂದ ದೇಶದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಕಂಡು ಹಿಡಿಯಲ್ಪಟ್ಟ ಯಕ್ಷಿಣಿ ಗಾರರನ್ನೂ ಮಂತ್ರಗಾರರನ್ನೂ ವಿಗ್ರಹಗಳನ್ನೂ ಮಣ್ಣು ದೇವರುಗಳನ್ನೂ ಎಲ್ಲಾ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿ ಬಿಟ್ಟನು. 25 ತನ್ನ ಪೂರ್ಣಹೃದಯ ದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಪೂರ್ಣ ಬಲದಿಂದಲೂ ಮೋಶೆಯ ಎಲ್ಲಾ ನ್ಯಾಯಪ್ರಮಾ ಣದ ಪ್ರಕಾರ ಕರ್ತನ ಬಳಿಗೆ ತಿರುಗಿದ ಅರಸನ ಹಾಗೆ ಅವನ ಮುಂದೆ ಯಾವನೂ ಇರಲಿಲ್ಲ; ಅವನ ತರುವಾಯ ಅವನ ಹಾಗೆ ಯಾವನೂ ಎದ್ದಿರಲಿಲ್ಲ. 26 ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ. 27 ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು. 28 ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 29 ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು. 30 ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು. 31 ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್ ಎಂಬವಳಾಗಿದ್ದಳು. 32 ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. 33 ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು. 34 ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು. 35 ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು. 36 ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು. 37 ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
1 ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು. 2 ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು. 3 ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ. 4 ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು. 5 ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 6 ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು. 7 ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು. 8 ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು. 9 ಅವನು ತನ್ನ ತಂದೆಯು ಮಾಡಿದ ಪ್ರಕಾರವೆಲ್ಲಾ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು. 10 ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. 11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು. 12 ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು. 13 ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು. 14 ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. 15 ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. 16 ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು. 17 ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು. 18 ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು. 19 ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು. 20 ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
1 ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು. 2 ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. 3 ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು. 4 ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು. 5 ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು. 6 ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. 7 ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು. 8 ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು, 9 ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು. 10 ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು. 11 ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು. 12 ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು. 13 ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು. 14 ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು. 15 ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು. 16 ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು. 17 ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು. 18 ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು. 19 ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು. 20 ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು. 21 ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು. 22 ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು. 23 ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. 24 ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು. 25 ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು. 26 ಆಗ ಹಿರಿ ಕಿರಿಯರಾದ ಎಲ್ಲಾ ಜನರೂ ದಂಡುಗಳ ಅಧಿ ಪತಿಗಳೂ ಎದ್ದು ಐಗುಪ್ತಕ್ಕೆ ಹೋದರು; ಯಾಕಂದರೆ ಕಸ್ದೀಯರಿಗೆ ಭಯಪಟ್ಟರು. 27 ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ 28 ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು. 29 ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು. 30 ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
1 ಆದಾಮನು, ಶೇತನು, ಎನೋಷನು, 2 ಕೇನಾನನು, ಮಹಲಲೇಲನು, ಯೆರೆ ದನು, 3 ಹನೋಕನು, ಮೆತೂಷೆಲಹನು, ಲೆಮೆಕನು, 4 ನೋಹನು, ಶೇಮನು, ಹಾಮನು, ಮತ್ತು ಯೆಫೆತನು, 5 ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು. 6 ಗೋಮೆರನ ಮಕ್ಕಳ --ಅಷ್ಕೆನಜನು, ರೀಫತನು, ತೊಗರ್ಮನು 7 ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು. 8 ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು. 9 ಕೂಷನ ಮಕ್ಕಳು --ಸೇಬನು, ಹವೀಲನು, ಸಬ್ತನು, ರಮ್ಮನು, ಸಬ್ತೆಕನು. ರಮ್ಮನ ಮಕ್ಕಳು--ಶೆಬನು, ದೆದಾನನು. 10 ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು. 11 ಮಿಚ್ರಯಿಮ್ಯನ್ನೂ ಲೂದ್ಯರನ್ನೂ ಅನಾಮ್ಯರನ್ನೂ ಲೆಹಾಬ್ಯರನ್ನೂ ನಫ್ತುಹ್ಯರನ್ನೂ ಪತ್ರುಸ್ಯರನ್ನೂ ಕಫ್ತೋರ್ಯರನ್ನೂ ಕಸ್ಲುಹ್ಯರನ್ನೂ ಪಡೆದನು; 12 ಕಸ್ಲುಹ್ಯರೊಳಗಿಂದ ಫಿಲಿಷ್ಟಿಯರು ಉಂಟಾದರು. 13 ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ 14 ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ 15 ಅರ್ಕಿ ಯರನ್ನೂ ಸೀನೀಯರನ್ನೂ ಅರ್ವಾದಿಯರನ್ನೂ 16 ಚೆಮಾರಿಯರನ್ನೂ ಹಮಾತಿಯರನ್ನೂ ಪಡೆದನು. 17 ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು. 18 ಅರ್ಪಕ್ಷದನು ಶೆಲಹನನ್ನು ಪಡೆದನು; ಶೆಲಹನು ಏಬೆರನನ್ನು ಪಡೆ ದನು. 19 ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು. 20 ಯೊಕ್ತಾನನು ಅಲ್ಮೋದಾದನನ್ನೂ, 21 ಶೇಲೆಫನನ್ನೂ, ಹಚರ್ಮಾ ವೇತನನ್ನೂ, ಯೆರಹನನ್ನೂ, ಹದೋರಾಮನನ್ನೂ, 22 ಊಜಾಲನನ್ನೂ, ದಿಕ್ಲನನ್ನೂ, ಏಬಾಲನನ್ನೂ, ಅಬೀ ಮಾಯೇಲನನ್ನೂ, 23 ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು. 24 ಶೇಮನು ಅರ್ಪಕ್ಷದನು, ಶೆಲಹನು, 25 ಏಬೆ ರನು, ಪೆಲೆಗನು, ರೆಯೂ, 26 ಸೆರೂಗನು, ನಾಹೋ ರನು, ತೆರಹನು; 27 ಅಬ್ರಹಾಮನೆಂಬ ಅಬ್ರಾಮನು. 28 ಅಬ್ರಹಾಮನ ಮಕ್ಕಳು -- ಇಸಾಕನು, ಇಷ್ಮಾಯೇಲನು. 29 ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು, 30 ದೂಮನು, ಮಸ್ಸನು, ಹದದನು, ತೇಮನು, 31 ಯೆಟೂರನು, ನಾಫೀಷನು, ಕೇದೆಮನು. ಇವರೇ ಇಷ್ಮಾಯೇಲನ ಕುಮಾರರು. 32 ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು. 33 ಮಿದ್ಯಾನನ ಮಕ್ಕಳು -- ಏಫನು, ಏಫರನು, ಹನೋಕನು, ಅಬೀದನು ಎಲ್ದಾಯನು. ಇವರೆಲ್ಲರೂ ಕೆಟೂರಳ ಮಕ್ಕಳು. 34 ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು. 35 ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್ನು, ಕೋರ ಹನು. 36 ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು. 37 ರೆಯೂವೇಲನ ಮಕ್ಕಳು--ನಹ ತನು, ಜೆರಹನು, ಶಮ್ಮನು, ಮಿಜ್ಜನು. 38 ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು. 39 ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು. 40 ಶೋಬಾಲನ ಮಕ್ಕಳು--ಅಲ್ಯಾ ನನು, ಮಾನಹತನು, ಏಬಾಲನು, ಶೆಫೀಯು, ಓನಮನು. ಚಿಬ್ಬೋನನ ಮಕ್ಕಳು--ಅಯ್ಯಾಹನು, ಅನಾಹನು. 41 ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು. 42 ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು. 43 ಇಸ್ರಾಯೇಲಿನ ಮಕ್ಕಳ ಮೇಲೆ ಯಾವ ಅರ ಸನೂ ಆಳದ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸುಗಳು ಯಾರಂದರೆ--ಬೆಯೋರನ ಮಗನಾದ ಬೆಳನು. 44 ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು. 45 ಯೋಬಾಬನು ಸತ್ತ ತರುವಾಯ ಅವನಿಗೆ ಬದಲಾಗಿ ತೇಮಾನೀಯರ ದೇಶದವನಾದ ಹೂಷಾಮನು ಆಳಿದನು. 46 ಹೂಷಾಮನು ಸತ್ತಾಗ ಅವನಿಗೆ ಬದಲಾಗಿ ಮೋವಾಬಿನ ಹೊಲದಲ್ಲಿ ಮಿದ್ಯಾನ್ಯರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತು. 47 ಹದದನು ಸತ್ತ ತರುವಾಯ ಅವನಿಗೆ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು. 48 ಸಮ್ಲಾಹನು ಸತ್ತ ತರುವಾಯ ಅವನಿಗೆ ಬದಲಾಗಿ ನದಿಯ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಆಳಿದನು. 49 ಸೌಲನು ಸತ್ತ ತರುವಾಯ ಅವನಿಗೆ ಬದಲಾಗಿ ಅಕ್ಬೋರನ ಮಗನಾದ ಬಾಳ್ಹ ನಾನನು ಆಳಿದನು. 50 ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು. 51 ಹದದನು ಸತ್ತನು. ಎದೋಮ್ಯನ ಪ್ರಭುಗಳು ಯಾರಂದರೆ 52 ತಿಮ್ನ ಪ್ರಭು, ಅಲ್ಯ ಪ್ರಭು, ಯೆತೇತ್ ಪ್ರಭು, ಒಹೊಲೀಬಾಮ ಪ್ರಭು, ಏಲ ಪ್ರಭು, ಪೀನೋನ್ ಪ್ರಭು, 53 ಕೆನಜ್ ಪ್ರಭು, ತೇಮಾನ್ ಪ್ರಭು, ಮಿಬ್ಚಾರ ಪ್ರಭು, ಮಗ್ದಿಯೇಲ್ ಪ್ರಭು, ಗೀರಾಮ್ ಪ್ರಭು. 54 ಇವರೇ ಎದೋಮ್ಯರ ಪ್ರಭುಗಳು.
1 ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು, 2 ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು. 3 ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು. 4 ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ. 5 ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು; 6 ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ. 7 ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು. 8 ಏತಾನನ ಮಗನುಅಜರ್ಯನು. 9 ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್. 10 ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು, 11 ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು. 12 ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು. 13 ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ 14 ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂ 15 ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು. 16 ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು. 17 ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು. 18 ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು. 19 ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು. 20 ಅವಳು ಅವನಿಗೆ ಹೂರನನ್ನು ಹೆತ್ತಳು. ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲ ನನ್ನು ಪಡೆದನು. 21 ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು. 22 ಸೆಗೂಬನು ಯಾಯಾರನನ್ನು ಪಡೆದನು. 23 ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು. 24 ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು. 25 ಹೆಚ್ರೋನನ ಚೊಚ್ಚಲ ಮಗನಾದ ಯೆರಹ್ಮೇ ಲನ ಮಕ್ಕಳು--ಚೊಚ್ಚಲ ಮಗನಾದ ರಾಮನು, ಬೂನನು, ಓರೆನನು, ಓಚೆಮನು, ಅಹೀಯನು. 26 ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು; ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ. ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು 27 ಮಾಚನು, ಯಾವಿಾನನು, ಏಕೆರೆನು. 28 ಓನಾಮನ ಮಕ್ಕಳು--ಶಮ್ಮೈಯನು, ಯಾದಾವನು. ಶಮ್ಮೈಯನ ಮಕ್ಕಳು--ನಾದಾಬನು, ಅಬೀಷೂರನು. 29 ಅಬೀ ಷೂರನ ಹೆಂಡತಿಯ ಹೆಸರು ಅಬೀಹೈಲು; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು. 30 ನಾದಾಬನ ಮಕ್ಕಳು--ಸೆಲೆದನು, ಅಪ್ಪಯಿಮನು. ಸೆಲೆದನು ಮಕ್ಕಳಿಲ್ಲದೆ ಸತ್ತನು. 31 ಅಪ್ಪಯಿಮನ ಮಗನು ಇಷ್ಷೀಯು; ಇಷ್ಷೀಯ ಮಗನು ಶೇಷಾನನು; 32 ಶೇಷಾನನ ಮಗನು ಅಹ್ಲೈಯನು. ಶಮ್ಮೈಯನ ಸಹೋದರನಾದ ಯಾದನ ಮಕ್ಕಳು--ಯೆತೆರ್, ಯೋನಾತಾನನು. 33 ಯೆತೆರನು ಮಕ್ಕಳಿಲ್ಲದೆ ಸತ್ತನು. ಯೋನಾತಾನನ ಮಕ್ಕಳು--ಪೆಲೆತನು, ಜಾಜನು. ಇವರೇ ಯೆರಹ್ಮೇಲನ ಮಕ್ಕಳಾಗಿದ್ದರು. 34 ಆದರೆ ಶೇಷಾನನಿಗೆ ಕುಮಾರರಿಲ್ಲದೆ ಕುಮಾರ್ತೆಗಳಿದ್ದರು. ಮತ್ತು ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಐಗುಪ್ತನಾದ ಸೇವಕನಿದ್ದನು. 35 ಶೇಷಾನನು ತನ್ನ ಕುಮಾರ್ತೆಯನ್ನು ತನ್ನ ಸೇವಕನಾದ ಯರ್ಹನಿಗೆ ಹೆಂಡತಿಯಾಗಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು. 36 ಅತ್ತೈಯು ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು. 37 ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾಲನು ಓಬೇದನನ್ನು ಪಡೆದನು. 38 ಓಬೇದನು ಯೇಹೂವನ್ನು ಪಡೆದನು; ಯೇಹೂವು ಅಜರ್ಯನನ್ನು ಪಡೆದನು. 39 ಅಜ ರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸ ನನ್ನು ಪಡೆದನು. 40 ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು. 41 ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನು ಎಲೀಷಾಮನನ್ನು ಪಡೆದನು. 42 ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು. 43 ಹೆಬ್ರೋನನ ಮಕ್ಕಳು--ಕೋರಹನು, ತಪ್ಪೊಹನು, ರೆಕಮನು, ಶೆಮವನು. 44 ಶೆಮವನು ಯೊರ್ಕೆಯಾಮ್ಯನ ತಂದೆಯಾದ ರಹಮ್ಯನನ್ನು ಪಡೆ ದನು; ರೆಕಮನು ಶಮ್ಮೈಯನನ್ನು ಪಡೆದನು. 45 ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು. 46 ಕಾಲೇಬನ ಉಪ ಪತ್ನಿಯಾದ ಏಫಳು ಹಾರಾನನನ್ನೂ, ಮೋಚನನ್ನೂ, ಗಾಜೇಜನನ್ನೂ ಹೆತ್ತಳು. ಹಾರಾನನು ಗಾಜೇಜನನ್ನು ಪಡೆದನು. 47 ಯಾದೈಯಳ ಮಕ್ಕಳು--ರೆಗೆಮನು, ಯೋತಾಮನು, ಗೇಷಾನನು, ಪೆಲಟನು, ಏಫನು, ಶಾಫನು. 48 ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು. 49 ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು. 50 ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು. 51 ಬೇತ್ಲೆಹೇಮ್ಯರಿಗೆ ತಂದೆಯಾದ ಸಲ್ಮನು, ಬೇತ್ಗಾ ದೇರಿಗೆ ತಂದೆಯಾದ ಹಾರೇಫನು. 52 ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು. 53 ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು; 54 ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ. 55 ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
1 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು, 2 ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು, 3 ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು. 4 ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು. 5 ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು, 6 ಸೊಲೊ ಮೋನನು ಈ ನಾಲ್ಕು ಮಂದಿಯು. 7 ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು, 8 ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು. 9 ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು. 10 ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು. 11 ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು. 12 ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು. 13 ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು. 14 ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು. 15 ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು. 16 ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು. 17 ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು, 18 ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು. 19 ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು. 20 ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು. 21 ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು. 22 ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು. 23 ನೆಯರ್ಯನ ಮಕ್ಕಳು--ಎಲ್ಯೋಗೇನೆ ನು, ಹಿಜ್ಕೀ ಯನು, ಅಜ್ರೀಕಾಮನು, ಈ ಮೂರು ಮಂದಿಯು. 24 ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.
1 ಯೆಹೂದನ ಕುಮಾರರು--ಪೇರಚನು, ಹೆಚ್ರೋನನು, ಕರ್ವಿಾಯು, ಹೂರನು, ಶೋಬಾಲನು. 2 ಶೋಬಾಲನ ಮಗನಾದ ರೆವಾ ಯನು ಯಹತನನ್ನು ಪಡೆದನು; ಯಹತನು ಅಹೂಮೈನನ್ನೂ ಲಹದನನ್ನೂ ಪಡೆದನು. ಇವರೇ ಚೊರ್ರದ ಸಂತತಿಗಳು. 3 ಎಟಾಮನ ತಂದೆಯಿಂದ ಹುಟ್ಟಿದವರು ಯಾರಂದರೆ--ಇಜ್ರೇಯೇಲನು, ಇಷ್ಮನು, ಇಬ್ಬಾಷನು ಅವರ ಸಹೋದರಿಯಾದ ಹಚೆಲೆಲ್ಪೋನಿ ಎಂಬ ವಳು. 4 ಪೆನೂವೇಲನು ಗೆದೋರಿನವರಿಗೆ ತಂದೆ ಯಾಗಿದ್ದನು. ಏಜೆರನು ಹೂಷಾಹ್ಯರನಿಗೆ ತಂದೆ ಯಾಗಿದ್ದನು. ಇವರು ಬೇತ್ಲೆಹೇಮಿಗೆ ತಂದೆಯಾ ಗಿದ್ದ ಎಫ್ರಾತಾನ ಚೊಚ್ಚಲ ಮಗನಾದ ಹೂರನ ಕುಮಾರರು. 5 ತೆಕೋವದ ತಂದೆಯಾದ ಅಷ್ಹೂರನಿಗೆ ಹೆಲಾ ಹಳು, ನಾರಳು ಎಂಬ ಇಬ್ಬರು ಪತ್ನಿಯರಿದ್ದರು. 6 ನಾರಳು ಅವನಿಗೆ ಅಹುಜ್ಜಾಮನನ್ನೂ ಹೇಫೆರನನ್ನೂ ತೇಮಾನ್ಯನನ್ನೂ ಅಹಷ್ಟಾರ್ಯನನ್ನೂ ಹೆತ್ತಳು. 7 ಇವರೇ ನಾರಳ ಮಕ್ಕಳು. ಹೆಲಾಹಳ ಮಕ್ಕಳು ಚೆರೆತೆನು, ಇಚ್ಹಾರನು, ಎತ್ನಾನನು. 8 ಕೋಚನು ಆನೂ ಬನನ್ನೂ ಚೊಬೇಬನನ್ನೂ ಹಾರುಮನ ಮಗನಾದ ಅಹರ್ಹೇಲನ ಸಂತತಿಗಳನ್ನೂ ಪಡೆದನು. 9 ಯಾಬೇ ಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ -- ನಾನು ಇವನನ್ನು ವ್ಯಥೆಯಿಂದ ಹೆತ್ತೆನೆಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು. 10 ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು. 11 ಇದಲ್ಲದೆ ಶೂಹನ ಸಹೋದರನಾದ ಕೆಲೂಬನು 12 ಎಷ್ಟೋನನು ಮೆಹೀರನನ್ನು ಪಡೆದನು. ಎಷ್ಟೋನನ ತಂದೆಯಾದ ಬೆತ್ರಾಫನನ್ನೂ ಪಾಸೇಹನನ್ನೂ ಇರ್ನಾ ಹಷಿನವರ ತಂದೆಯಾದ ತೆಹಿನ್ನನನ್ನೂ ಪಡೆದನು. 13 ಇವರೇ ರೇಕಾಹ್ಯರು. ಕೆನಾಜನ ಕುಮಾರರು--ಒತ್ನೀಯೇಲನು ಸೆರಾಯನು. ಒತ್ನೀಯೇಲನ ಕುಮಾ ರರು--ಹತತನು. 14 ಮೆಯೋನೋತೈಯು ಒಫ್ರಾಹ ನನ್ನು ಪಡೆದನು; ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ತಂದೆಯಾದ ಯೋವಾಬನನ್ನು ಪಡೆದನು. 15 ಯೆಫುನ್ನೆಯ ಮಗನಾದ ಕಾಲೇಬನ ಕುಮಾರರು--ಈರುವು, ಏಲನು, ನಾಮನು, ಏಲನ ವರು, ಕೆನಜನು. 16 ಯೆಹಲ್ಲೆಲೇಲನ ಕುಮಾರರು -- ಜೀಫನು, ಜೀಫಾನು, ತೀರ್ಯನು, ಅಸರೇಲನು. ಎಜ್ರನ ಕುಮಾ ರರು -- 17 ಯೆತೆರನು, ಮೆರೆದನು, ಏಫೆರನು, ಯಾಲೋನನು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮಳನ್ನೂ ಶೆಮ್ಮೈಯನ್ನೂ ಎಷ್ಟೆಮೋವನ ತಂದೆಯಾದ ಇಷ್ಟಹನನ್ನೂ ಹೆತ್ತಳು. 18 ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು. 19 ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು. 20 ಶೀಮೋನನ ಕುಮಾರರು--ಅಮ್ನೋನನು, ರಿನ್ನನು, ಬೆನ್ಹನಾನನು, ತೀಲೋನನು. ಇಷ್ಷೀಯನ ಕುಮಾರರು--ಜೋಹೇತನು ಬೆನ್ಜೋಹೇತನು. 21 ಯೆಹೂದನ ಮಗನಾದ ಶೇಲನ ಕುಮಾರರು --ಲೇಕಾಹ್ಯದ ತಂದೆಯಾದ ಏರನು, ಮರೇಷದ ತಂದೆಯಾದ ಲದ್ದನು, ಬೇತಪ್ಬೇವನ ಮನೆಯವರಾಗಿ ರುವ ನಾರುಗಳಿಂದ ನಯವಾದ ಕೆಲಸಮಾಡಿದವರ ಮನೆಯ ಸಂತತಿಗಳು. 22 ಯೊಕೀಮನು ಮೋವಾಬಿ ನಲ್ಲಿ ಅಧಿಕಾರವುಳ್ಳವರಾದ ಕೊಜೇಬವು ಯೋವಾ ಷವು ಸಾರಾಫವು ಎಂಬ ಸ್ಥಳಗಳ ಮನುಷ್ಯರೂ ಯೆಷೂಬಿಹೇಮಿನಲ್ಲಿ ವಾಸವಾಗಿದ್ದವರೂ. ಇವು ಪೂರ್ವದ ಕಾರ್ಯಗಳು. 23 ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು. 24 ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು. 25 ಇವನ ಮಗನಾದ ಶಲ್ಲುಮನು, ಇವನ ಮಗನಾದ ಮಿಬ್ಸಾಮನು, ಇವನ ಮಗನಾದ ಮಿಷ್ಮ ವನು. 26 ಮಿಷ್ಮಾಗನ ಕುಮಾರರು--ಇವನ ಮಗನಾದ ಹಮ್ಮೂವೇಲನು, ಇವನ ಮಗನಾದ ಜಕ್ಕೂರನು, ಇವನ ಮಗನಾದ ಶಿವ್ಮೆಾ. 27 ಶಿಮ್ಮಿಗೆ ಹದಿನಾರು ಮಂದಿ ಕುಮಾರರೂ ಆರು ಮಂದಿ ಕುಮಾರ್ತೆಯರೂ ಇದ್ದರು. ಆದರೆ ಇವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ; ಅವರ ಸಮಸ್ತ ಸಂತತಿಯು ಯೆಹೂ ದದ ಮಕ್ಕಳ ಹಾಗೆ ಹೆಚ್ಚಾಗಲಿಲ್ಲ. 28 ಇವರು ಬೇರ್ಷೆ ಬದಲ್ಲಿಯೂ ಮೋಲಾದದಲ್ಲಿಯೂ 29 ಹಚರ್ ಷೂವಾಲ್ತ್ನಲ್ಲಿಯೂ ಬಿಲ್ಹದಲ್ಲಿಯೂ ಏಚೆಮನ ಲ್ಲಿಯೂ 30 ತೋಲಾದಿನಲ್ಲಿಯೂ ಬೆತುವೇಲಿನ ಲ್ಲಿಯೂ ಹೊರ್ಮದಲ್ಲಿಯೂ 31 ಚಿಕ್ಲಗಿನಲ್ಲಿಯೂ ಬೇತ್ಮರ್ಕಾಬೋತ್ದಲ್ಲಿಯೂ ಹಚರ್ ಸೂಸೀಮ ದಲ್ಲಿಯೂ ಬೇತ್ಬಿರೀಯಲ್ಲಿಯೂ ಶಾರಯಿಮನ ಲ್ಲಿಯೂ ವಾಸವಾಗಿದ್ದರು. ದಾವೀದನ ಆಳಿಕೆಯ ವರೆಗೂ ಇವು ಅವರ ಪಟ್ಟಣಗಳಾಗಿದ್ದವು. 32 ಅವರ ಊರುಗಳು ಯಾವವಂದರೆ--ಏಟಾಮು, ಅಯಿನು, ರಿಮ್ಮೋನು, ತೋಕೆನು, ಆಷಾನು ಐದು ಪಟ್ಟಣಗಳು. 33 ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳದ ವರೆಗೂ ಅವರಿಗೆ ಇದ್ದವು. ಇವೇ ಅವರು ವಾಸವಾಗಿರುವ ಸ್ಥಳಗಳೂ ಅವರ ವಂಶಾವಳಿಗಳೂ. 34 ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು, ಯೋವೇಲನು. 35 ಅಸಿ ಯೇಲನ ಮಗನಾದ ಸೆರಾಯನ ಮಗನಾದ ಯೊಷಿಬ್ಯನ ಮಗನಾದ ಯೇಹೂ. 36 ಎಲ್ಯೋವೇನೈ, ಯಾಕೋಬನು, ಯೆಷೋಹಾಯನು, ಅಸಾಯನು, ಅದೀಯೇಲನು, ಯೆಸೀಮಿಯೇಲನು, ಬೆನಾಯನು. 37 ಶೆಮಾಯನ ಮಗನಾದ ಶಿಮ್ರಿಯ ಮಗನಾದ ಯೆದಾಯನ ಮಗನಾದ ಅಲ್ಲೋನನ ಮಗನಾದ ಶಿಪ್ಫಿಯ ಮಗನಾದ ಜೀಜನು. 38 ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ತಮ್ಮ ಸಂತತಿಗಳಲ್ಲಿ ಪ್ರಭುಗಳಾಗಿದ್ದರು; ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು. 39 ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು. 40 ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು. 41 ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ. 42 ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದ 43 ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
1 ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ. 2 ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು). 3 ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು. 4 ಯೋವೇ ಲನ ಕುಮಾರರು; ಇವನ ಮಗನಾದ ಶೆಮಾಯನು ಇವನ ಮಗನಾದ ಗೋಗನು 5 ಇವನ ಮಗನಾದ ಶಿವ್ಮೆಾ ಇವನ ಮಗನಾದ ವಿಾಕನು ಇವನ ಮಗ ನಾದ ರೆವಾಯನು ಇವನ ಮಗನಾದ ಬಾಳನು. 6 ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು. 7 ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ -- 8 ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು. 9 ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು. 10 ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು. 11 ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು. 12 ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು. 13 ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು. 14 ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು. 15 ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು. 16 ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು. 17 ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. 18 ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. 19 ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು. 20 ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು. 21 ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ. 22 ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು. 23 ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್ ಮೊದಲುಗೊಂಡು ಬಾಳ್ಹೆರ್ಮೋನು ಸೆನೀರು ಹೆರ್ಮೋನ್ ಬೆಟ್ಟದ ವರೆಗೂ ಹಬ್ಬಿಕೊಂಡರು. 24 ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು. 25 ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು. 26 ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
1 ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು. 2 ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು. 3 ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು. 4 ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು. 5 ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು; 6 ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು; 7 ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು. 8 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು; 9 ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು; 10 ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು; 11 ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು; 12 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು; 13 ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು; 14 ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು 15 ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು. 16 ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು. 17 ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು. 18 ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು. 19 ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ-- 20 ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು; 21 ಇವನ ಮಗನಾದ ಯೆವತ್ರೈಯನು. 22 ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು; 23 ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು; 24 ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು. 25 ಎಲ್ಕಾನನ ಕುಮಾರರು--ಅಮಾಸೈಯು ಅಹೀಮೋತನು ಎಲ್ಕಾನನು. 26 ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು; 27 ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು. 28 ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು. 29 ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ; 30 ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು. 31 ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ. 32 ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು. 33 ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು, 34 ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು, 35 ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು, 36 ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು, 37 ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು 38 ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು. 39 ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು, 40 ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು, 41 ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು, 42 ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು, 43 ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು. 44 ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು, 45 ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು, 46 ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು, 47 ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು. 48 ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು. 49 ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು. 50 ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು, 51 ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು, 52 ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು, 53 ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು. 54 ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು 55 ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು. 56 ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು. 57 ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ, 58 ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ, 59 ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ, 60 ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು. 61 ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು. 62 ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು. 63 ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು. 64 ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು. 65 ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು. 66 ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು. 67 ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ, 68 ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ, 69 ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು. 70 ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು. 71 ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ, 72 ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ, 73 ಆನೇಮೂ ಅದರ ಉಪನಗರಗಳೂ, 74 ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ, 75 ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ, 76 ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು. 77 ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ, 78 ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ, 79 ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್ಅದರ ಉಪನಗರಗಳೂ; 80 ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ, 81 ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
1 ಇಸ್ಸಾಕಾರನ ಕುಮಾರರು--ತೋಲನು ಪೂವನುಯಾ ಶೂಬನು ಶಿಮ್ರೋನನುಈ ನಾಲ್ಕು ಮಂದಿ. 2 ತೋಲನ ಕುಮಾರರು ಉಜ್ಜೀಯು ರೆಫಾಯನು ಯೆರೀಯೇಲನು ಯಹ್ಮೈಯು ಇಬ್ಸಾಮನು ಸಮುವೇಲನು. ಇವರು ತಮ್ಮ ತಂದೆ ಯಾದ ತೋಲನ ಮನೆಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧ ಪರಾಕ್ರಮ ಶಾಲಿಗಳಾಗಿದ್ದರು; ದಾವೀದನ ದಿವಸಗಳಲ್ಲಿ ಅವರ ಲೆಕ್ಕ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಆಗಿತ್ತು. 3 ಉಜ್ಜೀಯನ ಕುಮಾರನು ಇಜ್ಯಹ್ಯಾಹನು. ಇಜ್ಯಹ್ಯಾಹನ ಕುಮಾರರು -- ವಿಾಕಾಯೇಲನು, ಓಬದ್ಯನು, ಯೋವೇಲನು, ಇಷ್ಷೀಯನು--ಈ ಐದು ಮಂದಿಯು; ಇವರೆಲ್ಲರು ಮುಖ್ಯಸ್ಥರಾಗಿದ್ದರು. 4 ಇವರ ಸಂಗಡ ಅವರ ವಂಶಗಳ ಪ್ರಕಾರವೂ ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ ಮೂವತ್ತಾರು ಸಾವಿರ ಮಂದಿ ಸೈನಿಕರ ಗುಂಪುಗಳಿದ್ದವು; ಯಾಕಂದರೆ ಹೆಂಡತಿಯರು ಮಕ್ಕಳು ಅವರಿಗೆ ಬಹಳ ಮಂದಿ ಇದ್ದರು. 5 ಇಸ್ಸಾಕಾರನ ಕುಟುಂಬಗಳಾಗಿರುವ ಸಹೋ ದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಲ್ಪಟ್ಟ ಯುದ್ಧ ಪರಾಕ್ರಮಶಾಲಿಗಳೆಲ್ಲರೂ ಎಂಭತ್ತೇಳು ಸಾವಿರ ಮಂದಿಯಾಗಿದ್ದರು. 6 ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ. 7 ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು. 8 ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್. ಇವರೆಲ್ಲರು ಬೆಕರನ ಕುಮಾರರು. 9 ಇವರ ಲೆಕ್ಕವು ತಮ್ಮ ಪಿತೃಗಳ ಮನೆಯ ಯಜಮಾನರ ವಂಶ ಗಳ ವಂಶಾವಳಿಯ ಪ್ರಕಾರವಾಗಿ ಯುದ್ಧ ಪರಾಕ್ರಮಶಾಲಿಗಳಾದವರು ಇಪ್ಪತ್ತುಸಾವಿರದ ಇನ್ನೂರು ಮಂದಿ. 10 ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು. 11 ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು. 12 ಅಹೇರನ ಕುಮಾರರಾದ ಈರನೂ ಹುಶೀ ಮನೂ ಎಂಬವರ ಮಕ್ಕಳು ಶುಪ್ಪೀಮನೂ ಹುಪ್ಪೀ ಮನೂ ಇದ್ದರು. 13 ನಫ್ತಾಲಿಯ ಕುಮಾರರು--ಯಹಚಿಯೇಲನು, ಗೂನೀಯು, ಯೇಚೆರನು, ಶಲ್ಲೂಮನು. ಇವರು ಬಿಲ್ಹಳ ಕುಮಾರರು. 14 ಮನಸ್ಸೆಯ ಕುಮಾರರು--ಅವನ ಹೆಂಡತಿಯು ಹೆತ್ತ ಅಷ್ರೀಯೇಲನು; ಅರಾಮ್ಯಳಾದ ಉಪಪತ್ನಿಯು ಗಿಲ್ಯಾದನಿಗೆ ತಂದೆಯಾದ ಮಾಕೀರನನ್ನು ಹೆತ್ತಳು. 15 ಆದರೆ ಈ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಈ ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು. 16 ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು ಪೆರೆಷೆಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್; ಇವನಿಗೆ ಊಲಾಮನು, ರೆಕೆಮನು ಎಂಬ ಹೆಸರುಳ್ಳ ಕುಮಾರ ರಿದ್ದರು. 17 ಊಲಾಮನ ಮಗ ಬೆದಾನನು. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಕುಮಾರರು. 18 ಅವನ ಸಹೋದರಿಯಾದ ಹಮ್ಮೋಲೆಕೆತಳು ಈಷ್ಹೋದನನ್ನೂ ಅಬೀಯೆಜೆರ ನನ್ನೂ ಮಹ್ಲನನ್ನೂ ಹೆತ್ತಳು. 19 ಶೆವಿಾದನ ಕುಮಾ ರರು--ಅಹ್ಯಾನನು, ಶೆಕೆಮನು, ಲಿಕ್ಹೀಯು, ಅನೀಯಾಮನು. 20 ಎಫ್ರಾಯಾಮನ ಕುಮಾರರು--ಶೂತೆಲಹನು; ಇವನ ಮಗನು ಬೆರದನು. ಇವನ ಮಗನು ತಹತನು, ಇವನ ಮಗನು ಎಲ್ಲಾದನು; ಇವನ ಮಗನು ತಹತನು. 21 ಇವನ ಮಗನು ಜಾಬಾದನು; ಇವನ ಮಕ್ಕಳು --ಶೂತೆಲಹನು ಎಜೆರನೂ ಎಲ್ಲಾದನೂ. ಆ ದೇಶ ದಲ್ಲಿ ಹುಟ್ಟಿದ ಗತ್ನವರು ಇವರ ದನಗಳನ್ನು ಸುಲು ಕೊಳ್ಳಲು ಇಳಿದು ಬಂದಾಗ ಇವರನ್ನು ಕೊಂದು ಹಾಕಿದರು. 22 ಅವರ ತಂದೆಯಾದ ಎಫ್ರಾಯಾಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ ಅವನ ಸಹೋದರರು ಅವನನ್ನು ಆದರಿಸಲು ಬಂದರು. 23 ಅವನು ತನ್ನ ಹೆಂಡತಿಯನ್ನು ಕೂಡಿದಾಗ ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯನೆಂಬ ಹೆಸರಿಟ್ಟನು. 24 ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್ಹೋರೋ ನನ್ನೂ, ಉಜ್ಜೇನ್ಶೇರವನ್ನೂ ಕಟ್ಟಿಸಿದಳು. 25 ಬೆರೀಯ ಮಗನು ರೆಫಹ, ಇವನ ಮಗನು ರೆಷೆಫನು; ಇವನಮಗನು ತೆಲಹನು. 26 ಇವನ ಮಗನು ತಹನ್, ಇವನ ಮಗನು ಲದ್ದಾನ್, ಇವನ ಮಗನು ಅವ್ಮೆಾಹೂದನು, ಇವನ ಮಗನು ಎಲೀಷಾಮನು, 27 ಇವನ ಮಗನು ನೋನನು, ಇವನ ಮಗನು ಯೆಹೋಷುವನು. 28 ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ 29 ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು. 30 ಆಶೇರನ ಕುಮಾರರು--ಇಮ್ನನು, ಇಷ್ವನು, ಇಷ್ವೀ, ಬೆರೀಯನು ಅವರ ಸಹೋದರಿಯಾದ ಸೆರಹಳು. 31 ಬೆರೀಯನ ಕುಮಾರರು--ಹೆಬೆರನು ಮಲ್ಕೀಯೇಲನು; 32 ಇವನು ಬಿರ್ಜೈಯಿತನ ತಂದೆಯು. ಹೆಬೆರನು ಯಫ್ಲೇಟನನ್ನೂ ಶೋಮೇರ ನನ್ನೂ ಹೋತಾಮನನ್ನೂ ಅವರ ಸಹೋದರಿಯಾದ ಶೂವಳನ್ನೂ ಪಡೆದನು. 33 ಯಫ್ಲೇಟನ ಕುಮಾರರು--ಪಾಸಕನು, ಬಿಮ್ಹಾಲನು, ಅಶ್ವಾತನು. ಇವರೇ ಯಫ್ಲೇಟನ ಮಕ್ಕಳು. 34 ಶಮೆರನ ಕುಮಾರರು--ಅಹೀಯು, ರೊಹ್ಗನು, ಹುಬ್ಬನು, ಅರಾಮನು. 35 ಅವನ ಸಹೋದರನಾದ ಹೆಲೆಮನ ಕುಮಾರರು--ಚೋಫಹನು, ಇಮ್ನನು, ಶೇಲೆಷನು, ಆಮಾಲನು. 36 ಚೋಫಹನ ಕುಮಾರರು-- ಸೂಹನು, ಹರ್ನೇಫೆರನು, ಶೂಗಾಲನು, ಬೇರೀಯು, ಇಮ್ರನು, 37 ಬೆಚೆರನು, ಹೋದನು, ಶಮ್ಮನು, ಶಿಲ್ಷನು, ಇತ್ರಾನನು, ಬೇರನು. 38 ಯೆತೆರನ ಕುಮಾ ರರು--ಯೆಫುನ್ನೆಯು, ಪಿಸ್ಪನು, ಅರಾನು, 39 ಉಲ್ಲನ ಕುಮಾರರು--ಆರಹನು, ಹನ್ನೀಯೇಲನು ರಿಚ್ಯನು. 40 ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.
1 ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ 2 ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು. 3 ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು 4 ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು. 5 ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು. 6 ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು. 7 ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು. 8 ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹೂಷೀಮಳೂ ಬಾರಳೂ ಅವನಿಗೆ ಪತ್ನಿಯರಾಗಿದ್ದರು. 9 ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, 10 ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ, ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಕುಮಾರರಾದ ಇವರು ಪಿತೃಗಳಲ್ಲಿ ಯಜಮಾನರಾಗಿದ್ದರು. 11 ಹುಷೀಮಳಿಂದ ಅವನು ಅಬೀಟೂಬನನ್ನೂ, ಎಲ್ಪಾಲನನ್ನೂ ಪಡೆದನು. 12 ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು. 13 ಇದಲ್ಲದೆ ಅವನು ಗತ್ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು. 14 ಬೆರೀಯನ ಕುಮಾರರು -- ಅಹ್ಯೋನು, ಶಾಷಕನು, ಯೆರೇಮೋತನು, 15 ಜೆಬದ್ಯನು, ಅರಾ ದನು, ಎದೆರನು, 16 ವಿಾಕಾಯೇಲನು, ಇಷ್ಪನು, ಯೋಹನು, 17 ಜೆಬದ್ಯನು, ಮೆಷುಲ್ಲಾಮ್, ಹಿಜ್ಕೀ, ಹೆಬೆರ್, 18 ಇಷ್ಮೆರೈ, ಇಜ್ಲೀಯ, ಯೋಬಾಬ್ಇವರು ಎಲ್ಪಾಲನ ಕುಮಾರರು-- 19 ಯಾಕೀಮನು, ಜಿಕ್ರೀಯು, ಜಬ್ದಿಯು, 20 ಎಲೀಗೇನೈ, ಚಿಲ್ಲೆತೈ, ಎಲೀಯೇಲ್, 21 ಅದಾಯ, ಬೆರಾಯ, ಶಿಮ್ರಾತ್ ಇವರು ಶಿವ್ಮೆಾಯ ಕುಮಾರರು. 22 ಇಷ್ಪಾನ್, ಏಬೆರ್, ಎಲೀಯೇಲ್, 23 ಅಬ್ದೋನನು, ಜಿಕ್ರೀಯು, ಹಾನಾ ನನು, 24 ಹನನ್ಯನು, ಏಲಾಮನು, ಅನೆತೋತಿಯನು, 25 ಇಫ್ದೆಯನು, ಪೆನೂವೇಲನು ಇವರು ಶಾಷಕನ ಕುಮಾರರು. 26 ಶಂಷೆರೈ, ಶೆಹರ್ಯ, ಅತಲ್ಯ, 27 ಯಾರೆಷ್ಯನು, ಏಲೀಯನು, ಜಿಕ್ರಿಯು--ಇವರು ಯೆರೋಹಾಮನ ಕುಮಾರರು. 28 ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು. 29 ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು. 30 ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು, 31 ಗೆದೋರನು, ಅಹ್ಯೋನು, ಜೆಕೆರನು. 32 ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು. 33 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು. 34 ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು. 35 ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು. 36 ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು. 37 ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು. 38 ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು. 39 ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು. 40 ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.
1 ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. 2 ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ. 3 ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ ಬೆನ್ಯಾವಿಾನಿನ ಮಕ್ಕಳೂ ಎಫ್ರಾಯಾಮ್ ಮನಸ್ಸೆ ಎಂಬವರ ಮಕ್ಕಳೂ ಯಾರಂದರೆ-- 4 ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು. 5 ಶೇಲಾಹನ ಚೊಚ್ಚಲ ಮಗನಾದ ಅಸಾಯನು; 6 ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ. 7 ಬೆನ್ಯಾವಿಾನನ ಕುಮಾರರು--ಹಸ್ಸೆನುವಾಹನ ಮಗನಾದ ಹೋದವ್ಯನ ಮಗನಾದ ಮೆಷುಲ್ಲಾಮನ ಮಗನಾದ ಸಲ್ಲುವೂ; 8 ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ 9 ಅವರ ಸಹೋದರರೂ --ತಮ್ಮ ವಂಶಗಳ ಪ್ರಕಾರ ಒಂಭೈನೂರ ಐವತ್ತಾರು ಮಂದಿಯು. ಇವರೆಲ್ಲರು ತಮ್ಮ ಪಿತೃಗಳ ಮನೆಯ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು. 10 ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ; 11 ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ; 12 ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು. 13 ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು. 14 ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ; 15 ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ; 16 ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು. 17 ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು. 18 ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು. 19 ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು. 20 ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು. 21 ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು. 22 ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು. 23 ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು. 24 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು. 25 ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು 26 ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು. 27 ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು. 28 ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು. 29 ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು. 30 ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು. 31 ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು. 32 ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು. 33 ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು. 34 ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು. 35 ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು. 36 ಅವನ ಚೊಚ್ಟಲ ಮಗನು ಅಬ್ದೋನನು; ಚೂರನೂ ಕೀಷನೂ ಬಾಳನೂ ನೇರನೂ ನಾದಾಬನೂ. 37 ಗೆದೋರನೂ ಅಹ್ಯೋನೂ ಜೆಕರ್ಯನೂ ಮಿಕ್ಲೋತನೂ. 38 ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಗೆದುರಾಗಿ ತಮ್ಮ ಸಹೋದರರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದರು. 39 ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು. 40 ಯೋನಾತಾನನ ಮಗನು ಮೆರೀಬ್ಬಾಳನು. ಮೆರೀಬ್ಬಾಳನು ವಿಾಕನನ್ನು ಪಡೆದನು. 41 ವಿಾಕನ ಕುಮಾರರು--ಪಿತೋನನು, ಮೇಲೆಕನು, ತಹ್ರೇಯನು, ಆಹಾಜನು. 42 ಆಹಾಜನು ಯಗ್ರಾಹ ನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ ಅಜ್ಮಾವೆತನನ್ನೂ ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು. 43 ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯನು ಇವನ ಮಗನು ಎಲ್ಲಾಸನು ಇವನ ಮಗನು ಆಚೇಲನು. 44 ಈ ಆಚೇಲನಿಗೆ ಆರು ಮಂದಿ ಕುಮಾರರು; ಇವರ ಹೆಸರುಗಳು--ಅಜ್ರೀಕಾಮನು ಬೋಕೆರೂ ಇಷ್ಮಾ ಯೇಲನು ಶೆಯರ್ಯನು ಓಬದ್ಯನು ಹಾನಾನನು. ಇವರೇ ಆಚೇಲನ ಕುಮಾರರು.
1 ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು. 2 ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು. 3 ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು. 4 ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು. 5 ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು. 6 ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು. 7 ಅವರು ಓಡಿಹೋದರೆಂದೂ ಸೌಲನೂ ಅವನ ಕುಮಾರರೂ ಸತ್ತರೆಂದೂ ತಗ್ಗಿನಲ್ಲಿದ್ದ ಇಸ್ರಾಯೇಲ್ ಜನರೆಲ್ಲರೂ ಕಂಡಾಗ ಅವರು ತಮ್ಮ ಪಟ್ಟಣ ಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು. 8 ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು. 9 ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು. 10 ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು. 11 ಯಾಬೇಷ್ ಗಿಲ್ಯಾದಿ ನವರೆಲ್ಲರೂ ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಕೇಳಿದಾಗ 12 ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು. 13 ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ, 14 ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
1 ಇಸ್ರಾಯೇಲ್ಯರೆಲ್ಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಕೂಡಿಬಂದು ಹೇಳಿ ದ್ದೇನಂದರೆ--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ. 2 ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು. 3 ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು. 4 ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು. 5 ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು. 6 ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು. 7 ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು. 8 ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು. 9 ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು. 10 ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು. 11 ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು. 12 ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು. 13 ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು. 14 ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು. 15 ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು. 16 ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು. 17 ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು. 18 ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು. 19 ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು. 20 ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು. 21 ಈ ಮೂವರಲ್ಲಿ ಅವರಿಗೆ ಅವನು ಪ್ರಧಾನನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ಇಬ್ಬರಿಗಿಂತ ಅವನು ಘನವುಳ್ಳವನಾಗಿದ್ದನು; 22 ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು. 23 ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು. 24 ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು. 25 ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು. 26 ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು, 27 ಹರೋರಿಯನಾದ ಶಮ್ಮೋತನು, 28 ಪೆಲೋನ್ಯನಾದ ಹೆಲೆಚನು, ತೆಕೋ ವಿಯನಾದ ಇಕ್ಕೇಷನ ಮಗನಾದ ಈರನು, ಅನ ತೋತಿನವನಾದ ಅಬೀಯೆಜೆರನು, 29 ಹುಷಾತ್ಯನಾದ ಸಿಬ್ಕೈನು, ಅಹೋಹಿತನಾದ ಈಲೈನು, ನೆಟೋಫದ ವನಾದ ಮಹರೈನು, 30 ನೆಟೋಫದವನಾದ ಬಾಣನ ಮಗನಾದ ಹೆಲೇದನು, 31 ಬೆನ್ಯಾವಿಾನನ ಮಕ್ಕಳಿಗೆ ಉಂಟಾದ ಗಿಬ್ಯದ ರೀಬೈನ ಮಗನಾದ ಈತೈಯು, ಪಿರತೋನ್ಯನಾದ ಬೆನಾಯನು, 32 ಗಾಷಿನ ಹಳ್ಳಗಳ ಬಳಿಯಲ್ಲಿರುವ ಹೂರೈನು, ಅರಾಬಾತಗ್ಗಿನವನಾದ ಅಬೀಯೇಲನು, 33 ಬಹರೂಮ್ಯನಾದ ಅಜ್ಮಾವೆತನು, ಶಾಲ್ಬೋನ್ಯನಾದ ಎಲೆಯಖ್ಬ, 34 ಗಿಜೋನ್ಯನಾದ ಹಾಷೇಮನ ಕುಮಾರರು, ಹರಾರಿಯನಾದ ಶಾಗೇಯ ಮಗನಾದ ಯೋನಾತಾನನು, 35 ಹರಾರಿಯನಾದ ಶಾಕಾರನ ಮಗನಾದ ಅಹೀಯಾಮನು, 36 ಊರನ ಮಗನಾದ ಎಲೀಫಲನು, ಮೆಕೆರಾತ್ಯನಾದ ಹೇಫೆ ರನು, ಫೆಲೋನ್ಯನಾದ ಅಹೀಯನು, 37 ಕರ್ಮೆಲ್ಯ ನಾದ ಹೆಚ್ರೋನು, ಎಜ್ಬೈಯನ ಮಗನಾದ ನಾರೈಯು, 38 ನಾತಾನನ ಸಹೋದರನಾದ ಯೋವೇಲನು ಹಗ್ರಿ ಯನ ಮಗನಾದ ಮಿಬ್ಹಾರನು, 39 ಅಮ್ಮೋನ್ಯನಾದ ಚೆಲೆಕನು, ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹೊತ್ತುಕೊಂಡು ಹೋಗುವವನಾಗಿ ರುವ ಬೆರೋತ್ಯನಾದ ನಹರೈಯು, 40 ಇತ್ರೀಯನಾದ ಈರನು ಗಾರೇಬನು, 41 ಹಿತ್ತೀಯನಾದ ಊರೀಯನು, ಅಹ್ಲೈಯ ಮಗನಾದ ಜಾಬಾದನು, 42 ರೂಬೇನ್ಯ ನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು. 43 ಮಾಕನ ಮಗ ನಾದ ಹಾನಾನನು, ಮೆತೆನನಾದ ಯೋಷಾಫಾಟನು, 44 ಅಷ್ಟೆರಾತ್ಯನಾದ ಉಜ್ಜೀಯನು ಅರೋಯೇರಿವ ನಾದ ಹೋತಾಮನ ಮಕ್ಕಳಾಗಿರುವ ಶಾಮಾ, ಯೆಗೀಯೇಲನೂ; 45 ಶಿಮ್ರಿಯ ಮಗನಾದ ಎದೀಗ ಯೇಲನು, ಅವನ ಸಹೋದರನಾದಂಥ ತೀಚೀಯ ನಾದಂಥ ಯೋಹನು. 46 ಮಹವೀಯನಾದ ಎಲೀ ಯೇಲನು, ಎಲ್ನಾಮನ ಮಕ್ಕಳಾದ ಯೇರಿಬೈಯನೂ ಯೋಷವ್ಯನೂ; 47 ಮೋವಾಬ್ಯನಾದ ಇತ್ಮನು, ಎಲೀ ಯೇಲನು, ಓಬೆದನು, ಮೆಚಬಾಯದವ ನಾದ ಯಾಸಿಯೇಲನು.
1 ಕೀಷನ ಮಗನಾದ ಸೌಲನ ನಿಮಿತ್ತ ತಾನು ಇನ್ನೂ ಬಚ್ಚಿಟ್ಟುಕೊಂಡಿರುವಾಗ ಚಿಕ್ಲಗಿ ನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ; ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ ಯುದ್ಧಕ್ಕೆ ಸಹಾಯಕರೂ 2 ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು. 3 ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು; 4 ಇವನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿ ಯಾಗಿದ್ದು ಆ ಮೂವತ್ತು ಮಂದಿಗಿಂತ ಮೇಲಾದವನಾ ಗಿದ್ದನು ಮತ್ತು ಯೆರೆವಿಾಯನು, ಯಹಜೀಯೇಲನು ಯೋಹನಾನು, ಗೆದೇರಾದವನಾದ ಯೋಜಾಬಾ ದನು, 5 ಎಲ್ಲೂಜೈಯಿಯು, ಯೆರೀಮೋತನು, ಬೆಯ ಲ್ಯನು, ಶೆಮರ್ಯನು, ಹರೀಫ್ಯನಾದ ಶೆಫಟ್ಯನು, ಕೋರಹಿಯರಾದ ಎಲ್ಕಾನನು, 6 ಇಷ್ಷೀಯನು, ಅಜ ರೇಲನು, ಯೋವೆಜೆರನು, ಯಾಷೊಬ್ಬಾಮನು, 7 ಗೆದೋರಿನಲ್ಲಿರುವ ಯೆರೋಹಾಮನ ಕುಮಾರರಾದ ಯೋವೇಲನೂ ಜೆಬದ್ಯನೂ. 8 ಇದಲ್ಲದೆ ಅರಣ್ಯದಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು; ಅವರ ಮುಖಗಳು ಸಿಂಹದ ಮುಖಗಳ ಹಾಗಿದ್ದವು ಮತ್ತು ಪರ್ವತಗಳ ಮೇಲೆ ಇರುವ ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು. 9 ಮೊದಲನೆಯವನು ಏಜೆರನು, ಎರಡನೆಯವನು ಓಬದ್ಯನು, ಮೂರನೆಯವನು ಎಲೀಯಾಬನು, 10 ನಾಲ್ಕನೆಯವನು ಮಷ್ಮನ್ನನು, ಐದನೆಯವನು ಯೆರೆವಿಾಯನು, 11 ಆರನೆಯವನು ಅತ್ತೈಯು, ಏಳನೆ ಯವನು ಎಲೀಯೇಲನು, 12 ಎಂಟನೆಯವನು ಯೋಹನಾನನು, ಒಂಭತ್ತನೆಯವನು ಎಲ್ಜಾಬಾದನು, 13 ಹತ್ತನೆಯವನು ಯೆರೆವಿಾಯನು, ಹನ್ನೊಂದನೆ ಯವನು ಮಕ್ಬನ್ನೈಯು. 14 ಗಾದನ ಕುಮಾರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು; ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು. 15 ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು. 16 ಬೆನ್ಯಾವಿಾನನ ಮತ್ತು ಯೆಹೂದನ ಮಕ್ಕಳಲ್ಲಿ ಕೆಲವರು ಬಲವಾದ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು. 17 ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು. 18 ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು. 19 ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು. 20 ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು. 21 ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು. 22 ಅದೇ ಕಾಲದಲ್ಲಿ ಪ್ರತಿದಿನ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವ ವರೆಗೆ ದಾವೀದನಿಗೆ ಸಹಾಯ ಮಾಡುವದಕ್ಕೆ ಅವನ ಕಡೆಗೆ ಬರುತ್ತಿದ್ದರು. 23 ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ -- 24 ಖೇಡ್ಯವನ್ನೂ ಭಲ್ಲೆಯನ್ನೂ ಹಿಡುಕೊಂಡು ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು ಆರು ಸಾವಿರದ ಎಂಟುನೂರು ಮಂದಿ. 25 ಯುದ್ಧಕ್ಕೆ ಪರಾ ಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ ಏಳು ಸಾವಿರದ ನೂರು ಮಂದಿ. 26 ಲೇವಿಯ ಮಕ್ಕ ಳಲ್ಲಿ ನಾಲ್ಕು ಸಾವಿರದ ಆರುನೂರು ಮಂದಿ. 27 ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ; 28 ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ. 29 ಸೌಲನ ಸಹೋದರರಾಗಿರುವ ಬೆನ್ಯಾವಿಾನನ ಮಕ್ಕಳಲ್ಲಿ ಮೂರು ಸಾವಿರಮಂದಿ; ಇಂದಿನ ವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು. 30 ಎಫ್ರಾಯಾಮನ ಮಕ್ಕಳಲ್ಲಿ ಇಪ್ಪತ್ತು ಸಾವಿರದ ಎಂಟುನೂರು ಮಂದಿ; ಬಲವುಳ್ಳ ಪರಾಕ್ರಮಶಾಲಿ ಗಳೂ ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡ ವರಾಗಿದ್ದರು. 31 ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು. 32 ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು. 33 ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ. 34 ನಫ್ತಾಲಿ ಯವರಲ್ಲಿ ಸಾವಿರ ಮಂದಿ ಪ್ರಧಾನರು; ಅವರ ಸಂಗಡ ಖೇಡ್ಯವನ್ನೂ ಈಟಿಯನ್ನೂ ಧರಿಸಿಕೊಂಡ ಮೂವ ತ್ತೇಳು ಸಾವಿರ ಮಂದಿ. 35 ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ. 36 ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ. 37 ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು. 38 ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು. 39 ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು. 40 ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
1 ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು. 2 ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ 3 ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ 4 ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು. 5 ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು. 6 ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು. 7 ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು. 8 ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು. 9 ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು. 10 ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು. 11 ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು. 12 ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು. 13 ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು. 14 ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
1 ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು. 2 ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು. 3 ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು. 4 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು, 5 ಸೊಲೊಮೋನನು, ಇಬ್ಹಾರನು, ಎಲೀಷೂವನು, ಎಲ್ಪೆಲೆಟನು, 6 ನೋಗಹನು, ನೆಫೆ ಗನು, 7 ಯಾಫೀಯನು, ಎಲೀಷಾಮನು, ಬೆಲ್ಯಾದನು, ಎಲೀಫೆಲೆಟನು. 8 ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು. 9 ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು. 10 ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು. 11 ಹಾಗೆಯೇ ಅವರು ಬಾಳ್ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ಪೆರಾಚೀಮು ಎಂದು ಹೆಸರಿಟ್ಟನು. 12 ಫಿಲಿಷ್ಟಿಯರು ತಮ್ಮ ದೇವರು ಗಳನ್ನು ಅಲ್ಲಿ ಬಿಟ್ಟುಬಿಟ್ಟದ್ದರಿಂದ ದಾವೀದನು ಅಪ್ಪಣೆ ಕೊಟ್ಟಾಗ ಬೆಂಕಿಯಿಂದ ಅವು ಸುಡಲ್ಪಟ್ಟವು. 13 ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು. 14 ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು. 15 ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು. 16 ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು. 17 ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
1 ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು. 2 ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು. 3 ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು. 4 ಇದಲ್ಲದೆ ದಾವೀದನು ಆರೋನನ ಮಕ್ಕಳನ್ನೂ ಲೇವಿಯರನ್ನೂ ಬರಮಾಡಿದನು. 5 ಕೆಹಾತನ ಕುಮಾರರಲ್ಲಿ ಮುಖ್ಯಸ್ಥನಾದ ಉರೀ ಯೇಲನೂ ಅವನ ಸಹೋದರರಾದ ನೂರ ಇಪ್ಪತ್ತು ಮಂದಿಯೂ; 6 ಮೆರಾರೀಯ ಕುಮಾರರಲ್ಲಿ ಮುಖ್ಯಸ್ಥ ನಾದ ಅಸಾಯನೂ ಅವನ ಸಹೋದರರಾದ ಇನ್ನೂರ ಇಪ್ಪತ್ತು ಮಂದಿಯೂ; 7 ಗೆರ್ಷೋಮನ ಕುಮಾರರಲ್ಲಿ ಮುಖ್ಯಸ್ಥನಾದ ಯೋವೇಲನೂ ಅವನ ಸಹೋದರ ರಾದ ನೂರ ಮೂವತ್ತು ಮಂದಿಯೂ; 8 ಎಲೀ ಚಾಫಾನನ ಕುಮಾರರಲ್ಲಿ ಮುಖ್ಯಸ್ಥನಾದ ಶೆಮಾ ಯನೂ ಅವನ ಸಹೋದರರಾದ ಇನ್ನೂರು ಮಂದಿಯೂ; 9 ಹೆಬ್ರೋನನ ಕುಮಾರರಲ್ಲಿ ಮುಖ್ಯಸ್ಥ ನಾದ ಎಲೀಯೇಲನೂ ಅವನ ಸಹೋದರರಾದ ಎಂಭತ್ತು ಮಂದಿಯೂ; 10 ಉಜ್ಜೀಯೇಲನ ಕುಮಾರ ರಲ್ಲಿ ಮುಖ್ಯಸ್ಥನಾದ ಅವ್ಮೆಾನಾದಾಬನೂ ಅವನ ಸಹೋದರರಾದ ನೂರ ಹನ್ನೆರಡು ಮಂದಿಯೂ. 11 ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ-- 12 ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ. 13 ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು. 14 ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು. 15 ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು. 16 ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು. 17 ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು. 18 ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು. 19 ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ 20 ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ; 21 ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು. 22 ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು. 23 ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು. 24 ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು. 25 ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು. 26 ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು. 27 ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು. 28 ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು. 29 ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
1 ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. 2 ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ 3 ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು. 4 ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು. 5 ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು. 6 ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು. 7 ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;-- 8 ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ. 9 ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ. 10 ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ. 11 ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ. 12 ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. 13 ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ, 14 ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ. 15 ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು 16 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ. 17 ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿ 18 ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು. 19 ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ. 20 ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು. 21 ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು. 22 ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ. 23 ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. 24 ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ. 25 ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ; 26 ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು. 27 ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ. 28 ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ, 29 ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ. 30 ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. 31 ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ. 32 ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ. 33 ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ. 34 ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ. 35 ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು. 36 ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. 37 ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ; 38 ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ. 39 ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ 40 ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ 41 ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ. 42 ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು. 43 ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
1 ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು. 2 ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು. 3 ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ-- 4 ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ. 5 ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು. 6 ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ? 7 ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳ ಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನೀನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಕುರಿಗಳ ಹಿಂದೆ ನಡೆದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು. 8 ನೀನು ಎಲ್ಲಿಗೆ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಸಂಹರಿಸಿ ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ಹೆಸರನ್ನು ನಿನಗೆ ಉಂಟುಮಾಡಿದೆನು. 9 ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ನೇಮಿಸಿ ಅವರು ಇನ್ನು ಮೇಲೆ ಚದರದೆ ಸ್ವಸ್ಥಳದಲ್ಲಿ ವಾಸಮಾಡುವ ಹಾಗೆ ಅವರನ್ನು ನೆಡುವೆನು. ಪೂರ್ವದ ಹಾಗೆಯೂ ನನ್ನ ಜನರಾದ ಇಸ್ರಾಯೇ ಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ದಿವಸ ದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು. 10 ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. ಕರ್ತನಾದ ನಾನು ನಿನಗೆ ಒಂದು ಮನೆಯನ್ನು ಕಟ್ಟುವೆನೆಂದು ನಿನಗೆ ತಿಳಿಸುತ್ತೇನೆ. 11 ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು. 12 ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು. 13 ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು; 14 ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು. 15 ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು. 16 ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು? 17 ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ. 18 ನಿನ್ನ ಸೇವಕನ ಘನತೆಯ ನಿಮಿತ್ತ ದಾವೀದನು ಇನ್ನು ಹೇಳುವದೇನು? 19 ನೀನು ನಿನ್ನ ಸೇವಕನನ್ನು ಬಲ್ಲೆ; ಕರ್ತನೇ, ನಿನ್ನ ಸೇವಕನ ನಿಮಿತ್ತವಾಗಿಯೂ ನಿನ್ನ ಸ್ವಂತ ಹೃದಯದ ಪ್ರಕಾರವಾಗಿಯೂ ಈ ಮಹತ್ತಾದ ಕಾರ್ಯಗಳನ್ನು ತಿಳಿಯಮಾಡುವದಕ್ಕೆ ಈ ದೊಡ್ಡಸ್ತಿಕೆಯನ್ನೆಲ್ಲಾ ತೋರಿ ಸಿದ್ದೀ. 20 ಓ ಕರ್ತನೇ, ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ. 21 ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಮಿ ಯಲ್ಲಿರುವ ಜನಗಳೊಳಗೆ ಜನಾಂಗವು ಯಾವದು? ಐಗುಪ್ತದಿಂದ ಬಿಡಿಸಿದ ನಿನ್ನ ಜನರ ಮುಂದೆ ಜನಾಂಗ ಗಳನ್ನು ಓಡಿಸಿ ನಿನಗೆ ದೊಡ್ಡದಾದಂಥ ಭಯಂಕರ ವಾದಂಥ ನಾಮವನ್ನು ಉಂಟು ಮಾಡಲು ದೇವರಾದ ನೀನು ನಿನ್ನ ಸ್ವಂತ ಜನರಾದ ಅವರನ್ನು ಬಿಡಿಸಲು ಹೋದಿ. 22 ನೀನು ನಿನ್ನ ಜನರಾದ ಇಸ್ರಾಯೇಲ್ಯರನ್ನು ಯುಗಯುಗಾಂತರಕ್ಕೂ ನಿನ್ನ ಸ್ವಂತ ಜನರಾಗಿ ಮಾಡಿದಿ; ನೀನು ಕರ್ತನೇ, ಅವರ ದೇವರಾದಿ. 23 ಈಗ ಕರ್ತನೇ, ನೀನು ನಿನ್ನ ಸೇವಕನನ್ನು ಕುರಿತು ಅವನ ಮನೆಯನ್ನು ಕುರಿತು ಹೇಳಿದ ಮಾತು ಯುಗಯುಗಾಂತರಕ್ಕೂ ನಿಶ್ಚಯವಾಗಲಿ; ನೀನು ಹೇಳಿದ ಹಾಗೆ ಮಾಡು. 24 ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ; 25 ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ. ಯಾಕಂದರೆ ಓ ನನ್ನ ದೇವರೇ, ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ. ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು. 26 ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ. 27 ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
1 ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು. 2 ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು. 3 ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು. 4 ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು. 5 ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು. 6 ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು. 7 ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು. 8 ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು. 9 ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ 10 ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು. 11 ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು. 12 ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು. 13 ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು. 14 ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು. 15 ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು. 16 ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. 17 ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
1 ಇದರ ತರುವಾಯ ಏನಾಯಿತಂದರೆ, ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು; ಅವನ ಮಗನು ಅವನಿಗೆ ಬದಲಾಗಿ ಆಳಿ ದನು. 2 ಆಗ ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ಕೃಪೆ ತೋರಿಸಿದ್ದರಿಂದ ಅವನ ಮಗನಾದ ಹಾನೂನನಿಗೆ ನಾನು ಕೃಪೆ ತೋರಿಸುವೆನು ಅಂದನು. ದಾವೀದನು ಅವನ ತಂದೆಯನ್ನು ಕುರಿತು ಅವನಿಗೆ ಆದರಣೆ ಕೊಡಲು ಸೇವಕರನ್ನು ಕಳುಹಿ ಸಿದನು. ಹೀಗೆಯೇ ದಾವೀದನ ಸೇವಕರು ಅವನಿಗೆ ಆದರಣೆ ಕೊಡಲು ಅಮ್ಮೋನನ ಮಕ್ಕಳ ದೇಶಕ್ಕೆ ಹಾನೂನನ ಬಳಿಗೆ ಬಂದರು. 3 ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು. 4 ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು. 5 ಆಗ ಕೆಲವರು ಹೋಗಿ ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದರು. ಆ ಮನುಷ್ಯರು ಬಹಳವಾಗಿ ನಾಚಿಕೆಪಟ್ಟದ್ದರಿಂದ ಅವರನ್ನು ಎದುರುಗೊಳ್ಳಲು ಸೇವ ಕರನ್ನು ಕಳುಹಿಸಿ ಅರಸನು ಅವರಿಗೆ--ನಿಮ್ಮ ಗಡ್ಡಗಳು ಬೆಳೆಯುವ ವರೆಗೂ ಯೆರಿಕೋವಿನಲ್ಲಿ ಇರ್ರಿ; ಆಮೇಲೆ ತಿರಿಗಿ ಬನ್ನಿರಿ ಎಂದು ಹೇಳಿದನು. 6 ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು. 7 ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ ಮಾಕದ ಅರಸನನ್ನೂ ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋ ನಿಯರು ತಮ್ಮ ಪಟ್ಟಣಗಳಿಂದ ಕೂಡಿಕೊಂಡು ಯುದ್ಥಕ್ಕೆ ಬಂದರು. 8 ದಾವೀದನು ಇದನ್ನು ಕೇಳಿದಾಗ ಅವನು ಯೋವಾ ಬನನ್ನೂ ಸಮಸ್ತ ಪರಾಕ್ರಮಶಾಲಿಗಳ ಸೈನ್ಯವನ್ನೂ ಕಳುಹಿಸಿದನು. 9 ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು. 10 ಯುದ್ಧವು ತನಗೆ ವಿರೋಧವಾಗಿ ಹಿಂದೆಯೂ ಮುಂದೆಯೂ ಇರುವದನ್ನು ಯೋವಾ ಬನು ಕಂಡಾಗ ಅವನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಸಮಸ್ತರೊಳಗೆ ಜನರನ್ನು ಆದುಕೊಂಡು ಅವರನ್ನು ಅರಾಮ್ಯರಿಗೆದುರಾಗಿ ವ್ಯೂಹ ಕಟ್ಟಿದನು. 11 ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ-- 12 ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು, 13 ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು. 14 ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡಲು ಮುಂಗೊಂಡರು. 15 ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು. 16 ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು. 17 ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ಯೊರ್ದನನ್ನು ದಾಟಿ ಅವರಿಗೆದುರಾಗಿ ವ್ಯೂಹಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹಕಟ್ಟಿದ ಮೇಲೆ ಅವರು ಅವನ ಸಂಗಡ ಯುದ್ಧಮಾಡಿದರು. 18 ಆದರೆ ಅರಾಮ್ಯರು ಇಸ್ರಾಯೇಲಿನ ಎದುರಿನಿಂದ ಓಡಿಹೋದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥವುಳ್ಳವರನ್ನೂ ನಾಲ್ವತ್ತು ಸಾವಿರ ಕಾಲಾಳು ಗಳನ್ನೂ ಸೈನ್ಯಾಧಿಪತಿಯಾದ ಶೋಫಕನನ್ನೂ ಕೊಂದು ಹಾಕಿದನು. 19 ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.
1 ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು. 2 ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು. 3 ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು. 4 ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು. 5 ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು. 6 ಗತ್ನಲ್ಲಿ ಯುದ್ಧ ಉಂಟಾಯಿತು; ಅಲ್ಲಿ ಆರಾರು ಪ್ರಕಾರ ಇಪ್ಪತ್ತು ನಾಲ್ಕು ಬೆರಳುಗಳುಳ್ಳ ಉನ್ನತನಾದ ಒಬ್ಬ ಮನುಷ್ಯನಿದ್ದನು. 7 ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು. 8 ಇವರು ಗತ್ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.
1 ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು. 2 ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು. 3 ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು. 4 ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು. 5 ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು. 6 ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು. 7 ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು. 8 ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು. 9 ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ -- 10 ನೀನು ದಾವೀದನ ಬಳಿಗೆ ಹೋಗಿ ಅವನ ಸಂಗಡ ಮಾತ ನಾಡಿ--ಕರ್ತನು ಹೀಗೆ ಹೇಳುತ್ತಾನೆ, ಮೂರು ಕಾರ್ಯ ಗಳನ್ನು ನಿನ್ನ ಮುಂದೆ ಇಡುತ್ತೇನೆ; ನಾನು ನಿನಗೆ ಮಾಡುವ ಹಾಗೆ ಅವುಗಳಲ್ಲಿ ಒಂದನ್ನು ಆರಿಸಿಕೋ ಎಂದು ಹೇಳು. 11 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ, ಮೂರು ವರುಷಗಳ ಬರವನ್ನಾದರೂ ಇಲ್ಲವೆ ನಿನ್ನ ಶತ್ರುಗಳ ಕತ್ತಿಯು ಹತ್ತಿಕೊಳ್ಳಲಾಗಿ ಮೂರು ತಿಂಗಳು ನಿನ್ನ ವೈರಿಗಳ ಮುಂದೆ ನಾಶಹೊಂದುವದನ್ನಾದರೂ ಇಲ್ಲವೆ ಕರ್ತನ ದೂತನು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿಯೂ ದೇಶದಲ್ಲಿಯೂ ಕರ್ತನ ಕತ್ತಿ ಎಂಬುವ ವ್ಯಾಧಿಯಿಂದ ನಾಶವಾಗುವದನ್ನಾದರೂ ನೀನು ಆರಿಸಿಕೋ. 12 ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು. 13 ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು. 14 ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು. 15 ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು. 16 ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು. 17 ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು. 18 ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು. 19 ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು. 20 ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು. 21 ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು. 22 ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು. 23 ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು. 24 ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು. 25 ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್ ತೂಕ ಬಂಗಾರವನ್ನು ಕೊಟ್ಟನು. 26 ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು. 27 ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು. 28 ಕರ್ತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಪ್ರತ್ಯುತ್ತರ ಕೊಟ್ಟನೆಂದು ದಾವೀದನು ಕಂಡಾಗ ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು. 29 ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು. 30 ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
1 ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು. 2 ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು. 3 ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು; 4 ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು. 5 ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು. 6 ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು. 7 ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು. 8 ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ. 9 ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು. 10 ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು. 11 ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ. 12 ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ 13 ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ. 14 ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು. 15 ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ. 16 ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ. 17 ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ-- 18 ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು. 19 ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
1 ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು. 2 ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು. 3 ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು. 4 ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು. 5 ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು. 6 ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು. 7 ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು -- 8 ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು. 9 ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು. 10 ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು. 11 ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು. 12 ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು. 13 ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು. 14 ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು. 15 ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು. 16 ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು. 17 ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು. 18 ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು. 19 ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು. 20 ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು. 21 ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು; 22 ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು. 23 ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ. 24 ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು. 25 ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ 26 ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು. 27 ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು. 28 ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ 29 ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು. 30 ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ 31 ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂ 32 ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
1 ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ; 2 ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು. 3 ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು. 4 ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು. 5 ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು. 6 ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು. 7 ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ 8 ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ, 9 ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ, 10 ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ, 11 ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ, 12 ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ, 13 ಹದಿನಾಲ್ಕನೆಯದು ಎಫೆಬಾಬನಿಗೆ, 14 ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ, 15 ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ, 16 ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ, 17 ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ, 18 ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ. 19 ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು. 20 ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು. 21 ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು. 22 ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು. 23 ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು. 24 ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು. 25 ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು. 26 ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು. 27 ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು. 28 ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ. 29 ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು. 30 ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು. 31 ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
1 ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. 2 ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. 3 ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. 4 ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. 5 ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. 6 ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. 7 ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. 8 ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. 9 ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; 10 ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, 11 ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 12 ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. 13 ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 14 ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 15 ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 16 ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 17 ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; 18 ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 19 ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 20 ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 21 ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 22 ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; 23 ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 24 ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 25 ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; 26 ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ; 27 ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 28 ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; 29 ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 30 ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 31 ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
1 ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು. 2 ಮೆಷೆಲೆಮ್ಯನ ಕುಮಾ ರರು--ಚೊಚ್ಚಲ ಮಗನು ಜೆಕರ್ಯನು, ಎರಡನೆ ಯವನು ಎದೀಯಯೇಲನು, ಮೂರನೆ ಯವನು ಜೆಬದ್ಯನು, ನಾಲ್ಕನೆಯವನು ಯತ್ನಿಯೇಲನು, 3 ಐದನೆ ಯವನು ಎಲಾಮನು, ಆರನೆಯವನು ಯೆಹೋ ಹಾನಾನನು, ಏಳನೆಯವನು ಎಲ್ಯೆಹೋಯೇನೈ. 4 ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು 5 ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು. 6 ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು. 7 ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು. 8 ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು. 9 ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು. 10 ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು; 11 ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು. 12 ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು. 13 ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು. 14 ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು. 15 ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್ ಎಂಬ ಮನೆ ಬಂತು. 16 ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು. 17 ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ 18 ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು. 19 ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ. 20 ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು. 21 ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು. 22 ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು. 23 ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. 24 ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು. 25 ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು. 26 ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು. 27 ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು. 28 ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು. 29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು. 30 ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು. 31 ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು. 32 ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
1 ಆದರೆ ಇಸ್ರಾಯೇಲ್ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು. 2 ಮೊದಲನೇ ತಿಂಗಳಿಗೋಸ್ಕರ ಮೊದಲನೇ ವರ್ಗದ ಮೇಲೆ ಜಬ್ದೀಯೇಲನ ಮಗನಾದ ಯಾಷೊ ಬ್ಬಾಮನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. 3 ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು. 4 ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. 5 ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. 6 ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು. 7 ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು. 8 ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. 9 ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. 10 ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. 11 ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು; 12 ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು. 13 ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು. 14 ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. 15 ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. 16 ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು. 17 ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು; 18 ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು; 19 ಜೆಬು ಲೋನನಿಗೆ, ಒಬದ್ಯನ ಮಗನಾದ ಇಷ್ಮಾಯನು; ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗನಾದ ಯೆರೀಮೋತನು; 20 ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು. 21 ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು. 22 ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು. 23 ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು. 24 ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ. 25 ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು. 26 ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು. 27 ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು. 28 ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು. 29 ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು. 30 ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು. 31 ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು. 32 ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು. 33 ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು. 34 ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
1 ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು. 2 ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು. 3 ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು. 4 ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು; 5 ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು. 6 ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು. 7 ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು. 8 ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ. 9 ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು. 10 ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು. 11 ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು, 12 ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು. 13 ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು. 14 ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು. 15 ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು. 16 ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು. 17 ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು. 18 ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು. 19 ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು. 20 ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ. 21 ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
1 ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ. 2 ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ. 3 ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ. 4 ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ 5 ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. 6 ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು 7 ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. 8 ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು. 9 ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು. 10 ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ. 11 ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. 12 ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. 13 ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. 14 ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು. 15 ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ. 16 ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು. 17 ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು. 18 ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು. 19 ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು. 20 ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು. 21 ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು. 22 ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು. 23 ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು. 24 ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು. 25 ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು. 26 ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು. 27 ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು. 28 ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು. 29 ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂ 30 ಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
1 ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು. 2 ಸೊಲೊಮೋ ನನು ಸಮಸ್ತ ಇಸ್ರಾಯೇಲ್ಯರೊಡನೆಯೂ ಸಹಸ್ರ ಶತಾಧಿಪತಿಗಳೊಡನೆಯೂ ನ್ಯಾಯಾಧಿಪತಿಗಳೊ ಡನೆಯೂ ಪ್ರಧಾನ ಪಿತೃಗಳೊಡನೆಯೂ ಇಸ್ರಾಯೇಲಿನಲ್ಲಿರುವ ಸಮಸ್ತ ಪ್ರಭುಗಳೊಡನೆಯೂ ಮಾತ ನಾಡಿದನು. 3 ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು. 4 ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು. 5 ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು. 6 ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು. 7 ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು. 8 ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ. 9 ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ. 10 ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು. 11 ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು. 12 ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು. 13 ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು. 14 ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು. 15 ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು. 16 ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು. 17 ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
1 ಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು; 2 ಆದದರಿಂದ ಸೊಲೊಮೋನನು ಎಪ್ಪತ್ತು ಸಾವಿರ ಹೊರೆಹೊರುವವರನ್ನೂ ಬೆಟ್ಟದಲ್ಲಿ ಎಂಭತ್ತು ಸಾವಿರ ಕಡಿಯುವವರನ್ನೂ ಈ ಕೆಲಸದವರ ಮೇಲ್ವಿಚಾರಕರಾಗಿರಲು ಮೂರು ಸಾವಿರದ ಆರು ನೂರು ಮಂದಿಯನ್ನೂ ಲೆಕ್ಕಿಸಿ ನೇಮಿಸಿದನು. 3 ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು. 4 ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ. 5 ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ. 6 ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು? 7 ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು. 8 ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ. 9 ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು. 10 ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು. 11 ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು. 12 ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ. 13 ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ. 14 ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ. 15 ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ ಜವೆಗೋಧಿಯನ್ನೂ ಎಣ್ಣೆಯನ್ನೂ ದ್ರಾಕ್ಷಾ ರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ. 16 ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು. 17 ಸೊಲೊ ಮೋನನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯದೇಶ ಸ್ಥರನ್ನು ಲೆಕ್ಕಿಸಿದನು; ತನ್ನ ತಂದೆಯಾದ ದಾವೀದನು ಅವರನ್ನು ಲೆಕ್ಕಿಸಿದ ತರುವಾಯ ತಾನೂ ಲೆಕ್ಕಿಸಿದನು; ಅವರು ಲಕ್ಷದ ಐವತ್ತಮೂರು ಸಾವಿರದ ಆರುನೂರು ಮಂದಿ ಕಂಡುಬಂದರು. 18 ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
1 ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು. 2 ಅವನು ತನ್ನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಿನ ಎರಡನೇ ದಿವಸದಲ್ಲಿ ಕಟ್ಟುವದಕ್ಕೆ ಆರಂಭಿಸಿದನು. 3 ದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು. 4 ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು. 5 ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು. 6 ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು. 7 ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು. 8 ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು. 9 ಅದರ ಮೊಳೆ ಗಳು ಐವತ್ತು ಶೇಕೆಲುಗಳ ತೂಕ ಬಂಗಾರದ್ದಾಗಿದ್ದವು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು. 10 ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು. 11 ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು. 12 ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು. 13 ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು. 14 ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು. 15 ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು. 16 ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು. 17 ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
1 ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ. 2 ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು. 3 ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು. 4 ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು, 5 ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು. 6 ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು. 7 ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. 8 ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು. 9 ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ 10 ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು. 11 ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು. 12 ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ 13 ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು. 14 ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು. 15 ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ 16 ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು. 17 ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು. 18 ಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು. 19 ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ 20 ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ 21 ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು. 22 ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
1 ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು. 2 ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು. 3 ಆದ ದರಿಂದ ಏಳನೇ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಮನುಷ್ಯರೆಲ್ಲರೂ ಅರಸನ ಬಳಿಗೆ ಬಂದು ಕೂಡಿದರು. 4 ಇಸ್ರಾಯೇಲಿನ ಹಿರಿಯರೆಲ್ಲರು ಬಂದಾಗ ಲೇವಿ ಯರು ಮಂಜೂಷವನ್ನು ಎತ್ತಿಕೊಂಡರು. 5 ಒಡಂಬಡಿ ಕೆಯ ಮಂಜೂಷವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಪಾತ್ರೆಗಳನ್ನೂ ತಂದರು; ಇವುಗಳನ್ನು ಯಾಜಕರೂ ಲೇವಿಯರೂ ತಂದರು. 6 ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು. 7 ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು. 8 ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು. 9 ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ. 10 ಇಸ್ರಾಯೇಲ್ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ. 11 ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ 12 ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು. 13 ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು. 14 ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
1 ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸವಾಗಿರುವೆನೆಂದು ಕರ್ತನು ಹೇಳಿದ್ದಾನೆ. 2 ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು. 3 ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು. 4 ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ. 5 ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ. 6 ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ. 7 ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು. 8 ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ. 9 ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು. 10 ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ 11 ಕರ್ತನು ಇಸ್ರಾಯೇಲ್ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ. 12 ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು. 13 ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ-- 14 ಇಸ್ರಾಯೇಲಿನ ದೇವರಾದ ಓ ಕರ್ತನೇ, ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ. 15 ನೀನು ನಿನ್ನ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೋಸ್ಕರ ಕೊಟ್ಟ ಮಾತನ್ನು ನೆರವೇರಿಸಿ ನಿನ್ನ ಬಾಯಿಂದ ಹೇಳಿದ್ದನ್ನು ಇಂದು ನಿನ್ನ ಕೈಯಿಂದ ಮಾಡಿ ತೀರಿಸಿದಿ. 16 ಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು. 17 ಈಗ ಇಸ್ರಾಯೇಲಿನ ದೇವ ರಾದ ಓ ಕರ್ತನೇ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನಿಶ್ಚಯವಾಗಲಿ. 18 ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ? 19 ನನ್ನ ದೇವರಾದ ಓ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು. 20 ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ. 21 ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು. 22 ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲು 23 ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು. 24 ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ 25 ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು. 26 ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ 27 ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು. 28 ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ 29 ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ 30 ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ 31 ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ. 32 ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ, 33 ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು. 34 ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ 35 ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು. 36 ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ 37 ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ 38 ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ 39 ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು. 40 ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ. 41 ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ. 42 ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
1 ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. 2 ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು. 3 ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು. 4 ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು. 5 ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು. 6 ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು. 7 ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು. 8 ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು. 9 ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು; 10 ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು. 11 ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು. 12 ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ. 13 ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ 14 ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು. 15 ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು. 16 ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು. 17 ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ 18 ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ. 19 ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ 20 ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು. 21 ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು. 22 ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
1 ಸೊಲೊಮೋನನು ಕರ್ತನ ಆಲಯವನ್ನೂ ತನ್ನ ಮನೆಯನ್ನೂ ಇಪ್ಪತ್ತು ವರುಷ ಗಳಲ್ಲಿ ಕಟ್ಟಿದ ತರುವಾಯ ಆದದ್ದೇನಂದರೆ, 2 ಹೂರಾ ಮನು ಸೊಲೊಮೋನನಿಗೆ ತಿರಿಗಿ ಕೊಟ್ಟ ಪಟ್ಟಣಗ ಳನ್ನು ಸೊಲೊಮೋನನು ಕಟ್ಟಿಸಿ ಇಸ್ರಾಯೇಲ್ ಮಕ್ಕಳನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು. 3 ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು. 4 ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು. 5 ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು. 6 ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು. 7 ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ 8 ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು. 9 ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು. 10 ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು. 11 ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು. 12 ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು. 13 ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು. 14 ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು. 15 ಅವರು ಯಾವ ಕಾರ್ಯ ದಲ್ಲಾ ದರೂ ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ತೊರೆದು ಬಿಡಲಿಲ್ಲ. 16 ಆದರೆ ಸೊಲೊಮೋನನ ಕೆಲಸವೆಲ್ಲಾ ಕರ್ತನ ಆಲಯದ ಅಸ್ತಿವಾರ ಹಾಕಿದ ದಿವಸದ ವರೆಗೂ ಅದನ್ನು ಕಟ್ಟಿಸಿ ತೀರಿಸುವ ಮಟ್ಟಿಗೂ ಸಿದ್ಧಮಾಡಲ್ಪಟ್ಟಿತು. ಹೀಗೆಯೇ ಕರ್ತನ ಆಲಯವು ಸಿದ್ಧವಾಯಿತು. 17 ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರಿಗೂ ಏಲೋ ತಿಗೂ ಹೊರಟುಹೋದನು. 18 ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು. 2 ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ. 3 ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ 4 ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು. 5 ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ. 6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು. 7 ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು. 8 ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು. 9 ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ. 10 ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು. 11 ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ. 12 ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು. 13 ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು. 14 ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು. 15 ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು. 16 ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು. 17 ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು. 18 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು. 19 ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ. 20 ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ. 21 ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು. 22 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು. 23 ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು. 24 ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು. 25 ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು. 26 ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು. 27 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು. 28 ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು. 29 ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ? 30 ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು. 31 ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
1 ಆಗ ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು. 2 ಅರಸ ನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು ಐಗುಪ್ತದಲ್ಲಿರುವ ನೆಬಾ ಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿ ಐಗುಪ್ತದಿಂದ ತಿರಿಗಿ ಬಂದನು. 3 ಅವರು ಅವನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲ್ಯರೂ ರೆಹಬ್ಬಾಮನ ಬಳಿಗೆ ಬಂದು 4 ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗಿ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ತನ್ನ ಭಾರವಾದ ನೊಗವನ್ನೂ ಹಗುರ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು. 5 ಅವನು ಅವರಿಗೆ--ಮೂರು ದಿವಸಗಳಾದ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಜನರು ಹೊರಟುಹೋದರು. 6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು. 7 ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು. 8 ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ-- 9 ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು. 10 ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು 11 ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು. 12 ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು. 13 ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ-- 14 ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು. 15 ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು. 16 ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು. 17 ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು. 18 ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು. 19 ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
1 ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ 2 ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು; 3 ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ 4 ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು. 5 ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು. 6 ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ 7 ಬೇತ್ಚೂರ ಸೋಕೋ 8 ಅದುಲ್ಲಾಮ್ ಗತ್ಊರು ಮಾರೇಷ್ 9 ಜೀಫ್ ಅದೋರೈಮ್ ಲಾಕೀಷ್ ಅಜೇಕ 10 ಚೋರ್ಗ ಅಯ್ಯಾಲೋನ್ ಹೆಬ್ರೋನ್ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ. 11 ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು. 12 ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು. 13 ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು. 14 ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ 15 ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು. 16 ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು. 17 ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು. 18 ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು. 19 ಅಬೀಹೈಲಳು ಯೆಗೂಷ್, ಶೆಮರ್ಯ, ಜಾಹಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು. 20 ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು. 21 ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು. 22 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು. 23 ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
1 ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು. 2 ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು. 3 ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು. 4 ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು. 5 ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು. 6 ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು. 7 ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ. 8 ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು. 9 ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು. 10 ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು. 11 ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು. 12 ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು. 13 ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು. 14 ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು. 15 ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು. 16 ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
1 ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು. 2 ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು. 3 ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು. 4 ಆಗ ಅಬೀಯನು ಎಫ್ರಾಯಾಮ್ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ. 5 ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ? 6 ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ. 7 ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ. 8 ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು. 9 ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು. 10 ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ. 11 ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ. 12 ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು. 13 ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು. 14 ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು. 15 ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು. 16 ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು. 17 ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು. 18 ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು. 19 ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು. 20 ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು. 21 ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು. 22 ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
1 ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು, 2 ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು. 3 ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ, 4 ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು. 5 ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು. 6 ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ. 7 ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು. 8 ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು. 9 ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು. 10 ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು. 11 ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು. 12 ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು. 13 ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು. 14 ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು. 15 ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
1 ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ-- 2 ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; 3 ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು. 4 ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು. 5 ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು. 6 ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು. 7 ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು. 8 ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು. 9 ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು. 10 ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು. 11 ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು. 12 ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂ 13 ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು. 14 ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು. 15 ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು. 16 ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು. 17 ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು. 18 ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು. 19 ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
1 ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು. 2 ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು. 3 ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು. 4 ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು. 5 ಬಾಷನು ಇದನ್ನು ಕೇಳಿದಾಗ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತನ್ನ ಕೆಲಸವನ್ನು ನಿಲ್ಲಿಸಿಬಿಟ್ಟನು. 6 ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು. 7 ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು. 8 ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು. 9 ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು. 10 ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು. 11 ಇಗೋ, ಆಸನ ಕಾರ್ಯಗಳು ಮೊದಲನೆಯವುಗಳೂ ಕಡೆಯವುಗಳೂ ಯೆಹೂ ದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿವೆ. 12 ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು. 13 ಆಸನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ತನ್ನ ಆಳ್ವಿಕೆಯ ನಾಲ್ವತ್ತೊಂದನೇ ವರುಷದಲ್ಲಿ ಸತ್ತನು. 14 ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
1 ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು; 2 ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು. 3 ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು. 4 ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು. 5 ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು. 6 ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು. 7 ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು. 8 ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು. 9 ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು. 10 ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ. 11 ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು. 12 ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು. 13 ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು. 14 ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. 15 ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. 16 ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು. 17 ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು. 18 ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು. 19 ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
1 ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು. 2 ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು; ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು. 3 ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು. 4 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು. 5 ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. 6 ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. 7 ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು. 8 ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು. 9 ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು. 10 ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು. 11 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನಲ್ಲಿರುವ ರಾಮೋ ತಿಗೆ ಹೋಗಿ ಜಯಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. 12 ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು. 13 ಅದಕ್ಕೆ ಮಿಕಾಯೆಹುವು--ಕರ್ತನ ಜೀವ ದಾಣೆ, ನನ್ನ ದೇವರು ಏನು ಹೇಳುವನೋ ಅದನ್ನು ಹೇಳುವೆನು ಅಂದನು. 14 ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು. 15 ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು. 16 ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು. 17 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು. 18 ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು. 19 ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. 20 ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. 21 ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು. 22 ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು. 23 ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು-- 24 ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ಹೋಗುವ ದಿವಸದಲ್ಲಿ ನೋಡುವಿ ಅಂದನು. 25 ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ-- 26 ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು. 27 ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು. 28 ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಹೋದರು. 29 ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು. 30 ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು. 31 ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು. 32 ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು. 33 ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು. 34 ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.
1 ಆದರೆ ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ತಿರಿಗಿ ಬಂದನು. 2 ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು. 3 ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು. 4 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ 5 ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು. 6 ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ. 7 ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು. 8 ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ-- 9 ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು. 10 ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ. 11 ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
1 ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು. 2 ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು. 3 ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು. 4 ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು. 5 ಆಗ ಯೆಹೋಷಾ ಫಾಟನು ಹೊಸ ಅಂಗಳದ ಮುಂದೆ ಕರ್ತನ ಮಂದಿರ ದಲ್ಲಿರುವ ಯೆಹೂದದ ಯೆರೂಸಲೇಮಿನ ಸಭೆಯ ಮಧ್ಯದಲ್ಲಿ ನಿಂತು--ನಮ್ಮ ಪಿತೃಗಳ ದೇವರಾದ 6 ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ? 7 ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ? 8 ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ 9 ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು. 10 ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು. 11 ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ. 12 ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು. 13 ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು. 14 ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು. 15 ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ. 16 ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ. 17 ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು. 18 ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು. 19 ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು. 20 ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು. 21 ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು. 22 ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು. 23 ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು. 24 ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು. 25 ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು. 26 ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ. 27 ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು 28 ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು. 29 ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು. 30 ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು. 31 ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು. 32 ಅವನು ತನ್ನ ತಂದೆಯಾದ ಆಸನ ಮಾರ್ಗ ದಲ್ಲಿ ನಡೆದು ಅದನ್ನು ಬಿಟ್ಟುಬಿಡದೆ ಕರ್ತನ ಸಮ್ಮುಖ ದಲ್ಲಿ ಸರಿಯಾದದ್ದನ್ನು ಮಾಡಿದನು. 33 ಆದರೆ ಉನ್ನತ ಸ್ಥಳಗಳು ಇನ್ನೂ ತೆಗೆದುಹಾಕಲ್ಪಡಲಿಲ್ಲ. ಜನರು ತಮ್ಮ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸಿದ್ಧಮಾಡಿರಲಿಲ್ಲ; 34 ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. 35 ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನೂ ಬಹು ದುಷ್ಟನಾಗಿ ನಡೆದವನೂ ಆದ ಅಹಜ್ಯನ ಸಂಗಡ ಸಹವಾಸಮಾಡಿದನು. 36 ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು. 37 ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
1 ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು. 2 ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು. 3 ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು. 4 ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು. 5 ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು. 6 ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು, 7 ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು. 8 ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು; 9 ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು. 10 ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು. 11 ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು. 12 ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ 13 ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ 14 ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ. 15 ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ. 16 ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು. 17 ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ. 18 ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು; 19 ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ. 20 ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
1 ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು. 2 ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು. 3 ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು. 4 ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು. 5 ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು. 6 ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು. 7 ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು. 8 ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು. 9 ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು. 10 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು. 11 ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು. 12 ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
1 ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು. 2 ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು. 3 ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು. 4 ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು. 5 ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು. 6 ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ. 7 ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು. 8 ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ. 9 ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು 10 ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು. 11 ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು. 12 ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು. 13 ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು. 14 ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು. 15 ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು. 16 ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು. 17 ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು. 18 ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು. 19 ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು. 20 ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು. 21 ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
1 ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು. 2 ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು. 3 ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು. 4 ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು. 5 ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು. 6 ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ? 7 ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು. 8 ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು. 9 ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು. 10 ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು. 11 ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು. 12 ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು. 13 ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು. 14 ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು. 15 ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು. 16 ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು. 17 ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು. 18 ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು. 19 ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು. 20 ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು. 21 ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು. 22 ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು. 23 ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು. 24 ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು. 25 ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ. 26 ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು. 27 ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
1 ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನಳು; ಈಕೆಯು ಯೆರೂಸಲೇಮಿನವಳಾಗಿದ್ದಳು. 2 ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ. 3 ರಾಜ್ಯವು ಅವನಿಗೆ ಸ್ಥಿರಮಾಡಲ್ಪಟ್ಟ ತರುವಾಯ ಅವನು ಅರಸನಾದ ತನ್ನ ತಂದೆಯನ್ನು ಸಂಹರಿಸಿದ ತನ್ನ ಸೇವಕರನ್ನು ಕೊಂದುಹಾಕಿದನು. 4 ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ. 5 ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿ ಕೊಂಡು ಯೆಹೂದ ಬೆನ್ಯಾವಿಾನ್ಯರೆಲ್ಲರಲ್ಲಿ ತಮ್ಮ ಪಿತೃ ಗಳ ಮನೆಗಳ ಪ್ರಕಾರ ಅವರನ್ನು ಸಹಸ್ರಗಳ ಮೇಲೆ ಅಧಿಪತಿಗಳಾಗಿಯೂ ಶತಗಳ ಮೇಲೆ ಅಧಿಪತಿಗಳಾ ಗಿಯೂ ಮಾಡಿದನು. ಅವನು ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರನ್ನು ಲೆಕ್ಕಿಸಿ ಆದುಕೊಂಡಂಥ, ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ ಖೇಡ್ಯವನ್ನೂ ಹಿಡಿದುಕೊಂಡಿರುವಂಥ ಮೂರು ಲಕ್ಷ ಮಂದಿಯನ್ನು ಕಂಡನು. 6 ಇದಲ್ಲದೆ ಇಸ್ರಾಯೇಲಿನವರಲ್ಲಿ ನೂರು ಬೆಳ್ಳಿ ತಲಾಂತುಗಳಿಂದ ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು. 7 ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ. 8 ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು. 9 ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು. 10 ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು. 11 ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು. 12 ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು. 13 ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು. 14 ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು. 15 ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು. 16 ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು. 17 ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು. 18 ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು. 19 ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು. 20 ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು. 21 ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು. 22 ಯೆಹೂದದ ವರು ಇಸ್ರಾಯೇಲಿನವರ ಮುಂದೆ ಸೋತು ತಮ್ಮತಮ್ಮ ಗುಡಾರಕ್ಕೆ ಓಡಿಹೋದರು. 23 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು 24 ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು. 25 ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು. 26 ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? 27 ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು. 28 ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
1 ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು. 2 ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು. 3 ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು. 4 ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು. 5 ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು. 6 ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು. 7 ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು. 8 ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು. 9 ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು. 10 ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು. 11 ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು. 12 ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು. 13 ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು. 14 ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು. 15 ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು. 16 ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು. 17 ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ-- 18 ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. 19 ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. 20 ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು. 21 ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು. 22 ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು; 23 ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
1 ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು. 2 ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು. 3 ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು. 4 ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು. 5 ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು. 6 ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು. 7 ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. 8 ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. 9 ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
1 ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ. 2 ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು. 3 ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು. 4 ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು. 5 ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು. 6 ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು. 7 ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು. 8 ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು. 9 ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ. 10 ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ? 11 ಆದದ ರಿಂದ ನೀವು ನನ್ನ ಮಾತು ಕೇಳಿ ನಿಮ್ಮ ಸಹೋದರ ರಲ್ಲಿ ನೀವು ಸೆರೆಯಾಗಿ ತಕ್ಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಯಾಕಂದರೆ ಉರಿಯುತ್ತಿರುವ ಕರ್ತನ ಕೋಪವು ನಿಮ್ಮ ಮೇಲೆ ಇರುವದು ಅಂದನು. 12 ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು 13 ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು. 14 ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು. 15 ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು. 16 ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು. 17 ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು. 18 ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು. 19 ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು. 20 ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು. 21 ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು. 22 ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು. 23 ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು. 24 ಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು. 25 ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು. 26 ಅವನ ಇತರ ಕ್ರಿಯೆಗಳೂ ಅವನ ಸಕಲ ಮಾರ್ಗಗಳೂ--ಮೊದಲನೆಯವುಗಳೂ ಕಡೆಯವು ಗಳೂ ಇಗೋ, ಯೆಹೂದದ ಇಸ್ರಾಯೇಲ್ಯರ ಅರಸು ಗಳ ಪುಸ್ತಕದಲ್ಲಿ ಬರೆಯಲ್ಪಟ್ಟವೆ. 27 ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
1 ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು. 2 ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. 3 ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು. 4 ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ-- 5 ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ. 6 ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ. 7 ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು. 8 ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು. 9 ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ. 10 ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ. 11 ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು. 12 ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂ 13 ಎಲೀಚಾಫಾನನ ಮಕ್ಕಳಲ್ಲಿ ಶಿಮ್ರಿಯೂ ಯೆಗೀ ಯೇಲನೂ ಆಸಾಫನ ಮಕ್ಕಳಲ್ಲಿ 14 ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು. 15 ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು. 16 ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು. 17 ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು. 18 ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು. 19 ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು. 20 ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು. 21 ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು. 22 ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು. 23 ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು. 24 ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು, 25 ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು. 26 ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ 27 ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು. 28 ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು. 29 ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು. 30 ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು. 31 ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು. 32 ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು. 33 ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು. 34 ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು. 35 ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು. 36 ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
1 ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು. 2 ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು. 3 ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಆ ಕಾಲದಲ್ಲಿ ಆಚರಿಸಲಾರದೆ ಇದ್ದರು. 4 ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು. 5 ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ. 6 ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು. 7 ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ. 8 ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು. 9 ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು. 10 ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು. 11 ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. 12 ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು. 13 ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು. 14 ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು. 15 ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು. 16 ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. 17 ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು. 18 ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು. 19 ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು. 20 ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು. 21 ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು. 22 ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು. 23 ಆದರೆ ಸಮೂಹವೆಲ್ಲಾ ಮತ್ತೂ ಏಳು ದಿವಸ ಆಚರಿಸುವದಕ್ಕೆ ಯೋಚಿಸಿಕೊಂಡ ಮೇಲೆ ಏಳು ದಿವಸಗಳು ಸಂತೋಷವಾಗಿ ಆಚರಿಸಿದರು. 24 ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು. 25 ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು. 26 ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. 27 ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
1 ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು. 2 ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು. 3 ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು. 4 ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು. 5 ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು; 6 ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು. 7 ಮೂರನೇ ತಿಂಗಳಲ್ಲಿ ರಾಶಿಗಳ ತಳಹದಿ ಆರಂಭಿಸಿ ಏಳನೇ ತಿಂಗಳಲ್ಲಿ ತೀರಿಸಿದರು. 8 ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು. 9 ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ ಲೇವಿಯರನ್ನೂ ವಿಚಾರಿಸಿದನು. 10 ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು. 11 ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು. 12 ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು. 13 ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು. 14 ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು. 15 ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು. 16 ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ 17 ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ 18 ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು. 19 ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು. 20 ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು. 21 ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
1 ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು. 2 ಸನ್ಹೇರೀಬನು ಬಂದದ್ದನ್ನೂ ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ಮುಖ ತಿರುಗಿಸಿದ್ದನ್ನೂ ಹಿಜ್ಕೀಯನು ಕಂಡಾಗ 3 ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು. 4 ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು. 5 ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು. 6 ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ-- 7 ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ. 8 ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು. 9 ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ-- 10 ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ? 11 ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ? 12 ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ? 13 ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ? 14 ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು? 15 ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ. 16 ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು. 17 ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು. 18 ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು. 19 ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು. 20 ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು. 21 ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು. 22 ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು. 23 ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು. 24 ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು. 25 ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು. 26 ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ. 27 ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು. 28 ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು. 29 ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು. 30 ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು. 31 ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು. 32 ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ. 33 ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
1 ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು. 2 ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. 3 ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು. 4 ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು. 5 ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. 6 ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು. 7 ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ 8 ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು. 9 ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು. 10 ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು. 11 ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು. 12 ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. 13 ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು. 14 ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು. 15 ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು. 16 ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು. 17 ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು. 18 ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. 19 ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ. 20 ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು. 21 ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು, ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. 22 ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು. 23 ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು. 24 ಆದದರಿಂದ ಅವನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅವನ ಸ್ವಂತ ಮನೆಯಲ್ಲಿ ಅವನನ್ನು ಕೊಂದುಹಾಕಿದರು. 25 ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
1 ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು. 2 ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು. 3 ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು. 4 ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ 5 ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು. 6 ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು. 7 ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು. 8 ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು. 9 ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು. 10 ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು. 11 ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು. 12 ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು. 13 ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು. 14 ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು. 15 ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು. 16 ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ. 17 ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ. 18 ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು. 19 ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು. 20 ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ-- 21 ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು. 22 ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.) 23 ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ 24 ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು. 25 ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ. 26 ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- 27 ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ. 28 ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು. 29 ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು. 30 ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು. 31 ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು. 32 ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು. 33 ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
1 ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು. 2 ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ ಕರ್ತನ ಆಲಯದ ಸೇವೆ ಮಾಡುವದಕ್ಕೆ ಅವರನ್ನು ದೃಢ ಪಡಿಸಿ, 3 ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ. 4 ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು 5 ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ. 6 ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು. 7 ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ 8 ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು. 9 ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ ಅವನ ಸಹೋದರರಾದ ಶೆಮಾಯನೂ ನೆತನೇಲನೂ ಹಷಲ್ಯನೂ ಯೆಗೀಯೇಲನೂ ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಮರಿಗಳನ್ನೂ ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು. 10 ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು. 11 ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು; 12 ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು. 13 ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು. 14 ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು. 15 ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು. 16 ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು. 17 ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು. 18 ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ. 19 ಯೋಷೀ ಯನ ಆಳಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಆಚರಿಸಲ್ಪಟ್ಟಿತು. 20 ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು; 21 ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು. 22 ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು. 23 ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು. 24 ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು. 25 ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. 26 ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂ 27 ಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
1 ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು. 2 ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. 3 ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು. 4 ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು. 5 ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು. 6 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು. 7 ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು. 8 ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು. 9 ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. 10 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು. 11 ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು. 12 ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು. 13 ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. 14 ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು. 15 ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. 16 ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. 17 ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು. 18 ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು. 19 ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು. 20 ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. 21 ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು. 22 ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ -- 23 ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
1 ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ-- 2 ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. 3 ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು). 4 ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು. 5 ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು. 6 ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು. 7 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು. 8 ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು. 9 ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು, 10 ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು. 11 ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ 2 ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ-- 3 ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು. 4 ಶೆಫಟ್ಯನ ಮಕ್ಕಳು--ಮುನ್ನೂರ ಎಪ್ಪತ್ತೆರಡು ಮಂದಿಯು. 5 ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು. 6 ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು. 7 ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. 8 ಜತ್ತೂವಿನ ಮಕ್ಕಳು--ಒಂಭೈನೂರ ನಾಲ್ವತ್ತೈದು ಮಂದಿಯು. 9 ಜಕ್ಕೈನ ಮಕ್ಕಳು--ಏಳುನೂರಾ ಅರು ವತ್ತು ಮಂದಿಯು. 10 ಬಾನೀಯ ಮಕ್ಕಳು--ಆರು ನೂರ ನಾಲ್ವತ್ತೆರಡು ಮಂದಿಯು. 11 ಬೇಬೈಯ ಮಕ್ಕಳು--ಆರುನೂರ ಇಪ್ಪತ್ತು ಮೂರು ಮಂದಿಯು. 12 ಅಜ್ಗಾದನ ಮಕ್ಕಳು--ಸಾವಿರದ ಇನ್ನೂರ ಇಪ್ಪತ್ತೆರಡು ಮಂದಿಯು. 13 ಅದೋನೀಕಾಮನ ಮಕ್ಕಳು--ಆರು ನೂರ ಅರುವತ್ತಾರು ಮಂದಿಯು. 14 ಬಿಗ್ವೈಯನ ಮಕ್ಕಳು--ಎರಡು ಸಾವಿರದ ಐವತ್ತಾರು ಮಂದಿಯು. 15 ಆದೀನನ ಮಕ್ಕಳು--ನಾನೂರ ಐವತ್ತು ನಾಲ್ಕು ಮಂದಿಯು. 16 ಹಿಜ್ಕೀಯನ ಸಂತತಿಯಾದ ಅಟೇರನ ಮಕ್ಕಳು--ತೊಂಭತ್ತೆಂಟು ಮಂದಿಯು. 17 ಬೇಚೈಯನ ಮಕ್ಕಳು--ಮುನ್ನೂರ ಇಪ್ಪತ್ತು ಮೂರು ಮಂದಿ. 18 ಯೋರನ ಮಕ್ಕಳುನೂರ ಹನ್ನೆರಡು ಮಂದಿಯು. 19 ಹಾಷುಮನ ಮಕ್ಕಳು--ಇನ್ನೂರ ಇಪ್ಪತ್ತು ಮೂರು ಮಂದಿಯು. 20 ಗಿಬ್ಬಾರನ ಮಕ್ಕಳು--ತೊಂಭತ್ತೈದು ಮಂದಿಯು, 21 ಬೇತ್ಲೆಹೇಮನ ಮಕ್ಕಳು--ನೂರ ಇಪ್ಪತ್ತು ಮೂರು ಮಂದಿಯು. 22 ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು. 23 ಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು. 24 ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು. 25 ಕಿರ್ಯತ್ಯಾರೀಮ್ ಕೆಫೀರ್ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು. 26 ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು. 27 ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು. 28 ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು. 29 ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು 30 ಮಗ್ಬೀಷನ ಮಕ್ಕಳು -- ನೂರ ಐವತ್ತಾರು ಮಂದಿಯು. 31 ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. 32 ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು. 33 ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು. 34 ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು. 35 ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು. 36 ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು. 37 ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು. 38 ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು. 39 ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು. 40 ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು. 41 ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು. 42 ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು. 43 ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ 44 ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ 45 ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ 46 ಹಾಗಾದ್ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ 47 ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ 48 ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂ 49 ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ 50 ಅಸ್ನನ ಮಕ್ಕಳೂ ಮೆಗೂನೀಮ್ ಮಕ್ಕಳೂ ನೆಫೀಸೀಮನ ಮಕ್ಕಳೂ 51 ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು 52 ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ 53 ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂ 54 ನೆಚೀಹನ ಮಕ್ಕಳೂ ಹಟೀಫನ ಮಕ್ಕಳೂ. 55 ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ 56 ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ 57 ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು. 58 ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು. 59 ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು. 60 ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು. 61 ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ. 62 ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು. 63 ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು. 64 ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು. 65 ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು. 66 ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು. 67 ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು. 68 ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು. 69 ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು. 70 ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
1 ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು. 2 ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು. 3 ಬಲಿಪೀಠವನ್ನು ಅದರ ಅಧಾರಗಳ ಮೇಲೆ ಇಟ್ಟರು; ಯಾಕಂದರೆ ಆ ದೇಶದ ಜನರಿ ಗೋಸ್ಕರ ಅವರಿಗೆ ಹೆದರಿಕೆ ಇತ್ತು. ಅವರು ಅದರ ಮೇಲೆ ದಹನಬಲಿಗಳನ್ನು ಉದಯದಲ್ಲಿಯೂ ಸಾಯ ಂಕಾಲದಲ್ಲಿಯೂ ಅರ್ಪಿಸಿದರು. 4 ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು. 5 ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು. 6 ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ. 7 ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು. 8 ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು. 9 ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು. 10 ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು. 11 ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು. 12 ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು. 13 ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
1 ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ 2 ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು. 3 ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು. 4 ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು. 5 ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು. 6 ಆದರೆ ಅಹಷ್ವೇರೋಷನು ಆಳುವಾಗ ಅವನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಕಾಗದ ಬರೆದರು. 7 ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು. 8 ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿ ಯಾದ ಶಿಂಷೈಯೂ ಯೆರೂಸಲೇಮಿಗೆ ವಿರೋಧವಾಗಿ ಅರಸನಾದ ಆರ್ತಷಸ್ತನಿಗೆ-- 9 ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ 10 ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ-- 11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು. 12 ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ. 13 ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ. 14 ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ. 15 ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ. 16 ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು. 17 ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು. 18 ಇಂಥ ಸಮಯದಲ್ಲಿ ನೀವು ನನಗೆ ಕಳುಹಿಸಿದ ಪತ್ರವು ನನ್ನ ಮುಂದೆ ವಿವರವಾಗಿ ಓದಲ್ಪಟ್ಟಿತು. 19 ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು; 20 ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು. 21 ಆದಕಾರಣ ಮತ್ತೊಂದು ಆಜ್ಞೆಯು ನನ್ನಿಂದ ಕೊಡಲ್ಪಡುವ ಮಟ್ಟಿಗೂ ಆ ಪಟ್ಟಣವನ್ನು ಕಟ್ಟದ ಹಾಗೆ ಆ ಮನುಷ್ಯ ರನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿರಿ. 22 ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು. 23 ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು. 24 ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
1 ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು. 2 ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು. 3 ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು. 4 ಆಗ ನಾವು ಈ ರೀತಿಯಾಗಿ ಅವರಿಗೆ ಹೇಳಿದ ತರುವಾಯ ಈ ಕಟ್ಟುವಿಕೆಯನ್ನು ಮಾಡುವ ಮನುಷ್ಯರ ಹೆಸರುಗಳೇನೆಂದು ಕೇಳಿದರು. 5 ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು. 6 ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ. 7 ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ-- 8 ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ. 9 ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು. 10 ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು. 11 ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ. 12 ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು. 13 ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು. 14 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ-- 15 ಈ ಪಾತ್ರೆಗಳನ್ನು ತೆಗೆದುಕೊಂಡು ಯೆರೂ ಸಲೇಮಿನಲ್ಲಿರುವ ಆಲಯಕ್ಕೆ ತಕ್ಕೊಂಡು ಹೋಗು; ದೇವರ ಆಲಯವು ಅದರ ಸ್ಥಳದಲ್ಲಿ ಕಟ್ಟಿಸಲ್ಪಡಲಿ ಅಂದನು. 16 ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು. 17 ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
1 ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು. 2 ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು. 3 ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ; 4 ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ. 5 ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ. 6 ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ. 7 ದೇವರ ಆಲಯದ ಗೊಡವೆಯನ್ನು ನೀವು ಬಿಡಿರಿ. ಯೆಹೂದ್ಯರ ಅಧಿಪತಿಯೂ ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ. 8 ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ. 9 ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ 10 ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ. 11 ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ. 12 ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು. 13 ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು. 14 ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು. 15 ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು. 16 ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು. 17 ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು. 18 ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು. 19 ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು. 20 ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು. 21 ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್ ಮಕ್ಕಳು ಇಸ್ರಾಯೇಲ್ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. 22 ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
1 ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು, 2 ಇವನು ಹಿಲ್ಕೀಯನ ಮಗನು, ಇವನು ಶಲ್ಲೂಮನ ಮಗನು, ಇವನು ಚಾದೋಕನ ಮಗನು, ಇವನು ಅಹೀಟೂಬನ ಮಗನು, 3 ಇವನು ಅಮ ರ್ಯನ ಮಗನು, ಇವನು ಅಜರ್ಯನ ಮಗನು, 4 ಇವನು ಮೆರಾಯೋತನ ಮಗನು, ಇವನು ಜೆರಹ್ಯನ ಮಗನು, ಇವನು ಉಜ್ಜೀಯನ ಮಗನು, ಇವನು ಬುಕ್ಕೀಯ ಮಗನು, 5 ಇವನು ಅಬೀಷೂವನ ಮಗನು, ಇವನು ಫೀನೆಹಾಸನ ಮಗನು, ಇವನು ಎಲ್ಲಾಜಾರನ ಮಗನು, ಇವನು ಪ್ರಧಾನ ಯಾಜಕ ನಾದ ಆರೋನನ ಮಗನು. 6 ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು. 7 ಇದಲ್ಲದೆ ಇವನ ಸಂಗಡ ಇಸ್ರಾಯೇಲ್ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು. 8 ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು. 9 ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು. 10 ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು. 11 ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ-- 12 ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ. 13 ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ. 14 ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ 15 ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ 16 ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ 17 ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ. 18 ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ. 19 ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು. 20 ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು. 21 ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ-- 22 ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ. 23 ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು? 24 ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ. 25 ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು. 26 ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು. 27 ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ. 28 ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
1 ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ-- 2 ಫಿನೆಹಾಸನ ಕುಮಾರ ರಲ್ಲಿ ಗೆರ್ಷೋಮನೂ ಈತಾಮಾರನ ಕುಮಾರರಲ್ಲಿ ದಾನಿಯೇಲನೂ ದಾವೀದನ ಕುಮಾರರಲ್ಲಿ ಹಟ್ಟೂ ಷನೂ, 3 ಶಕನ್ಯನ ವಂಶದ ಫರೋಷನ ಕುಮಾರರ ಜೆಕರೀಯನೂ ಅವನ ಸಂಗಡ ವಂಶಾವಳಿಯಲ್ಲಿ ಬರೆದಿರುವ ನೂರಾ ಐವತ್ತು ಮಂದಿ ಗಂಡಸರೂ. 4 ಪಹತ್ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ. 5 ಶೆಕನ್ಯನ ಮಕ್ಕಳಲ್ಲಿ ಯಹಜೀಯೇಲನು ಮಗನೂ ಅವನ ಸಂಗಡ ಮುನ್ನೂರು ಮಂದಿ ಗಂಡಸರೂ. 6 ಆದೀನನ ಕುಮಾರರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನ ಸಂಗಡ ಐವತ್ತು ಮಂದಿ ಗಂಡ ಸರೂ, 7 ಏಲಾಮನ ಮಕ್ಕಳಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನ ಸಂಗಡ ಎಪ್ಪತ್ತು ಮಂದಿ ಗಂಡಸರೂ. 8 ಶೆಫಟ್ಯನ ಕುಮಾರರಲ್ಲಿ ವಿಾಕಾಯೇಲನ ಮಗನಾದ ಜೆಬದ್ಯನೂ ಅವನ ಸಂಗಡ ಎಂಭತ್ತು ಮಂದಿ ಗಂಡಸರೂ, 9 ಯೋವಾಬನ ಕುಮಾರರಲ್ಲಿ ಯೆಹೀಯೇಲನ ಮಗನಾದ ಒಬದ್ಯನೂ ಅವನ ಸಂಗಡ ಇನ್ನೂರ ಹದಿನೆಂಟು ಮಂದಿ ಗಂಡಸರೂ. 10 ಶೆಲೋವಿಾತನ ಕುಮಾರರಲ್ಲಿ ಯೊಸಿಫ್ಯನ ಮಗನೂ ಅವನ ಸಂಗಡ ನೂರಾ ಅರುವತ್ತು ಮಂದಿ ಗಂಡಸರೂ. 11 ಬೇಬೈಯ ಕುಮಾರರಲ್ಲಿ ಬೇಬೈಯ ಮಗನಾದ ಜೆಕರೀಯನೂ ಅವನ ಸಂಗಡ ಇಪ್ಪತ್ತೆಂಟು ಮಂದಿ ಗಂಡಸರೂ. 12 ಅಜಾದನ ಕುಮಾರರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನ ಸಂಗಡ ನೂರಾ ಹತ್ತು ಮಂದಿ ಗಂಡಸರೂ. 13 ಅದೋ ನೀಕಾಮನ ಕಡೇ ಕುಮಾರರಾದ ಎಲಿಫೇಲಟನು ಎವಿಾಯೇಲನು ಶೆಮಾಯನು ಎಂಬ ಹೆಸರುಳ್ಳವರೂ ಅವರ ಸಂಗಡ ಅರುವತ್ತು ಮಂದಿ ಗಂಡಸರೂ. 14 ಬಿಗ್ವೈಯನ ಕುಮಾರರಲ್ಲಿ ಊತೆ ಯನೂ ಜಬ್ಬೂ ದನೂ ಅವರ ಸಂಗಡ ಎಪ್ಪತ್ತು ಮಂದಿ ಗಂಡಸರೂ. 15 ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ. 16 ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನು 17 ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು. 18 ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ 19 ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ 20 ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು. 21 ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು. 22 ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು. 23 ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು. 24 ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ 25 ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು. 26 ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ 27 ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು. 28 ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ. 29 ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು. 30 ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು. 31 ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು. 32 ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು. 33 ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು. 34 ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು. 35 ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು. 36 ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
1 ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ. 2 ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು. 3 ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು. 4 ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು; 5 ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ-- 6 ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು. 7 ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ 8 ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು. 9 ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ. 10 ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ. 11 ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ. 12 ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು. 13 ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ 14 ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ? 15 ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
1 ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು. 2 ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು. 3 ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ. 4 ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು. 5 ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು. 6 ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು. 7 ಆಗ ಸೆರೆಯ ಮಕ್ಕಳೆಲ್ಲರೂ ಯೆರೂಸಲೇಮಿಗೆ ಕೂಡಿ ಬರಬೇಕೆಂದು ಯೆಹೂದ ಮತ್ತು ಯೆರೂಸ ಲೇಮಿನಲ್ಲಿ ಎಲ್ಲೆಲ್ಲಿಯೂ ಪ್ರಕಟಿಸಿದರು. 8 ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು. 9 ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು. 10 ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ. 11 ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು. 12 ಆಗ ಸಭೆಯೆಲ್ಲಾ ಪ್ರತ್ಯುತ್ತರವಾಗಿ ದೊಡ್ಡ ಶಬ್ದ ದಿಂದ--ನೀನು ಹೇಳಿದ ಪ್ರಕಾರವೇ ನಾವು ಮಾಡ ಬೇಕು, 13 ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ. 14 ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು. 15 ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು. 16 ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು. 17 ಅನ್ಯ ಸ್ತ್ರೀಯ ರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೇ ತಿಂಗಳ ಮೊದಲನೇ ದಿವಸದಲ್ಲಿ ಮುಗಿಸಿದರು. 18 ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ. 19 ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು. 20 ಇಮ್ಮೇರನ ಕುಮಾರರಲ್ಲಿ ಹನಾನೀ, 21 ಜೆಬದ್ಯ, ಹಾರೀಮನ ಕುಮಾರರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಉಜ್ಜೀಯ. 22 ಪಷ್ಹೂರನ ಕುಮಾರರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾ ಯೇಲ್, ನೆತನೇಲ್, ಯೋಜಾಬಾದ್, ಎಲ್ಲಾಸ. 23 ಲೇವಿಯರಲ್ಲಿ ಸಹ ಯೋಜಾಬಾದ್, ಶಿವ್ಮೆಾ, ಕೆಲೀಟನೆಂಬ ಕೇಲಾಯ, 24 ಪೆತಹ್ಯ, ಯೆಹೂದ, ಎಲೀಯೆಜೆರ್. ಹಾಡುಗಾರರಲ್ಲಿ ಸಹ ಎಲ್ಯಾಷೀಬ್; ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್, ಊರೀ. 25 ಇಸ್ರಾಯೇಲ್ಯರ ಪರೋಷ್ ಕುಮಾರರಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ, ಬೆನಾಯನು. 26 ಏಲಾಮನ ಕುಮಾರರಲ್ಲಿ ಮತ್ತನ್ಯ; ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್, ವಿಲೀಯ. 27 ಜತ್ತೂವಿನ ಕುಮಾರರಲ್ಲಿ ಎಲ್ಯೋವೇನ್ಯೆ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ್, ಅಜೀಜಾ. 28 ಬೇಬೈನ ಕುಮಾರರಲ್ಲಿ ಯೊಹೋಹಾ ನಾನ್, ಹನನ್ಯ, ಜಬ್ಬೈ, ಅತ್ಲೈ. 29 ಬಾನೀಯ ಕುಮಾರರಲ್ಲಿ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್, ರಾಮೋತ್. 30 ಪಹತ್ ಮೋವಾಬ್ ಕುಮಾರರಲ್ಲಿ ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್, ಮನಸ್ಸೆ. 31 ಹಾರೀಮನ ಕುಮಾರರಲ್ಲಿ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್, 32 ಬೆನ್ಯಾವಿಾನ್, ಮಲ್ಲೂಕ್, ಶೆಮರ್ಯ. 33 ಹಾಷೂ ಮನ ಕುಮಾರರಲ್ಲಿ ಮತ್ತೆನೈ, ಮತ್ತತ್ತ, ಜಾಬಾದ್, ಎಲೀಫೆಲೆಟ್, ಯೆರೇಮೈ, ಮನಸ್ಸೆ, ಶಿವ್ಮೆಾ. 34 ಬಾನೀಯ ಕುಮಾರರಲ್ಲಿ ಮಾದೈ, ಅಮ್ರಾಮ್, ಊವೇಲ್, 35 ಬೆನಾಯ, ಬೇದೆಯ, ಕೆಲೂಹು, 36 ವನ್ಯಾಹ, ಮೆರೇಮೋತ, ಎಲ್ಯಾಷೀಬ್ 37 ಮತ್ತನ್ಯ, ಮತ್ತೆನೈ, ಶಿವ್ಮೆಾ, ಯಾಸೈ, 38 ಬಾನೀ, ಬಿನ್ನೂಯ್, 39 ಶೆಲೆಮ್ಯ, ನಾತಾನ್, ಅದಾಯ, 40 ಮಕ್ನದೆಬೈ, ತಾಷೈ, ಶಾರೈ, 41 ಅಜರೇಲ್, ಶೆಲೆಮ್ಯ, ಶೆಮರ್ಯ, 42 ಶಲ್ಲೂಮ್, ಅಮರ್ಯ, ಯೋಸೇಫ್, 43 ನೆಬೋನ ಕುಮಾರರಲ್ಲಿ ಯೆಗೀಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋವೇಲ್, ಬೆನಾಯ. 44 ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.
1 ಹಕಲ್ಯನ ಮಗನಾದ ನೆಹೆವಿಾಯನ ಮಾತುಗಳು. ಇಪ್ಪತ್ತನೇ ವರುಷದ ಕಿಸ್ಲೇವ್ ತಿಂಗಳಲ್ಲಿ ನಾನು ಶೂಷನ್ ಅರಮನೆಯಲ್ಲಿ ರುವಾಗ ಏನಾಯಿತಂದರೆ, ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯೂ ಯೆಹೂದದಲ್ಲಿದ್ದ ಕೆಲವರು ಬಂದರು. 2 ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು. 3 ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು. 4 ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ-- 5 ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ, 6 ನಿನ್ನ ಸೇವಕರಾದ ಇಸ್ರಾಯೇಲ್ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ. 7 ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ. 8 ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು. 9 ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ. 10 ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ. 11 ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
1 ಅರಸನಾದ ಅರ್ತಷಸ್ತನ ಇಪ್ಪತ್ತನೇವರುಷದ ನೀಸಾನ್ ತಿಂಗಳಲ್ಲಿ ಏನಾಯಿ ತಂದರೆ, ಅವನ ಮುಂದೆ ದ್ರಾಕ್ಷಾರಸವಿರುವಾಗ ನಾನು ಆ ದ್ರಾಕ್ಷಾರಸವನ್ನು ತಕ್ಕೊಂಡು ಅರಸನಿಗೆ ಕೊಟ್ಟೆನು. ಆದರೆ ಇದಕ್ಕೆ ಮುಂಚೆ ನಾನು ಅವನ ಸಮ್ಮುಖ ದಲ್ಲಿ ದುಃಖಿತನಾಗಿದ್ದದ್ದಿಲ್ಲ. 2 ಆದಕಾರಣ ಅರಸನು ನನಗೆ--ನಿನಗೆ ಕಾಯಿಲೆ ಇಲ್ಲದೆ ನಿನ್ನ ಮುಖವು ದುಃಖವಾಗಿರುವದೇನು? ನಿನಗೆ ರೋಗವಿಲ್ಲವಲ್ಲಾ? ಇದು ಮನೋ ದುಃಖವಲ್ಲದೆ ಮತ್ತೊಂದಲ್ಲ ಅಂದನು. 3 ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು. 4 ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು. 5 ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು. 6 ರಾಣಿಯು ತನ್ನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ--ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರಿಗಿ ಯಾವಾಗ ಬರುತ್ತೀ ಅಂದನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿ ಪಟ್ಟನು; ನಾನು ಅವನಿಗೆ ಸಮಯ ಗೊತ್ತು ಮಾಡಿ ದೆನು. 7 ಇದಲ್ಲದೆ ನಾನು ಅರಸನಿಗೆ--ಅರಸನಿಗೆ ಸಮ್ಮತಿಸಿದರೆ ನಾನು ಯೆಹೂದಕ್ಕೆ ಹೋಗಿ ಸೇರುವ ತನಕ ನದಿಯ ಆಚೆಯಲ್ಲಿ ಇರುವ ಅಧಿಪತಿಗಳು ನನ್ನನ್ನು ಸಾಗಕಳುಹಿಸುವ ಹಾಗೆ ಅವರಿಗೋಸ್ಕರ ನನಗೆ ಪತ್ರಗಳು ಕೊಡಲ್ಪಡಲಿ. 8 ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು. 9 ಆಗ ನಾನು ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ ಕುದುರೆ ಸವಾರರನ್ನೂ ಕಳುಹಿಸಿದನು. 10 ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು. 11 ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ ನಾನೂ ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು. 12 ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ. 13 ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು. 14 ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು. ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು. 15 ಆ ರಾತ್ರಿಯಲ್ಲಿ ನಾನು ಹಳ್ಳದ ಮಾರ್ಗವಾಗಿ ಹೋಗಿ ಗೋಡೆಯನ್ನು ಚೆನ್ನಾಗಿ ನೋಡಿ ತಿರುಗಿಕೊಂಡು ತಗ್ಗಿನ ಬಾಗಲಿಂದ ಪ್ರವೇಶಿಸಿ ತಿರಿಗಿ ಬಂದೆನು. 16 ನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ಆ ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ. 17 ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ. 18 ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು. 19 ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು. 20 ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
1 ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು. 2 ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು. 3 ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು. 4 ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು. 5 ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ. 6 ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು. 7 ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು. 8 ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು. 9 ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು. 10 ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು. 11 ಹಾರೀಮನ ಮಗನಾದ ಮಲ್ಕೀ ಯನೂ ಪಹತ್ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು. 12 ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು. 13 ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು. 14 ಆದರೆ ಬೆತ್ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು. 15 ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು. 16 ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು. 17 ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು. 18 ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು. 19 ಇವನ ತರು ವಾಯ ಮಿಚ್ಪದ ಅಧಿಪತಿಯಾದ ಯೇಷೂವನ ಮಗ ನಾದ ಏಜ್ರನು ಮೂಲೆಯಲ್ಲಿ ಆಯುಧ ಶಾಲೆಗೆ ಹೋಗುವ ಸ್ಥಳಕ್ಕೆ ಎದುರಾಗಿ ಮತ್ತೊಂದು ಪಾಲನ್ನು ಭದ್ರಪಡಿಸಿದನು. 20 ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು. 21 ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು. 22 ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು. 23 ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು. 24 ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು. 25 ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು. 26 ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು. 27 ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು. 28 ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು. 29 ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು. 30 ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು. 31 ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು. 32 ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
1 ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ-- 2 ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು. 3 ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು. 4 ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು. 5 ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ. 6 ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು. 7 ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ 8 ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು. 9 ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು. 10 ಆಗ ಯೆಹೂದದವರು--ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು. 11 ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು. 12 ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದಾಗನೀವು ತಿರುಗುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಬಂದಾರು ಎಂದು ನಮಗೆ ಹತ್ತುಸಾರಿ ಹೇಳಿದರು. 13 ಆದಕಾರಣ ನಾನು ಗೋಡೆಗೆ ಹಿಂದಾಗಿರುವ ತಗ್ಗಿನ ಸ್ಥಳಗಳಲ್ಲಿಯೂ ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು; ತಮ್ಮ ಕತ್ತಿಗಳನ್ನೂ ಈಟಿಗ ಳನ್ನೂ ಬಿಲ್ಲುಗಳನ್ನೂ ಹಿಡುಕೊಂಡಿರುವ ಜನವನ್ನು ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು. 14 ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು. 15 ಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು. 16 ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು. 17 ಗೋಡೆಯ ಮೇಲೆ ಕಟ್ಟುವವರೂ ಹೊರೆಗಾರರೂ ಹೊರಿಸುವವರೂ ಒಂದು ಕೈಯಲ್ಲಿ ಕೆಲಸವನ್ನು ನಡಿಸಿ ಮತ್ತೊಂದು ಕೈಯಲ್ಲಿ ಆಯುಧವನ್ನು ಹಿಡುಕೊಂಡಿದ್ದರು. 18 ಕಟ್ಟು ವವರು ಒಬ್ಬೊಬ್ಬರು ತಮ್ಮ ಕತ್ತಿಯನ್ನು ತಮ್ಮ ನಡುವಿ ನಲ್ಲಿ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವ ವನು ನನ್ನ ಬಳಿಯಲ್ಲಿದ್ದನು. 19 ಆಗ ನಾನು ಪ್ರಮುಖ ರಿಗೂ ಅಧಿಕಾರಸ್ಥರಿಗೂ ಇತರ ಜನರಿಗೂ--ಕೆಲಸವು ದೊಡ್ಡದೂ ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿದ್ದೇವೆ. 20 ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು. 21 ಹೀಗೆಯೇ ಅರ್ಧ ಜನರು ಈಟಿಗಳನ್ನು ಹಿಡುಕೊಂಡು ಉದಯ ಮೊದಲುಗೊಂಡು ನಕ್ಷತ್ರ ಗಳನ್ನು ಕಾಣುವ ಮಟ್ಟಿಗೂ ನಾವು ಕೆಲಸದಲ್ಲಿ ಕಷ್ಟ ಪಟ್ಟೆವು. 22 ಇದಲ್ಲದೆ ಆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ. 23 ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
1 ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು. 2 ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು. 3 ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು. 4 ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ. 5 ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು. 6 ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು. 7 ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು. 8 ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು. 9 ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ. 10 ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು. 11 ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು. 12 ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು. 13 ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು. 14 ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ. 15 ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ. 16 ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು. 17 ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರ ಹೊರ ತು ಯೆಹೂದ್ಯರೂ ಅಧಿಕಾರಸ್ಥರೂ ನೂರ ಐವತ್ತು ಮಂದಿ ನನ್ನ ಮೇಜಿಗೆ ಸೇರುತ್ತಿದ್ದರು. 18 ಪ್ರತಿದಿನಕ್ಕೆ ಸಿದ್ಧಮಾಡಿದ್ದೇನಂದರೆ, ಒಂದು ಎತ್ತೂ ಉತ್ತಮವಾದ ಆರು ಕುರಿಗಳೂ; ಕೋಳಿಗಳೂ, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವೂ ನನಗೋಸ್ಕರ ಸಿದ್ಧಮಾಡಲ್ಪಟ್ಟವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದದರಿಂದ ನಾನು ಅಧಿಪತಿಯಾದವನ ರೊಟ್ಟಿಯನ್ನು ಇದಕ್ಕೋಸ್ಕರ ಕೇಳಿದ್ದಿಲ್ಲ. 19 ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
1 ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ 2 ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು. 3 ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು. 4 ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಅವರಿಗೆ ಪ್ರತ್ಯುತ್ತರ ಕಳುಹಿಸಿದೆನು. 5 ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು. 6 ಅದ ರಲ್ಲಿ--ನೀನೂ ಯೆಹೂದ್ಯರೂ ತಿರಿಗಿ ಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಕಟ್ಟಿಸುತ್ತಿದ್ದೀ. 7 ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ಈ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು. 8 ಆಗ ನಾನು--ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು. 9 ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು. 10 ಆದದರಿಂದ ಈಗ ಓ ದೇವರೇ, ನನ್ನ ಕೈಗಳನ್ನು ಬಲಪಡಿಸು ಅಂದೆನು. ತರುವಾಯ ನಾನು ಅಡಗಿ ಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನುನಿನ್ನನ್ನು ಕೊಂದುಹಾಕಲು ಬರುತ್ತಾರೆ. ಹೌದು, ರಾತ್ರಿಯಲ್ಲಿ ನಿನ್ನನ್ನು ಕೊಂದು ಹಾಕಲು ಬರುತ್ತಾರೆ ಆದದರಿಂದ ನಾವಿಬ್ಬರೂ ದೇವರ ಆಲಯದಲ್ಲಿ ಪ್ರವೇಶಿಸಿ ಮಂದಿರದ ಬಾಗಲುಗಳನ್ನು ಮುಚ್ಚೊಣ ಬಾ ಅಂದನು. 11 ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು. 12 ಆಗ ಇಗೋ, ದೇವರು ಅವನನ್ನು ಕಳುಹಿಸಲಿಲ್ಲ; ಅವನೇ ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿದನೆಂದು ನಾನು ಗ್ರಹಿಸಿಕೊಂಡೆನು. ಟೋಬೀಯನೂ ಸನ್ಬಲ್ಲ ಟನೂ ಅವನಿಗೆ ಕೂಲಿ ಕೊಟ್ಟರು. 13 ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವ ಹಾಗೆಯೂ ಅವರು ನನ್ನನ್ನು ನಿಂದಿಸುವದಕ್ಕೆ ಅಪಕೀರ್ತಿಯಾದ ಕಾರಣವು ಅವರಿಗೆ ಉಂಟಾಗುವ ಹಾಗೆಯೂ ಅವನಿಗೆ ಕೂಲಿ ಕೊಡಲ್ಪಟ್ಟಿತು. 14 ನನ್ನ ದೇವರೇ, ನೀನು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ ಸನ್ಬಲ್ಲಟ ನನ್ನೂ ನನ್ನನ್ನು ಭಯಪಡಿಸುವವರಾಗಿದ್ದ ಪ್ರವಾದಿನಿ ಯಾದ ನೋವದ್ಯಳನ್ನೂ ಮಿಕ್ಕಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೋ. 15 ಹೀಗೆಯೇ ಗೋಡೆಯು ಐವತ್ತೆರಡು ದಿವಸ ಗಳಲ್ಲಿ ಎಲುಲ್ ತಿಂಗಳ ಇಪ್ಪತ್ತೈದನೇ ದಿವಸದಲ್ಲಿ ತೀರಿತು. 16 ನಮ್ಮ ಶತ್ರುಗಳು ಅದನ್ನು ಕೇಳಿದಾಗಲೂ ನಮ್ಮ ಸುತ್ತಲಿದ್ದ ಜನಾಂಗಗಳು ಇದನ್ನು ನೋಡಿ ದಾಗಲೂ ಅವರು ತಮ್ಮ ದೃಷ್ಟಿಯಲ್ಲಿ ಬಹಳ ಕುಂದಿ ಹೋದರು. ಯಾಕಂದರೆ ಈ ಕಾರ್ಯವು ನಮ್ಮ ದೇವರಿಂದ ಉಂಟಾಯಿತೆಂದು ಅವರು ತಿಳಿದು ಕೊಂಡರು. 17 ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಮುಖ್ಯಸ್ಥರು ಟೋಬೀಯನ ಬಳಿಗೆ ಬಹಳ ಪತ್ರ ಗಳನ್ನು ಕಳುಹಿಸಿದರು. ಟೋಬೀಯನ ಪ್ರತ್ಯುತ್ತರ ಗಳು ಅವರಿಗೆ ಬಂದವು. 18 ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು. 19 ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
1 ನಾನು ಗೋಡೆಯನ್ನು ಕಟ್ಟಿಸಿ ಬಾಗಲುಗಳನ್ನು ನಿಲ್ಲಿಸಿದ ತರುವಾಯ ಬಾಗಲು ಕಾಯುವವರೂ ಹಾಡುಗಾರರೂ ಲೇವಿಯರೂ ನೇಮಿಸಲ್ಪಟ್ಟರು. 2 ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು. 3 ಆಗ ನಾನು ಅವರಿಗೆ--ಬಿಸಿಲು ಏರುವ ಪರ್ಯಂತರಕ್ಕೂ ಯೆರೂಸಲೇಮಿನ ಬಾಗಲುಗಳನ್ನು ತೆರೆಯಬಾರದು; ಇದಲ್ಲದೆ ನೀವು ಸವಿಾಪದಲ್ಲಿ ನಿಂತಿರುವಾಗ, ಕದಗ ಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ; ಯೆರೂಸಲೇಮಿನ ನಿವಾಸಿಗಳಿಂದ ಪ್ರತಿ ಮನುಷ್ಯನು ತನ್ನ ಕಾವಲಿನ ಲ್ಲಿಯೂ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾ ಗಿಯೂ ಕಾವಲಾಗಿರಲು ನೇಮಿಸಿರೆಂದು ಹೇಳಿದೆನು. 4 ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ. 5 ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು. 6 ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ 7 ತಮ್ಮ ತಮ್ಮ ಪಟ್ಟಣಕ್ಕೂ ಜೆರುಬ್ಬಾಬೆಲಿನ ಸಂಗಡ ಬಂದ ದೇಶದ ಮಕ್ಕಳು ಯಾರಂದರೆ ಯೇಷೂವನು, ನೆಹೆವಿಾಯನು, ಅಜ ರ್ಯನು, ರಗಮ್ಯನು, ನಹಮಾನೀಯನು, ಮೊರ್ದೆಕೈ ಯನು, ಬಿಲ್ಷಾನನು, ಮಿಸ್ಪೆರೆತನು, ಬಿಗ್ವೈಯು, ನೆಹೂಮನು, ಬಾಣನು, ಇಸ್ರಾಯೇಲ್ ಜನರ ಲೆಕ್ಕವು: 8 ಪರೋಷನ ಮಕ್ಕಳು ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು. 9 ಶೆಫಟ್ಯನ ಮಕ್ಕಳು ಮುನ್ನೂರ ಎಪ್ಪತ್ತೆರಡು ಮಂದಿಯು. 10 ಆರಹನ ಮಕ್ಕಳು ಆರು ನೂರ ಐವತ್ತೆರಡು ಮಂದಿಯು. 11 ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು. 12 ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕುಮಂದಿಯು. 13 ಜತ್ತೂವಿನ ಮಕ್ಕಳು ಎಂಟು ನೂರನಾಲ್ಪತ್ತೈದು ಮಂದಿಯು. 14 ಜಕ್ಕೈಯ ಮಕ್ಕಳು ಏಳು ನೂರ ಅರವತ್ತು ಮಂದಿಯು. 15 ಬಿನ್ನೂಯ ಮಕ್ಕಳು ಆರು ನೂರ ನಾಲ್ವತ್ತೆಂಟು ಮಂದಿಯು. 16 ಬೇಬೈಯ ಮಕ್ಕಳು ಆರು ನೂರ ಇಪ್ಪತ್ತೆಂಟು ಮಂದಿಯು. 17 ಅಜ್ಗಾದನ ಮಕ್ಕಳು ಎರಡು ಸಾವಿರದ ಮುನ್ನೂರ ಇಪ್ಪತ್ತೆರಡು ಮಂದಿಯು. 18 ಅದೋನೀಕಾಮನ ಮಕ್ಕಳು ಆರು ನೂರ ಅರವತ್ತೇಳು ಮಂದಿಯು. 19 ಬಿಗ್ವೈಯ ಮಕ್ಕಳು ಎರಡು ಸಾವಿರದ ಅರವತ್ತೇಳು ಮಂದಿಯು. 20 ಆದೀ ನನ ಮಕ್ಕಳು ಆರುನೂರ ಐವತ್ತೈದು ಮಂದಿಯು. 21 ಹಿಜ್ಕೀಯನ ಮಗನಾದ ಅಟೇರನ ಮಕ್ಕಳು ತೊಂಭತ್ತೆಂಟು ಮಂದಿಯು. 22 ಹಾಷುಮನ ಮಕ್ಕಳು ಮುನ್ನೂರ ಇಪ್ಪತ್ತೆಂಟು ಮಂದಿಯು. 23 ಬೇಚೈಯ ಮಕ್ಕಳು ಮುನ್ನೂರ ಇಪ್ಪತ್ತನಾಲ್ಕು ಮಂದಿಯು. 24 ಹಾರಿಫನ ಮಕ್ಕಳು ನೂರ ಹನ್ನೆರಡು ಮಂದಿಯು. 25 ಗಿಬ್ಯೋನನ ಮಕ್ಕಳು ತೊಂಭತ್ತೈದು ಮಂದಿಯು. 26 ಬೇತ್ಲೆಹೇಮಿನವರೂ ನೆಟೋಫದವರೂ ನೂರ ಎಂಭತ್ತೆಂಟು ಮಂದಿಯು. 27 ಅನಾತೋತಿನ ಮನು ಷ್ಯರು ನೂರ ಇಪ್ಪತ್ತೆಂಟು ಮಂದಿಯು. 28 ಬೇತಜ್ಮಾವೆ ತಿನವರು ನಾಲ್ವತ್ತೆರಡು ಮಂದಿಯು. 29 ಕಿರ್ಯಾ ತ್ಯಾರೀಮ್ ಕೆಫೀರವು ಬೇರೋತು ಎಂಬ ಪಟ್ಟಣಗಳ ಮನುಷ್ಯರು ಏಳು ನೂರ ನಾಲ್ವತ್ತ ಮೂರುಮಂದಿಯು. 30 ರಾಮವು ಗೆಬವು ಎಂಬ ಪಟ್ಟಣಗಳ ಮನುಷ್ಯರು ಆರು ನೂರ ಇಪ್ಪತ್ತೊಂದು ಮಂದಿಯು. 31 ಮಿಕ್ಮಾಸಿ ನವರು ನೂರ ಇಪ್ಪತ್ತೆರಡು ಮಂದಿಯು. 32 ಬೇತೇಲ್ ಆಯಿಯು ಎಂಬ ಪಟ್ಟಣಗಳ ಮನುಷ್ಯರು ನೂರ ಇಪ್ಪತ್ತ ಮೂರು ಮಂದಿಯು. 33 ಮತ್ತೊಂದು ನೆಬೋ ವಿನವರು ಐವತ್ತೆರಡು ಮಂದಿಯು. 34 ಮತ್ತೊಬ್ಬ ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. 35 ಹಾರೀಮನ ಮಕ್ಕಳು ಮುನ್ನೂರ ಇಪ್ಪತ್ತು ಮಂದಿಯು. 36 ಯೆರಿಕೋವಿನ ಮಕ್ಕಳು ಮುನ್ನೂರ ನಾಲ್ವತ್ತೈದು ಮಂದಿಯು. 37 ಲೋದು ಹಾದೀದು ಓನೋನು ಎಂಬವರ ಮಕ್ಕಳು ಏಳುನೂರ ಇಪ್ಪತ್ತೊಂದು ಮಂದಿಯು. 38 ಸೇನಾಹಯನ ಮಕ್ಕಳು ಮೂರು ಸಾವಿರದ ಒಂಭೈನೂರು ಮೂವತ್ತು ಮಂದಿಯು. 39 ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು. 40 ಇಮ್ಮೇ ರನ ಮಕ್ಕಳು ಸಾವಿರದ ಐವತ್ತೆರಡು ಮಂದಿಯು. 41 ಪಷ್ಹೂರನ ಮಕ್ಕಳು ಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು. 42 ಹಾರಿಮನ ಮಕ್ಕಳು ಸಾವಿರದ ಹದಿ ನೇಳು ಮಂದಿಯು. 43 ಲೇವಿಯರು: ಕದ್ಮೀಯೇಲನ ಮನೆಯವನಾದ ಯೇಷೂವನ ಮಕ್ಕಳು ಹೋದವ್ಯನ ಮಕ್ಕಳೂ ಎಪ್ಪತ್ತು ನಾಲ್ಕು ಮಂದಿಯು. 44 ಹಾಡು ಗಾರರು; ಆಸಾಫನ ಮಕ್ಕಳು ನೂರ ನಾಲ್ವತ್ತೆಂಟು ಮಂದಿಯು. 45 ದ್ವಾರಪಾಲಕರಾದ ಶಲ್ಲೂಮನ ಮಕ್ಕಳು ಅಟೇರನ ಮಕ್ಕಳು ಟಲ್ಮೋನನ ಮಕ್ಕಳು ಅಕ್ಕೂಬನ ಮಕ್ಕಳು ಹಟೀಟನ ಮಕ್ಕಳು ಶೋಬೈಯ ಮಕ್ಕಳೂ ನೂರ ಮೂವತ್ತೆಂಟು ಮಂದಿಯು. 46 ನೆತಿನಿಯರು: ಜೀಹನ ಮಕ್ಕಳು, ಹಸೂಫನ ಮಕ್ಕಳು, ಟಬ್ಬಾವೋತನ ಮಕ್ಕಳು, 47 ಕೇರೋಸನ ಮಕ್ಕಳು, ಸೀಯನ ಮಕ್ಕಳು, ಪಾದೋನನಮಕ್ಕಳು, 48 ಲೆಬಾನನ ಮಕ್ಕಳು, ಹಗಾಬನ ಮಕ್ಕಳು, ಸಲ್ಮೈಯ ಮಕ್ಕಳು, 49 ಹಾನಾನನ ಮಕ್ಕಳು, ಗಿದ್ದೇಲನ ಮಕ್ಕಳು ಗಹರನ ಮಕ್ಕಳು 50 ರೆವಾಯನ ಮಕ್ಕಳು, ರೆಚೀನನ ಮಕ್ಕಳು, ನೆಕೋದನ ಮಕ್ಕಳು, 51 ಗಜ್ಜಾಮನ ಮಕ್ಕಳು, ಉಜ್ಜನ ಮಕ್ಕಳು, ಪಾಸೇಹನ ಮಕ್ಕಳು, 52 ಬೇಸೈನ ಮಕ್ಕಳು, ಮೆಯನೀಮ್ರ ಮಕ್ಕಳು, ನೆಫೀಷೆಸೀಮನ ಮಕ್ಕಳು, 53 ಬಕ್ಬೂಕನ ಮಕ್ಕಳು, ಹಕೂಫನ ಮಕ್ಕಳು, ಹರ್ಹೂರನ ಮಕ್ಕಳು, 54 ಬಚ್ಲೂತನ ಮಕ್ಕಳು, ಮೆಹೀದನ ಮಕ್ಕಳು, ಹರ್ಷನ ಮಕ್ಕಳು, 55 ಬರ್ಕೋ ಸನ ಮಕ್ಕಳು ಸೀಸೆರನ ಮಕ್ಕಳು, ತೆಮಹನ ಮಕ್ಕಳು, 56 ನೆಚೀಹನ ಮಕ್ಕಳು, ಹಟೀಫನ ಮಕ್ಕಳು. 57 ಸೊಲೋಮೋನನ ಸೇವಕರ ಮಕ್ಕಳು ಯಾರಂದರೆ--ಸೋಟೈಯ ಮಕ್ಕಳು, ಸಫೆರತಳು ಮಕ್ಕಳು, ಪೆರೀದನ ಮಕ್ಕಳು 58 ಯಾಲನ ಮಕ್ಕಳು, ದರ್ಕೋನನ ಮಕ್ಕಳು, ಗಿದ್ದೇಲನ ಮಕ್ಕಳು, 59 ಶೆಫ ಟ್ಯನ ಮಕ್ಕಳು, ಹಟ್ಟೇಲನ ಮಕ್ಕಳು, ಹಚ್ಚೆಬಾಯಾಮಿನ, ಪೋಕೆರತನ ಮಕ್ಕಳು, 60 ಅಮೋನನ ಮಕ್ಕಳುನೆತಿನಿಯರೂ ಸೊಲೊಮೋನನ ಸೇವಕರ ಮಕ್ಕಳೂ ಕೂಡ ಮುನ್ನೂರ ತೊಂಭತ್ತೆರಡು ಮಂದಿಯು. 61 ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್, ಇಮ್ಮೇರ್ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆ 62 ದೆಲಾಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ ಆರು ನೂರ ನಾಲ್ವತ್ತೆರಡು ಮಂದಿಯು. 63 ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು. 64 ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು. 65 ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು. 66 ಈ ಸಭೆಯವರೆಲ್ಲಾ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿದ್ದರು. 67 ಇವರ ಹೊರತಾಗಿ ಇವರ ದಾಸರೂ ದಾಸಿಗಳೂ ಏಳು ಸಾವಿ ರದ ಮುನ್ನೂರ ಮೂವತ್ತೇಳು ಮಂದಿಯೂ ಇವರ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರ ನಾಲ್ವತ್ತೈದು ಮಂದಿಯೂ ಇದ್ದರು. 68 ಇವರ ಕುದುರೆ ಗಳು ಏಳು ನೂರಮೂವತ್ತಾರು, ಇವರ ಹೇಸರಕತ್ತೆಗಳು ಇನ್ನೂರ ನಾಲ್ವತ್ತೈದು; 69 ಒಂಟೆಗಳು ನಾನೂರ ಮೂವತ್ತೈದು; ಕತ್ತೆಗಳು ಆರು ಸಾವಿರದ ಏಳು ನೂರ ಇಪ್ಪತ್ತು ಇದ್ದವು. 70 ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು. 71 ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು. 72 ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು. 73 ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
1 ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು. 2 ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ 3 ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು. 4 ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು. 5 ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು. 6 ಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್, ಆಮೆನ್ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು 7 ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು. 8 ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು. 9 ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು. 10 ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ. 11 ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು. 12 ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು. 13 ಎರಡನೇ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿ ರುವ ಮುಖ್ಯರಾದವರೂ ಯಾಜಕರೂ ಲೇವಿಯರೂ ನ್ಯಾಯಪ್ರಮಾಣದ ಮಾತುಗಳನ್ನು ತಿಳುಕೊಳ್ಳುವ ಹಾಗೆ ಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು. 14 ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು. 15 ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ. 16 ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು. 17 ಈ ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ಆ ದಿವಸದ ವರೆಗೂ ಇಸ್ರಾಯೇಲ್ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು. 18 ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
1 ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು. 2 ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು. 3 ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು. 4 ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು. 5 ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ. 6 ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ. 7 ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟು 8 ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ. 9 ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ. 10 ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ. 11 ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ. 12 ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ. 13 ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ. 14 ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ 15 ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ. 16 ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು. 17 ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ. 18 ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ 19 ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ. 20 ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ. 21 ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ. 22 ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು. 23 ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ; 24 ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ. 25 ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು. 26 ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು. 27 ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ. 28 ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ. 29 ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು. 30 ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ. 31 ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ. 32 ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ. 33 ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು. 34 ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು. 35 ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ. 36 ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ. 37 ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ. 38 ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
1 ಮುದ್ರೆ ಹಾಕಿದವರು ಯಾರಂದರೆ--ಹಕಲ್ಯನ ಮಗನಾದ, 2 ಅಧಿಪತಿಯಾದ ನೆಹೆವಿಾಯನು, ಚಿದ್ಕೀಯನು, ಸೆರಾಯನು, 3 ಅಜ ರ್ಯನು, ಯೆರೆವಿಾಯನು, ಪಷ್ಹೂರನು, ಅಮ ರ್ಯನು, 4 ಮಲ್ಕೀಯನು, ಹಟೂಷನು, ಶೆಬನ್ಯನು, ಮಲ್ಲೂಕನು, 5 ಹಾರಿಮನು, ಮೆರೇಮೋತನು, ಓಬ ದ್ಯನು, 6 ದಾನಿಯೇಲನು, ಗಿನ್ನೆತೋನನು, 7 ಬಾರೂ ಕನು, ಮೆಷುಲ್ಲಾಮನು, ಅಬೀಯನು, ಮಿಯ್ಯಾವಿಾ ನನು, 8 ಮಾಜ್ಯನು, ಬಿಲ್ಗೈಯು, ಶೆಮಾಯನು, ಇವರು ಯಾಜಕರಾಗಿದ್ದರು. 9 ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್, ಕದ್ಮೀ ಯೇಲನು; 10 ಅವರ ಸಹೋದರರಾದ ಶೆಬನ್ಯನು, ಹೋದೀಯನು, ಕೆಲೀಟನು, ಪೆಲಾಯನು, ಹಾನಾ ನನು, 11 ವಿಾಕನು, ರೆಹೋಬನು, ಹಷಬ್ಯನು, 12 ಜಕ್ಕೂರನು, ಶೇರೇಬ್ಯನು, ಶೆಬನ್ಯನು, 13 ಹೋದೀ ಯನು, ಬಾನೀಯು, ಬೆನೀನೂ. 14 ಜನರ ಮುಖ್ಯಸ್ಥರು--ಪರೋಷನು, ಪಹತ್ ಮೋವಾಬನು ಏಲಾಮನು, 15 ಜತ್ತುವು, ಬಾನೀಯು, ಬುನ್ನೀಯು, ಅಜ್ಗಾದನು, ಬೇಬೈಯು, 16 ಅದೋನೀ ಯನು, ಬಿಗ್ವೈಯು, ಆದೀನನು, 17 ಆಟೇರನು, ಹಿಜ್ಕೀಯನು, ಅಜ್ಜೂರನು, 18 ಹೋದೀಯನು, ಹಾಷುಮನು, ಬೇಚೈಯು, 19 ಹಾರೀಫನು, ಅನಾ ತೋತನು, ನೇಬೈಯು, ಮಗ್ಪೀಯಾಷನು, 20 ಮೆಷು ಲ್ಲಾಮನು, ಹೇಜೀರನು, ಮೆಷೇಜಬೇಲನು, 21 ಚಾದೋಕನು, 22 ಯದ್ದೂವನು, ಪೆಲಟ್ಯನು, ಹಾನಾನನು, ಆನಾಯನು, 23 ಹೋಷೇಯನು ಹನ ನ್ಯನು, ಹಷ್ಷೂಬನು, 24 ಹಲೋಹೇಷನು, ಫಿಲ್ಹನು, ಶೋಬೇಕನು, 25 ರೆಹೂಮನು, ಹಷಬ್ನನು ಮಾಸೇ ಯನು, 26 ಅಹೀಯನು, ಹಾನಾನನು, 27 ಆನಾನನು, ಮಲ್ಲೂಕನು, ಹಾರೀಮನು, ಬಾನನು. 28 ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ; 29 ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ; 30 ನಾವು ನಮ್ಮ ಕುಮಾರ್ತೆಯರನ್ನು ಆ ದೇಶದ ಜನರಿಗೆ ಕೊಡುವದಿಲ್ಲ. ನಮ್ಮ ಕುಮಾರರಿಗೆ ಅವರ ಕುಮಾರ್ತೆಯರನ್ನು ತಕ್ಕೊಳ್ಳುವದಿಲ್ಲ 31 ಎಂದೂ ದೇಶದ ಜನರು ಸಬ್ಬತ್ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು. 32 ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ 33 ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು. 34 ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು. 35 ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ; 36 ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು; 37 ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು. 38 ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು. 39 ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
1 ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು. 2 ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು. 3 ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ-- 4 ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು. 5 ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ, 6 ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು. 7 ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು. 8 ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು. 9 ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು. 10 ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು. 11 ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು. 12 ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ. 13 ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ. 14 ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. 15 ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು; 16 ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು. 17 ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು. 18 ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು. 19 ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು. 20 ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು. 21 ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು; 22 ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. 23 ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು. 24 ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು. 25 ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ 26 ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂ 27 ಹಚರ್ಷೂವಲಿ ನಲ್ಲಿಯೂ ಬೇರ್ಷೆಬದಲ್ಲಿಯೂ 28 ಅವುಗಳ ಗ್ರಾಮ ಗಳಲ್ಲಿಯೂ ಚಿಕ್ಲಗನಲ್ಲಿಯೂ ಮೆಕೋನದಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ 29 ಏನ್ರಿಮ್ಮೋನದ ಲ್ಲಿಯೂ ಚೋರ್ರದಲ್ಲಿಯೂ ಯರ್ಮೂತಿನಲ್ಲಿಯೂ 30 ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು. 31 ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ 32 ಅನಾತೋತು ನೋಬು ಅನನ್ಯವು 33 ಹಾಚೋರು ರಾಮಾವು ಗಿತ್ತಯಿಮ್ 34 ಹಾದೀದು ಚೆಬೋ ಯಾಮ್ ನೆಬಲ್ಲಾಟು 35 ಲೋದು ಓನೋನು ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು. 36 ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.
1 ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನ ಸಂಗಡಲೂ ಯೇಷೂವನ ಸಂಗ ಡಲೂ ಹೋದ ಯಾಜಕರೂ ಲೇವಿಯರೂ ಯಾರ ಂದರೆ, 2 ಸೆರಾಯನು ಯೆರೆವಿಾಯನು ಎಜ್ರನು ಅಮರ್ಯನು; 3 ಮಲ್ಲೂಕನು ಹಟ್ಟೂಷನು ಶೆಕನ್ಯನು ರೆಹುಮನು ಮೆರೇಮೋತನು 4 ಇದ್ದೋನು ಗಿನ್ನೆತೋ ನನು ಅಬೀಯನು 5 ಮಿಯ್ಯಾವಿಾನನು ಮಾದ್ಯನು ಬಿಲ್ಗಯನು ಶೆಮಾಯನು 6 ಯೋಯಾರೀಬನು, ಯೆದಾಯನು ಸಲ್ಲೂವು ಆಮೋಕನು ಹಿಲ್ಕೀಯನು ಯೆದಾಯನು. 7 ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು. 8 ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ. 9 ಇದಲ್ಲದೆ ಅವರ ಸಹೋ ದರರಾದ ಬಕ್ಬುಕ್ಯನು ಉನ್ನೀಯು ವರ್ಗಗಳಲ್ಲಿ ಅವರಿಗೆ ಎದುರಾಗಿದ್ದರು. 10 ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು; 11 ಯೋಯಾದನು ಯೋನಾತಾನನನ್ನೂ ಪಡೆದನು; ಯೋನಾತಾನನು ಯದ್ದೂವನನ್ನೂ ಪಡೆದನು. 12 ಯೋಯಾಕೀಮನ ದಿನಗಳಲ್ಲಿ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದ ಯಾಜಕರು ಯಾರಂದರೆ--ಸೆರಾ ಯನ ವಂಶದವನಾದ ಮೆರಾಯನು, 13 ಯೆರೆವಿಾ ಯನ ವಂಶದವರಾದ ಹನನ್ಯನು, ಎಜ್ರನ ವಂಶದ ವನಾದ ಮೆಷುಲ್ಲಾಮನು, ಅಮರ್ಯನ ವಂಶದವ ನಾದ ಯೆಹೋಹಾನಾನನು, 14 ಮಲ್ಲೂಕಿಯ ವಂಶ ದವನಾದ ಯೋನಾತಾನನು, 15 ಶೆಬನ್ಯನ ವಂಶದವ ನಾದ ಯೋಸೇಫನು, ಹಾರಿಮನ ವಂಶದವನಾದ ಅದ್ನನು, 16 ಮೆರಾಯೋತನ ವಂಶದವನಾದ ಹೆಲ್ಕೈ ನು, ಇದ್ದೋನನ ವಂಶದವನಾದ ಜೆಕರ್ಯನು, ಗಿನ್ನೆ ತೋನನ ವಂಶದವನಾದ ಮೆಷುಲ್ಲಾಮನು, 17 ಅಬೀ ಯನ ವಂಶದವನಾದ ಜಿಕ್ರಿಯು, 18 ಮಿನ್ಯಾವಿಾ ನನ, ಮೋವದ್ಯನ ವಂಶದವನಾದ ಪಿಲ್ಟೈಯನು; ಬಿಲ್ಗಾನ ವಂಶದವನಾದ ಶಮ್ಮೂವನು, ಶೆಮಾಯನ ವಂಶದವನಾದ ಯೆಹೋನಾತಾನನು, 19 ಯೋಯಾ ರೀಬನ ವಂಶದವನಾದ ಮತ್ತೆನೈಯನು, 20 ಯೆದಾ ಯನ ವಂಶದವನಾದ ಉಜ್ಜೀಯು, ಸಲ್ಲೈಯನ ವಂಶ ದವನಾದ ಕಲ್ಲೈಯನು, 21 ಅಮೋಕನ ವಂಶದವ ನಾದ ಏಬರನು, ಹಿಲ್ಕೀಯನ ವಂಶದವನಾದ ಹಷ ಬ್ಯನು, ಯೆದಾಯನ ವಂಶದವನಾದ ನೆತನೇಲನು. 22 ಎಲ್ಯಾಷೀಬನು, ಯೋಯಾದನು, ಯೋಹಾ ನಾನನು, ಯದ್ದೂವನು, ಇವರ ದಿವಸಗಳಲ್ಲಿ ಲೇವಿಯರೂ ಯಾಜಕರೂ ಪಾರಸಿಯನಾದ ದಾರ್ಯಾವೆ ಷನ ಆಳಿಕೆಯ ವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆ ಯಲ್ಪಟ್ಟಿದ್ದರು. 23 ಎಲ್ಯಾಷೀಬನ ಮಗನಾದ ಯೋಹಾ ನಾನನ ಕಾಲದ ವರೆಗೆ ಲೇವಿ ಎಂಬವನ ಮಕ್ಕಳಾದ ಪಿತೃಗಳ ಮುಖ್ಯಸ್ಥರು ವೃತಾಂತಗಳ ಪುಸ್ತಕದಲ್ಲಿ ಬರೆ ಯಲ್ಪಟ್ಟಿದ್ದರು. 24 ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು. 25 ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು. 26 ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು. 27 ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು. 28 ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ 29 ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು. 30 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು. 31 ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು. 32 ಅವರ ಹಿಂಭಾಗದಲ್ಲಿ ಹೋಷಾಯನೂ ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ 33 ಅಜರ್ಯನೂ ಎಜ್ರನೂ ಮೆಷುಲ್ಲಾ ಮನೂ 34 ಯೆಹೂದನೂ ಬೆನ್ಯಾವಿಾನನೂ ಶೆಮಾ ಯನೂ ಯೆರೆವಿಾಯನೂ 35 ತುತೂರಿಗಳನ್ನು ಹಿಡಿ ಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗನಾದ ಜಕ್ಕೂರನ ಮಗನಾದ ವಿಾಕಾಯನ ಮಗನಾದ ಮತ್ತ ನ್ಯನ ಮಗನಾದ ಶೆಮಾಯನ ಮಗನಾದ ಯೋನಾ ತಾನನ ಮಗನಾದ ಜೆಕರ್ಯನೂ 36 ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು. 37 ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು. 38 ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು 39 ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು. 40 ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು. 41 ಆಗ ಯಾಜಕರಾದ ಎಲ್ಯಾಕೀಮನೂ ಮಾಸೇ ಯನೂ ಮಿನ್ಯಾವಿಾನನೂ ವಿಾಕಾಯನೂ ಎಲ್ಯೋ ವೇನೈಯನೂ ಜೆಕರ್ಯನೂ ಹನನ್ಯನೂ ತುತೂರಿ ಗಳನ್ನು ಹಿಡಿದುಕೊಂಡವರು; 42 ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು. 43 ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು. 44 ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು. 45 ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು. 46 ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು. 47 ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
1 ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು. 2 ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು. 3 ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು. 4 ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು 5 ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು. 6 ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು 7 ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು. 8 ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು. 9 ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು. 10 ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು. 11 ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು. 12 ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು. 13 ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು. 14 ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ. 15 ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು. 16 ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು. 17 ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು? 18 ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ. 19 ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು. 20 ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು. 21 ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್ ದಿವಸದಲ್ಲಿ ಬರಲೇ ಇಲ್ಲ; 22 ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು. 23 ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು. 24 ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು. 25 ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು; 26 ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು. 27 ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು. 28 ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು. 29 ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು. 30 ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂ 31 ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
1 ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು; 2 ಆ ದಿವಸಗಳಲ್ಲಿ ಅರಸ ನಾದ ಅಹಷ್ವೇರೋಷನು ರಾಜಧಾನಿ ಶೂಷನ್ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ 3 ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು. 4 ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು. 5 ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು. 6 ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು. 7 ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು. 8 ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು. 9 ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು. 10 ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ 11 ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು. 12 ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು. 13 ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ 14 ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್, ಆದ್ಮಾತನು, ತರ್ಷೀಷನು. 15 ಮೆರೆಸನು, ಮರ್ಸೆನಾ, ಮೆಮೂಕಾನನು ಇವರ ಸಂಗಡಲೂ ಅಹಷ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು. 16 ಮೆಮುಕಾನನು ಅರಸನ ಮುಂದೆಯೂ ಪ್ರಧಾ ನರ ಮುಂದೆಯೂ ಹೇಳಿದ್ದೇನಂದರೆ -- ರಾಣಿಯಾದ ವಷ್ಟಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ಸಮಸ್ತ ಪ್ರಧಾನರಿಗೂ ಸಮಸ್ತ ಜನರಿಗೂ ಅಪರಾಧ ಮಾಡಿ ದ್ದಾಳೆ. 17 ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು. 18 ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು. 19 ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ. 20 ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು. 21 ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದ 22 ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
1 ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನ ಕೋಪವು ಶಾಂತ ವಾದಾಗ ಅವನು ವಷ್ಟಿಯನ್ನೂ ಅವಳು ಮಾಡಿದ್ದನ್ನೂ ಅವಳಿಗೆ ವಿರೋಧವಾಗಿ ನೇಮಿಸಿದ್ದನ್ನೂ ಜ್ಞಾಪಕ ಮಾಡಿಕೊಂಡನು. 2 ಆಗ ಅರಸನನ್ನು ಸೇವಿಸುವ ದಾಸರು ಅವನಿಗೆ ಹೇಳಿದ್ದೇನಂದರೆ--ಅರಸನಿಗೋಸ್ಕರ ರೂಪವತಿಯಾದ ಕನ್ಯಾಸ್ತ್ರೀಯರು ಹುಡುಕಲ್ಪಡಲಿ. 3 ರೂಪವತಿಯಾದ ಸಮಸ್ತ ಕನ್ಯಾಸ್ತ್ರೀಯರು ರಾಜ ಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮ ನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿ ಕಾರಿಗಳಾದ ಹೇಗ್ಯನೆಂಬವನ ಕೈಗೆ ಒಪ್ಪಿಸಲ್ಪಡುವ ಹಾಗೆ ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರವನ್ನು ನೇಮಿಸಲಿ; ಅವರಿಗೆ ಶುಚಿ ಮಾಡಿ ಕೊಳ್ಳುವ ವಸ್ತುಗಳು ಕೊಡಲ್ಪಡಲಿ. 4 ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು. 5 ಆದರೆ ಶೂಷನಿನ ಅರಮನೆಯಲ್ಲಿ ಬೆನ್ಯಾವಿಾನ ನವನಾದ ಕೀಷನ ಮಗನಾದ ಶಿವ್ಗೆಾ ಮಗನಾದ ಯಾಯಾರನ ಮಗನಾದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು. 6 ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು. 7 ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು. 8 ಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು. 9 ಆ ಕನ್ನಿಕೆಯು ಅವನ ದೃಷ್ಟಿಗೆ ಉತ್ತಮಳೆಂದು ಕಾಣಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆದೊರಕಿತು. ಆದಕಾರಣ ಅವನು ತ್ವರೆ ಯಾಗಿ ಶುಚಿಮಾಡುವದಕ್ಕೋಸ್ಕರ ಬೇಕಾದವುಗ ಳನ್ನೂ ಅವಳಿಗೆ ಕೊಡತಕ್ಕವುಗಳನ್ನೂ ಅರಸನ ಮನೆ ಯಿಂದ ಕೊಡತಕ್ಕ ಏಳು ಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರ ಮನೆಯಲ್ಲಿ ಉತ್ತಮವಾದ ಸ್ಥಳವನ್ನು ಅವಳಿಗೂ ಅವಳ ದಾಸಿ ಯರಿಗೂ ಕೊಟ್ಟನು. 10 ಆದರೆ ಎಸ್ತೇರಳು ತನ್ನ ಜನರಿಗೂ ತನ್ನ ಬಂಧುಗಳಿಗೂ ತಿಳಿಸದೆ ಇದ್ದಳು. ಯಾಕಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು. 11 ಆದರೆ ಎಸ್ತೇರಳ ಕ್ಷೇಮವನ್ನೂ ಅವಳಿಗೆ ಆಗುವಂಥಾದ್ದನ್ನೂ ತಿಳುಕೊಳ್ಳುವದಕ್ಕೆ ಮೊರ್ದೆಕೈ ದಿನಂಪ್ರತಿಯಲ್ಲಿ ಸ್ತ್ರೀಯರ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು. 12 ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗ ಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗ ಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆ ರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು. 13 ಈ ಪ್ರಕಾರ ಕನ್ಯಾಸ್ತ್ರೀಯು ಅರಸನ ಬಳಿಗೆ ಪ್ರವೇ ಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಮನೆಗೆ ಹೋಗಲು ಅವಳು ಏನು ಬೇಡು ವಳೋ ಅದು ಅವಳಿಗೆ ಕೊಡಲ್ಪಡುವದು. 14 ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷ್ಗಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು. 15 ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು. 16 ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು. 17 ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು. 18 ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು. 19 ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸ ಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು. 20 ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು. 21 ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು. 22 ಈ ಕಾರ್ಯವು ಮೊರ್ದೆ ಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು; ಎಸ್ತೇರಳು ಮೊರ್ದೆ ಕೈಯಿಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳು. 23 ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
1 ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು. 2 ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು. 3 ಆಗ ಅರಮನೆಯ ಬಾಗಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ ನೀನು ಅರಸನ ಆಜ್ಞೆಯನ್ನು ವಿಾರುವದೇನು ಅಂದರು. 4 ಆದರೆ ಅವರು ದಿನ ದಿನ ಅವನಿಗೆ ಹೇಳಿದಾಗ್ಯೂ ಅವನು ಅವರ ಮಾತು ಕೇಳದೆ ಹೋದದರಿಂದ ಅವರು ಮೊರ್ದೆಕೈಯ ಮಾತುಗಳು ನಿಲ್ಲುವವೋ ಎಂದು ನೋಡಿಕೊಳ್ಳಲು ಹಾಮಾನನಿಗೆ ತಿಳಿಸಿದರು. ಯಾಕಂದರೆ ತಾನು ಯೆಹೂದ್ಯನೆಂದು ಅವರಿಗೆ ಹೇಳಿದ್ದನು. 5 ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು. 6 ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು. 7 ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು. 8 ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ. 9 ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು. 10 ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು. 11 ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು. 12 ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು. 13 ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು. 14 ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು. 15 ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
1 ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು. 2 ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ. 3 ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು. 4 ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು. 5 ಆದರೆ ಅವನು ತಕ್ಕೊಳ್ಳಲಿಲ್ಲ. ಆಗ ಎಸ್ತೇರಳು ತನ್ನ ಬಳಿಯಲ್ಲಿ ಇರಿಸಲ್ಪಟ್ಟ ಅರಸನ ಮನೆವಾರ್ತೆಯವರಲ್ಲಿ ಹತಾಕ ನನ್ನು ಕರೆದು--ಇದೇನೆಂದೂ ಯಾತಕ್ಕೆಂದೂ ಮೊರ್ದೆ ಕೈಯಿಂದ ತಿಳಿದುಕೊಳ್ಳಬೇಕೆಂದು ಅವನಿಗೆ ಆಜ್ಞಾ ಪಿಸಿದಳು. 6 ಹಾಗೆಯೇ ಹತಾಕನು ಅರಸನ ಅರ ಮನೆಯ ಬಾಗಲ ಮುಂದಿರುವ ಪಟ್ಟಣದ ಬೀದಿ ಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೊರಟುಹೋದನು. 7 ಆಗ ಮೊರ್ದೆಕೈ ತನಗೆ ಆದದ್ದನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡುವ ನಿಮಿತ್ತ ಅರಸನ ಬೊಕ್ಕಸಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣ ವನ್ನೂ ಅವನಿಗೆ ತಿಳಿಸಿದನು. 8 ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು. 9 ಆಗ ಹತಾಕನು ಬಂದು ಮೊರ್ದೆಕೈಯ ಮಾತು ಗಳನ್ನು ಎಸ್ತೇರಳಿಗೆ ತಿಳಿಸಿದನು. 10 ಎಸ್ತೇರಳು ಮೊರ್ದೆ ಕೈಗೆ ಹೇಳಲು ಹತಾಕನಿಗೆ ಆಜ್ಞಾಪಿಸಿದ್ದೇನಂದರೆ-- 11 ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ 12 ಅವರು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದರು. 13 ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ. 14 ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು. 15 ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ. 16 ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು. 17 ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
1 ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು. 2 ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು. 3 ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು. 4 ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾ ದರೆ ನಾನು ಅವನಿಗೋಸ್ಕರ ಸಿದ್ಧಮಾಡಿದ ಔತಣಕ್ಕೆ ಅರಸನೂ ಹಾಮಾನನೂ ಈಹೊತ್ತು ಬರಬೇಕು ಅಂದಳು. 5 ಆಗ ಅರಸನು--ಎಸ್ತೇರಳು ಹೇಳಿದ ಪ್ರಕಾರ ಮಾಡಲು ಹಾಮಾನನನ್ನು ತ್ವರೆಪಡಿಸಿರಿ ಅಂದನು. ಎಸ್ತೇರಳು ಮಾಡಿಸಿದ ಔತಣಕ್ಕೆ ಅರಸನೂ ಹಾಮಾನನೂ ಬಂದರು. 6 ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು. 7 ಎಸ್ತೇರಳು ಪ್ರತ್ಯುತ್ತರ ಕೊಟ್ಟುನನ್ನ ವಿಜ್ಞಾಪನೆಯೂ ನನ್ನ ಬೇಡಿಕೆಯೂ ಏನಂದರೆ, ನಾನು ಅರಸನ ಸಮ್ಮುಖದಲ್ಲಿ ದಯೆಹೊಂದಿದ್ದರೆ, 8 ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು. 9 ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು. 10 ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು. 11 ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು. 12 ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ. 13 ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು. 14 ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
1 ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು. 2 ಅವು ಅರಸನ ಮುಂದೆ ಓದಲ್ಪಟ್ಟಾಗ ದ್ವಾರಪಾಲಕರಾಗಿದ್ದ ಅರಸನ ಮನೆವಾರ್ತೆಯವರಲ್ಲಿ ಇಬ್ಬರು ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನ ಮೇಲೆ ಕೈಹಾಕಲು ಹುಡುಕುತ್ತಾ ಇದ್ದರೆಂಬುವ ವರ್ತಮಾನ ವನ್ನು ಮೊರ್ದೆಕೈಯು ತಿಳಿಸಿದನೆಂದು ಬರೆಯಲ್ಪಟ್ಟಿದ್ದು ಸಿಕ್ತಿತು. 3 ಆಗ ಅರಸನು--ಇದಕ್ಕೋಸ್ಕರ ಮೊರ್ದೆಕೈಗೆ ಏನಾದರೂ ಘನವೂ ಮಹಿಮೆಯೂ ಮಾಡಲ್ಪಟ್ಟವೋ ಅಂದನು. ಅವನಿಗೆ ಮಾಡಿದ್ದು ಏನೂ ಇಲ್ಲವೆಂದೂ ಅರಸನನ್ನು ಸೇವಿಸುವ ಅವನ ಸೇವಕರು ಹೇಳಿದರು. 4 ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು. 5 ಅರಸನ ಸೇವಕರು ಅವ ನಿಗೆ--ಇಗೋ, ಹಾಮಾನನು ಅಂಗಳದಲ್ಲಿ ನಿಂತಿ ದ್ದಾನೆ ಅಂದರು. ಅರಸನು--ಅವನು ಒಳಗೆ ಬರಲಿ ಅಂದನು. 6 ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು. 7 ಹಾಮಾನನು ಅರಸನಿಗೆ--ಅರಸನು ಘನಪಡಿಸಬೇಕೆಂದಿರುವ ಮನು ಷ್ಯನಿಗೆ ಮಾಡಬೇಕಾದದ್ದೇನಂದರೆ, 8 ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ; 9 ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು. 10 ಆಗ ಅರಸನು ಹಾಮಾನನಿಗೆ--ನೀನು ಹೇಳಿದ ಪ್ರಕಾರವೇ ತ್ವರೆಮಾಡಿ ವಸ್ತ್ರವನ್ನೂ ಕುದುರೆಯನ್ನೂ ತಕ್ಕೊಂಡು ಅರಮನೆಯ ಬಾಗಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಆ ಪ್ರಕಾರ ಮಾಡು. ನೀನು ಹೇಳಿದ್ದೆಲ್ಲಾದರಲ್ಲಿ ಒಂದಾದರೂ ತಪ್ಪಬಾರದು ಅಂದನು. 11 ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು. 12 ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು. 13 ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು. 14 ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
1 ಅರಸನೂ ಹಾಮಾನನೂ ರಾಣಿಯಾದ ಎಸ್ತೇರಳ ಔತಣಕ್ಕೆ ಬಂದರು. 2 ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು. 3 ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ. 4 ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು. 5 ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು. 6 ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು. 7 ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು. 8 ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು. 9 ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು. 10 ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
1 ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು; ಅವನು ತನಗೆ ಏನಾಗಬೇಕೋ ಅದನ್ನು ಎಸ್ತೇರಳು ತಿಳಿಸಿದ್ದಳು. 2 ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು. 3 ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು. 4 ಆಗ ಅರಸನು ಎಸ್ತೇ ರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನಂದರೆ -- 5 ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ. 6 ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು. 7 ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ. 8 ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು. 9 ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು. 10 ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು. 11 ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ 12 ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು. 13 ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು. 14 ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು. 15 ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು. 16 ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು. 17 ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
1 ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು. 2 ಅದೇ ದಿವಸದಲ್ಲಿ ಯೆಹೂದ್ಯರು ಅರಸನಾದ ಅಹ ಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ಕೈ ಹಾಕಲು ಕೂಡಿಕೊಂಡರು. ಆಗ ಅವರ ಭಯವು ಸಮಸ್ತ ಜನರ ಮೇಲೆ ಬಿದ್ದದ್ದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ. 3 ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು. 4 ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು. 5 ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು. 6 ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಯನ್ನು ಕೊಂದರು. 7 ಇದಲ್ಲದೆ ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಕುಮಾರರಾದ ಪರ್ಷಂದತ್ತನು ದಲ್ಫೋನನು ಅಸ್ಪಾತನು 8 ಪೋರಾತನು ಅದಲ್ಯನು ಅರೀದಾತನು 9 ಪರ್ಮಷ್ಟನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು. 10 ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ. 11 ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು. 12 ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು. 13 ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು. 14 ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು. 15 ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ. 16 ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ. 17 ಅಡಾರ್ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು. 18 ಆದರೆ ಶೂಷನಿನಲ್ಲಿರುವ ಯೆಹೂದ್ಯರು ಅದರ ಹದಿಮೂರನೇ ದಿವಸದಲ್ಲಿಯೂ ಹದಿನಾಲ್ಕನೇ ದಿವಸದಲ್ಲಿಯೂ ಕೂಡಿಕೊಂಡರು. ಅದರ ಹದಿನೈದನೇ ದಿವಸದಲ್ಲಿ ಅವರು ವಿಶ್ರಾಂತಿ ಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು; 19 ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು. 20 ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರು ಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ ಹಾಗೆ 21 ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು. 22 ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು. 23 ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊರ್ದೆಕೈ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು. 24 ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು; 25 ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು; 26 ಆದದರಿಂದ ಅವರು ಈ ದಿವಸಗಳನ್ನು ಪೂರೆಂಬ ನಾಮದಿಂದ ಪೂರೀಮ್ ದಿವಸಗಳೆಂದು ಕರೆದರು. 27 ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು. 28 ಇದಲ್ಲದೆ ಈ ದಿವಸ ಗಳು ಜ್ಞಾಪಕಮಾಡಲ್ಪಡುವವು; ಇದು ಪ್ರತಿ ವಂಶದ ಲ್ಲಿಯೂ ಪ್ರತಿ ಕುಟುಂಬದಲ್ಲಿಯೂ ಪ್ರತಿ ಪ್ರಾಂತ್ಯ ದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಆಚರಿಸಲ್ಪಡ ಬೇಕು; ಈ ಪೂರೀಮೆಂಬ ದಿವಸಗಳು ಯೆಹೂದ್ಯ ರೊಳಗಿಂದ ನಿಂತುಹೋಗಬಾರದು; ಅವರ ಸಂತಾನ ದವರಲ್ಲಿ ಅವುಗಳ ಜ್ಞಾಪಕವು ಇಲ್ಲದೆ ಹೋಗಬಾರದು ಎಂದು ನೇಮಕ ಮಾಡಿದರು. 29 ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊರ್ದೆಕೈಯೂ ಈ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿ ಸಲು ಸಮಸ್ತ ಅಧಿಕಾರದಿಂದ ಬರೆಸಿದರು. 30 ಇದ ಲ್ಲದೆ ಈ ಪೂರೀಮೆಂಬ ದಿವಸಗಳನ್ನು ಯೆಹೂದ್ಯ ನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಅವರಿಗೆ ಹೇಳಿದ ಪ್ರಕಾರವೂ ತಮಗೋಸ್ಕರವಾ ಗಿಯೂ ತಮ್ಮ ಸಂತಾನದವರಿಗೋಸ್ಕರವಾಗಿಯೂ 31 ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು. 32 ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.
1 ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು. 2 ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ? 3 ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
1 ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು. 2 ಅವನಿಗೆ ಏಳುಮಂದಿ ಕುಮಾ ರರೂ ಮೂರು ಮಂದಿ ಕುಮಾರ್ತೆಯರೂ ಹುಟ್ಟಿ ದರು. 3 ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು. 4 ಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು. 5 ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು. 6 ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು. 7 ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು. 8 ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು. 9 ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ? 10 ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ. 11 ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು. 12 ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು. 13 ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು. 14 ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ 15 ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. 16 ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. 17 ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು. 18 ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ 19 ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು. 20 ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ 21 ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ. 22 ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
1 ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು. 2 ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು. 3 ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು. 4 ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು. 5 ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು. 6 ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು. 7 ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು. 8 ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು. 9 ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು. 10 ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ. 11 ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು. 12 ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು. 13 ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
1 ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು. 2 ಯೋಬನು ಮಾತನಾಡಿ-- 3 ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ. 4 ಆ ದಿವಸವು ಕತ್ತಲಾಗಲಿ; ಮೇಲಿನಿಂದ ದೇವರು ಅದನ್ನು ಗೌರವಿಸದಿರಲಿ; ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ. 5 ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ. 6 ಆ ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ. 7 ಇಗೋ, ಆ ರಾತ್ರಿಯು ಒಂಟಿಯಾಗಿರಲಿ; ಆನಂದ ಸ್ವರವು ಅದಕ್ಕೆ ಬಾರದಿರಲಿ. 8 ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ. 9 ಅದರ ಸಂಧ್ಯಾರುಣದ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದು ಕೊಳ್ಳಲೂ ಬಾರದಿರಲಿ; ಅದು ದಿನದ ಉದಯವನ್ನು ನೋಡದಿರಲಿ. 10 ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ. 11 ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ? 12 ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ? 13 ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು. 14 ತಮಗೆ ಹಾಳಾದ ಸ್ಥಳಗಳನ್ನು ಕಟ್ಟುವ ಅರಸುಗಳ ಸಂಗಡಲೂ; ಭೂಮಿಯ ಸಲಹೆಗಾರರ ಸಂಗಡಲೂ 15 ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು. 16 ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು. 17 ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ. 18 ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ. 19 ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ. 20 ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ? 21 ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ. 22 ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ 23 ದೇವರು ಸುತ್ತು ಬೇಲಿ ಹಾಕಿದ್ದರಿಂದ ಅಡಗಿದ ಮಾರ್ಗವುಳ್ಳವರಿಗೂ ಬೆಳಕು ಯಾಕೆ? 24 ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ. 25 ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು. 26 ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
1 ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು-- 2 ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು? 3 ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. 4 ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ. 5 ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ; 6 ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ? 7 ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ? 8 ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ. 9 ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ, 10 ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ. 11 ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ. 12 ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು. 13 ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ 14 ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು. 15 ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು. 16 ಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು-- 17 ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ? 18 ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ. 19 ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ. 20 ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ. 21 ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
1 ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ? 2 ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು. 3 ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು. 4 ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು. 5 ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು. 6 ಧೂಳಿನಿಂದ ಕೇಡು ಹುಟ್ಟುವದಿಲ್ಲ. ಭೂಮಿ ಯಿಂದ ಕಷ್ಟ ಮೊಳೆಯುವದಿಲ್ಲ. 7 ಕಿಡಿಗಳು ಹಾರುವ ಪ್ರಕಾರವೇ ಮನುಷ್ಯನು ಕಷ್ಟಕ್ಕಾಗಿ ಹುಟ್ಟುತ್ತಾನೆ. 8 ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು. 9 ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ. 10 ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ; 11 ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ. 12 ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. 13 ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು. 14 ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ 15 ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ. 16 ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು. 17 ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ. 18 ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ. 19 ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು. 20 ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು. 21 ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ. 22 ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ. 23 ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು. 24 ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ. 25 ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ. 26 ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ. 27 ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
1 ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು. 2 ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು. 3 ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು. 4 ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು. 5 ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ? 6 ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ? ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ? 7 ನನ್ನ ಪ್ರಾಣವು ಮುಟ್ಟಲೊಲ್ಲದೆ ಇರು ವಂಥವುಗಳೇ ನನ್ನ ದುಃಖದ ಆಹಾರದ ಹಾಗೆ ಇವೆ. 8 ನನ್ನ ವಿಜ್ಞಾಪನೆಯನ್ನು ದೇವರು ಲಾಲಿಸಿ, ನಾನು ನಿರೀಕ್ಷಿಸಿದ್ದನ್ನು ಆತನು ಕೊಟ್ಟರೆ ಲೇಸು. 9 ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು. 10 ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ. 11 ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು? 12 ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರವು ಹಿತ್ತಾಳೆಯದೋ? 13 ನನ್ನೊಳಗಿನ ಸಹಾಯವು ಇಲ್ಲದೆ ಹೋಯಿತಲ್ಲವೋ? ಜ್ಞಾನವು ಪೂರ್ಣವಾಗಿ ನನ್ನಿಂದ ನೂಕಲ್ಪಡಲಿಲ್ಲವೋ? 14 ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ. 15 ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ. 16 ಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ. 17 ಉಷ್ಣ ಸಮಯದಲ್ಲಿ ಅವು ಇಲ್ಲವಾಗುತ್ತವೆ; ಶೆಕೆಯಾದಾಗ ತಮ್ಮ ಸ್ಥಳ ಬಿಟ್ಟು ಆರಿ ಹೋಗುತ್ತವೆ. 18 ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ; ಇಲ್ಲವಾಗಿ ನಾಶವಾಗುತ್ತವೆ. 19 ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ. 20 ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು 21 ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ. 22 ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ 23 ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ? 24 ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ. 25 ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ? 26 ಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ? 27 ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ. 28 ಆದದರಿಂದ ಈಗ ಸಂತೃಪ್ತರಾಗಿ ನನ್ನನ್ನು ದೃಷ್ಟಿಸಿರಿ; ನಾನು ಸುಳ್ಳು ಹೇಳಿದರೆ ನಿಮ್ಮ ಕಣ್ಣಿಗೆ ಕಾಣುವದು. 29 ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು. 30 ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
1 ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ? 2 ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂ 3 ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು. 4 ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆ 5 ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ. 6 ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ. 7 ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು. 8 ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ. 9 ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು. 10 ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು. 11 ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು. 12 ನೀನು ನನಗೆ ಕಾವಲಿಡುವದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಲವೋ? 13 ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ 14 ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ. 15 ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ. 16 ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ. 17 ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ 18 ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು? 19 ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ? 20 ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ? 21 ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
1 ಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು-- 2 ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು? 3 ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ? 4 ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು. 5 ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ 6 ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು. 7 ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು. 8 ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು. 9 ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ. 10 ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ? 11 ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ? 12 ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು. 13 ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು. 14 ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ. 15 ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು. 16 ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು. 17 ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ. 18 ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು; 19 ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು. 20 ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ. 21 ಇನ್ನು ಆತನು ನಿನ್ನ ಬಾಯನ್ನು ನಗೆಯಿಂದ, ನಿನ್ನ ತುಟಿಗಳನ್ನು ಜಯಧ್ವನಿಯಿಂದ ತುಂಬಿಸುವನು. 22 ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
1 ಅದಕ್ಕೆ ಯೋಬನು ಉತ್ತರಿಸಿ ಇಂತೆಂದನು 2 ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ? 3 ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು. 4 ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು? 5 ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ. 6 ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ. 7 ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ; 8 ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ. 9 ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ. 10 ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ. 11 ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ. 12 ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು? 13 ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ. 14 ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು; 15 ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು. 16 ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು. 17 ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ. 18 ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ. 19 ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು? 20 ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು. 21 ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು. 22 ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ. 23 ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ. 24 ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ? 25 ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ. 26 ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ. 27 ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆಹೊಂದುವೆನು ಎಂದು ಹೇಳಿಕೊಂಡರೆ 28 ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ. 29 ನಾನು ಕೆಟ್ಟವನಾಗಿದ್ದರೆ ಯಾಕೆ ಈ ವ್ಯರ್ಥವಾದ ಪ್ರಯಾಸ? 30 ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ 31 ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು. 32 ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ. 33 ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ. 34 ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ. 35 ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
1 ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು. 2 ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು. 3 ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ? 4 ನಿನಗೆ ಮಾಂಸದ ಕಣ್ಣುಗಳುಂಟೋ ಅಥವಾ ಮನುಷ್ಯನು ನೋಡುವಂತೆಯೇ ನೀನೂ ನೋಡುತ್ತೀಯೋ; 5 ನಿನ್ನ ದಿವಸಗಳು ಮನುಷ್ಯನ ದಿವಸಗಳ ಹಾಗಿವೆಯೋ ಅಥವಾ ನಿನ್ನ ವರುಷಗಳು ಮನುಷ್ಯನ ದಿವಸಗಳಂತಿವೆಯೋ 6 ನನ್ನ ಅಕ್ರಮವನ್ನು ವಿಚಾರಿಸುತ್ತೀ; ನನ್ನ ಪಾಪವನ್ನು ಹುಡುಕುತ್ತೀ. 7 ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ; 8 ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ. 9 ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ? 10 ಹಾಲಿನಂತೆ ನನ್ನನ್ನು ಹೊಯ್ಯಲಿಲ್ಲವೋ? ಮೊಸರಿನಂತೆ ನನ್ನನ್ನು ಹೆಪ್ಪಾಗ ಮಾಡಲಿಲ್ಲವೋ? 11 ಚರ್ಮವನ್ನೂ ಮಾಂಸ ವನ್ನೂ ನನಗೆ ತೊಡಿಸಿದಿ; ಎಲುಬುಗಳಿಂದಲೂ ನರಗ ಳಿಂದಲೂ ನನಗೆ ಬೇಲಿ ಹಾಕಿದಿ. 12 ಜೀವವನ್ನೂ ಕೃಪೆಯನ್ನೂ ನನಗೆ ಅನುಗ್ರಹಿಸಿದಿ; ನಿನ್ನ ದರ್ಶನವು ನನ್ನ ಆತ್ಮವನ್ನು ಕಾಪಾಡಿತು. 13 ಆದಾಗ್ಯೂ ಇವುಗ ಳನ್ನು ನಿನ್ನ ಹೃದಯದಲ್ಲಿ ಮರೆಮಾಡಿದಿ; ಇದು ನಿನ್ನ ಬಳಿಯಲ್ಲಿ ಇದೆ ಎಂದು ತಿಳಿದಿದ್ದೇನೆ. 14 ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ. 15 ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು. 16 ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ. 17 ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ. 18 ಹಾಗಾದರೆ ಯಾಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದಿ? ಯಾವ ಕಣ್ಣು ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು. 19 ನಾನು ಇರದವನಂತಿದ್ದು ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು. 20 ನನ್ನ ದಿವಸಗಳು ಸ್ವಲ್ಪವಲ್ಲವೋ? ಅವುಗಳನ್ನು ತೀರಿಸಿ ನನ್ನನ್ನು ಬಿಟ್ಟುಬಿಡು. 21 ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆ 22 ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
1 ಆಗ ನಾಮಾಥ್ಯನಾದ ಚೋಫರನು ಉತ್ತರಿಸಿ ಹೀಗೆ ನುಡಿದನು; 2 ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ? 3 ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ? 4 ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ. 5 ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು. 6 ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ. 7 ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ? 8 ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ? 9 ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ. 10 ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ? 11 ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ? 12 ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು. 13 ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ, 14 ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ 15 ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ. 16 ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ. 17 ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ. 18 ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ. 19 ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು. 20 ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
1 ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು-- 2 ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು. 3 ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು? 4 ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು. 5 ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ. 6 ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ. 7 ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು. 8 ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು. 9 ಕರ್ತನ ಕೈ ಇದನ್ನು ಮಾಡಿತೆಂದು ಇವೆಲ್ಲವುಗಳಲ್ಲಿ ತಿಳಿಯದಿರು ವದು ಯಾವದು? 10 ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ. 11 ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ? 12 ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ. 13 ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ. 14 ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ. 15 ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ. 16 ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ. 17 ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ. 18 ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ. 19 ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ. 20 ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ. 21 ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ. 22 ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ. 23 ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ. 24 ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ. 25 ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
1 ಇಗೋ, ನನ್ನ ಕಣ್ಣು ಎಲ್ಲಾ ನೋಡಿತು; ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿತು. 2 ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ. 3 ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು. 4 ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ. 5 ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು. 6 ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ. 7 ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ? 8 ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ? 9 ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ? 10 ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು. 11 ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ? 12 ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ. 13 ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ. 14 ನಾನು ನನ್ನ ಮಾಂಸವನ್ನು ನನ್ನ ಹಲ್ಲುಗಳಿಂದ ಯಾಕೆ ಹಿಡಿಯ ಬೇಕು? ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಯಾಕೆ ಹಾಕಬೇಕು? 15 ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು. 16 ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ. 17 ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ; ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ. 18 ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ. 19 ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು. 20 ಎರಡು ಸಂಗತಿಗಳನ್ನು ಮಾತ್ರ ನನಗೆ ಮಾಡಬೇಡ; ಆಗ ನಿನ್ನಿಂದ ನಾನು ಅಡಗಿಕೊಳ್ಳು ವದಿಲ್ಲ. 21 ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ. 22 ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು. 23 ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು. 24 ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ? 25 ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ? 26 ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ. 27 ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ. 28 ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
1 ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ. 2 ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ. 3 ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ? 4 ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ. 5 ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ. 6 ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು. 7 ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ. 8 ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ 9 ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು. 10 ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು? 11 ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ, 12 ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ. 13 ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು. 14 ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು. 15 ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ. 16 ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ? 17 ನನ್ನ ದ್ರೋಹವನ್ನು ಚೀಲ ದಲ್ಲಿ ಮುದ್ರಿಸಿದ್ದಿ; ನನ್ನ ಅಕ್ರಮವನ್ನು ಮುಚ್ಚಿ ಹೊಲಿ ದಿದ್ದೀ. 18 ಆದರೂ ಬೆಟ್ಟವು ಬಿದ್ದು ಹಾಳಾಗುವದು; ಬಂಡೆಯು ತನ್ನ ಸ್ಥಳದಿಂದ ಜರಗುವದು. 19 ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ. 20 ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ. 21 ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ. 22 ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
1 ಆಗ ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ-- 2 ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ? 3 ನಿಷ್ಪ್ರಯೋಜನವಾದ ನುಡಿಗಳಿಂದಲೂ ಕೆಲಸಕ್ಕೆ ಬಾರದ ಮಾತುಗಳಿಂದಲೂ ವಾದಿಸುವನೋ? 4 ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ. 5 ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ. 6 ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. 7 ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ? 8 ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ? 9 ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ? 10 ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ. 11 ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ? 12 ನಿನ್ನ ಹೃದಯವು ನಿನ್ನನ್ನು ಒಯ್ಯುವದು ಯಾಕೆ? ಯಾಕೆ ನಿನ್ನ ಕಣ್ಣುಗಳು ಮಿಟಿಕಿಸುವದು? 13 ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ. 14 ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು? 15 ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ. 16 ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ! 17 ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ. 18 ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು. 19 ಅವರಿಗೆ ಮಾತ್ರ ಭೂಮಿಯು ಕೊಡಲ್ಪಟ್ಟಿತು; ಅವರ ಮಧ್ಯದಲ್ಲಿ ಪರನು ದಾಟಲಿಲ್ಲ. 20 ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ. 21 ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ. 22 ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ. 23 ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ. 24 ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ. 25 ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ. 26 ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ. 27 ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ. 28 ಹಾಳಾದ ಪಟ್ಟಣ ಗಳಲ್ಲಿಯೂ ನಿವಾಸಿಗಳು ಇಲ್ಲದಂಥ ದಿಬ್ಬೆಗಳಾ ಗುವದಕ್ಕೆ ಸಿದ್ಧವಾದಂಥ ಮನೆಗಳಲ್ಲಿಯೂ ವಾಸ ಮಾಡುತ್ತಾನೆ. 29 ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ. 30 ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ. 31 ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು. 32 ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ. 33 ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು. 34 ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು. 35 ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
1 ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ-- 2 ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ. 3 ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು? 4 ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು. 5 ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು. 6 ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು? 7 ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ. 8 ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ. 9 ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ. 10 ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ. 11 ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ. 12 ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು; 13 ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ. 14 ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ. 15 ನನ್ನ ಮೈಮೇಲೆ ಗೋಣೀ ತಟ್ಟು ಹೊಲಿದು ಧರಿಸಿದೆನು; ಧೂಳಿನಲ್ಲಿ ನನ್ನ ಕೊಂಬನ್ನು ಅಪವಿತ್ರಮಾಡಿದೆನು. 16 ನನ್ನ ಮುಖವು ಅಳುವದರಿಂದ ಉಬ್ಬಿ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ನೆರಳು ಅದೇ; 17 ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ. 18 ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ. 19 ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ. 20 ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ. 21 ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು. 22 ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
1 ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ. 2 ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ. 3 ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು? 4 ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ. 5 ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು. 6 ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು. 7 ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ. 8 ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು. 9 ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು. 10 ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ. 11 ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು. 12 ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ. 13 ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ. 14 ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು. 15 ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು? 16 ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
1 ಆಗ ಶೂಹ್ಯನಾದ ಬಿಲ್ದದನು ಉತ್ತರ ಕೊಟ್ಟು ಹೇಳಿದ್ದೇನಂದರೆ-- 2 ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ. 3 ಯಾಕೆ ನಾವು ಪಶುವಿನ ಹಾಗೆ ಎಣಿಸಲ್ಪಟ್ಟೆವು? ಯಾಕೆ ನಿಮ್ಮ ಕಣ್ಣುಗಳಿಗೆ ತುಚ್ಛವಾಗಿದ್ದೇವೆ? 4 ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ? 5 ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು. 6 ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು 7 ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು. 8 ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ. 9 ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು. 10 ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ. 11 ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ. 12 ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು. 13 ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು. 14 ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು. 15 ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು. 16 ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; 17 ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು. 18 ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು. 19 ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ. 20 ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು. 21 ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
1 ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ-- 2 ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ? 3 ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ. 4 ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು. 5 ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ, 6 ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ. 7 ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ. 8 ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ. 9 ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು. 10 ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು. 11 ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ. 12 ಆತನ ಗುಂಪುಗಳು ಸಹ ಬಂದು ನನಗೆ ವಿರೋಧವಾಗಿ ತಮ್ಮ ಮಾರ್ಗ ಕಟ್ಟುತ್ತವೆ. ನನ್ನ ಗುಡಾರದ ಸುತ್ತುದಂಡು ಇಳಿಯುತ್ತದೆ. 13 ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. 14 ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ. 15 ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ. 16 ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು. 17 ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ. 18 ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ. 19 ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ. 20 ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು. 21 ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ. 22 ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ. 23 ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ 24 ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು! 25 ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ; 26 ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು. 27 ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ. 28 ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು. 29 ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
1 ನಾಮಾಥ್ಯನಾದ ಚೋಫರನು ಉತ್ತರ ಕೊಟ್ಟು ಹೇಳಿದ್ದೇನಂದರೆ-- 2 ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ. 3 ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು. 4 ಇದನ್ನು ಆದಿಯಿಂದಲೂ ಅಂದರೆ ಮನುಷ್ಯನನ್ನು ಭೂಮಿಯ ಮೇಲೆ ಇಟ್ಟಂದಿನಿಂದಲೂ ನೀನು ತಿಳಿಯಲಿಲ್ಲವೋ? 5 ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ. 6 ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ 7 ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು. 8 ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು. 9 ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು. 10 ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ. 11 ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು. 12 ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ 13 ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ 14 ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು. 15 ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು. 16 ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು. 17 ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು. 18 ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ. 19 ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು. 20 ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ. 21 ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ. 22 ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು. 23 ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು. 24 ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು. 25 ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ. 26 ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು. 27 ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು. 28 ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು. 29 ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
1 ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ-- 2 ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ. 3 ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು. 4 ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು? 5 ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ. 6 ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ. 7 ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ? 8 ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ. 9 ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ. 10 ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ; 11 ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. 12 ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. 13 ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. 14 ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. 15 ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ. 16 ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ. 17 ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ. 18 ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ. 19 ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ. 20 ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು. 21 ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ? 22 ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ! 23 ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ. 24 ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ. 25 ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ. 26 ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ. 27 ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ. 28 ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ? 29 ಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ? 30 ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು. 31 ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು? 32 ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು. 33 ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ. 34 ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
1 ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ-- 2 ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ? 3 ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ? 4 ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ? 5 ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ. 6 ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ. 7 ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ. 8 ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು. 9 ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ. 10 ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ. 11 ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ. 12 ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ! 13 ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ? 14 ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ. 15 ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? 16 ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು. 17 ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ. 18 ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ. 19 ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು. 20 ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ. 21 ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು. 22 ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ. 23 ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ. 24 ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ. 25 ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು. 26 ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ. 27 ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ. 28 ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು. 29 ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು. 30 ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
1 ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ-- 2 ಈಹೊತ್ತೇ ನನ್ನ ದೂರು ಕಹಿಯಾಗಿದೆ; ನನ್ನ ಏಟು ನನ್ನ ನಿಟ್ಟುಸುರಿಗಿಂತ ಭಾರವಾಗಿದೆ. 3 ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು. 4 ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು. 5 ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು. 6 ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು. 7 ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು. 8 ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ. 9 ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ. 10 ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು. 11 ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು. 12 ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು. 13 ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ. 14 ನನಗೆ ನೇಮಿಸಿ ದ್ದನ್ನು ಆತನು ಈಡೇರಿಸುತ್ತಾನೆ; ಇವುಗಳಂತೆ ಅನೇಕವು ಆತನಲ್ಲಿ ಅವೆ. 15 ಆದದರಿಂದ ಆತನ ಮುಂದೆ ತಲ್ಲಣಪಡುತ್ತೇನೆ; ಗ್ರಹಿಸಿಕೊಂಡು ಆತನಿಗೆ ಭಯ ಪಡುತ್ತೇನೆ. 16 ದೇವರು ನನ್ನ ಹೃದಯವನ್ನು ಮೆತ್ತಗೆ ಮಾಡಿದ್ದಾನಲ್ಲಾ; ಸರ್ವಶಕ್ತನು ನನ್ನನ್ನು ತಲ್ಲಣಪಡಿಸಿ ದ್ದಾನಲ್ಲಾ. 17 ಕತ್ತಲೆಯ ಮುಂದೆ ನಾನು ಕಡಿಯಲ್ಪಡ ಲಿಲ್ಲ; ಅಂಧಕಾರವನ್ನು ನನ್ನ ಮುಂದೆ ಅಡಗಿಸಿದ್ದಾನೆ.
1 ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ? 2 ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ. 3 ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ. 4 ದರಿದ್ರನನ್ನು ಮಾರ್ಗದಿಂದ ತೊಲಗಿಸುತ್ತಾರೆ; ದೇಶದ ದೀನರು ಕೂಡಾ ಅಡಗಿಕೊಳ್ಳುತ್ತಾರೆ. 5 ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ. 6 ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ. 7 ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ. 8 ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ. 9 ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ. 10 ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ 11 ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ. 12 ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ. 13 ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು. 14 ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ. 15 ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ. 16 ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು. 17 ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ. 18 ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ. 19 ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ. 20 ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು. 21 ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ. 22 ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ. 23 ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ. 24 ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ. 25 ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
1 ಆ ಮೇಲೆ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನಂದರೆ -- 2 ದೊರೆ ತನವೂ ಹೆದರಿಕೆಯೂ ಆತನೊಂದಿಗೆ ಇವೆ; ತನ್ನ ಉನ್ನತ ಸ್ಥಳಗಳಲ್ಲಿ ಆತನು ಸಮಾಧಾನ ಮಾಡುತ್ತಾನೆ. 3 ಆತನ ಸೈನ್ಯಗಳಿಗೆ ಲೆಕ್ಕ ಉಂಟೋ? ಆತನ ಬೆಳಕು ಯಾರ ಮೇಲೆ ಮೂಡುವದಿಲ್ಲ? 4 ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ? 5 ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ. 6 ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
1 ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ -- 2 ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ? 3 ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ; 4 ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ? 5 ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ. 6 ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ. 7 ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ. 8 ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು; 9 ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ. 10 ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ. 11 ಆಕಾಶದ ಸ್ತಂಭಗಳು ಅಲ್ಲಾಡು ತ್ತವೆ; ಆತನ ಗದರಿಕೆಗೆ ಆಶ್ಚರ್ಯಪಡುತ್ತವೆ. 12 ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ. 13 ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು. 14 ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
1 ಯೋಬನು ಇನ್ನೂ ತನ್ನ ಸಾಮತಿ ಎತ್ತಿ ಹೇಳಿದ್ದೇನಂದರೆ-- 2 ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ 3 ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ 4 ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು. 5 ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ. 6 ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ. 7 ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ. 8 ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು? 9 ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ? 10 ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ? 11 ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು. 12 ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ? 13 ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ. 14 ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು. 15 ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು. 16 ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ 17 ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ. 18 ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ. 19 ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ. 20 ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ. 21 ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ. 22 ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ. 23 ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
1 ಬೆಳ್ಳಿಗೆ ಗಣಿಯೂ ಬಂಗಾರಕ್ಕೆ ಚೊಕ್ಕ ಮಾಡುವ ಸ್ಥಳವೂ ಉಂಟಲ್ಲಾ? 2 ಕಬ್ಬಿಣ ವನ್ನು ಭೂಮಿಯಿಂದ ತೆಗೆಯುತ್ತಾರೆ; ಕಲ್ಲನ್ನು ಕರಗಿಸಿ ತಾಮ್ರವನ್ನು ತೆಗೆಯುತ್ತಾರೆ. 3 ಕತ್ತಲೆಗೆ ಮೇರೆ ಇಡು ತ್ತಾರೆ. ಅಂಧಕಾರದಲ್ಲಿಯೂ ಮರಣದ ನೆರಳಿನ ಲ್ಲಿಯೂ ಇರುವ ಕಲ್ಲುಗಳನ್ನು ಕಟ್ಟಕಡೇ ವರೆಗೂ ಅವರು ಶೋಧಿಸುತ್ತಾರೆ. 4 ನಿವಾಸದಿಂದ ಪ್ರವಾಹವು ಹೊರ ಚಿಮ್ಮುತ್ತದೆ. ನೀರುಗಳು ಕಾಲಿಗೆ ತಪ್ಪಿಸಿಕೊಂಡು ಒಣಗಿಹೋಗಿ ಮನುಷ್ಯರಿಗೆ ದೂರವಾಗಿವೆ. 5 ಭೂಮಿ ಯಿಂದ ರೊಟ್ಟಿಯು ಬರುತ್ತದೆ; ಆದರೆ ಅದರ ಕೆಳಗಿ ನದು ಬೆಂಕಿ ಬಿದ್ದಂತೆ ಹಾಳಾಗಿರುವದು. 6 ಅದರ ಕಲ್ಲುಗಳು ನೀಲಮಣಿಗಳ ಸ್ಥಳವಾಗಿವೆ; ಬಂಗಾರದ ಧೂಳು ಅದಕ್ಕೆ ಉಂಟು. 7 ಆ ಹಾದಿಯನ್ನು ಪಕ್ಷಿ ತಿಳಿಯಲಿಲ್ಲ; ಹದ್ದಿನ ಕಣ್ಣು ಅದನ್ನು ದೃಷ್ಟಿಸಲಿಲ್ಲ; 8 ಸಿಂಹದ ಮರಿಗಳು ಅದರಲ್ಲಿ ನಡೆಯಲಿಲ್ಲ. ಉಗ್ರ ವಾದ ಸಿಂಹವು ಅದನ್ನು ದಾಟಲಿಲ್ಲ. 9 ಅವನು ಬಂಡೆಯ ಮೇಲೆ ಕೈ ಹಾಕುತ್ತಾನೆ; ಪರ್ವತಗಳನ್ನು ಬುಡದಿಂದ ಮಗುಚುತ್ತಾನೆ. 10 ಬಂಡೆಗಳಲ್ಲಿ ಮಾರ್ಗ ಗಳನ್ನು ಕೊರೆದುಬಿಡುತ್ತಾನೆ; ಅವನ ಕಣ್ಣು ಅಮೂಲ್ಯ ವಾದದ್ದನ್ನೆಲ್ಲಾ ನೋಡುತ್ತದೆ. 11 ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ. 12 ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ? 13 ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ. 14 ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ. 15 ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ. 16 ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ. 17 ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ; 18 ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು. 19 ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ. 20 ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ? 21 ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ. 22 ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ. 23 ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ. 24 ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ. 25 ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ. 26 ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ 27 ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು. 28 ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
1 ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ-- 2 ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು. 3 ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು. 4 ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು. 5 ಸರ್ವ ಶಕ್ತನು ಇನ್ನೂ ನನ್ನ ಸಂಗಡ ಇದ್ದನು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು. 6 ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು. 7 ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು. 8 ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು. 9 ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. 10 ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು. 11 ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. 12 ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. 13 ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. 14 ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. 15 ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. 16 ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. 17 ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು. 18 ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು. 19 ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು. 20 ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು. 21 ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು. 22 ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು. 23 ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು. 24 ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ. 25 ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
1 ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು 2 ಹೌದು, ಅವರ ಕೈಗಳ ಶಕ್ತಿಯ ಲಾಭ ನನಗೆ ಯಾಕೆ? ಅವರಲ್ಲಿ ಮುದಿಪ್ರಾಯವು ನಾಶವಾಯಿತು. 3 ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ; 4 ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ. 5 ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ). 6 ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು. 7 ಪೊದೆಗಳ ನಡುವೆ ಕೂಗುತ್ತಾರೆ; ತುರಿಚಿಗಳ ಕೆಳಗೆ ಕೂಡುತ್ತಾರೆ. 8 ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು. 9 ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು. 10 ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ. 11 ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ; 12 ಬಲಗಡೆಯಲ್ಲಿ ಯುವಕರು ಏಳುತ್ತಾರೆ; ಅವರು ನನ್ನ ಕಾಲುಗಳನ್ನು ದೂಡುತ್ತಾರೆ; ನಾಶಕರ ವಾದ ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಾರೆ. 13 ನನ್ನ ದಾರಿಯನ್ನೂ ಕೆಡಿಸುತ್ತಾರೆ; ನನ್ನ ನಷ್ಟಕ್ಕಾಗಿ ಸಹಾಯಮಾಡುತ್ತಾರೆ; ಅವರಿಗೆ ಸಹಾಯ ಕನಿಲ್ಲ. 14 ಅವರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬಂದರು; ನಾಶದೊಂದಿಗೆ ಹೊರಳಿ ನನ್ನ ಮೇಲೆ ಅವರು ಬರುತ್ತಾರೆ. 15 ದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ. 16 ಆದರೆ ಈಗ ನನ್ನ ಪ್ರಾಣವು ನನ್ನಲ್ಲಿ ಹೊಯ್ಯಲ್ಪಡುವದು; ದೀನತ್ವದ ದಿವಸಗಳು ನನ್ನನ್ನು ಹಿಡಿದವೆ. 17 ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ. 18 ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ. 19 ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು. 20 ನಿನಗೆ ಮೊರೆಯಿಡುತ್ತೇನೆ, ಆದರೆ ನೀನು ಉತ್ತರ ಕೊಡುವದಿಲ್ಲ; ನಿಂತುಕೊಳ್ಳುತ್ತೇನೆ, ಆದರೆ ನೀನು ನನ್ನನ್ನು ಲಕ್ಷಿಸುವದಿಲ್ಲ. 21 ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ. 22 ನನ್ನನ್ನು ಗಾಳಿಗೆ ಎತ್ತುತ್ತೀ; ಅದನ್ನು ಹತ್ತಿಹೋಗುವ ಹಾಗೆ ಮಾಡಿ, ನನ್ನನ್ನು ಪೂರ್ಣವಾಗಿ ಕ್ಷೀಣಮಾಡುತ್ತೀ. 23 ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ. 24 ಆದರೆ ಆತನ ನಾಶದಲ್ಲಿ ಅವರು ಮೊರೆಯಿಟ್ಟರೆ, ಸಮಾಧಿಗೆ ಆತನು ಕೈ ಚಾಚುವದಿಲ್ಲ. 25 ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ? 26 ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು. 27 ನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು. 28 ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು. 29 ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು. 30 ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ. 31 ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
1 ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ? 2 ಮೇಲಿನಿಂದ ದೇವರ ಭಾಗವೂ ಉನ್ನತ ವಾದ ಸ್ಥಳಗಳಿಂದ ಸರ್ವಶಕ್ತನ ಬಾಧ್ಯತೆಯೂ ಯಾವದು? 3 ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ? 4 ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ? 5 ನಾನು ವ್ಯರ್ಥವಾಗಿ ನಡೆದುಕೊಂಡಿದ್ದರೆ ಮೋಸಕ್ಕೆ ನನ್ನ ಕಾಲು ತ್ವರೆಪಟ್ಟರೆ 6 ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ. 7 ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ, 8 ನಾನು ಬಿತ್ತುವದನ್ನು ಬೇರೊಬ್ಬನು ತಿನ್ನಲಿ; ಹೌದು, ನನ್ನ ಸಂತತಿಯು ನಿರ್ಮೂಲವಾಗಲಿ. 9 ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ, 10 ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ. 11 ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು. 12 ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು. 13 ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ, 14 ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು? 15 ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ? 16 ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, 17 ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, 18 (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ). 19 ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ 20 ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ 21 ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ, 22 ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ. 23 ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು. 24 ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ, 25 ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ, 26 ಸೂರ್ಯನು ಹೊಳೆಯುವದನ್ನು ಚಂದ್ರನು ಪ್ರಭೆಯಲ್ಲಿ ನಡೆಯುವದನ್ನು ನಾನು ನೋಡಲಾಗಿ, 27 ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ; 28 ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು. 29 ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ, 30 ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ. 31 ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ? 32 ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು. 33 ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ. 34 ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ? 35 ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ. 36 ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು. 37 ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು. 38 ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ, 39 ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ, 40 ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
1 ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು. 2 ಆಗ ರಾಮನ ಬಂಧುವಾದ ಬೂಜ್ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು. 3 ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು. 4 ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು; 5 ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು. 6 ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು. 7 ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು. 8 ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ. 9 ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ. 10 ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು. 11 ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು; 12 ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ. 13 ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ. 14 ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ. 15 ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು. 16 ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ. 17 ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು. 18 ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ. 19 ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ. 20 ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು. 21 ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು. 22 ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
1 ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ. 2 ಇಗೋ, ಈಗ ನನ್ನ ಬಾಯನ್ನು ತೆರೆದಿದ್ದೇನೆ. ನನ್ನ ನಾಲಿಗೆ ನನ್ನ ಬಾಯಲ್ಲಿ ಮಾತನಾಡುತ್ತದೆ. 3 ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ. 4 ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು. 5 ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ. 6 ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ. 7 ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು. 8 ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ. 9 ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ. 10 ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ. 11 ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ. 12 ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ. 13 ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ. 14 ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ. 15 ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ 16 ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ. 17 ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ. 18 ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ. 19 ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. 20 ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. 21 ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ. 22 ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ. 23 ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ, 24 ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು. 25 ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು. 26 ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು. 27 ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ; 28 ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು. 29 ಇಗೋ, ಇವೆಲ್ಲವುಗಳನ್ನು ಅನೇಕ ಸಾರಿ ಮನು ಷ್ಯನಿಗೆ ಮಾಡುತ್ತಾನೆ. 30 ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು. 31 ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ. 32 ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ. 33 ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
1 ಇನ್ನೂ ಹೆಚ್ಚಾಗಿ ಎಲೀಹು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ-- 2 ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ. 3 ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ. 4 ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ. 5 ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು. 6 ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು. 7 ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು? 8 ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ. 9 ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ. 10 ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ. 11 ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ. 12 ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ. 13 ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ? 14 ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ; 15 ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು. 16 ಗ್ರಹಿಕೆ ಇದ್ದರೆ ಇದನ್ನು ಕೇಳು; ನನ್ನ ನುಡಿಗಳ ಶಬ್ದಕ್ಕೆ ಕಿವಿಗೊಡು. 17 ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ? 18 ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ? 19 ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ. 20 ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ. 21 ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ. 22 ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ. 23 ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ. 24 ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ. 25 ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ. 26 ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ. 27 ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ. 28 ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ. 29 ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ. 30 ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ. 31 ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ. 32 ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು. 33 ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ. 34 ತಿಳುವಳಿಕೆ ಯುಳ್ಳವರು ನನಗೆ ಹೇಳಲಿ, ಜ್ಞಾನಿಯು ನನ್ನ ಮಾತನ್ನು ಕೇಳಲಿ. 35 ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ. 36 ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ. 37 ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
1 ಇದಲ್ಲದೆ ಎಲೀಹು ಮಾತನಾಡಿ ಹೇಳಿದ್ದೇನಂದರೆ-- 2 ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ? 3 ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ. 4 ನಾನು ನಿನಗೂ ನಿನ್ನ ಸಂಗಡ ಇರುವ ಸ್ನೇಹಿತರಿಗೂ ಉತ್ತರ ಕೊಡುತ್ತೇನೆ. 5 ಆಕಾಶಗಳನ್ನು ದೃಷ್ಟಿಸಿ ನೋಡು, ಮೇಘಗಳನ್ನು ದೃಷ್ಟಿಸು; ಅವು ನಿನಗಿಂತ ಎತ್ತರವಾಗಿವೆ. 6 ನೀನು ಪಾಪಮಾಡಿದರೆ ಆತನಿಗೆ ವಿರೋಧವಾಗಿ ಏನು ಮಾಡುವಿ? ನಿನ್ನ ದ್ರೋಹಗಳು ಹೆಚ್ಚಿದರೆ ಆತನಿಗೆ ಏನು ಮಾಡುವಿ? 7 ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು? 8 ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು. 9 ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ. 10 ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ. 11 ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ. 12 ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ. 13 ನಿಶ್ಚಯವಾಗಿ ವ್ಯರ್ಥವಾದ ದ್ದನ್ನು ದೇವರು ಕೇಳುವದಿಲ್ಲ. ಇಲ್ಲವೇ ಸರ್ವಶಕ್ತನು ಅದನ್ನು ಲಕ್ಷಿಸುವದಿಲ್ಲ. 14 ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು. 15 ಆದರೆ ಈಗ ಅದು ಹಾಗಲ್ಲದಿರುವದರಿಂದ ಆತನು ತನ್ನ ಕೋಪದಿಂದ ಏನೂ ವಿಚಾರಿಸದೆ ಇದ್ದಾನೆ; ಆದರೂ ಅವನು ದೊಡ್ಡ ಇಕ್ಕಟ್ಟಿನಲ್ಲಿ ಅದನ್ನು ತಿಳುಕೊಳ್ಳುವದಿಲ್ಲ. 16 ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
1 ಎಲೀಹು ಮುಂದುವರಿದು ಹೇಳಿದ್ದೇನಂದರೆ-- 2 ನನಗೋಸ್ಕರ ಸ್ವಲ್ಪ ತಾಳಿ ಕೋ; ಆಗ ನಿನಗೆ ಪ್ರಕಟಮಾಡುವೆನು; ಯಾಕಂದರೆ ದೇವರ ಪರವಾಗಿ ಇನ್ನೂ ಮಾತುಗಳುಂಟು. 3 ನನ್ನ ತಿಳುವಳಿಕೆಯನ್ನು ದೂರದಿಂದ ತಕ್ಕೊಂಡು ಬರುವೆನು; ನನ್ನ ನಿರ್ಮಾಣಿಕನಿಗೆ ನೀತಿಯನ್ನು ಸಲ್ಲಿಸುವೆನು. 4 ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ. 5 ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ. 6 ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ. 7 ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ. 8 ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ. 9 ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ. 10 ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ. 11 ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು. 12 ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು. 13 ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ. 14 ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ. 15 ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ. 16 ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು. 17 ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು. 18 ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು. 19 ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು. 20 ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ. 21 ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ. 22 ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು? 23 ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು? 24 ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ. 25 ಎಲ್ಲಾ ಮನುಷ್ಯರು ಅದನ್ನು ನೋಡಬಹುದು, ಮನುಷ್ಯರು ದೂರದಿಂದ ದೃಷ್ಟಿಸುತ್ತಾರೆ. 26 ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ. 27 ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ. 28 ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ. 29 ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು? 30 ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ. 31 ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ. 32 ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ; 33 ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
1 ಇದಕ್ಕೋಸ್ಕರ ನನ್ನ ಹೃದಯವು ನಡುಗಿ ತನ್ನ ಸ್ಥಳದಿಂದ ಕದಲುತ್ತದೆ. 2 ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ. 3 ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ. 4 ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ. 5 ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ. 6 ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ 7 ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ 8 ಆಗ ಮೃಗಗಳು ಗವಿಗಳಲ್ಲಿ ಸೇರಿ ತಮ್ಮ ಸ್ಥಳದಲ್ಲಿ ಉಳಿಯುತ್ತವೆ. 9 ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ. 10 ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು. 11 ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ. 12 ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ. 13 ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ. 14 ಓ ಯೋಬನೇ, ಇದಕ್ಕೆ ಕಿವಿಗೊಡು, ಮೌನ ವಾಗಿ ನಿಂತು ದೇವರ ಅದ್ಭುತಗಳನ್ನು ಗ್ರಹಿಸಿಕೋ. 15 ದೇವರು ಅವುಗಳಿಗೆ ಅಪ್ಪಣೆ ಕೊಡುವದನ್ನೂ ಆತನ ಮೇಘದ ಬೆಳಕು ಹೊಳೆಯುವದನ್ನೂ ನೀನು ತಿಳು ಕೊಳ್ಳುತ್ತೀಯೋ? 16 ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ? 17 ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ? 18 ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ? 19 ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ. 20 ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು. 21 ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು. 22 ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು. 23 ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ. 24 ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
1 ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು-- 2 ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು? 3 ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು. 4 ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು. 5 ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು? 6 ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು? 7 ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು. 8 ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? 9 ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ 10 ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. 11 ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು. 12 ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ? 13 ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ? 14 ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ. 15 ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು. 16 ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ? 17 ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ? 18 ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು. 19 ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ? 20 ಅದರ ಗಡಿಯ ವರೆಗೆ ಅದನ್ನು ತೆಗೆದುಕೊಳ್ಳುವಿಯೋ? ಅದರ ಮನೆಗೆ ಹೋಗುವ ಹಾದಿಗಳನ್ನು ಗ್ರಹಿಸಿದಿಯೋ? 21 ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ. 22 ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ? 23 ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ. 24 ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು? 25 ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು? 26 ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು; 27 ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು. 28 ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು? 29 ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು? 30 ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು. 31 ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ? 32 ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ? 33 ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ? 34 ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ? 35 ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ? 36 ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ? 37 ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ; 38 ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು? 39 ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ? 40 ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ? 41 ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
1 ಬಂಡೆಗಳ ಕಾಡು ಮೇಕೆಗಳು ಈಯುವ ಕಾಲವನ್ನು ನೀನು ತಿಳಿಯುತ್ತೀಯೋ? ದುಪ್ಪಿಗಳಿಗೆ ವೇದನೆ ಬರುವದನ್ನು ಪರಾಮರಿಸು ತ್ತೀಯೋ? 2 ಅವುಗಳ ಗರ್ಭ ತುಂಬುವ ತಿಂಗಳು ಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ತಿಳಿಯುತ್ತೀಯೋ? 3 ಅವು ಬೊಗ್ಗಿಕೊಂಡು ಮರಿಗಳನ್ನು ಹಾಕುತ್ತವೆ. ವೇದನೆಗಳನ್ನು ಪರಿಹರಿಸಿಕೊಳ್ಳುತ್ತವೆ. 4 ಅವುಗಳ ಮರಿಗಳು ಚಂದವಾಗಿದ್ದು ಪೈರಿನಲ್ಲಿ ಬೆಳೆಯುತ್ತವೆ; ಅವು ಹೊರಟು ಹೋಗಿ ಅವುಗಳ ಬಳಿಗೆ ತಿರುಗಿ ಬರುವದಿಲ್ಲ. 5 ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು? 6 ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ. 7 ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ. 8 ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ. 9 ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ? 10 ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ? 11 ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ? 12 ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ? 13 ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ? 14 ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ. 15 ಕಾಲು ಅದನ್ನು ತುಳಿದೀತು, ಇಲ್ಲವೆ ಅಡವಿಯ ಮೃಗ ಅದನ್ನು ಜಜ್ಜೀತು ಎಂದು ಮರೆತು ಬಿಡುತ್ತದೆ. 16 ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ. 17 ದೇವರು ಅದಕ್ಕೆ ಜ್ಞಾನ ತಪ್ಪಿಸಿದ್ದಾನೆ. ಗ್ರಹಿಕೆಯನ್ನು ಅದಕ್ಕೆ ಕೊಡಲಿಲ್ಲ. 18 ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ. 19 ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ? 20 ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ. 21 ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ. 22 ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ. 23 ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ. 24 ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ. 25 ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ. 26 ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ? 27 ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ? 28 ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ. 29 ಅಲ್ಲಿಂದ ಆಹಾರವನ್ನು ಹುಡುಕುತ್ತದೆ. ಅದರ ಕಣ್ಣುಗಳು ದೂರಕ್ಕೆ ನೋಡುತ್ತವೆ. 30 ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.
1 ಕರ್ತನು ಯೋಬನಿಗೆ ಉತ್ತರ ಕೊಟ್ಟು-- 2 ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು. 3 ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು-- 4 ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. 5 ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು. 6 ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು-- 7 ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು. 8 ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ? 9 ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ? 10 ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ. 11 ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. 12 ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು. 13 ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು. 14 ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು. 15 ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ. 16 ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು. 17 ತನ್ನ ಬಾಲವನ್ನು ದೇವ ದಾರಿನ ಹಾಗೆ ಬೊಗ್ಗಿಸುತ್ತದೆ; ಅದರ ಸೊಂಟದ ನರಗಳು ಸುತ್ತಿ ಹೆಣೆದು ಕೊಂಡಿವೆ. 18 ಅದರ ಎಲುಬುಗಳು ಹಿತ್ತಾಳೆಯ ಸಲಿಕೆಗಳಂತೆ ಬಲವಾಗಿವೆ; ಅಸ್ತಿವಾರಗಳು ಕಬ್ಬಿಣದ ಕಂಬಿಗಳ ಹಾಗೆ ಅವೆ. 19 ಅದೇ ದೇವರ ಮಾರ್ಗಗಳಲ್ಲಿ ಪ್ರಾಮುಖ್ಯವಾ ದ್ದದು; ಅದನ್ನು ನಿರ್ಮಿಸಿದವನು ಅದರ ಖಡ್ಗವು ಅವನನ್ನು ಸಂಧಿಸುವಂತೆ ಮಾಡಬಲ್ಲನು. 20 ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ. 21 ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ. 22 ನೆರಳಾದ ಗಿಡಗಳು ತಮ್ಮ ನೆರಳಾಗಿ ಅದನ್ನು ಮುಚ್ಚಿಕೊಳ್ಳುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ. 23 ಇಗೋ, ನದಿಯಲ್ಲಿ ಅವನು ಕುಡಿಯುತ್ತಾನೆ. ಅವಸರ ಮಾಡನು. ಯೊರ್ದನ್ ತನ್ನ ಬಾಯಿಯಲ್ಲಿ ಎಳೆಯುವಂತೆ ಅದು ಭರವಸೆ ಇಟ್ಟಿದೆ. 24 ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ.
1 ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ? 2 ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ? 3 ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ? 4 ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ? 5 ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ? 6 ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ? 7 ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ? 8 ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ. 9 ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ. 10 ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು? 11 ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ. 12 ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ. 13 ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು? 14 ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ. 15 ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ. 16 ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ. 17 ಒಂದಕ್ಕೊಂದು ಅಂಟುತ್ತವೆ; ಹಿಡು ಕೊಂಡು ಪ್ರತ್ಯೇಕವಾಗುವದಿಲ್ಲ; 18 ಅದರ ಸೀನು ವಿಕೆಯಿಂದ ಬೆಳಕು ಹುಟ್ಟುವದು; ಅದರ ಕಣ್ಣುಗಳು ಉದಯದ ರೆಪ್ಪೆಗಳ ಹಾಗೆ ಇವೆ. 19 ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ. 20 ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು. 21 ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು. 22 ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು. 23 ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು. 24 ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ. 25 ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ. 26 ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು, 27 ಕಬ್ಬಿಣವು ಹುಲ್ಲೆಂದೂ ಹಿತ್ತಾಳೆಯು ಕೊಳೆತ ಕಟ್ಟಿಗೆ ಎಂದೂ ಅದು ಎಣಿಸುವದು. 28 ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಹುಲ್ಲಿನ ಹಾಗೆ ಆಗುತ್ತವೆ. 29 ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು. 30 ಅದರ ಅಡಿ ಯಲ್ಲಿ ಹದವಾದ ಹರಳುಗಳು ಅವೆ; ಕೆಸರಿನ ಮೇಲೆ ಚೂಪಾದ ಮತ್ತು ಹದವಾದ ಕೋಲನ್ನು ಹರಡಿಸು ತ್ತದೆ. 31 ಆಳವಾದ ನೀರನ್ನು ಗಡಿಗೆಯ ಹಾಗೆ ಕುದಿಯ ಮಾಡುತ್ತದೆ, ಸಮುದ್ರವನ್ನು ತೈಲದ ಪಾತ್ರೆಯ ಹಾಗೆ ಮಾಡುತ್ತದೆ. 32 ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ. 33 ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು. 34 ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
1 ಯೋಬನು ಕರ್ತನಿಗೆ ಉತ್ತರಕೊಟ್ಟು-- 2 ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ. 3 ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು. 4 ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು. 5 ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು. 6 ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು. 7 ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ. 8 ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ. 9 ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು. 10 ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು. 11 ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು. 12 ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು. 13 ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು. 14 ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು. 15 ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು. 16 ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು. 17 ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
1 ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ 2 ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು. 3 ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು. 4 ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ. 5 ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು. 6 ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
1 ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? 2 ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. 3 ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. 4 ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. 5 ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. 6 ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. 7 ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. 8 ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. 9 ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. 10 ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. 11 ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ. 12 ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
1 ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು. 2 ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ. 3 ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ. 4 ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ. 5 ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು. 6 ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು. 7 ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ. 8 ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
1 ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು. 2 ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ. 3 ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು. 4 ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ. 5 ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ. 6 ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು. 7 ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ. 8 ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
1 ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ. 2 ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ. 3 ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು. 4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು. 5 ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ. 6 ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ. 7 ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು. 8 ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು. 9 ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ. 10 ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ. 11 ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ. 12 ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
1 ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ. 2 ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ. 3 ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ? 4 ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು. 5 ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು? 6 ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ. 7 ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ. 8 ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ; 9 ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು. 10 ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
1 ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು; 2 ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು. 3 ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ, 4 ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, 5 ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ. 6 ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ. 7 ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ. 8 ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು. 9 ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ. 10 ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು. 11 ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ. 12 ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. 13 ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ. 14 ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು. 15 ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. 16 ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು; 17 ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
1 ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ. 2 ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ. 3 ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ 4 ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು? 5 ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ. 6 ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ; 7 ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ 8 ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ. 9 ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
1 ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು. 2 ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು. 3 ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು. 4 ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ. 5 ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ. 6 ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು. 7 ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ. 8 ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು. 9 ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು. 10 ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ. 11 ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ. 12 ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು. 13 ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ, 14 ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು. 15 ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು. 16 ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ. 17 ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು. 18 ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ. 19 ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ. 20 ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
1 ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ? 2 ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ. 3 ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ. 4 ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು. 5 ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ. 6 ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. 7 ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ. 8 ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ; 9 ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ. 10 ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ. 11 ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. 12 ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ. 13 ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. 14 ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ. 15 ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು. 16 ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು. 17 ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ. 18 ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
1 ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ? 2 ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ. 3 ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು? 4 ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ; 5 ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ. 6 ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು; 7 ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
1 ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ. 2 ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ. 3 ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು. 4 ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ. 5 ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು. 6 ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ. 7 ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ. 8 ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
1 ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ? 2 ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು? 3 ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ 4 ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು. 5 ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು. 6 ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
1 ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. 2 ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು. 3 ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ. 4 ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ? 5 ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ. 6 ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ. 7 ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
1 ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು? 2 ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ. 3 ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ; 4 ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು. 5 ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
1 ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ. 2 ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ 3 ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ. 4 ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು. 5 ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ. 6 ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ. 7 ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ. 8 ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು. 9 ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು. 10 ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ. 11 ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
1 ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ. 2 ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ. 3 ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ. 4 ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು. 5 ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು. 6 ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು. 7 ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು. 8 ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು. 9 ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ. 10 ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ. 11 ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ. 12 ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ. 13 ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು. 14 ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ. 15 ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
1 ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ. 2 ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ. 3 ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ. 4 ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು. 5 ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು. 6 ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು. 7 ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು; 8 ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು. 9 ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು. 10 ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು. 11 ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು. 12 ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು. 13 ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು 14 ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು. 15 ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು. 16 ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು. 17 ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು. 18 ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು. 19 ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು. 20 ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು. 21 ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ. 22 ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ. 23 ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು. 24 ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು. 25 ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. 26 ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ. 27 ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ. 28 ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು. 29 ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು. 30 ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ. 31 ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು? 32 ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ. 33 ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ. 34 ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ. 35 ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ. 36 ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ. 37 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ. 38 ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ. 39 ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ. 40 ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ. 41 ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ. 42 ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು. 43 ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು. 44 ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು. 45 ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು. 46 ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ. 47 ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ. 48 ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ. 49 ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು. 50 ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
1 ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ. 2 ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ. 3 ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ. 4 ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ. 5 ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ. 6 ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ. 7 ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. 8 ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ. 9 ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. 10 ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು. 11 ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು. 12 ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು. 13 ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು. 14 ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
1 ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ. 2 ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ. 3 ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ. 4 ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ. 5 ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ. 6 ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು. 7 ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ. 8 ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ. 9 ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
1 ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು. 2 ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ. 3 ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ. 4 ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ. 5 ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ. 6 ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ. 7 ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು. 8 ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. 9 ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು. 10 ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ. 11 ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು. 12 ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ. 13 ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
1 ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. 2 ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ. 3 ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು. 4 ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ. 5 ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ. 6 ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. 7 ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- 8 ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ. 9 ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ. 10 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ. 11 ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ. 12 ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. 13 ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. 14 ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. 15 ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. 16 ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. 17 ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ. 18 ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ. 19 ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು. 20 ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು. 21 ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ. 22 ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. 23 ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ. 24 ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು. 25 ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು. 26 ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು. 27 ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. 28 ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. 29 ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು. 30 ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು. 31 ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
1 ಕರ್ತನು ನನ್ನ ಕುರುಬನು; ಕೊರತೆಪಡೆನು. 2 ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ. 3 ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ. 4 ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ. 5 ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6 ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
1 ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು. 2 ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ. 3 ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು? 4 ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ. 5 ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು. 6 ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ. 7 ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ. 8 ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು. 9 ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ. 10 ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
1 ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. 2 ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ. 3 ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ. 4 ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು. 5 ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ. 6 ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು. 7 ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ. 8 ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. 9 ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು. 10 ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು. 11 ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು; 12 ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು. 13 ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು. 14 ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು. 15 ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು. 16 ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ. 17 ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು. 18 ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು. 19 ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ. 20 ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ. 21 ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ. 22 ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
1 ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ. 2 ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು. 3 ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ. 4 ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ. 5 ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ. 6 ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ 7 ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು. 8 ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ. 9 ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ. 10 ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ. 11 ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು. 12 ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
1 ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? 2 ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು. 3 ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು. 4 ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ. 5 ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು. 6 ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು. 7 ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು. 8 ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು. 9 ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ. 10 ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ. 11 ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು. 12 ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ. 13 ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು. 14 ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
1 ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು. 2 ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು. 3 ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ. 4 ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು. 5 ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು. 6 ಕರ್ತನಿಗೆ ಸ್ತುತಿಯುಂಟಾಗಲಿ; ನನ್ನ ವಿಜ್ಞಾಪನೆ ಗಳನ್ನು ಆತನು ಕೇಳಿದ್ದಾನೆ. 7 ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು. 8 ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ. 9 ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
1 ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ; 2 ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ. 3 ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ. 4 ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು. 5 ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ. 6 ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ. 7 ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ. 8 ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ. 9 ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ. 10 ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ. 11 ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
1 ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ. 2 ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ. 3 ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ. 4 ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ. 5 ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು. 6 ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು. 7 ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು. 8 ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು. 9 ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ? 10 ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು. 11 ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ. 12 ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
1 ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು. 2 ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು. 3 ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು. 4 ಅವರು ಗುಪ್ತವಾಗಿ ಒಡ್ಡಿದ ಬಲೆ ಯೊಳಗಿಂದ ನನ್ನನ್ನು ಹೊರಗೆ ಎಳೆ; ನೀನು ನನ್ನ ಬಲವಾಗಿದ್ದೀ. 5 ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ. 6 ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ. 7 ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ. 8 ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ. 9 ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ. 10 ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ. 11 ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು. 12 ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ. 13 ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ. 14 ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ. 15 ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು. 16 ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ, ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು. 17 ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ. 18 ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ. 19 ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು. 20 ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ. 21 ಆತನು ಭದ್ರವಾದ ಪಟ್ಟಣದಲ್ಲಿ ತನ್ನ ಆಶ್ಚ ರ್ಯವಾದ ಕರುಣೆ ನನಗೆ ತೋರಿಸಿದ್ದಾನೆ ಕರ್ತ ನಿಗೆ ಸ್ತೋತ್ರ. 22 ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ. 23 ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ. 24 ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
1 ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು. 2 ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು. 3 ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. 4 ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ. 5 ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ. 6 ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ. 7 ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ. 8 ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು. 9 ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು. 10 ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು. 11 ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
1 ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ. 2 ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ. 3 ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ. 4 ಕರ್ತನ ವಾಕ್ಯವು ಯಥಾರ್ಥವಾದದ್ದು. ಆತನ ಕೆಲಸಗಳೆಲ್ಲಾ ಸತ್ಯದಲ್ಲಿ ಮಾಡಲ್ಪಟ್ಟಿವೆ. 5 ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ. 6 ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು. 7 ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ. 8 ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ. 9 ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು. 10 ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ. 11 ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು. 12 ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು. 13 ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ. 14 ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ. 15 ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ. 16 ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ. 17 ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ. 18 ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ. 19 ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ. 20 ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ. 21 ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ. 22 ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
1 ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು. 2 ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು. 3 ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ. 4 ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು. 5 ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ. 6 ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು. 7 ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ. 8 ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು. 9 ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ. 10 ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ. 11 ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು. 12 ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು? 13 ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ. 14 ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು. 15 ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. 16 ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ. 17 ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ. 18 ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ. 19 ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ. 20 ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ. 21 ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು. 22 ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
1 ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು. 2 ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ. 3 ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು. 4 ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ. 5 ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ. 6 ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ. 7 ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ. 8 ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ, 9 ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು. 10 ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು. 11 ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು. 12 ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು. 13 ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. 14 ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು. 15 ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು. 16 ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ. 17 ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು. 18 ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು. 19 ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ. 20 ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ. 21 ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ. 22 ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ. 23 ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು. 24 ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ. 25 ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ; 26 ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ. 27 ನನ್ನ ನೀತಿಯಲ್ಲಿ ಸಂತೋಷ ಪಡುವವರು ಉತ್ಸಾಹಧ್ವನಿಮಾಡಿ ಆನಂದಪಡಲಿ; ಹೌದು, ತನ್ನ ಸೇವಕನ ಅಭಿವೃದ್ಧಿಯಲ್ಲಿ ಸಂತೋ ಷಪಡುವ ಕರ್ತನು ಮಹಿಮೆಹೊಂದಲಿ ಎಂದು ಅವರು ಯಾವಾಗಲೂ ಹೇಳಲಿ. 28 ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
1 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ. 2 ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ. 3 ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ. 4 ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ. 5 ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ. 6 ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ. 7 ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ. 8 ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ. 9 ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು. 10 ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು. 11 ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ. 12 ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
1 ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ. 2 ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು. 3 ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ. 4 ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು. 5 ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು. 6 ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು. 7 ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ. 8 ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ. 9 ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು. 10 ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ. 11 ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು. 12 ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ. 13 ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ. 14 ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ. 15 ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು. 16 ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ. 17 ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ. 18 ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು. 19 ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು. 20 ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು. 21 ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ. 22 ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು. 23 ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ. 24 ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ. 25 ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ. 26 ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು. 27 ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ. 28 ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು. 29 ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು. 30 ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು. 31 ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ. 32 ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. 33 ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ. 34 ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ. 35 ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. 36 ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ. 37 ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ. 38 ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು. 39 ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ. 40 ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
1 ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ. 2 ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ. 3 ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. 4 ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. 5 ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. 6 ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. 7 ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ. 8 ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ. 9 ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ. 10 ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ. 11 ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ. 12 ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ. 13 ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು. 14 ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು. 15 ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ. 16 ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ. 17 ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ. 18 ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು. 19 ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ. 20 ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ. 21 ಓ ಕರ್ತನೇ, ನನ್ನನ್ನು ಬಿಡಬೇಡ ; ನನ್ನ ದೇವರೇ, ನನಗೆ ದೂರವಾಗಿರಬೇಡ. 22 ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
1 ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು. 2 ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು. 3 ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು. 4 ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು. 5 ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ. 6 ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು. 7 ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ. 8 ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ. 9 ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ. 10 ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ. 11 ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ. 12 ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ. 13 ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
1 ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು. 2 ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. 3 ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು. 4 ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು. 5 ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ. 6 ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ; 7 ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ. 8 ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ. 9 ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ. 10 ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ. 11 ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ. 12 ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು. 13 ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು. 14 ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ. 15 ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ; 16 ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ. 17 ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
1 ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು. 2 ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ. 3 ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ. 4 ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು. 5 ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ. 6 ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ. 7 ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ; 8 ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ. 9 ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ. 10 ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು. 11 ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು. 12 ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ. 13 ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
1 ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ. 2 ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ? 3 ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ. 4 ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ. 5 ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು. 6 ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ. 7 ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ. 8 ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು. 9 ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು? 10 ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ. 11 ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
1 ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು. 2 ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು? 3 ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ. 4 ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು. 5 ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
1 ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ. 2 ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ. 3 ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ. 4 ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು. 5 ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು. 6 ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ. 7 ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ. 8 ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ. 9 ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ. 10 ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ. 11 ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ. 12 ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ. 13 ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ. 14 ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ. 15 ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ 16 ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ. 17 ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ. 18 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ. 19 ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ. 20 ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ 21 ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ. 22 ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ. 23 ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ. 24 ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ. 25 ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ. 26 ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
1 ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ. 2 ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ. 3 ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ. 4 ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು. 5 ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ 6 ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. 7 ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ. 8 ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ. 9 ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ. 10 ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು. 11 ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು. 12 ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು. 13 ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ. 14 ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ. 15 ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು. 16 ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ. 17 ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
1 ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. 2 ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ 3 ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ. 4 ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ. 5 ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು. 6 ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು. 7 ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ. 8 ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ; 9 ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ. 10 ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು. 11 ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
1 ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ. 2 ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ. 3 ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ. 4 ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ. 5 ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ. 6 ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; 7 ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ. 8 ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ. 9 ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
1 ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ. 2 ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ. 3 ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ. 4 ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು; 5 ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು. 6 ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು. 7 ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ. 8 ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ. 9 ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ. 10 ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ. 11 ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ. 12 ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ. 13 ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ. 14 ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
1 ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; 2 ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ. 3 ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು. 4 ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು. 5 ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು? 6 ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು. 7 ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ 8 ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು. 9 ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು. 10 ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. 11 ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. 12 ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. 13 ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ. 14 ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು. 15 ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ. 16 ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ. 17 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು. 18 ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು. 19 ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ. 20 ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
1 ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ. 2 ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ. 3 ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು. 4 ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ. 5 ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ. 6 ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ. 7 ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ. 8 ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ. 9 ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. 10 ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. 11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. 12 ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ. 13 ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ? 14 ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು. 15 ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ. 16 ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ? 17 ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ. 18 ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ. 19 ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ. 20 ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ. 21 ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು. 22 ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ. 23 ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
1 ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು. 2 ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು. 3 ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. 4 ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ. 5 ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು. 6 ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು. 7 ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು. 8 ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು. 9 ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು. 10 ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು. 11 ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ. 12 ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು. 13 ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು. 14 ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು. 15 ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು. 16 ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ. 17 ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ. 18 ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು. 19 ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
1 ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು. 2 ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. 3 ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. 4 ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ. 5 ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ. 6 ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು. 7 ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ. 8 ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ. 9 ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
1 ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. 2 ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ 3 ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ. 4 ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ? 5 ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ. 6 ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
1 ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು. 2 ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು. 3 ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ. 4 ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ. 5 ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು. 6 ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು. 7 ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
1 ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ. 2 ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ 3 ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ. 4 ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ. 5 ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ. 6 ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು. 7 ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ. 8 ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು. 9 ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ; 10 ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ; 11 ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ. 12 ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು. 13 ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ. 14 ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು. 15 ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ. 16 ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. 17 ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು. 18 ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು. 19 ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ. 20 ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ. 21 ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ. 22 ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು. 23 ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
1 ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. 2 ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ. 3 ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು. 4 ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು? 5 ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ. 6 ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ. 7 ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು. 8 ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ? 9 ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು. 10 ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು. 11 ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು? 12 ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು. 13 ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
1 ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ. 2 ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ. 3 ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು. 4 ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ. 5 ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ. 6 ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ. 7 ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು. 8 ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು. 9 ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು. 10 ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ. 11 ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
1 ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ? 2 ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ. 3 ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ. 4 ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ. 5 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ. 6 ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು; 7 ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ. 8 ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು. 9 ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು. 10 ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು. 11 ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
1 ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು. 2 ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. 3 ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ. 4 ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು. 5 ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ. 6 ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು. 7 ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ. 8 ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ. 9 ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ. 10 ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು. 11 ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು. 12 ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ. 13 ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ. 14 ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು. 15 ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ. 16 ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ. 17 ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
1 ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ. 2 ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ. 3 ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ. 4 ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ. 5 ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು. 6 ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು. 7 ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು; 8 ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು. 9 ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು? 10 ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ? 11 ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ. 12 ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
1 ಓ ದೇವರೇ, ನನ್ನ ಕೂಗನ್ನು ಕೇಳು; ನನ್ನ ಪ್ರಾರ್ಥನೆಯನ್ನು ಆಲೈಸು. 2 ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು. 3 ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ; 4 ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ. 5 ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ. 6 ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು. 7 ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು. 8 ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
1 ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ. 2 ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ. 3 ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ. 4 ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ. 5 ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ. 6 ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು. 7 ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ. 8 ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ. 9 ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ. 10 ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ. 11 ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು. 12 ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
1 ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ. 2 ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ. 3 ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು. 4 ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು. 5 ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ 6 ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು. 7 ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು. 8 ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ. 9 ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು. 10 ಕತ್ತಿಯಿಂದ ಅವರು ಬೀಳುವರು; ನರಿಗಳ ಪಾಲಾಗುವರು. 11 ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
1 ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ. 2 ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು. 3 ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. 4 ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ. 5 ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ. 6 ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ. 7 ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು. 8 ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು. 9 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು; 10 ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
1 ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು. 2 ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು. 3 ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ. 4 ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು. 5 ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ. 6 ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ, 7 ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ, 8 ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರು ಸಹ ನಿನ್ನ ಗುರುತುಗಳಿಗೆ ಭಯಪಡುವರು. ಉದಯಾಸ್ತ ಮಾನ ಸಮಯಗಳನ್ನು ಉತ್ಸಾಹಧ್ವನಿಗೈಯುವಂತೆ ನೀನು ಮಾಡುತ್ತೀ. 9 ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ. 10 ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ. 11 ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ. 12 ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ. 13 ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
1 ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ; 2 ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ. 3 ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು; 4 ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ. 5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ. 6 ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು. 7 ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ. 8 ಓ ಜನರೇ, ನೀವು ದೇವರನ್ನು ಸ್ತುತಿಸಿರಿ; ಆತನ ಸ್ತೊತ್ರದ ಸ್ವರವು ಕೇಳಲ್ಪಡುವಂತೆ ಮಾಡಿರಿ. 9 ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ. 10 ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ. 11 ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ; 12 ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ; 13 ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. 14 ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು. 15 ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ. 16 ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು. 17 ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು. 18 ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ. 19 ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ! 20 ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
1 ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ. 2 ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು. 3 ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ. 4 ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ. 5 ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ. 6 ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು. 7 ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
1 ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ. 2 ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ. 3 ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ. 4 ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ. 5 ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ. 6 ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ. 7 ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ. 8 ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು. 9 ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ. 10 ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ. 11 ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು. 12 ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು. 13 ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ. 14 ಸರ್ವಶಕ್ತನು ಅರಸುಗಳನ್ನು ಸಲ್ಮೋನಿನಲ್ಲಿ ಚದರಿಸಿದಾಗ ಅದರಲ್ಲಿ ಬಿಳೀ ಹಿಮದ ಹಾಗಿತ್ತು. 15 ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ. 16 ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು. 17 ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ. 18 ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ. 19 ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ. 20 ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ. 21 ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ. 22 ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ. 23 ನಿನ್ನ ಪಾದವೂ ನಿನ್ನ ಶತ್ರುಗಳ ರಕ್ತದಲ್ಲಿ ಕಲಕುವ ಹಾಗೆ ಮಾಡುವೆನು. ನಿನ್ನ ನಾಯಿಗಳ ನಾಲಿಗೆಯೂ ಸಹ ಹಾಗೆಯೇ ಮಾಡುವದು. 24 ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ. 25 ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು. 26 ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ. 27 ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ. 28 ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು. 29 ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು. 30 ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು. 31 ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು. 32 ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ. 33 ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ. 34 ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ. 35 ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
1 ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ. 2 ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ. 3 ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ. 4 ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು. 5 ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ. 6 ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ. 7 ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ. 8 ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ. 9 ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ. 10 ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು. 11 ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು. 12 ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು. 13 ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು. 14 ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ 15 ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ. 16 ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು. 17 ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು. 18 ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು. 19 ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ. 20 ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ. 21 ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು. 22 ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ. 23 ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು. 24 ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ. 25 ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ. 26 ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ. 27 ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ. 28 ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ. 29 ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ. 30 ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು. 31 ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು. 32 ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು. 33 ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ. 34 ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ. 35 ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು. 36 ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
1 ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು. 2 ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ. 3 ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ. 4 ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ. 5 ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
1 ಓ ಕರ್ತನೇ, ನಾನು ನಿನ್ನಲ್ಲಿ ಭರವಸವನ್ನಿಟ್ಟಿದ್ದೇನೆ; ನನಗೆ ಎಂದಿಗೂ ಆಶಾ ಭಂಗವಾಗದಿರಲಿ. 2 ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು. 3 ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ. 4 ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು. 5 ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ. 6 ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು. 7 ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ. 8 ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ. 9 ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ. 10 ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಹೊಂಚು ಹಾಕುವ ವರು ಕೂಡಿಕೊಂಡು ಆಲೋಚನೆ ಮಾಡುತ್ತಾ-- 11 ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ. 12 ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು. 13 ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ. 14 ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು. 15 ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು. 16 ಕರ್ತನಾದ ದೇವರ ಶಕ್ತಿಯಲ್ಲಿ ನಾನು ಹೋಗುವೆನು, ನಿನ್ನ ನೀತಿಯನ್ನು ಹೌದು, ನಿನ್ನದನ್ನೇ ತಿಳಿಸುವೆನು. 17 ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು. 18 ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ. 19 ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ! 20 ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ. 21 ನೀನು ನನ್ನ ಗೌರವವನ್ನು ಹೆಚ್ಚಿಸಿ ಎಲ್ಲಾ ಕಡೆಯಿಂದಲೂ ನನ್ನನ್ನು ಆದರಿಸುವಿ. 22 ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು. 23 ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು. 24 ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
1 ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು. 2 ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು. 3 ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು. 4 ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು. 5 ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು. 6 ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು. 7 ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು. 8 ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. 9 ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. 10 ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. 11 ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು. 12 ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. 13 ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು. 14 ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು. 15 ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು. 16 ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು. 17 ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು. 18 ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. 19 ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್. 20 ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
1 ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು. 2 ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು. 3 ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. 4 ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. 5 ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; 6 ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. 7 ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. 8 ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. 9 ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು. 10 ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ. 11 ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ. 12 ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ. 13 ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ. 14 ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು. 15 ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು. 16 ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ 17 ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು. 18 ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. 19 ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. 20 ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ. 21 ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು. 22 ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು. 23 ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ. 24 ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ. 25 ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ. 26 ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ. 27 ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ. 28 ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
1 ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ? 2 ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ. 3 ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು. 4 ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ. 5 ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ; 6 ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ. 7 ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ. 8 ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ. 9 ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ. 10 ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ? 11 ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ. 12 ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ. 13 ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ. 14 ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ. 15 ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ. 16 ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ. 17 ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ. 18 ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ. 19 ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ. 20 ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ. 21 ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ. 22 ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ. 23 ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
1 ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ. 2 ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು; 3 ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ. 4 ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು. 5 ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ. 6 ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ. 7 ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ. 8 ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು. 9 ಆದರೆ ನಾನು ಎಂದೆಂದಿಗೂ ಪ್ರಕಟಿಸುವೆನು, ಯಾಕೋಬನ ದೇವರ ಸ್ತುತಿಗಳನ್ನು ಹಾಡುವೆನು; 10 ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
1 ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ. 2 ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು. 3 ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ. 4 ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ. 5 ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ. 6 ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ. 7 ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು? 8 ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ. 9 ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ. 10 ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ. 11 ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ. 12 ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
1 ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು. 2 ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು. 3 ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ. 4 ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ. 5 ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು. 6 ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು. 7 ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ? 8 ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ? 9 ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ. 10 ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು; 11 ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು. 12 ನಿನ್ನ ಕೆಲಸವನ್ನೆಲ್ಲಾ ಸ್ಮರಿಸಿ ನಿನ್ನ ಕೃತ್ಯಗಳನ್ನು ಕುರಿತು ಮಾತನಾಡುವೆನು. 13 ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು? 14 ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ. 15 ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ. 16 ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು. 17 ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು. 18 ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು. 19 ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ. 20 ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
1 ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ. 2 ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು. 3 ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. 4 ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. 5 ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು 6 ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ 7 ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು 8 ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು. 9 ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು. 10 ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು. 11 ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು. 12 ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು. 13 ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು. 14 ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು. 15 ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು. 16 ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು. 17 ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ 18 ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು. 19 ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. 20 ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು. 21 ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು. 22 ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ. 23 ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು. 24 ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು. 25 ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು. 26 ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು. 27 ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ 28 ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು. 29 ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು. 30 ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ 31 ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು. 32 ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ. 33 ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು. 34 ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ 35 ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. 36 ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. 37 ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ 38 ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ. 39 ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು. 40 ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು. 41 ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು. 42 ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ 43 ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ. 44 ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು. 45 ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು. 46 ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು 47 ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ 48 ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು. 49 ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು. 50 ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ 51 ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು. 52 ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು. 53 ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು. 54 ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು. 55 ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು. 56 ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ. 57 ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು. 58 ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು. 59 ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು, 60 ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು, 61 ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು. 62 ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು. 63 ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ. 64 ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ. 65 ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು, 66 ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು. 67 ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ, 68 ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, 69 ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು 70 ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, 71 ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು. 72 ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
1 ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ. 2 ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ. 3 ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ. 4 ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ. 5 ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ? 6 ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು. 7 ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ. 8 ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ. 9 ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು. 10 ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ. 11 ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು. 12 ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು. 13 ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
1 ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು. 2 ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು. 3 ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು. 4 ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ? 5 ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ. 6 ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ. 7 ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು. 8 ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ. 9 ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು. 10 ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು. 11 ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು. 12 ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ? 13 ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ. 14 ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ 15 ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು. 16 ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ. 17 ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ. 18 ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು. 19 ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
1 ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ. 2 ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ. 3 ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ. 4 ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ; 5 ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು. 6 ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು. 7 ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ. 8 ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು. 9 ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು. 10 ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು. 11 ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. 12 ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು. 13 ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ, 14 ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು. 15 ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು. 16 ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
1 ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ. 2 ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ. 3 ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ. 4 ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ. 5 ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು. 6 ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು. 7 ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ. 8 ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
1 ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ. 2 ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ. 3 ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ. 4 ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. 5 ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. 6 ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ 7 ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; 8 ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ. 9 ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು. 10 ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು. 11 ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು. 12 ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ. 13 ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು. 14 ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ 15 ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು. 16 ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು. 17 ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ. 18 ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
1 ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! 2 ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ. 3 ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ. 4 ನಿನ್ನ ಆಲಯದಲ್ಲಿ ವಾಸವಾಗಿ ರುವವರು ಭಾಗ್ಯವಂತರು; ಇನ್ನೂ ನಿನ್ನನ್ನು ಅವರು ಸ್ತುತಿಸುವರು ಸೆಲಾ. 5 ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು. 6 ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ. 7 ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ. 8 ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ. 9 ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು. 10 ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು. 11 ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ. 12 ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
1 ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ. 2 ನಿನ್ನ ಜನರ ಅಕ್ರಮವನ್ನು ಪರಿಹರಿಸಿದ್ದೀ; ಅವರ ಪಾಪವನ್ನೆಲ್ಲಾ ಮುಚ್ಚಿದ್ದೀ ಸೆಲಾ. 3 ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ. 4 ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು. 5 ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ? 6 ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ? 7 ಓ ಕರ್ತನೇ, ನಿನ್ನ ಕರುಣೆಯನ್ನು ನಮಗೆ ದಯಪಾಲಿಸು. ನಿನ್ನ ರಕ್ಷಣೆಯನ್ನು ನಮಗೆ ಕೊಡು. 8 ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ. 9 ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ. 10 ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ. 11 ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. 12 ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು. 13 ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
1 ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ. 2 ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು. 3 ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ. 4 ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. 5 ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ. 6 ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು. 7 ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ. 8 ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ. 9 ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು. 10 ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು. 11 ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು. 12 ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು. 13 ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ. 14 ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ. 15 ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ. 16 ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು. 17 ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
1 ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ. 2 ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ. 3 ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ. 4 ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು. 5 ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು. 6 ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ. 7 ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
1 ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ. 2 ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು. 3 ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ. 4 ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. 5 ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ. 6 ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ. 7 ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ. 8 ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು. 9 ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ. 10 ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ. 11 ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ? 12 ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ? 13 ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು. 14 ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ? 15 ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. 16 ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ. 17 ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ. 18 ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
1 ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು. 2 ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ. 3 ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ-- 4 ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ. 5 ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು. 6 ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು? 7 ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ. 8 ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ. 9 ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ. 10 ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ. 11 ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ. 12 ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ. 13 ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು. 14 ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ; 15 ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು. 16 ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು. 17 ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು. 18 ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ. 19 ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ. 20 ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ. 21 ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು. 22 ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು. 23 ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು. 24 ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು. 25 ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು. 26 ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು. 27 ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು. 28 ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು. 29 ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು. 30 ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ, 31 ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ, 32 ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು. 33 ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು. 34 ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. 35 ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. 36 ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. 37 ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ. 38 ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ; 39 ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ. 40 ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ. 41 ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ. 42 ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ. 43 ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ. 44 ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ. 45 ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ. 46 ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ? 47 ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ? 48 ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ. 49 ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ? 50 ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ. 51 ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ? 52 ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
1 ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ. 2 ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ. 3 ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ; 4 ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ. 5 ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. 6 ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ. 7 ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ. 8 ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ. 9 ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ. 10 ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ. 11 ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ. 12 ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು. 13 ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ. 14 ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು. 15 ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು. 16 ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ. 17 ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
1 ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು. 2 ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ. 3 ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು. 4 ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ. 5 ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ 6 ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ. 7 ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ. 8 ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ. 9 ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ 10 ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು. 11 ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು. 12 ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು. 13 ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ. 14 ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು. 15 ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು. 16 ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
1 ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ 2 ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ 3 ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು. 4 ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ. 5 ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ. 6 ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು. 7 ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ. 8 ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ; 9 ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು. 10 ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು. 11 ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು. 12 ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು. 13 ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. 14 ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು. 15 ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
1 ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ. 2 ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ. 3 ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. 4 ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ. 5 ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
1 ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ. 2 ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು. 3 ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು? 4 ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ; 5 ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ. 6 ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ. 7 ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ. 8 ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ? 9 ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ? 10 ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ? 11 ಕರ್ತನು ಮನುಷ್ಯನ ಯೋಚನೆ ಗಳನ್ನು ವ್ಯರ್ಥವೆಂದು ತಿಳುಕೊಳ್ಳುತ್ತಾನೆ. 12 ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು. 13 ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು. 14 ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು. 15 ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು. 16 ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು? 17 ಕರ್ತನು ನನಗೆ ಸಹಾಯಕ ನಾಗಿರದಿದ್ದರೆ ನನ್ನ ಪ್ರಾಣವು ಮೌನದಲ್ಲಿ ವಾಸಿಸ ಬೇಕಾಗಿತ್ತು. 18 ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು. 19 ನನ್ನ ಚಿಂತೆಗಳು ಅಂತರಂಗದಲ್ಲಿ ಹೆಚ್ಚುವಾಗ ನಿನ್ನ ಆದರಣೆಗಳು ನನ್ನ ಪ್ರಾಣವನ್ನು ಆನಂದಪಡಿಸುತ್ತವೆ. 20 ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ? 21 ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ. 22 ಆದರೆ ಕರ್ತನು ನನಗೆ ದುರ್ಗವೂ ನನ್ನ ದೇವರು ನನ್ನ ಆಶ್ರಯದ ಬಂಡೆಯೂ ಆಗಿದ್ದಾನೆ. 23 ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
1 ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ. 2 ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ. 3 ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ. 4 ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ. 5 ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು. 6 ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ. 7 ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ 8 ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ. 9 ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು. 10 ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು. 11 ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
1 ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ. 2 ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. 3 ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ. 4 ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು. 5 ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು. 6 ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ. 7 ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ. 8 ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ. 9 ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು, 10 ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ. 11 ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. 12 ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ. 13 ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
1 ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ. 2 ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ. 3 ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು. 4 ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ. 5 ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ. 6 ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ. 7 ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ. 8 ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ. 9 ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ. 10 ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. 11 ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ. 12 ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
1 ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ. 2 ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ. 3 ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ. 4 ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ. 5 ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ. 6 ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ. 7 ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ. 8 ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ. 9 ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
1 ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ. 2 ಕರ್ತನು ಚೀಯೋನಿನಲ್ಲಿ ದೊಡ್ಡವನಾಗಿಯೂ ಎಲ್ಲಾ ಜನಗಳ ಮೇಲೆ ಉನ್ನತನಾಗಿಯೂ ಇದ್ದಾನೆ. 3 ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ. 4 ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ. 5 ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ. 6 ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು. 7 ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು. 8 ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ. 9 ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
1 ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ, 2 ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ. 3 ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ. 4 ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ. 5 ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
1 ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಓ ಕರ್ತನೇ, ನಿನ್ನನ್ನು ಕೀರ್ತಿ ಸುವೆನು. 2 ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು. 3 ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು. 4 ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ. 5 ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. 6 ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. 7 ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ; 8 ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
1 ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ. 2 ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು. 3 ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ. 4 ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ. 5 ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ. 6 ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ. 7 ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ. 8 ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ. 9 ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ. 10 ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ; 11 ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ. 12 ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ. 13 ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ. 14 ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ. 15 ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು. 16 ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು. 17 ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ. 18 ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು. 19 ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ 20 ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ. 21 ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ 22 ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ. 23 ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು. 24 ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು. 25 ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. 26 ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. 27 ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು. 28 ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
1 ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. 2 ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ. 3 ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ 4 ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು 5 ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ. 6 ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ. 7 ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು. 8 ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ. 9 ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ; 10 ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ. 11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ. 12 ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ. 13 ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ. 14 ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ; 15 ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. 16 ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು. 17 ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ 18 ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು. 19 ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ. 20 ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ, 21 ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ. 22 ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
1 ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ. 2 ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ. 3 ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ. 4 ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ. 5 ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು. 6 ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು. 7 ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು. 8 ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು. 9 ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ. 10 ಬುಗ್ಗೆ ಗಳನ್ನು ಹಳ್ಳಗಳಿಗೆ ಕಳುಹಿಸುತ್ತೀ; ಅವು ಬೆಟ್ಟಗಳ ನಡುವೆ ಹರಿಯುತ್ತವೆ; 11 ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ. 12 ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ. 13 ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ. 14 ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ. 15 ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ. 16 ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ. 17 ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ. 18 ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ. 19 ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ. 20 ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ. 21 ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ. 22 ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ. 23 ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ. 24 ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ. 25 ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ. 26 ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ. 27 ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ. 28 ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ. 29 ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ. 30 ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ. 31 ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ. 32 ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ. 33 ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು. 34 ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು. 35 ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
1 ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ. 2 ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ. 3 ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ. 4 ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ. 5 ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ; 6 ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ, 7 ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ. 8 ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ 9 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. 10 ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- 11 ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು. 12 ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು. 13 ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು. 14 ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು. 15 ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು. 16 ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು. 17 ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು. 18 ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು. 19 ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು. 20 ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು. 21 ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ 22 ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು. 23 ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು. 24 ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು. 25 ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು. 26 ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು. 27 ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. 28 ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. 29 ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. 30 ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. 31 ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. 32 ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. 33 ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. 34 ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, 35 ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. 36 ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು. 37 ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ. 38 ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು. 39 ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು. 40 ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು. 41 ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು. 42 ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು. 43 ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು, 44 ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು. 45 ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
1 ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು. 2 ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು? 3 ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು. 4 ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು. 5 ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು. 6 ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ. 7 ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು. 8 ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು. 9 ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು. 10 ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು. 11 ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ. 12 ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು. 13 ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು. 14 ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು. 15 ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು. 16 ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು. 17 ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು. 18 ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು. 19 ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು. 20 ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು. 21 ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ 22 ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು. 23 ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು. 24 ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು. 25 ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು. 26 ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ 27 ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು. 28 ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು 29 ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು. 30 ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು. 31 ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು. 32 ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು. 33 ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು. 34 ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು. 35 ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. 36 ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು. 37 ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. 38 ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು. 39 ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು. 40 ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು 41 ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು. 42 ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು. 43 ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು. 44 ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು 45 ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು. 46 ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು. 47 ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು. 48 ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
1 ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು. 2 ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ, 3 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ. 4 ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ, 5 ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು. 6 ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ, 7 ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು. 8 ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ. 9 ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ. 10 ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು 11 ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ 12 ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು. 13 ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ 14 ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು. 15 ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ. 16 ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ. 17 ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ. 18 ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ. 19 ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ. 20 ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು. 21 ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. 22 ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ. 23 ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು 24 ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. 25 ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ. 26 ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ. 27 ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು. 28 ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ 29 ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು. 30 ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ. 31 ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ. 32 ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ. 33 ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ 34 ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ. 35 ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ. 36 ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ, 37 ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು. 38 ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ. 39 ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ. 40 ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ. 41 ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ. 42 ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು. 43 ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
1 ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು. 2 ವೀಣೆಯೇ, ಕಿನ್ನರಿಯೇ, ಎಚ್ಚರವಾಗು; ನಾನು ಉದಯದಲ್ಲಿ ಎಚ್ಚರಗೊಳ್ಳುವೆನು. 3 ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು. 4 ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು. 5 ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ. 6 ನಿನ್ನ ಪ್ರಿಯರು ಬಿಡುಗಡೆಯಾಗುವ ಹಾಗೆ ನಿನ್ನ ಬಲಗೈಯಿಂದ ರಕ್ಷಿಸಿ ನನಗೆ ಉತ್ತರ ಕೊಡು. 7 ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು. 8 ಗಿಲ್ಯಾದ್ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ 9 ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು. 10 ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು? 11 ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ? 12 ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ. 13 ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
1 ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ. 2 ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ. 3 ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ. 4 ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ. 5 ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ. 6 ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ. 7 ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ. 8 ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ. 9 ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ. 10 ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ. 11 ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ. 12 ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ. 13 ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ. 14 ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. 15 ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ. 16 ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು. 17 ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. 18 ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. 19 ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ. 20 ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ. 21 ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು. 22 ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ. 23 ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ; 24 ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು. 25 ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ. 26 ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು. 27 ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ. 28 ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ. 29 ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ. 30 ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು. 31 ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
1 ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ, 2 ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು. 3 ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು. 4 ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು. 5 ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು. 6 ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು. 7 ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
1 ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು. 2 ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ. 3 ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ. 4 ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ. 5 ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು. 6 ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ. 7 ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು. 8 ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ. 9 ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ. 10 ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
1 ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು. 2 ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು. 3 ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ. 4 ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ. 5 ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು. 6 ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು. 7 ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ. 8 ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು. 9 ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು. 10 ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
1 ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ; 2 ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ. 3 ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು. 4 ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ. 5 ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ. 6 ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ. 7 ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, 8 ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ. 9 ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
1 ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ 2 ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು. 3 ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು. 4 ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. 5 ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? 6 ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ? 7 ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವ 8 ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
1 ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ. 2 ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು? 3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ. 4 ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. 5 ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. 6 ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. 7 ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, 8 ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ. 9 ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ. 10 ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ. 11 ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ. 12 ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು. 13 ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು. 14 ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು. 15 ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು. 16 ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ. 17 ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ. 18 ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
1 ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. 2 ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು. 3 ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. 4 ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು. 5 ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು. 6 ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು. 7 ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ. 8 ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ. 9 ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು. 10 ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು. 11 ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು. 12 ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ? 13 ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು. 14 ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು. 15 ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ. 16 ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ. 17 ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು. 18 ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ, 19 ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
1 ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ. 2 ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
1 ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ. 2 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ. 3 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ. 4 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ. 5 ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು. 6 ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು? 7 ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು. 8 ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು. 9 ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು. 10 ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು. 11 ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು. 12 ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು. 13 ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು. 14 ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು. 15 ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ. 16 ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ. 17 ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು. 18 ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ. 19 ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು. 20 ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು. 21 ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ. 22 ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. 23 ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ. 24 ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು. 25 ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ. 26 ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು. 27 ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ, 28 ನೀನು ನನ್ನ ದೇವರಾಗಿದ್ದೀ; ನಿನ್ನನ್ನು ಕೊಂಡಾಡುವೆನು; ನನ್ನ ದೇವರೇ, ನಿನ್ನನ್ನು ಘನಪಡಿಸುವೆನು. 29 ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.
1 ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು. 2 ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು. 3 ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ. 4 ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ. 5 ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ. 6 ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು. 7 ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು. 8 ನಿನ್ನ ನಿಯಮಗಳನ್ನು ಕೈಕೊಳ್ಳುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ. 9 ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ. 10 ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು. 11 ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ. 12 ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು. 13 ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ. 14 ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ. 15 ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು. 16 ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು. 17 ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು. 18 ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು. 19 ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ. 20 ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ 21 ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ. 22 ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು. 23 ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು. 24 ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ. 25 ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು. 26 ನಾನು ನಿನ್ನ ಮಾರ್ಗಗಳನ್ನು ಸಾರಲು, ನನಗೆ ಉತ್ತರಕೊಟ್ಟೆ; ನಿನ್ನ ನಿಯಮಗಳನ್ನು ನನಗೆ ಕಲಿಸು. 27 ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು. 28 ನನ್ನ ಪ್ರಾಣವು ಭಾರದಿಂದ ಕರಗಿಹೋಗುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಸ್ಥಿರಮಾಡು; 29 ಸುಳ್ಳು ಮಾರ್ಗವನ್ನು ನನ್ನಿಂದ ತೊಲ ಗಿಸು. ನಿನ್ನ ನ್ಯಾಯಪ್ರಮಾಣವನ್ನು ನನಗೆ ಕೃಪೆಯಿಂದ ಅನುಗ್ರಹಿಸು. 30 ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ; 31 ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ. 32 ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ. 33 ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು. 34 ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು. 35 ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ. 36 ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು. 37 ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು. 38 ನಿನ್ನಲ್ಲಿ ಭಯಭಕ್ತಿಯುಳ್ಳ ಸೇವಕನಿಗೆ ವಾಕ್ಯವನ್ನು ನೇರವೇರಿಸು, 39 ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು; 40 ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು. 41 ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ. 42 ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ. 43 ಸತ್ಯದ ವಾಕ್ಯವನ್ನು ನನ್ನ ಬಾಯಿಂದ ಪೂರ್ಣವಾಗಿ ತೆಗೆದುಹಾಕಬೇಡ; ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿದ್ದೇನೆ, 44 ನಿನ್ನ ನ್ಯಾಯಪ್ರಮಾಣವನ್ನು ಸತತವಾಗಿ ಎಂದೆಂದಿಗೂ ಕೈಕೊಳ್ಳುವೆನು. 45 ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ. 46 ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ. 47 ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು. 48 ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು. 49 ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ, 50 ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು. 51 ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ. 52 ಓ ಕರ್ತನೇ, ಪೂರ್ವಕಾಲದಿಂದ ಬಂದಿ ರುವ ನಿನ್ನ ನ್ಯಾಯಗಳನ್ನು ಜ್ಞಾಪಕಮಾಡಿಕೊಂಡು ಆದರಣೆ ಹೊಂದಿದ್ದೇನೆ. 53 ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು. 54 ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಯಮಗಳು ನನಗೆ ಕೀರ್ತನೆಗಳಾಗಿವೆ. 55 ಓ ಕರ್ತನೇ, ರಾತ್ರಿಯಲ್ಲಿ ನಿನ್ನ ಹೆಸರನ್ನು ಜ್ಞಾಪಕಮಾಡಿಕೊಂಡಿದ್ದೇನೆ, ನಿನ್ನ ನ್ಯಾಯ ಪ್ರಮಾಣವನ್ನು ಕೈಕೊಂಡಿದ್ದೇನೆ. 56 ನಿನ್ನ ಕಟ್ಟಳೆಗಳನ್ನು ಕೈಕೊಳ್ಳಲು ನನಗೆ ಅನುಗ್ರಹವಾಯಿತು. 57 ಕರ್ತನೇ ನನ್ನ ಪಾಲು; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ಹೇಳಿದೆನು. 58 ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು. 59 ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ. 60 ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ. 61 ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ. 62 ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ. 63 ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ. 64 ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು. 65 ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ. 66 ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ. 67 ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ. 68 ನೀನು ಒಳ್ಳೆಯ ವನೂ ಒಳ್ಳೇದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಯಮಗಳನ್ನು ನನಗೆ ಬೋಧಿಸು. 69 ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು. 70 ಅವರ ಹೃದಯವು ಕೊಬ್ಬಿನ ಹಾಗೆ ಮಂದವಾಗಿದೆ; ನಾನು ನಿನ್ನ ನ್ಯಾಯಪ್ರಮಾಣದಲ್ಲಿ ಆನಂದಪಡುತ್ತೇನೆ. 71 ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು. 72 ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು. 73 ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು. 74 ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ. 75 ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು. 76 ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ. 77 ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ. 78 ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು. 79 ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ. 80 ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ. 81 ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ. 82 ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ. 83 ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ. 84 ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ? 85 ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ. 86 ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು. 87 ಅವರು ನನ್ನನ್ನು ಬಹಳ ಮಟ್ಟಿಗೆ ಭೂಮಿಯಲ್ಲಿ ಸಂಹರಿಸುವದಕ್ಕಿದ್ದರು. ಆದರೆ ನಾನು ನಿನ್ನ ಕಟ್ಟಳೆಗಳನ್ನು ಬಿಡಲಿಲ್ಲ. 88 ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು. 89 ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ. 90 ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ. 91 ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ. 92 ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು. 93 ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ. 94 ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ. 95 ದುಷ್ಟರು ನನ್ನನ್ನು ನಾಶಮಾಡುವದಕ್ಕೆ ನನಗಾಗಿ ಕಾದುಕೊಳ್ಳುತ್ತಾರೆ. ನಿನ್ನ ಸಾಕ್ಷಿಗಳನ್ನು ಗ್ರಹಿಸಿ ಕೊಳ್ಳುತ್ತೇನೆ. 96 ಎಲ್ಲಾ ಸಂಪೂರ್ಣತೆಯ ಮೇರೆ ಯನ್ನು ನೋಡಿದ್ದೇನೆ; ಆದರೆ ನಿನ್ನ ಆಜ್ಞೆಯು ಬಹಳ ವಿಸ್ತಾರವಾಗಿದೆ. 97 ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು. 98 ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. 99 ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. 100 ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ. 101 ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ. 102 ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ. 103 ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ. 104 ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ. 105 ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ. 106 ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು. 107 ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು. 108 ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು. 109 ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು. 110 ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ. 111 ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ. 112 ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ. 113 ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ. 114 ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ. 115 ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು. 116 ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ. 117 ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು. 118 ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು. 119 ಕಿಟ್ಟದ ಹಾಗೆ ಭೂಮಿ ಯಲ್ಲಿರುವ ದುಷ್ಟರೆಲ್ಲರನ್ನು ತೆಗೆದುಹಾಕುತ್ತೀ, ಆದದ ರಿಂದ ನಿನ್ನ ವಿಧಿಗಳನ್ನು ಪ್ರೀತಿ ಮಾಡುತ್ತೇನೆ. 120 ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ. 121 ನ್ಯಾಯವನ್ನೂ ನೀತಿಯನ್ನೂ ಮಾಡಿದ್ದೇನೆ;ನನ್ನ ಹಿಂಸಕರಿಗೆ ನನ್ನನ್ನು ಒಪ್ಪಿಸಿಬಿಡಬೇಡ. 122 ಒಳ್ಳೇದಕ್ಕಾಗಿ ನಿನ್ನ ಸೇವಕನಿಗೆ ಹೊಣೆಯಾಗು; ಅಹಂಕಾರಿಗಳು ನನಗೆ ಹಿಂಸೆ ಮಾಡದಿರಲಿ. 123 ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು. 124 ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು. 125 ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು. 126 ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ. 127 ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ. 128 ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ. 129 ನಿನ್ನ ಸಾಕ್ಷಿಗಳು ಅದ್ಭುತವಾದವುಗಳೇ; ಆದದ ರಿಂದ ನನ್ನ ಪ್ರಾಣವು ಅವುಗಳನ್ನು ಕೈಕೊಳ್ಳುತ್ತದೆ. 130 ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ. 131 ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ. 132 ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು. 133 ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ. 134 ಮನುಷ್ಯರ ಬಲಾತ್ಕಾರದಿಂದ ನನ್ನನ್ನು ತಪ್ಪಿಸು; ಆಗ ನಿನ್ನ ಕಟ್ಟಳೆಗಳನ್ನು ನಾನು ಕೈಕೊಳ್ಳುವೆನು. 135 ನಿನ್ನ ಮುಖವನ್ನು ನಿನ್ನ ಸೇವಕನ ಮೇಲೆ ಪ್ರಕಾಶಿಸ ಮಾಡು ಮತ್ತು ನಿನ್ನ ನಿಯಮಗಳನ್ನು ನನಗೆ ಕಲಿಸು. 136 ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ. 137 ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ. 138 ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ. 139 ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ. 140 ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ. 141 ನಾನು ಅಲ್ಪನೂ ತಿರಸ್ಕರಿಸ ಲ್ಪಟ್ಟವನೂ ಆಗಿದ್ದರೂ ನಿನ್ನ ಕಟ್ಟಳೆಗಳನ್ನು ನಾನು ಮರೆತುಬಿಡುವದಿಲ್ಲ. 142 ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ. 143 ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ. 144 ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು. 145 ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು. 146 ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು. 147 ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ. 148 ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ. 149 ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನ ಮೊರೆಯನ್ನು ಕೇಳು; ಓ ಕರ್ತನೇ, ನಿನ್ನ ವಿಧಿಯ ಪ್ರಕಾರ ನನ್ನನ್ನು ಉಜ್ಜೀವಿಸು. 150 ದುಷ್ಟತನವನ್ನು ಕಲ್ಪಿಸುವವರು ಸವಿಾಪವಾಗಿದ್ದಾರೆ; ನಿನ್ನ ನ್ಯಾಯ ಪ್ರಮಾಣಕ್ಕೆ ಅವರು ದೂರವಾಗಿದ್ದಾರೆ. 151 ಓ ಕರ್ತನೇ, ನೀನು ಸವಿಾಪವೇ ಇದ್ದೀ; ನಿನ್ನ ಆಜ್ಞೆ ಗಳೆಲ್ಲಾ ಸತ್ಯವೇ. 152 ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು. 153 ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು. 154 ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡುಗಡೆ ಮಾಡು; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸು. 155 ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ನಿನ್ನ ನಿಯ ಮಗಳನ್ನು ಅವರು ಹುಡುಕರು. 156 ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು. 157 ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು. 158 ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ. 159 ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು. 160 ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ. 161 ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ. 162 ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ. 163 ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ. 164 ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ. 165 ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ. 166 ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ. 167 ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ; 168 ನಿನ್ನ ಕಟ್ಟಳೆ ಗಳನ್ನೂ ಸಾಕ್ಷಿಗಳನ್ನೂ ಕೈಕೊಳ್ಳುತ್ತೇನೆ; ನನ್ನ ಮಾರ್ಗ ಗಳೆಲ್ಲಾ ನಿನ್ನ ಮುಂದೆ ಇವೆ. 169 ಓ ಕರ್ತನೇ, ನನ್ನ ಕೂಗು ನಿನ್ನ ಸನ್ನಿಧಿಗೆ ಮುಟ್ಟಲಿ; ನಿನ್ನ ವಾಕ್ಯದ ಪ್ರಕಾರ ನನಗೆ ಜ್ಞಾನವನ್ನು ಕೊಡು. 170 ನನ್ನ ವಿಜ್ಞಾಪನೆಯು ನಿನ್ನ ಸಮ್ಮುಖಕ್ಕೆ ಬರಲಿ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಬಿಡಿಸು. 171 ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ. 172 ನನ್ನ ನಾಲಿಗೆಯು ನಿನ್ನ ವಾಕ್ಯದ ವಿಷಯವಾಗಿ ಮಾತನಾಡುತ್ತದೆ. ನಿನ್ನ ಆಜ್ಞೆಗಳೆಲ್ಲಾ ನೀತಿಯೇ. 173 ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ. 174 ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ. 175 ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ. 176 ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
1 ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು. 2 ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು. 3 ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು? 4 ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ. 5 ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ! 6 ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು. 7 ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
1 ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು? 2 ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ. 3 ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ. 4 ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ. 5 ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ. 6 ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ. 7 ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು. 8 ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
1 ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು. 2 ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ. 3 ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ. 4 ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ. 5 ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ. 6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು. 7 ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ. 8 ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ. 9 ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
1 ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ. 2 ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ. 3 ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ. 4 ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
1 ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ, 2 ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು, 3 ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು. 4 ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು. 5 ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು. 6 ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ. 7 ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು. 8 ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
1 ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು. 2 ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ. 3 ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ. 4 ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು. 5 ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
1 ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು. 2 ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು. 3 ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ. 4 ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು. 5 ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನು 6 ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
1 ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ. 2 ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ. 3 ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ. 4 ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ. 5 ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
1 ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. 2 ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು. 3 ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು. 4 ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು. 5 ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ. 6 ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
1 ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು. 2 ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ. 3 ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ. 4 ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ. 5 ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ. 6 ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ. 7 ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು. 8 ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
1 ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. 2 ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ. 3 ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು? 4 ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು. 5 ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ. 6 ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ. 7 ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ. 8 ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
1 ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ. 2 ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ. 3 ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
1 ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ. 2 ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ-- 3 ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ 4 ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು; 5 ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು. 6 ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು. 7 ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ. 8 ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು. 9 ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ. 10 ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ. 11 ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು. 12 ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು. 13 ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. 14 ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ. 15 ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು. 16 ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು. 17 ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ. 18 ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
1 ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು! 2 ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂ 3 ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
1 ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ. 2 ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ. 3 ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
1 ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ 2 ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ. 3 ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು. 4 ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ. 5 ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ. 6 ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ. 7 ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ. 8 ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು. 9 ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು. 10 ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು. 11 ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು. 12 ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು. 13 ಓ ಕರ್ತನೇ, ನಿನ್ನ ಹೆಸರು ಶಾಶ್ವತವಾದದ್ದು, ಓ ಕರ್ತನೇ, ನಿನ್ನ ಜ್ಞಾಪಕವು ತಲತಲಾಂತರಕ್ಕೂ ಇರುವದು. 14 ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು. 15 ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ. 16 ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ. 17 ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ. 18 ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ. 19 ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ. 20 ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ. 21 ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
1 ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. 2 ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 3 ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 4 ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 5 ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 6 ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 7 ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 8 ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 9 ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 10 ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 11 ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. 12 ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. 13 ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 14 ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 15 ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 16 ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 17 ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 18 ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 19 ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. 20 ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. 21 ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. 22 ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ. 23 ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ. 24 ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 25 ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 26 ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
1 ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು. 2 ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು. 3 ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು. 4 ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ? 5 ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ. 6 ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ. 7 ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ. 8 ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು. 9 ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
1 ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು. 2 ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ. 3 ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ. 4 ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು. 5 ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು. 6 ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ. 7 ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ. 8 ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
1 ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; 2 ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ; 3 ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ. 4 ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ. 5 ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ. 6 ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ. 7 ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ? 8 ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ. 9 ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ 10 ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು. 11 ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. 12 ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ. 13 ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ. 14 ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ; 15 ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ. 16 ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು. 17 ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ. 18 ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ. 19 ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ. 20 ಅವರು ನಿನಗೆ ವಿರೋಧವಾಗಿ ಕೆಟ್ಟತನದಿಂದ ಮಾತನಾಡುತ್ತಾರೆ; ನಿನ್ನ ವೈರಿಗಳು ನಿನ್ನ ಹೆಸರನ್ನು ವ್ಯರ್ಥವಾಗಿ ಎತ್ತುತ್ತಾರೆ. 21 ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ? 22 ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ. 23 ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ. 24 ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
1 ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು. 2 ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ. 3 ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ. 4 ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ. 5 ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ. 6 ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು. 7 ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ. 8 ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ. 9 ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ. 10 ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ. 11 ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು. 12 ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು. 13 ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
1 ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು. 2 ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ. 3 ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ 4 ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ. 5 ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು. 6 ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ. 7 ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ. 8 ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ. 9 ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು. 10 ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
1 ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ. 2 ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ. 3 ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ. 4 ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ. 5 ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ. 6 ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ. 7 ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
1 ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು. 2 ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ. 3 ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ. 4 ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ. 5 ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ. 6 ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ. 7 ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ. 8 ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. 9 ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ. 10 ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ. 11 ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು. 12 ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
1 ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ. 2 ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ. 3 ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು? 4 ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ. 5 ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು. 6 ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು. 7 ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು. 8 ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ. 9 ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು. 10 ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ, 11 ಅನ್ಯರ ಮಕ್ಕಳ ಕೈಯಿಂದ ನನ್ನನ್ನು ತಪ್ಪಿಸಿ, ನನ್ನನ್ನು ಬಿಡಿಸು; ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು; ಅವರ ಬಲಗೈ ಮೋಸದ ಬಲಗೈ ಆಗಿದೆ. 12 ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ. 13 ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ. 14 ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ. 15 ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
1 ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. 2 ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು. 3 ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು. 4 ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. 5 ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ 6 ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. 7 ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. 8 ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. 9 ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ. 10 ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. 11 ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. 12 ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು. 13 ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು. 14 ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ. 15 ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ. 16 ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ. 17 ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ. 18 ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. 19 ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ. 20 ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ. 21 ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
1 ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು. 2 ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು. 3 ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ; 4 ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ. 5 ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. 6 ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ. 7 ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ. 8 ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ; 9 ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ. 10 ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
1 ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ. 2 ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ. 3 ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ. 4 ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ. 5 ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ. 6 ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ. 7 ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ. 8 ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ. 9 ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ. 10 ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ. 11 ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ. 12 ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು. 13 ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ. 14 ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ. 15 ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ; 16 ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ. 17 ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು? 18 ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ. 19 ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ. 20 ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
1 ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ. 2 ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ; 3 ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ. 4 ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ. 5 ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು. 6 ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ. 7 ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ, 8 ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ, 9 ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ, 10 ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ, 11 ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ, 12 ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ, 13 ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ. 14 ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
1 ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ. 2 ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ. 3 ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ. 4 ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ. 5 ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ. 6 ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ. 7 ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ. 8 ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ; 9 ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
1 ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ. 2 ಆತನ ಪರಾಕ್ರಮಗಳಿಗೋಸ್ಕರ ಆತನನ್ನು ಸ್ತುತಿಸಿರಿ; ಆತನ ಮಹಾ ಪ್ರಭಾವದ ಪ್ರಕಾರ ಆತನನ್ನು ಸ್ತುತಿಸಿರಿ. 3 ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ. 4 ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ. 5 ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ. 6 ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
1 ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು. 2 ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ 3 ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ 4 ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ. 5 ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು. 6 ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ. 7 ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ. 8 ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ; 9 ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು. 10 ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ. 11 ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. 12 ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. 13 ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. 14 ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. 15 ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. 16 ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ. 17 ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ. 18 ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ. 19 ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ. 20 ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ. 21 ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ-- 22 ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು? 23 ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು. 24 ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ 25 ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ 26 ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ 27 ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. 28 ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ. 29 ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ 30 ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ 31 ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು. 32 ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು. 33 ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
1 ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ 2 ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ 3 ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ 4 ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, 5 ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. 6 ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ. 7 ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ. 8 ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ. 9 ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ. 10 ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು. 11 ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು; 12 ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ 13 ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ 14 ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು. 15 ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ. 16 ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು 17 ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು. 18 ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ. 19 ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ. 20 ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು. 21 ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು. 22 ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
1 ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ: 2 ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು. 3 ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ. 4 ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ. 5 ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. 6 ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು. 7 ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು. 8 ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು. 9 ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. 10 ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು. 11 ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ; 12 ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು. 13 ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು. 14 ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ. 15 ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ. 16 ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ. 17 ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ. 18 ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು. 19 ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು. 20 ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ. 21 ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ. 22 ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು. 23 ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ. 24 ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು. 25 ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು. 26 ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು. 27 ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ. 28 ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ. 29 ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ. 30 ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ. 31 ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ. 32 ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ. 33 ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ. 34 ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ. 35 ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
1 ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ. 2 ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ. 3 ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ. 4 ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು. 5 ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ. 6 ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು. 7 ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ. 8 ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು. 9 ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು. 10 ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು. 11 ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು. 12 ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ. 13 ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ. 14 ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ. 15 ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ. 16 ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು. 17 ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ. 18 ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು. 19 ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು. 20 ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು. 21 ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ. 22 ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ. 23 ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು. 24 ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು. 25 ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ. 26 ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ. 27 ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
1 ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ 2 ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು. 3 ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ. 4 ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ. 5 ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ. 6 ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ. 7 ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ. 8 ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು. 9 ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ. 10 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು. 11 ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- 12 ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. 13 ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು. 14 ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ. 15 ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. 16 ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ. 17 ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ. 18 ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. 19 ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು. 20 ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ? 21 ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ. 22 ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು. 23 ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
1 ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ 2 ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ. 3 ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು. 4 ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. 5 ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ. 6 ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು. 7 ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ 8 ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು. 9 ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ? 10 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ? 11 ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು. 12 ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು. 13 ಅವನು ತನ್ನ ಕಣ್ಣುಗಳಿಂದ ಸನ್ನೆಮಾಡಿ ತನ್ನ ಕಾಲುಗಳಿಂದ ಮಾತಾಡುತ್ತಾ ತನ್ನ ಬೆರಳುಗಳಿಂದ ಬೋಧಿಸುತ್ತಾನೆ. 14 ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ. 15 ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು. 16 ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ: 17 ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು, 18 ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು, 19 ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು. 20 ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ. 21 ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ. 22 ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು. 23 ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ. 24 ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು. 25 ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ. 26 ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು. 27 ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ? 28 ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ? 29 ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು. 30 ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ. 31 ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು. 32 ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು. 33 ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು. 34 ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ. 35 ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
1 ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ. 2 ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು. 3 ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ. 4 ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು; 5 ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು. 6 ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ 7 ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು. 8 ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ 9 ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು. 10 ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು. 11 (ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ. 12 ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು). 13 ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು 14 ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ. 15 ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ. 16 ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ. 17 ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ. 18 ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ. 19 ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ. 20 ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು 21 ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು. 22 ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ 23 ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ. 24 ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ. 25 ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ. 26 ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ. 27 ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
1 ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ? 2 ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ. 3 ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ-- 4 ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ. 5 ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ. 6 ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು. 7 ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ. 8 ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ. 9 ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ. 10 ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ. 11 ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು. 12 ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ. 13 ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ. 14 ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ. 15 ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು. 16 ನನ್ನಿಂದ ಅಧಿಪತಿಗಳೂ ಕೀರ್ತಿವಂತರೂ ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೂ ಆಳುವರು. 17 ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು. 18 ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ. 19 ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ. 20 ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ. 21 ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು. 22 ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು. 23 ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು. 24 ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು. 25 ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ 26 ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು. 27 ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ 28 ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ 29 ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು. 30 ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು. 31 ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು. 32 ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು. 33 ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ. 34 ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು. 35 ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು. 36 ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
1 ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ. 2 ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. 3 ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ-- 4 ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು-- 5 ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ 6 ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ. 7 ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. 8 ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. 9 ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು. 10 ಪರಿಶುದ್ಧರ ತಿಳುವಳಿಕೆಯೇ ವಿವೇಕವು. 11 ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು. 12 ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ. 13 ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು. 14 ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ. 15 ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ. 16 ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು-- 17 ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ. 18 ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
1 ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ. 2 ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ. 3 ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ. 4 ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ. 5 ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು. 6 ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ. 7 ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ. 8 ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು. 9 ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು. 10 ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು. 11 ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ. 12 ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ. 13 ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ. 14 ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ. 15 ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ. 16 ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ. 17 ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ. 18 ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು. 19 ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು. 20 ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು. 21 ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ. 22 ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ. 23 ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ. 24 ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು. 25 ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ. 26 ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು. 27 ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು. 28 ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು. 29 ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು. 30 ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ. 31 ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು. 32 ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
1 ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು. 2 ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ. 3 ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು. 4 ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ. 5 ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು. 6 ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು. 7 ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು. 8 ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ. 9 ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು. 10 ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ. 11 ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ. 12 ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ. 13 ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ. 14 ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ. 15 ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು. 16 ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ. 17 ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ. 18 ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು. 19 ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ. 20 ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ. 21 ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು. 22 ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು. 23 ನೀತಿವಂತರು ಒಳ್ಳೇಯದನ್ನು ಮಾತ್ರ ಅಪೇಕ್ಷಿಸುತ್ತಾರೆ; ದುಷ್ಟರ ಅಪೇಕ್ಷೆಯು ಕೋಪ ವಾಗಿದೆ. 24 ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ. 25 ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು. 26 ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು. 27 ಒಳ್ಳೇದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದು ತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವದು. 28 ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು. 29 ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು. 30 ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ. 31 ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
1 ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು. 2 ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ. 3 ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ. 4 ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು. 5 ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ. 6 ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು. 7 ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು. 8 ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು. 9 ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು. 10 ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ. 11 ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು. 12 ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ. 13 ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು. 14 ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು. 15 ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ. 16 ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ. 17 ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ. 18 ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ. 19 ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ. 20 ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ. 21 ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು. 22 ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ. 23 ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ. 24 ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು. 25 ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು. 26 ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ. 27 ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ. 28 ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
1 ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ. 2 ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು. 3 ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು. 4 ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು. 5 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು. 6 ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು. 7 ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ. 8 ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ. 9 ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು. 10 ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ. 11 ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು. 12 ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು. 13 ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು. 14 ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ. 15 ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ. 16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ. 17 ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ. 18 ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು. 19 ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ. 20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು. 21 ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು. 22 ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ. 23 ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು. 24 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ. 25 ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
1 ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ. 2 ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ. 3 ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು. 4 ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ. 5 ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ. 6 ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ. 7 ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು. 8 ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ. 9 ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ. 10 ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ. 11 ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು. 12 ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ. 13 ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ. 14 ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು. 15 ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು. 16 ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ. 17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ. 18 ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ. 19 ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ. 20 ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು. 21 ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು. 22 ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು. 23 ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ. 24 ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ. 25 ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ. 26 ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು. 27 ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ. 28 ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ. 29 ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು. 30 ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು. 31 ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ. 32 ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ. 33 ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ. 34 ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ. 35 ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
1 ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ. 2 ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ. 3 ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ. 4 ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು. 5 ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು; 6 ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು. 7 ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ. 8 ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು. 9 ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ. 10 ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು. 11 ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ. 12 ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ. 13 ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ. 14 ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ. 15 ಬಾಧಿತರ ದಿನಗಳೆಲ್ಲವೂ ಕೆಟ್ಟ ವುಗಳೇ. ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ. 16 ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ. 17 ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ. 18 ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ. 19 ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ. 20 ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ. 21 ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ. 22 ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ. 23 ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು! 24 ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ. 25 ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು. 26 ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ. 27 ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು. 28 ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ. 29 ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ. 30 ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ. 31 ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ. 32 ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ. 33 ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
1 ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು. 2 ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ. 3 ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು. 4 ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ. 5 ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ. 6 ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ. 7 ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ. 8 ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ. 9 ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ. 10 ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ. 11 ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ. 12 ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ. 13 ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ. 14 ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು. 15 ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ. 16 ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ. 17 ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ. 18 ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು. 19 ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ. 20 ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು. 21 ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ. 22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ. 23 ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ. 24 ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ. 25 ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ. 26 ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ. 27 ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ. 28 ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ. 29 ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ. 30 ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ. 31 ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ. 32 ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು. 33 ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
1 ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು. 2 ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು. 3 ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ. 4 ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು; 5 ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು. 6 ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ. 7 ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ. 8 ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ. 9 ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ. 10 ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ. 11 ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು. 12 ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು. 13 ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ. 14 ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು. 15 ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು. 16 ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ? 17 ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ. 18 ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ. 19 ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ. 20 ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು. 21 ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ. 22 ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ. 23 ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ. 24 ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು. 25 ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ. 26 ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ. 27 ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ. 28 ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
1 ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ. 2 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ. 3 ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ. 4 ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ. 5 ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ. 6 ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ. 7 ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ. 8 ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು. 9 ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ. 10 ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ. 11 ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ. 12 ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ. 13 ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ. 14 ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು? 15 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ. 16 ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ. 17 ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ. 18 ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ; 19 ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ. 20 ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು. 21 ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು. 22 ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ. 23 ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ. 24 ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
1 ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ. 2 ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ. 3 ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ. 4 ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ. 5 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು. 6 ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ. 7 ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ. 8 ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು. 9 ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು. 10 ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ. 11 ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ. 12 ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ. 13 ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು. 14 ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ. 15 ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು. 16 ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು. 17 ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ. 18 ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು. 19 ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ. 20 ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ. 21 ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು. 22 ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು. 23 ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ. 24 ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ. 25 ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು. 26 ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ. 27 ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು. 28 ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು. 29 ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
1 ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ. 2 ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. 3 ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ. 4 ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ. 5 ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು. 6 ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು? 7 ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು. 8 ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು. 9 ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು? 10 ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ. 11 ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ. 12 ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ. 13 ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ. 14 ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ. 15 ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ. 16 ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ. 17 ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು. 18 ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು. 19 ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ. 20 ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು. 21 ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ. 22 ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು. 23 ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ. 24 ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು? 25 ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ. 26 ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ. 27 ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ. 28 ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ. 29 ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ. 30 ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
1 ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ. 2 ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ. 3 ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ. 4 ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ. 5 ಶ್ರದ್ಧೆಯುಳ್ಳ ಯೋಚನೆಗಳು ಸಮ್ಮದ್ಧಿಗೆ ಒಲಿಯುತ್ತವೆ; ಆತುರಪಡುವ ಪ್ರತಿಯೊಬ್ಬನ ಯೋಚನೆಗಳು ಕೊರ ತೆಗೆ ಉಳಿಯುತ್ತವೆ. 6 ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ. 7 ದುಷ್ಟರ ಸೂರೆಯು ಅವರನ್ನು ನಾಶಪಡಿಸುವದು; ನ್ಯಾಯವಾದದ್ದನ್ನು ಮಾಡುವದನ್ನು ಅವರು ನಿರಾಕರಿಸುತ್ತಾರೆ. 8 ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ. 9 ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು. 10 ದುಷ್ಟರ ಮನಸ್ಸು ಕೇಡನ್ನು ಅಪೇಕ್ಷಿಸುತ್ತದೆ; ಅವನ ದೃಷ್ಟಿಯಲ್ಲಿ ತನ್ನ ನೆರೆಯವನು ಯಾವ ದಯೆ ಯನ್ನು ಕಂಡುಕೊಳ್ಳುವದಿಲ್ಲ. 11 ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ. 12 ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ. 13 ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ. 14 ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ. 15 ನ್ಯಾಯತೀರಿಸುವದು ನೀತಿವಂತರಿಗೆ ಸಂತೋಷವಾ ಗಿದೆ; ಅಕ್ರಮವನ್ನು ಮಾಡುವವರಿಗೆ ನಾಶನ. 16 ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ. 17 ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು. 18 ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು. 19 ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು. 20 ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ. 21 ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ. 22 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ. 23 ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ. 24 ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು. 25 ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ. 26 ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ. 27 ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ. 28 ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು. 29 ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ. 30 ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ. 31 ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
1 ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ. 2 ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ. 3 ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ. 4 ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ. 5 ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು. 6 ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ. 7 ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು. 8 ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು. 9 ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ. 10 ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು. 11 ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು. 12 ಕರ್ತನ ಕಣ್ಣುಗಳು ತಿಳುವಳಿಕೆಯನ್ನು ಕಾಪಾಡುತ್ತವೆ; ಆತನು ದೋಷಿಯ ಮಾತುಗಳನ್ನು ಕೆಡವಿಹಾಕುತ್ತಾನೆ. 13 ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ. 14 ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು. 15 ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು. 16 ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು. 17 ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು. 18 ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು. 19 ನಿನ್ನ ಭರವಸವು ಕರ್ತನಲ್ಲಿ ಇರುವಂತೆ ನಿನಗೆ ಈ ದಿವಸ ತಿಳಿಯ ಪಡಿಸಿದ್ದೇನೆ. 20 ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ 21 ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ? 22 ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ. 23 ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು. 24 ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ. 25 ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ. 26 ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ. 27 ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ? 28 ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ. 29 ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
1 ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು; 2 ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ. 3 ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು. 4 ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು. 5 ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ. 6 ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ; 7 ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ. 8 ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ. 9 ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು. 10 ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು; 11 ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು. 12 ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು. 13 ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ. 14 ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ; 15 ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು. 16 ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು. 17 ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು. 18 ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು. 19 ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು. 20 ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ. 21 ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು. 22 ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ. 23 ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ. 24 ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು. 25 ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು. 26 ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ. 27 ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ. 28 ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ. 29 ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು? 30 ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ. 31 ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ. 32 ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ. 33 ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು. 34 ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ. 35 ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
1 ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ; 2 ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ. 3 ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ; 4 ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು. 5 ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ. 6 ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ. 7 ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ. 8 ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು. 9 ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ. 10 ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ. 11 ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ 12 ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ? 13 ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು; 14 ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ. 15 ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ; 16 ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು. 17 ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ; 18 ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು. 19 ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ; 20 ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು. 21 ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ. 22 ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು? 23 ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ. 24 ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು. 25 ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು. 26 ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು. 27 ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ. 28 ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ. 29 ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ. 30 ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು; 31 ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು. 32 ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು. 33 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು; 34 ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
1 ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ. 2 ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು. 3 ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ. 4 ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು. 5 ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು. 6 ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ; 7 ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು. 8 ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ. 9 ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ; 10 ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು, ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು. 11 ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. 12 ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ. 13 ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ. 14 ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ. 15 ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ. 16 ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು. 17 ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು. 18 ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ. 19 ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು. 20 ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು. 21 ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು. 22 ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು. 23 ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ. 24 ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು. 25 ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ. 26 ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ. 27 ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ. 28 ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
1 ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ. 2 ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ. 3 ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ. 4 ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ. 5 ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು. 6 ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ. 7 ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ. 8 ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು. 9 ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು. 10 ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ. 11 ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ. 12 ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ, 13 ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ. 14 ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ. 15 ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ. 16 ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ. 17 ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ. 18 ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು-- 19 ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ. 20 ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು. 21 ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು. 22 ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ. 23 ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ. 24 ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. 25 ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ. 26 ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು. 27 ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು. 28 ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
1 ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು. 2 ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ. 3 ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ. 4 ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು? 5 ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು. 6 ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ. 7 ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ. 8 ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ. 9 ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ. 10 ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು. 11 ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು. 12 ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ. 13 ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ. 14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು. 15 ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ. 16 ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ. 17 ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ. 18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು. 19 ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ. 20 ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ. 21 ಬೆಳ್ಳಿ ಬಂಗಾರ ಗಳ ಪುಟಕ್ಕೆ ಕುಲುಮೆ ಹೇಗೆಯೋ ಹಾಗೆಯೇ ತನ್ನ ಹೊಗಳಿಕೆಗೆ ಮನುಷ್ಯನಿದ್ದಾನೆ. 22 ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ. 23 ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ. 24 ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ? 25 ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ. 26 ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ. 27 ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
1 ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ. 2 ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ. 3 ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ. 4 ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ. 5 ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ. 6 ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು. 7 ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ. 8 ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು. 9 ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ. 10 ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು. 11 ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ. 12 ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ. 13 ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು. 14 ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು. 15 ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ. 16 ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ. 17 ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ. 18 ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು. 19 ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು. 20 ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ. 21 ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು. 22 ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ. 23 ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು. 24 ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು. 25 ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು. 26 ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು. 27 ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು. 28 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
1 ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು. 2 ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ. 3 ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ. 4 ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ. 5 ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ. 6 ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ. 7 ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ. 8 ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು. 9 ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ. 10 ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ. 11 ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ. 12 ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ. 13 ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ. 14 ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು. 15 ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ. 16 ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು. 17 ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು. 18 ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು. 19 ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ. 20 ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ. 21 ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು. 22 ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ. 23 ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು. 24 ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ. 25 ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು. 26 ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ. 27 ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
1 ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು. 2 ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ. 3 ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ. 4 ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು? 5 ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ. 6 ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ. 7 ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ; 8 ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು; 9 ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು. 10 ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ. 11 ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ. 12 ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ. 13 ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ. 14 ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ. 15 ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ. 16 ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ. 17 ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು. 18 ನನಗೆ ಆಶ್ಚರ್ಯವಾದ ಮೂರು ಸಂಗತಿಗ ಳಿವೆ. ಹೌದು, ನಾನು ಅರಿಯದಿರುವ ನಾಲ್ಕು ಸಂಗ ತಿಗಳಿವೆ-- 19 ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ. 20 ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ. 21 ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು 22 ಆಳುವ ದಾಸನು, ಹೊಟ್ಟೆತುಂಬಿದ ನೀಚನು, 23 ಮದುವೆಯಾದ ಚಂಡಿಯು, ತನ್ನ ಯಜಮಾನಳಿಗೆ ಬಾಧ್ಯಸ್ಥಳಾದ ದಾಸಿಯು. 24 ಭೂಮಿಯ ಮೇಲೆ ಅಧಿಕ ಜ್ಞಾನವು ಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ. 25 ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ. 26 ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ. 27 ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ. 28 ಜೇಡರ ಹುಳು ತನ್ನ ಕೈಗಳಿಂದ ಹಿಡಿದುಕೊಳ್ಳುತ್ತದೆ; ಅದು ಅರಮನೆ ಗಳಲ್ಲಿ ಇರುತ್ತದೆ. 29 ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ. 30 ಮೃಗಗಳಲ್ಲಿ ಬಲಿಷ್ಠವಾಗಿ ರುವ ಸಿಂಹವು ಯಾವದಕ್ಕೂ ಹೆದರುವುದಿಲ್ಲ. 31 ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು. 32 ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ. 33 ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
1 ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ಪ್ರವಾದನೆಯು. 2 ನನ್ನ ಮಗನೇ ಏನು? ನನ್ನ ಗರ್ಭಪುತ್ರನೇ ಏನು? ನನ್ನ ಪ್ರತಿಜ್ಞೆಯ ಮಗನೇ ಏನು? 3 ನಿನ್ನ ತ್ರಾಣವನ್ನು ಸ್ತ್ರೀಯರಲ್ಲಿ ಒಪ್ಪಿಸದಿರು, ಇಲ್ಲವೆ ಅರಸರನ್ನು ನಾಶಪಡಿಸುವ ದಾರಿಗಳಿಗೆ ತಿರುಗಬೇಡ. 4 ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ; 5 ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ. 6 ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು. 7 ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ; 8 ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ. 9 ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು. 10 ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ. 11 ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ. 12 ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು. 13 ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ. 14 ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ. 15 ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ. 16 ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ. 17 ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ. 18 ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು. 19 ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ. 20 ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ. 21 ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ. 22 ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ. 23 ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು. 24 ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ. 25 ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು. 26 ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು. 27 ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ. 28 ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ. 29 ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ. 30 ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು. 31 ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
1 ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು. 2 ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ. 3 ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು? 4 ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ. 5 ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ. 6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ. 7 ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ. 8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು. 9 ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ. 10 ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ. 11 ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ. 12 ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು. 13 ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ. 14 ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ. 15 ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ. 16 ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು. 17 ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು. 18 ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
1 ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ. 2 ನಗೆಯ ವಿಷಯವಾಗಿ--ಇದು ಹುಚ್ಚು ಎಂದೂ ಸಂತೋಷದ ವಿಷಯವಾಗಿ--ಇದೇನು ಮಾಡುತ್ತದೆ ಎಂದೂ ನಾನು ಹೇಳಿದೆನು. 3 ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು. 4 ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು. 5 ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು. 6 ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು. 7 ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು. 8 ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು. 9 ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು. 10 ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ. 11 ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ. 12 ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು. 13 ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು. 14 ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು. 15 ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು. 16 ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ? 17 ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ. 18 ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. 19 ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ. 20 ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು. 21 ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ. 22 ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ? 23 ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ. 24 ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು. 25 ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು? 26 ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
1 ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ. 2 ಹುಟ್ಟುವದಕ್ಕೆ ಒಂದು ಸಮಯ, ಸಾಯುವದಕ್ಕೆ ಒಂದು ಸಮಯ; ನೆಡುವದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕು ವದಕ್ಕೆ ಒಂದು ಸಮಯ; 3 ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ; 4 ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ; 5 ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ; 6 ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ; 7 ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ; 8 ಪ್ರೀತಿಸುವದಕ್ಕೆ ಒಂದು ಸಮಯ, ದ್ವೇಷಿಸುವದಕ್ಕೆ ಒಂದು ಸಮಯ; ಯುದ್ಧದ ಸಮಯ, ಸಮಾಧಾನದ ಸಮಯ. 9 ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ? 10 ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ. 11 ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ. 12 ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು. 13 ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ. 14 ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ. 15 ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ. 16 ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು. 17 ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು. 18 ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು. 19 ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ. 20 ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ. 21 ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು? 22 ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
1 ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ. 2 ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು. 3 ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು. 4 ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ. 5 ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ. 6 ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು. 7 ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು. 8 ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ. 9 ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ. 10 ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ. 11 ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ? 12 ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ. 13 ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು. 14 ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ. 15 ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನು. 16 ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
1 ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ. 2 ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ. 3 ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ; 4 ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು. 5 ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು. 6 ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು? 7 ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು. 8 ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ. 9 ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ. 10 ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ. 11 ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ? 12 ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು. 13 ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ. 14 ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು. 15 ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ. 16 ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ? 17 ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ. 18 ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು. 19 ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ. 20 ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ.
1 ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ. 2 ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ. 3 ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ. 4 ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು. 5 ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ. 6 ಹೌದು, ಎರಡು ಸಾವಿರ ದಷ್ಟು ವರುಷಗಳು ಅವನು ಬದುಕಿದರೂ ಅವನು ಸುಖವನ್ನು ಅನುಭವಿಸಲಿಲ್ಲ; ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ? 7 ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ. 8 ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ? 9 ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ. 10 ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ. 11 ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ? 12 ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
1 ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು. 2 ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು. 3 ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ. 4 ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು. 5 ಮೂಢರ ಹಾಡನ್ನು ಒಬ್ಬ ಮನುಷ್ಯನು ಕೇಳುವದಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು. 6 ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ. 7 ಖಂಡಿತವಾಗಿಯೂ ಬಲಾತ್ಕಾರವು ಜ್ಞಾನಿಯನ್ನು ಹುಚ್ಚನನ್ನಾಗಿ ಮಾಡುತ್ತದೆ; ಲಂಚವು ಹೃದಯವನ್ನು ನಾಶಮಾಡುತ್ತದೆ. 8 ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ. 9 ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ. 10 ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ. 11 ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ. 12 ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ. 13 ದೇವರ ಕಾರ್ಯವನ್ನು ಯೋಚಿಸು; ಆತನು ಡೊಂಕು ಮಾಡಿದ್ದನ್ನು ಯಾವನು ನೆಟ್ಟಗೆ ಮಾಡಲು ಶಕ್ತನು. 14 ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ. 15 ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ. 16 ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ? 17 ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ? 18 ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು. 19 ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ. 20 ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ. 21 ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ; 22 ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ; 23 ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು. 24 ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು? 25 ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು. 26 ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು. 27 ಇಗೋ, ಲೆಕ್ಕವನ್ನು ಕಂಡುಹಿಡಿಯಲು ಒಂದೊಂದನ್ನಾಗಿ ಎಣಿಸಿ ನಾನು ಇದನ್ನು ಕಂಡುಕೊಂಡೆ ನೆಂದು ಪ್ರಸಂಗಿ ಹೇಳುತ್ತಾನೆ: 28 ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ. 29 ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
1 ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು. 2 ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ. 3 ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ. 4 ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು? 5 ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ. 6 ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ. 7 ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು? 8 ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ. 9 ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ. 10 ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು; 11 ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು. 12 ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು. 13 ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ. 14 ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು. 15 ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ. 16 ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ). 17 ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
1 ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು. 2 ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು. 3 ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.) 4 ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು. 5 ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ. 6 ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ. 7 ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ. 8 ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ. 9 ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ. 10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ. 11 ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ. 12 ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ. 13 ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು. 14 ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು. 15 ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ. 16 ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು. 17 ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ. 18 ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
1 ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ. 2 ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ. 3 ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ. 4 ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ. 5 ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. 6 ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು. 7 ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ. 8 ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು. 9 ಯಾವನು ಕಲ್ಲುಗಳನ್ನು ಕೀಳುವನೋ ಅವುಗಳಿಂದ ಅವನು ನೋವುಪಡುವನು; ಯಾವನು ಕಟ್ಟಿಗೆ ಕಡಿಯುವನೋ ಅದರಿಂದ ಅವನು ಅಪಾಯಗೊಳ್ಳುವನು. 10 ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ. 11 ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ. 12 ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ. 13 ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ. 14 ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು? 15 ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು. 16 ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ! 17 ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ. 18 ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು. 19 ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ. 20 ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
1 ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು. 2 ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು. 3 ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು. 4 ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ. 5 ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ. 6 ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು. 7 ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು. 8 ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ. 9 ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ. 10 ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
1 ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ. 2 ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಕತ್ತಲಾಗದಿರುವಾಗಲೇ ಮಳೆಯ ಮೋಡ ಗಳು ತಿರಿಗಿ ಬರುವದಕ್ಕಿಂತ ಮುಂಚೆಯೇ ಆತನನ್ನು ಸ್ಮರಿಸು. 3 ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು. 4 ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು. 5 ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು. 6 ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು. 7 ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು. 8 ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು. 9 ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು. 10 ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು. 11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ. 12 ಕೊನೆಗೆ ನನ್ನ ಮಗನೇ, ಇವುಗಳಿಂದ ಎಚ್ಚರಿಕೆ ಯಾಗಿರು. ಬಹಳ ಪುಸ್ತಕಗಳನ್ನು ಮಾಡುವದಕ್ಕೆ ಅಂತ್ಯ ವಿಲ್ಲ; ಹೆಚ್ಚು ಅಭ್ಯಾಸವು ಶರೀರಕ್ಕೆ ಆಯಾಸವಾಗಿದೆ. 13 ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ. 14 ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
1 ಸೊಲೊಮೋನನ ಗೀತಗಳ ಗೀತ. 2 ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ. 3 ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ. 4 ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ. 5 ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ. 6 ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ. 7 ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ? 8 ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು. 9 ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ. 10 ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ. 11 ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು. 12 ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ. 13 ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು. 14 ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು. 15 ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ. 16 ನನ್ನ ಪ್ರಿಯನೇ, ಇಗೋ, ನೀನು ಸೌಂದರ್ಯ ವಂತನು; ಹೌದು, ರಮ್ಯವಾದವನು; ನಮ್ಮ ಹಾಸಿಗೆ ಹಸುರಾಗಿದೆ. 17 ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
1 ಶಾರೋನಿನ ಗುಲಾಬಿ ಹೂವೂ, ತಗ್ಗುಗಳ ತಾವರೆಯೂ ನಾನೇ. 2 ಮುಳ್ಳುಗಳಲ್ಲಿ ತಾವರೆಯು ಹೇಗೋ ನನ್ನ ಪ್ರಿಯಳು ಕುಮಾರ್ತೆ ಗಳಲ್ಲಿ ಹಾಗೆಯೇ ಇದ್ದಾಳೆ. 3 ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು. 4 ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ. 5 ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ. 6 ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ. 7 ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ. 8 ನನ್ನ ಪ್ರಿಯನ ಸ್ವರವು! ಇಗೋ, ಅವನು ಪರ್ವತಗಳ ಮೇಲೆ ಹಾರುತ್ತಾ ಗುಡ್ಡಗಳ ಮೇಲೆ ನೆಗೆಯುತ್ತಾ ಬರುತ್ತಾನೆ. 9 ನನ್ನ ಪ್ರಿಯನು ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇದ್ದಾನೆ. ಇಗೋ, ಅವನು ನಮ್ಮ ಗೋಡೆಯ ಹಿಂದೆ ನಿಂತು ಜಲಾಂತರಗಳಿಂದ ತನ್ನನ್ನು ತೋರಿಸಿ ಕಿಟಕಿಗಳಿಂದ ನೋಡುತ್ತಾನೆ. 10 ನನ್ನ ಪ್ರಿಯನು ಮಾತಾಡಿ--ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ. 11 ಇಗೋ, ಚಳಿ ಗಾಲವು ಗತಿಸಿತು; ಮಳೆಯು ನಿಂತುಹೋಯಿತು; 12 ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ. 13 ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು. 14 ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ. 15 ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ. 16 ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ. 17 ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
1 ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು. 2 ನಾನು ಈಗ ಎದ್ದು ಪಟ್ಟಣವನ್ನು ಸಂಚರಿಸಿ ಬೀದಿ ಗಳಲ್ಲಿಯೂ ಮಾರ್ಗಗಳಲ್ಲಿಯೂ ನನ್ನ ಪ್ರಾಣಪ್ರಿಯ ನನ್ನು ಹುಡುಕುವೆನು. ಅವನನ್ನು ಹುಡುಕಿ ಕಾಣದೆ ಹೋದೆನು. 3 ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು. 4 ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ. 5 ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ. 6 ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು? 7 ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ. 8 ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು. 9 ರಾತ್ರಿಯ ಭಯದ ನಿಮಿತ್ತ ಪ್ರತಿ ಮನುಷ್ಯನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾನೆ. ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡನು. 10 ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು. 11 ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
1 ಇಗೋ, ನನ್ನ ಪ್ರಿಯಳೇ, ನೀನು ಸುಂದರಿಯು! ಇಗೋ, ನೀನು ಸುಂದರಿಯು! ನಿನ್ನ ಮುಸುಕಿನೊಳಗೆ ನಿನಗೆ ಪಾರಿವಾಳದ ಕಣ್ಣುಗ ಳಿವೆ. ನಿನ್ನ ಕೂದಲು ಗಿಲ್ಯಾದಿನ ಪರ್ವತದಲ್ಲಿ ಕಾಣ ಲ್ಪಡುವ ಮೇಕೆ ಮಂದೆಯ ಹಾಗೆ ಇದೆ. 2 ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು. 3 ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ. 4 ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು. 5 ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ. 6 ಉದಯವಾಗುವ ವರೆಗೂ ನೆರಳುಗಳು ಓಡಿಹೋಗುವ ವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು. 7 ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿಯು, ನಿನ್ನಲ್ಲಿ ಕಳಂಕವೇನೂ ಇಲ್ಲ. 8 ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್, ಹೆರ್ಮೋನ್ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು. 9 ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. 10 ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ! 11 ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ. 12 ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ. 13 ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ. 14 ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ 15 ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ. 16 ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
1 ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ. 2 ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು. 3 ನಾನು ನನ್ನ ಅಂಗಿಯನ್ನು ತೆಗೆದಿದ್ದೇನೆ; ಅದನ್ನು ತೊಟ್ಟುಕೊಳ್ಳುವದು ಹೇಗೆ? ನಾನು ನನ್ನ ಕಾಲು ಗಳನ್ನು ತೊಳಕೊಂಡೆನು; ನಾನು ಅವುಗಳನ್ನು ಮೈಲಿಗೆ ಮಾಡುವದು ಹೇಗೆ? 4 ನನ್ನ ಪ್ರಿಯನು ಬಾಗಲ ಸಂದಿನಲ್ಲಿ ತನ್ನ ಕೈಹಾಕಿದನು; ನನ್ನ ಕರುಳುಗಳು ಅವನಿಗಾಗಿ ಮರುಗಿದವು. 5 ನಾನು ನನ್ನ ಪ್ರಿಯನಿಗೆ ತೆರೆಯಲು ಎದ್ದಾಗ ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವೂ ನನ್ನ ಬೆರಳುಗಳಿಂದ ಸೋರುವ ಬೋಳವೂ ಸುರಿಯಿತು. 6 ನಾನು ನನ್ನ ಪ್ರಿಯನಿಗೆ ಕದತೆರೆದೆನು; ಆದರೆ ನನ್ನ ಪ್ರಿಯನು ಹಿಂದಿರುಗಿ ಹೋಗಿದ್ದನು. ಅವನು ಮಾತನಾಡಿದಾಗ ನನ್ನ ಪ್ರಾಣವು ಸತ್ತಂತಿತ್ತು; ಅವನನ್ನು ಹುಡುಕಿದೆನು; ಸಿಕ್ಕದೆ ಹೋದನು; ಅವನನ್ನು ಕರೆದೆನು; ಪ್ರತ್ಯುತ್ತರ ಕೊಡದೆ ಹೋದನು. 7 ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡು, ನನ್ನನ್ನು ಹೊಡೆದು, ಗಾಯಮಾಡಿದರು; ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಕೊಂಡರು. 8 ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ. 9 ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯ ವೇನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನೀನು ನಮಗೆ ಹೀಗೆ ಆಣೆ ಇಡುವದಕ್ಕೆ ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು? 10 ನನ್ನ ಪ್ರಿಯನು ಬಿಳುಪೂ ಕೆಂಪೂ ಉಳ್ಳವನು; ಹತ್ತು ಸಾವಿರ ಜನರಲ್ಲಿ ಮೇಲಾದವನು. 11 ಅವನ ತಲೆಯು ಅತಿ ಚೊಕ್ಕ ಬಂಗಾರದ ಹಾಗೆಯೂ ಅವನ ಕೂದಲು ಗುಂಗುರು ಕೂದಲೂ ಕಾಗೆಯ ಹಾಗೆ ಕಪ್ಪಾಗಿಯೂ ಅವೆ. 12 ಅವನ ಕಣ್ಣುಗಳು ಯುಕ್ತವಾಗಿ ಇರಿಸಲ್ಪಟ್ಟು ಹಾಲಿನಿಂದ ತೊಳೆಯಲ್ಪಟ್ಟ ಜಲದ ಕಾಲಿವೆಗಳ ಬಳಿಯಲ್ಲಿರುವ ಪಾರಿವಾಳಗಳ ಕಣ್ಣುಗಳ ಹಾಗೆ ಅವೆ. 13 ಅವನ ಕೆನ್ನೆಗಳು ಸುಗಂಧಮಡಿಯ ಹಾಗೆಯೂ ಸುವಾಸನೆಯ ಪುಷ್ಪಗಳ ಹಾಗೆಯೂ ಅವೆ. ಅವನ ತುಟಿಗಳು ತಾವರೆಗಳ ಹಾಗೆ ಸೋರುವ ಸುಗಂಧ ರಕ್ತಬೋಳವನ್ನು ಸುರಿಯುತ್ತವೆ. 14 ಅವನ ಕೈಗಳು ಬೆರುಲ್ಲಗಳಿಂದ ಜೋಡಿಸಲ್ಪಟ್ಟ ಬಂಗಾರದ ಉಂಗುರಗಳಾಗಿವೆ. ಅವನ ಮೈ ನೀಲಗಳಿಂದ ಖಚಿಸ ಲ್ಪಟ್ಟ ಹೊಳೆಯುವ ದಂತದ ಹಾಗೆ ಅದೆ. 15 ಅವನ ಕಾಲುಗಳು ಶುದ್ಧ ಬಂಗಾರದ ಗದ್ದಿಗೆಯ ಮೇಲೆ ಇರಿಸಿದ ಬಿಳೀ ಕಲ್ಲಿನ ಸ್ತಂಭಗಳ ಹಾಗೆ ಅವೆ. ಅವನ ಮುಖವು ಲೆಬನೋನಿನ ಹಾಗೆ ದೇವದಾರುಗಳ ಹಾಗೆ ಶ್ರೇಷ್ಠವಾಗಿದೆ. 16 ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
1 ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ? 2 ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ. 3 ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ. 4 ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ. 5 ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಜೈಸಿದವು. ನಿನ್ನ ಕೂದಲು ಗಿಲ್ಯಾದಿನಿಂದ ಕಾಣಿಸಲ್ಪಡುವ ಮೇಕೆ ಮಂದೆಯ ಹಾಗೆ ಅದೆ. 6 ನಿನ್ನ ಹಲ್ಲುಗಳು ತೊಳೆದ ಮೇಲೆ ಏರಿ ಬರುವ ಕುರಿ ಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆ ಯಾಗಿರದು. 7 ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ. 8 ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ. 9 ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು. 10 ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು? 11 ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು. 12 ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್ನ ರಥಗಳ ಹಾಗೆ ಮಾಡಿತು. 13 ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
1 ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ 2 ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ. ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ. 3 ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ. 4 ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್ರಬ್ಬಿ ಮ್ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ. 5 ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ. 6 ಓ ಪ್ರಿಯಳೇ, ನೀನು ಆನಂದಗಳಿಗಾಗಿ ಎಷ್ಟೋ ಸುಂದರಿಯು, ಎಷ್ಟೋ ಮನೋಹರಳು ಆಗಿದ್ದೀ. 7 ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ. 8 ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು. 9 ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು. 10 ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು. 11 ನನ್ನ ಪ್ರಿಯನೇ, ನಾವು ಹೊಲಕ್ಕೆ ಹೋಗಿ ಗ್ರಾಮಗಳಲ್ಲಿ ವಸತಿಯಾಗಿರುವ ಬಾ. 12 ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು. 13 ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
1 ನೀನು ನನ್ನ ತಾಯಿಯ ಸ್ತನಗಳನ್ನು ಕುಡಿದ ನನ್ನ ಸಹೋದರನ ಹಾಗೆ ಇದ್ದರೆ ಎಷ್ಟೋ ಉತ್ತಮ! ನಾನು ನಿನ್ನನ್ನು ಹೊರಗೆ ಕಂಡರೆ ನಿನಗೆ ಮುದ್ದಿಡುವೆನು; ಹೌದು, (ಜನರು) ನನ್ನನ್ನು ತಿರಸ್ಕರಿಸರು. 2 ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು. 3 ಅವನ ಎಡಗೈ ನನ್ನ ತಲೆಯ ಕೆಳಗಿರುವದು; ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳುವದು. 4 ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ. 5 ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು. 6 ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು. 7 ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು. 8 ನಮಗೆ ಚಿಕ್ಕವಳಾದ ಒಬ್ಬ ಸಹೋದರಿ ಇದ್ದಾಳೆ; ಅವಳಿಗೆ ಸ್ತನಗಳಿಲ್ಲ. ಅವಳು ಕೇಳಲ್ಪಡುವ ದಿವಸದಲ್ಲಿ ನಾವು ನಮ್ಮ ಸಹೋದರಿಗೋಸ್ಕರ ಏನು ಮಾಡುವ? 9 ಅವಳು ಗೋಡೆಯಾಗಿದ್ದರೆ ನಾವು ಅವಳ ಮೇಲೆ ಬೆಳ್ಳಿಯ ಅರಮನೆಯನ್ನು ಕಟ್ಟುವೆವು. ಅವಳು ಬಾಗಲಾಗಿದ್ದರೆ ದೇವದಾರು ಹಲಿಗೆಗಳಿಂದ ಅವಳನ್ನು ಮುಚ್ಚುವೆವು. 10 ನಾನು ಗೋಡೆಯೇ; ನನ್ನ ಸ್ತನಗಳು ಬುರುಜುಗಳ ಹಾಗೆ ಅವೆ. 11 ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು. 12 ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ. 13 ತೋಟಗಳಲ್ಲಿ ವಾಸವಾಗಿರುವವನೇ, ಜತೆ ಗಾರರು ನಿನ್ನ ಶಬ್ದವನ್ನು ಆಲೈಸುತ್ತಾರೆ. ನಾನು ಕೇಳುವಂತೆ ಮಾಡು. 14 ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.
1 ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು. 2 ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ. 3 ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ. 4 ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ. 5 ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. 6 ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ. 7 ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ. 8 ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ. 9 ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು. 10 ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ. 11 ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. 12 ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? 13 ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. 14 ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. 15 ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ. 16 ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; 17 ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. 18 ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. 19 ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ; 20 ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ. 21 ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ. 22 ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು. 23 ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ. 24 ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು. 25 ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು. 26 ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ. 27 ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು 28 ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು. 29 ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ. 30 ನೀವು ಎಲೆ ಬಾಡಿದ ಏಲಾಮರದಂತೆಯೂ ನೀರಿಲ್ಲದ ತೋಟದಂತೆಯೂ ಇರುವಿರಿ. 31 ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
1 ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ: 2 ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. 3 ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು. 4 ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ. 5 ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ. 6 ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ. 7 ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ. 8 ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು. 9 ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ. 10 ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ. 11 ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. 12 ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು. 13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ 14 ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ 15 ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ 16 ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು. 17 ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು. 18 ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು. 19 ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು. 20 ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು. 21 ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು. 22 ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
1 ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು. 2 ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು, 3 ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು. 4 ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು. 5 ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು. 6 ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು 7 ಆ ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು. 8 ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ. 9 ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ. 10 ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು. 11 ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು. 12 ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ. 13 ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ. 14 ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ. 15 ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ. 16 ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ, 17 ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು. 18 ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ, 19 ಸರ, ಬಳೆ, ಮುಂಡಾಸ, 20 ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ, 21 ಓಲೆ, ಉಂಗುರ, ಮೂಗುತಿ, 22 ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ, 23 ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು. 24 ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು; 25 ನಿನ್ನ ಗಂಡಸರು ಕತ್ತಿಯಿಂದಲೂ ನಿನ್ನ ಶೂರರು ಯುದ್ಧದಲ್ಲಿಯೂ ಬೀಳುವರು. 26 ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
1 ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ. 2 ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು. 3 ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು. 4 ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು. 5 ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು. 6 ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
1 ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ. 2 ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು. 3 ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. 4 ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ? 5 ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. 6 ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು. 7 ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು. 8 ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ! 9 ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು. 10 ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು. 11 ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ! 12 ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ. 13 ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು. 14 ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು. 15 ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು. 16 ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು. 17 ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು. 18 ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು -- 19 ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ! 20 ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ! 21 ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ! 22 ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ 23 ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ! 24 ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು. 25 ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ. 26 ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು; 27 ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ. 28 ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ. 29 ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ. 30 ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
1 ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು. 2 ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. 3 ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. 4 ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು. 5 ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು. 6 ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು 7 ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು. 8 ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು. 9 ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. 10 ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು. 11 ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ 12 ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು; 13 ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
1 ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ. 2 ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು. 3 ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು-- 4 ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. 5 ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, 6 ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು 7 ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ. 8 ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. 9 ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ. 10 ಇದಲ್ಲದೆ ಕರ್ತನು ಆಹಾಜನಿಗೆ -- 11 ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು. 12 ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು. 13 ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ? 14 ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು. 15 ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು. 16 ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು. 17 ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು. 18 ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು. 19 ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು. 20 ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು. 21 ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು. 22 ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು. 23 ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು. 24 ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು. 25 ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
1 ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು. 2 ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು. 3 ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು. 4 ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು. 5 ಕರ್ತನು ಮತ್ತೊಂದಾವರ್ತಿ ನನಗೆ-- 6 ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ 7 ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ 8 ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು. 9 ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. 10 ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ. 11 ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ-- 12 ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ. 13 ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ. 14 ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು. 15 ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು. 16 ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು. 17 ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು. 18 ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ. 19 ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ? 20 ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ. 21 ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು. 22 ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
1 ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ. 2 ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ. 3 ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು. 4 ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ. 5 ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು. 6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. 7 ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು. 8 ಕರ್ತನು ಯಾಕೋಬನಿಗೆ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರ ಮೇಲೆ ಹೊಳೆಯಿತು. 9 ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು; 10 ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು. 11 ಹೀಗಿರುವದರಿಂದ ಕರ್ತನು ರೆಚೀ ನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ ಅವನ ಶತ್ರುಗಳಾದ ಸಿರಿಯಾದವರನ್ನು ಮುಂದೆಯೂ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವನು. 12 ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ. 13 ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ. 14 ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು. 15 ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು. 16 ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ. 17 ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ. 18 ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ. 19 ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ. 20 ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು. 21 ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
1 ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ! 2 ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ. 3 ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ? 4 ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು. 5 ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. 6 ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. 7 ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ. 8 ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? 9 ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? 10 ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ 11 ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? 12 ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. 13 ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. 14 ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು. 15 ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು. 16 ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು. 17 ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು; 18 ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು. 19 ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು. 20 ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು. 21 ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು. 22 ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು. 23 ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು. 24 ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ. 25 ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು. 26 ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು. 27 ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು. 28 ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ. 29 ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು. 30 ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು. 31 ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು. 32 ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು. 33 ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು. 34 ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
1 ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು. 2 ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; 3 ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; 4 ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. 5 ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ. 6 ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. 7 ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. 8 ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. 9 ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು. 10 ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು. 11 ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. 12 ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು. 13 ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು. 14 ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು. 15 ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು. 16 ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
1 ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. 2 ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ. 3 ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ. 4 ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ. 5 ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. 6 ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
1 ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ. 2 ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. 3 ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. 4 ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. 5 ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ. 6 ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು. 7 ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು. 8 ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು. 9 ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು. 10 ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ. 11 ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು. 12 ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು. 13 ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು. 14 ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು. 15 ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು. 16 ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು. 17 ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. 18 ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ. 19 ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು. 20 ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು. 21 ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು. 22 ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
1 ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು. 2 ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು. 3 ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು. 4 ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ. 5 ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ 6 ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು. 7 ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ. 8 ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ. 9 ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ. 10 ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು. 11 ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ; 12 ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ? 13 ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. 14 ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; 15 ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ. 16 ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ 17 ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು. 18 ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ. 19 ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ. 20 ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ. 21 ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. 22 ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. 23 ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 24 ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು. 25 ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು. 26 ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. 27 ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ. 28 ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು. 29 ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ. 30 ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು. 31 ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ. 32 ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
1 ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು 2 ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು. 3 ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು. 4 ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. 5 ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ. 6 ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ. 7 ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. 8 ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್ ಏಲೀಮಿನ ವರೆಗೂ ವ್ಯಾಪಿಸಿದೆ. 9 ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
1 ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ. 2 ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು. 3 ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ. 4 ಮೋವಾಬೇ, ನನ್ನಿಂದ ತಳ್ಳಿಬಿಟ್ಟವರು ನಿನ್ನೊಂದಿಗೆ ವಾಸಿಸಲಿ; ಹಾಳುಮಾಡುವವರ ಮುಖಗಳಿಂದ ಅವ ರಿಗೆ ಮರೆಯಾಗಿರು: ಹಿಂಸಿಸುವದು ಮುಗಿಯುತ್ತಾ ಬಂತು, ಸೂರೆಮಾಡುವದು ನಿಲ್ಲುವದು. ಪೀಡಿಸು ವವರು ದೇಶದಿಂದ ದಹಿಸಲ್ಪಡುವರು. 5 ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು. 6 ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ. 7 ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ. 8 ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು. 9 ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು. 10 ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ. 11 ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು. 12 ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು. 13 ಕರ್ತನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ. 14 ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
1 ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು. 2 ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು. 3 ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. 4 ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು. 5 ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು. 6 ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ. 7 ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು. 8 ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು. 9 ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು. 10 ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ. 11 ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ. 12 ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ! 13 ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. 14 ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
1 ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ! 2 ಸಮುದ್ರ ಮಾರ್ಗದಿಂದಲೂ ಹಾ! ಆಪಿನ ದೋಣಿಗಳಲ್ಲಿ ನೀರಿನ ಮೇಲೆಯೂ ರಾಯಭಾರಿ ಗಳನ್ನು ಕಳುಹಿಸುವಂತಾದ್ದೇ! ಆಶ್ಚರ್ಯ ತೀವ್ರವಾದ ದೂತರೇ, ಚದುರಿಸಲ್ಪಟ್ಟಿರುವ ಮತ್ತು ಸೂರೆಯಾಗಿ ರುವ ಜನಾಂಗದವರ ಬಳಿಗೂ ಹುಟ್ಟಿದಂದಿನಿಂದ ಇಲ್ಲಿನ ವರೆಗೂ ಭಯಂಕರವಾದ ಜನರ ಬಳಿಗೂ ಮಹಾಬಲದಿಂದ ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ಜನಾಂಗದ ಬಳಿಗೂ ಹೋಗಿರಿ. 3 ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ. 4 ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು. 5 ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು. 6 ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು. 7 ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
1 ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು. 2 ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು. 3 ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು. 4 ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ. 5 ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು. 6 ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು. 7 ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು. 8 ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು. 9 ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು. 10 ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು. 11 ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ? 12 ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ. 13 ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ. 14 ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ. 15 ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ. 16 ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು. 17 ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು. 18 ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ. 19 ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು. 20 ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು. 21 ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು. 22 ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು. 23 ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು. 24 ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು. 25 ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
1 ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ, 2 ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು. 3 ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು. 4 ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು. 5 ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು. 6 ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
1 ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ. 2 ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ. 3 ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ. 4 ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ. 5 ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ. 6 ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ. 7 ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ. 8 ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. 9 ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು. 10 ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ. 11 ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು? 12 ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು. 13 ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ. 14 ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ. 15 ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ. 16 ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು. 17 ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
1 ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು? 2 ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ. 3 ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ. 4 ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು. 5 ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು. 6 ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು. 7 ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು. 8 ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ. 9 ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ. 10 ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ. 11 ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ. 12 ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು. 13 ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ). 14 ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ. 15 ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು-- 16 ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ? 17 ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು. 18 ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು. 19 ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು. 20 ಆ ದಿನದಲ್ಲಿ ಆಗುವದೇನಂದರೆ--ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು, 21 ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು. 22 ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು. 23 ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು. 24 ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು. 25 ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
1 ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. 2 ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ. 3 ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು. 4 ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ. 5 ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು. 6 ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ. 7 ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು. 8 ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು? 9 ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ. 10 ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ. 11 ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ. 12 ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು. 13 ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ. 14 ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು. 15 ಆ ದಿವಸದಲ್ಲಿ ಆಗುವದೇನಂದರೆ, ತೂರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು. 16 ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ). 17 ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು. 18 (ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
1 ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ. 2 ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು. 3 ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ. 4 ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. 5 ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. 6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. 7 ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. 8 ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. 9 ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. 10 ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. 11 ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ. 12 ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ. 13 ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು. 14 ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು. 15 ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. 16 ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ. 17 ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ. 18 ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ). 19 ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ. 20 ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ. 21 ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು. 22 ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು. 23 ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
1 ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು. 2 ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ. 3 ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು. 4 ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ. 5 ಒಣಗಿದ ಸ್ಥಳದಲ್ಲಿನ ಬಿಸಿಲಿನ ಹಾಗೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಅವರ ಭೀಕರತೆಯನ್ನು ಕೀಳು ಸ್ಥಿತಿಗೆ ತರುವಿ. 6 ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು. 7 ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು. 8 ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ. 9 ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು. 10 ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು. 11 ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ, ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು. ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನು. 12 ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
1 ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು. 2 ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ. 3 ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. 4 ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು. 5 ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ. 6 ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು; 7 ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ; 8 ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ. 9 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ. 10 ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ. 11 ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು. 12 ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ. 13 ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು. 14 ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ. 15 ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ. 16 ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು. 17 ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು. 18 ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ. 19 ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು. 20 ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ. 21 ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
1 ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು. 2 ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ; 3 ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ. 4 ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು. 5 ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ. 6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು. 7 ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ? 8 ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು. 9 ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ. 10 ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು. 11 ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ. 12 ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು. 13 ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
1 ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ. 2 ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು. 3 ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು. 4 ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು. 5 ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು. 6 ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು. 7 ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ. 8 ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ. 9 ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ? 10 ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ. 11 ತೊದಲು ಮಾತಿನವರು ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರ ಸಂಗಡ ಮಾತನಾಡುತ್ತಾನೆ. 12 ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ. 13 ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು. 14 ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ, 15 ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ? 16 ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ). 17 ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು. 18 ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ. 19 ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು. 20 ಮೈ ಚಾಚುವದಕ್ಕೆ ಅವನ ಹಾಸಿಗೆ ಚಿಕ್ಕದಾಗಿರು ವದು. ಮುದುರಿಕೊಂಡು ಮಲಗೇನಂದರೆ ಹೊದಿ ಕೆಯ ಅಗಲ ಸಾಲದು; 21 ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು. 22 ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ. 23 ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ. 24 ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ? 25 ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ. 26 ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ. 27 ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು. 28 ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ. 29 ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
1 ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ. 2 ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು. 3 ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು. 4 ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು; 5 ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು. 6 ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ. 7 ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು. 8 ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು. 9 ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ. 10 ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ. 11 ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು; 12 ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು. 13 ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ. 14 ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು. 15 ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ! 16 ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ? 17 ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ? 18 ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು. 19 ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು. 20 ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು. 21 ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು. 22 ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ. 23 ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು. 24 ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
1 ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. 2 ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. 3 ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. 4 ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. 5 ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. 6 ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ. 7 ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ. 8 ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು. 9 ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು. 10 ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ. 11 ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ. 12 ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ-- 13 ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು. 14 ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ ಬಾವಿಯಿಂದ ನೀರನ್ನು ತೆಗೆಯುವದಕ್ಕಾಗಲಿ ಬೋಕಿ ಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು. 15 ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ. 16 ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು. 17 ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ. 18 ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು. 19 ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು. 20 ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು. 21 ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು. 22 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ. 23 ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು. 24 ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು. 25 ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು. 26 ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು. 27 ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ. 28 ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು. 29 ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು. 30 ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು. 31 ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು. 32 ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು. 33 ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
1 ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. 2 ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. 3 ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು. 4 ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು. 5 ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು. 6 ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ. 7 ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು. 8 ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು. 9 ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು. 2 ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು. 3 ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು. 4 ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು. 5 ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು. 6 ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು. 7 ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು. 8 ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು. 9 ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ. 10 ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು. 11 ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ. 12 ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು. 13 ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು. 14 ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು. 15 ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು. 16 ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು. 17 ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು. 18 ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು. 19 ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು. 20 ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
1 ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು. 2 ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು. 3 ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ. 4 ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು. 5 ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ. 6 ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು. 7 ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ. 8 ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು. 9 ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ. 10 ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು. 11 ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು. 12 ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು. 13 ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ. 14 ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು. 15 ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು. 16 ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ. 17 ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ; 18 ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ. 19 ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ. 20 ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ. 21 ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು. 22 ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು. 23 ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು. 24 ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
1 ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ. 2 ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ. 3 ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. 4 ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. 5 ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. 6 ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. 7 ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- 8 ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ. 9 ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು. 10 ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು. 11 ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು. 12 ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು. 13 ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು. 14 ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು. 15 ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು. 16 ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತು 17 ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
1 ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು. 2 ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು. 3 ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. 4 ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ. 5 ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. 6 ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು. 7 ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು. 8 ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. 9 ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು. 10 ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
1 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. 2 ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು. 3 ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು. 4 ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು? 5 ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ? 6 ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ. 7 ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ? 8 ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು. 9 ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ. 10 ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು. 11 ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು. 12 ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು. 13 ಆಗ ರಬ್ಷಾಕನು ನಿಂತುಕೊಂಡು ಯೆಹೂ ದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನಂದರೆ--ಅಶ್ಶೂರಿನ ಅರಸನಾದ ಮಹಾ ರಾಜನ ಮಾತುಗಳನ್ನು ಕೇಳಿರಿ. 14 ಇವನು ನಿಮಗೆ--ಹಿಜ್ಕೀಯನು ನಿಮಗೆ ಮೋಸಮಾಡದಿರಲಿ, ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ. 15 ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ; 16 ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ. 17 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು. 18 ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ? 19 ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ? 20 ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು. 21 ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು. 22 ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
1 ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು. 2 ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು. 3 ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು. 4 ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು. 5 ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು-- 6 ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ. 7 ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು. 8 ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು. 9 ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ-- 10 ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು; 11 ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ? 12 ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ? 13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು. 14 ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು, 15 ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು. 16 ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು. 17 ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು. 18 ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ. 19 ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು. 20 ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು. 21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು 22 ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ. 23 ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ? 24 ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ; 25 ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ. 26 ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು; 27 ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು. 28 ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು. 29 ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ. 30 ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು. 31 ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು. 32 ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು. 33 ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ. 34 ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ. 35 ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ. 36 ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು. 37 ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು. 38 ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
1 ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು. 2 ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ-- 3 ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು. 4 ಆಗ ಕರ್ತನ ವಾಕ್ಯವು ಯೆಶಾ ಯನ ಬಳಿಗೆ ಬಂದು ಹೇಳಿದ್ದೇನಂದರೆ-- 5 ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ. 6 ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು. 7 ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ. 8 ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು. 9 ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು-- 10 ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು. 11 ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು. 12 ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. 13 ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. 14 ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು. 15 ನಾನು ಏನು ಹೇಳಲಿ; ಆತನು ನನಗೆ ಮಾತುಕೊಟ್ಟು ತಾನೇ ಅದನ್ನು ನೆರವೇರಿಸಿ ದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ಮೆಲ್ಲಗೆ ನಡೆಯುವೆನು. 16 ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ. 17 ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ. 18 ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು. 19 ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು. 20 ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು. 21 ಯೆಶಾಯನು--ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅವನು ಬದುಕುವನೆಂದು ಹೇಳಿದ್ದನು. 22 ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
1 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು. 2 ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. 3 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು. 4 ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು. 5 ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು-- 6 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ. 7 ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು. 8 ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
1 ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ. 2 ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು. 3 ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. 4 ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು. 5 ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ. 6 ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ. 7 ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ. 8 ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು. 9 ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು. 10 ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ. 11 ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು. 12 ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು? 13 ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? 14 ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು? 15 ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ. 16 ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು. 17 ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ. 18 ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ? 19 ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು. 20 ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು. 21 ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ? 22 ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ. 23 ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2 24 ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು. 25 ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ. 26 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು. 27 ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ? 28 ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ. 29 ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. 30 ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು. 31 ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
1 ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ. 2 ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು. 3 ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು. 4 ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು. 5 ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು. 6 ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ. 7 ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು. 8 ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ; 9 ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ. 10 ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ. 11 ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; 12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. 13 ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. 14 ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ! 15 ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. 16 ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ. 17 ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು. 18 ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು. 19 ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು. 20 ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು. 21 ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ. 22 ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು. 23 ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ. 24 ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ. 25 ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು. 26 ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ. 27 ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು. 28 ನಾನು ನೋಡಿದಾಗ ಅಲ್ಲಿ ಯಾರೂ ಇಲ್ಲ; ನಾನು ಅವರನ್ನು ಕೇಳುವ ಪ್ರಶ್ನೆಗೆ ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ. 29 ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
1 ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು. 2 ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ. 3 ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ. 4 ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು. 5 ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ-- 6 ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು -- 7 ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ. 8 ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು. 9 ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ. 10 ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ. 11 ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ, 12 ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ. 13 ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು. 14 ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು. 15 ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು. 16 ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ. 17 ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು. 18 ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ. 19 ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು? 20 ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು. 21 ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು. 22 ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ. 23 ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು? 24 ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ. 25 ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
1 ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. 2 ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು. 3 ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ. 4 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು. 5 ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು. 6 ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು 7 ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ. 8 ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ. 9 ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ. 10 ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ. 11 ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ. 12 ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ. 13 ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು? 14 ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು. 15 ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ. 16 ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ. 17 ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ-- 18 ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ. 19 ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು. 20 ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು. 21 ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ. 22 ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ! 23 ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ. 24 ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ. 25 ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು. 26 ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು. 27 ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ. 28 ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
1 ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು. 2 ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ. 3 ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು. 4 ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು. 5 ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು. 6 ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ. 7 ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ. 8 ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ. 9 ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು. 10 ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು? 11 ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು. 12 ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ. 13 ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು. 14 ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು. 15 ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು; 16 ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು; 17 ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. 18 ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. 19 ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. 20 ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು. 21 ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು. 22 ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ. 23 ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ. 24 ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ. 25 ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ 26 ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ 27 ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂ 28 ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
1 ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- 2 ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. 3 ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು. 4 ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ. 5 ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು. 6 ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ. 7 ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ. 8 ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ. 9 ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ? 10 ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ. 11 ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ? 12 ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು. 13 ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. 14 ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ. 15 ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ. 16 ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು. 17 ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ. 18 ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ. 19 ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ. 20 ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ. 21 ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ. 22 ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. 23 ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು. 24 ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ. 25 ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
1 ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು. 2 ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು. 3 ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ-- 4 ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು. 5 ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ? 6 ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು. 7 ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು. 8 ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ; 9 ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ. 10 ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. 11 ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು. 12 ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ; 13 ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
1 ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ. 2 ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು. 3 ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು. 4 ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು. 5 ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ. 6 ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ. 7 ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ. 8 ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು. 9 ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು. 10 ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ. 11 ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು. 12 ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. 13 ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ. 14 ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ. 15 ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
1 ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ. 2 ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು. 3 ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು. 4 ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ. 5 ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು. 6 ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ. 7 ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ. 8 ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ. 9 ನನ್ನ ಹೆಸರು ಕೆಡದಂತೆ ನನ್ನ ಕೋಪವನ್ನು ತಡೆ ಮಾಡಿದೆ. ನನ್ನ ಸ್ತುತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು. 10 ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ. 11 ನನಗಾಗಿಯೇ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಯಾಕೆ ಅಪವಿತ್ರ ವಾಗುವದು? ನನ್ನ ಮಹಿಮೆಯನ್ನು ನಾನು ಮತ್ತೊ ಬ್ಬನಿಗೆ ಸಲ್ಲಗೊಡಿಸೆನು. 12 ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು. 13 ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು. 14 ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು. 15 ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು. 16 ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ. 17 ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ. 18 ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು; 19 ನಿನ್ನ ಸಂತಾನವು ಸಹ ಹರಳಿನಂತೆಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟುವವರು ದಪ್ಪ ಮರಳಿನಂತೆಯೂ ಇರುವರು; ಅವರ ಹೆಸರು ತೆಗೆದುಹಾಕಲ್ಪಡದೆ ನನ್ನ ಸಮ್ಮುಖದಿಂದ ನಾಶವಾಗದೆ ಇರುತ್ತಿತ್ತು. 20 ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ. 21 ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು; 22 ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
1 ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. 2 ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ. 3 ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು. 4 ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು. 5 ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು. 6 ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು. 7 ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು. 8 ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು. 9 ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು. 10 ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು. 11 ನನ್ನ ಬೆಟ್ಟ ಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜ ಮಾರ್ಗಗಳನ್ನು ಉನ್ನತಪಡಿಸುವೆನು. 12 ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ. 13 ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು. 14 ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು. 15 ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ. 16 ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. 17 ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು. 18 ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ. 19 ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು. 20 ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು. 21 ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ. 22 ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು. 23 ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು. 24 ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು. 25 ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು. 26 ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
1 ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ. 2 ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು. 3 ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ ಗೋಣೀತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು. 4 ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ. 5 ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ. 6 ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ. 7 ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು. 8 ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ. 9 ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು. 10 ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ. 11 ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
1 ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ. 2 ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು. 3 ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು. 4 ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು. 5 ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ. 6 ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು. 7 ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ. 8 ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು. 9 ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ? 10 ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ? 11 ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು. 12 ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು? 13 ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ? 14 ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ. 15 ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು. 16 ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ. 17 ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ. 18 ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ. 19 ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ? 20 ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ. 21 ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು, 22 ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ. 23 ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
1 ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ. 2 ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ. 3 ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ. 4 ಕರ್ತನಾದ ದೇವರು ಹೀಗ ನ್ನುತ್ತಾನೆ, ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವ ದಕ್ಕೆ ಐಗುಪ್ತಕ್ಕೆ ಹೋದರು; ಅಶ್ಶೂರಿನವರು ಕಾರಣ ವಿಲ್ಲದೆ ಅವರನ್ನು ಹಿಂಸಿಸಿದರು. 5 ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ. 6 ಆದದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು; ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಇಗೋ, ಅದು ನಾನೇ ಎಂದು ಅವರು ಗ್ರಹಿಸುವರು. 7 ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ! 8 ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು. 9 ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ. 10 ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು. 11 ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ. 12 ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು. 13 ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು. 14 ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ 15 ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
1 ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು? 2 ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. 3 ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. 4 ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. 5 ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. 6 ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. 7 ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. 8 ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. 9 ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. 10 ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. 11 ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು. 12 ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
1 ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ. 2 ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು. 3 ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು. 4 ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ. 5 ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು. 6 ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ. 7 ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. 8 ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. 9 ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. 10 ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ. 11 ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು. 12 ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು. 13 ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು. 14 ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು. 15 ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು. 16 ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ. 17 ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
1 ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. 2 ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! 3 ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು. 4 ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು. 5 ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು. 6 ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. 7 ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು. 8 ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. 9 ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ. 10 ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, 11 ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು. 12 ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು. 13 ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
1 ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ. 2 ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು. 3 ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ. 4 ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ-- 5 ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. 6 ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ 7 ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು. 8 ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ. 9 ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ. 10 ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ. 11 ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು. 12 ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
1 ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು. 2 ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ. 3 ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ. 4 ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ? 5 ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ? 6 ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ? 7 ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ. 8 ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ. 9 ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ. 10 ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ. 11 ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ? 12 ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ. 13 ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು. 14 ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು. 15 ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ. 16 ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು. 17 ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ. 18 ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು. 19 ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ. 20 ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ. 21 ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
1 ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು. 2 ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ. 3 ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ. 4 ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ. 5 ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ? 6 ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ? 7 ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? 8 ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. 9 ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, 10 ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. 11 ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ. 12 ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ. 13 ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ, 14 ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
1 ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ. 2 ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ. 3 ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ. 4 ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ. 5 ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು. 6 ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ. 7 ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ. 8 ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು. 9 ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ. 10 ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ. 11 ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ. 12 ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು. 13 ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ. 14 ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ. 15 ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ. 16 ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು. 17 ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು. 18 ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು. 19 ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು. 20 ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ. 21 ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
1 ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. 2 ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. 3 ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. 4 ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. 5 ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. 6 ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. 7 ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. 8 ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? 9 ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. 10 ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. 11 ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. 12 ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು. 13 ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. 14 ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು. 15 ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ. 16 ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ. 17 ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು. 18 ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ. 19 ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. 20 ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು. 21 ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು. 22 ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
1 ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ 2 ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ 3 ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು. 4 ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು. 5 ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು. 6 ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ. 7 ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು. 8 ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. 9 ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು. 10 ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ. 11 ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
1 ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ. 2 ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ. 3 ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ. 4 ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು. 5 ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು. 6 ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ. 7 ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ. 8 ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ; 9 ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು. 10 ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ. 11 ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ. 12 ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
1 ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. 2 ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? 3 ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು. 4 ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು. 5 ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು. 6 ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು. 7 ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ. 8 ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು. 9 ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು. 10 ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು. 11 ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? 12 ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? 13 ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. 14 ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ. 15 ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ? 16 ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ. 17 ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು. 18 ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ. 19 ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
1 ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ, 2 ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು! 3 ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು. 4 ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ. 5 ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು. 6 ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ. 7 ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ. 8 ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ. 9 ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ. 10 ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು. 11 ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು. 12 ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
1 ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು. 2 ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ. 3 ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು; 4 ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು-- 5 ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ. 6 ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ. 7 ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು. 8 ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು. 9 ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು. 10 ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು. 11 ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ. 12 ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ. 13 ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; 14 ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ. 15 ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು. 16 ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ. 17 ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ. 18 ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ. 19 ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ. 20 ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು. 21 ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು. 22 ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು. 23 ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು. 24 ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು. 25 ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
1 ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ? 2 ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು. 3 ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ. 4 ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು. 5 ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು. 6 ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ. 7 ಅವಳಿಗೆ ಪ್ರಸವವೇದನೆ ಆಗುವದಕ್ಕಿಂತ ಮುಂಚೆ ಹೆತ್ತಳು, ಅವಳಿಗೆ ನೋವು ಬರುವದಕ್ಕಿಂತ ಮುಂಚೆ ಗಂಡು ಮಗುವನ್ನು ಹೆತ್ತಳು. 8 ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು. 9 ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ. 10 ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ. 11 ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ. 12 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ, 13 ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ. 14 ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು. 15 ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು. 16 ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು. 17 ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ. 18 ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು. 19 ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು. 20 ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ. 21 ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ. 22 ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ. 23 ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ. 24 ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
1 ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು. 2 ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು. 3 ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು. 4 ಕರ್ತನ ವಾಕ್ಯವು ನನಗೆ ಉಂಟಾಗಿ ಆತನು ನನಗೆ ಹೇಳಿದ್ದೇನಂದರೆ 5 ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು. 6 ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು. 7 ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು. 8 ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು. 9 ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ. 10 ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು. 11 ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು. 12 ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು. 13 ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು. 14 ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು. 15 ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು. 16 ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು. 17 ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ. 18 ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ. 19 ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
1 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 2 ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ. 3 ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ. 4 ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ. 5 ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ? 6 ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ. 7 ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ. 8 ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು. 9 ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು. 10 ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ. 11 ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ. 12 ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ. 13 ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ. 14 ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು? 15 ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ. 16 ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ. 17 ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ? 18 ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ? 19 ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. 20 ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ. 21 ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ? 22 ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ. 23 ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ; 24 ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು. 25 ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ. 26 ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು. 27 ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು. 28 ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ. 29 ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರು ನನಗೆ ವಿರೋಧವಾಗಿ ದ್ರೋಹಮಾಡಿ ದ್ದೀರಿ ಎಂದು ಕರ್ತನು ಅನ್ನುತ್ತಾನೆ. 30 ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ. 31 ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ. 32 ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ. 33 ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ. 34 ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ. 35 ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು. 36 ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ. 37 ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
1 ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. 2 ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ. 3 ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ. 4 ಈಗಿನಿಂದಲೇ ನನಗೆ --ನನ್ನ ತಂದೆಯೇ, ನನ್ನ ಯೌವನದ ಮಾರ್ಗ ದರ್ಶಕನು ನೀನೇ ಎಂದು ನೀನು ಕೂಗುವದಿಲ್ಲವೋ? 5 ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ. 6 ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ. 7 ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. 8 ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು. 9 ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು. 10 ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ. 11 ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ. 12 ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ. 13 ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ. 14 ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು. 15 ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು. 16 ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ. 17 ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು. 18 ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು. 19 ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು. 20 ನಿಶ್ಚಯವಾಗಿ ಹೆಂಡತಿಯು ತನ್ನ ಗಂಡನನ್ನು ವಂಚಿಸಿ ಬಿಡುವ ಪ್ರಕಾರ ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ ಎಂದು ಕರ್ತನು ಅನ್ನುತ್ತಾನೆ. 21 ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು. 22 ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ. 23 ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ. 24 ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ. 25 ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
1 ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ. 2 ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು. 3 ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ. 4 ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು. 5 ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ. 6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ. 7 ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು. 8 ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ. 9 ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ. 10 ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ? 11 ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ. 12 ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು. 13 ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು. 14 ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು? 15 ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ. 16 ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ. 17 ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ. 18 ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ? 19 ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ. 20 ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು. 21 ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ? 22 ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು. 23 ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. 24 ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. 25 ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು. 26 ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು. 27 ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ. 28 ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ; 29 ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು. 30 ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು. 31 ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
1 ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು. 2 ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ. 3 ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ. 4 ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು. 5 ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ. 6 ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ. 7 ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು. 8 ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ. 9 ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ. 10 ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ. 11 ಇಸ್ರಾಯೇಲ್ಯನ ಮನೆತನದವರೂ ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾ ರೆಂದು ಕರ್ತನು ಅನ್ನುತ್ತಾನೆ. 12 ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ. 13 ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ. 14 ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು. 15 ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು. 16 ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ. 17 ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು. 18 ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ. 19 ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು. 20 ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ 21 ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ. 22 ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು. 23 ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು; ಅವರು ತಿರುಗಿ ಬಿದ್ದು ಹೋಗಿಬಿಟ್ಟಿದ್ದಾರೆ. 24 ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ. 25 ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಅವೆ; ನಿಮ್ಮ ಪಾಪ ಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಳೆದಿವೆ. 26 ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ. 27 ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ; 28 ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು. 29 ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ. 30 ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ, 31 ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
1 ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ. 2 ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ. 3 ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು. 4 ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ. 5 ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ; 6 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ. 7 ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ. 8 ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ. 9 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು. 10 ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ. 11 ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು. 12 ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ. 13 ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ. 14 ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. 15 ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ. 16 ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು. 17 ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು. 18 ಆದದರಿಂದ ಜನಾಂಗಗಳೇ, ಕೇಳಿರಿ; ಸಭೆಯೇ, ಅವರಲ್ಲಿ ಇರುವಂಥದ್ದನ್ನು ತಿಳುಕೊಳ್ಳಿರಿ. 19 ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು. 20 ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ. 21 ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು. 22 ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ. 23 ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ; 24 ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು. 25 ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ. 26 ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು. 27 ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ. 28 ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ. 29 ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ; 30 ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
1 ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ-- 2 ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ. 3 ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು. 4 ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ. 5 ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ 6 ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ 7 ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. 8 ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ. 9 ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ 10 ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ? 11 ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ. 12 ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ. 13 ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ. 14 ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು. 15 ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು. 16 ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ. 17 ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ 18 ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ. 19 ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ? 20 ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ. 21 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ. 22 ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. 23 ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು. 24 ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು. 25 ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು. 26 ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು. 27 ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ. 28 ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ. 29 ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ; 30 ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ. 31 ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ. 32 ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು. 33 ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ. 34 ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
1 ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು. 2 ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು. 3 ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ. 4 ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ? 5 ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ. 6 ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ. 7 ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು. 8 ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ. 9 ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ? 10 ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ. 11 ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? 12 ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ. 13 ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು. 14 ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ. 15 ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ. 16 ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ. 17 ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ. 18 ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ. 19 ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ? 20 ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ. 21 ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು. 22 ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
1 ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು. 2 ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ. 3 ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. 4 ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. 5 ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ. 7 ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ? 8 ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ. 9 ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ. 10 ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ. 11 ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ. 12 ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು? 13 ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ 14 ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು. 15 ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ. 16 ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ. 17 ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ. 18 ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ. 19 ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು. 20 ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ. 21 ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ. 22 ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು. 23 ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ. 24 ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ. 25 ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂ 26 ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
1 ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ; 2 ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ, 3 ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ 4 ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. 5 ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ. 6 ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. 7 ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ. 8 ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ. 9 ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ. 10 ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು. 11 ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. 12 ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು; 13 ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ. 14 ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ. 15 ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು. 16 ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ. 17 ಕೋಟೆಯಲ್ಲಿ ವಾಸವಾಗಿರುವವನೇ, ದೇಶದೊಳ ಗಿಂದ ನಿನ್ನ ಸರಕುಗಳನ್ನು ಕೂಡಿಸು. 18 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ. 19 ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು. 20 ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ. 21 ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು. 22 ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ. 23 ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು. 24 ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ. 25 ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
1 ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--ನೀವು ಈ ಒಡಂಬಡಿ ಕೆಯ ಮಾತುಗಳನ್ನು ಕೇಳಿರಿ; 2 ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ-- 3 ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ. 4 ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು. 5 ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು. 6 ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ. 7 ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು, 8 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. 9 ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ. 10 ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ. 11 ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ, 12 ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ. 13 ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ. 14 ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು. 15 ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ. 16 ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ. 17 ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ. 18 ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ. 19 ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ. 20 ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ. 21 ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ-- 22 ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು. 23 ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
1 ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು. 2 ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ. 3 ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು. 4 ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ. 5 ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್ ದಡವಿಾರು ವಾಗ ಏನು ಮಾಡುವಿ? 6 ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ. 7 ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ. 8 ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ. 9 ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ; 10 ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ. 11 ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ. 12 ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ. 13 ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ. 14 ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು. 15 ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು. 16 ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು. 17 ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
1 ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು; 2 ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು. 3 ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ 4 ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು. 5 ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್ ಬಳಿ ಯಲ್ಲಿ ಅಡಗಿಸಿದೆನು. 6 ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು. 7 ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು. 8 ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 9 ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು. 10 ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು. 11 ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ. 12 ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು. 13 ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು. 14 ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ. 15 ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ. 16 ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ. 17 ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ. 18 ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು. 19 ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು. 20 ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ? 21 ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ? 22 ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು. 23 ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು. 24 ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು. 25 ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ. 26 ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು. 27 ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
1 ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು. 2 ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು. 3 ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. 4 ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು. 5 ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; 6 ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ. 7 ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ. 8 ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು? 9 ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ. 10 ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ , ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು. 11 ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ; 12 ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು. 13 ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು. 14 ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. 15 ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ. 16 ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು. 17 ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು. 18 ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು. 19 ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ! 20 ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ. 21 ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ. 22 ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
1 ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ. 2 ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. 3 ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ. 4 ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು. 5 ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು? 6 ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ. 7 ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ 8 ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ. 9 ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ. 10 ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ. 11 ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ? 12 ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ? 13 ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು. 14 ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು. 15 ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ. 16 ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ. 17 ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ. 18 ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ. 19 ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ. 20 ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ. 21 ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
1 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 2 ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು; 3 ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ-- 4 ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು. 5 ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ. 6 ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ. 7 ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ. 8 ಅವರ ಸಂಗಡ ಕೂತುಕೊಂಡು ಉಣ್ಣುವದಕ್ಕೂ ಕುಡಿಯುವದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸ ಬೇಡ. 9 ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ. 10 ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ. 11 ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ. 12 ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ. 13 ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ. 14 ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ; 15 ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮಕ್ಕಳನ್ನು ಉತ್ತರ ದೇಶ ದೊಳಗಿಂದಲೂ ನಾನು ಅವರನ್ನು ಅಟ್ಟಿ ಬಿಟ್ಟಿದ್ದ ಸಮಸ್ತ ದೇಶಗಳೊಳಗಿಂದಲೂ ಬರಮಾಡಿ ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು ಎಂದು ಹೇಳುವ ದಿನಗಳು ಬರುವವು. 16 ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು. 17 ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ; 18 ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ. 19 ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ. 20 ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ? 21 ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
1 ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ. 2 ಅವರ ಮಕ್ಕಳು ಅವರ ಬಲಿಪೀಠಗ ಳನ್ನೂ ಹಸುರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ತೋಪುಗಳನ್ನೂ ಜ್ಞಾಪಕಮಾಡಿಕೊಳ್ಳುತ್ತಾರಲ್ಲಾ. 3 ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು. 4 ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು. 5 ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. 6 ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು. 7 ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. 8 ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ. 9 ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು? 10 ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ. 11 ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು. 12 ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ. 13 ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು. 14 ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ಆಗ ಸ್ವಸ್ಥನಾಗು ವೆನು; ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನ್ನ ಸ್ತೋತ್ರವು. 15 ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ. 16 ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು. 17 ನೀನು ನನಗೆ ಭಯಾಸ್ಪದವಾಗಬೇಡ; ಕೆಟ್ಟ ದಿನದಲ್ಲಿ ನೀನೇ ನನ್ನ ನಿರೀಕ್ಷೆಯು. 18 ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು. 19 ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು 20 ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. 21 ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ. 22 ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು. 23 ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು. 24 ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ 25 ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು. 26 ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು. 27 ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
1 ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ-- 2 ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ. 3 ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು. 4 ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು. 5 ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 6 ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ. 7 ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ 8 ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು. 9 ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ 10 ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು. 11 ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು. 12 ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು. 13 ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ. 14 ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ? 15 ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ. 16 ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು. 17 ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು. 18 ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು. 19 ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು. 20 ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ. 21 ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ. 22 ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ. 23 ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
1 ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು 2 ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು. 3 ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು. 4 ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ 5 ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ. 6 ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು. 7 ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. 8 ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು. 9 ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು. 10 ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ, 11 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು. 12 ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು. 13 ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು. 14 ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ-- 15 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
1 ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು. 2 ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು. 3 ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್ ಮಿಸ್ಸಾ ಬೀಬ್ನೆಂದು ಕರೆಯುತ್ತಾನೆಂದು ಹೇಳಿದನು. 4 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು. 5 ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು. 6 ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು. 7 ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ. 8 ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು. 9 ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು. 10 ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ. 11 ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ. 12 ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ. 13 ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ. 14 ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ. 15 ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ! 16 ಕರ್ತನು ಪಶ್ಚಾತ್ತಾಪಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಅವನು ಬೆಳಿಗ್ಗೆ ಕೂಗನ್ನೂ ಮಧ್ಯಾಹ್ನ ದಲ್ಲಿ ಆರ್ಭಟವನ್ನೂ ಕೇಳಲಿ 17 ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು. 18 ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ 2 ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು. 3 ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ-- 4 ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ. 5 ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು. 6 ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು. 7 ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ. 8 ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. 9 ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು; 10 ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು. 11 ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು-- 12 ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು. 13 ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. 14 ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
1 ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು. 2 ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ-- 3 ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ. 4 ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು. 5 ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ. 6 ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು. 7 ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. 8 ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು. 9 ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು. 10 ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ. 11 ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಈ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ. 12 ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ; 13 ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ! 14 ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ! 15 ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ? 16 ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ. 17 ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ. 18 ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ. 19 ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು. 20 ಲೆಬನೋನಿಗೆ ಹೋಗಿ ಕೂಗು, ಬಾಶಾನಿನಲ್ಲಿ ನಿನ್ನ ಸ್ವರವನ್ನೆತ್ತು, ದಾರಿಗಳಲ್ಲಿ ಕೂಗು, ನಿನ್ನ ಪ್ರಿಯರು ನಾಶವಾಗಿದ್ದಾರೆ. 21 ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ. 22 ನಿನ್ನ ಕುರುಬರನ್ನೆಲ್ಲಾ ಗಾಳಿ ತಿಂದುಬಿಡುವದು; ನಿನ್ನ ಪ್ರಿಯರು ಸೆರೆಗೆ ಹೋಗುವರು; ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ ಅವಮಾನವೂ ಆಗುವದು. 23 ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ. 24 ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ 25 ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ. 26 ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ. 27 ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು. 28 ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು? 29 ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು. 30 ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
1 ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ. 2 ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ. 3 ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು. 4 ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ. 5 ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. 6 ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ. 7 ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ. 8 ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು. 9 ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ. 10 ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ. 11 ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ. 12 ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ. 13 ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ. 14 ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. 15 ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ. 16 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ. 17 ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ. 18 ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ? 19 ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು. 20 ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ. 21 ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು. 22 ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು. 23 ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ? 24 ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ. 25 ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ. 26 ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ; 27 ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ. 28 ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ. 29 ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ? 30 ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. 31 ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. 32 ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ. 33 ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು. 34 ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು. 35 ನೀವು ನಿಮ್ಮ ನಿಮ್ಮ ನೆರೆಯವರಿಗೂ ನಿಮ್ಮ ನಿಮ್ಮ ಸಹೋದರರಿಗೂ--ಕರ್ತನು ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು. 36 ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ. 37 ನೀನು ಪ್ರವಾದಿಗೆ--ಕರ್ತನು ನಿನಗೆ ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು. 38 ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ 39 ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು. 40 ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು. 2 ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು. 3 ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು. 4 ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ -- 5 ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು. 6 ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು. 7 ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು. 8 ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ. 9 ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು. 10 ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು. 2 ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ-- 3 ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ. 4 ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ. 5 ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ. 6 ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು. 7 ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ. 8 ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ-- 9 ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ. 10 ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ. 11 ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು. 12 ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು. 13 ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು. 14 ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ. 15 ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. 16 ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. 17 ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. 18 ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು. 19 ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ 20 ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ 21 ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ 22 ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ 23 ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ 24 ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ 25 ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ 26 ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು. 27 ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ. 28 ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು. 29 ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ. 30 ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು. 31 ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ. 32 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು. 33 ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. 34 ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ. 35 ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು. 36 ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು. 37 ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು. 38 ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು. 2 ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ; 3 ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು. 4 ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ 5 ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ 6 ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು. 7 ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು. 8 ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು. 9 ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು. 10 ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು. 11 ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ. 12 ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ. 13 ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು. 14 ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ. 15 ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು. 16 ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು. 17 ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ-- 18 ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು. 19 ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು. 20 ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು. 21 ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು. 22 ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು. 23 ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು. 24 ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
1 ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ 2 ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು. 3 ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು. 4 ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು-- 5 ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. 6 ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. 7 ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು. 8 ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ. 9 ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ. 10 ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. 11 ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು. 12 ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ. 13 ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ? 14 ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. 15 ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ. 16 ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. 17 ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು? 18 ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ. 19 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ 20 ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ-- 21 ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ -- 22 ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
1 ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ -- 2 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ. 3 ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. 4 ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು. 5 ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ-- 6 ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ. 7 ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು. 8 ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು. 9 ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು. 10 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು. 11 ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು. 12 ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- 13 ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ. 14 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ. 15 ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. 16 ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು. 17 ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
1 ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ 2 ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ 3 ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ-- 4 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ-- 5 ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ; 6 ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ. 7 ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು. 8 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ. 9 ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ. 10 ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು. 11 ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ. 12 ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. 13 ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ. 14 ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು. 15 ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ 16 ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ-- 17 ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು. 18 ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು. 19 ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ. 20 ಆದದ ರಿಂದ ನಾನು ಯೆರೂಸಲೇಮಿ ನಿಂದ ಬಾಬೆಲಿಗೆ ಕಳುಹಿಸಿದ ಸೆರೆಯವರೆಲ್ಲರೇ, 21 ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು. 22 ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು 23 ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ. 24 ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು-- 25 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ? 26 ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ. 27 ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ? 28 ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ. 29 ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು. 30 ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ-- 31 ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣ 32 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
1 ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ, ಇಸ್ರಾಯೇಲಿನ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ-- 2 ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ. 3 ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು. 4 ಕರ್ತನು ಇಸ್ರಾಯೇಲನ್ನೂ ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ-- 5 ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ. 6 ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು? 7 ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು. 8 ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ. 9 ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು. 10 ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು. 11 ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ. 12 ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು. 13 ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ. 14 ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ. 15 ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ. 16 ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು. 17 ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ. 18 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು. 19 ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು. 20 ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು. 21 ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ. 22 ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು. 23 ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು. 24 ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
1 ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ. 2 ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು. 3 ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ. 4 ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ. 5 ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು. 6 ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು. 7 ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ. 8 ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು. 9 ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ. 10 ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು. 11 ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ. 12 ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ. 13 ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು. 14 ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ. 15 ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ; 16 ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು. 17 ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು. 18 ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. 19 ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. 20 ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ. 21 ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು. 22 ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು. 23 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು. 24 ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು. 25 ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ. 26 ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು. 27 ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು. 28 ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ. 29 ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ. 30 ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು. 31 ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. 32 ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. 33 ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ. 34 ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ. 35 ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ-- 36 ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ. 37 ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ. 38 ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. 39 ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು. 40 ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
1 ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು. 2 ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು. 3 ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ; 4 ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು. 5 ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು. 6 ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ-- 7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು. 8 ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು. 9 ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು. 10 ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು. 11 ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು. 12 ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು. 13 ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ-- 14 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು. 15 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ. 16 ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು-- 17 ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ. 18 ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು. 19 ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ. 20 ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ. 21 ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ. 22 ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ. 23 ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ. 24 ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ. 25 ಆದರೂ ಓ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ? 26 ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- 27 ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ? 28 ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು. 29 ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು. 30 ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ. 31 ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು. 32 ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. 33 ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ. 34 ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ. 35 ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ. 36 ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ-- 37 ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು. 38 ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು. 39 ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. 40 ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ. 41 ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ. 42 ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು. 43 ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು. 44 ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
1 ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು. 2 ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ- 3 ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು. 4 ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- 5 ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ. 6 ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು. 7 ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು. 8 ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು. 9 ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು. 10 ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ 11 ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ. 12 ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು. 13 ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ. 14 ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು. 15 ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು. 16 ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು. 17 ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ. 18 ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ. 19 ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ-- 20 ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ 21 ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು. 22 ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು. 23 ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- 24 ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. 25 ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ-- 26 ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ-- 2 ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು. 3 ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ. 4 ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ. 5 ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ. 6 ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು. 7 ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು. 8 ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ 9 ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು. 10 ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು. 11 ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು. 12 ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ-- 13 ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ 14 ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ. 15 ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ. 16 ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ. 17 ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು. 18 ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ 19 ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ 20 ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು. 21 ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು. 22 ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ-- 2 ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು 3 ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ 4 ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ 5 ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು. 6 ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ; 7 ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು. 8 ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ 9 ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ. 10 ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ. 11 ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು. 12 ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- 13 ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ. 14 ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ. 15 ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ. 16 ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ 17 ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ. 18 ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ, 19 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ-- 2 ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. 3 ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು. 4 ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು. 5 ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು. 6 ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು. 7 ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು. 8 ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು. 9 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು. 10 ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು. 11 ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಆ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ, 12 ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ. 13 ಆಗ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ ವಿಾಕಾ ಯನು ತಾನು ಕೇಳಿದ ವಾಕ್ಯಗಳನ್ನೆಲ್ಲಾ ಅವರಿಗೆ ತಿಳಿಸಿದನು. 14 ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು. 15 ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು. 16 ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು. 17 ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು. 18 ಆಗ ಬಾರೂಕನು ಅವರಿಗೆ--ಅವನು ಬಾಯಿಂದ ಈ ವಾಕ್ಯ ಗಳನ್ನೆಲ್ಲಾ ನನಗೆ ಹೇಳಿಕೊಟ್ಟನು; ನಾನು ಅವುಗಳನ್ನು ಮಸಿಯಿಂದ ಪುಸ್ತಕದಲ್ಲಿ ಬರೆದೆನು ಅಂದನು. 19 ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು. 20 ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು. 21 ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು. 22 ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು. 23 ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು. 24 ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ. 25 ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ. 26 ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು. 27 ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- 28 ನೀನು ಮತ್ತೊಂದು ಸುರಳಿಯನ್ನು ತಕ್ಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿ ಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. 29 ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ. 30 ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು. 31 ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು. 32 ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು. 2 ಆದರೆ ಕರ್ತನು ಪ್ರವಾದಿಯಾದ ಯೆರೆವಿಾಯನಿಂದ ಹೇಳಿಸಿದ ವಾಕ್ಯಗಳಿಗೆ ಅವನೂ ಅವನ ಸೇವಕರೂ ದೇಶದ ಜನರೂ ಕಿವಿಗೊಡಲಿಲ್ಲ. 3 ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು. 4 ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ. 5 ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು. 6 ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- 7 ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು. 8 ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. 9 ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. 10 ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು. 11 ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ ಯೆರೂಸಲೇಮನ್ನು ಬಿಟ್ಟು ಹೋದಮೇಲೆ 12 ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು. 13 ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು. 14 ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು. 15 ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. 16 ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು 17 ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು. 18 ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ 19 ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು, 20 ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನು 21 ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
1 ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ-- 2 ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು; 3 ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು. 4 ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು. 5 ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು. 6 ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು. 7 ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ, 8 ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ-- 9 ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; 10 ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು. 11 ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು. 12 ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು. 13 ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು. 14 ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು. 15 ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು. 16 ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು. 17 ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ. 18 ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು. 19 ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. 20 ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು. 21 ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ-- 22 ಇಗೋ, ಯೆಹೂದದ ಅರಸನ ಮನೆ ಯಲ್ಲಿ ಉಳಿದ ಹೆಂಗಸರೆಲ್ಲರು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ತರಲ್ಪಟ್ಟು ಹೇಳುವದೇ ನಂದರೆ--ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ; ನಿನ್ನ ಕಾಲುಗಳು ಕೆಸರಿನಲ್ಲಿ ಮುಳುಗಿವೆ; ಆದರೆ ಅವರು ಹಿಂಜರಿದಿದ್ದಾರೆ. 23 ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು. 24 ಆಗ ಚಿದ್ಕೀಯನು ಯೆರೆವಿಾಯನಿಗೆ ಹೇಳಿದ್ದೇನಂದರೆ--ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು. 25 ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ-- 26 ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು. 27 ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ. 28 ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.
1 ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು. 2 ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು. 3 ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು. 4 ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; 5 ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು. 6 ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. 7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು. 8 ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು. 9 ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು. 10 ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು. 11 ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ-- 12 ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು. 13 ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು. 14 ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು. 15 ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ-- 16 ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು. 17 ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ. 18 ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
1 ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು. 2 ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ. 3 ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ. 4 ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. 5 ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು. 6 ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು. 7 ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ; 8 ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು. 9 ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು. 10 ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ. 11 ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ 12 ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು. 13 ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು 14 ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ. 15 ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು. 16 ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
1 ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು. 2 ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು. 3 ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು. 4 ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ 5 ಶೆಕೆಮ್ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು. 6 ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು. 7 ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು. 8 ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ. 9 ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು. 10 ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು. 11 ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ 12 ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು. 13 ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು. 14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು. 15 ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು. 16 ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು, 17 ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು. 18 ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
1 ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು 2 ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ 3 ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು. 4 ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು. 5 ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ 6 ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು. 7 ಹತ್ತು ದಿವಸಗಳಾದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಬಂತು. 8 ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ 9 ಕರೆದು ಅವರಿಗೆ ಹೇಳಿದ್ದೇನಂದರೆ--ಯಾವಾತನ ಮುಂದೆ ನಿಮ್ಮ ವಿಜ್ಞಾ ಪನೆಯನ್ನು ತರುವದಕ್ಕೆ ನನ್ನನ್ನು ಕಳುಹಿಸಿದ್ದಿರೋ ಆ ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ-- 10 ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ. 11 ನೀವು ಭಯ ಪಡುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಭಯಪಡಬೇಡಿರೆಂದು ಕರ್ತನು ಅನ್ನುತ್ತಾನೆ; ನಿಮ್ಮನ್ನು ರಕ್ಷಿಸುವದಕ್ಕೂ ಅವನ ಕೈಗೆ ನಿಮ್ಮನ್ನು ತಪ್ಪಿಸುವದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ. 12 ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ಕರುಣಿಸಿ ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡು ವನು. 13 ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ--ನಾವು ಈ ದೇಶದಲ್ಲಿ ವಾಸಮಾಡು ವದಿಲ್ಲವೆಂದು ಹೇಳಿದರೆ 14 ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ 15 ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ, 16 ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ. 17 ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ. 18 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ. 19 ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ; 20 ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ. 21 ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆ 22 ನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
1 ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ 2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ. 3 ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು. 4 ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ. 5 ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು 6 ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು. 7 ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು. 8 ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು. 9 ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ-- 10 ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು. 11 ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು. 12 ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು. 13 ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
1 ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ-- 2 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ. 3 ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ. 4 ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು. 5 ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ. 6 ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು. 7 ಆದದರಿಂದ ಈಗ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರೂ ಆಗಿರುವ ಕರ್ತನು ಹೀಗೆ ಹೇಳುತ್ತಾನೆ--ಯಾಕೆ ನಿಮಗೆ ಉಳಿದಿರುವ ವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ ಹೆಂಗಸರನ್ನೂ ಮಗುವನ್ನೂ ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು ನಿಮ್ಮ ಪ್ರಾಣ ಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳು ತ್ತೀರಿ? 8 ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ? 9 ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ? 10 ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ. 11 ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ. 12 ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು. 13 ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು. 14 ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ. 15 ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ-- 16 ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ. 17 ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ. 18 ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು. 19 ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ? 20 ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ-- 21 ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ? 22 ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ. 23 ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ. 24 ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ. 25 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ. 26 ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ. 27 ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು. 28 ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು. 29 ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ. 30 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ, 2 ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ! 3 ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ. 4 ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ. 5 ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
1 ಜನಾಂಗಗಳಿಗೆ ವಿರೋಧವಾಗಿಯೂ ಐಗುಪ್ತಕ್ಕೆ ವಿರೋಧವಾಗಿಯೂ ಯೂಫ್ರೇ ಟೀಸ್ ನದಿಯ ಬಳಿಯಲ್ಲಿ ಕರ್ಕೆವಿಾಷಿನಲ್ಲಿ ಇದ್ದಂಥ 2 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು. 3 ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ; 4 ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ; 5 ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ. 6 ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು. 7 ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು? 8 ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ. 9 ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ. 10 ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ. 11 ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ. 12 ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ. 13 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು. 14 ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ. 15 ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ. 16 ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು. 17 ಐಗುಪ್ತದ ಅರಸ ನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ. 18 ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು. 19 ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು. 20 ಐಗುಪ್ತವು ಬಹಳ ಚೆಲುವಾದ ಕಡಸಾಗಿದೆ; ಆದರೆ ಉತ್ತರದಿಂದ ನಾಶ ನವು ಬಂದೇ ಬರುತ್ತದೆ. 21 ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು. 22 ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು. 23 ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ. 24 ಐಗುಪ್ತದ ಮಗಳು ನಾಚಿಕೆಪಡುವಳು, ಉತ್ತರದ ಜನರ ಕೈಯಲ್ಲಿ ಒಪ್ಪಿಸಲ್ಪಡುವಳು. 25 ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ; 26 ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ. 27 ಆದರೆ ನೀನು, ಓ ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ. 28 ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
1 ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು. 2 ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು. 3 ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು. 4 ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು. 5 ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ? 6 ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು. 7 ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
1 ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು. 2 ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು. 3 ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು. 4 ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು. 5 ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ. 6 ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ. 7 ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು. 8 ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು. 9 ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ. 10 ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ. 11 ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ. 12 ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು. 13 ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ ಹಾಗೆಯೇ ಮೋವಾಬು ಕೇಮೋ ಷನ ವಿಷಯ ನಾಚಿಕೆಪಡುವದು. 14 ನಾವು ಪರಾಕ್ರಮ ಶಾಲಿಗಳೂ ಯುದ್ಧಕ್ಕೆ ಬಲಿಷ್ಠರೂ ಎಂದು ನೀವು ಹೇಳುವದು ಹೇಗೆ? 15 ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ. 16 ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ. 17 ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ. 18 ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು. 19 ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು. 20 ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ. 21 ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್ನ ಮೇಲೆಯೂ 22 ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ 23 ಕಿರ್ಯಾತಯಾಮಿನ ಮೇಲೆಯೂ ಬೇತ್ಗಾಮುಲಿನ ಮೇಲೆಯೂ ಬೇತ್ಮೆಯೋನಿನ ಮೇಲೆಯೂ 24 ಕೆರೀಯೋತ್ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು. 25 ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ. 26 ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು. 27 ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ. 28 ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ. 29 ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ. 30 ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ. 31 ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು. 32 ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ. 33 ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ. 34 ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು. 35 ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ. 36 ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು. 37 ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು. 38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ. 39 ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು. 40 ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು. 41 ಕೆರೀಯೋತ್ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು. 42 ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು. 43 ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ. 44 ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ. 45 ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು. 46 ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು. 47 ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
1 ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ? 2 ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ. 3 ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. 4 ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ? 5 ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ. 6 ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ. 7 ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ? 8 ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ. 9 ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ? 10 ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು. 11 ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ. 12 ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ. 13 ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ. 14 ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ. 15 ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು. 16 ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ. 17 ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. 18 ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ. 19 ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? 20 ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು. 21 ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು. 22 ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು. 23 ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು. 24 ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ. 25 ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ? 26 ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. 27 ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವದು. 28 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ. 29 ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು. 30 ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ. 31 ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ. 32 ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ. 33 ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ. 34 ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ-- 35 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ. 36 ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ. 37 ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು. 38 ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ. 39 ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
1 ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು. 2 ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ; 3 ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ. 4 ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. 5 ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು. 6 ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು. 7 ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು. 8 ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ. 9 ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು. 10 ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ. 11 ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ 12 ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು. 13 ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. 14 ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ. 15 ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ. 16 ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು. 17 ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ. 18 ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ. 19 ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು. 20 ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ. 21 ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ. 22 ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು. 23 ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು! 24 ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ; 25 ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು. 26 ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ. 27 ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು. 28 ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು! 29 ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು. 30 ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ. 31 ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು. 32 ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು. 33 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು. 34 ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು. 35 ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ. 36 ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು. 37 ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು. 38 ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು. 39 ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ. 40 ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ. 41 ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು. 42 ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು. 43 ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು. 44 ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? 45 ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು. 46 ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
1 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ. 2 ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು. 3 ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ. 4 ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು. 5 ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ. 6 ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ. 7 ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು. 8 ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು. 9 ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ. 10 ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ. 11 ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ. 12 ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ. 13 ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು. 14 ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. 15 ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ. 16 ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ. 17 ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ. 18 ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು. 19 ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ. 20 ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ; 21 ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. 22 ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ. 23 ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ. 24 ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ. 25 ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ. 26 ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ. 27 ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ. 28 ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ. 29 ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು. 30 ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ. 31 ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ 32 ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು. 33 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು. 34 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ. 35 ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು. 36 ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ; 37 ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು. 38 ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು. 39 ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ. 40 ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು. 41 ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು! 42 ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ. 43 ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ. 44 ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು. 45 ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ. 46 ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕೇಳಲ್ಪಡುವ ಸುದ್ದಿಗೆ ನೀವು ಭಯಪಡದ ಹಾಗೆ ಒಂದು ವರುಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರುಷದಲ್ಲಿ ಇನ್ನೊಂದು ಸುದ್ದಿಯೂ ಬರುವದು; ದೇಶದಲ್ಲಿ ಬಲಾತ್ಕಾರವಿರು ವದು, ಆಳುವವನು ಆಳುವವನಿಗೆ ವಿರೋಧವಾಗಿರು ವನು. 47 ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು. 48 ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ. 49 ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು. 50 ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ. 51 ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ. 52 ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು. 53 ಬಾಬೆಲ್ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ. 54 ಬಾಬೆಲಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ಮಹಾನಾಶನವು ಬರುವದು. 55 ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು. 56 ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು. 57 ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ. 58 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು. 59 ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು. 60 ಹೀಗೆ ಯೆರೆವಿಾಯನು ಬಾಬೆಲಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬೆಲಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆದನು. 61 ಯೆರೆವಿಾಯನು ಸೆರಾಯನಿಗೆ ಹೇಳಿದ್ದೇನಂದರೆ-- ನೀನು ಬಾಬೆಲಿಗೆ ಬಂದು 62 ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ. 63 ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು; 64 ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
1 ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್. 2 ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. 3 ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು. 4 ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು. 5 ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು. 6 ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು. 7 ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು. 8 ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. 9 ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. 10 ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. 11 ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು. 12 ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು, 13 ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು; 14 ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು. 15 ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು. 16 ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು. 17 ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು. 18 ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. 19 ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು. 20 ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು. 21 ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು. 22 ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು; 23 ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು. 24 ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು. 25 ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು. 26 ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು. 27 ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು. 28 ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು. 29 ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು. 30 ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು. 31 ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ 32 ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು. 33 ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು. 34 ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
1 ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು! 2 ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು. 3 ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ. 4 ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ. 5 ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ. 6 ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು. 7 ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು. 8 ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ. 9 ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ. 10 ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ. 11 ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು. 12 ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ. 13 ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ. 14 ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ. 15 ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ. 16 ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ. 17 ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ; ಅಲ್ಲಿ ಅವಳನ್ನು ಆದರಿಸುವವನು ಒಬ್ಬನೂ ಇಲ್ಲ; ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಕರ್ತನು ಆಜ್ಞಾಪಿಸಿದ್ದಾನೆ. ಯೆರೂಸಲೇಮು ಅವರ ಮದ್ಯದಲ್ಲಿ ಮುಟ್ಟಾದ ಹೆಂಗಸಿನ ಹಾಗೆ ಇದೆ. 18 ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ. 19 ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು. 20 ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ. 21 ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು. 22 ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
1 ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ! 2 ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ. 3 ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ. 4 ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ. 5 ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ. 6 ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ. 7 ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ. 8 ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ. 9 ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ. 10 ಚೀಯೋನ್ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ. 11 ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ. 12 ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ. 13 ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು? 14 ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ. 15 ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ? 16 ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ. 17 ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ. 18 ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ. 19 ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ. 20 ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ? 21 ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ. 22 ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
1 ಆತನ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ. 2 ಆತನು ನನ್ನನ್ನು ಕರೆತಂದು ನಡಿಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ. 3 ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ. 4 ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ. 5 ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ. 6 ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ. 7 ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ. 8 ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ. 9 ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ. 10 ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ. 11 ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ. 12 ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ. 13 ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ. 14 ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ. 15 ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ. 16 ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ. 17 ನನ್ನ ಪ್ರಾಣವನ್ನು ಸಮಾಧಾನದಿಂದ ದೂರಮಾಡಿದ್ದಾನೆ; ನಾನು ಏಳಿಗೆಯನ್ನು ಮರೆತುಬಿಟ್ಟೆನು. 18 ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ 19 ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು. 20 ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ. 21 ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ. 22 ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ. 23 ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು. 24 ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ. 25 ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. 26 ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು. 27 ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು. 28 ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ. 29 ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ. 30 ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ. 31 ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ; 32 ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು. 33 ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ. 34 ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ 35 ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ 36 ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ. 37 ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು? 38 ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ? 39 ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ? 40 ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ. 41 ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ. 42 ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ. 43 ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ. 44 ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ. 45 ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ. 46 ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ. 47 ಭಯವೂ ಬೋನೂ ನಾಶನವೂ ಸಂಹಾರವೂ ನಮ್ಮ ಮೇಲೆ ಬಂದಿವೆ. 48 ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ. 49 ಕರ್ತನು ಕಟಾಕ್ಷಿಸಿ ಪರಲೋಕದಿಂದ ನೋಡುವ ತನಕ ನೇತ್ರವು ಎಡೆಬಿಡದೆ ಕಣ್ಣೀರು ಸುರಿಸುತ್ತದೆ; 50 ವಿಶ್ರಮಿಸಿಕೊಳ್ಳುವದೂ ಇಲ್ಲ. 51 ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ. 52 ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು. 53 ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ. 54 ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು. 55 ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು. 56 ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ. 57 ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸವಿಾಪಕ್ಕೆ ಬಂದು--ಭಯಪಡ ಬೇಡ ಎಂದು ಹೇಳಿದಿ. 58 ಓ ಕರ್ತನೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡಿಸಿ ನನ್ನ ಜೀವವನ್ನು ವಿಮೋಚಿಸಿದ್ದೀ. 59 ಓ ಕರ್ತನೇ, ನೀನು ನನ್ನ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯವನ್ನು ತೀರಿಸು. 60 ಅವರ ಎಲ್ಲಾ ಪ್ರತೀಕಾರವನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನೀನು ನೋಡಿರುವಿ. 61 ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ 62 ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿ. 63 ಅವರು ಕೂಡ್ರುವದನ್ನೂ ಏಳುವದನ್ನೂ ನೋಡು; ನಾನೇ ಅವರಿಗೆ ಸಂಗೀತವಾಗಿದ್ದೇನೆ. 64 ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು. 65 ಅವರಿಗೆ ದುಃಖಕರವಾದ ಹೃದಯವನ್ನೂ ನಿನ್ನ ಶಾಪವನ್ನೂ ಕೊಡು. 66 ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
1 ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ. 2 ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ! 3 ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ. 4 ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ. 5 ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ. 6 ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ. 7 ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು. 8 ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ. 9 ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ. 10 ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು. 11 ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು. 12 ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ. 13 ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು. 14 ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು. 15 ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು. 16 ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ. 17 ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು. 18 ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು. 19 ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು. 20 ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು. 21 ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ. 22 ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
1 ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು. 2 ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು. 3 ನಾವು ಅನಾಥರು ತಂದೆ ಇಲ್ಲದವರು, ನಮ್ಮ ತಾಯಿಂದಿರು ವಿಧವೆಯರು. 4 ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ. 5 ನಮ್ಮ ಕುತ್ತಿಗೆಗಳು ಹಿಂಸೆಗೊಳ ಗಾದವು; ನಾವು ವಿಶ್ರಾಂತಿಯಿಲ್ಲದೆ ಕಷ್ಟಪಡುತ್ತೇವೆ. 6 ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ. 7 ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ. 8 ಆಳುಗಳು ನಮ್ಮ ಮೇಲೆ ಆಳಿದ್ದಾರೆ; ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವದಿಲ್ಲ. 9 ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ. 10 ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ. 11 ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು. 12 ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ. 13 ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು. 14 ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು. 15 ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು. 16 ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ. 17 ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ. 18 ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು. 19 ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು. 20 ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ? 21 ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು. 22 ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
1 ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು. 2 ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ 3 ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು. 4 ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು. 5 ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು. 6 ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು. 7 ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು. 8 ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು. 9 ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು. 10 ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು. 11 ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು. 12 ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ. 13 ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು. 14 ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು. 15 ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು. 16 ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು. 17 ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ. 18 ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು. 19 ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು. 20 ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು. 21 ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು. 22 ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು). 23 ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು. 24 ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು. 25 ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು. 26 ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. 27 ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು. 28 ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
1 ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು. 2 ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು. 3 ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ. 4 ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು. 5 ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು. 6 ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ. 7 ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ. 8 ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು. 9 ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು. 10 ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
1 ಇದಾದ ಮೇಲೆ ಆತನು ನನಗೆ--ಮನುಷ್ಯ ಪುತ್ರನೇ, ನಿನಗೆ ಸಿಕ್ಕಿದ್ದನ್ನು ತಿನ್ನು; ಈ ಸುರಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡು ಅಂದನು. 2 ಆಗ ನಾನು ನನ್ನ ಬಾಯನ್ನು ತೆರೆದೆನು, ಆತನು ನನಗೆ ಆ ಸುರಳಿಯನ್ನು ತಿನ್ನಿಸಿದನು. 3 ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು. 4 ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು. 5 ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ. 6 ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. 7 ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ. 8 ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ. 9 ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ. 10 ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ. 11 ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು. 12 ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು. 13 ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು. 14 ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು. 15 ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು. 16 ಏಳು ದಿವಸಗಳಾದ ಮೇಲೆ ಆದದ್ದೇನಂದರೆ, ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂದು -- 17 ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು. 18 ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. 19 ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. 20 ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು; 21 ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ. 22 ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು. 23 ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು. 24 ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ. 25 ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ. 26 ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ. 27 ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
1 ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ. 2 ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು. 3 ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು. 4 ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು. 5 ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು. 6 ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ. 7 ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು. 8 ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು. 9 ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು. 10 ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು. 11 ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು. 12 ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು; 13 ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ. 14 ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು. 15 ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು. 16 ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು. 17 ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
1 ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು. 2 ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು 3 ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು. 4 ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು. 5 ದೇವರಾದ ಕರ್ತನು ಹೇಳುವದೇನಂದರೆ--ಇದೇ ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ಮಧ್ಯೆ ಇಟ್ಟಿದ್ದೇನೆ. 6 ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ. 7 ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ 8 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ. 9 ನಾನು ಮಾಡದೇ ಇದ್ದದ್ದನ್ನೂ ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿನ್ನ ಅಸಹ್ಯಗಳ ನಿಮಿತ್ತ ವಾಗಿ ನಿನ್ನಲ್ಲಿ ಮಾಡುತ್ತೇನೆ. 10 ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು. 11 ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ. 12 ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು. 13 ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು. 14 ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ. 15 ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ. 16 ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ. 17 ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
1 ಕರ್ತನ ವಾಕ್ಯವು ನನಗೆ ಉಂಟಾಯಿತು. ಏನಂದರೆ-- 2 ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ 3 ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ. 4 ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ಪ್ರತಿಮೆಗಳು ಮುರಿಯಲ್ಪಡು ವವು; ನಿಮ್ಮಲ್ಲಿ ಹತರಾದ ಮನುಷ್ಯರನ್ನು ನಿಮ್ಮ ವಿಗ್ರ ಹಗಳ ಮುಂದೆ ನಾನು ಬಿಸಾಡುವೆನು. 5 ಇಸ್ರಾ ಯೇಲನ ಮಕ್ಕಳ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿಬಿಡುವೆನು. 6 ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು. 7 ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ. 8 ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ. 9 ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು. 10 ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು. 11 ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು. 12 ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು. 13 ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿ 14 ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
1 ಇದಾದ ಮೇಲೆ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನೆಂದರೆ-- 2 ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ. 3 ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. 4 ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು. 5 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು. 6 ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು. 7 ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ. 8 ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. 9 ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು. 10 ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು. 11 ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ. 12 ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ. 13 ಮಾರಿ ದವನು ಇನ್ನೂ ಬದುಕಿದ್ದರೂ ಮಾರಿದ್ದರ ಬಳಿಗೆ ಹಿಂತಿರುಗುವದಿಲ್ಲ; ದರ್ಶನವು ತಿರುಗದ ಸಮಸ್ತ ಜನಸಮೂಹದ ವಿಷಯವಾಗಿದೆ. ಒಬ್ಬರೂ ತಮ್ಮ ಜೀವದ ಅಕ್ರಮದಲ್ಲಿ ಬಲಗೊಳ್ಳುವದಿಲ್ಲ. 14 ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧಮಾಡಿಕೊಂಡಿದ್ದಾರೆ, ಆದರೆ ಯಾರೂ ಯುದ್ಧಕ್ಕೆ ಹೋಗುವದಿಲ್ಲ; ಯಾಕಂದರೆ ಎಲ್ಲಾ ಜನ ಸಮೂಹದ ಮೇಲೆ ನನ್ನ ಕೋಪವಿದೆ. 15 ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು. 16 ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು. 17 ಕೈಗಳೆಲ್ಲಾ ಜೋತಾಡುವವು; ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣವಾಗು ವವು. 18 ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು. 19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ. 20 ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ. 21 ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು. 22 ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು. 23 ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ. 24 ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು. 25 ನಾಶವು ಬರುತ್ತದೆ ಮತ್ತು ಅವರು ಸಮಾಧಾನವನ್ನು ಹುಡುಕುತ್ತಾರೆ; ಆದರೆ ಅದು ಇರುವದಿಲ್ಲ. 26 ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು. 27 ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
1 ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು. 2 ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು. 3 ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು. 4 ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು. 5 ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು. 6 ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು. 7 ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು 8 ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು. 9 ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು. 10 ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ. 11 ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. 12 ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು. 13 ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು. 14 ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್ಗೋಸ್ಕರ ಅಳುವ ಹೆಂಗಸರು ಕೂತಿದ್ದರು. 15 ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು. 16 ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು. 17 ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ. 18 ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
1 ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ-- ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ 2 ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು. 3 ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ 4 ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು. 5 ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ. 6 ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು. 7 ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು. 8 ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು. 9 ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ. 10 ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು. 11 ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
1 ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು. 2 ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು. 3 ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು. 4 ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು. 5 ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು. 6 ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. 7 ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು. 8 ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು. 9 ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು. 10 ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. 11 ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ. 12 ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು. 13 ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು. 14 ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು. 15 ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ. 16 ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ. 17 ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು. 18 ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. 19 ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು. 20 ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು. 21 ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು; 22 ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
1 ಇದಲ್ಲದೆ ಆತ್ಮನು ನನ್ನನ್ನು ಎತ್ತಿ ಕರ್ತನ ಆಲಯದ ಪೂರ್ವಬಾಗಲಿಗೆ ಮೂಡಣದಿಕ್ಕಿಗೆ ಅಭಿಮುಖವಾಗಿರುವ ಕಡೆಗೆ ತೆಗೆದುಕೊಂಡು ಹೋದನು. ಆಗ ಇಗೋ, ಬಾಗಲಿನ ಮುಂದೆ ಇಪ್ಪತ್ತೈದು ಮಂದಿ ಮನುಷ್ಯರು; ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗನಾದ ಯಾಜನ್ಯ ನನ್ನೂ ಬೆನಾಯನ ಮಗನಾದ ಪೆಲತ್ಯನನ್ನೂ ನೋಡಿ ದೆನು. 2 ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು-- 3 ಅದು ಸವಿಾಪವಲ್ಲ, ಮನೆಗ ಳನ್ನು ಕಟ್ಟೋಣ; ಈ ಪಟ್ಟಣವು ಅಂಡೆ, ನಾವು ಮಾಂಸವು ಎನ್ನುತ್ತಾರೆ. 4 ಆದದರಿಂದ ಓ ಮನುಷ್ಯ ಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು. 5 ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು. 6 ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ. 7 ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ. 8 ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ. 9 ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು. 10 ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು. 11 ಈ ಪಟ್ಟಣವು ನಿಮ್ಮ ಹಂಡೆ ಯಾಗುವದಿಲ್ಲ, ನೀವು ಅದರ ಮಧ್ಯದಲ್ಲಿ ಮಾಂಸ ವಾಗುವದಿಲ್ಲ; ಆದರೆ ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ನ್ಯಾಯತೀರಿ ಸುವೆನು. 12 ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ. 13 ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು. 14 ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂತು-- 15 ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು. 16 ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು. 17 ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್ ದೇಶವನ್ನು ನಿಮಗೆ ಕೊಡುತ್ತೇನೆ. 18 ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು; 19 ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು. 20 ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು. 21 ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ. 22 ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು. 23 ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು. 24 ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು. 25 ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
1 ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು. 3 ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು. 4 ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು. 5 ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು. 6 ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ. 7 ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು. 8 ಬೆಳಗಿನ ಜಾವದಲ್ಲಿ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ-- 9 ಮನುಷ್ಯ ಪುತ್ರನೇ, ಆ ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ. 10 ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ. 11 ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು. 12 ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು. 13 ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು. 14 ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು. 15 ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು. 16 ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು. 17 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 18 ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ. 19 ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು. 20 ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ. 21 ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇ ನಂದರೆ-- 22 ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು? 23 ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು. 24 ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ವ್ಯರ್ಥ ದರ್ಶನವೂ ಮೋಸದ ಶಕುನವೂ ಇರುವದಿಲ್ಲ. 25 ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. 26 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ -- 27 ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ. 28 ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
1 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ 2 ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ; 3 ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ! 4 ಓ ಇಸ್ರಾಯೇಲೇ, ನಿನ್ನ ಪ್ರವಾದಿಗಳು ನಿರ್ಜನ ಸ್ಥಳಗಳಲ್ಲಿರುವ ನರಿಗಳ ಹಾಗೆ ಇದ್ದಾರೆ. 5 ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ. 6 ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ. 7 ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ. 8 ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ. 9 ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. 10 ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ 11 ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. 12 ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? 13 ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; 14 ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. 15 ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು 16 ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ. 17 ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ-- 18 ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ? 19 ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ? 20 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ. 21 ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. 22 ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ. 23 ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
1 ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು. 2 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 3 ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ? 4 ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ. 5 ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು. 6 ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ. 7 ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ. 8 ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ. 9 ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು. 10 ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು. 11 ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ. 12 ಕರ್ತನ ವಾಕ್ಯವು ನನಗೆ ತಿರಿಗಿ ಬಂದು ಹೇಳಿದ್ದೇ ನಂದರೆ-- 13 ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ, 14 ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ. 15 ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ 16 ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ. 17 ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ 18 ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು; 19 ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ, 20 ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. 21 ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು? 22 ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ. 23 ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
1 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? 3 ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? 4 ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ? 5 ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು? 6 ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. 7 ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ. 8 ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
1 ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು. 3 ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು 4 ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ. 5 ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು. 6 ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು. 7 ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ. 8 ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ. 9 ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು. 10 ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. 11 ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. 12 ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. 13 ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ. 14 ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ. 15 ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ. 16 ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ. 17 ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ. 18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ. 19 ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ. 20 ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, 21 ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ; 22 ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ. 23 ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;) 24 ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ. 25 ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ. 26 ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ. 27 ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ. 28 ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ. 29 ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ. 30 ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ. 31 ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ; 32 ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ! 33 ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ. 34 ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ. 35 ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು. 36 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ 37 ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು. 38 ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು. 39 ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು. 40 ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು. 41 ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು; 42 ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ. 43 ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು. 44 ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು. 45 ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು. 46 ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ. 47 ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. 48 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ. 49 ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. 50 ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. 51 ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. 52 ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ. 53 ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು. 54 ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ. 55 ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ. 56 ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ. 57 ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ 58 ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ. 59 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ. 60 ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು. 61 ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ. 62 ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು. 63 ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
1 ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನು ಒಗಟಾಗಿ ಹೇಳು. 3 ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು. 4 ಅದರ ಚಿಗುರುಗಳ ಕೊನೆಯನ್ನು ಕಿತ್ತು ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು. 5 ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು. 6 ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು. 7 ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು. 8 ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು. 9 ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು. 10 ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು. 11 ಇದಲ್ಲದೆ ಕರ್ತನ ವಾಕ್ಯವು ಉಂಟಾಗಿ ನನಗೆ ಹೇಳಿದ್ದೇನಂದರೆ-- 12 ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ. 13 ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ. 14 ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು. 15 ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? 16 ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. 17 ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. 18 ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. 19 ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. 20 ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು. 21 ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು. 22 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು. 23 ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು. 24 ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
1 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 2 ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು? 3 ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ. 4 ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು. 5 ಒಬ್ಬ ಮನುಷ್ಯನು ನೀತಿವಂತ ನಾಗಿದ್ದು, ನೀತಿಯನ್ನೂ ನ್ಯಾಯವನ್ನೂ ನಡಿಸಿ, 6 ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ; 7 ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ, 8 ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ, 9 ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ. 10 ಆದರೆ ಇಂತಹ ವನು ಪಡೆದ ಮಗನು ದರೋಡೆಕೋರನಾಗಿ ರಕ್ತವನ್ನು ಚೆಲ್ಲುವವನಾದರೆ ಇಂತಹ ಕೆಲಸಗಳನ್ನು ಮಾಡುತ್ತಾನೆ. 11 ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ, 12 ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ; 13 ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು. 14 ಆಗ ಇಗೋ, ಅವನು ಮಗನನ್ನು ಪಡೆದ ಮೇಲೆ ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ನೋಡಿ ಆಲೊಚಿಸಿ, ಅವುಗಳಂತೆ ಮಾಡದೆ; 15 ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, 16 ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ, 17 ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು. 18 ಆತನ ತಂದೆಯ ವಿಷಯವಾದರೋ ಅವನು ಬಹಳ ಬಲಾತ್ಕಾರ ಮಾಡಿ ದ್ದರಿಂದಲೂ ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ ತನ್ನ ಜನರ ಮಧ್ಯದಲ್ಲಿ ಕೆಟ್ಟದನ್ನು ಮಾಡಿದ್ದರಿಂದಲೂ ಇಗೋ, ಅವನು ಅಕ್ರಮದಲಿ ಸಾಯುವನು. 19 ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು. 20 ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು. 21 ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು. 22 ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು. 23 ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ? 24 ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು. 25 ಆದರೆ ನೀವು, ಕರ್ತನ ಮಾರ್ಗವು ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾ ಯೇಲಿನ ಮನೆಯವರೇ, ಈಗ ಕೇಳಿರಿ, ನನ್ನ ಮಾರ್ಗವು ಸಮವಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವು ಗಳೇ. 26 ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು. 27 ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು. 28 ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು. 29 ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ. 30 ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ. 31 ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ? 32 ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
1 ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ 2 ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು. 3 ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು. 4 ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು. 5 ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು. 6 ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು. 7 ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು. 8 ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು. 9 ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು. 10 ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ. 11 ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ. 12 ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು. 13 ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ. 14 ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
1 ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು. 2 ಆಮೇಲೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ, 3 ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ. 4 ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು. 5 ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ, 6 ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು. 7 ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು. 8 ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು. 9 ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು; 10 ಆದದರಿಂದ ನಾನು ಅವರನ್ನು ಐಗುಪ್ತ ದೇಶದಿಂದ ಹೊರಗೆ ಕರತಂದು ಅರಣ್ಯದೊಳಗೆ ಅವರನ್ನು ಬರಮಾಡಿದೆನು. 11 ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು. 12 ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು. 13 ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು. 14 ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು. 15 ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು. 16 ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು. 17 ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ. 18 ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ; 19 ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ; 20 ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು. 21 ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು. 22 ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು. 23 ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು; 24 ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು. 25 ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು. 26 ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು. 27 ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು. 28 ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು. 29 ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು. 30 ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ? 31 ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ; 32 ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು. 33 ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ. 34 ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ, 35 ನಿಮ್ಮನ್ನು ಜನಗಳಿರುವ ಅರಣ್ಯದೊಳಗೆ ತಂದು ನಾನು ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ವಾದಿಸುವೆನು. 36 ಇದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಐಗುಪ್ತ ದೇಶದ ಅರಣ್ಯದಲ್ಲಿ ವಾದಿಸಿದೆನು; ಈಗಲೂ ನಿಮ್ಮ ಸಂಗಡ ವಾದಿಸಿದೆನು ಎಂದು ದೇವ ರಾದ ಕರ್ತನು ಹೇಳುತ್ತಾನೆ. 37 ನಾನು ನಿಮ್ಮನ್ನು ಕೋಲಿನ ಕೆಳಗೆ ಹಾದುಹೋಗುವಂತೆ ಮಾಡಿ ಒಡಂಬ ಡಿಕೆಯ ಬಂಧನದಲ್ಲಿ ನಿಮ್ಮನ್ನು ಸೇರಿಸುತ್ತೇನೆ. 38 ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ. 39 ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ. 40 ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು. 41 ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು. 42 ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ. 43 ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ. 44 ಇದಲ್ಲದೆ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗ ಗಳ ಪ್ರಕಾರವಲ್ಲ, ನಿಮ್ಮ ದುಷ್ಕ್ರಿಯೆಗಳ ಪ್ರಕಾರವಲ್ಲ, ನನ್ನ ಹೆಸರಿಗೋಸ್ಕರವೇ ನಿಮಗೆ ಮಾಡಿದಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ. 45 ಇದಲ್ಲದೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ-- 46 ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು. 47 ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. 48 ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ. 49 ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
1 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು. 3 ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು. 4 ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು. 5 ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ. 6 ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು. 7 ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ. 8 ಇದಲ್ಲದೆ ಮತ್ತೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ-- 9 ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ; 10 ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ. 11 ಕೈಗೆ ಸಿದ್ದವಾಗುವಂತೆ ಅವನು ಅದನ್ನು ಮಸೆಯುವದಕ್ಕೆ ಕೊಟ್ಟಿದ್ದಾನೆ; ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಕತ್ತಿಗೆ ಹದವನ್ನೂ ಸಾಣೆಯನ್ನೂ ಮಾಡಲಾಗಿದೆ. 12 ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು; ಇದು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಎಲ್ಲಾ ಅಧಿಪತಿಗಳ ಮೇಲೆಯೂ ಇರುವದು; ಕತ್ತಿಯ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವದು. ಆದದರಿಂದ ತೊಡೆಯನ್ನು ಬಡಿದುಕೋ. 13 ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ. 14 ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ. 15 ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ. 16 ನೀನು ಯಾವ ಕಡೆಗಾದರೂ ಹೋಗು ಎಡಗಡೆ ಅಥವಾ ಬಲಗಡೆ ನೀನು ನಿನ್ನ ಮುಖವು ಇರುವ ಕಡೆಗೆ ಹೋಗು. 17 ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ. 18 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ-- 19 ಮನುಷ್ಯಪುತ್ರನೇ, ಬಾಬೆಲಿನ ಅರಸನ ಕತ್ತಿಯು ಬರುವ ಹಾಗೆ ನೀನು ಎರಡು ಮಾರ್ಗಗ ಳನ್ನು ನೇಮಿಸಿಕೋ; ಅವೆರಡೂ ಒಂದೇ ದೇಶದಿಂದ ಹೊರಡಬೇಕು; ಇದರಲ್ಲಿ ಒಂದು ಸ್ಥಳವನ್ನು ಆರಿ ಸಿಕೋ, ಅದು ಪಟ್ಟಣದ ಮಾರ್ಗದ ಪ್ರಾರಂಭದಲ್ಲಿ ಆರಿಸಿಕೋ. 20 ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ. 21 ಬಾಬೆಲಿನ ಅರಸನು ಮಾರ್ಗವು ಒಡೆಯುವ ಸ್ಥಳದಲ್ಲಿ (ಎರಡು ದಾರಿಯ ಮಗ್ಗುಲಲ್ಲಿ) ಶಕುನವನ್ನು ನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿ ದನು; ಮೂರ್ತಿಗಳ ಹತ್ತಿರ ವಿಚಾರಿಸಿದನು. ಪಿತ್ತ ಚೀಲವನ್ನು ನೋಡಿದನು. 22 ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ. 23 ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು. 24 ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ. 25 ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು. 26 ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು. 27 ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ. 28 ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ. 29 ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ. 30 ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು. 31 ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು. 32 ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
1 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 2 ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ. 3 ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ. 4 ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ. 5 ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು. 6 ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ. 7 ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ. 8 ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ. 9 ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ. 10 ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ; 11 ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ. 12 ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ. 13 ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ. 14 ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ. 15 ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು. 16 ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. 17 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ -- 18 ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ. 19 ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ. 20 ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು. 21 ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ. 22 ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ. 23 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ -- 24 ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ, 25 ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ. 26 ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು. 27 ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ. 28 ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ. 29 ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ. 30 ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ. 31 ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
1 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು; 3 ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು. 4 ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು. 5 ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು, 6 ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು. 7 ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. 8 ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು. 9 ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; 10 ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು. 11 ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು. 12 ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು. 13 ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು. 14 ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, 15 ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು; 16 ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. 17 ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು. 18 ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. 19 ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು. 20 ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು. 21 ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ. 22 ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ. 23 ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ. 24 ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. 25 ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು. 26 ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು; 27 ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ. 28 ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ. 29 ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು. 30 ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ. 31 ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ. 32 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು. 33 ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ. 34 ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ. 35 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು. 36 ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು. 37 ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ. 38 ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ. 39 ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ; 40 ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ. 41 ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು. 42 ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು. 43 ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ? 44 ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು. 45 ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ. 46 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು. 47 ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು. 48 ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು. 49 ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
1 ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ 2 ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ. 3 ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ. 4 ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ; 5 ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ. 6 ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. 7 ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ; 8 ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ; 9 ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. 10 ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ. 11 ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು. 12 ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ; 13 ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ. 14 ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. 15 ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 16 ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ. 17 ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ. 18 ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು. 19 ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು. 20 ಆಮೇಲೆ ನಾನು ಅವರಿಗೆ ಉತ್ತರಿಸಿದೆನು; ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 21 ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು. 22 ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು. 23 ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ. 24 ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ. 25 ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ 26 ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ? 27 ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
1 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು; 3 ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ 4 ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು. 5 ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. 6 ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ 7 ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ. 8 ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು. 9 ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್ಯೆಷೀ ಮೋತ್ ಬಾಳ್ಮೆ ಯೋನ್ ಕಿರ್ಯಾಥಯಿಮ್ 10 ಸೀಮೆಗಳನ್ನಲ್ಲದೆ ಅಮ್ಮೋನನಿಗೆ ಮೂಡಣದ ವರೆಗೆ ಸ್ವಾಸ್ತ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವ ರಿಗೆ ಸ್ವಾಸ್ತ್ಯವಾಗಿ ಕೊಡುವೆನು; 11 ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು. 12 ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ. 13 ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು. 14 ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ. 15 ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು. 16 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ; 17 ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
1 ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ 3 ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು. 4 ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು. 5 ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು, 6 ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು. 7 ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ. 8 ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು; 9 ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು. 10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು. 11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು. 12 ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು. 13 ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ. 14 ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. 15 ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ? 16 ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು. 17 ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ? 18 ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು. 19 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು. 20 ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು. 21 ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
1 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು; 3 ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ. 4 ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ. 5 ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ. 6 ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ. 7 ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು. 8 ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು. 9 ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು. 10 ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು. 11 ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು. 12 ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. 13 ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು. 14 ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು. 15 ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು. 16 ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. 17 ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು. 18 ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ 19 ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು. 20 ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು. 21 ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು. 22 ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. 23 ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್ವರು ನಿನ್ನ ವ್ಯಾಪಾರಿಗಳಾಗಿದ್ದರು. 24 ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು. 25 ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ. 26 ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ. 27 ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು. 28 ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು. 29 ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, 30 ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; 31 ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. 32 ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು? 33 ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ. 34 ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು. 35 ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು. 36 ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
1 ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ. 3 ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ. 4 ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. 5 ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ; 6 ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ; 7 ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು. 8 ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ. 9 ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ; 10 ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ. 11 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ, 12 ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ. 13 ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. 14 ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ. 15 ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು. 16 ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು. 17 ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ; 18 ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು; 19 ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ. 20 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇ ನಂದರೆ, 21 ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು. 22 ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು. 23 ಅದರಲ್ಲಿ ವ್ಯಾಧಿಯನ್ನೂ ಬೀದಿಗಳಲ್ಲಿ ರಕ್ತವನ್ನು ಕಳುಹಿಸುವೆನು; ಸುತ್ತಲೂ ಅದಕ್ಕೆ ವಿರುದ್ಧವಾಗಿ ಕತ್ತಿಯಿಂದ ಹತವಾದವರು ಅದರಲ್ಲಿ ಬೀಳುವರು; ಆಗ ನಾನೇ ಕರ್ತನೆಂದು ತಿಳಿಯುವರು. 24 ಇಸ್ರಾಯೇಲ್ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು. 25 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು; 26 ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
1 ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖ ಮಾಡಿ ಅವನಿಗೂ ಸಮಸ್ತ ಐಗುಪ್ತಕ್ಕೂ ವಿರೋಧವಾಗಿ ಪ್ರವಾದಿಸು. 3 ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ. 4 ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ. 5 ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ. 6 ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು. 7 ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ. 8 ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ. 9 ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು. 10 ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ. 11 ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ. 12 ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು. 13 ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು. 14 ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು. 15 ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು. 16 ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು. 17 ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು. 18 ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ. 19 ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು. 20 ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ. 21 ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
1 ಕರ್ತನ ವಾಕ್ಯವು ಮತ್ತೆ ನನಗೆ ಬಂದು ಹೇಳಿದ್ದೇನಂದರೆ 2 ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ. 3 ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು. 4 ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು. 5 ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು. 6 ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ. 7 ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು. 8 ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು. 9 ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು. 10 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು. 11 ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು. 12 ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ. 13 ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ. 14 ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು. 15 ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು. 16 ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು. 17 ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು, 18 ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು. 19 ಹೀಗೆ ನಾನು ಐಗುಪ್ತ ದಲ್ಲಿ ನ್ಯಾಯಗಳನ್ನು ತೀರಿಸುವೆನು, ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು. 20 ಇದಲ್ಲದೆ ಹನ್ನೊಂದನೇ ವರುಷದಲ್ಲಿ ಮೊದಲ ನೆಯ ತಿಂಗಳಿನ, ಏಳನೆಯ ದಿನದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ -- 21 ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ. 22 ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ. 23 ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು. 24 ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು. 25 ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು. 26 ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
1 ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ಐಗುಪ್ತದ ಅರಸನಾದ ಫರೋಹನೊಂದಿಗೆ ಮತ್ತು ಅವನ ಸಮೂಹದೊಂದಿಗೆ ಮಾತ ನಾಡಿ--ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನನಾಗಿರುವೆ? 3 ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು. 4 ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು. 5 ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. 6 ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. 7 ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು. 8 ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. 9 ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು. 10 ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ. 11 ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ. 12 ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು. 13 ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು; 14 ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು. 15 ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು. 16 ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು. 17 ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು; 18 ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
1 ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 2 ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ. 3 ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು. 4 ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು. 5 ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ನಿನ್ನ ರಾಶಿ ಯಿಂದ ಕಣಿವೆಗಳನ್ನು ತುಂಬಿಸುವೆನು. 6 ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸು ವೆನು; ನದಿಗಳು ನಿನ್ನಿಂದ ತುಂಬುವವು. 7 ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. 8 ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ. 9 ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು. 10 ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು. 11 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು; 12 ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು. 13 ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ. 14 ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು; ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡು ವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. 15 ನಾನು ಐಗುಪ್ತದೇಶವನ್ನು ಹಾಳು ಮಾಡುವಾಗ, ಆ ದೇಶವು ಪರಿಪೂರ್ಣವಾಗಿ ಹಾಳಾಗುವಾಗ ಮತ್ತು ನಾನು ಅವರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು. 16 ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ. 17 ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 18 ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು. 19 ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು. 20 ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ. 21 ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ. 22 ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ. 23 ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು. 24 ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. 25 ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ. 26 ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು. 27 ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು. 28 ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ. 29 ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು. 30 ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ. 31 ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ. 32 ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
1 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ, 3 ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ, 4 ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು. 5 ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು. 6 ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು. 7 ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು. 8 ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು. 9 ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ. 10 ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ? 11 ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ? 12 ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು. 13 ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ. 14 ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ 15 ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು. 16 ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು. 17 ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ. 18 ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು. 19 ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು. 20 ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು. 21 ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು. 22 ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ. 23 ಆಮೇಲೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ-- 24 ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ. 25 ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ? 26 ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ? 27 ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು. 28 ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು. 29 ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು. 30 ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ. 31 ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು. 32 ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ. 33 ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
1 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ? 3 ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ, 4 ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. 5 ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು. 6 ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ. 7 ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. 8 ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ 9 ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. 10 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ. 11 ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ. 12 ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು. 13 ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು. 14 ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು. 15 ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. 16 ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು. 17 ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು. 18 ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ? 19 ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು. 20 ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ. 21 ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ. 22 ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು. 23 ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. 24 ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ; 25 ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು. 26 ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು; 27 ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು; 28 ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು. 29 ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ. 30 ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ. 31 ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
1 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ, 2 ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು; 3 ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. 4 ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. 5 ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ. 6 ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು. 7 ಹೀಗೆ ನಾನು ಸೇಯಾರ್ ಪರ್ವತವನ್ನು ಸಂಪೂರ್ಣ ಹಾಳು ಮಾಡುವೆನು; ಅದರೊಳಗೆ ಹಾದು ಹೋಗು ವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು. 8 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿ ಸುವರು. ನಿನ್ನ ಕತ್ತಿಯಿಂದ ಹತವಾದವರು ನಿನ್ನ ಹಳ್ಳ ಕೊಳ್ಳಗಳಲ್ಲಿಯೂ ಬೀಳುವರು. 9 ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. 10 ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ. 11 ಆದದರಿಂದ ದೇವರಾದ ಕರ್ತನು ಹೇಳುತ್ತಾನೆ--ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೇಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದ ಮೇಲೆ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ. 12 ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ. 13 ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ. 14 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು. 15 ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
1 ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; 2 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು; 3 ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ; 4 ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ. 5 ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ. 6 ಆದದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ. 7 ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು. 8 ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ. 9 ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ. 10 ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು; 11 ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. 12 ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ. 13 ದೇವ ರಾದ ಕರ್ತನು ಹೀಗೆ ಹೇಳುತ್ತಾನೆ, ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲ ದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವಿ ಎಂದು ಅವರು ನಿನಗೆ ಹೇಳುವರು; 14 ಆದದರಿಂದ ಇನ್ನು ಮುಂದೆ ನೀನು ಮನುಷ್ಯರನ್ನು ನುಂಗುವದಿಲ್ಲ; ಇನ್ನು ಮೇಲೆ ನಿನ್ನ ಜನಾಂಗದವರನ್ನು ಮಕ್ಕಳಿಲ್ಲದವ ರನ್ನಾಗಿ ಮಾಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ. 15 ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ. 16 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 17 ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು. 18 ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು. 19 ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು. 20 ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು. 21 ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು. 22 ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ. 23 ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ. 24 ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು. 25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. 26 ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. 27 ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ. 28 ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. 29 ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ. 30 ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು. 31 ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ. 32 ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ. 33 ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು. 34 ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಬೀಡಾಗಿ ಕಾಣದೆ ಉಳುಮೆಗೊಂಡಿರುವದು. 35 ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು. 36 ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ. 37 ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು. 38 ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
1 ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು. 2 ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. 3 ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು. 4 ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. 5 ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ; 6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ. 7 ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು. 8 ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ. 9 ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ, 10 ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು. 11 ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು. 12 ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. 13 ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. 14 ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ. 15 ಕರ್ತನ ವಾಕ್ಯವು ನನಗೆ ತಿರುಗಿ ಬಂದು ಹೇಳಿದ್ದೇ ನಂದರೆ-- 16 ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು. 17 ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು. 18 ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ 19 ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು; 20 ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು. 21 ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು. 22 ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ. 23 ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. 24 ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. 25 ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು. 26 ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು. 27 ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು. 28 ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
1 ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು 3 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ. 4 ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು. 5 ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು. 6 ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು. 7 ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು. 8 ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ. 9 ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ. 10 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ, 11 ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ, 12 ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ. 13 ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು. 14 ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ 15 ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ. 16 ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು. 17 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ? 18 ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ. 19 ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು; 20 ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು. 21 ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು. 22 ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು. 23 ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
1 ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ; 2 ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು; 3 ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು. 4 ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು. 5 ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. 6 ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು. 7 ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು. 8 ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ; 9 ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು. 10 ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ. 11 ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್ ಎಂದು ಕರೆಯುವರು. 12 ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು. 13 ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ. 14 ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು. 15 ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು. 16 ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ. 17 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು. 18 ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ. 19 ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು. 20 ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ. 21 ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು. 22 ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು. 23 ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು. 24 ಅವರ ಅಶುದ್ಧತ್ವದ ಪ್ರಕಾರವೂ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ. 25 ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು. 26 ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ, 27 ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು; 28 ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು. 29 ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
1 ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು. 2 ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು. 3 ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು. 4 ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು. 5 ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು. 6 ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು. 7 ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು. 8 ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು. 9 ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು. 10 ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು. 11 ಅವನು ಬಾಗಲಿನ ಪ್ರವೇಶದ ಅಗಲವು ಹತ್ತು ಮೊಳವೆಂದೂ ಬಾಗಲಿನ ಉದ್ದವು ಹದಿಮೂರು ಮೊಳವೆಂದೂ ಅಳೆದನು. 12 ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು. 13 ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು. 14 ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು. 15 ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು. 16 ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು. 17 ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು. 18 ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು. 19 ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು. 20 ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು. 21 ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ. 22 ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು. 23 ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು. 24 ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು. 25 ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ; 26 ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು. 27 ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು. 28 ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು; 29 ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ; 30 ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು. 31 ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು. 32 ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು. 33 ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ. 34 ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು. 35 ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು; 36 ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ; 37 ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು. 38 ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು; 39 ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು. 40 ಹೊರಗಡೆಯಲ್ಲಿ ಉತ್ತರದ ಬಾಗಲಿನ ಪ್ರವೇಶಕ್ಕೆ ಏರಿಹೋಗುವಲ್ಲಿ ಎರಡು ಮೇಜುಗಳೂ ಬಾಗಲಿನ ದ್ವಾರಾಂಗಣದ ಕಡೆಯಲ್ಲಿ ಎರಡು ಮೇಜುಗಳೂ ಇದ್ದವು. 41 ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು. 42 ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ಮಾಡಲ್ಪಟ್ಟಿದ್ದವು; ಅವುಗಳ ಉದ್ದ ಅಗಲ ಒಂದುವರೆ ಮೊಳ, ಎತ್ತರ ಒಂದುವರೆ ಮೊಳ, ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿ ಸುವ ಸಾಮಾನುಗಳನ್ನೂ ಇಟ್ಟರು. 43 ಒಳಗೆ ಸುತ್ತಲಾಗಿ ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ಮೇಜುಗಳ ಮೇಲೆ ಅರ್ಪಣೆಯ ಮಾಂಸವಿತ್ತು. 44 ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು. 45 ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು. 46 ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ. 47 ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು. 48 ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು. 49 ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
1 ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು. 2 ಬಾಗಲಿನ ಅಗಲವು ಹತ್ತು ಮೊಳ ಬಾಗಲಿನ ಪಾರ್ಶ್ವಗಳು ಒಂದು ಕಡೆಯಲ್ಲಿ ಐದು ಮೊಳ, ಇನ್ನೊಂದು ಕಡೆಯಲ್ಲಿ ಐದು ಮೊಳವೆಂದು ಅವನು ಅದರ ಉದ್ದವನ್ನು ನಲವತ್ತು ಮೊಳವೆಂದೂ ಅಗಲವನ್ನು ಇಪ್ಪತ್ತು ಮೊಳವೆಂದೂ ಅಳೆದನು. 3 ಆಮೇಲೆ ಅವನು ಒಳಗೆ ಹೋಗಿ ಬಾಗಿಲಿನ ಕಂಬವನ್ನು ಎರಡು ಮೊಳವೆಂದೂ ಬಾಗಿಲನ್ನು ಆರು ಮೊಳವೆಂದೂ ಬಾಗಿಲಿನ ಅಗಲ ಏಳು ಮೊಳವೆಂದೂ ಅಳೆದನು. 4 ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು. 5 ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು. 6 ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ. 7 ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು. 8 ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು. 9 ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು. 10 ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು; 11 ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು. 12 ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು. 13 ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು; 14 ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು. 15 ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು; 16 ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ; 17 ಬಾಗಿಲಿನ ಮೇಲಕ್ಕೂ ಒಳಗಿನ ಆಲಯದ ವರೆಗೂ ಹೊರಗೂ ಸುತ್ತಲೂ ಇದ್ದ ಗೋಡೆ, ಒಳಗೂ ಹೊರಗೂ ಎಲ್ಲವನ್ನೂ ಅಳೆದನು. 18 ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ. 19 ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು. 20 ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು. 21 ದೇವಾಲಯದ ಕಂಬ ಗಳು ಚಚ್ಚೌಕವಾಗಿದ್ದವು, ಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು; ಒಂದು ಆಕಾರವು ಮತ್ತೊಂದು ಆಕಾರವನ್ನು ಹೋಲುತ್ತಿತ್ತು. 22 ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು. 23 ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು. 24 ಆ ಎರಡು ಬಾಗಲುಗಳಿಗೆ ಎರಡು ಕದಗಳಿ ದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಲಿಗೆ ಎರಡು ಇನ್ನೊಂದು ಬಾಗಲಿಗೆ ಎರಡು ಇದ್ದವು. 25 ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು. 26 ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
1 ಆ ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು, 2 ನೂರುಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಲಿನ ಅಗಲ ಐವತ್ತು ಮೊಳವಾಗಿತ್ತು. 3 ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು. 4 ಕೊಠಡಿಗಳ ಮುಂದೆ ಒಳಗೆ ಹೋಗುವಂತೆ ಮತ್ತು ಹತ್ತು ಮೊಳಗಳು ಅಗಲವಾದಂತ ಒಂದು ಮೊಳದ ಹಾದಿ ಇತ್ತು; ಅವುಗಳ ಬಾಗಲುಗಳು ಉತ್ತರದ ಕಡೆಗಿದ್ದವು. 5 ಈಗ ಮೇಲಿನ ಕೊಠಡಿಗಳೇ ಚಿಕ್ಕವುಗಳಾಗಿದ್ದವು. ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮಧ್ಯಭಾಗಕ್ಕಿಂತಲೂ ಪಡ ಸಾಲೆಗಳು ಎತ್ತರದಲ್ಲಿತ್ತು. 6 ಇವು ಮೂರು ಅಂತಸ್ತು ಗಳಾಗಿದ್ದವು; ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ; ಆದದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗೆ ಚಾಚಿಕೊಂಡಿದ್ದವು. 7 ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು. 8 ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿ ದೇವಾಲಯದ ಮುಂದೆ ನೂರು ಮೊಳವಿತ್ತು. 9 ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು. 10 ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು. 11 ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು. 12 ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು. 13 ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು. 14 ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು. 15 ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು. 16 ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುತ್ತಲೂ ಐನೂರು ಕೋಲಾಗಿತ್ತು. 17 ಉತ್ತರ ಕಡೆಯಲ್ಲಿ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಐನೂರು ಕೋಲೆಂದು ಅಳೆದನು. 18 ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗ ವನ್ನು ಐನೂರು ಕೋಲೆಂದು ಅಳೆದನು. 19 ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಐನೂರು ಕೋಲೆಂದು ಅಳೆದನು. 20 ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
1 ಆ ಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಲಿಗೆ ಕರೆದು ಕೊಂಡು ಹೋದನು; 2 ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು. 3 ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು. 4 ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು. 5 ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು. 6 ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು. 7 ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ. 8 ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ. 9 ಈಗ ಅವರು ಅವರ ವ್ಯಭಿಚಾರವನ್ನು ಮತ್ತು ಅವರ ಅರಸರ ಹೆಣಗಳನ್ನು ನನ್ನಿಂದ ದೂರವಾಗಿಡಲಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ ಅಂದನು. 10 ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ. 11 ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ, 12 ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ. 13 ಈ ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರವೇ ಇವೆ; ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ; ಕೆಳಭಾಗದ ಎತ್ತರವು ಒಂದು ಮೊಳ, ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ; ಸುತ್ತಲೂ ದಿಂಡಿನ ಅಗಲವು ಒಂದು ಮೊಳ; ಇದೇ ಯಜ್ಞವೇದಿಯ ಉನ್ನತ ಸ್ಥಳ. 14 ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ. 15 ಈ ಪ್ರಕಾರ ಯಜ್ಞವೇದಿಯು ನಾಲ್ಕು ಮೊಳವಾಗಿಯೂ; ಯಜ್ಞವೇದಿಯಿಂದ ಮೇಲಕ್ಕೆ ನಾಲ್ಕು ಕೊಂಬುಗಳುಳ್ಳದ್ದಾಗಿಯೂ ಇರ ಬೇಕು. 16 ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು. 17 ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು. 18 ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ. 19 ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು. 20 ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು. 21 ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು. 22 ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು. 23 ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು. 24 ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು. 25 ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು. 26 ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು. 27 ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
1 ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ದ ಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು; ಅದು ಮುಚ್ಚಲ್ಪಟ್ಟಿತ್ತು. 2 ಆಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದು ತೆರೆಯಬಾರದು; ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು; ಇಸ್ರಾಯೇಲ್ಯರ ದೇವರಾದ ಕರ್ತನು ಇದರಿಂದ ಪ್ರವೇಶಿಸಿದ್ದಾನೆ. ಆದದರಿಂದ ಇದು ಮುಚ್ಚಲ್ಪಡಬೇಕು. 3 ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು. 4 ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು. 5 ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು. 6 ತಿರುಗಿ ಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾ ದದ್ದೇನಂದರೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ; 7 ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ; 8 ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ. 9 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು. 10 ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು. 11 ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು. 12 ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ. 13 ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು. 14 ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು. 15 ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ. 16 ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು. 17 ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು. 18 ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು. 19 ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು. 20 ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು. 21 ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು. 22 ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು. 23 ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು. 24 ಜಗಳವಾಡುವಾಗ ಅವರು ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳ ಪ್ರಕಾರ ಅವರಿಗೆ ತಿಳಿಸಬೇಕು. ಅವರು ನನ್ನ ನ್ಯಾಯಪ್ರಮಾಣಗಳನ್ನೂ ನಿಯಮಗ ಳನ್ನೂ ನನ್ನ ಸಭೆಗಳಲ್ಲಿ ಕೈಕೊಳ್ಳಬೇಕು; ನನ್ನ ಸಬ್ಬತ್ತು ಗಳನ್ನು ಪರಿಶುದ್ಧಪಡಿಸಬೇಕು. 25 ಅವರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆ ತಾಯಿ, ಮಗ, ಮಗಳು, ಸಹೋದರ, ಮತ್ತು ಗಂಡ ಇಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು. 26 ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು. 27 ಅವನು ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವದ ಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಬಲಿಯನ್ನು ಅರ್ಪಿಸಬೇಕೆಂದು ದೇವರಾದ ಕರ್ತನು ಹೇಳುತ್ತಾನೆ. 28 ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು. 29 ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು. 30 ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು. 31 ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
1 ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ. 2 ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು. 3 ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು. 4 ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು. 5 ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು. 6 ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು. 7 ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು. 8 ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು. 9 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ. 10 ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್ (ಅಳತೆ) ನಿಮಗಿರಬೇಕು. 11 ಬತ್ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು. 12 ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು. 13 ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು, 14 ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್ಗಳು ಒಂದೇ ಹೋಮೆರ್. 15 ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ. 16 ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು. 17 ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು. 18 ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು. 19 ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು; 20 ಈ ಪ್ರಕಾರ ನೀನು ತಿಂಗಳಿನ ಏಳನೇ ದಿನದಲ್ಲಿ ತಪ್ಪಿ ಹೋಗುವ ಎಲ್ಲರಿಗಾಗಿಯೂ ಬುದ್ಧಿ ಹೀನರಿಗಾಗಿಯೂ ಮಾಡಬೇಕು. ಹೀಗೆ ನೀವು ಆಲಯಕ್ಕೋಸ್ಕರವಾಗಿ ಸಮಾಧಾನಪಡಿಸಬೇಕು. 21 ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು. 22 ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು. 23 ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು; 24 ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು. 25 ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
1 ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು. 2 ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು; 3 ದೇಶದ ಜನರು ಸಬ್ಬತ್ತುಗಳಲ್ಲಿಯೂ, ಅಮಾವಾಸ್ಯೆ ಗಳಲ್ಲಿಯೂ ಈ ಬಾಗಲಿನ ಕದದ ಹತ್ತಿರ ಕರ್ತನ ಮುಂದೆ ಇದೇ ರೀತಿ ಆರಾಧಿಸಬೇಕು. 4 ಪ್ರಧಾನರು ಕರ್ತನಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು. 5 ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು; 6 ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು. 7 ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು. 8 ಪ್ರಧಾನರು ಪ್ರವೇಶಿಸುವಾಗ, ಅವನು ಬಾಗಲಿನ ದ್ವಾರಾಂಗಣದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು. 9 ಆದರೆ ದೇಶದ ಜನರು ಪರಿಶುದ್ಧ ಹಬ್ಬಗಳಲ್ಲಿ ಕರ್ತನ ಮುಂದೆ ಬರುವಾಗ ಉತ್ತರದ ಬಾಗಲಿನಿಂದ ಪ್ರವೇಶಿಸಿ ಆರಾ ಧಿಸಿದ ಮೇಲೆ ಅವನು ದಕ್ಷಿಣ ಬಾಗಲಿನ ಮಾರ್ಗ ವಾಗಿ ಹೊರಗೆ ಹೋಗಬೇಕು. ದಕ್ಷಿಣ ಬಾಗಲಿನ ಮಾರ್ಗವಾಗಿ ಪ್ರವೇಶಿಸಿದವನು ಉತ್ತರ ಬಾಗಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಅವನು ಪ್ರವೇಶಿಸಿದ ಬಾಗಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು; ಆದರೆ ಅದಕ್ಕೆ ಎದುರಾಗಿ ಹೊರಗೆ ಹೋಗಬೇಕು. 10 ಅವರು ಒಳಗೆ ಹೋಗು ವಾಗ ಅವರ ಮಧ್ಯದಲ್ಲಿರುವ ಪ್ರಧಾನನು ಒಳಗೆ ಹೋಗಬೇಕು. ಹೊರಗೆ ಹೋಗುವಾಗ ಹೊರಗೆ ಬರಬೇಕು. 11 ಪರಿಶುದ್ಧ ಹಬ್ಬಗಳಲ್ಲಿಯೂ ಸಭೆಗಳ ಲ್ಲಿಯೂ ಆಹಾರದ ಅರ್ಪಣೆಗೆ ಹೋರಿಗೆ ಒಂದು ಏಫವೂ ಟಗರಿಗೆ ಒಂದು ಏಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು. 12 ಪ್ರಧಾನನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಕರ್ತನಿಗೆ ಸಿದ್ಧಮಾಡು ವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲನ್ನು ಅವನಿಗೆ ತೆರೆಯಬೇಕು; ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ತು ದಿನದಲ್ಲಿ ಮಾಡಿದ ಹಾಗೆ ಸಿದ್ದಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಲನ್ನು ಮುಚ್ಚಬೇಕು. 13 ನೀನು ಪ್ರತಿದಿನವೂ ಕರ್ತನಿಗೆ ಒಂದು ವರುಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ದಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು. 14 ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ. 15 ಹೀಗೆ ಅವರು ಕುರಿಮರಿಯನ್ನು ಆಹಾರದ ಅರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದೆ ದಹನಬಲಿಯನ್ನಾಗಿ ಸಿದ್ಧಮಾಡಬೇಕು. 16 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ. 17 ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು. 18 ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು. 19 ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು. 20 ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು. 21 ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು. 22 ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು. 23 ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವು. 24 ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
1 ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು. 2 ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು. 3 ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4 4 ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು. 5 ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು. 6 ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು. 7 ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು. 8 ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು. 9 ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು. 10 ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು, 11 ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು. 12 ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು. 13 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ. 14 ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು. 15 ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ; 16 ಹಮಾತ್ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ 17 ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ. 18 ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವು ಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ. 19 ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ. 20 ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ. 21 ಹೀಗೆ ನೀವು ಈ ದೇಶವನ್ನು ಇಸ್ರಾಯೇಲ್ಯರ ಕುಲಗಳ ಪ್ರಕಾರ ಪಾಲುಮಾಡಿ ಕೊಳ್ಳಬೇಕು. 22 ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂತವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ಅನ್ಯಜನರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು; ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದ ವರಾಗಿರಬೇಕು; ಅವರಿಗೆ ಇಸ್ರಾಯೇಲಿನ ಗೋತ್ರಗ ಳೊಳಗೆ ಬಾಧ್ಯತೆಯಾಗಬೇಕು. 23 ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
1 ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್ನ ಒಂದು ಭಾಗವಾಗಿದೆ. 2 ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ. 3 ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ನಫ್ತಾಲಿಗೆ ಒಂದು ಭಾಗವಾಗಿದೆ. 4 ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೆ ಮನಸ್ಸೆಗೆ ಒಂದು ಭಾಗ. 5 ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್ಗೆ ಒಂದು ಭಾಗ. 6 ಎಫ್ರಾ ಯಾಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೆ ರೂಬೇನ್ಗೆ ಒಂದು ಭಾಗ. 7 ರೂಬೇನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಯೆಹೂದಕ್ಕೆ ಒಂದು ಭಾಗ. 8 ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು. 9 ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು; 10 ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು. 11 ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು; 12 ಅರ್ಪಿಸಲ್ಪಟ್ಟ ಈ ದೇಶದ ಕಾಣಿಕೆ ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧ ವಾದದ್ದಾಗಿರಬೇಕು. 13 ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ. 14 ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ. 15 ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು; 16 ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ; 17 ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು: ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ; ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ; ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ; ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ. 18 ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು. 19 ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು. 20 ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು. 21 ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು. 22 ಇದಲ್ಲದೆ ಲೇವಿಯರ ಸ್ವಾಸ್ತ್ಯದಿಂದ ಮೊದಲುಗೊಂಡು ಮತ್ತು ಪಟ್ಟಣದ ಸ್ವಾಸ್ತ್ಯದಿಂದ ಪ್ರಧಾನನ ನಡುವೆ ಇರುವಂಥ ದ್ದು ಯೆಹೂದದ ಮೇರೆಗೂ ಬೆನ್ಯಾವಿಾನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಆಗಬೇಕು. 23 ಮಿಕ್ಕ ಗೋತ್ರಗಳ ವಿಷಯವೇನಂದರೆ, ಪೂರ್ವ ದ ಕಡೆಯಿಂದ ಪಶ್ಚಿಮದ ವರೆಗೂ ಬೆನ್ಯಾವಿಾನನ 24 ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೂ ಸಿಮೆಯೋನ್ನ ಒಂದು ಭಾಗ ವಾಗಿದೆ. 25 ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಸ್ಸಾಕಾರನ ಒಂದು ಭಾಗವಾಗಿದೆ; 26 ಇಸ್ಸಾಕಾರ ಮೇರೆಯ ಬಳಿ ಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಜೆಬುಲೋನನ ಒಂದು ಭಾಗವದೆ; 27 ಜೆಬು ಲೋನ್ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಗಾದನ ಒಂದು ಭಾಗವಾಗಿದೆ. 28 ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು. 29 ನೀವು ಇಸ್ರಾಯೇಲಿನ ಗೋತ್ರ ಗಳಿಗೆ ಚೀಟು ಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಅದರ ಭಾಗಗಳು ಇವೆ. ಎಂದು ದೇವರಾದ ಕರ್ತನು ಹೇಳುತ್ತಾನೆ. 30 ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕು--ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು. 31 ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು. 32 ಪೂರ್ವದ ಗಡಿಯಲ್ಲಿ ನಾಲ್ಕು ಸಾವಿರದ ಐನೂರು, ಮತ್ತು ಮೂರು ಬಾಗ ಲುಗಳು; ಯೋಸೇಫನ ಬಾಗಲು ಒಂದು, ಬೆನ್ಯಾ ವಿಾನನ ಬಾಗಲು ಒಂದು; ದಾನನ ಬಾಗಲು ಒಂದು 33 ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು; ಮೂರು ಬಾಗಲುಗಳು; ಸಿಮೆಯೋನನ ಬಾಗಲು ಒಂದು, ಇಸ್ಸಾಕಾರನ ಬಾಗಲು ಒಂದು; ಜೆಬುಲೋನನ ಬಾಗಲು ಒಂದು. 34 ಪಶ್ಚಿಮದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು, ಅದರ ಬಾಗಲುಗಳು ಮೂರು; ಗಾದ ಬಾಗಲು ಒಂದು, ಆಶೇರ ಬಾಗಲು ಒಂದು, ನಫ್ತಾಲಿ ಬಾಗಲು ಒಂದು. 35 ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
1 ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು. 2 ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು. 3 ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ 4 ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು. 5 ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು. 6 ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು. 7 ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು. 8 ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು. 9 ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು. 10 ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು. 11 ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ-- 12 ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ. 13 ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ; ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು ಎಂದು ಬೇಡಿ ಕೊಂಡನು. 14 ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ ಹತ್ತು ದಿವಸಗಳ ವರೆಗೂ ಅವರನ್ನು ಪರೀಕ್ಷಿಸಿದನು. 15 ಹತ್ತು ದಿವಸಗಳ ಕೊನೆಯ ವರೆಗೂ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆ ಲ್ಲರಿಗಿಂತ ಇವರ ಮುಖಗಳು ನೋಡುವದಕ್ಕೆ ಸುಂದರ ವಾಗಿಯೂ ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದವು. 16 ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂತ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು. 17 ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು. 18 ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು. 19 ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು. 20 ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು. 21 ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
1 ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು. 2 ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು. 3 ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು. 4 ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು. 5 ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು. 6 ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು. 7 ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು. 8 ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು. 9 ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು. 10 ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ. 11 ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು. 12 ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು. 13 ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು. 14 ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು; 15 ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು. 16 ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು. 17 ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು. 18 ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು. 19 ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು. 20 ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ; 21 ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ. 22 ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ. 23 ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು. 24 ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು. 25 ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು. 26 ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು. 27 ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು. 28 ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ, 29 ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ. 30 ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ. 31 ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು. 32 ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ 33 ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು. 34 ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು. 35 ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು. 36 ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ. 37 ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ. 38 ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ. 39 ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು. 40 ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು. 41 ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು. 42 ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು. 43 ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ. 44 ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು. 45 ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು. 46 ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು. 47 ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು. 48 ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು. 49 ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
1 ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. 2 ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು. 3 ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು. 4 ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ-- 5 ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು. 6 ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು. 7 ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು. 8 ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು 9 ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು. 10 ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ 11 ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ! 12 ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು. 13 ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು. 14 ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್ ಮೇಷಕ್ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ? 15 ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು. 16 ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. 17 ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು. 18 ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು. 19 ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು. 20 ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್, ಮೇಷಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು. 21 ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು. 22 ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು. 23 ಶದ್ರಕ್ ಮೇಷಕ್ ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು. 24 ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು. 25 ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು. 26 ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು. 27 ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು. 28 ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ. 29 ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ. 30 ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
1 ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ. 2 ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ. 3 ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು. 4 ನೆಬೂಕದ್ನೆಚ್ಚರನೆಂಬ ನಾನು ನನ್ನ ಮನೆಯಲ್ಲಿ ಕ್ಷೇಮವಾಗಿಯೂ ನನ್ನ ಅರಮನೆಯಲ್ಲಿ ಸುಖವಾ ಗಿಯೂ ಇರುವಾಗ; 5 ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು. 6 ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು. 7 ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ. 8 ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ-- 9 ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು. 10 ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು. 11 ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು. 12 ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು. 13 ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು. 14 ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ. 15 ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ. 16 ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು. 17 ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು. 18 ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು. 19 ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ. 20 ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ; 21 ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು. 22 ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು. 23 ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ. 24 ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ. 25 ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು. 26 ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು. 27 ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು. 28 ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು. 29 ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು. 30 ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು. 31 ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು. 32 ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು. 33 ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು. 34 ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. 35 ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು. 36 ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು. 37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
1 ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು. 2 ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. 3 ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. 4 ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು. 5 ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು. 6 ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. 7 ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು. 8 ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು. 9 ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು. 10 ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ; 11 ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು. 12 ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು. 13 ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ? 14 ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ. 15 ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು. 16 ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು. 17 ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು. 18 ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು. 19 ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು. 20 ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; 21 ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. 22 ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ 23 ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ. 24 ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು. 25 ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್, 26 ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ; 27 ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ. 28 ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು. 29 ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು. 30 ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು. 31 ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು. 2 ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು. 3 ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು. 4 ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು. 5 ಆಗ ಆ ಮನುಷ್ಯರು --ಈ ದಾನಿಯೇಲನಿಗೆ ವಿರೋಧವಾಗಿ ಅವನ ದೇವರ ನ್ಯಾಯಪ್ರಮಾಣದಲ್ಲಿ ತಪ್ಪು ಸಿಗುವದೇ ಹೊರತು ನಮಗೆ ಇನ್ನೆಲ್ಲೂ ಸಿಗುವದಿಲ್ಲ ಎಂದು ಅಂದು ಕೊಂಡರು. 6 ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು. 7 ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು. 8 ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು. 9 ಆದಕಾರಣ ದಾರ್ಯಾವೆಷನು ಆ ಬರಹಕ್ಕೂ ನಿರ್ಣಯಕ್ಕೂ ರುಜು ಹಾಕಿದನು. 10 ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು. 11 ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು. 12 ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು. 13 ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು. 14 ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು. 15 ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು. 16 ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು. 17 ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು. 18 ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು. 19 ಮುಂಜಾನೆಗೆ ಮೊದಲೇ ಅರಸನು ಎದ್ದು ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು. 20 ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು. 21 ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು. 22 ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು. 23 ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ. 24 ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು. 25 ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ. 26 ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು. 27 ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ. 28 ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
1 ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು. 2 ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು. 3 ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು. 4 ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು. 5 ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು. 6 ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು. 7 ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು. 8 ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು. 9 ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು. 10 ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು. 11 ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು. 12 ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು. 13 ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು. 14 ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ. 15 ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು. 16 ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು. 17 ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ. 18 ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು. 19 ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ. 20 ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು. 21 ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು; 22 ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು. 23 ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು. 24 ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು. 25 ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು. 26 ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು. 27 ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು. 28 ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
1 ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ದರ್ಶನವು ದಾನಿಯೇಲನಾದ ನನಗೆ ಕಾಣಿಸಿತು. 2 ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್ ಸೀಮೆ ಯಲ್ಲಿರುವ ಶೂಷನ್ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು. 3 ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು. 4 ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು. 5 ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು. 6 ನಾನು ನೋಡಿದ ನದಿಯ ಹತ್ತಿರವಿದ್ದ ಎರಡು ಕೊಂಬಿನ ಟಗರಿನ ಬಳಿಗೆ ಅದು ಬಂದು ಪರಾಕ್ರಮದಿಂದ ರೋಷಗೊಂಡು ಅದರ ಬಳಿಗೆ ಓಡಿತು. 7 ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ. 8 ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು. 9 ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು. 10 ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು. 11 ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು; 12 ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು. 13 ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ 14 ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು. 15 ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು; 16 ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು. 17 ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು. 18 ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು. 19 ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು. 20 ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು. 21 ಆ ಒರಟು ಹೋತವು ಗ್ರೀಕ್ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು. 22 ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ; 23 ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು. 24 ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು. 25 ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು. 26 ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು. 27 ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
1 ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ಅರ ಸನೂ ಆದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ 2 ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು. 3 ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು. 4 ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ, 5 ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. 6 ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. 7 ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. 8 ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. 9 ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. 10 ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. 11 ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. 12 ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. 13 ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ. 14 ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ. 15 ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ. 16 ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ. 17 ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. 18 ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. 19 ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು. 20 ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು. 21 ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು. 22 ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ. 23 ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು. 24 ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ. 25 ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು. 26 ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು. 27 ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
1 ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು. 2 ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು. 3 ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ. 4 ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ, 5 ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು. 6 ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು. 7 ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು. 8 ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು. 9 ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು. 10 ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು. 11 ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು. 12 ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ; 13 ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು 14 ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ. 15 ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು. 16 ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ. 17 ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ. 18 ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ 19 ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು. 20 ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್ ಪ್ರಭುವು ಬರುವನು. 21 ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
1 ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ. 2 ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು. 3 ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು. 4 ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು. 5 ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು. 6 ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ. 7 ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು. 8 ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು. 9 ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು. 10 ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು. 11 ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು. 12 ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು. 13 ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು. 14 ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು. 15 ಆದರೆ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ ದಿಬ್ಬವನ್ನು ಕೆಡವಿ ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳು ವನು; ದಕ್ಷಿಣದ ಭುಜಬಲವಾದರೂ ಅವನು ಆದು ಕೊಂಡ ಜನರಾದರೂ ನಿಲ್ಲುವದಕ್ಕೆ ಬಲವಿರುವದಿಲ್ಲ. 16 ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು. 17 ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ. 18 ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು. 19 ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು. 20 ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ. 21 ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು. 22 ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು. 23 ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು. 24 ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು. 25 ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು. 26 ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು. 27 ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು. 28 ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು. 29 ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ. 30 ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು. 31 ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು. 32 ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು. 33 ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು. 34 ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು. 35 ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು; 36 ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು. 37 ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ. 38 ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು. 39 ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು. 40 ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು. 41 ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು. 42 ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು. 43 ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು. 44 ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು. 45 ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
1 ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು. 2 ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು. 3 ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು; 4 ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು. 5 ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು. 6 ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ 7 ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು. 8 ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು. 9 ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ. 10 ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು. 11 ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು. 12 ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು. 13 ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
1 ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು. 2 ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ. 3 ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು. 4 ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು. 5 ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು. 6 ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ. 7 ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು. 8 ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. 9 ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು. 10 ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು. 11 ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
1 ನೀವು ನಿಮ್ಮ ಸಹೋದರರಿಗೆ ಅಮ್ಮಿ ಎಂದೂ ನಿಮ್ಮ ಸಹೋದರಿಯರಿಗೆ ರುಹಾಮ ಎಂದೂ ಹೇಳಿರಿ. 2 ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ. 3 ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ. 4 ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ, 5 ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ. 6 ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು. 7 ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು. 8 ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ. 9 ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು. 10 ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು. 11 ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು. 12 ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು. 13 ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ. 14 ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು. 15 ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು. 16 ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನೀನು ನನ್ನನ್ನು ಇನ್ನು ಮೇಲೆ ಬಾಳಿ ಎಂದು ಕರೆಯದೆ ಈಶೀ ಎಂದು ಕರೆಯುವಿ. 17 ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ. 18 ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು. 19 ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು. 20 ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ. 21 ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು. 22 ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು. 23 ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
1 ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು 2 ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು. 3 ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು. 4 ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು. 5 ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
1 ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ. 2 ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ; 3 ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು. 4 ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ. 5 ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು. 6 ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು. 7 ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು. 8 ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ. 9 ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು. 10 ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ. 11 ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ. 12 ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ. 13 ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು. 14 ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು. 15 ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ. 16 ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು. 17 ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು. 18 ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ. 19 ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
1 ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ. 2 ನಾನು ಅವರನ್ನು ಗದರಿಸಿದ್ದಾಗ್ಯೂ ನನಗೆ ತಿರುಗಿಬಿದ್ದವರು ಕೊಲೆಯನ್ನು ಮಾಡುವದರಲ್ಲಿ ಮಗ್ನರಾಗಿದ್ದಾರೆ. 3 ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು. 4 ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳುವ ಹಾಗೆ ತಮ್ಮ ಕ್ರಿಯೆಗಳನ್ನು ಸರಿ ಮಾಡುವದಿಲ್ಲ; ಯಾಕಂದರೆ ವ್ಯಭಿಚಾರಗಳ ಆತ್ಮವು ಅವರ ಮಧ್ಯದಲ್ಲಿ ಉಂಟು; ಅವರು ಕರ್ತನನ್ನು ತಿಳಿದುಕೊಳ್ಳಲಿಲ್ಲ. 5 ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ. ಆದದರಿಂದ ಇಸ್ರಾಯೇಲು ಮತ್ತು ಎಫ್ರಾಯಾಮು ತಮ್ಮ ಕೆಟ್ಟ ತನದಲ್ಲಿ ಬೀಳುವವು. ಯೆಹೂದವು ಅವರೊಂದಿಗೆ ಬೀಳುವದು. 6 ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ. 7 ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು. 8 ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು; 9 ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ. 10 ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು. 11 ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು. 12 ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು. 13 ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ. 14 ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು. 15 ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
1 ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ. 2 ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು. 3 ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು. 4 ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ. 5 ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು. 6 ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ. 7 ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ. 8 ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ. 9 ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ. 10 ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ. 11 ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
1 ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ. 2 ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ. 3 ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ. 4 ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ. 5 ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ. 6 ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ. 7 ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ. 8 ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ. 9 ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ. 10 ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ. 11 ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ. 12 ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು. 13 ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ. 14 ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ. 15 ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ. 16 ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
1 ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ. 2 ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು. 3 ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು. 4 ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. 5 ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ? 6 ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು. 7 ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ. 8 ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ. 9 ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ. 10 ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು. 11 ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು. 12 ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ. 13 ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು. 14 ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
1 ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ. 2 ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು. 3 ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು. 4 ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ. 5 ಪರಿಶುದ್ಧದಿನದ ಲ್ಲಿಯೂ ಕರ್ತನ ಹಬ್ಬದ ದಿನದಲ್ಲಿಯೂ ನೀವು ಏನು ಮಾಡುತ್ತೀರಿ? 6 ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು. 7 ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ. 8 ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು. 9 ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು. 10 ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು. 11 ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ. 12 ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ! 13 ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು. 14 ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು. 15 ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ. 16 ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು. 17 ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
1 ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ. 2 ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು. 3 ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು. 4 ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ. 5 ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು. 6 ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು. 7 ಸಮಾರ್ಯವಾದರೋ ಅದರ ಅರಸನು ನೀರಿನ ಮೇಲೆ ನೊರೆಯ ಹಾಗೆ ಅಳಿದು ಹೋಗುವನು; 8 ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು. 9 ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ. 10 ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು. 11 ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು. 12 ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ. 13 ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ. 14 ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು. 15 ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
1 ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು. 2 ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು. 3 ನಾನು ಅವರ ತೋಳುಗಳನ್ನು ಹಿಡಿದು ಎಫ್ರಾಯಾಮನಿಗೆ ಕಲಿಸಿದೆನು. ಆದರೆ ನಾನು ಅವ ರನ್ನು ಸ್ವಸ್ಥಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ. 4 ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು. 5 ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು. 6 ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ. 7 ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು. 8 ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ. 9 ನನ್ನ ಕೋಪದ ಉರಿಯನ್ನು ನಾನು ತೀರಿಸುವದಿಲ್ಲ, ನಾನು ಎಫ್ರಾಯಾಮನ್ನು ನಾಶ ಮಾಡಲು ತಿರುಗಿಕೊಳ್ಳುವದಿಲ್ಲ; ನಾನು ದೇವರೇ ಮನುಷ್ಯನಲ್ಲ, ನಿಮ್ಮ ಮಧ್ಯದಲ್ಲಿರುವಾತನಾದ ಪರಿ ಶುದ್ಧನೇ. ಪಟ್ಟಣದೊಳಗೆ ನಾನು ಪ್ರವೇಶಿಸುವದಿಲ್ಲ. 10 ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು; 11 ಐಗುಪ್ತದ ಪಕ್ಷಿಯ ಹಾಗೆ ಮತ್ತು ಅಶ್ಯೂರ್ಯರ ದೇಶದ ಪಾರಿವಾಳದ ಹಾಗೆ ಅವರು ನಡುಗುವರು. ನಾನು ಅವರನ್ನು ಅವರ ಮನೆತನಗಳಲ್ಲಿ ಇಡುವೆನು ಎಂದು ಕರ್ತನು ಹೇಳುತ್ತಾನೆ. 12 ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
1 ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ. 2 ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು. 3 ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು. 4 ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು. 5 ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ, 6 ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು; 7 ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ. 8 ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ. 9 ಐಗುಪ್ತದೇಶದಿಂದ ನಿನ್ನ ದೇವರಾಗಿರುವ ಕರ್ತನಾದ ನಾನು ಇನ್ನೂ ಪರಿಶುದ್ಧ ಹಬ್ಬದ ದಿನದ ಪ್ರಕಾರ ಗುಡಾರಗಳಲ್ಲಿ ವಾಸಿಸುವ ಹಾಗೆ ನಿನ್ನನ್ನು ಮಾಡುವೆನು. 10 ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ. 11 ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು. 12 ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು. 13 ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು. 14 ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
1 ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು. 2 ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು. 3 ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು. 4 ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ. 5 ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ. 6 ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು. 7 ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು. 8 ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು. 9 ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು. 10 ನಾನೇ ನಿನ್ನ ಅರಸನಾಗಿ ರುವೆನು; ನಿನ್ನ ಎಲ್ಲಾ ಪಟ್ಟಣಗಳಲ್ಲಿ ನಿನ್ನನ್ನು ರಕ್ಷಿಸುವ ಬೇರೆಯ ವನು ಎಲ್ಲಿದ್ದಾನೆ? ಮತ್ತು--ರಾಜನನ್ನೂ ಪ್ರಧಾನ ರನ್ನೂ ನನಗೆ ದಯಪಾಲಿಸು ಎಂದು ನೀನು ಹೇಳಿದ ನ್ಯಾಯಾಧಿಪತಿಗಳು ಎಲ್ಲಿದ್ದಾರೆ? 11 ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು, ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು. 12 ಎಫ್ರಾ ಯಾಮಿನ ದುಷ್ಕೃತ್ಯವು ಕಟ್ಟಲ್ಪಟ್ಟಿದೆ, ಅವನ ಪಾಪವು ಬಚ್ಚಿಡಲ್ಪಟ್ಟಿದೆ. 13 ಹೆರು ವವಳ ಸಂಕಟಗಳು ಅವನ ಮೇಲೆಯೇ ಬರುವವು. ಅವನು ಬುದ್ಧಿಹೀನ ಮಗನಾಗಿದ್ದಾನೆ; ಮಕ್ಕಳು ಹುಟ್ಟುವ ಸ್ಥಳದಲ್ಲಿ ಅವನು ಬಹಳ ಹೊತ್ತು ನಿಲ್ಲುವದಿಲ್ಲ. 14 ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ. 15 ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು. 16 ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
1 ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ; 2 ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು. 3 ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ. 4 ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ. 5 ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು. 6 ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು. 7 ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು. 8 ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು. 9 ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
1 ಪೆತೂವೇಲನ ಮಗನಾದ ಯೋವೇಲನಿಗೆ ಬಂದ ಕರ್ತನ ವಾಕ್ಯವು. 2 ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ? 3 ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ. 4 ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ. 5 ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. 6 ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. 7 ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು. 8 ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು. 9 ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ. 10 ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ. 11 ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು. 12 ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ. 13 ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ. 14 ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ. 15 ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ. 16 ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ? 17 ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ. 18 ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ. 19 ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ. 20 ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
1 ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ. 2 ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ. 3 ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು. 4 ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ. 5 ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ 6 ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ. 7 ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ. 8 ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ. 9 ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ. 10 ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ. 11 ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು? 12 ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. 13 ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ. 14 ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು? 15 ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ. 16 ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ. 17 ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು? 18 ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು. 19 ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ. 20 ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ. 21 ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ. 22 ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ. 23 ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ. 24 ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು. 25 ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು. 26 ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು. 27 ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು. 28 ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು. 29 ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು. 30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು. 31 ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು. 32 ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
1 ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ 2 ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು 3 ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ? 4 ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. 5 ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ. 6 ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ. 7 ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. 8 ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ. 9 ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. 10 ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. 11 ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. 12 ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. 13 ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ. 14 ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ. 15 ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು. 16 ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು. 17 ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು. 18 ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು. 19 ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು. 20 ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು. 21 ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
1 ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು. 2 ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ. 3 ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು. 4 ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು. 5 ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ. 6 ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು. 7 ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು. 8 ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ. 9 ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು. 10 ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು. 11 ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು. 12 ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು. 13 ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ. 14 ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು. 15 ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
1 ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ. 2 ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು. 3 ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ. 4 ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ. 5 ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು. 6 ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು. 7 ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ. 8 ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. 9 ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು. 10 ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು. 11 ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ. 12 ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ. 13 ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು. 14 ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು. 15 ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು. 16 ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
1 ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ-- 2 ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ. 3 ಒಪ್ಪಂದಮಾಡಿಕೊಳ್ಳದ ಹೊರತು ಇಬ್ಬರು ಜೊತೆ ಯಾಗಿ ನಡೆಯಲು ಸಾಧ್ಯವೋ? 4 ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ? 5 ಬಲೆ ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರ್ಲಿನಲ್ಲಿ ಬೀಳುವದೇ? ಏನೂ ಸಿಕ್ಕಿಕೊಳ್ಳ ದಿದ್ದರೆ ಅದನ್ನು ಭೂಮಿಯಿಂದ ಯಾರಾದರೂ ತೆಗೆ ಯುವರೇ? 6 ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ? 7 ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ. 8 ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು? 9 ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ. 10 ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ. 11 ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು. 12 ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು. 13 ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ. 14 ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು. 15 ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
1 ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ. 2 ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು. 3 ಆಕೆಯ ಮುಂದಿರುವ ಪ್ರತಿಯೊಂದು ಹಸುವೂ ನೀವೆಲ್ಲರೂ ಬಿರುಕುಗಳಿಂದ ಹೊರಗೆ ಹೋಗುವಿರಿ. ನೀವು ಅವರನ್ನು ಅರಮನೆಯಿಂದ ಹೊರಗೆ ಬಿಸಾಡುವಿರಿ ಎಂದು ಕರ್ತನು ಹೇಳುತ್ತಾನೆ. 4 ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ. 5 ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ. 6 ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ. 7 ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು. 8 ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ. 9 ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ. 10 ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ. 11 ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ. 12 ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ. 13 ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
1 ಓ ಇಸ್ರಾಯೇಲಿನ ಮನೆತನದವರೇ, ನಾನು ನಿಮಗೆ ವಿರೋಧವಾಗಿ ಗೋಳಾ ಟದ ವಿಷಯವನ್ನೆತ್ತುವ ಈ ವಾಕ್ಯವನ್ನು ಕೇಳಿರಿ. 2 ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ. 3 ಕರ್ತನಾದ ದೇವರು ಹೀಗೆ ಹೇಳುತ್ತಾನೆ; ಪಟ್ಟಣದಿಂದ ಸಾವಿರ ಮಂದಿ ಯಾಗಿ ಹೊರಟವರು ನೂರು ಮಂದಿಯಾಗಿ ಉಳಿದು ಇಸ್ರಾಯೇಲಿನ ಮನೆ ಸೇರಲು ನೂರು ಮಂದಿಯಾಗಿ ಹೊರಟವರು ಹತ್ತು ಮಂದಿಯಾಗಿ ಉಳಿಯುವರು. 4 ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ. 5 ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು. 6 ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ. 7 ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ, 8 ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ. 9 ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ. 10 ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ. 11 ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ. 12 ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು. 13 ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ. 14 ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ. 15 ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು. 16 ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು. 17 ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ. 18 ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ. 19 ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು. 20 ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. 21 ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ. 22 ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ. 23 ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ. 24 ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ. 25 ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ? 26 ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು. 27 ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
1 ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ! 2 ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ? 3 ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ. 4 ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. 5 ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. 6 ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ. 7 ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು. 8 ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ. 9 ಆಗುವದೇನಂದರೆ, ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ ಅವರು ಸಾಯುವರು. 10 ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು. 11 ಇಗೋ, ಕರ್ತನು ಆಜ್ಞಾಪಿಸುತ್ತಾನೆ; ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು. 12 ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ. 13 ಏನೂ ಇಲ್ಲದ್ದರಲ್ಲಿ ಸಂತೋಷಪಡುವ ವರೇ, ನೀವು ಹೆಚ್ಚಳ ಪಡುವದು ಶೂನ್ಯವಾಗಿರುವ ಲ್ಲಿಯೇ? ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿ ಲ್ಲವೇ ಎಂದು ಹೇಳುತ್ತೀರಿ. 14 ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
1 ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು. 2 ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು 3 ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು. 4 ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು. 5 ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು. 6 ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ. 7 ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು. 8 ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ. 9 ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು. 10 ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು. 11 ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು. 12 ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. 13 ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ. 14 ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. 15 ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು. 16 ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ. 17 ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
1 ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು. 2 ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು. 3 ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು. 4 ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ. 5 ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ 6 ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ? 7 ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ. 8 ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು. 9 ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ. 10 ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು. 11 ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ. 12 ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು. 13 ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು. 14 ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
1 ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ. 2 ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. 3 ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು. 4 ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು. 5 ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು. 6 ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು. 7 ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ. 8 ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ. 9 ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ. 10 ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು. 11 ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು. 12 ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ. 13 ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು. 14 ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು. 15 ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
1 ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ! 2 ಇಗೋ, ನಿನ್ನನ್ನು ಅನ್ಯಜನಾಂಗಗಳಲ್ಲಿ ಹೀನವಾಗಿ ಮಾಡಿದ್ದೇನೆ. 3 ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. 4 ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ. 5 ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ? 6 ಏಸಾವನು ಎಷ್ಟೋ ಶೋಧಿ ಸಲ್ಪಟ್ಟಿದ್ದಾನೆ, ಅವನ ರಹಸ್ಯ ಸ್ಥಳಗಳು ಹುಡುಕ ಲ್ಪಟ್ಟಿವೆ. 7 ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ. 8 ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ? 9 ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು. 10 ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ. 11 ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ. 12 ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; 13 ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು; 14 ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು. 15 ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು. 16 ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು. 17 ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು. 18 ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ. 19 ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು. 20 ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು. 21 ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
1 ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು. 2 ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು. 3 ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು. 4 ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು. 5 ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು. 6 ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು. 7 ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು. 8 ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ, 9 ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು. 10 ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು. 11 ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು. 12 ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು. 13 ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು. 14 ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು. 15 ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು. 16 ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು. 17 ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
1 ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ-- 2 ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ. 3 ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು. 4 ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು. 5 ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು. 6 ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ. 7 ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು. 8 ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ. 9 ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು. 10 ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
1 ಕರ್ತನ ವಾಕ್ಯವು ಎರಡನೇ ಸಾರಿ ಯೋನನಿಗೆ ಉಂಟಾಯಿತು, 2 ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು. 3 ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು. 4 ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು. 5 ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. 6 ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. 7 ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; 8 ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. 9 ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು. 10 ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
1 ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು. 2 ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು. 3 ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು. 4 ಆಗ ಕರ್ತನು -- ನೀನು ಕೋಪಮಾಡಿಕೊಳ್ಳುವದು ಒಳ್ಳೇದೋ ಎಂದು ಅವನಿಗೆ ಹೇಳಿದನು. 5 ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು. 6 ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು. 7 ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು. 8 ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು. 9 ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು. 10 ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ, 11 ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
1 ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು. 2 ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ. 3 ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು. 4 ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು. 5 ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ? 6 ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು. 7 ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು. 8 ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು. 9 ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ. 10 ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು. 11 ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು. 12 ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ. 13 ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು. 14 ಹೀಗಿರುವದರಿಂದ ಮೋರೆಷತ್ ಗತ್ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು. 15 ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು. 16 ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
1 ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ. 2 ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ. 3 ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ. 4 ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ. 5 ಆದದರಿಂದ ಕರ್ತನ ಸಭೆಯಲ್ಲಿ ಪಾಲಿಗಾಗಿ ನೂಲು ಹಾಕುವವನು ನಿನಗೆ ಒಬ್ಬನೂ ಇರುವದಿಲ್ಲ. 6 ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ. 7 ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ? 8 ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ; ಯುದ್ಧದಿಂದ ತಿರುಗಿಕೊಂಡು ಭದ್ರವಾಗಿ ಹಾದುಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊ ಳ್ಳುತ್ತೀರಿ. 9 ನನ್ನ ಜನರ ಸ್ತ್ರೀಯರನ್ನು ಅವರ ರಮ್ಯ ವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ; ಅವರ ಮಕ್ಕಳಿಂದ ನನ್ನ ಮಹಿಮೆಯನ್ನು ಎಂದೆಂದಿಗೂ ತೆಗೆದಿ ದ್ದೀರಿ. 10 ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು. 11 ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು. 12 ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು. 13 ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
1 ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ? 2 ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, 3 ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ. 4 ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು. 5 ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು. 6 ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು. 7 ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು. 8 ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ. 9 ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ, 10 ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. 11 ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ. 12 ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
1 ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು. 2 ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು. 3 ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು. 4 ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ. 5 ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು. 6 ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು. 7 ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು, 8 ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು. 9 ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು. 10 ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು. 11 ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ. 12 ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು. 13 ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
1 ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ. 2 ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ. 3 ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು. 4 ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು. 5 ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು. 6 ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು. 7 ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ. 8 ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು. 9 ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು. 10 ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು. 11 ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು. 12 ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ. 13 ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ. 14 ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು. 15 ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
1 ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ. 2 ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ. 3 ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು. 4 ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು. 5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ. 6 ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? 7 ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ? 8 ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ. 9 ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ. 10 ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ? 11 ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ? 12 ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ. 13 ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು. 14 ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು. 15 ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ. 16 ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
1 ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ. 2 ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. 3 ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ. 4 ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು. 5 ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. 6 ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು. 7 ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು. 8 ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ. 9 ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು. 10 ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು. 11 ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು. 12 ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು. 13 ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು. 14 ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ. 15 ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು. 16 ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು. 17 ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು. 18 ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. 19 ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ. 20 ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
1 ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು. 2 ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ. 3 ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ. 4 ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ. 5 ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು. 6 ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ. 7 ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು. 8 ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು. 9 ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು. 10 ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು. 11 ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ. 12 ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು. 13 ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು. 14 ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು. 15 ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
1 ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ. 2 ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ. 3 ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು. 4 ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು. 5 ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು. 6 ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು. 7 ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು. 8 ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ. 9 ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ. 10 ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ. 11 ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ? 12 ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು. 13 ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
1 ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ. 2 ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು. 3 ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ. 4 ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ? 5 ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ. 6 ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ. 7 ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು. 8 ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು. 9 ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು. 10 ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು. 11 ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ. 12 ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು. 13 ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು. 14 ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು. 15 ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು. 16 ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ. 17 ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ; 18 ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ. 19 ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
1 ಪ್ರವಾದಿಯಾದ ಹಬಕ್ಕೂಕನು ನೋಡಿದ ದೈವೋಕ್ತಿ. 2 ಓ ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ. 3 ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ. 4 ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ. 5 ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ. 6 ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು. 7 ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ. 8 ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು. 9 ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು. 10 ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು. 11 ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು. 12 ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ. 13 ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ? 14 ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ? 15 ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ. 16 ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ. 17 ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
1 ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು. 2 ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು. 3 ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು. 4 ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು. 5 ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ. 6 ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ? 7 ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ. 8 ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ. 9 ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! 10 ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. 11 ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ. 12 ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ! 13 ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ. 14 ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು. 15 ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ! 16 ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು. 17 ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ. 18 ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು? 19 ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ. 20 ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
1 ಶಿಗ್ಯೋನೋತನ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. ಕರ್ತನೇ, ನಿನ್ನ ಮಾತನ್ನು ಕೇಳಿ ಭಯಪಟ್ಟಿದ್ದೇನೆ. 2 ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು; 3 ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು. 4 ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು. 5 ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು. 6 ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ. 7 ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು. 8 ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? 9 ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ. 10 ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು. 11 ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು. 12 ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ. 13 ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ. 14 ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು. 15 ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ. 16 ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು. 17 ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ 18 ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು. 19 ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
1 ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ 2 ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು. 3 ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ. 4 ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ 5 ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ 6 ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು. 7 ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ. 8 ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು. 9 ಆ ದಿನದಲ್ಲಿ ಹೊಸ್ತಿಲನ್ನು ಹಾರಿ ದಾಟುವವರೆಲ್ಲರನ್ನೂ ತಮ್ಮ ಯಜಮಾನರ ಮನೆ ಗಳನ್ನು ಬಲಾತ್ಕಾರ ಮೋಸಗಳಿಂದ ತುಂಬಿಸುವವರನ್ನೂ ದಂಡಿಸುವೆನು. 10 ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು. 11 ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ. 12 ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು. 13 ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು. 14 ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು. 15 ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು. 16 ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು. 17 ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು. 18 ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
1 ಅಪೇಕ್ಷಿಸಲ್ಪಡದ ಓ ಜನಾಂಗವೇ ನೀವು ಒಟ್ಟಾಗಿ ಕೂಡಿಕೊಳ್ಳಿರಿ, ಹೌದು, ಒಟ್ಟಾಗಿ ಕೂಡಿಕೊಳ್ಳಿರಿ. 2 ನಿರ್ಣಯವು ಬರುವದಕ್ಕಿಂತ ಮುಂಚೆ ಯೂ ದಿನವು ಹೊಟ್ಟಿನಂತೆ ಹಾದುಹೋಗುವದಕ್ಕಿಂತ ಮುಂಚೆಯೂ ಕರ್ತನ ಕೋಪದ ದಿನವು ಉರಿದು ನಿಮ್ಮ ಮೇಲೆ ಬರುವದಕ್ಕಿಂತ ಮುಂಚೆಯೂ ಕೂಡಿ ಕೊಳ್ಳಿರಿ. 3 ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ. 4 ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು. 5 ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು. 6 ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು. 7 ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು. 8 ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ. 9 ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು. 10 ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ 11 ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು. 12 ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ; 13 ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು. 14 ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು. 15 ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
1 ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ! 2 ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ. 3 ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ. 4 ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ. 5 ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು. 6 ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ. 7 ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು. 8 ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು. 9 ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು. 10 ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು. 11 ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ. 12 ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು. 13 ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ. 14 ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. 15 ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. 16 ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. 17 ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು. 18 ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ. 19 ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು. 20 ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
1 ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು. 2 ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ. 3 ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ-- 4 ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ? 5 ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ. 6 ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ. 7 ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ. 8 ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ. 9 ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ? 10 ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ. 11 ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು. 12 ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು. 13 ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ. 14 ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿ 15 ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
1 ಏಳನೆಯ ತಿಂಗಳಿನಲ್ಲಿ, ತಿಂಗಳಿನ ಇಪ್ಪ ತ್ತೊಂದನೆಯ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು; ಏನಂದರೆ-- 2 ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ-- 3 ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ? 4 ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. 5 ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ. 6 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ. 7 ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 8 ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. 9 ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 10 ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ, 11 ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ-- 12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು. 13 ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು. 14 ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ. 15 ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ 16 ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ. 17 ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ. 18 ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ. 19 ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು. 20 ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು. 21 ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು. 22 ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು. 23 ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
1 ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ-- 2 ಕರ್ತನು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿ ದ್ದಾನೆ. 3 ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 4 ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. 5 ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? 6 ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು. 7 ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ, 8 ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು. 9 ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು. 10 ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು. 11 ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು. 12 ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು. 13 ಆಗ ಕರ್ತನು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೇ ಮಾತುಗಳಿಂದಲೂ ಆದರಣೆಯ ಮಾತು ಗಳಿಂದಲೂ ಉತ್ತರಕೊಟ್ಟನು. 14 ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ. 15 ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು. 16 ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು. 17 ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು. 18 ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು. 19 ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು. 20 ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು. 21 ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
1 ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು. 2 ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು. 3 ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು. 4 ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು. 5 ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ. 6 ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ. 7 ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ. 8 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. 9 ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ. 10 ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ. 11 ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ. 12 ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು. 13 ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
1 ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು. 2 ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು. 3 ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು. 4 ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು. 5 ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು. 6 ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ-- 7 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು. 8 ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು. 9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. 10 ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
1 ಇದಲ್ಲದೆ ನನ್ನ ಸಂಗಡ ಮಾತನಾಡಿದ ದೂತನು ತಿರಿಗಿ ಬಂದು 2 ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು. 3 ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು. 4 ಹೀಗೆ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ --ನನ್ನ ಒಡೆಯನೇ, ಇವೇನು ಅಂದೆನು. 5 ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ--ಇವೇನೆಂದು ಅರಿಯುವದಿಲ್ಲವೋ ಅಂದನು. 6 ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. 7 ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು. 8 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ-- 9 ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ. 10 ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ. 11 ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು. 12 ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು. 13 ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು. 14 ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
1 ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ. 2 ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು. 3 ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು. 4 ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು. 5 ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು. 6 ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು. 7 ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು --ಇದು ದುಷ್ಟತ್ವವು ಎಂತಂದು 8 ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು. 9 ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು. 10 ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು. 11 ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
1 ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು. 2 ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು; 3 ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು. 4 ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು. 5 ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ. 6 ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ. 7 ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು. 8 ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು. 9 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. 10 ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ 11 ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು 12 ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು. 13 ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು. 14 ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು. 15 ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
1 ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು. 2 ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ 3 ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು. 4 ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 5 ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ? 6 ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ? 7 ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು. 8 ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ-- 9 ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ; 10 ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು. 11 ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. 12 ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು. 13 ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 14 ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
1 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 2 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು. 3 ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು. 4 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು. 5 ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು. 6 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. 7 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು. 8 ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು. 9 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ. 10 ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು. 11 ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ. 12 ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು. 13 ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ. 14 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ. 15 ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ. 16 ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ. 17 ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ. 18 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 19 ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ. 20 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು; 21 ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. 22 ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು. 23 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
1 ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು. 2 ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ. 3 ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು. 4 ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು. 5 ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು. 6 ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು. 7 ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು. 8 ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ. 9 ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ. 10 ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು. 11 ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ. 12 ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ. 13 ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ. 14 ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು. 15 ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು. 16 ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು. 17 ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
1 ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು. 2 ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ. 3 ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ. 4 ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ. 5 ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು. 6 ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು. 7 ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು. 8 ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು. 9 ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು. 10 ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು. 11 ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು. 12 ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
1 ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ. 2 ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ. 3 ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ. 4 ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು. 5 ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ. 6 ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ. 7 ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು. 8 ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು. 9 ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ. 10 ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು, 11 ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು. 12 ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು. 13 ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು. 14 ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು. 15 ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ. 16 ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು. 17 ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
1 ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ-- 2 ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ 3 ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು. 4 ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು. 5 ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು. 6 ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು. 7 ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು. 8 ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು. 9 ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು. 10 ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು. 11 ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು. 12 ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ. 13 ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ. 14 ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
1 ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು. 2 ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ. 3 ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು. 4 ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು. 5 ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು. 6 ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು. 7 ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ. 8 ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು. 9 ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
1 ಇಗೋ, ಕರ್ತನ ದಿನವು ಬರುತ್ತದೆ. 2 ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. 3 ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು. 4 ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು. 5 ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು. 6 ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು. 7 ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು. 8 ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು. 9 ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ. 10 ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು. 11 ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು. 12 ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು. 13 ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು. 14 ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು. 15 ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು. 16 ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. 17 ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. 18 ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. 19 ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು. 20 ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು. 21 ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
1 ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ. 2 ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು. 3 ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು. 4 ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು. 5 ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ. 6 ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ. 7 ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ. 8 ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ? 9 ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ? 10 ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ. 11 ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 12 ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ. 13 ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ. 14 ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
1 ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ. 2 ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ. 3 ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು. 4 ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ. 5 ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು. 6 ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು. 7 ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ. 8 ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. 9 ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ. 10 ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ? 11 ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ. 12 ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು. 13 ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ. 14 ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ. 15 ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ, 16 ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ. 17 ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
1 ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ. 2 ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. 3 ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು. 4 ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು. 5 ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 6 ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ. 7 ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ. 8 ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ. 9 ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ. 10 ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. 11 ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 12 ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 13 ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ. 14 ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ. 15 ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ. 16 ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು. 17 ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ. 18 ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
1 ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. 2 ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ. 3 ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 4 ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. 5 ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ. 6 ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
The New Testament of our Lord and Saviour Jesus Christ
1 ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು. 2 ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು; 3 ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು; 4 ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು; 5 ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು; 6 ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು; 7 ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು; 8 ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು; 9 ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು; 10 ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು; 11 ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು. 12 ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು; 13 ಜೆರುಬ್ಬಾಬೆಲನಿಂದ ಅಬಿಹೂದನು ಹುಟ್ಟಿದನು; ಅಬಿಹೂದನಿಂದ ಎಲ್ಯಕೀಮನು ಹುಟ್ಟಿದನು; ಎಲ್ಯ ಕೀಮನಿಂದ ಅಜೋರನು ಹುಟ್ಟಿದನು; 14 ಅಜೋರ ನಿಂದ ಸದೋಕನು ಹುಟ್ಟಿದನು; ಸದೋಕನಿಂದ ಅಖೀಮನು ಹುಟ್ಟಿದನು; ಅಖೀಮನಿಂದ ಎಲಿ ಹೂದನು ಹುಟ್ಟಿದನು; 15 ಎಲಿಹೂದನಿಂದ ಎಲಿ ಯಾಜರನು ಹುಟ್ಟಿದನು; ಎಲಿಯಾಜರನಿಂದ ಮತ್ತಾನ ನು ಹುಟ್ಟಿದನು; ಮತ್ತಾನನಿಂದ ಯಾಕೋಬನು ಹುಟ್ಟಿದನು; 16 ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು. 17 ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು. 18 ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು. 19 ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು. 20 ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ. 21 ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು. 22 ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು. 23 ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ. 24 ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು; 25 ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
1 ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು -- 2 ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು. 3 ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು. 4 ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು. 5 ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ-- 6 ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು. 7 ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು 8 ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು. 9 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು. 10 ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು. 11 ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು. 12 ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು. 13 ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು 14 ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು. 15 ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು. 16 ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ 17 ಆಗ ಪ್ರವಾದಿಯಾದ ಯೆರೆವಿಾಯ ನಿಂದ ಹೇಳಲ್ಪಟ್ಟದ್ದು ನೆರವೇರಿತು; 18 ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ. 19 ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- 20 ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು. 21 ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಬಂದಾಗ 22 ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು. 23 ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
1 ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ-- 2 ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು. 3 ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ. 4 ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು. 5 ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು. 6 ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು. 7 ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು? 8 ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ; 9 ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. 10 ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು. 11 ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು. 12 ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು. 13 ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು. 14 ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು. 15 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು. 16 ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು. 17 ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು. 2 ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು. 3 ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು. 4 ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು. 5 ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ-- 6 ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ 7 ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು. 8 ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ-- 9 ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು. 10 ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು. 11 ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು. 12 ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು. 13 ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು. 14 ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ-- 15 ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ 16 ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ. 17 ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು. 18 ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. 19 ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. 20 ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. 21 ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. 22 ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು. 23 ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು. 24 ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು. 25 ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
1 ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು. 2 ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ -- 3 ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು. 4 ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು. 5 ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು. 6 ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು. 7 ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು. 8 ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು. 9 ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು. 10 ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು. 11 ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. 12 ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ. 13 ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು. 14 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು. 15 ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು. 16 ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. 17 ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು. 18 ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 19 ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು. 20 ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ. 21 ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ. 22 ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು 23 ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ 24 ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು. 25 ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ. 26 ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ. 27 ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ; 28 ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ. 29 ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ. 30 ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ. 31 ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ; 32 ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. 33 ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ. 34 ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು. 35 ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ. 36 ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ. 37 ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು. 38 ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ. 39 ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು. 40 ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು. 41 ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು. 42 ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ. 43 ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ. 44 ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ. 45 ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ. 46 ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ? 47 ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ? 48 ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
1 ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು. 2 ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ. 3 ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ. 4 ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. 5 ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ. 6 ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. 7 ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ. 8 ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ. 9 ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ. 10 ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ. 11 ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು. 12 ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು. 13 ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್. 14 ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು. 15 ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ. 16 ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ 17 ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ. 18 ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. 19 ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು. 20 ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ. 21 ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು. 22 ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು. 23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು. 24 ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ. 25 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ 26 ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ? 27 ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ? 28 ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ. 29 ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ. 30 ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ? 31 ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. 32 (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ. 33 ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು. 34 ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
1 ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ. 2 ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು. 3 ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ? 4 ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ? 5 ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು. 6 ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು. 7 ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. 8 ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು. 9 ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ? 10 ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ? 11 ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ? 12 ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ. 13 ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ. 14 ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ. 15 ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ. 16 ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ? 17 ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ; 18 ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು. 19 ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ. 20 ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. 21 ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. 22 ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. 23 ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು. 24 ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. 25 ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. 26 ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. 27 ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು. 28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು. 29 ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
1 ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು. 2 ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು. 3 ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು. 4 ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು. 5 ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು-- 6 ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು. 7 ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು. 8 ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು. 9 ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ 10 ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. 11 ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು. 12 ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. 13 ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು. 14 ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು. 15 ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು. 16 ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು. 17 ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು. 18 ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು. 19 ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು. 20 ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು. 21 ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು. 22 ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು. 23 ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. 24 ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು. 25 ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು. 26 ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. 27 ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು. 28 ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ. 29 ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು. 30 ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು. 31 ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು. 32 ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು. 33 ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು. 34 ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
1 ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು. 2 ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು. 3 ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು. 4 ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ? 5 ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ? 6 ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು. 7 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು. 8 ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು. 9 ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು. 10 ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು. 11 ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು. 12 ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು. 13 ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು. 14 ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು. 15 ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು. 16 ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು. 17 ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು. 18 ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು. 19 ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು. 20 ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು. 21 ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು. 22 ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು. 23 ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ 24 ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು. 25 ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು. 26 ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು. 27 ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು. 28 ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು. 29 ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು. 30 ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು. 31 ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು. 32 ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು. 33 ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು. 34 ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು. 35 ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು. 36 ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು. 37 ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ. 38 ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
1 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು. 2 ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ, 3 ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ, 4 ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ. 5 ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ. 6 ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ. 7 ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ. 8 ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ. 9 ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ. 10 ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ. 11 ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ; 12 ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ. 13 ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ. 14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ. 15 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು. 16 ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ. 17 ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು. 18 ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು. 19 ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು. 20 ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ. 21 ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು. 22 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು. 23 ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 24 ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ. 25 ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ? 26 ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ. 27 ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ. 28 ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ. 29 ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ. 30 ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ. 31 ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ. 32 ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು; 33 ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು. 34 ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ; 35 ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ. 36 ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು. 37 ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ. 38 ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ. 39 ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು. 40 ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ. 41 ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು. 42 ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
1 ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು. 2 ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ-- 3 ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು. 4 ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ; 5 ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ. 6 ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು. 7 ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ? 8 ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ. 9 ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ. 10 ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು. 11 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ. 12 ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ. 13 ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು. 14 ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ. 15 ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ. 16 ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ-- 17 ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ. 18 ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ. 19 ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ 20 ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ -- 21 ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು. 22 ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು. 23 ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು. 24 ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು. 25 ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ. 26 ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು. 27 ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ 28 ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. 29 ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ. 30 ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
1 ಆ ಸಮಯದಲ್ಲಿ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು. 2 ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು. 3 ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ? 4 ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು? 5 ಇದಲ್ಲದೆ ಸಬ್ಬತ್ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ? 6 ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ. 7 ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ. 8 ಯಾಕಂದರೆ ಮನುಷ್ಯ ಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು. 9 ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು. 10 ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು. 11 ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ? 12 ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು. 13 ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು. 14 ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು. 15 ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು. 16 ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು; 17 ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ-- 18 ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು. 19 ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ. 20 ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ. 21 ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ. 22 ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು. 23 ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು. 24 ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು. 25 ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ. 26 ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು? 27 ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು. 28 ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ. 29 ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು. 30 ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು. 31 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ. 32 ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ. 33 ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು. 34 ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ. 35 ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ. 36 ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. 37 ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು. 38 ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ 39 ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ. 40 ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು. 41 ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ. 42 ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ. 43 ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ. 44 ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು. 45 ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು. 46 ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು. 47 ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು. 48 ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ-- 49 ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು! 50 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
1 ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು. 2 ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು. 3 ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು. 4 ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು. 5 ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು; 6 ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು. 7 ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. 8 ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು. 9 ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು. 10 ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು 11 ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. 12 ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು. 13 ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ 14 ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. 15 ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ 16 ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ. 17 ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ. 18 ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ: 19 ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ. 20 ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ; 21 ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು. 22 ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು. 23 ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ. 24 ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ. 25 ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು. 26 ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು. 27 ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು. 28 ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು. 29 ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ. 30 ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು. 31 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ. 32 ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ. 33 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ. 34 ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ. 35 ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು. 36 ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು. 37 ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು; 38 ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ. 39 ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ. 40 ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು. 41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; 42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. 43 ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ. 44 ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ. 45 ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. 46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು. 47 ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ. 48 ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು. 49 ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು. 50 ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು. 51 ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು. 52 ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು. 53 ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು. 54 ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು? 55 ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ? 56 ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು. 57 ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು. 58 ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
1 ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ -- 2 ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು. 3 ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು. 4 ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು. 5 ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು. 6 ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು. 7 ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು. 8 ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು. 9 ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು. 10 ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು. 11 ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು. 12 ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು. 13 ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು. 14 ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು. 15 ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು. 16 ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು. 17 ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು. 18 ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. 19 ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. 20 ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು. 21 ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು. 22 ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು. 23 ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು. 24 ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು. 25 ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು. 26 ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು. 27 ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು. 28 ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು. 29 ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು. 30 ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು. 31 ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು. 32 ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು. 33 ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು. 34 ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು. 35 ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು. 36 ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
1 ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು-- 2 ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು. 3 ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ? 4 ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. 5 ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ 6 ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ. 7 ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು; 8 ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. 9 ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ. 10 ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ; 11 ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು. 12 ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು. 13 ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು. 14 ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು. 15 ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು. 16 ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ? 17 ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? 18 ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ. 19 ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ. 20 ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು. 21 ತರುವಾಯ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ತೀರಗಳಿಗೆ ಬಂದನು. 22 ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು. 23 ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. 24 ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. 25 ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. 26 ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. 27 ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು. 28 ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು. 29 ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು. 30 ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು. 31 ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು. 32 ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು 33 ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು. 34 ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು. 35 ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು. 36 ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. 37 ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. 38 ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು. 39 ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
1 ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು. 2 ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ 3 ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ? 4 ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು. 5 ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು. 6 ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು. 7 ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು. 8 ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ? 9 ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ? 10 ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ? 11 ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು. 12 ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು. 13 ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು. 14 ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು. 15 ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು. 16 ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು. 17 ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು. 18 ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು. 19 ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು. 20 ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು. 21 ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು. 22 ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು. 23 ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು. 24 ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 25 ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು. 26 ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು? 27 ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು. 28 ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
1 ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. 2 ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು. 3 ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು. 4 ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು. 5 ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು. 6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. 7 ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು. 8 ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ. 9 ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು. 10 ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. 11 ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ; 12 ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. 13 ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು. 14 ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ-- 15 ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ. 16 ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು. 17 ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. 18 ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು. 19 ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು. 20 ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ. 21 ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು. 22 ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು. 23 ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು. 24 ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು. 25 ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು. 26 ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ. 27 ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
1 ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು. 2 ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ-- 3 ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 4 ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು. 5 ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ. 6 ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು. 7 ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ! 8 ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು. 9 ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು. 10 ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ. 11 ಯಾಕಂದರೆ ಮನುಷ್ಯಕುಮಾರನು ಕಳೆದುಹೋದ ದ್ದನ್ನು ರಕ್ಷಿಸುವದಕ್ಕಾಗಿ ಬಂದನು. 12 ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ? 13 ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ. 14 ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ. 15 ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ. 16 ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು. 17 ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ. 18 ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು. 19 ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು. 20 ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು. 21 ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು. 22 ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ; 23 ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. 24 ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು. 25 ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು. 26 ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು. 27 ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು. 28 ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು. 29 ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು. 30 ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. 31 ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು. 32 ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು. 33 ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು. 34 ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು. 35 ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
1 ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು. 2 ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು. 3 ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು. 4 ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. 5 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? 6 ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು. 7 ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು. 8 ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು. 9 ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ. 10 ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ. 11 ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು. 12 ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ 13 ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು. 14 ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು. 15 ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು. 16 ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು. 17 ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು. 18 ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು. 19 ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು. 20 ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು. 21 ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು. 22 ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು. 23 ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 24 ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು. 25 ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು. 26 ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು. 27 ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು. 28 ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ 29 ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನು 30 ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
1 ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ. 2 ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು. 3 ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು 4 ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು. 5 ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು. 6 ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು. 7 ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು. 8 ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು. 9 ಸುಮಾರು ಹನ್ನೊಂದನೆ ಯ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು. 10 ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು. 11 ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ-- 12 ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು. 13 ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ? 14 ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು. 15 ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು. 16 ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು. 17 ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ-- 18 ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು. 19 ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು. 20 ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು. 21 ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು. 22 ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ 23 ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ 24 ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು. 25 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು. 26 ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ 27 ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ. 28 ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು. 29 ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. 30 ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು. 31 ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. 32 ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು. 33 ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು. 34 ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
1 ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ-- 2 ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ. 3 ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು. 4 ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ-- 5 ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ. 6 ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು. 7 ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು. 8 ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು. 9 ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು. 10 ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು. 11 ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು. 12 ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು. 13 ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು. 14 ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು. 15 ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ-- 16 ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು. 17 ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು. 18 ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು. 19 ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು. 20 ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು. 21 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ 22 ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು. 23 ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು. 24 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು? 25 ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು. 26 ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು. 27 ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ. 28 ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. 29 ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. 30 ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. 31 ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. 32 ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ. 33 ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು. 34 ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. 35 ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. 36 ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. 37 ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. 38 ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. 39 ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. 40 ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. 41 ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು. 42 ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ? 43 ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು. 44 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು. 45 ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು. 46 ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
1 ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ-- 2 ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ. 3 ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು. 4 ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು. 5 ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು. 6 ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು. 7 ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು. 8 ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ. 9 ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು. 10 ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು. 11 ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು. 12 ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು. 13 ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು. 14 ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು. 15 ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು. 16 ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು 17 ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು. 18 ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ? 19 ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು. 20 ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು. 21 ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು. 22 ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು. 23 ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು-- 24 ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ. 25 ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು. 26 ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು. 27 ಕಡೆಯದಾಗಿ ಆ ಸ್ತ್ರೀಯೂ ಸತ್ತಳು. 28 ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು. 29 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ. 30 ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ. 31 ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ-- 32 ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು. 33 ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು. 34 ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು. 35 ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ-- 36 ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು. 37 ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು. 38 ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ-- 39 ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು. 40 ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು. 41 ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ-- 42 ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು. 43 ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ-- 44 ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ. 45 ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು. 46 ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
1 ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ -- 2 ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ; 3 ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ. 4 ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ. 5 ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ 6 ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ 7 ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ. 8 ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು. 9 ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ. 10 ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು. 11 ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು. 12 ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು. 13 ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ. 14 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ. 15 ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ. 16 ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. 17 ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? 18 ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. 19 ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? 20 ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. 21 ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. 22 ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. 23 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ 24 ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು. 25 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. 26 ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. 27 ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. 28 ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ. 29 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. 30 ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. 31 ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. 32 ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. 33 ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? 34 ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ 35 ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. 36 ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. 37 ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ 38 ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು. 39 ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
1 ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು. 2 ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು. 3 ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು. 4 ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ. 5 ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. 6 ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ. 7 ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು. 8 ಇವೆಲ್ಲವುಗಳು ಸಂಕಟಗಳ ಆರಂಭವು. 9 ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು. 10 ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು. 11 ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು. 12 ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು. 13 ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು. 14 ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು. 15 ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ) 16 ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ; 17 ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ; 18 ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ. 19 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ! 20 ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ. 21 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ. 22 ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು. 23 ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ. 24 ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು. 25 ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ. 26 ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ. 27 ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು. 28 ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು. 29 ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು. 30 ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು. 31 ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು. 32 ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ; 33 ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ. 34 ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 35 ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ. 36 ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು. 37 ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು. 38 ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು. 39 ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು. 40 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು. 41 ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು. 42 ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ. 43 ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ. 44 ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. 45 ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು? 46 ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು. 47 ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 48 ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು 49 ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ 50 ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದು 51 ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
1 ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು. 2 ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು. 3 ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ, 4 ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು. 5 ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. 6 ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು. 7 ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು; 8 ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು. 9 ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು. 10 ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು. 11 ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು. 12 ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. 13 ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು. 14 ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ. 15 ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು. 16 ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು. 17 ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು. 18 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. 19 ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು. 20 ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು. 21 ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. 22 ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು. 23 ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. 24 ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು; 25 ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು. 26 ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. 27 ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು. 28 ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ. 29 ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು. 30 ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು. 31 ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು; 32 ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು; 33 ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು. 34 ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; 35 ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; 36 ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. 37 ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ 38 ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? 39 ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. 40 ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು. 41 ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. 42 ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. 43 ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. 44 ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. 45 ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು. 46 ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
1 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ-- 2 ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು. 3 ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು 4 ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. 5 ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು. 6 ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು. 7 ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು. 8 ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ? 9 ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು. 10 ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ; 11 ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ. 12 ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು. 13 ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು. 14 ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ-- 15 ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು. 16 ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು. 17 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು. 18 ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು. 19 ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು. 20 ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು; 21 ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು. 22 ಆಗ ಅವರು ಬಹಳ ದುಃಖಪಟ್ಟು--ಕರ್ತನೇ, ಅವನು ನಾನೋ ಎಂದು ಅವರಲ್ಲಿ ಪ್ರತಿಯೊಬ್ಬನು ಆತನನ್ನು ಕೇಳಲಾರಂಭಿಸಿದರು. 23 ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು. 24 ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು. 25 ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು. 26 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು. 27 ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ; 28 ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು. 29 ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು. 30 ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು. 31 ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ; 32 ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು. 33 ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು. 34 ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. 35 ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು. 36 ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು. 37 ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು. 38 ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು. 39 ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು. 40 ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? 41 ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು. 42 ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು. 43 ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು. 44 ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು 45 ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ; 46 ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು. 47 ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು. 48 ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು. 49 ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. 50 ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು. 51 ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು. 52 ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು. 53 ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ? 54 ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು. 55 ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ; 56 ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. 57 ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು. 58 ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು. 59 ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. 60 ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- 61 ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು. 62 ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು. 63 ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು. 64 ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. 65 ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ 66 ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು. 67 ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು. 68 ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು. 69 ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು. 70 ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು. 71 ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು. 72 ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು. 73 ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು. 74 ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು. 75 ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
1 ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು. 2 ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು. 3 ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು 4 ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. 5 ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು. 6 ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು. 7 ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು. 8 ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ. 9 ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು 10 ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು. 11 ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು. 12 ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ. 13 ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು. 14 ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು. 15 ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು. 16 ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು. 17 ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು. 18 ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು. 19 ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು. 20 ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು. 21 ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು. 22 ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. 23 ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. 24 ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. 25 ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು. 26 ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು. 27 ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು. 28 ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು. 29 ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು. 30 ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು. 31 ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು. 32 ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು. 33 ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು. 34 ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು. 35 ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ 36 ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು. 37 ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು. 38 ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು. 39 ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- 40 ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು. 41 ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- 42 ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; 43 ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು. 44 ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು. 45 ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು. 46 ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. 47 ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು. 48 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು. 49 ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು. 50 ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು. 51 ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು; 52 ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು. 53 ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. 54 ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು 55 ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. 56 ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು. 57 ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು. 58 ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು. 59 ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ 60 ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು. 61 ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು. 62 ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು-- 63 ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ. 64 ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ 65 ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು. 66 ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
1 ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು. 2 ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. 3 ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. 4 ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು. 5 ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು. 6 ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ. 7 ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು. 8 ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು. 9 ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು. 10 ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು. 11 ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು. 12 ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು -- 13 ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ; 14 ಇದನ್ನು ಅಧಿಪತಿಯು ಕೇಳಿಸಿಕೊಂಡರೆ ನಿಮ್ಮನ್ನು ತಪ್ಪಿಸುವ ಹಾಗೆ ನಾವು ಅವನನ್ನು ಒಡಂಬಡಿಸುವೆವು ಅಂದರು. 15 ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ. 16 ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು. 17 ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು. 18 ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ; 19 ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ; 20 ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
1 ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು. 2 ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ. 3 ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು. 4 ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. 5 ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು. 6 ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು. 7 ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ; 8 ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು. 9 ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು. 10 ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು. 11 ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು. 12 ತಕ್ಷಣವೇ ಆತ್ಮನು ಆತನನ್ನು ಅಡವಿಯೊಳಕ್ಕೆ ನಡಿಸಿದನು. 13 ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು. 14 ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ-- 15 ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು. 16 ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. 17 ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು. 18 ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು. 19 ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು. 20 ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು. 21 ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು. 22 ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು. 23 ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು. 24 ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು. 25 ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು. 26 ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು. 27 ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು. 28 ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು. 29 ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು. 30 ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು. 31 ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು. 32 ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು. 33 ಆಗ ಪಟ್ಟಣವೆಲ್ಲಾ ಬಾಗಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು. 34 ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ. 35 ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು. 36 ಸೀಮೋನನೂ ಅವನ ಸಂಗಡ ಇದ್ದವರೂ ಆತನ ಹಿಂದೆ ಹೋದರು. 37 ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ 38 ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು. 39 ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು. 40 ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು. 41 ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. 42 ಹೀಗೆ ಆತನು ಹೇಳಿದ ಕೂಡಲೆ ಆ ಕುಷ್ಠವು ತಕ್ಷಣವೇ ಅವನಿಂದ ಹೊರಟುಹೋಗಿ ಅವನು ಶುದ್ಧನಾದನು. 43 ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು; 44 ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು. 45 ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
1 ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು. 2 ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು; 3 ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು. 4 ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು. 5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು. 6 ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು-- 7 ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು. 8 ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ 9 ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ? 10 ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)-- 11 ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. 12 ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು. 13 ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು. 14 ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು. 15 ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು. 16 ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು. 17 ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು. 18 ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು. 19 ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ. 20 ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು. 21 ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು. 22 ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ 23 ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು. 24 ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು. 25 ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು? 26 ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು. 27 ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ; 28 ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
1 ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು. 2 ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು. 3 ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು. 4 ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು. 5 ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು. 6 ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು. 7 ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ 8 ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು. 9 ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು. 10 ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು. 11 ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು. 12 ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು. 13 ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು. 14 ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ 15 ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು. 16 ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು. 17 ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ. 18 ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ, 19 ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು. 20 ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು. 21 ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು. 22 ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು. 23 ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ? 24 ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು. 25 ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು. 26 ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು. 27 ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು. 28 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು; 29 ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು. 30 ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು. 31 ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು. 32 ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು. 33 ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ 34 ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು! 35 ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
1 ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು. 2 ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ-- 3 ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು. 4 ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಆಗ ಆಕಾಶದ ಪಕ್ಷಿಗಳು ಬಂದು ಅವುಗಳನ್ನು ನುಂಗಿಬಿಟ್ಟವು. 5 ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು; 6 ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು; 7 ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ. 8 ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು. 9 ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು. 10 ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು. 11 ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ. 12 ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು. 13 ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ? 14 ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ. 15 ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ. 16 ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ 17 ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ. 18 ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ 19 ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು. 20 ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು. 21 ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ? 22 ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು. 23 ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು. 24 ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು. 25 ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು. 26 ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ. 27 ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು. 28 ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ. 29 ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ. 30 ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ? 31 ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ. 32 ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು. 33 ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು. 34 ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು. 35 ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು. 36 ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು. 37 ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು. 38 ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು. 39 ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. 40 ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು. 41 ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
1 ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು. 2 ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು. 3 ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು. 4 ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು. 5 ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು. 6 ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ -- 7 ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು. 8 ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು. 9 ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು. 10 ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು. 11 ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು. 12 ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು. 13 ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.) 14 ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು. 15 ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು. 16 ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು. 17 ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು. 18 ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು. 19 ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು. 20 ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು. 21 ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು. 22 ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು-- 23 ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. 24 ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು. 25 ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು 26 ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ. 27 ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು. 28 ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು. 29 ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು. 30 ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು 31 ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು. 32 ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು. 33 ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು. 34 ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು. 35 ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು. 36 ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು. 37 ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ. 38 ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು. 39 ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು. 40 ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು. 41 ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ. 42 ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು. 43 ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
1 ಆತನು ಅಲ್ಲಿಂದ ಹೊರಟು ತನ್ನ ಸ್ವಂತ ಸ್ಥಳಕ್ಕೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. 2 ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು? 3 ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು. 4 ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು. 5 ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ. 6 ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು. 7 ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು. 8 ಅವರು ತಮ್ಮ ಪ್ರಯಾಣಕ್ಕಾಗಿ ಒಂದು ಕೋಲಿನ ಹೊರತು ಚೀಲವನ್ನಾಗಲೀ ರೊಟ್ಟಿಯನ್ನಾಗಲೀ ಹವ್ಮೆಾಣಿಯಲ್ಲಿ ಹಣವನ್ನಾಗಲೀ ತಕ್ಕೊಳ್ಳಬಾರ ದೆಂತಲೂ 9 ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು. 10 ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ. 11 ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ 12 ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು. 13 ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು. 14 ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು. 15 ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು. 16 ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು. 17 ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು. 18 ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು. 19 ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ. 20 ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು. 21 ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು; 22 ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು. 23 ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು. 24 ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು. 25 ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು. 26 ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು. 27 ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು 28 ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು 29 ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು. 30 ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು. 31 ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ. 32 ಆಗ ಅವರು ದೋಣಿ ಯಲ್ಲಿ ಏಕಾಂತವಾಗಿ ಅರಣ್ಯಸ್ಥಳಕ್ಕೆ ಹೊರಟು ಹೋದರು. 33 ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು. 34 ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು. 35 ಆಗಲೇ ಹಗಲು ಬಹಳ ಮಟ್ಟಿಗೆ ಕಳೆದದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅರಣ್ಯ ಸ್ಥಳ ಮತ್ತು ಈಗ ಸಮಯವು ಬಹಳವಾಗಿ ದಾಟಿದೆ; 36 ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು. 37 ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು. 38 ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು. 39 ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು. 40 ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು. 41 ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು. 42 ಅವರೆಲ್ಲರೂ ತಿಂದು ತೃಪ್ತರಾದರು. 43 ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು. 44 ಆ ರೊಟ್ಟಿಗಳನ್ನು ತಿಂದವರು ಸುಮಾರು ಐದು ಸಾವಿರ ಗಂಡಸರು. 45 ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು. 46 ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು. 47 ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು. 48 ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು. 49 ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು. 50 ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು. 51 ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು. 52 ಅವರ ಹೃದಯವು ಕಠಿಣವಾಗಿ ದ್ದದರಿಂದ ಅವರು ರೊಟ್ಟಿಗಳ ಅದ್ಭುತವನ್ನು ಗ್ರಹಿಸ ಲಿಲ್ಲ. 53 ಅವರು ದಾಟಿ ಗೆನೆಜರೇತ್ ದೇಶದ ದಡಕ್ಕೆ ಸೇರಿ ದರು. 54 ಅವರು ದೋಣಿಯಿಂದ ಇಳಿದು ಬಂದ ಕೂಡಲೆ ಜನರು ಆತನನ್ನು ಗುರುತಿಸಿ 55 ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು. 56 ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
1 ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು. 2 ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು. 3 ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ. 4 ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು. 5 ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು. 6 ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ; 7 ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ. 8 ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು. 9 ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. 10 ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. 11 ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; 12 ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ 13 ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು. 14 ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ; 15 ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ. 16 ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು. 17 ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು. 18 ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ? 19 ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು. 20 ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ. 21 ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು 22 ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ 23 ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು. 24 ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು. 25 ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು. 26 ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು. 27 ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು. 28 ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು. 29 ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು. 30 ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು. 31 ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು. 32 ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು. 33 ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು; 34 ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ. 35 ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು. 36 ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು. 37 ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
1 ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- 2 ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ. 3 ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು. 4 ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು. 5 ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು. 6 ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು. 7 ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು. 8 ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು. 9 ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು. 10 ಕೂಡಲೆ ಆತನು ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿದಲ್ಮನೂಥ ಭಾಗಗಳಿಗೆ ಬಂದನು. 11 ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು. 12 ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. 13 ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು. 14 ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ. 15 ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು. 16 ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು. 17 ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? 18 ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ? 19 ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು. 20 ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು. 21 ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು. 22 ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು. 23 ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು. 24 ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು. 25 ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು. 26 ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು. 27 ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು. 28 ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು. 29 ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು. 30 ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು. 31 ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು. 32 ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು. 33 ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು. 34 ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ. 35 ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು. 36 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? 37 ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು? 38 ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
1 ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. 2 ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು. 3 ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು. 4 ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು. 5 ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು. 6 ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು. 7 ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು. 8 ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ. 9 ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು. 10 ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು. 11 ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. 12 ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ? 13 ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು. 14 ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು. 15 ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು. 16 ಆಗ ಆತನು ಶಾಸ್ತ್ರಿಗಳಿಗೆ-- ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು. 17 ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು. 18 ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು. 19 ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. 20 ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು. 21 ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ; 22 ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು. 23 ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು. 24 ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು. 25 ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು. 26 ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು. 27 ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು. 28 ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು. 29 ಆತನು ಅವರಿಗೆ--ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು. 30 ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು. 31 ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು. 32 ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು. 33 ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು. 34 ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು. 35 ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು. 36 ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ-- 37 ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು. 38 ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು. 39 ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ. 40 ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ. 41 ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 42 ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು. 43 ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು; 44 ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. 45 ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು. 46 ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. 47 ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು. 48 ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. 49 ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು. 50 ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
1 ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು. 2 ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು. 3 ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು. 4 ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು. 5 ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು. 6 ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು. 7 ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. 8 ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. 9 ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು. 10 ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು. 11 ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ. 12 ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು. 13 ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು. 14 ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು. 15 ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ. 16 ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು. 17 ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು. 18 ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ. 19 ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು. 20 ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು. 21 ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ 22 ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು. 23 ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು. 24 ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ. 25 ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು. 26 ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು. 27 ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು. 28 ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು. 29 ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು 30 ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು. 31 ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು. 32 ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ 33 ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು. 34 ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು. 35 ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು. 36 ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು 37 ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು. 38 ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು. 39 ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ. 40 ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು. 41 ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು. 42 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ. 43 ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು. 44 ನಿಮ್ಮಲ್ಲಿ ಮುಖ್ಯಸ್ಥನಾಗಬೇಕೆಂದಿರುವವನು ಎಲ್ಲರಿಗೆ ಸೇವಕನಾಗಿರಬೇಕು. 45 ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು. 46 ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು. 47 ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು. 48 ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು. 49 ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು. 50 ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು. 51 ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು. 52 ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
1 ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ-- 2 ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ. 3 ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು. 4 ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ 5 ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು. 6 ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು. 7 ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು. 8 ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು. 9 ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; 10 ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು. 11 ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು. 12 ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು; 13 ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ. 14 ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು. 15 ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು. 16 ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ. 17 ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು. 18 ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು. 19 ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು. 20 ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು. 21 ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು. 22 ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ. 23 ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು. 24 ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ. 25 ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು. 26 ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ. 27 ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು 28 ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು. 29 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. 30 ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು. 31 ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು; 32 ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು. 33 ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
1 ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು. 2 ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು. 3 ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. 4 ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು. 5 ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು. 6 ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು. 7 ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. 8 ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು. 9 ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು. 10 ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. 11 ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು. 12 ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು. 13 ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು. 14 ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ? 15 ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು. 16 ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು. 17 ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು. 18 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ-- 19 ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ. 20 ಈಗ ಏಳು ಮಂದಿ ಸಹೋದರರಿದ್ದರು; ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು. 21 ಮತ್ತು ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು; ಅದರಂತೆಯೇ ಮೂರನೆಯವನೂ ಆದನು. 22 ಹೀಗೆ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವ ರಾದರು; ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು. 23 ಆದದ ರಿಂದ ಪುನರುತ್ಥಾನದಲ್ಲಿ ಅವರು ಎದ್ದಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ ಅಂದರು. 24 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ? 25 ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ. 26 ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ? 27 ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು. 28 ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು. 29 ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ. 30 ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ. 31 ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು. 32 ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. 33 ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು. 34 ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ. 35 ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ? 36 ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ. 37 ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು. 38 ತರುವಾಯ ಆತನು ಬೋಧನೆಯಲ್ಲಿ ಅವರಿಗೆ --ಉದ್ದವಾದ ಅಂಗಿಯನ್ನು ತೊಟ್ಟುಕೊಂಡು ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ 39 ಸಭಾಮಂದಿರಗಳಲ್ಲಿ ಮುಖ್ಯಪೀಠಗಳನ್ನೂ ಔತಣಗಳಲ್ಲಿ ಅತ್ಯುನ್ನತವಾದ ಸ್ಥಳಗಳನ್ನೂ ಪ್ರೀತಿಸುವವರಾದ ಶಾಸ್ತ್ರಿಗಳ ವಿಷಯವಾಗಿ ಎಚ್ಚರವಾಗಿರ್ರಿ; 40 ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು. 41 ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು. 42 ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು. 43 ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 44 ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
1 ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು. 2 ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು. 3 ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ-- 4 ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು. 5 ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ; 6 ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. 7 ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ. 8 ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ. 9 ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ. 10 ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ. 11 ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು 12 ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು. 13 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು. 14 ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. 15 ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ. 16 ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ. 17 ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ! 18 ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ. 19 ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ. 20 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ. 21 ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ; 22 ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು. 23 ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ. 24 ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. 25 ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು. 26 ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು. 27 ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು. 28 ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ; 29 ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ. 30 ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 31 ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ. 32 ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು. 33 ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು. 34 ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ. 35 ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. 36 ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು. 37 ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
1 ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು. 2 ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು. 3 ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು. 4 ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ? 5 ಇದನ್ನು ಮುನ್ನೂರು (ಪೆನ್ಸ್) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು. 6 ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ. 7 ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ. 8 ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ. 9 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು. 10 ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು. 11 ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು. 12 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು. 13 ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ. 14 ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ. 15 ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು. 16 ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು. 17 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. 18 ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. 19 ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು. 20 ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ. 21 ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು. 22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು. 23 ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು. 24 ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ. 25 ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. 26 ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು. 27 ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ. 28 ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು. 29 ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು. 30 ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. 31 ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು. 32 ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು. 33 ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ-- 34 ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು. 35 ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು. 36 ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು. 37 ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ? 38 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು. 39 ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು. 40 ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ. 41 ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ; 42 ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು. 43 ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು. 44 ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು. 45 ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು. 46 ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು. 47 ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು. 48 ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? 49 ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು. 50 ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. 51 ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು. 52 ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು. 53 ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು. 54 ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು. 55 ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ. 56 ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ. 57 ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ-- 58 ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು. 59 ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ. 60 ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು. 61 ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು. 62 ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು. 63 ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ? 64 ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು 65 ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು. 66 ಇದಲ್ಲದೆ ಪೇತ್ರನು ಭವನದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು. 67 ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು. 68 ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು. 69 ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು. 70 ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು. 71 ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು. 72 ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
1 ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು. 2 ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು. 3 ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ. 4 ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು. 5 ಆದರೂ ಯೇಸು ಉತ್ತರಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು. 6 ಆ ಹಬ್ಬದಲ್ಲಿ ಜನರು ಬೇಡಿ ಕೊಂಡ ಒಬ್ಬ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು. 7 ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು. 8 ಆಗ ಜನಸಮೂಹವು ಗಟ್ಟಿಯಾಗಿ ಕೂಗುತ್ತಾ ಅವನು ತಮಗೆ ಯಾವಾಗಲೂ ಮಾಡಿದ ಪ್ರಕಾರ ಮಾಡ ಬೇಕೆಂದು ಬೇಡಿಕೊಳ್ಳಲಾರಂಭಿ ಸಿದರು. 9 ಆದರೆ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ ಎಂದು ಕೇಳಿದನು. 10 ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು. 11 ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು. 12 ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ-- 13 ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು. 14 ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. 15 ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು. 16 ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು. 17 ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು 18 ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು. 19 ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು. 20 ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು. 21 ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು. 22 ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು. 23 ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ. 24 ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು. 25 ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು. 26 ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು. 27 ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು. 28 ಆಗ--ಆತನು ಅಪರಾಧಿಗಳೊಂದಿಗೆ ಎಣಿಸಲ್ಪಟ್ಟನು ಎಂಬ ಬರಹವು ನೆರವೇರಿತು. 29 ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, 30 ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದುಬಾ ಎಂದು ಹೇಳಿ ಆತನನು ದೂಷಿಸಿದರು. 31 ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 32 ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು. 33 ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು. 34 ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು. 35 ಹತ್ತಿರದಲ್ಲಿ ನಿಂತಿದ್ದ ಕೆಲವರು ಅದನ್ನು ಕೇಳಿ--ಇಗೋ, ಈತನು ಎಲೀಯ ನನ್ನು ಕರೆಯುತ್ತಾನೆ ಅಂದರು. 36 ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು. 37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು. 38 ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು. 39 ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು. 40 ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು. 41 (ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು. 42 ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು. 43 ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು. 44 ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು. 45 ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು. 46 ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು. 47 ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
1 ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು. 2 ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು, 3 ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು. 4 ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು. 5 ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು. 6 ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ; 7 ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು. 8 ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ. 9 ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. 10 ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು. 11 ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ. 12 ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು. 13 ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ. 14 ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು. 15 ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ. 16 ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು. 17 ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು; 18 ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು. 19 ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು. 20 ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
1 ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು 2 ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ 3 ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು; 4 ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು. 5 ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್. 6 ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು. 7 ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು. 8 ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ 9 ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು. 10 ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು. 11 ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು. 12 ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು. 13 ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು. 14 ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು. 15 ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು. 16 ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. 17 ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು. 18 ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು. 19 ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ. 20 ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು. 21 ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. 22 ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು. 23 ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು. 24 ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು-- 25 ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು. 26 ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು 27 ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು. 28 ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು. 29 ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ 30 ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ; 31 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. 32 ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. 33 ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು. 34 ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು. 35 ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು. 36 ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು. 37 ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು. 38 ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು. 39 ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ 40 ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು. 41 ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ 42 ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ. 43 ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು? 44 ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು. 45 ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು. 46 ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ; 47 ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ; 48 ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು. 49 ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು. 50 ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು. 51 ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ; 52 ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ. 53 ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ. 54 ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ. 55 ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು. 56 ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು. 57 ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು. 58 ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು. 59 ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು. 60 ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು. 61 ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು. 62 ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು. 63 ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು. 64 ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು. 65 ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು. 66 ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು. 67 ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ-- 68 ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ. 69 ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ. 70 ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ 71 ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ 72 ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು 73 ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ 74 ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ 75 ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು. 76 ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ. 77 ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು. 78 ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ 79 ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು. 80 ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
1 ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು. 2 ಕುರೇನ್ಯನು ಸಿರಿಯಾಕ್ಕೆ ಅಧಿಪತಿಯಾಗಿದ್ದಾಗ ಈ ಖಾನೇಷುಮಾರಿಯು ಮೊದಲನೆಯ ಸಾರಿ ನಡೆ ಯಿತು. 3 ಆಗ ಎಲ್ಲರೂ ಖಾನೇಷುಮಾರಿ ಬರೆಯಿಸಿ ಕೊಳ್ಳುವದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಕ್ಕೆ ಹೋದರು. 4 (ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ 5 ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು. 6 ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು. 7 ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು. 8 ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು. 9 ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು. 10 ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ. 11 ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ. 12 ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು. 13 ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ-- 14 ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು. 15 ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 16 ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು. 17 ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು. 18 ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು. 19 ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು. 20 ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು. 21 ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು. 22 ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು. 23 (ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು). 24 ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು. 25 ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು. 26 ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು. 27 ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು. 28 ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ-- 29 ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ; 30 ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು. 31 ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ. 32 ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು. 33 ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು. 34 ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು. 35 ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು. 36 ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು. 37 ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು. 38 ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು. 39 ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು. 40 ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು. 41 ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು. 42 ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು. 43 ಅವರು ಆ ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ. 44 ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು. 45 ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು. 46 ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು. 47 ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು. 48 ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು. 49 ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು. 50 ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ. 51 ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು. 52 ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
1 ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ 2 ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು. 3 ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು. 4 ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ 5 ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು; 6 ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು. 7 ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು? 8 ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. 9 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು. 10 ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು. 11 ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು. 12 ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು. 13 ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು. 14 ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು. 15 ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು. 16 ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು 17 ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು. 18 ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು. 19 ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ 20 ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು. 21 ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು. 22 ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು. 23 ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು; 24 ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು; 25 ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು; 26 ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೋಸೇಫನ ಮಗನು; ಇವನು ಯೂದನ ಮಗನು; 27 ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು; 28 ಇವನು ಮೆಲ್ಖಿಯ ಮಗನು; ಇವನು ಅದ್ದಿಯ ಮಗನು; ಇವನು ಕೊಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು; 29 ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; 30 ಇವನು ಸಿಮಿ ಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು; 31 ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು; 32 ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು; 33 ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು; 34 ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು; 35 ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು; 36 ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು; 37 ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು; 38 ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
1 ಯೇಸು ಪರಿಶುದ್ಧಾತ್ಮನಿಂದ ತುಂಬಿದವನಾಗಿ ಯೊರ್ದನಿನಿಂದ ಹಿಂತಿರುಗಿ ಬಂದು ಆತ್ಮ ನಿಂದ ಅಡವಿಯೊಳಕ್ಕೆ ನಡಿಸಲ್ಪಟ್ಟು 2 ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು. 3 ಆಗ ಸೈತಾನನು ಆತ ನಿಗೆ--ನೀನು ದೇವಕುಮಾರನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು. 4 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ, ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು. 5 ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು. 6 ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು. 7 ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು. 8 ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು. 9 ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು; 10 ಆತನು ನಿನ್ನನ್ನು ಕಾಯುವದಕ್ಕೆ ತನ್ನ ದೂತರಿಗೆ ಅಪ್ಪಣೆ ಕೊಡುವನು; 11 ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸ ದಂತೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದನು. 12 ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು. 13 ಸೈತಾನನು ಎಲ್ಲಾ ಶೋಧನೆಯನ್ನು ಮುಗಿಸಿದ ಮೇಲೆ ಸ್ವಲ್ಪ ಕಾಲ ಆತನ ಬಳಿಯಿಂದ ಹೊರಟು ಹೋದನು. 14 ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು. 15 ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು. 16 ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು. 17 ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು-- 18 ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ 19 ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು. 20 ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು. 21 ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು. 22 ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು. 23 ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು. 24 ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ. 25 ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ 26 ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು. 27 ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು. 28 ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು. 29 ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು. 30 ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು. 31 ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು. 32 ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು. 33 ಆ ಸಭಾಮಂದಿರ ದಲ್ಲಿ ಅಶುದ್ಧ ದೆವ್ವ ಆತ್ಮವಿದ್ದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕೂಗುತ್ತಾ-- 34 ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು. 35 ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು. 36 ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. 37 ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು. 38 ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು. 39 ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು. 40 ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು. 41 ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು. 42 ಬೆಳಗಾದ ಮೇಲೆ ಆತನು ಅರಣ್ಯ ಸ್ಥಳಕ್ಕೆ ಹೊರಟು ಹೋದನು; ಜನರು ಆತನನ್ನು ಹುಡುಕಿಕೊಂಡು ಆತನ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗ ಬಾರದೆಂದು ಆತನನ್ನು ತಡೆದರು. 43 ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. 44 ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
1 ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು. 2 ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. 3 ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು. 4 ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು. 5 ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು. 6 ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು. 7 ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು. 8 ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು. 9 ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು. 10 ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು. 11 ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. 12 ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು. 13 ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು. 14 ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು. 15 ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು. 16 ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು. 17 ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು. 18 ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು. 19 ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು. 20 ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು. 21 ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು. 22 ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು? 23 ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ? 24 ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. 25 ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು. 26 ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು. 27 ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. 28 ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು. 29 ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು. 30 ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು. 31 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು. 32 ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು. 33 ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು. 34 ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ? 35 ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು. 36 ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ. 37 ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು. 38 ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು. 39 ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
1 ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು. 2 ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು. 3 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ 4 ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು. 5 ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು. 6 ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು. 7 ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು. 8 ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು. 9 ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು. 10 ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು. 11 ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. 12 ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು. 13 ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು. 14 ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, 15 ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ, 16 ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ. 17 ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ 18 ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು. 19 ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು. 20 ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ. 21 ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ. 22 ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು. 23 ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು. 24 ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ. 25 ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ. 26 ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು. 27 ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ. 28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ. 29 ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ. 30 ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ. 31 ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ. 32 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ. 33 ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ. 34 ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ. 35 ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ, 36 ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ. 37 ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು. 38 ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು. 39 ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ? 40 ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು. 41 ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ? 42 ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ 43 ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ. 44 ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ. 45 ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ. 46 ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ? 47 ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ. 48 ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು. 49 ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
1 ತನ್ನ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ ಆತನು ಕಪೆರ್ನೌಮಿನಲ್ಲಿ ಪ್ರವೇಶಿಸಿದನು. 2 ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು. 3 ಅವನು ಯೇಸುವಿನ ವಿಷಯ ಕೇಳಿದಾಗ ಆತನು ಬಂದು ತನ್ನ ಆಳನ್ನು ಗುಣ ಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಆತನ ಬಳಿಗೆ ಕಳುಹಿಸಿದನು. 4 ಅವರು ಯೇಸುವಿನ ಬಳಿಗೆ ಬಂದು ಆತನಿಗೆ ಒತ್ತಾಯ ಮಾಡಿ--ನೀನು (ಅವನ ಆಳನ್ನು) ಸ್ವಸ್ಥಮಾಡಬೇಕು; ಯಾಕಂದರೆ ಅವನು ಯೋಗ್ಯನಾಗಿದ್ದಾನೆ. 5 ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು. 6 ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ. 7 ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು; 8 ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ 9 ಯೇಸು ಇವುಗಳನ್ನು ಕೇಳಿದಾಗ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತಿರುಗಿಕೊಂಡು ತನ್ನನ್ನು ಹಿಂಬಾಲಿಸು ತ್ತಿದ್ದವರಿಗೆ--ಇಂಥ ದೊಡ್ಡ ನಂಬಿಕೆಯನ್ನು ನಾನು ಇಸ್ರಾಯೇಲಿನಲ್ಲಿ ಸಹ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು. 10 ಕಳುಹಿಸಲ್ಪಟ್ಟವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಆಳು ಸ್ವಸ್ಥನಾಗಿರುವದನ್ನು ಕಂಡರು. 11 ಇದಾದ ಮೇಲೆ ಮಾರಣೆಯ ದಿನ ಆತನು ನಾಯಿನೆಂಬ ಪಟ್ಟಣಕ್ಕೆ ಹೋದನು. ಆಗ ಆತನ ಶಿಷ್ಯರಲ್ಲಿ ಅನೇಕರೂ ಬಹು ಜನರೂ ಆತನ ಸಂಗಡ ಹೋದರು. 12 ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು. 13 ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು. 14 ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. 15 ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು. 16 ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು. 17 ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು. 18 ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು. 19 ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು. 20 ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು. 21 ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು. 22 ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು 23 ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು. 24 ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ? 25 ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ. 26 ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ. 27 ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು. 28 ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. 29 ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು. 30 ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು. 31 ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ? 32 ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ. 33 ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ. 34 ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ. 35 ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು. 36 ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು. 37 ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು 38 ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು. 39 ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು. 40 ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು-- 41 ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು. 42 ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು. 43 ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು. 44 ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ 45 ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ. 46 ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ. 47 ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು. 48 ಆತನು ಆಕೆಗೆ--ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು. 49 ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು. 50 ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
1 ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು. 2 ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ 3 ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು. 4 ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ-- 5 ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು. 6 ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು. 7 ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. 8 ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು. 9 ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು. 10 ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ. 11 ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ. 12 ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು. 13 ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು. 14 ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು. 15 ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ. 16 ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. 17 ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ. 18 ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು. 19 ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು. 20 ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು. 21 ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು. 22 ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು. 23 ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು. 24 ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು. 25 ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು. 26 ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು. 27 ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು. 28 ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು. 29 (ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ 30 ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು. 31 ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು. 32 ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು. 33 ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು. 34 ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು. 35 ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು. 36 ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು. 37 ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು. 38 ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ-- 39 ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು. 40 ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು. 41 ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. 42 ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು. 43 ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು 44 ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು. 45 ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು. 46 ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು. 47 ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು. 48 ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು. 49 ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು. 50 ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು. 51 ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ. 52 ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು. 53 ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು 54 ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು. 55 ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು. 56 ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
1 ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು. 2 ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು. 3 ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು. 4 ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ. 5 ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು. 6 ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು. 7 ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು. 8 ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು. 9 ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು. 10 ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು. 11 ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು. 12 ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು. 13 ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು. 14 ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು. 15 ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು. 16 ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು. 17 ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು. 18 ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು. 19 ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು. 20 ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು. 21 ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ-- 22 ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು. 23 ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ; 24 ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು. 25 ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು? 26 ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು. 27 ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು. 28 ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು. 29 ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು. 30 ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು. 31 ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು. 32 ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು. 33 ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು. 34 ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು. 35 ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು. 36 ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು. 37 ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು. 38 ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು. 39 ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ. 40 ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು. 41 ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು. 42 ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು. 43 ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ-- 44 ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು. 45 ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು. 46 ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು. 47 ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ 48 ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ 49 ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು. 50 ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು. 51 ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು 52 ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು. 53 ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು. 54 ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು. 55 ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. 56 ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು. 57 ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು. 58 ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು. 59 ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು. 60 ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು. 61 ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು. 62 ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
1 ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು. 2 ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ. 3 ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. 4 ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ. 5 ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ. 6 ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು. 7 ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ; 8 ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ. 9 ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ. 10 ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ-- 11 ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ. 12 ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ. 13 ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು. 14 ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು. 15 ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ. 16 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು. 17 ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು. 18 ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು. 19 ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು. 20 ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು. 21 ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ 22 ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ. 23 ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು. 24 ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. 25 ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು. 26 ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು. 27 ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು. 28 ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು. 29 ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು. 30 ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು. 31 ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು. 32 ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು. 33 ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು 34 ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು. 35 ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು. 36 ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ 37 ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು. 38 ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು. 39 ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು. 40 ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು. 41 ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ; 42 ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
1 ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು 2 ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ. 3 ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು. 4 ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು. 5 ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು; 6 ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು 7 ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು. 8 ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು. 9 ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. 10 ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು. 11 ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ? 12 ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ? 13 ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ? 14 ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು. 15 ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು. 16 ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು. 17 ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು. 18 ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ. 19 ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು. 20 ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ. 21 ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು. 22 ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು. 23 ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ. 24 ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ. 25 ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು. 26 ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು. 27 ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು. 28 ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು. 29 ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು. 30 ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು. 31 ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ. 32 ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ. 33 ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ. 34 ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು. 35 ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ; 36 ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು. 37 ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು. 38 ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು. 39 ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ 40 ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ? 41 ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು. 42 ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು. 43 ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ. 44 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು. 45 ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು. 46 ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ. 47 ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. 48 ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. 49 ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. 50 ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. 51 ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 52 ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು. 53 ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು. 54 ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
1 ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ. 2 ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ. 3 ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು. 4 ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ. 5 ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. 6 ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ. 7 ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ. 8 ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು. 9 ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು. 10 ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ. 11 ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ. 12 ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು. 13 ಆಗ ಗುಂಪಿನಲ್ಲಿದ್ದ ಒಬ್ಬನು ಆತನಿಗೆ--ಬೋಧ ಕನೇ, ಆಸ್ತಿಯನ್ನು ಪಾಲುಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳು ಅಂದನು. 14 ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು. 15 ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು. 16 ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು. 17 ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- 18 ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು 19 ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. 20 ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. 21 ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು. 22 ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. 23 ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು. 24 ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ. 25 ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು? 26 ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು? 27 ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ. 28 ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ? 29 ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ. 30 ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು. 31 ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು. 32 ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. 33 ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ. 34 ಯಾಕಂದರೆ ನಿಮ್ಮ ಸಂಪತ್ತು ಇರುವಲ್ಲಿಯೇ ನಿಮ್ಮ ಹೃದಯವು ಸಹ ಇರುವದು. 35 ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ. 36 ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ. 37 ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು. 38 ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು. 39 ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ. 40 ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು. 41 ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ 42 ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು? 43 ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು; 44 ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. 45 ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ 46 ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು. 47 ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. 48 ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ 49 ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು? 50 ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ! 51 ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ. 52 ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು. 53 ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು. 54 ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು. 55 ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ. 56 ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ? 57 ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ? 58 ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆ 59 ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
1 ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು. 2 ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ? 3 ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ. 4 ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ? 5 ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು. 6 ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ. 7 ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು. 8 ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು; 9 ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು. 10 ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು. 11 ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು. 12 ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ 13 ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು. 14 ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು. 15 ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ? 16 ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು. 17 ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು. 18 ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ? 19 ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು. 20 ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ? 21 ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು. 22 ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು. 23 ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ-- 24 ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ. 25 ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು. 26 ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ. 27 ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ. 28 ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು. 29 ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು. 30 ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು. 31 ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು. 32 ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ. 33 ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು. 34 ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ 35 ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
1 ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು. 2 ಇಗೋ, ಅಲ್ಲಿ ಜಲೊದರವುಳ್ಳ ಒಬ್ಬ ಮನುಷ್ಯನು ಆತನ ಎದು ರಿನಲ್ಲಿ ಇದ್ದನು. 3 ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು. 4 ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು. 5 ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು. 6 ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು. 7 (ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ-- 8 ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು; 9 ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು. 10 ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು. 11 ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು. 12 ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ 13 ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ; 14 ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು. 15 ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು. 16 ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು. 17 ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು. 18 ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು. 19 ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು. 20 ಇನ್ನೊಬ್ಬನು--ನಾನು ಒಬ್ಬಳನ್ನು ಮದುವೆ ಮಾಡಿಕೊಂಡಿದ್ದೇನೆ, ಅದಕೋಸ್ಕರ ನಾನು ಬರ ಲಾರೆನು ಅಂದನು. 21 ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ 22 ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು. 23 ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು; 24 ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. 25 ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ-- 26 ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು. 27 ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. 28 ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ? 29 ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ-- 30 ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು. 31 ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ? 32 ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ? 33 ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. 34 ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು? 35 ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
1 ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು. 2 ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು. 3 ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು-- 4 ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? 5 ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. 6 ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು. 7 ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು. 8 ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ? 9 ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು. 10 ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು. 11 ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು. 12 ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು. 13 ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು. 14 ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು. 15 ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ 16 ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ. 17 ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. 18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; 19 ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು 20 ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು. 21 ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು. 22 ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ; 23 ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ; 24 ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು. 25 ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು. 26 ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು. 27 ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು. 28 ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು. 29 ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ 30 ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು. 31 ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ. 32 ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
1 ತರುವಾಯ ಆತನು ತನ್ನ ಶಿಷ್ಯರಿಗೂ #NAME? 2 ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು. 3 ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ. 4 ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು. 5 ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು 6 ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು. 7 ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು. 8 ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ. 9 ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು. 10 ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ. 11 ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? 12 ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು? 13 ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು. 14 ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು. 15 ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ. 16 ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ. 17 ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ. 18 ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ. 19 ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. 20 ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. 21 ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. 22 ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. 23 ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. 24 ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. 25 ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ. 26 ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು. 27 ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. 28 ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು. 29 ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು. 30 ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು. 31 ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
1 ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ! 2 ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ. 3 ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು. 4 ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು. 5 ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು. 6 ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು. 7 ಆದರೆ ನಿಮ್ಮಲ್ಲಿ ಒಬ್ಬನಿಗೆ ಉಳುವ ಇಲ್ಲವೆ ದನಕರು ಕಾಯುವ ಆಳಿರಲಾಗಿ ಅವನು ಹೊಲದಿಂದ ಬಂದಾ ಗಲೇ ಅವನಿಗೆ--ಹೋಗಿ ಊಟಕ್ಕೆ ಕೂತುಕೋ ಎಂದು ಹೇಳುವದುಂಟೇ? 8 ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ? 9 ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಆಳು ಮಾಡಿದರೆ (ಯಜಮಾ ನನು) ಅವನಿಗೆ ಕೃತಜ್ಞತೆಯುಳ್ಳವನಾಗಿರುವನೋ? ನಾನು ನೆನಸುವದಿಲ್ಲ. 10 ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು. 11 ಇದಾದ ಮೇಲೆ ಆತನು ಯೆರೂಸಲೇಮಿಗೆ ಹೋಗುತ್ತಿರುವಾಗ ಸಮಾರ್ಯ ಮತ್ತು ಗಲಿಲಾಯಗಳ ಮಧ್ಯದಲ್ಲಿ ಹಾದುಹೋದನು. 12 ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು. 13 ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು. 14 ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. 15 ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ 16 ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು. 17 ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ? 18 ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ 19 ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು. 20 ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ. 21 ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು. 22 ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು. 23 ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ. 24 ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು. 25 ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ. 26 ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು. 27 ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು. 28 ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. 29 ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು. 30 ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು. 31 ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ. 32 ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ. 33 ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು. 34 ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು. 35 ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು. 36 ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. 37 ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
1 ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು-- 2 ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು. 3 ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು. 4 ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ. 5 ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು. 6 ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ. 7 ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? 8 ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು. 9 ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು. 10 ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು. 11 ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ. 12 ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು. 13 ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು. 14 ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. 15 ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು. 16 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ. 17 ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. 18 ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು. 19 ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ. 20 ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು. 21 ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು. 22 ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು. 23 ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು. 24 ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ. 25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು. 26 ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು. 27 ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು. 28 ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ 29 ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು 30 ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು. 31 ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು. 32 ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು. 33 ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು. 34 ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ. 35 ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು; 36 ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು. 37 ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು. 38 ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು. 39 ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು. 40 ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ-- 41 ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು. 42 ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು. 43 ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
1 ಯೇಸು ಯೆರಿಕೋವನ್ನು ಪ್ರವೇಶಿಸಿ ಹಾದು ಹೋದನು. 2 ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು. 3 ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು. 4 ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು. 5 ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು. 6 ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು. 7 ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು. 8 ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು. 9 ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ. 10 ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು. 11 ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು. 12 ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು. 13 ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು. 14 ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು. 15 ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು. 16 ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು. 17 ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು. 18 ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು. 19 ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು. 20 ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ. 21 ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು. 22 ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ. 23 ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು. 24 ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು. 25 (ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.) 26 ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು. 27 ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು. 28 ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು. 29 ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ-- 30 ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ; 31 ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು. 32 ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. 33 ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ 34 ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು. 35 ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು. 36 ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. 37 ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- 38 ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು. 39 ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. 40 ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು. 41 ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- 42 ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. 43 ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. 44 ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು. 45 ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ 46 ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು. 47 ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು. 48 ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
1 ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು 2 ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು. 3 ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ 4 ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು. 5 ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು. 6 ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು 7 ಅವರು--ಅದು ಎಲ್ಲಿಂ ದಲೋ ನಾವು ಅರಿಯೆವು ಎಂದು ಉತ್ತರಕೊಟ್ಟರು. 8 ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು. 9 ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು. 10 ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. 11 ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು. 12 ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು. 13 ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು. 14 ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು. 15 ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು? 16 ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು. 17 ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು? 18 ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು. 19 ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು. 20 ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು. 21 ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು. 22 ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು. 23 ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ? 24 ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು. 25 ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು. 26 ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು. 27 ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ-- 28 ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು. 29 ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. 30 ಎರಡನೆಯ ವನು ಆಕೆಯನ್ನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. 31 ಮೂರನೆಯವನು ಆಕೆಯನ್ನು ಮದುವೆಯಾದನು; ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. 32 ಕಡೇ ದಾಗಿ ಆ ಹೆಂಗಸು ಸಹ ಸತ್ತಳು. 33 ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು. 34 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ಲೋಕದ ಮಕ್ಕಳು ಮದುವೆಮಾಡಿಕೊಳ್ಳುತ್ತಾರೆ ಮತ್ತು ಮದುವೆ ಮಾಡಿಕೊಡುತ್ತಾರೆ. 35 ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ. 36 ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ. 37 ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು. 38 ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು. 39 ಆಗ ಶಾಸ್ತ್ರಿಗಳಲ್ಲಿ ಕೆಲವರು ಪ್ರತ್ಯುತ್ತರ ವಾಗಿ--ಬೋಧಕನೇ, ನೀನು ಸರಿಯಾಗಿ ಹೇಳಿದ್ದೀ ಅಂದರು. 40 ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ. 41 ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ? 42 ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ-- 43 ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು. 44 ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು. 45 ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ-- 46 ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; 47 ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
1 ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು. 2 ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು. 3 ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ; 4 ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು. 5 ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು-- 6 ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು. 7 ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು. 8 ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ. 9 ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು. 10 ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು. 11 ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು. 12 ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು. 13 ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು. 14 ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. 15 ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು. 16 ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು. 17 ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು. 18 ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ. 19 ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. 20 ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. 21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ. 22 ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. 23 ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. 24 ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು. 25 ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು. 26 ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು. 27 ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು; 28 ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು. 29 ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ; 30 ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ. 31 ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ. 32 ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 33 ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ. 34 ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ. 35 ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು. 36 ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು. 37 ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು. 38 ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
1 ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು. 2 ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು. 3 ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು. 4 ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು. 5 ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು. 6 ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು. 7 ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು. 8 ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು. 9 ಅವರು ಆತನಿಗೆ--ನಾವು ಎಲ್ಲಿ ಸಿದ್ಧ ಮಾಡಬೇಕೆಂದು ನೀನು ಕೋರುತ್ತೀ ಅಂದರು. 10 ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ. 11 ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ. 12 ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು. 13 ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು. 14 ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು. 15 ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ 16 ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು. 17 ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು. 18 ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು. 19 ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು. 20 ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ. 21 ಆದರೂ ಇಗೋ, ನನ್ನನ್ನು ಹಿಡುಕೊಡುವವನ ಕೈ ನನ್ನ ಸಂಗಡ ಮೇಜಿನ ಮೇಲೆ ಇದೆ. 22 ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು. 23 ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು. 24 ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು. 25 ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ. 26 ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ. 27 ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ. 28 ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ. 29 ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ. 30 ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು. 31 ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. 32 ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು. 33 ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು. 34 ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು. 35 ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು. 36 ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ. 37 ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. 38 ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು. 39 ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು. 40 ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು. 41 ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ-- 42 ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು. 43 ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು. 44 ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು. 45 ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ-- 46 ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು. 47 ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು. 48 ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು. 49 ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು. 50 ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು. 51 ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು. 52 ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ? 53 ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು. 54 ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು. 55 ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು. 56 ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು. 57 ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು. 58 ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು. 59 ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು. 60 ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು. 61 ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು. 62 ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು. 63 ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು. 64 ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು. 65 ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು. 66 ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ-- 67 ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ; 68 ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ. 69 ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು. 70 ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು. 71 ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
1 ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು. 2 ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು. 3 ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು. 4 ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು. 5 ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು. 6 ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ 7 ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು. 8 ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು. 9 ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ. 10 ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು. 11 ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು. 12 ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು. 13 ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ-- 14 ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. 15 ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ. 16 ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು. 17 ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು). 18 ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು. 19 (ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು). 20 ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು. 21 ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು. 22 ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು. 23 ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು. 24 ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು. 25 ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು. 26 ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು. 27 ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು. 28 ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ. 29 ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ. 30 ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು. 31 ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು. 32 ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು. 33 ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು. 34 ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು. 35 ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು. 36 ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು 37 ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು. 38 ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. 39 ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು. 40 ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ? 41 ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು. 42 ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು. 43 ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. 44 ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು. 45 ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು. 46 ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು. 47 ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು. 48 ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು. 49 ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು. 50 ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು. 51 ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.) 52 ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು. 53 ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ. 54 ಸಬ್ಬತ್ತಿಗೆ ಸವಿಾಪವಾಗಿದ್ದ ಆ ದಿನವು ಸಿದ್ಧತೆಯ ದಿನವಾಗಿತ್ತು. 55 ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು. 56 ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
1 ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು. 2 ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು. 3 ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ. 4 ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು. 5 ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ? 6 ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ-- 7 ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು. 8 ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು 9 ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು. 10 ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು. 11 ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ. 12 ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು. 13 ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು. 14 ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು. 15 ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು. 16 ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ. 17 ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು. 18 ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು. 19 ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ; 20 ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು. 21 ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ; 22 ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು 23 ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು. 24 ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು. 25 ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ, 26 ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ 27 ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು. 28 ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು. 29 ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು. 30 ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು. 31 ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು. 32 ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು. 33 ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು. 34 ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು. 35 ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು. 36 ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು. 37 ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು. 38 ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ? 39 ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು. 40 ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು. 41 ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು. 42 ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು. 43 ಆತನು ತಕ್ಕೊಂಡು ಅವರ ಮುಂದೆ ತಿಂದನು. 44 ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು. 45 ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು. 46 ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ 47 ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ. 48 ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ. 49 ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು. 50 ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು. 51 ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು. 52 ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು. 53 ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
1 ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು. 2 ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು. 3 ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ. 4 ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು. 5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ. 6 ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು. 7 ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು. 8 ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು. 9 ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು. 10 ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ. 11 ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ. 12 ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು. 13 ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು. 14 ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು). 15 ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು. 16 ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು. 17 ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು. 18 ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ. 19 ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ. 20 ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು. 21 ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು. 22 ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು. 23 ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು. 24 ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು. 25 ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು. 26 ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; 27 ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. 28 ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು. 29 ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು. 30 ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು. 31 ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು. 32 ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು. 33 ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. 34 ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು. 35 ಮಾರನೆಯ ದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದರು. 36 ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು. 37 ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು. 38 ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು. 39 ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು. 40 ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು. 41 ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ). 42 42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ). 43 ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು. 44 ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು. 45 ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು. 46 ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು. 47 ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು. 48 ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು. 49 ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು. 50 ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು. 51 ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
1 ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು. 2 ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು. 3 ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು. 4 ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು. 5 ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು. 6 ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು. 7 ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು. 8 ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು. 9 ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು 10 ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು. 11 ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು. 12 ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು. 13 ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ 14 ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು; 15 ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು. 16 ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು. 17 ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು. 18 ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು. 19 ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. 20 ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. 21 ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು. 22 ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು. 23 ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು. 24 ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು. 25 ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
1 ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು. 2 ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು. 3 ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು. 4 ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು. 5 ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು. 6 ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ. 7 ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ. 8 ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು. 9 ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ 10 ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ? 11 ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ. 12 ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ? 13 ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ. 14 ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು. 15 ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು. 16 ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು. 17 ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು. 18 ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. 19 ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. 20 ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ. 21 ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು. 22 ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು. 23 ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು. 24 ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ. 25 ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು. 26 ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು. 27 ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು. 28 ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. 29 ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು. 30 ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು. 31 ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ. 32 ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. 33 ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ. 34 ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ. 35 ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ. 36 ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
1 ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು. 2 (ಆದಾಗ್ಯೂ ಬಾಪ್ತಿಸ್ಮ ಮಾಡಿಸು ತ್ತಿದ್ದಾತನು ಯೇಸು ತಾನೇ ಅಲ್ಲ, ಆದರೆ ಆತನ ಶಿಷ್ಯರು ಮಾಡಿಸುತ್ತಿದ್ದರು). 3 ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು. 4 ಆತನು ಸಮಾರ್ಯದ ಮಾರ್ಗವಾಗಿ ಹೋಗಬೇಕಾದದ್ದು ಅವಶ್ಯವಾಗಿತ್ತು. 5 ಆಗ ಯಾಕೋ ಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸವಿಾಪದಲ್ಲಿರುವ ಸುಖರ್ ಎಂಬ ಸಮಾರ್ಯದ ಪಟ್ಟಣಕ್ಕೆ ಆತನು ಬಂದನು. 6 ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು). 7 ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು. 8 (ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು). 9 ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು. 10 ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು. 11 ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು? 12 ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು. 13 ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು; 14 ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು. 15 ಆ ಸ್ತ್ರೀಯು ಆತನಿಗೆ--ಅಯ್ಯಾ, ನನಗೆ ನೀರಡಿಕೆಯಾಗದಂತೆಯೂ ನೀರು ಸೇದುವದಕ್ಕೆ ನಾನು ಇಲ್ಲಿಗೆ ಬಾರದಂತೆಯೂ ನನಗೆ ಈ ನೀರನ್ನು ಕೊಡು ಅಂದಳು. 16 ಯೇಸು ಆಕೆಗೆ--ಹೋಗಿ ನಿನ್ನ ಗಂಡನನ್ನು ಕರಕೊಂಡು ಇಲ್ಲಿಗೆ ಬಾ ಅಂದನು. 17 ಆಗ ಆ ಸ್ತ್ರೀಯು ಪ್ರತ್ಯುತ್ತರ ವಾಗಿ--ನನಗೆ ಗಂಡನಿಲ್ಲ ಅಂದಳು, ಯೇಸು ಆಕೆಗೆ--ನನಗೆ ಗಂಡನಿಲ್ಲ ಎಂದು ನೀನು ಹೇಳಿದ್ದು ಸರಿಯೇ; 18 ಯಾಕಂದರೆ ನಿನಗೆ ಐದು ಮಂದಿ ಗಂಡಂದಿರಿದ್ದರು; ಈಗ ನಿನಗಿರುವವನು ನಿನ್ನ ಗಂಡ ನಲ್ಲ; ಆ ವಿಷಯದಲ್ಲಿ ನೀನು ಹೇಳಿದ್ದು ಸತ್ಯವಾದದ್ದು ಅಂದನು. 19 ಆಗ ಆ ಸ್ತ್ರೀಯು ಆತನಿಗೆ--ಅಯ್ಯಾ, ನೀನು ಒಬ್ಬ ಪ್ರವಾದಿಯೆಂದು ನಾನು ಗ್ರಹಿಸುತ್ತೇನೆ; 20 ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು. 21 ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ. 22 ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ. 23 ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ. 24 ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು. 25 ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು. 26 ಯೇಸು ಆಕೆಗೆ--ನಿನ್ನೊಂದಿಗೆ ಮಾತನಾಡುವ ನಾನೇ ಆತನು ಅಂದನು. 27 ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿದ್ದನೆಂದು ಆಶ್ಚರ್ಯ ಪಟ್ಟರು; ಆದಾಗ್ಯೂ--ನಿನಗೆ ಏನು ಬೇಕು? ಇಲ್ಲವೆ ಆಕೆಯೊಂದಿಗೆ ಯಾಕೆ ಮಾತನಾಡುತ್ತೀ ಎಂದು ಒಬ್ಬ ನಾದರೂ ಕೇಳಲಿಲ್ಲ. 28 ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ-- 29 ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು. 30 ಆಗ ಅವರು ಪಟ್ಟಣದಿಂದ ಆತನ ಬಳಿಗೆ ಹೊರಟು ಬಂದರು. 31 ಆ ಸಮಯದಲ್ಲಿ ಆತನ ಶಿಷ್ಯರು ಆತನಿಗೆ--ಬೋಧಕನೇ, ಊಟ ಮಾಡು ಎಂದು ಬೇಡಿ ಕೊಂಡರು. 32 ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು. 33 ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು. 34 ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು. 35 ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ. 36 ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು. 37 ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ. 38 ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು. 39 ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು. 40 ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು. 41 ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು. 42 ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು. 43 ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು. 44 ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು. 45 ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು. 46 ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು. 47 ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು. 48 ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು. 49 ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು. 50 ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು. 51 ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು. 52 ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು. 53 ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು. 54 ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
1 ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು. 2 ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ. 3 ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು. 4 ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು. 5 ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು. 6 ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು. 7 ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು. 8 ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು. 9 ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು. 10 ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು. 11 ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು. 12 ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು. 13 ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು. 14 ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು. 15 ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು. 16 ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು. 17 ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು. 18 ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು. 19 ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು. 20 ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. 21 ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ. 22 ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; 23 ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. 24 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. 25 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. 26 ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. 27 ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ. 28 ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, 29 ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು. 30 ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ. 31 ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ. 32 ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು. 33 ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು. 34 ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ. 35 ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ; 36 ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ. 37 ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ. 38 ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ. 39 ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ. 40 ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ. 41 ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ. 42 ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ. 43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ. 44 ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ? 45 ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ. 46 ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು. 47 ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
1 ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು. 2 ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು. 3 ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು. 4 ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು. 5 ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು. 6 ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು. 7 ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು. 8 ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ-- 9 ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು. 10 ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು. 11 ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು. 12 ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು. 13 ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು. 14 ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು. 15 ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು. 16 ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ 17 ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು , ಯೇಸು ಅವರ ಬಳಿಗೆ ಬಂದಿರಲಿಲ್ಲ. 18 ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು. 19 ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು. 20 ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು. 21 ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು. 22 ಆತನ ಶಿಷ್ಯರು ಹತ್ತಿದ ಒಂದೇ ದೋಣಿಯ ಹೊರತು ಮತ್ತೊಂದು ಅಲ್ಲಿ ಇರಲಿಲ್ಲವೆಂದೂ ಆತನ ಶಿಷ್ಯರು ಮಾತ್ರ ಹೋದರೆಂದೂ ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಮರು ದಿನ ಸಮುದ್ರದ ಆಚೆಯಲ್ಲಿ ನಿಂತಿದ್ದ ಜನರು ನೋಡಿ ದ್ದರು. 23 (ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು). 24 ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು. 25 ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು. 26 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ. 27 ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು. 28 ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ 29 ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು. 30 ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ? 31 ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು. 32 ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ. 33 ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು. 34 ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು. 35 ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ. 36 ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು. 37 ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ. 38 ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು. 39 ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. 40 ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು. 41 ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ-- 42 ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು. 43 ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ. 44 ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. 45 ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ. 46 ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ. 47 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. 48 ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ. 49 ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು. 50 ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. 51 ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. 52 ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. 53 ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. 54 ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. 55 ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. 56 ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. 57 ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. 58 ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು. 59 ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು. 60 ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು. 61 ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ? 62 ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ? 63 ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ. 64 ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು. 65 ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು. 66 ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ. 67 ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು 68 ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ. 69 ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು. 70 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು. 71 ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
1 ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ. 2 ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು. 3 ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು; 4 ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು. 5 ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ. 6 ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ. 7 ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ. 8 ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು. 9 ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು. 10 ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು. 11 ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು. 12 ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು. 13 ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ. 14 ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು. 15 ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು. 16 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ. 17 ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು. 18 ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ. 19 ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು. 20 ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು. 21 ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ 22 ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ. 23 ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ? 24 ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು. 25 ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ? 26 ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ? 27 ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು. 28 ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ. 29 ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು. 30 ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ. 31 ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು. 32 ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು. 33 ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ. 34 ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು. 35 ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ? 36 ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು. 37 ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. 38 ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು. 39 (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.) 40 ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು. 41 ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ? 42 ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು. 43 ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು; 44 ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ. 45 ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು. 46 ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು. 47 ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ? 48 ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? 49 ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು. 50 ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.) 51 ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು. 52 ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು. 53 ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
1 ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು. 2 ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು. 3 ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ 4 ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು. 5 ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು. 6 ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು. 7 ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು. 8 ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು. 9 ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು. 10 ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು. 11 ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು. 12 ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು. 13 ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು. 14 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ. 15 ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ. 16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ. 17 ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ. 18 ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು. 19 ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು. 20 ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ. 21 ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು. 22 ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು. 23 ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ. 24 ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು. 25 ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ. 26 ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು. 27 ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ. 28 ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ. 29 ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು. 30 ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು. 31 ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ. 32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು. 33 ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು. 34 ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ. 35 ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ. 36 ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ. 37 ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ. 38 ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು. 39 ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ. 40 ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ. 41 ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು. 42 ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು. 43 ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ. 44 ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ 45 ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ. 46 ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ? 47 ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು. 48 ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು. 49 ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ. 50 ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ. 51 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು. 52 ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ; 53 ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು 54 ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ. 55 ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ. 56 ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು. 57 ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು. 58 ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು. 59 ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
1 ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು. 2 ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು; 3 ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು. 4 ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು. 5 ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು. 6 ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು; 7 ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು. 8 ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು. 9 ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು. 10 ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು 11 ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು. 12 ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು; 13 ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು. 14 ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು. 15 ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು. 16 ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ 17 ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು. 18 ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ. 19 ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು. 20 ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು. 21 ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು. 22 ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು. 23 ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು. 24 ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು. 25 ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು. 26 ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ 27 ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು. 28 ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು. 29 ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು. 30 ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ? 31 ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು. 32 ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ. 33 ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು. 34 ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. 35 ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು. 36 ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು. 37 ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು. 38 ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು. 39 ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು. 40 ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು. 41 ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
1 ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ. 2 ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ. 3 ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ. 4 ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ; 5 ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ. 6 ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ. 7 ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ. 8 ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. 9 ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ. 10 ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು. 11 ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12 ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ. 13 ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ. 14 ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ. 15 ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ. 16 ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು. 17 ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ. 18 ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು. 19 ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು. 20 ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು. 21 ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು. 22 ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು. 23 ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು; 24 ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು. 25 ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ. 26 ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ. 27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. 28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. 29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. 30 ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು. 31 ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು. 32 ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು. 33 ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು. 34 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ? 35 ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ. 36 ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ? 37 ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ. 38 ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು. 39 ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು 40 ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು. 41 ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು. 42 ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
1 ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. 2 (ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು). 3 ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು. 4 ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು. 5 ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು. 6 ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು. 7 ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು. 8 ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು. 9 ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ. 10 ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು. 11 ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು. 12 ಆಗ ಆತನ ಶಿಷ್ಯರು--ಕರ್ತನೇ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು. 13 ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು. 14 ಆಗ ಯೇಸು ಸ್ಪಷ್ಟವಾಗಿ ಅವರಿಗೆ--ಲಾಜರನು ಸತ್ತಿದ್ದಾನೆ. 15 ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು. 16 ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು. 17 ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು; 18 ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು. 19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋ ದರನ ವಿಷಯವಾಗಿ ಆದರಿಸುವದಕ್ಕೆ ಬಂದಿದ್ದರು. 20 ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು. 21 ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ. 22 ಆದರೆ ಈಗಲೂ ಸಹ ನೀನು ದೇವರಿಂದ ಏನು ಕೇಳಿಕೊಳ್ಳುತ್ತೀಯೋ ದೇವರು ಅದನ್ನು ನಿನಗೆ ಕೊಡುವನೆಂದು ನಾನು ಬಲ್ಲೆನು ಅಂದಳು. 23 ಯೇಸು ಆಕೆಗೆ--ನಿನ್ನ ಸಹೋದರನು ತಿರಿಗಿ ಎದ್ದೇಳುವನು ಎಂದು ಹೇಳಿದನು. 24 ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು. 25 ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; 26 ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ 27 ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು. 28 ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು. 29 ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು. 30 ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು. 31 ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು. 32 ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು. 33 ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ-- 34 ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು. 35 ಯೇಸು ಅತ್ತನು. 36 ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು. 37 ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು. 38 ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು. 39 ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು. 40 ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು. 41 ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ. 42 ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು. 43 ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು. 44 ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು. 45 ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು. 46 ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು. 47 ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? 48 ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. 49 ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- 50 ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. 51 ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ 52 ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು. 53 ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. 54 ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು. 55 ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು. 56 ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು. 57 ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
1 ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು. 2 ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು. 3 ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು. 4 ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು-- 5 ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು. 6 ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು. 7 ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ. 8 ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು. 9 ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು. 10 ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. 11 ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು. 12 ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ 13 ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು. 14 ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು; 15 ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು. 16 ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು. 17 ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು. 18 ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು. 19 ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು. 20 ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು. 21 ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು. 22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು. 23 ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ. 24 ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು. 25 ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. 26 ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು. 27 ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು. 28 ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು. 29 ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು. 30 ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ. 31 ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು. 32 ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು. 33 ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು. 34 ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು. 35 ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. 36 ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು. 37 ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ. 38 ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು. 39 ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- 40 ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು. 41 ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು. 42 ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ. 43 ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು. 44 ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ. 45 ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ. 46 ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ. 47 ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು. 48 ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು. 49 ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ. 50 ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
1 ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು. 2 ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು. 3 ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು 4 ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು. 5 ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು. 6 ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು. 7 ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು. 8 ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು. 9 ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು. 10 ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು. 11 ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು. 12 ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ? 13 ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು. 14 ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು. 15 ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ. 16 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ. 17 ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. 18 ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ. 19 ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ. 20 ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ. 21 ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು. 22 ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು. 23 ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು. 24 ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು. 25 ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು. 26 ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು. 27 ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು. 28 ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ. 29 ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು. 30 ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು. 31 ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ. 32 ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು. 33 ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ. 34 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. 35 ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು. 36 ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು. 37 ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು. 38 ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
1 ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. 2 ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ. 3 ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ. 4 ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು. 5 ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು. 6 ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ. 7 ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು. 8 ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು. 9 ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ? 10 ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ. 11 ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ. 12 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ. 13 ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು. 14 ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು. 15 ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ. 16 ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. 17 ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು. 18 ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು. 19 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ. 20 ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ. 21 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. 22 ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. 23 ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. 24 ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ. 25 ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ; 26 ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು. 27 ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ. 28 ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ. 29 ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ. 30 ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ. 31 ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
1 ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು. 2 ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. 3 ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. 4 ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. 5 ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. 6 ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು. 7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು. 8 ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ. 9 ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ. 10 ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ. 11 ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ. 12 ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ. 13 ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ. 14 ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ. 15 ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ. 16 ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು. 17 ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ. 18 ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. 19 ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ. 20 ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು. 21 ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು. 22 ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. 23 ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. 24 ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ. 25 ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು. 26 ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು. 27 ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
1 ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ. 2 ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ. 3 ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು. 4 ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ. 5 ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ. 6 ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ. 7 ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು. 8 ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ 9 ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ 10 ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ 11 ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು. 12 ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ; 13 ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು. 14 ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು. 15 ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು. 16 ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು. 17 ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ 18 ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು. 19 ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ? 20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು. 21 ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. 22 ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ. 23 ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. 24 ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು. 25 ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ. 26 ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ. 27 ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. 28 ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು. 29 ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ. 30 ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು. 31 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ? 32 ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ. 33 ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
1 ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು. 2 ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ. 3 ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ. 4 ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ; 5 ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು. 6 ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ. 7 ನೀನು ನನಗೆ ಕೊಟ್ಟಿರುವವುಗಳೆಲ್ಲವು ನಿನ್ನವುಗಳೇ ಎಂದು ಈಗ ಅವರು ತಿಳಿದುಕೊಂಡಿದ್ದಾರೆ. 8 ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ. 9 ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು. 10 ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ. 11 ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು. 12 ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ. 13 ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ. 14 ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ. 15 ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ. 16 ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ. 17 ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು 18 ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ. 19 ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ. 20 ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ. 21 ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ. 22 ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. 23 ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು. 24 ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ. 25 ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ. 26 ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
1 ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು. 2 ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು. 3 ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು. 4 ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು 5 ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು. 6 ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. 7 ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು. 8 ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು. 9 ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು. 10 ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು. 11 ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು. 12 ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ. 13 ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು. 14 ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವದು ಹಿತವೆಂದು ಯೆಹೂದ್ಯರಿಗೆ ಆಲೋಚನೆ ಹೇಳಿಕೊಟ್ಟ ಕಾಯಫನು ಇವನೇ. 15 ಸೀಮೋನ ಪೇತ್ರನು ಯೇಸುವನ್ನು ಹಿಂಬಾಲಿಸಿದನು; ಹಾಗೆಯೇ ಬೇರೊಬ್ಬ ಶಿಷ್ಯನೂ ಆತನನ್ನು ಹಿಂಬಾಲಿಸಿದನು; ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದದರಿಂದ ಯೇಸು ವಿನ ಸಂಗಡ ಮಹಾಯಾಜಕನ ಭವನದೊಳಗೆ ಹೋದನು. 16 ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಆ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು. 17 ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು. 18 ಆಗ ಚಳಿಯಾಗಿದ್ದದರಿಂದ ಆಳುಗಳೂ ಅಧಿಕಾರಿಗಳೂ ಇದ್ದಲುಗಳಿಂದ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು; ಪೇತ್ರನೂ ಅವರೊಂದಿಗೆ ನಿಂತು ಕಾಯಿಸಿಕೊಳ್ಳುತ್ತಿದ್ದನು. 19 ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು. 20 ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ. 21 ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು. 22 ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು. 23 ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು. 24 ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು. 25 ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು. 26 ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು. 27 ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು. 28 ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ. 29 ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ 30 ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು. 31 ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು. 32 ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು. 33 ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. 34 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೆ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿ ದ್ದಾರೋ? ಅಂದನು. 35 ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು. 36 ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು. 37 ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು 38 ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ. 39 ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು. 40 ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
1 ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು. 2 ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ-- 3 ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು. 4 ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು. 5 ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು. 6 ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು. 7 ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು. 8 ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು. 9 ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ. 10 ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು. 11 ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು. 12 ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು. 13 ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು. 14 ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು. 15 ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು. 16 ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು. 17 ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ. 18 ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು. 19 ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ. 20 ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು. 21 ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು. 22 ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು. 23 ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು. 24 ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ 25 ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು. 26 ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು. 27 ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು. 28 ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು. 29 ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು. 30 ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು. 31 ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್ದಿನವು ವಿಶೇಷವಾದ ದಿನವಾಗಿತ್ತು). 32 ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು. 33 ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ. 34 ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು. 35 ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು. 36 ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು. 37 ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ. 38 ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು 39 ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು. 40 ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು. 41 ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು. 42 ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
1 ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು. 2 ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು. 3 ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು. 4 ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು. 5 ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ. 6 ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ 7 ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು. 8 ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು. 9 ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ. 10 ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು. 11 ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ 12 ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು. 13 ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು. 14 ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ. 15 ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ 16 ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು. 17 ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು 18 ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು. 19 ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು. 20 ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21 ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು. 22 ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ; 23 ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು. 24 ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ. 25 ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ 26 ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು. 27 ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು. 28 ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು. 29 ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು. 30 ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ. 31 ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
1 ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ-- 2 ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು. 3 ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ. 4 ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ. 5 ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು. 6 ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು. 7 ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು). 8 ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು). 9 ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು. 10 ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು. 11 ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ. 12 ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ. 13 ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು. 14 ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ. 15 ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ 16 ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು 17 ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ 18 ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ 19 ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. 20 ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ 21 ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು. 22 22ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು. 23 ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು. 24 ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. 25 ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
1 ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ 2 ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು. 3 ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು. 4 ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು. 5 ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು. 6 ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು. 7 ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ. 8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು. 9 ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು. 10 ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು. 11 ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು. 12 ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು. 13 ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು. 14 ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು. 15 ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ-- 16 ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು. 17 ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು. 18 ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. 19 ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು. 20 ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ. 21 ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ 22 ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು. 23 ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು. 24 ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ, 25 ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು. 26 ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
1 ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು. 2 ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. 3 ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು. 4 ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು. 5 ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು 6 ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು. 7 ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ? 8 ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ? 9 ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, 10 ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು, 11 ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. 12 ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು. 13 ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು. 14 ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ. 15 ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ. 16 ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ-- 17 ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ. 18 ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು; 19 ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು. 20 ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು. 21 ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ. 22 ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು. 23 ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ. 24 ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು. 25 ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. 26 ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು; 27 ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. 28 ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ. 29 ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ. 30 ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು. 31 ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು; 32 ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ. 33 ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ. 34 ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ-- 35 ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ. 36 ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು. 37 ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು. 38 ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ. 39 ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು. 40 ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು. 41 ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು. 42 ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು. 43 ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು. 44 ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು. 45 ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು. 46 ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು. 47 ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
1 ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು. 2 ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು. 3 ದೇವಾ ಲಯದೊಳಕ್ಕೆ ಹೋಗುವದಕ್ಕಿದ್ದ ಪೇತ್ರ ಯೋಹಾನ ರನ್ನು ಅವನು ನೋಡಿ ಭಿಕ್ಷೆ ಬೇಡಿದನು. 4 ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು. 5 ಆಗ ಅವರಿಂದ ಏನಾದರೂ ತನಗೆ ಸಿಕ್ಕೀತೆಂದು ನಿರೀಕ್ಷಿಸಿ ಅವನು ಅವರ ಮೇಲೆ ಲಕ್ಷ್ಯವಿಟ್ಟನು. 6 ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ 7 ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು. 8 ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು. 9 ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ 10 ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು. 11 ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು. 12 ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ? 13 ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ. 14 ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ 15 ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ. 16 ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು. 17 ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು. 18 ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು. 19 ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು. 20 ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು. 21 ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು. 22 ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು; 23 ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು. 24 ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು. 25 ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ. 26 ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
1 ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು; 2 ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು. 3 ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು. 4 ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು. 5 ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ 6 ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು. 7 ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು. 8 ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ, 9 ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ 10 ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ. 11 ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು. 12 ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು. 13 ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು. 14 ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು. 15 ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ-- 16 ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು. 17 ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು 18 ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು. 19 ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ. 20 ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು. 21 ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು. 22 ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು. 23 ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು. 24 ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ; 25 ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? 26 ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. 27 ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು 28 ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು. 29 ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ 30 ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು. 31 ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು. 32 ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು. 33 ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು. 34 ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು 35 ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು. 36 ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು) 37 ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
1 ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ 2 ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು. 3 ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ? 4 ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು. 5 ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು. 6 ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು. 7 ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು. 8 ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು. 9 ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು. 10 ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು. 11 ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು. 12 ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.) 13 ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು. 14 ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು. 15 ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು. 16 ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು. 17 ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು 18 ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು. 19 ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು-- 20 ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು. 21 ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು 22 ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ-- 23 ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು. 24 ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು. 25 ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು. 26 ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು. 27 ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು-- 28 ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು. 29 ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು. 30 ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು. 31 ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ. 32 ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು. 33 ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು. 34 ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ-- 35 ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ. 36 ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು. 37 ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು. 38 ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು. 39 ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು. 40 ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು. 41 ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು. 42 ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
1 ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು. 2 ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ. 3 ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ. 4 ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು. 5 ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು 6 ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು. 7 ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು. 8 ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು. 9 ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು. 10 ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು. 11 ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು. 12 ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ 13 ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. 14 ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು. 15 ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
1 ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು. 2 ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ-- 3 ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು. 4 ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು. 5 ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು. 6 ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು. 7 ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ. 8 ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು. 9 ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು 10 ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು. 11 ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ. 12 ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು. 13 ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು. 14 ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು. 15 ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು. 16 ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು. 17 ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ 18 ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು. 19 ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು. 20 ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು. 21 ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು. 22 ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು. 23 ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು. 24 ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು. 25 ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ. 26 ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು. 27 ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? 28 ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು. 29 ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು. 30 ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು. 31 ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು. 32 ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು. 33 ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ. 34 ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು. 35 ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು. 36 ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು. 37 ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ. 38 ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು. 39 ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು 40 ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು. 41 ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು. 42 ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ 43 ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು. 44 ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು. 45 ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು. 46 ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು. 47 ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು. 48 ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ-- 49 ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು? 50 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ. 51 ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. 52 ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ. 53 ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು. 54 ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು. 55 ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು-- 56 ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು. 57 ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು 58 ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು. 59 ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ, 60 ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
1 ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು. 2 ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. 3 ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು. 4 ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು. 5 ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು. 6 ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು. 7 ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು. 8 ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು. 9 ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು. 10 ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು. 11 ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು. 12 ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು. 13 ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು. 14 ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು. 15 ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು. 16 (ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು). 17 ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು. 18 ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು-- 19 ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು. 20 ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ. 21 ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ. 22 ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು. 23 ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು. 24 ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು. 25 ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು. 26 ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು. 27 ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು 28 ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು; 29 ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು. 30 ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು 31 ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು. 32 ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ. 33 ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ. 34 ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು. 35 ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು. 36 ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು. 37 ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ 38 ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು. 39 ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು. 40 ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
1 ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ 2 ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು. 3 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು. 4 ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. 5 ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು. 6 ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು. 7 ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು. 8 ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು; 9 ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. 10 ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು. 11 ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ. 12 ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು. 13 ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; 14 ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು. 15 ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ. 16 ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು. 17 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು. 18 ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು. 19 ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು. 20 ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು. 21 ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು. 22 ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು. 23 ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು. 24 ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು; 25 ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು. 26 ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು. 27 ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು. 28 ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು. 29 ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು. 30 ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. 31 ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು. 32 ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು. 33 ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. 34 ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು. 35 ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು. 36 ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು. 37 ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು. 38 ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು. 39 ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ 40 ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು. 41 ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು. 42 ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು. 43 ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
1 ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು. 2 ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು. 3 ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು. 4 ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು. 5 ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು. 6 ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು. 7 ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು 8 ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು. 9 ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು. 10 ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ 11 ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು. 12 ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು. 13 ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು. 14 ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು. 15 ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು. 16 ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು. 17 ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು 18 ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು. 19 ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ; 20 ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು. 21 ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು 22 ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ 23 ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. 24 ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು. 25 ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. 26 ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ 27 ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು 28 ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ 29 ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು. 30 ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು-- 31 ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು. 32 ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು. 33 ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು. 34 ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ. 35 ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ. 36 ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.) 37 ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ 38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು. 39 ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು; 40 ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು. 41 ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು. 42 ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು. 43 ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು. 44 ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು. 45 ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು. 46 ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು-- 47 ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ-- 48 ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
1 ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು. 2 ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ-- 3 ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು. 4 ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ-- 5 ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು. 6 ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು. 7 ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು. 8 ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು; 9 ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು. 10 ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು. 11 ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು. 12 ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು. 13 ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು; 14 ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು. 15 ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು. 16 ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು. 17 ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು. 18 ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು. 19 ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು. 20 ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು. 21 ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು. 22 ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. 23 ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು. 24 ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು. 25 ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ 26 ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು. 27 ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು. 28 ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು. 29 ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು. 30 ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
1 ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ 2 ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. 3 ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು). 4 ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು. 5 ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು. 6 ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು. 7 ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು. 8 ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು. 9 ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು. 10 ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು. 11 ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು. 12 ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು. 13 ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು. 14 ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು. 15 ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು. 16 ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು. 17 ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು. 18 ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು. 19 ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು. 20 ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ 21 ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು. 22 ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು. 23 ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು. 24 ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು. 25 ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
1 ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ. 2 ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. 3 ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು. 4 ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು. 5 ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು. 6 ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು. 7 ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು. 8 ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ). 9 ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ-- 10 ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ? 11 ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು. 12 ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು. 13 ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು; 14 ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು. 15 ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು. 16 ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ. 17 ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು. 18 ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು 19 ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು. 20 ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು. 21 ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು. 22 ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ 23 ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ. 24 ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. 25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. 26 ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ. 27 ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು. 28 ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. 29 ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು. 30 ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. 31 ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. 32 ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ. 33 ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ. 34 ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು. 35 ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ. 36 ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು. 37 ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ. 38 ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ 39 ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ. 40 ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ. 41 ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ. 42 ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು. 43 ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು. 44 ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು. 45 ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು. 46 ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ. 47 ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ. 48 ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. 49 ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು. 50 ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು. 51 ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು. 52 ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
1 ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು. 2 ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು. 3 ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು. 4 ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು. 5 ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ 6 ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ 7 ಅಲ್ಲಿ ಸುವಾರ್ತೆಯನ್ನು ಸಾರಿದರು. 8 ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು. 9 ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು-- 10 ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು. 11 ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು. 12 ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು; 13 ಆಗ ಅವರ ಪಟ್ಟಣದ ಎದುರಿನಲ್ಲಿದ್ದ ೃಹಸ್ಪತಿಯ ಯಾಜಕನು ಎತ್ತುಗಳನ್ನೂ ಹೂವಿನಹಾರಗಳನ್ನೂ ದ್ವಾರಗಳ ಬಳಿಗೆ ತಂದು ಜನರೊಂದಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು. 14 ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ-- 15 ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ 16 ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು; 17 ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು. 18 ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು. 19 ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು. 20 ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು. 21 ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು. 22 ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು. 23 ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು. 24 ತರುವಾಯ ಪಿಸಿದ್ಯವನ್ನು ಹಾದು ಪಂಫುಲ್ಯಕ್ಕೆ ಬಂದು 25 ಪೆರ್ಗೆಯಲ್ಲಿ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯಕ್ಕೆ ಇಳಿದು 26 ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು. 27 ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು. 28 ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
1 ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು. 2 ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು. 3 ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು. 4 ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು. 5 ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು. 6 ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ 7 ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ. 8 ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು. 9 ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು. 10 ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ? 11 ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು. 12 ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು. 13 ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ; 14 ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ. 15 ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ-- 16 ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು. 17 ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ. 18 ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ. 19 ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ. 20 ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು. 21 ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು. 22 ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ 23 ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ; 24 ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ 25 ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ 26 ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು. 27 ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ. 28 ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು. 29 ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ. 30 ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು. 31 ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು. 32 ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು. 33 ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು. 34 ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು. 35 ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು. 36 ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು. 37 ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು. 38 ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು. 39 ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು. 40 ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು. 41 ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
1 ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು. 2 ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು. 3 ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು. 4 ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು. 5 ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು. 6 ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ 7 ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ. 8 ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು. 9 ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು. 10 ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು. 11 ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು. 12 ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು. 13 ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು. 14 ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ 15 ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು. 16 ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು. 17 ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು. 18 ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು. 19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು. 20 ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ. 21 ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು. 22 ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು. 23 ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು. 24 ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. 25 ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು. 26 ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು. 27 ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು. 28 ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು. 29 ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು. 30 ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು 31 ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು. 32 ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು. 33 ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು. 34 ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು. 35 ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು. 36 ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು. 37 ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ 38 ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು. 39 ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು. 40 ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
1 ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು. 2 ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ 3 ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು. 4 ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು. 5 ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು. 6 ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ; 7 ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು. 8 ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು 9 ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು. 10 ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು. 11 ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು. 12 ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು. 13 ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು. 14 ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು. 15 ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು. 16 ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು. 17 ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು. 18 ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ 19 ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ? 20 ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು. 21 (ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ). 22 ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ. 23 ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ. 24 ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ. 25 ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ; 26 ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು. 27 ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು. 28 ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ. 29 ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು. 30 ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ. 31 ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು. 32 ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು. 33 ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು. 34 ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
1 ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು 2 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ 3 ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು. 4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು. 5 ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು. 6 ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ 7 ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು. 8 ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು. 9 ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. 10 ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು. 11 ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು. 12 ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು-- 13 ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು. 14 ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ. 15 ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ 16 ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು. 17 ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ. 18 ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ 19 ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು. 20 ಅವರು ಅವ ನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿ ಕೊಂಡಾಗ ಅವನು ಒಪ್ಪದೆ-- 21 ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು. 22 ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು. 23 ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು. 24 ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು. 25 ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು. 26 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು. 27 ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು; 28 ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
1 ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು. 2 ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು. 3 ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು. 4 ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು. 5 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು. 6 ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು. 7 ಅವರು ಸುಮಾರು ಹನ್ನೆರಡು ಮಂದಿ ಗಂಡಸರು. 8 ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು. 9 ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು. 10 ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು. 11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ 12 ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು. 13 ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು. 14 ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು. 15 ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು. 16 ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು. 17 ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು. 18 ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು. 19 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು. 20 ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು. 21 ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು. 22 ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು. 23 ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು. 24 ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು. 25 ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ. 26 ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ 27 ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು. 28 ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು. 29 ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು. 30 ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ. 31 ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು. 32 ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ. 33 ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು. 34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು. 35 ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು? 36 ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು. 37 ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ. 38 ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ. 39 ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು. 40 ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ 41 ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
1 ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು. 2 ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು. 3 ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು. 4 ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು. 5 ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು. 6 ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು. 7 ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು. 8 ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು. 9 ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು. 10 ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು. 11 ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು. 12 ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು. 13 ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು. 14 ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು. 15 ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು. 16 ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು. 17 ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ-- 18 ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ. 19 ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು. 20 ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ 21 ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು. 22 ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ. 23 ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು. 24 ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ 25 ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು. 26 ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು. 27 ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ. 28 ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. 29 ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ. 30 ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು. 31 ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ. 32 ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. 33 ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ. 34 ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ. 35 ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ. 36 ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು. 37 ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. 38 ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
1 ಇದಾದ ಮೇಲೆ ನಾವು ಅವರನ್ನು ಬಿಟ್ಟು ಸಮುದ್ರಪ್ರಯಾಣವಾಗಿ ನೆಟ್ಟಗೆ ಕೋಸ್ಗೆ ಬಂದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಸೇರಿದೆವು. 2 ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಅದನ್ನು ಹತ್ತಿ ಪ್ರಯಾಣವನ್ನು ಸಾಗಿಸಿದೆವು. 3 ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು. 4 ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು. 5 ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು. 6 ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು. 7 ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು. 8 ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು. 9 ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು. 10 ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು. 11 ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ 12 ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು. 13 ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು. 14 ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು. 15 ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು. 16 ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು. 17 ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು. 18 ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು. 19 ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು. 20 ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ. 21 ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ. 22 ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು. 23 ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ. 24 ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ 25 ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು. 26 ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು. 27 ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು-- 28 ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ 29 (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು). 30 ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು. 31 ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು. 32 ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು. 33 ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು. 34 ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು. 35 ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು. 36 ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು. 37 ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್ ಮಾತನಾಡ ಬಲ್ಲೆಯಾ? 38 ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು. 39 ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು. 40 ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
1 ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ. 2 (ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು). ಆಗ ಅವನು-- 3 ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ 4 ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು. 5 ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು. 6 ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು. 7 ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು. 8 ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು. 9 ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ. 10 ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು. 11 ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು. 12 ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು. 13 ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು. 14 ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ. 15 ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ. 16 ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು. 17 ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ-- 18 ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು. 19 ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ; 20 ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು. 21 ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು. 22 ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು. 23 ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ 24 ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು; 25 ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು. 26 ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು. 27 ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು. 28 ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು. 29 ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್ನವನೆಂದು ತಿಳಿದು ಭಯಪಟ್ಟನು. 30 ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
1 ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು. 2 ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು. 3 ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು. 4 ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು. 5 ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು. 6 ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ 7 ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು. 8 ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ. 9 ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು. 10 ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು. 11 ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು. 12 ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. 13 ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. 14 ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. 15 ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ 16 ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು. 17 ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು. 18 ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು. 19 ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು. 20 ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ. 21 ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ 22 ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು. 23 ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ, 24 ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು. 25 ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು:- 26 ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ. 27 ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು. 28 ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು. 29 ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು. 30 ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ 31 ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು. 32 ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು. 33 ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು. 34 ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು-- 35 ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
1 ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು. 2 ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ 3 ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ. 4 ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. 5 ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು. 6 ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು. 7 ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ, 8 ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು. 9 ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು. 10 ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ; 11 ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು. 12 ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ. 13 ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು. 14 ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. 15 ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ. 16 ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ. 17 ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು. 18 ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು. 19 ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು. 20 ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ. 21 ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು. 22 ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು. 23 ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು. 24 ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು. 25 ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು. 26 ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು. 27 ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
1 ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು. 2 ಆಗ ಮಹಾ ಯಾಜಕನೂ ಯೆಹೂದ್ಯರಲ್ಲಿ ಮುಖ್ಯಸ್ಥರೂ ಪೌಲನಿಗೆ ವಿರೋಧವಾಗಿ ಅವನಿಗೆ ಫಿರಿಯಾದಿ ಹೇಳಿದರು. 3 ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು. 4 ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು. 5 ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು. 6 ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು. 7 ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು. 8 ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು. 9 ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು. 10 ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ. 11 ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ 12 ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು. 13 ಕೆಲವು ದಿವಸಗಳಾದ ಮೇಲೆ ಅರಸನಾದ ಅಗ್ರಿಪ್ಪನೂ ಬೆರ್ನಿಕೆಯೂ ಫೆಸ್ತನನ್ನು ವಂದಿಸುವದಕ್ಕಾಗಿ ಕೈಸರೈಯಕ್ಕೆ ಬಂದರು. 14 ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ. 15 ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು. 16 ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್ನವರ 17 ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು. 18 ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ. 19 ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು. 20 ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು. 21 ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು. 22 ಆಗ ಅಗ್ರಿಪ್ಪನು ಫೆಸ್ತನಿಗೆ--ಆ ಮನುಷ್ಯನು ಹೇಳುವದನ್ನು ಕೇಳುವದಕ್ಕೆ ನಾನು ಸಹ ಇಷ್ಟಪಡುತ್ತೇನೆ ಎಂದು ಹೇಳಿದನು. ಅದಕ್ಕೆ ಅವನು--ಅವನು ಹೇಳುವದನ್ನು ನಾಳೆ ನೀನು ಕೇಳುವಿ ಅಂದನು. 23 ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು. 24 ಆಗ ಫೆಸ್ತನು--ಅರಸನಾದ ಅಗ್ರಿಪ್ಪನೇ, ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ, ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡು 25 ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ. 26 ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ. 27 ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
1 ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ-- 2 ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ. 3 ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. 4 ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ. 5 ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ. 6 ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ. 7 ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ. 8 ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ? 9 ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು. 10 ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. 11 ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು. 12 ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು. 13 ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು. 14 ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು. 15 ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು. 16 ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ 17 ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ 18 ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು 19 ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ. 20 ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು. 21 ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು. 22 ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ. 23 ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು. 24 ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು. 25 ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ. 26 ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ. 27 ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು. 28 ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು. 29 ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು. 30 ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು. 31 ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. 32 ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
1 ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು. 2 ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು. 3 ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು. 4 ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು. 5 ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು. 6 ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು. 7 ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು; 8 ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ. 9 ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ-- 10 ಅಯ್ಯಗಳಿರಾ, ಈ ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ. 11 ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು. 12 ಆ ರೇವು ಚಳಿಗಾಲವನ್ನು ಕಳೆಯುವದಕ್ಕೆ ಅನುಕೂಲ ವಲ್ಲದ್ದರಿಂದ ಅಲ್ಲಿಂದಲೂ ಹೊರಟು ಫೊಯಿನಿಕೆಗೆ ಸೇರಿ ಅಲ್ಲಿ ಚಳಿಗಾಲವನ್ನು ಕಳೆಯುವದು ಸಾಧ್ಯವಾಗ ಬಹುದು ಎಂದು ಅನೇಕರು ಸಲಹೆಕೊಟ್ಟರು; ಇದು ಕ್ರೇತದ ಒಂದು ರೇವು ಆಗಿದ್ದು ಈಶಾನ್ಯ ದಿಕ್ಕಿಗೂ ಅಗ್ನೇಯ ದಿಕ್ಕಿಗೂ ಅಭಿಮುಖವಾಗಿ 13 ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು. 14 ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು. 15 ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು 16 ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು. 17 ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು. 18 ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು; 19 ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು. 20 ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು. 21 ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ. 22 ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ. 23 ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು-- 24 ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು. 25 ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ. 26 ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು. 27 ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು; 28 ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು. 29 ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು. 30 ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು: 31 ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು. 32 ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು. 33 ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ. 34 ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು. 35 ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು. 36 ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು. 37 ಎಲ್ಲರೂ ಸೇರಿ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು. 38 ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು. 39 ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು. 40 ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು. 41 ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು. 42 ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು. 43 ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂ 44 ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
1 ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು. 2 ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು. 3 ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು. 4 ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. 5 ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ. 6 ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ 7 ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು. 8 ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು. 9 ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು. 10 ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು. 11 ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು. 12 ತರುವಾಯ ಸುರಕೂಸಿಗೆ ಸೇರಿ ನಾವು ಅಲ್ಲಿ ಮೂರು ದಿವಸಗಳು ಇದ್ದೆವು. 13 ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು. 14 ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್ ಕಡೆಗೆ ಹೊರಟೆವು. 15 ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು. 16 ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು. 17 ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ 18 ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು. 19 ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ. 20 ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು. 21 ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ. 22 ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು. 23 ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು. 24 ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು. 25 ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ-- 26 ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; 27 ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ 28 ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು. 29 ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು. 30 ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು. 31 ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
1 ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ. 2 (ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು). 3 ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ; 4 ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು; 5 ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ. 6 ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ. 7 ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ. 8 ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ. 9 ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ. 10 ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ. 11 ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ. 12 ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು. 13 ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ. 14 ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ. 15 ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ. 16 ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ. 17 ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು. 18 ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ. 19 ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ. 20 ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ. 21 ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. 22 ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; 23 ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. 24 ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು; 25 ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್. 26 ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು. 27 ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು. 28 ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು. 29 ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ 30 ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ 31 ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು. 32 ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
1 ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. 2 ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು. 3 ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ? 4 ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? 5 ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. 6 ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು. 7 ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ 8 ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ 9 ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ 10 ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು. 11 ದೇವರಲ್ಲಿ ಪಕ್ಷಪಾತವಿಲ್ಲ. 12 ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು. 13 (ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು. 14 ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ. 15 ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ). 16 ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು. 17 ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು 18 ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ; 19 ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ 20 ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ. 21 ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ? 22 ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? 23 ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ? 24 ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ. 25 ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ. 26 ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ? 27 ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ? 28 ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ. 29 ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
1 ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು? 2 ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು. 3 ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ? 4 ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ. 5 ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ). 6 ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು? 7 ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು? 8 (ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ. 9 ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ. 10 ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; 11 ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ. 12 ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. 13 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ. 14 ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ. 15 ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ. 16 ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. 17 ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ; 18 ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ. 19 ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. 20 ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. 21 ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. 22 ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ; 23 ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ. 24 ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು. 25 ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ 26 ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು. 27 ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ. 28 ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ. 29 ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; 30 ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ. 31 ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
1 ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು? 2 ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ. 3 ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು. 4 ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ. 5 ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು. 6 ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. 7 ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು; 8 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು. 9 ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ. 10 ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು. 11 ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು. 12 ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ. 13 ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು. 14 ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು. 15 ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ; 16 ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ 17 (ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು. 18 ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು. 19 ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ. 20 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. 21 ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು. 22 ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು. 23 ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ 24 ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ. 25 ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
1 ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ. 2 ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ. 3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ 4 ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. 5 ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ. 6 ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. 7 ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. 8 ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ. 9 ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ. 10 ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ. 11 ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ. 12 ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು. 13 (ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ. 14 ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ. 15 ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ. 16 ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ. 17 ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ). 18 ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು. 19 ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು. 20 ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು. 21 ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
1 ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ? 2 ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ? 3 ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? 4 ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. 5 ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು. 6 ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ. 7 ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ. 8 ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ. 9 ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ. 10 ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ. 11 ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ. 12 ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ; 13 ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ. 14 ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ. 15 ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ. 16 ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ. 17 ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ. 18 ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ. 19 ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ. 20 ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ. 21 ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ. 22 ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ. 23 ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
1 ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ? 2 ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ. 3 ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ. 4 ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ. 5 ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು. 6 ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ. 7 ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ. 8 ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ. 9 ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು. 10 ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು. 11 ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು; 12 ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ. 13 ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು. 14 ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ. 15 ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ. 16 ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು. 17 ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ. 18 ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು. 19 ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. 20 ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. 21 ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ. 22 ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ. 23 ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ. 24 ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು? 25 ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
1 ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ. 2 ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು. 3 ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು. 4 ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು. 5 ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. 6 ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ. 7 ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. 8 ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು. 9 ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ. 10 ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ. 11 ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು. 12 ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ. 13 ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ. 14 ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ. 15 ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. 16 ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. 17 ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು. 18 ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ. 19 ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ. 20 ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ. 21 ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು. 22 ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು. 23 ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ. 24 ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ? 25 ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ. 26 ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ. 27 ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ. 28 ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು. 29 ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. 30 ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು. 31 ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು? 32 ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ? 33 ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. 34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ; 35 ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? 36 ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. 37 ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ. 38 ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿ 39 ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
1 ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ. 2 ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು. 3 ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು. 4 ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು. 5 ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್. 6 ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ; 7 ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ. 8 ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ. 9 ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ. 10 ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ 11 (ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ) 12 ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ. 13 ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ. 14 ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ. 15 ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ. 16 ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು. 17 ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ. 18 ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು. 19 ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ. 20 ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ? 21 ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? 22 ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು 23 ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ 24 ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು? 25 ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ. 26 ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು. 27 ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ. 28 ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು. 29 ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು. 30 ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು. 31 ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ. 32 ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ. 33 ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
1 ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ; 2 ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ. 3 ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. 4 ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ. 5 ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ. 6 ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು? 7 ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ. 8 ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ. 9 ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. 10 ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ. 11 ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ. 12 ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ. 13 ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು. 14 ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? 15 ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ. 16 ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ. 17 ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ. 18 ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು. 19 ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ. 20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ. 21 ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
1 ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. 2 ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ-- 3 ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ? 4 ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. 5 ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. 6 ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. 7 ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು. 8 (ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ. 9 ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ. 10 ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ. 11 ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು. 12 ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ? 13 ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ. 14 ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು. 15 ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ. 16 ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ. 17 ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ. 18 ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ. 19 ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ. 20 ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು; 21 ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ. 22 ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ. 23 ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ. 24 ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ. 25 ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ 26 ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು. 27 ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು. 28 ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ. 29 ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ. 30 ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ 31 ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ. 32 ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ. 33 ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ! 34 ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು? 35 ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು? 36 ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
1 ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ. 2 ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ. 3 ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ. 4 ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ 5 ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ. 6 ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. 7 ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. 8 ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ. 9 ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ. 10 ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ. 11 ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ. 12 ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ. 13 ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ. 14 ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ. 15 ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ. 16 ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ. 17 ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ. 18 ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ. 19 ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. 20 ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು. 21 ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
1 ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು. 2 ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು. 3 ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. 4 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ. 5 ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ. 6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ. 7 ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ. 8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ. 9 ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ. 10 ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ. 11 ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು. 12 ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. 13 ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ. 14 ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
1 ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ. 2 ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ; 3 ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ. 4 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ. 5 ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ. 6 ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ 7 ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ. 8 ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ. 9 ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು. 10 ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. 11 ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ. 12 ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು. 13 ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ. 14 ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ. 15 ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು. 16 ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು. 17 ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ. 18 ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ. 19 ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ. 20 ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. 21 ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. 22 ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು. 23 ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
1 ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು. 2 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ. 3 ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ. 4 ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು. 5 ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ. 6 ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ. 7 ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ. 8 ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ. 9 ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. 10 ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ. 11 ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ. 12 ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು. 13 ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ. 14 ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು. 15 ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ; 16 ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು. 17 ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ. 18 ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. 19 ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ. 20 ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ. 21 ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ. 22 ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು. 23 ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ 24 ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ 25 ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ. 26 ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ. 27 ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ. 28 ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು. 29 ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು. 30 ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. 31 ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ 32 ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ. 33 ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
1 ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ. 2 ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ. 3 ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. 4 ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ. 5 ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ. 6 ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ. 7 ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು. 8 ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ. 9 ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. 10 ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. 11 ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು. 12 ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ. 13 ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು. 14 ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು. 15 ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು. 16 ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ. 17 ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. 18 ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ. 19 ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ. 20 ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್. 21 ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. 22 ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. 23 ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. 24 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್. 25 ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ 26 ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ. 27 ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
1 ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯ ಲ್ಪಟ್ಟ ಪೌಲನೂ ನಮ್ಮ ಸಹೋದರನಾದ ಸೊಸ್ಥೆ ನನೂ 2 ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ 3 ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ. 4 ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ. 5 ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ. 6 ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು. 7 ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ. 8 ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು. 9 ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ. 10 ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. 11 ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು. 12 ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. 13 ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ? 14 ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. 15 ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು. 16 ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು. 17 ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು. 18 ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ. 19 ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. 20 ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ? 21 ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು. 22 ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; 23 ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. 24 ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ. 25 ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ. 26 ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. 27 ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; 28 ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. 29 ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ. 30 ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ. 31 ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
1 ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ. 2 ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು. 3 ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು. 4 ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. 5 ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು. 6 ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ. 7 ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು. 8 ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ. 9 ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ. 10 ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ. 11 ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ. 12 ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು. 13 ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ. 14 ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. 15 ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ. 16 ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
1 ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು. 2 ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ; 3 ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ? 4 ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ? 5 ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. 6 ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. 7 ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು. 8 ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು. 9 ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ. 10 ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು. 11 ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. 12 ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ 13 ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು. 14 ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು; 15 ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು. 16 ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? 17 ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ. 18 ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. 19 ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ 20 ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ; 21 ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು; 22 ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ; 23 ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
1 ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ. 2 ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ. 3 ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ. 4 ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ. 5 ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು. 6 ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು. 7 ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ? 8 ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು. 9 ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು. 10 ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು. 11 ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ 12 ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ 13 ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ. 14 ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. 15 ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು. 16 ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 17 ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು 18 ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ. 19 ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು. 20 ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ. 21 ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
1 ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ. 2 ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ. 3 ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ. 4 ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ 5 ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ. 6 ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ? 7 ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. 8 ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ. 9 ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು. 10 ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು. 11 ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ. 12 ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ? 13 ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
1 ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ? 2 ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ? 3 ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ? 4 ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ. 5 ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ? 6 ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ. 7 ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು? 8 ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ. 9 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು 10 ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. 11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ. 12 ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ. 13 ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ. 14 ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು. 15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು. 16 ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ. 17 ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ. 18 ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ. 19 ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ; 20 ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
1 ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು. 2 ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ. 3 ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ. 4 ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು. 5 ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ. 6 ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ. 7 ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ. 8 ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು; 9 ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ. 10 ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು. 11 ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು. 12 ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು. 13 ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು. 14 ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ. 15 ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ. 16 ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? 17 ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ. 18 ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು. 19 ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ. 20 ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು. 21 ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ. 22 ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು. 23 ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ. 24 ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ. 25 ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ. 26 ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ. 27 ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ. 28 ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ. 29 ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ 30 ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ 31 ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ. 32 ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. 33 ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ. 34 ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು 35 ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ. 36 ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ. 37 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು. 38 ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ. 39 ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು. 40 ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
1 ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ. 2 ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ. 3 ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ. 4 ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು. 5 ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.) 6 ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು. 7 ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ. 8 ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ. 9 ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ. 10 ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ? 11 ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? 12 ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ. 13 ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
1 ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ? 2 ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ? 3 ನನ್ನನ್ನು ವಿಚಾರಿಸು ವವರಿಗೆ ಇದೇ ನನ್ನ ಉತ್ತರ. 4 ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ? 5 ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ? 6 ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ? 7 ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ? 8 ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ? 9 ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? 10 ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು. 11 ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ? 12 ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ. 13 ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? 14 ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು. 15 ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು. 16 ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ! 17 ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ. 18 ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ. 19 ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ. 20 ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ 21 (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. 22 ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ. 23 ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ. 24 ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ. 25 ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ. 26 ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ. 27 ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
1 ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು; 2 ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು; 3 ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು; 4 ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ. 5 ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು. 6 ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ. 7 ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ. 8 ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ. 9 ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು. 10 ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ. 11 ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ. 12 ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ. 13 ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ 14 ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ. 15 ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ. 16 ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ? 17 ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ. 18 ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ? 19 ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ? 20 ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ. 21 ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ. 22 ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು? 23 ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ. 24 ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ. 25 ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ. 26 ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ? 27 ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ. 28 ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ? 29 ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು? 30 ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು? 31 ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ. 32 ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ. 33 ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
1 ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ. 2 ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ. 3 ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ. 4 ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ. 5 ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ. 6 ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ. 7 ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ. 8 ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು. 9 ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು. 10 ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು. 11 ಆದರೂ ಕರ್ತನಲ್ಲಿ ಸ್ತ್ರೀಯಿಲ್ಲದೆ ಪುರುಷನೂ ಪುರುಷನಿಲ್ಲದೆ ಸ್ತ್ರೀಯೂ ಇಲ್ಲ. 12 ಸ್ತ್ರೀಯು ಪುರುಷನಿಂದ ಹೇಗೆ ಉತ್ಪತ್ತಿ ಯಾದಳೋ ಹಾಗೆಯೇ ಪುರುಷನೂ ಸ್ತ್ರೀ ಯಿಂದ ಉತ್ಪತ್ತಿಯಾದನು. ಸಮಸ್ತಕ್ಕೂ ದೇವರೇ ಮೂಲ ಕಾರಣನು. 13 ನಿಮ್ಮೊಳಗೆ ನೀವೇ ತೀರ್ಪು ಮಾಡಿ ಕೊಳ್ಳಿರಿ; ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ? 14 ಪುರುಷನು ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನ ಕರವಾಗಿದೆಯೆಂದು ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ? 15 ಆದರೆ ಸ್ತ್ರೀಯು ಕೂದಲು ಬೆಳೆಸಿಕೊಂಡರೆ ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವ ವಾಗಿದೆ; 16 ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ. 17 ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ. 18 ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ. 19 ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ. 20 ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ. 21 ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ. 22 ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ. 23 ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು 24 ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. 25 ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. 26 ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ. 27 ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು. 28 ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ. 29 ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು. 30 ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ. 31 ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ. 32 ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ. 33 ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ. 34 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
1 ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ. 2 ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ. 3 ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು. 4 ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; 5 ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; 6 ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. 7 ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. 8 ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, 9 ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, 10 ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. 11 ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ. 12 ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ. 13 ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ. 14 ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ. 15 ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? 16 ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? 17 ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ? 18 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ. 19 ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು? 20 ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ. 21 ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ. 22 ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ. 23 ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ. 24 ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ. 25 ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ. 26 ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. 27 ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ. 28 ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ 29 ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? 30 ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ? 31 ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
1 ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ. 2 ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ. 3 ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ. 4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, 5 ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. 6 ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. 7 ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ. 8 ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು. 9 ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. 10 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು. 11 ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು. 12 ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ. 13 ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
1 ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ. 2 ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ. 3 ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ. 4 ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ. 5 ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ. 6 ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ? 7 ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ? 8 ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು? 9 ಹಾಗೆಯೇ ನೀವು ಸುಲಭವಾಗಿ ತಿಳಿಯಬಹುದಾದ ಮಾತುಗಳನ್ನಾಡದೆ ಹೋದರೆ ಮಾತನಾಡಿದ್ದು ಏನೆಂದು ಹೇಗೆ ತಿಳಿದೀತು? ನೀವು ಗಾಳಿಯಲ್ಲಿ ಮಾತನಾಡಿದ ಹಾಗಿರುವದಷ್ಟೆ. 10 ಲೋಕದಲ್ಲಿ ಅನೇಕ ವಿಧವಾದ ಸ್ವರಗಳು ಇದ್ದರೂ ಇರಬಹುದು; ಆದರೆ ಅವುಗಳಲ್ಲಿ ಅರ್ಥವಿಲ್ಲದ್ದು ಒಂದಾದರೂ ಇಲ್ಲ. 11 ಆದದರಿಂದ ಭಾಷೆಯ ಅರ್ಥವು ನನಗೆ ಗೊತ್ತಿಲ್ಲ ದಿದ್ದರೆ ಮಾತನಾಡುವವನಿಗೆ ನಾನು ಅನ್ಯದೇಶ ದವನಂತಿರುವೆನು; ಮಾತನಾಡುವವನು ನನಗೆ ಅನ್ಯ ದೇಶದವನಂತಿರುವನು. 12 ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ. 13 ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ. 14 ಅನ್ಯಭಾಷೆಯಲ್ಲಿ ನಾನು ಪ್ರಾರ್ಥಿಸಿದರೆ ನನ್ನ ಆತ್ಮವು ಪ್ರಾರ್ಥಿಸುವದು; ಆದರೆ ನನ್ನ ತಿಳುವಳಿಕೆಯು ನಿಷ್ಪಲವಾಗಿರುವದು. 15 ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು. 16 ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ? 17 ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ. 18 ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ. 19 ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು. 20 ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು. 21 ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ. 22 ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ. 23 ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ? 24 ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ. 25 ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು. 26 ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ. 27 ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ; 28 ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ. 29 ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ. 30 ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ. 31 ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು. 32 ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ. 33 ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ. 34 ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ. 35 ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ. 36 ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ? 37 ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ. 38 ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ. 39 ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ. 40 ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
1 ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ. 2 ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ. 3 ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. 4 ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು. 5 ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು. 6 ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ. 7 ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು. 8 ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು. 9 ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ. 10 ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ. 11 ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ. 12 ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ? 13 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ. 14 ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು. 15 ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು. 16 ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ. 17 ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. 18 ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು. 19 ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ. 20 ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು. 21 ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು. 22 ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು. 23 ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು. 24 ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು. 25 ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ. 26 ನಾಶವಾಗಲಿರುವ ಕಡೇ ಶತ್ರುವು ಮರಣ. 27 ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ. 28 ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು. 29 ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ? 30 ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ? 31 ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ. 32 ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ. 33 ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ. 34 ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ. 35 ಆದರೆ ಒಬ್ಬನು--ಸತ್ತವರು ಹೇಗೆ ಎಬ್ಬಿಸ ಲ್ಪಡುತ್ತಾರೆ? ಎಂಥ ದೇಹದಿಂದ ಅವರು ಬರುತ್ತಾರೆ ಎಂದು ಕೇಳಾನು. 36 ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ. 37 ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ. 38 ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ. 39 ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯರ ಶರೀರ ಬೇರೆ, ಪಶುಗಳ ಶರೀರ ಬೇರೆ, ವಿಾನುಗಳದು ಬೇರೆ, ಪಕ್ಷಿಗಳದು ಬೇರೆ. 40 ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ. 41 ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ. 42 ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. 43 ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. 44 ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು. 45 ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ. 46 ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು. 47 ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. 48 ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. 49 ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು. 50 ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ. 51 ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು. 52 ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. 53 ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. 54 ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ. 55 ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ? 56 ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ. 57 ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ. 58 ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
1 ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ. 2 ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ. 3 ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು. 4 ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು. 5 ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು. 6 ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು. 7 ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ. 8 ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು. 9 ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ. 10 ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ. 11 ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ. 12 ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು. 13 ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು. 14 ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ. 15 ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ. 16 ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. 17 ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು. 18 ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ. 19 ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ. 20 ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. 21 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ. 22 ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ). 23 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. 24 ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.
1 ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ 2 ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ. 4 ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ. 5 ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ. 6 ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ. 7 ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ. 8 ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. 9 ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. 10 ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ. 11 ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ. 12 ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ. 13 ನೀವು ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ; ಹಾಗೆಯೇ ನೀವು ಕಡೇತನಕ ಒಪ್ಪಿಕೊಳ್ಳುವಿರೆಂದು ನಾನು ಭರವಸವುಳ್ಳವನಾಗಿದ್ದೇನೆ. 14 ನೀವು ಸಹ ಸ್ವಲ್ಪಮಟ್ಟಿಗೆ ನಮ್ಮನ್ನು ಒಪ್ಪಿಕೊಂಡು ನಮ್ಮ ಕರ್ತನಾದ ಯೇಸುವಿನ ದಿನದಲ್ಲಿ ನೀವು ನಮಗೆ ಉಲ್ಲಾಸಕ್ಕೆ ಕಾರಣರಾಗಿರುವಂತೆಯೇ ನಾವು ನಿಮಗೆ ಉಲ್ಲಾಸಕ್ಕೆ ಕಾರಣರಾಗಿದ್ದೇವೆ. 15 ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ 16 ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು. 17 ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ? 18 ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ. 19 ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ. 20 ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ. 21 ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ; 22 ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ. 23 ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ. 24 ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
1 ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು. 2 ನಾನು ನಿಮ್ಮನ್ನು ದುಃಖ ಪಡಿಸಿದರೆ ನನ್ನನ್ನು ಆನಂದಪಡಿಸುವದಕ್ಕೆ ಯಾರಿ ದ್ದಾರೆ? ನನ್ನಿಂದ ದುಃಖ ಹೊಂದಿದವನೇ ಹೊರತು ಬೇರೆ ಯಾರೂ ಇಲ್ಲವಲ್ಲಾ. 3 ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ. 4 ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು. 5 ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ. 6 ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು. 7 ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು. 8 ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 9 ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು. 10 ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು. 11 ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ. 12 ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು. 13 ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು. 14 ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ; 15 ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ. 16 ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು? 17 ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
1 ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ? 2 ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ? 3 ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು. 4 ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು. 5 ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು; 6 ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ. 7 ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು. 8 ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ? 9 ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು. 10 ಈಗ ಅತ್ಯಧಿಕವಾದ ಪ್ರಭಾವವುಳ್ಳದ್ದು ಬಂದದ್ದರಿಂದ ಪ್ರಭಾವವಾಗಿದ್ದದ್ದು ಈ ವಿಷಯದಲ್ಲಿ ಪ್ರಭಾವ ವಿಲ್ಲದ್ದಾಯಿತು. 11 ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ? 12 ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ. 13 ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ. 14 ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ. 15 ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ. 16 ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು. 17 ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು. 18 ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
1 ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ. 2 ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ 3 ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ. 4 ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ. 5 ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ. 6 ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು. 7 ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು. 8 ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. 9 ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ. 10 ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. 11 ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. 12 ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ. 13 ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ. 14 ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. 15 ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು. 16 ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು. 17 ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ. 18 ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
1 ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು. 2 ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ. 3 ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ. 4 ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ. 5 ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ. 6 ಹೀಗಿರುವದರಿಂದ ಶರೀರದ ಮನೆಯಲ್ಲಿರುವ ವರೆಗೂ ನಾವು ಕರ್ತನಿಗೆ ದೂರವಾಗಿದ್ದೇವೆಂದು ಬಲ್ಲವರಾಗಿ ನಾವು ಯಾವಾಗಲೂ ಭರವಸವುಳ್ಳವ ರಾಗಿದ್ದೇವೆ; 7 (ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ). 8 ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ. 9 ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ. 10 ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು. 11 ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ. 12 ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿ ಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹೊಗಳಿಕೊಳ್ಳದೆ ತೋರಿಕೆಯ ವಿಷಯದಲ್ಲಿ ಮಾತ್ರ ಹೊಗಳಿಕೊಳ್ಳುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳು ವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯ ದಲ್ಲಿ ಹೆಚ್ಚಳಪಡುವದಕ್ಕೆ ನಿಮಗೆ 13 ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ. 14 ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. 15 ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು. 16 ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ, 17 ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು. 18 ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. 19 ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. 20 ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ. 21 ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
1 ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. 2 (ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ). 3 ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ; 4 ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ 5 ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ. 6 ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ, 7 ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ, 8 ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ 9 ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ 10 ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ. 11 ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ; 12 ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು. 13 ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ). 14 ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? 15 ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? 16 ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. 17 ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ. 18 ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
1 ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ. 2 ನಮ್ಮನ್ನು ಸೇರಿಸಿಕೊಳ್ಳಿರಿ; ನಾವು ಯಾರಿಗೂ ಅನ್ಯಾಯಮಾಡಲಿಲ್ಲ. ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ. 3 ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ. 4 ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ. 5 ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು. 6 ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು. 7 ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು. 8 ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ. 9 ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ. 10 ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ. 11 ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ 12 ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು. 13 ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು. 14 ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು. 15 ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು. 16 ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
1 ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. 2 ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. 3 ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ. 4 ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. 5 ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು. 6 ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು. 7 ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ. 8 ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ. 9 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು. 10 ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ. 11 ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ. 12 ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು. 13 ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ. 14 ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು. 15 ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು. 16 ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ. 17 ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ. 18 ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ. 19 ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ. 20 ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು. 21 ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ. 22 ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ. 23 ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ. 24 ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
1 ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ. 2 ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು. 3 ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. 4 ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು; 5 ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು. 6 ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. 7 ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. 8 ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. 9 (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. 10 ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) 11 ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. 12 ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. 13 ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. 14 ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ. 15 ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
1 ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ. 2 ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ. 3 ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ. 4 (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). 5 ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು 6 ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು 7 ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ. 8 ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು. 9 ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ. 10 ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ. 11 ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ. 12 ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿ ಕೊಳ್ಳುವದಕ್ಕಾಗಲಿ ನಮಗೆ ಧೈರ್ಯ ಸಾಲದು; ಅವರಂತೂ ತಮ್ಮೊಳಗೆ ತಮ್ಮ ತಮ್ಮನ್ನು ಅಳತೆ ಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ. 13 ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ; ಈ ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ. 14 ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ. 15 ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು; 16 ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ. 17 ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ. 18 ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
1 ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ; 2 ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ. 3 ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು. 4 ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ. 5 ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ. 6 ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ. 7 ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ? 8 ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು. 9 ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು. 10 ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು. 11 ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು. 12 ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ. 13 ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. 14 ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. 15 ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು. 16 ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ. 17 ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ. 18 ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ. 19 ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ. 20 ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ. 21 ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ. 22 ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು; 23 ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. 24 ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; 25 ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. 26 ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. 27 ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ. 28 ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ. 29 ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ? 30 ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು. 31 ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು. 32 ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು. 33 ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
1 ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ. 2 ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) 3 ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;) 4 ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು. 5 ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳ ಪಡುವದಿಲ್ಲ. 6 ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು; 7 ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು. 8 ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. 9 ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. 10 ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ. 11 ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ. 12 ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು. 13 ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ. 14 ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ 15 ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ. 16 ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು. 17 ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ? 18 ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ? 19 ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ. 20 ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬ 21 ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
1 ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು. 2 ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ. 3 ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ. 4 ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು. 5 ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ? 6 ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ. 7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ. 8 ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ. 9 ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ. 10 ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ. 11 ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು. 12 ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. 13 ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ. 14 ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
1 ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ 2 ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ-- 3 ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. 4 ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು. 5 ಆತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್. 6 ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ. 7 ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ. 8 ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. 9 ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ. 10 ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ. 11 ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ. 12 ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು. 13 ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು. 14 ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು 15 ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು; 16 ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ 17 ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು. 18 ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು. 19 ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ. 20 ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ. 21 ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು. 22 ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ. 23 ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗ 24 ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
1 ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು. 2 ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು. 3 ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ. 4 ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು. 5 ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ. 6 ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ. 7 ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು. 8 ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು. 9 ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು. 10 ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು. 11 ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. 12 ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. 13 ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. 14 ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ 15 ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ. 16 ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ 17 ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು. 18 ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ. 19 ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು. 20 ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇ 21 ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
1 ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ? 2 ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ? 3 ನೀವು ಇಷ್ಟು ಬುದ್ಧಿಯಿಲ್ಲ ದವರಾಗಿದ್ದೀರಾ? ಆತ್ಮನಿಗನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಪರಿಪೂರ್ಣರಾಗಬೇಕೆಂದಿ ದ್ದೀರಾ? 4 ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ? 5 ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ? 6 ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು. 7 ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ. 8 ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ. 9 ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ. 10 ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ. 11 ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. 12 ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ. 13 ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ. 14 ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು. 15 ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ. 16 ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ. 17 ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ. 18 ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ. 19 ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು. 20 ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ. 21 ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು. 22 ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು. 23 ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು. 24 ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು. 25 ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ. 26 ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ. 27 ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. 28 ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ. 29 ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
1 ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ. 2 ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು. 3 ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು. 4 ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ 5 ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು. 6 ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. 7 ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ. 8 ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ. 9 ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ? 10 ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ. 11 ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ. 12 ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ. 13 ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ. 14 ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ. 15 ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ. 16 ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ? 17 ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ. 18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಆಸಕ್ತರಾಗಿರುವದು ಒಳ್ಳೇದು. 19 ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ. 20 ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ. 21 ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ. 22 ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ. 23 ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು. 24 ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್. 25 ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ. 26 ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ. 27 ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ. 28 ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ. 29 ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ. 30 ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ. 31 ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
1 ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ. 2 ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ. 3 ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ. 4 ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ. 5 ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ. 6 ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ. 7 ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು? 8 ಈ ಪ್ರೇರಣೆಯು ನಿಮ್ಮನ್ನು ಕರೆದಾತನಿಂದ ಬಂದದ್ದಲ್ಲ. 9 ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು. 10 ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು. 11 ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ? 12 ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ. 13 ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. 14 ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ. 15 ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ. 16 ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ. 17 ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ. 18 ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ. 19 ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ 20 ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು 21 ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ. 22 ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ 23 ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ. 24 ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ. 25 ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ. 26 ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
1 ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. 2 ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ. 3 ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ. 4 ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ; 5 ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು. 6 ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ. 7 ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. 8 ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. 9 ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು. 10 ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ. 11 ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ. 12 ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ. 13 ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ. 14 ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. 15 ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು. 16 ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ. 17 ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ. 18 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
1 ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ-- 2 ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. 4 ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು. 5 ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ. 6 ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. 7 ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. 8 ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ. 9 ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು. 10 ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು. 11 ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು. 12 ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು. 13 ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ. 14 ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ. 15 ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ 16 ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ. 17 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ 18 ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ 19 ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. 20 ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ 21 ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. 22 ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು. 23 ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
1 ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. 2 ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; 3 ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು. 4 ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ 5 ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) 6 ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. 7 ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. 8 ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. 9 ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. 10 ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ. 11 ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. 12 ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. 13 ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. 14 ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. 15 ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. 16 ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. 17 ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು. 18 ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು. 19 ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. 20 ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; 21 ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ. 22 ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
1 ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು 2 ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ 3 ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು; 4 (ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.) 5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ. 6 ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ. 7 ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. 8 ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು. 9 ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ 10 ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು. 11 ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು. 12 ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು. 13 ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ. 14 ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ 15 ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು 16 ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ 17 ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು 18 ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ 19 ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. 20 ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆ 21 ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
1 ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 2 ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. 3 ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ. 4 ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ, 5 ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ. 6 ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ. 7 ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು. 8 ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. 9 (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? 10 ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು). 11 ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ 12 ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು. 13 ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು. 14 ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು. 15 ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ. 16 ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ. 17 ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; 18 ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ. 19 ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ. 20 ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ. 21 ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ. 22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. 23 ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. 24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ. 25 ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ. 26 ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ; 27 ಸೈತಾನನಿಗೆ ಅವಕಾಶ ಕೊಡಲೇಬೇಡಿರಿ. 28 ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು. 29 ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ. 30 ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. 31 ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ. 32 ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
1 ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ. 2 ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ. 3 ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು. 4 ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ. 5 ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ. 6 ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ. 7 ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ. 8 ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ. 9 ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ. 10 ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ. 11 ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ. 12 ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ. 13 ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ. 14 ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ. 15 ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ. 16 ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ. 17 ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ. 18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ. 19 ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ. 20 ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ. 21 ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ. 22 ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. 23 ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ, 24 ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು. 25 ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. 26 ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ 27 ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ. 28 ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ. 29 ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ. 30 ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ. 31 ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು. 32 ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ. 33 ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
1 ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು. 2 ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ. 3 ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ. 4 ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ. 5 ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ. 6 ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ. 7 ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ. 8 ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ. 9 ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ. 10 ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. 11 ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. 12 ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. 13 ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. 14 ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 15 ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 16 ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. 17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. 18 ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. 19 ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. 20 ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ. 21 ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು. 22 ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. 23 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ. 24 ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
1 ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ-- 2 ನಮ್ಮ ತಂದೆ ಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತ ನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. 3 ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ; 4 ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ. 5 ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ. 6 ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು. 7 ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. 8 ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ. 9 ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ 10 ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ 11 ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ. 12 ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ. 13 ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. 14 ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ. 15 ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. 16 ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ. 17 ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ. 18 ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು. 19 ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು. 20 ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು. 21 ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ. 22 ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು; 23 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ 24 ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು. 25 ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ. 26 ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು. 27 ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ 28 ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ. 29 ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು. 30 ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
1 ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ 2 ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ. 3 ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. 4 ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. 5 ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ. 6 ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ 7 ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. 8 ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು. 9 ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. 10 ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. 11 ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು. 12 ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. 13 ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ. 14 ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ. 15 ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ. 16 ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು. 17 ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು. 18 ಈ ಕಾರಣಕ್ಕಾಗಿಯೇ ನೀವು ಆನಂದಿಸಿರಿ, ನನ್ನೊಂದಿಗೆ ಸಂತೊಷಪಡಿರಿ. 19 ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು. 20 ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. 21 ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ. 22 ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ. 23 ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ. 24 ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ. 25 ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ. 26 ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು. 27 ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು. 28 ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ. 29 ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ. 30 ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
1 ಕಡೇದಾಗಿ ನನ್ನ ಸಹೋದರರೇ, ಕರ್ತ ನಲ್ಲಿ ಸಂತೋಷಪಡಿರಿ. ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾ ದರೋ ಅದು ಭದ್ರಪಡಿಸುವದು. 2 ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ. 3 ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ. 4 ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು. 5 ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು; 6 ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ. 7 ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. 8 ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. 9 ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ. 10 ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು. 11 ಹೇಗಾದರೂ ಸತ್ತವರಿಗೆ ಆಗುವ ಪುನರುತ್ಥಾನವು ನನಗೆ ಆದೀತು. 12 ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ. 13 ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ 14 ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. 15 ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು. 16 ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ. 17 ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ. 18 (ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ. 19 ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.) 20 ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು. 21 ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
1 ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ. 2 ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ. 3 ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ. 4 ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ. 5 ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ. 6 ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ. 7 ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು. 8 ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ 9 ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು. 10 ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ. 11 ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ. 12 ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ. 13 ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು. 14 ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು. 15 ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ. 16 ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ. 17 ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು. 18 ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ 19 ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು. 20 ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್. 21 ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬ ಪರಿಶುದ್ಧನಿಗೆ ವಂದನೆ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ. 22 ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ; 23 ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
1 ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ 2 ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. 3 ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ. 4 ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ; 5 ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ. 6 ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ. 7 ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು. 8 ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ. 9 ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು 10 ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ 11 ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ 12 ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ. 13 ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು. 14 ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು. 15 ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ. 16 ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು. 17 ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ. 18 ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ. 19 ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು. 20 ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು. 21 ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ. 22 ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ. 23 ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ 24 ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ. 25 ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು. 26 ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ; 27 ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ. 28 ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ. 29 ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
1 ನಿಮಗೋಸ್ಕರವೂ ಲವೊದಿಕೀಯದವರಿ ಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರು ವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ. 2 ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ; 3 ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ. 4 ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ. 5 ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ. 6 ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ. 7 ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ. 8 ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ. 9 ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ. 10 ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ. 11 ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ. 12 ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ. 13 ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ. 14 ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು. 15 ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು. 16 ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ. 17 ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ. 18 ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ. 19 ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ. 20 ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ 21 ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ? 22 (ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ); 23 ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
1 ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. 2 ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ. 3 ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. 4 ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ. 5 ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ. 6 ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ. 7 ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ. 8 ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ. 9 ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ? 10 ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ. 11 ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ. 12 ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13 ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ. 14 ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ. 15 ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ. 16 ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ. 17 ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ. 18 ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. 19 ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ. 20 ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. 21 ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ. 22 ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ. 23 ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ; 24 ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ. 25 ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
1 ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ. 2 ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ. 3 ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ; 4 ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ; 5 ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ. 6 ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ. 7 ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು. 8 ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ 9 ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು. 10 ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ. 11 ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ. 12 ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ. 13 ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ. 14 ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. 15 ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ. 16 ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ. 17 ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ. 18 ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
1 ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊ ನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. 2 ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. 3 ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ. 4 ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು. 5 ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ. 6 ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ. 7 ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ; 8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ. 9 ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ. 10 ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
1 ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ. 2 ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ. 3 ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ; 4 ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ. 5 ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ. 6 ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ. 7 ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು. 8 ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು. 9 ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ. 10 ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ. 11 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು. 12 ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ. 13 ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ. 14 ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ. 15 ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. 16 ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು. 17 ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು. 18 ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು. 19 ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ? 20 ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
1 ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿದೆವು; 2 ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು. 3 ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ. 4 ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು. 5 ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು. 6 ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ 7 ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು. 8 ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ, 9 ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು? 10 ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ. 11 ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ. 12 ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ. 13 ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
1 ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ. 2 ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ. 3 ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು. 4 ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. 5 ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು. 6 ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ. 7 ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು. 8 ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ. 9 ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ. 10 ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ. 11 ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ. 12 ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ. 13 ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ. 14 ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ. 15 ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ. 16 ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು; 17 ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು. 18 ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
1 ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ. 2 ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. 3 ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು. 4 ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ. 5 ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ. 6 ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. 7 ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. 8 ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ. 9 ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು. 10 ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು. 11 ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ. 12 ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ. 13 ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ. 14 ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ. 15 ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ. 16 ಯಾವಾಗಲೂ ಸಂತೋಷಿಸಿರಿ; 17 ಎಡೆಬಿಡದೆ ಪ್ರಾರ್ಥನೆ ಮಾಡಿರಿ. 18 ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ. 19 ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ; 20 ಪ್ರವಾದನೆಗಳನ್ನು ಹೀನೈಸಬೇಡಿರಿ; 21 ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. 22 ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ. 23 ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ. 24 ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು. 25 ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ. 26 ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ. 27 ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ. 28 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
1 ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆ ಯರು ಬರೆಯುವದೇನಂದರೆ-- 2 ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. 3 ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ. 4 ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ. 5 ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ. 6 ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ 7 ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ 8 ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; 9 ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು. 10 ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ). 11 ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ. 12 ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
1 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯ ವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ-- 2 ಕ್ರಿಸ್ತನ ದಿನವು ಈಗಲೇ ಹತ್ತಿರವಾಯಿತೆಂದು ಆತ್ಮನಿಂದಾಗಲಿ ಮಾತಿನಿಂದಾಗಲಿ ಇಲ್ಲವೆ ನಾವು ಹಾಗೆ ಬರೆದೆವೆಂದಾಗಲಿ ನೀವು ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ; 3 ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ; 4 ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ. 5 ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? 6 ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. 7 ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು; 8 ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. 9 ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ 10 ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. 11 ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. 12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು. 13 ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ 14 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು. 15 ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ. 16 ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂ 17 ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
1 ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ 2 ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ. 3 ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು. 4 ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು. 5 ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ. 6 ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ. 7 ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; 8 ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. 9 ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು; 10 ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ. 11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ. 12 ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ. 13 ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ. 14 ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ. 15 ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ. 16 ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ. 17 ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಬರೆಯುವ ವಂದನೆಯು, ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ಬರೆಯುತ್ತೇನೆ. 18 ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
1 ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು 2 ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ. 3 ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ 4 ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ 5 ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ. 6 ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ; 7 ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ. 8 ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು. 9 ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ 10 ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ. 11 ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು. 12 ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. 13 ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. 14 ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. 15 ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. 16 ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು. 17 ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್. 18 ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ. 19 ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ; 20 ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
1 ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ. 2 ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು. 3 ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ. 4 ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ. 5 ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ; 6 ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ. 7 ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.) 8 ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ. 9 ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ 10 (ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು. 11 ಸ್ತ್ರೀಯು ಮೌನವಾಗಿದ್ದು ಪೂರ್ಣ ವಿಧೇಯಳಾಗಿ ಕಲಿಯಬೇಕು. 12 ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು. 13 ಮೊದಲು ನಿರ್ಮಿತನಾದ ವನು ಆದಾಮನಲ್ಲವೇ, ಆಮೇಲೆ ಹವ್ವಳು; 14 ಇದ ಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು. 15 ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
1 ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ. 2 ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು. 3 ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು. 4 ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು. 5 (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)? 6 ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು. 7 ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು. 8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ 9 ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು. 10 ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ. 11 ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು. 12 ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು. 13 ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ. 14 ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. 15 ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು. 16 ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
1 ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. 2 ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು 3 ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ. 4 ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು. 5 ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ. 6 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ. 7 ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ. 8 ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು. 9 ಈ ಮಾತು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ. 10 ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ. 11 ಈ ವಿಷಯಗಳನ್ನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು. 12 ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು. 13 ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು. 14 ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ. 15 ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು. 16 ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
1 ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ 2 ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು. 3 ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ. 4 ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ. 5 ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು. 6 ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ. 7 ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು. 8 ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ. 9 ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ 10 ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ 11 ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು. 12 ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ. 13 ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ. 14 ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು. 15 ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ. 16 ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು. 17 ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು. 18 ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ. 19 (ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ. 20 ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು. 21 ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ. 22 ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ 23 ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ. 24 ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ. 25 ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
1 ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ. 2 ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು. 3 ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ 4 ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ. 5 ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ. 6 ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. 7 ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು. 8 ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ. 9 ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. 10 ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ. 11 ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು. 12 ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ. 13 ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ-- 14 ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು. 15 ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ; 16 ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್. 17 ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ 18 ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು. 19 ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು. 20 ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು. 21 ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
1 ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು 2 ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ. 3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ. 4 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ; 5 ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ. 6 ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ. 7 ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ. 8 ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು. 9 ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು. 10 ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು. 11 ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು. 12 ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ. 13 ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ. 14 ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು. 15 ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ. 16 ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ. 17 ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು. 18 ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
1 ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು. 2 ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು. 3 ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು. 4 ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ. 5 ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ. 6 ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು. 7 ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ. 8 ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ. 9 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. 10 ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ. 11 ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು. 12 ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು. 13 ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು. 14 ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು. 15 ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು. 16 ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು. 17 ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ; 18 ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ. 19 ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು. 20 ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ. 21 ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು. 22 ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು. 23 ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. 24 ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು. 25 ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು. 26 ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
1 ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ. 2 ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ 3 ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ 4 ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ 5 ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು. 6 ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ. 7 ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು. 8 ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ. 9 ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು. 10 ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ 11 ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು. 12 ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು. 13 ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು. 14 ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು. 15 ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. 16 ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. 17 ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
1 ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ-- 2 ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು. 3 ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. 4 ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು. 5 ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು. 6 ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ. 7 ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ. 8 ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು. 9 ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು; 10 ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; 11 ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ. 12 ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. 13 ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ. 14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು. 15 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು. 16 ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ. 17 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. 18 ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್. 19 ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ. 20 ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು. 21 ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ. 22 ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
1 ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ 2 ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು 3 ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು. 4 ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ. 5 ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು. 6 ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು. 7 ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ 8 ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು 9 ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು. 10 ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ; 11 ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು. 12 ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು. 13 ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು. 14 ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು. 15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ. 16 ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
1 ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು. 2 ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು. 3 ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ 4 ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ 5 ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು. 6 ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು. 7 ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು; 8 ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು. 9 ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ 10 ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು. 11 ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. 12 ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. 13 ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. 14 ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು. 15 ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
1 ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ 2 ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು. 3 ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. 4 ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ 5 ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. 6 ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. 7 ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು. 8 ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ. 9 ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ. 10 ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು; 11 ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು. 12 ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು. 13 ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು. 14 ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ. 15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
1 ಯೇಸು ಕ್ರಿಸ್ತನ ಸೆರೆಯವನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ ನಮಗೆ ಅತಿ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆ ಮೋನನಿಗೂ 2 ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ-- 3 ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. 4 ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. 5 ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ. 6 ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು. 7 ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು. 8 ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ 9 ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ. 10 ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ. 11 ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ. 12 ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ; ಅದದ ರಿಂದ ನೀನು ಅವನನ್ನು ಸೇರಿಸಿಕೋ. 13 ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು. 14 ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ. 15 ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸ ಲ್ಪಟ್ಟದ್ದು ನೀನು ಅವನನ್ನು ನಿರಂತರಕ್ಕೂ ಸೇರಿಸಿಕೊಳ್ಳುವ ದಕ್ಕೋ ಏನೋ. 16 ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು. 17 ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ. 18 ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು; 19 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ? 20 ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು. 21 ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು. 22 ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು. 23 ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಸೆರೆಯ ವನಾದ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ. 24 ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ. 25 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
1 ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು 2 ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು. 3 ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು. 4 ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ; 5 ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ? 6 ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ. 7 ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು. 8 ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ. 9 ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ 10 ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ. 11 ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು; 12 ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ. 13 ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ? 14 ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
1 ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು. 2 ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ 3 ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು. 4 ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು. 5 ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ. 6 ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು? 7 ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ; 8 ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ. 9 ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ 10 ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು. 11 ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ-- 12 ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ 13 ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ. 14 ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ 15 ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು. 16 ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು. 17 ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು. 18 ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
1 ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ. 2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ. 3 ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ. 4 ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ. 5 ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು. 6 ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ. 7 ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ 8 ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ. 9 ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು. 10 ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ. 11 ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ). 12 ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು. 13 ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ. 14 ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ! 15 ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ. 16 ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ. 17 ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! 18 ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ? 19 ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
1 ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ. 2 ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ. 3 ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ. 4 ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ 5 ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ. 6 ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ. 7 ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ. 8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ. 9 ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು. 10 ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ. 11 ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ. 12 ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. 13 ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ. 14 ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ. 15 ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು. 16 ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
1 ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು. 2 ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು. 3 ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ. 4 ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. 5 ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. 6 ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ. 7 ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. 8 ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು. 9 ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು. 10 ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು. 11 ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ. 12 ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ. 13 ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ. 14 ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
1 ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ 2 ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ. 3 ದೇವರ ಚಿತ್ತವಾದರೆ ಹೀಗೆ ಮಾಡುವೆವು. 4 ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ 5 ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ 6 ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ. 7 ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; 8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ. 9 ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ. 10 ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ. 11 ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ. 12 ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ. 13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು-- 14 ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. 15 ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು. 16 ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. 17 ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. 18 ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು. 19 ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು. 20 ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು. 2 ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ. 3 ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ. 4 ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ. 5 ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು. 6 ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು. 7 ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ. 8 ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ. 9 ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು; 10 ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು. 11 ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು). 12 ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ. 13 ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ. 14 ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ. 15 ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ. 16 ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ. 17 ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ. 18 ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು. 19 ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ. 20 ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ. 21 (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ. 22 ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು. 23 ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು; 24 ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ. 25 ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ. 26 ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ. 27 ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. 28 ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
1 ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ. 2 ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ. 3 ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ. 4 ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ; 5 ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ 6 ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ. 7 ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ. 8 ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. 9 ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. 10 ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ 11 ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. 12 ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ. 13 ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
1 ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು. 2 ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು. 3 ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು; 4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು; 5 ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ. 6 ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು. 7 ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ. 8 ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ. 9 ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು. 10 ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. 11 ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ 12 ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. 13 ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ 14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ. 15 ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ. 16 ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ. 17 ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ. 18 ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ. 19 ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ-- 20 ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು. 21 ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. 22 ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. 23 ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು. 24 ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು. 25 ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ. 26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು. 27 ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ. 28 ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
1 ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು. 2 ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ. 3 ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು. 4 ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. 5 ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; 6 ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; 7 ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. 8 ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. 9 ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. 10 ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. 11 ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. 12 ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು. 13 ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು. 14 ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ. 15 ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ; 16 ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ. 17 ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ. 18 ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ. 19 ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. 20 ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. 21 ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ 22 ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ. 23 ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು). 24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ. 25 ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ. 26 ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. 27 ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. 28 ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. 29 ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ. 30 ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ. 31 ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು. 32 ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. 33 ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ. 34 ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ. 35 ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು. 36 ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. 37 ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ. 38 ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ. 39 ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
1 ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ. 2 ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು. 3 ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. 4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ. 5 ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು. 6 ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ. 7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು. 8 ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು. 9 ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು. 10 ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು. 11 ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು. 12 ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು. 13 ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು. 14 ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. 15 ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು. 16 ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ. 17 ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು. 18 ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು. 19 ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು. 20 ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು. 21 ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು. 22 ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು. 23 ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು. 24 ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ. 25 ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು. 26 ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು. 27 ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು. 28 ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ. 29 ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು. 30 ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು. 31 ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ. 32 ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು. 33 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು. 34 ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು. 35 ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು. 36 ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು. 37 ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. 38 ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು. 39 ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ; 40 ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
1 ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು 2 ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ 3 ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ. 4 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ. 5 ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ; 6 ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. 7 ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? 8 ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. 9 ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? 10 ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. 11 ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ. 12 ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ. 13 ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು. 14 ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. 15 ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ 16 ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು; 17 ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ. 18 ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ 19 ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು; 20 (ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು. 21 ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು). 22 ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ 23 ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ 24 ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. 25 ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು. 26 ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ. 27 ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು. 28 ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ. 29 ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
1 ಸಹೋದರ ಪ್ರೀತಿಯು ನೆಲೆಯಾಗಿರಲಿ. 2 ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ. 3 ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ. 4 ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು. 5 ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ. 6 ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. 7 ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ. 8 ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು. 9 ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ. 10 ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ. 11 ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ; 12 ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು. 13 ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ. 14 ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ. 15 ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ. 16 ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು. 17 ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ. 18 ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ. 19 ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು. 20 ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು 21 ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್. 22 ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ. 23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು. 24 ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ. 25 ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
1 ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ. 2 ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ. 3 ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. 4 ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ. 5 ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ. 6 ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು. 7 ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ. 8 ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ. 9 ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; 10 ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. 11 ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು. 12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು; 13 ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ. 14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. 15 ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ. 16 ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ. 17 ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ. 18 ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು. 19 ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. 20 ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ. 21 ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ. 22 ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ. 23 ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. 24 ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. 25 ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು. 26 ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ. 27 ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
1 ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು. 2 ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು 3 ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ 4 ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ? 5 ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? 6 ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? 7 ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ? 8 ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ. 9 ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ. 10 ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ. 11 ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ. 12 ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ. 13 ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ. 14 ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? 15 ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ 16 ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು? 17 ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ. 18 ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು. 19 ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ. 20 ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ? 21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? 22 ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ? 23 ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು. 24 ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ. 25 ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ? 26 ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
1 ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ. 2 ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ. 3 ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ. 4 ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ. 5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. 6 ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. 7 ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. 8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. 9 ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. 10 ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು. 11 ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ? 12 ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು. 13 ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. 14 ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. 15 ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. 16 ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. 17 ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ. 18 ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
1 ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ. 2 ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. 3 ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ. 4 ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ. 5 ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ? 6 ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ. 7 ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. 8 ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. 9 ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. 10 ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು. 11 ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ 12 ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು? 13 ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. 14 ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ. 15 ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು. 16 ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ. 17 ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
1 ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ 2 ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. 3 ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. 4 ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ. 5 ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ. 6 ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ. 7 ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. 8 ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. 9 ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ. 10 ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. 11 ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ. 12 ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ. 13 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ. 14 ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. 15 ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು. 16 ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ. 17 ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ. 18 ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು. 19 ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ 20 ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ 2 ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ 4 ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ. 5 ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ. 6 ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. 7 ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು. 8 ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. 9 ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ. 10 ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. 11 ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು. 12 ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು. 13 ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ. 14 ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ 15 ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. 16 ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ. 17 ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ. 18 ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; 19 ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. 20 ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. 21 ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ. 22 ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ. 23 ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು. 24 ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು; 25 ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
1 ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ. 2 ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ. 3 ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ. 4 ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. 5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. 6 ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. 7 ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. 8 ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು. 9 ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. 10 ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ. 11 ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 12 ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು. 13 ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ 14 ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ. 15 ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ. 16 ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ. 17 ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ. 18 ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ. 19 ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. 20 ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ. 21 ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. 22 ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. 23 ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು. 24 ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು. 25 ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
1 ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ 2 ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ. 3 ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. 4 ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ. 5 ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು. 6 ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ. 7 ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ. 8 ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ. 9 ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ. 10 ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ. 11 ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ. 12 ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ. 13 ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? 14 ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ. 15 ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ; 16 ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು. 17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು. 18 ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು. 19 ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು; 20 ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು. 21 ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ). 22 ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
1 ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ. 2 ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. 3 ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು. 4 ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ. 5 ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು. 6 ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು. 7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ. 8 ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ. 9 ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. 10 ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. 11 ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ 12 ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. 13 ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. 14 ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. 15 ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. 16 ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ. 17 ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು? 18 ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ? 19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
1 ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ, 2 ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ. 3 ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. 4 ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ. 5 ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ. 6 ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು. 7 ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ. 8 ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. 9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ. 10 ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು. 11 ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್. 12 ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ. 13 ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ. 14 ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ-- 2 ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. 3 ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು. 4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ. 5 ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ 6 ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ 7 ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. 8 ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ. 9 ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. 10 ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ 11 ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು. 12 ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ. 13 ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ. 14 ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು. 15 ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು. 16 ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು. 17 ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ. 18 ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು. 19 ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು. 20 ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ. 21 ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
1 ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ 2 ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. 3 ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ. 4 ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು. 5 ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು. 6 ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. 7 ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು. 8 ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು. 9 ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ. 10 ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ. 11 ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ. 12 ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ 13 ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ. 14 ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. 15 ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು. 16 ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು. 17 ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು. 18 ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. 19 ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ. 20 ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. 21 ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು. 22 ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
1 ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ. 2 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು. 3 ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು-- 4 ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು. 5 ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ 6 ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು. 7 ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು. 8 ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ. 9 ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ 10 ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. 11 ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. 12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? 13 ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು. 14 ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ. 15 ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು. 16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ 17 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ. 18 ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
1 ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. 2 (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ). 3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು. 4 ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ. 5 ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ. 6 ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ. 7 ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. 8 ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. 9 ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು. 10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
1 ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. 2 ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ. 3 ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ. 4 ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ. 5 ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ. 6 ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ. 7 ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ. 8 ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ. 9 ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. 10 ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ. 11 ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು. 12 ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ. 13 ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ. 14 ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ. 15 ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. 16 ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. 17 ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು. 18 ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ. 19 ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು. 20 ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ. 21 ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು. 22 ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ. 23 ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ. 24 ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ. 25 ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ. 26 ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ. 27 ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ 28 ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ. 29 ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
1 ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ. 2 ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು. 3 ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ. 4 ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ. 5 ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ. 6 ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ. 7 ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. 8 ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು. 9 ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು. 10 ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ. 11 ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ. 12 ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ. 13 ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ. 14 ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. 15 ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ. 16 ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. 17 ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? 18 ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. 19 ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. 20 ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. 21 ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. 22 ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ. 23 ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ. 24 ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
1 ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. 2 ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ. 3 ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ. 4 ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ. 5 ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ. 6 ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ. 7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. 8 ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ. 9 ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. 10 ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ. 11 ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ. 12 ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. 13 ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ. 14 ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ. 15 ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. 16 ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ. 17 ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ. 18 ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ. 19 ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. 20 ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು? 21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
1 ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ. 2 ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ. 3 ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ. 4 ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ. 5 ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು? 6 ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ. 7 ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ. 8 ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ. 9 ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ. 10 ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ. 11 ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. 12 ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ. 13 ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ. 14 ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. 15 ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ. 16 ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ 17 ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು. 18 ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ. 19 ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ. 20 ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ. 21 ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
1 ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. 2 ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ. 3 ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ. 4 ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು. 5 ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. 6 ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ. 7 ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ. 8 ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ. 9 ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ. 10 ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ. 11 ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. 12 ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು. 13 ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
1 ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ-- 2 ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ. 3 ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. 4 ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ. 5 ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ. 6 ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ. 7 ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ. 8 ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. 9 ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ. 10 ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ 11 ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. 12 ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ. 13 ನಾನು ಬರೆಯತಕ್ಕ ಅನೇಕ ವಿಷಯಗಳಿದ್ದವು; ಆದರೆ ಮಸಿ ಲೇಖಣಿಗಳಿಂದ ನಿನಗೆ ಬರೆಯುವದಕ್ಕೆ ನನಗಿಷ್ಟವಿಲ್ಲ. 14 ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
1 ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ-- 2 ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ. 3 ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು. 4 ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ 5 ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು. 6 ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ. 7 ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ. 8 ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ. 9 ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು. 10 ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. 11 ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ! 12 ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ 13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು. 14 ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು 15 ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು. 16 ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ. 17 ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ. 18 ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು. 19 ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ. 20 ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ. 21 ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. 22 ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ. 23 ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ. 24 ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವ 25 ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
1 ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ 2 ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು. 3 ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ. 4 ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ 5 ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು 6 ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್. 7 ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್. 8 ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ. 9 ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು. 10 ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು. 11 ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು. 12 ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು. 13 ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು. 14 ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು. 15 ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. 16 ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು. 17 ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. 18 ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ. 19 ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ. 20 ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
1 ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ. 2 ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ; 3 ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ. 4 ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ. 5 ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು 6 ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ. 7 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು. 8 ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ, 9 ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ. 10 ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ 11 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ. 12 ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ, 13 ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ 14 ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು 15 ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ. 16 ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು. 17 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ 18 ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ, 19 ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು. 20 ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು 21 ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ. 22 ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು. 23 ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು. 24 ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ. 25 ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ. 26 ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ. 27 ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು. 28 ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು. 29 ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
1 ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು. 2 ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ. 3 ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು. 4 ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ. 5 ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು. 6 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. 7 ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ, 8 ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ. 9 ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು 10 ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು. 11 ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು; 12 ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ 13 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. 14 ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ, 15 ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು. 16 ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು. 17 ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ. 18 ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ 19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು. 20 ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು. 21 ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು. 22 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
1 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ 2 ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು. 3 ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು. 4 ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು. 5 ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು. 6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. 7 ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು. 8 ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ 9 ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. 10 ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ-- 11 ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
1 ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. 2 ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು. 3 ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ. 4 ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು. 5 ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು. 6 ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ 7 ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು. 8 ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. 9 ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; 10 ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. 11 ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. 12 ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. 13 ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು. 14 ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
1 ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು. 2 ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು. 3 ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು. 4 ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ 5 ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು. 6 ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು. 7 ಆತನು ನಾಲ್ಕನೆಯ ಮುದ್ರೆಯನ್ನು ತೆರೆ ದಾಗ--ಬಂದು ನೋಡು ಎಂದು ನಾಲ್ಕನೆಯ ಜೀವಿಯು ಹೇಳುವ ಧ್ವನಿಯನ್ನು ನಾನು ಕೇಳಿದೆನು. 8 ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ 9 ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು. 10 ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು. 11 ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು. 12 ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು. 13 ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು. 14 ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು. 15 ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು 16 ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ; 17 ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
1 ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು. 2 ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ-- 3 ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು. 4 ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ. 5 ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. 6 ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. 7 ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. 8 ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ. 9 ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ 10 ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. 11 ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- 12 ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್. 13 ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು. 14 ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ. 15 ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. 16 ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ. 17 ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
1 ಆತನು ಏಳನೆಯ ಮುದ್ರೆಯನ್ನು ತೆರೆ ದಾಗ ಸುಮಾರು ಅರ್ಧಗಂಟೆ ಹೊತ್ತಿನವರೆಗೂ ಪರಲೋಕದಲ್ಲಿ ನಿಶ್ಯಬ್ದವಾಯಿತು. 2 ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು. 3 ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು. 4 ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು. 5 ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು. 6 ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು. 7 ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು. 8 ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು; 9 ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು. 10 ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು. 11 ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು. 12 ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆ 13 ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
1 ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು. 2 ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು. 3 ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು. 4 ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು. 5 ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು. 6 ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು 7 ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು. 8 ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು. 9 ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು. 10 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು. 11 ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು. 12 ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ. 13 ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು. 14 ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು. 15 ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು. 16 ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು. 17 ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು. 18 ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು. 19 ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ. 20 ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು. 21 ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
1 ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು; 2 ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು 3 ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು. 4 ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು. 5 ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ-- 6 ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ 7 ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು. 8 ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು. 9 ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು 10 ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು. 11 ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
1 ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು. 2 ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು. 3 ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು. 4 ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ. 5 ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು. 6 ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು. 7 ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು. 8 ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು. 9 ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ. 10 ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು. 11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು. 12 ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು. 13 ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು. 14 ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ. 15 ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು. 16 ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು-- 17 ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. 18 ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನು 19 ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
1 ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು. 2 ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು. 3 ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು. 4 ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು. 5 ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು. 6 ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು. 7 ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು. 8 ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು. 9 ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. 10 ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ. 11 ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು. 12 ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು. 13 ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು. 14 ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ. 15 ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು. 16 ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು. 17 ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
1 ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು. 2 ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು. 3 ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು. 4 ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು. 5 ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. 6 ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು. 7 ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು. 8 ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು. 9 ಕಿವಿಯುಳ್ಳವನು ಕೇಳಲಿ. 10 ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ. 11 ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು. 12 ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ. 13 ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ. 14 ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ. 15 ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು. 16 ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ 17 ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ. 18 ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
1 ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು. 2 ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು. 3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. 4 ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು. 5 ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ. 6 ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು. 7 ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು. 8 ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು. 9 ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ 10 ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು. 11 ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು. 12 ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ. 13 ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ 14 ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು. 15 ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು. 16 ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. 17 ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು. 18 ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. 19 ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು. 20 ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
1 ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ. 2 ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು 3 ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. 4 ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು. 5 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. 6 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. 7 ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ. 8 ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
1 ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು. 2 ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು. 3 ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು. 4 ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು. 5 ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. 6 ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. 7 ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು. 8 ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು. 9 ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. 10 ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು 11 ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು. 12 ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು. 13 ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು. 14 ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು. 15 ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು. 16 ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು. 17 ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು. 18 ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ. 19 ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು. 20 ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು. 21 ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
1 ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. 2 ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. 3 ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. 4 ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು 5 ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. 6 ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ 7 ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ. 8 ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು 9 ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ. 10 ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು. 11 ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ. 12 ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ. 13 ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ. 14 ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ. 15 ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ. 16 ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು. 17 ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು. 18 ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
1 ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು. 2 ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು. 3 ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು. 4 ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು. 5 ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ. 6 ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ. 7 ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು 8 ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ. 9 ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. 10 ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. 11 ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ 12 ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, 13 ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. 14 ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. 15 ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- 16 ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, 17 ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು 18 ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. 19 ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು 20 ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು. 21 ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. 22 ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. 23 ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು. 24 ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
1 ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು. 2 ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು. 3 ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ. 4 ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು. 5 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು. 6 ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ. 7 ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು. 8 ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ. 9 ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು. 10 ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ 11 ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ; 12 ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ. 13 ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. 14 ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. 15 ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. 16 ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ. 17 ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, 18 ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. 19 ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. 20 ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದ 21 ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
1 ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. 2 ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. 3 ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು. 4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ 5 ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು. 6 ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು. 7 ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು. 8 ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು. 9 ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು. 10 ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು. 11 ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು. 12 ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ 13 ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. 14 ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು. 15 ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
1 ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ. 2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು. 3 ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ 4 ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು. 5 ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು. 6 ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು. 7 ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು. 8 ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು. 9 ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು. 10 ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು. 11 ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು. 12 ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು. 13 ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು. 14 ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. 15 ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. 16 ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ. 17 ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ. 18 ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. 19 ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. 20 ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ. 21 ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು. 22 ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ. 23 ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ. 24 ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು. 25 ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ. 26 ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು. 27 ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
1 ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು. 2 ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು. 3 ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು. 4 ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು. 5 ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು. 6 ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. 7 ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು. 8 ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. 9 ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು. 10 ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ. 11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ; 12 ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ. 13 ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. 14 ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು. 15 ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು. 16 ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ. 17 ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ. 18 ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು. 19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು. 20 ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ. 21 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.