1

1 ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ 2 ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ-- 3 ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. 4 ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು. 5 ಆತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್‌. 6 ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ. 7 ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ. 8 ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. 9 ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ. 10 ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ. 11 ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ. 12 ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು. 13 ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು. 14 ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು 15 ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು; 16 ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ 17 ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು. 18 ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು. 19 ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ. 20 ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ. 21 ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು. 22 ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ. 23 ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗ 24 ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.

2

1 ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು. 2 ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು. 3 ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ. 4 ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು. 5 ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ. 6 ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ. 7 ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು. 8 ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು. 9 ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು. 10 ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು. 11 ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. 12 ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. 13 ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. 14 ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ 15 ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ. 16 ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ 17 ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು. 18 ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ. 19 ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು. 20 ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇ 21 ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.

3

1 ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ? 2 ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ? 3 ನೀವು ಇಷ್ಟು ಬುದ್ಧಿಯಿಲ್ಲ ದವರಾಗಿದ್ದೀರಾ? ಆತ್ಮನಿಗನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಪರಿಪೂರ್ಣರಾಗಬೇಕೆಂದಿ ದ್ದೀರಾ? 4 ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ? 5 ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ? 6 ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು. 7 ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ. 8 ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ. 9 ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ. 10 ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ. 11 ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. 12 ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ. 13 ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ. 14 ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು. 15 ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ. 16 ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ. 17 ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ. 18 ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ. 19 ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು. 20 ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ. 21 ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು. 22 ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು. 23 ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು. 24 ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು. 25 ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ. 26 ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ. 27 ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. 28 ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ. 29 ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

4

1 ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ. 2 ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು. 3 ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು. 4 ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ 5 ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು. 6 ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. 7 ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ. 8 ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ. 9 ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ? 10 ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ. 11 ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ. 12 ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ. 13 ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ. 14 ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ. 15 ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ. 16 ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ? 17 ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ. 18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಆಸಕ್ತರಾಗಿರುವದು ಒಳ್ಳೇದು. 19 ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ. 20 ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ. 21 ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ. 22 ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ. 23 ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು. 24 ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್‌. 25 ಹಾಗರ್‌ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್‌ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ. 26 ಆದರೆ ಮೇಲಣ ಯೆರೂಸಲೇಮ್‌ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ. 27 ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ. 28 ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ. 29 ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ. 30 ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ. 31 ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.

5

1 ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ. 2 ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ. 3 ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ. 4 ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ. 5 ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ. 6 ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ. 7 ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು? 8 ಈ ಪ್ರೇರಣೆಯು ನಿಮ್ಮನ್ನು ಕರೆದಾತನಿಂದ ಬಂದದ್ದಲ್ಲ. 9 ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು. 10 ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು. 11 ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ? 12 ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ. 13 ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. 14 ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ. 15 ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ. 16 ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ. 17 ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ. 18 ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ. 19 ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ 20 ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು 21 ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ. 22 ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ 23 ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ. 24 ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ. 25 ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ. 26 ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.

6

1 ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. 2 ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ. 3 ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ. 4 ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ; 5 ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು. 6 ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ. 7 ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. 8 ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. 9 ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು. 10 ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ. 11 ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ. 12 ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ. 13 ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ. 14 ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. 15 ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು. 16 ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ. 17 ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ. 18 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್‌.