1

1 ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ 2 ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು 3 ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು. 4 ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ. 5 ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು. 6 ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು. 7 ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ 8 ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು 9 ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು. 10 ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ; 11 ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು. 12 ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು. 13 ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು. 14 ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು. 15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ. 16 ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.

2

1 ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು. 2 ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು. 3 ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ 4 ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ 5 ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು. 6 ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು. 7 ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು; 8 ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು. 9 ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ 10 ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು. 11 ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. 12 ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. 13 ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. 14 ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು. 15 ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

3

1 ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ 2 ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು. 3 ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. 4 ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ 5 ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. 6 ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. 7 ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು. 8 ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ. 9 ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ. 10 ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು; 11 ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು. 12 ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು. 13 ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು. 14 ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ. 15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.