1

1 ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ-- 2 ಕರ್ತನು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿ ದ್ದಾನೆ. 3 ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 4 ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. 5 ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? 6 ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು. 7 ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್‌ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ, 8 ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು. 9 ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು. 10 ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು. 11 ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು. 12 ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು. 13 ಆಗ ಕರ್ತನು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೇ ಮಾತುಗಳಿಂದಲೂ ಆದರಣೆಯ ಮಾತು ಗಳಿಂದಲೂ ಉತ್ತರಕೊಟ್ಟನು. 14 ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ. 15 ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು. 16 ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು. 17 ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು. 18 ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು. 19 ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು. 20 ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು. 21 ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.

2

1 ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು. 2 ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು. 3 ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು. 4 ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು. 5 ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ. 6 ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ. 7 ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ. 8 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. 9 ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ. 10 ಚೀಯೋನ್‌ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ. 11 ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ. 12 ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು. 13 ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.

3

1 ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು. 2 ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು. 3 ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು. 4 ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು. 5 ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು. 6 ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ-- 7 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು. 8 ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು. 9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. 10 ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

4

1 ಇದಲ್ಲದೆ ನನ್ನ ಸಂಗಡ ಮಾತನಾಡಿದ ದೂತನು ತಿರಿಗಿ ಬಂದು 2 ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು. 3 ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು. 4 ಹೀಗೆ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ --ನನ್ನ ಒಡೆಯನೇ, ಇವೇನು ಅಂದೆನು. 5 ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ--ಇವೇನೆಂದು ಅರಿಯುವದಿಲ್ಲವೋ ಅಂದನು. 6 ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. 7 ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು. 8 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ-- 9 ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ. 10 ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ. 11 ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು. 12 ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು. 13 ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು. 14 ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.

5

1 ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ. 2 ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು. 3 ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು. 4 ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು. 5 ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು. 6 ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು. 7 ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು --ಇದು ದುಷ್ಟತ್ವವು ಎಂತಂದು 8 ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು. 9 ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು. 10 ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು. 11 ಅವನು ನನಗೆ --ಶಿನಾರ್‌ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.

6

1 ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು. 2 ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು; 3 ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು. 4 ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು. 5 ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ. 6 ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ. 7 ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು. 8 ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು. 9 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. 10 ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ 11 ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು 12 ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು. 13 ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು. 14 ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು. 15 ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.

7

1 ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು. 2 ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ 3 ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್‌ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು. 4 ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 5 ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ? 6 ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ? 7 ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು. 8 ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ-- 9 ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ; 10 ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು. 11 ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. 12 ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು. 13 ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 14 ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.

8

1 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 2 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು. 3 ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು. 4 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು. 5 ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು. 6 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. 7 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು. 8 ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು. 9 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ. 10 ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು. 11 ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ. 12 ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು. 13 ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ. 14 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ. 15 ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ. 16 ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ. 17 ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ. 18 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 19 ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ. 20 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು; 21 ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. 22 ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು. 23 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.

9

1 ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು. 2 ಹಮಾತು ಬಹಳ ಜ್ಞಾನವಿರುವ ತೂರ್‌ ಚೀದೋನ್‌ ಸಹ ಅದರ ಮೇರೆಯಾಗಿದೆ. 3 ತೂರ್‌ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು. 4 ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು. 5 ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು. 6 ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು. 7 ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು. 8 ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ. 9 ಚೀಯೋನ್‌ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ. 10 ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು. 11 ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ. 12 ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ. 13 ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್‌ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ. 14 ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು. 15 ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು. 16 ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು. 17 ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.

10

1 ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು. 2 ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ. 3 ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ. 4 ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ. 5 ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು. 6 ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು. 7 ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು. 8 ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು. 9 ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು. 10 ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು. 11 ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು. 12 ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.

11

1 ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ. 2 ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್‌ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ. 3 ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ. 4 ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು. 5 ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ. 6 ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ. 7 ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು. 8 ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು. 9 ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ. 10 ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು, 11 ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು. 12 ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು. 13 ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು. 14 ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು. 15 ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ. 16 ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು. 17 ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.

12

1 ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ-- 2 ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ 3 ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು. 4 ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು. 5 ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು. 6 ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು. 7 ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು. 8 ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು. 9 ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು. 10 ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು. 11 ಮೆಗಿದ್ದೋವಿನ ತಗ್ಗಿನಲ್ಲಾದ ಹದದ್‌ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು. 12 ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ. 13 ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ. 14 ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.

13

1 ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು. 2 ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ. 3 ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು. 4 ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು. 5 ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು. 6 ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು. 7 ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ. 8 ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು. 9 ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.

14

1 ಇಗೋ, ಕರ್ತನ ದಿನವು ಬರುತ್ತದೆ. 2 ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. 3 ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು. 4 ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು. 5 ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು. 6 ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು. 7 ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು. 8 ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು. 9 ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ. 10 ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು. 11 ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು. 12 ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು. 13 ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು. 14 ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು. 15 ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು. 16 ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. 17 ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. 18 ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. 19 ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು. 20 ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು. 21 ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.